Tag: nda

  • ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

    ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

    – 17ನೇ ವಯಸ್ಸಿನಲ್ಲೇ RSS ಸೇರಿದ್ದ ರಾಧಾಕೃಷ್ಣನ್‌

    ನವದೆಹಲಿ: ಸಿ.ಪಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಸಿ.ಪಿ ರಾಧಾಕೃಷ್ಣನ್ (CP Radhakrishnan) 452 ಮತಗಳನ್ನು ಪಡೆದಿದ್ದರೆ, ಎದುರಾಳಿ ನಿವೃತ್ತ ನ್ಯಾ. ಬಿ. ಸುದರ್ಶನ್ ರೆಡ್ಡಿ (B SudershanReddy) ಅವರು 300 ಮತಗಳನ್ನ ಪಡೆದು ಪರಾಭವಗೊಂಡರು.

    ನೂತನ ಉಪರಾಷ್ಟ್ರಪತಿಯಾದ ರಾಧಾಕೃಷ್ಣನ್‌ ಅವರಿಗೆ ಪ್ರಧಾನಿ ಮೋದಿ ಸೇರಿದಂತೆ ಎನ್‌ಡಿಎ ಒಕ್ಕೂಟದ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಇನ್ನೂ ರಾಧಾಕೃಷ್ಣನ್‌ ಯಾರು, ಹಿನ್ನೆಲೆ ಏನೂ ಅಂತ ನೋಡೋದಾದ್ರೆ…

    * 1957ರಲ್ಲಿ ತಮಿಳುನಾಡಿನ ಕೊಂಗು ಪ್ರದೇಶದ ತಿರುಪ್ಪೂರಿನಲ್ಲಿ ಜನಿಸಿದ ಸಿ.ಪಿ ರಾಧಾಕೃಷ್ಣನ್ (ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ), ಕಳೆದ ವರ್ಷ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    * 68 ವರ್ಷ ವಯಸ್ಸಿನ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024ರ ವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024 ರ ನಡುವೆ ಅವರು ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು.

    * 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ, ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದರು.

    * 17ನೇ ವಯಸ್ಸಿನಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸೇರಿದ ಅವರು, ಭಾರತೀಯ ಜನ ಸಂಘದೊಂದಿಗೂ ತಮ್ಮ ರಾಜಕೀಯ ಪ್ರಯಾಣ ಪ್ರಾರಂಭಿಸಿದರು. 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

    * ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ (2004-2007) ಅವರು 93 ದಿನಗಳ ಕಾಲ 19 ಸಾವಿರ ಕಿಮೀ ‘ರಥ ಯಾತ್ರೆ’ಯನ್ನು ಕೈಗೊಂಡಿದ್ದರು. ಭಾರತದ ಎಲ್ಲಾ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಮತ್ತು ಮಾದಕ ದ್ರವ್ಯಗಳ ಪಿಡುಗನ್ನು ಎದುರಿಸುವುದು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಯಾತ್ರೆಯನ್ನು ಆಯೋಜಿಸಲಾಗಿತ್ತು. ಅವರು ವಿಭಿನ್ನ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ಕೈಗೊಂಡಿದ್ದರು.

    * ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ಅವರು ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಗೌರವಾನ್ವಿತ ಹೆಸರನ್ನು ಹೊಂದಿದ್ದಾರೆ.

    * 1957 ರಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಿಂದ ಬಿಬಿಎ ಪದವಿ ಪಡೆದಿದ್ದಾರೆ. ಒಬ್ಬ ಉತ್ಸಾಹಿ ಕ್ರೀಡಾಪಟುವಾಗಿರುವ ಇವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಆಗಿದ್ದರು. ಅಷ್ಟೇ ಅಲ್ಲದೇ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

    * ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಿಗೆ ಕೊಡುಗೆ ನೀಡಿದ್ದಾರೆ.

    * ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (2004) ಸಂಸದೀಯ ನಿಯೋಗದ ಭಾಗವಾಗಿದ್ದರು ಮತ್ತು ತೈವಾನ್‌ಗೆ ತೆರಳಿದ್ದ ಮೊದಲ ಭಾರತೀಯ ನಿಯೋಗದ ಭಾಗವಾಗಿದ್ದರು.

    * ರಾಧಾಕೃಷ್ಣನ್ ಸಾರ್ವಜನಿಕ ಆಡಳಿತದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ತೆಂಗಿನ ನಾರು ಮಂಡಳಿಯ ಅಧ್ಯಕ್ಷರಾಗಿದ್ದಾಗ (2016–2020) ಬೋರ್ಡ್‌ ದಾಖಲೆಯ 2,532 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಫ್ತು ಮಾಡಿತ್ತು. ಕೇರಳದ ಬಿಜೆಪಿಯ ಅಖಿಲ ಭಾರತ ಉಸ್ತುವಾರಿಯಾಗಿ (2020–2022) ಕೆಲಸ ಮಾಡಿದ್ದಾರೆ.

    * ರಾಜಕೀಯ ಮತ್ತು ಆಡಳಿತದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ತಮಿಳುನಾಡಿನ ರಾಜಕೀಯ ಮತ್ತು ಬಿಜೆಪಿಯ ಸಂಘಟನೆಯ ಅನುಭವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

    ಮೋದಿಯಿಂದ ಮೊದಲ ಮತ
    ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಮೊದಲ ಚಲಾಯಿಸಿದ್ದರು. ಬಳಿಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಮಿತ್‌ ಶಾ ಸೇರಿದಂತೆ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. ಇದನ್ನೂ ಓದಿ: ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    15 ಮತಗಳು ಅಮಾನ್ಯ
    ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿದಂತೆ ಒಟ್ಟು 788 ಸಂಸದರಿದ್ದಾರೆ. ಪ್ರಸ್ತುತ ಎರಡೂ ಸದನಗಳಲ್ಲಿ 7 ಸ್ಥಾನಗಳು ಖಾಲಿ ಇರುವ ಕಾರಣ ಒಟ್ಟು 781 ಸಂಸದರು ಮತ ಚಲಾಯಿಸಬೇಕಾಗಿತ್ತು. ಆದ್ರೆ ಇದರಲ್ಲಿ ಬಿಆರ್‌ಎಸ್‌ನ 4, ಬಿಜೆಡಿಯ 7, ಅಕಾಲಿ ದಳದ 3 ಮತ್ತು 1 ಸ್ವತಂತ್ರ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಹೀಗಾಗಿ ಒಟ್ಟು 767 ಸಂಸದರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಇದರಲ್ಲಿ 15 ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. 752 ಮತಗಳನ್ನು ಮಾತ್ರವೇ ಮಾನ್ಯ ಮಾಡಿ ಮತ ಎಣಿಕೆಗೆ ಪರಿಗಣಿಸಲಾಯಿತು. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

    25 ಸಂಸದರಿಂದ ಅಡ್ಡ ಮತದಾನ
    17ನೇ ಉಪರಾಷ್ಟ್ರಪತಿ ಹುದ್ದೆಯಲ್ಲಿ ಗೆಲುವು ಸಾಧಿಸಿರುವ ಸಿ.ಪಿ ರಾಧಾಕೃಷ್ಣನ್‌, ಒಟ್ಟು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, 300 ಮತಗಳನ್ನು ಪಡೆದಿರುವ ಸುದರ್ಶನ್ ರೆಡ್ಡಿ ಪರಾಭಗೊಂಡಿದ್ದಾರೆ. ಎನ್‌ಡಿಎ ಅಭ್ಯರ್ಥಿಗಳ ಸ್ವಂತ ಸಂಸದರನ್ನು ಹೊರತುಪಡಿಸಿ ಇನ್ನೂ 14 ಸಂಸದರು ಅಡ್ಡಮತದಾನ ನಡೆಸಿದ್ದಾರೆ. ಅಲ್ಲದೇ ಎನ್‌ಡಿಎ ಬಲಕ್ಕಿಂತ 25 ಮತಗಳು ಹೆಚ್ಚಾಗಿ ರಾಧಾಕೃಷ್ಣನ್‌ಗೆ ಬಂದಿವೆ. ಇದನ್ನೂ ಓದಿ: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಮೋದಿ ಭೇಟಿ – ವೈಮಾನಿಕ ಸಮೀಕ್ಷೆ, ಪರಿಸ್ಥಿತಿ ಅವಲೋಕನ

  • ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿಂದು ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿ ಸಿ.ಪಿ ರಾಧಕೃಷ್ಣನ್ (CP Radhakrishnan) ಆಯ್ಕೆಯಾಗಿದ್ದಾರೆ.

    ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ (Vice President) ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ರಾಧಾಕೃಷ್ಣನ್‌ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ (BSudershan Reddy) 300 ಮತಗಳನ್ನು ಪಡೆದು ಪರಾಭವಗೊಂಡರು.

    ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಮೊದಲ ಚಲಾಯಿಸಿದ್ದರು. ಬಳಿಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಮಿತ್‌ ಶಾ ಸೇರಿದಂತೆ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು.

    ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿದಂತೆ ಒಟ್ಟು 788 ಸಂಸದರಿದ್ದಾರೆ. ಪ್ರಸ್ತುತ ಎರಡೂ ಸದನಗಳಲ್ಲಿ 7 ಸ್ಥಾನಗಳು ಖಾಲಿ ಇರುವ ಕಾರಣ ಒಟ್ಟು 781 ಸಂಸದರು ಮತ ಚಲಾಯಿಸಬೇಕಾಗಿತ್ತು. ಆದ್ರೆ ಇದರಲ್ಲಿ ಬಿಆರ್‌ಎಸ್‌ನ 4, ಬಿಜೆಡಿಯ 7, ಅಕಾಲಿ ದಳದ 3 ಮತ್ತು 1 ಸ್ವತಂತ್ರ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಹೀಗಾಗಿ ಒಟ್ಟು 767 ಸಂಸದರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಇದರಲ್ಲಿ 15 ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. 752 ಮತಗಳನ್ನು ಮಾತ್ರವೇ ಮಾನ್ಯ ಮಾಡಿ ಮತ ಎಣಿಕೆಗೆ ಪರಿಗಣಿಸಲಾಯಿತು.

    14 ಸಂಸದರಿಂದ ಅಡ್ಡ ಮತದಾನ
    17ನೇ ಉಪರಾಷ್ಟ್ರಪತಿ ಹುದ್ದೆಯಲ್ಲಿ ಗೆಲುವು ಸಾಧಿಸಿರುವ ಸಿ.ಪಿ ರಾಧಾಕೃಷ್ಣನ್‌, ಒಟ್ಟು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, 300 ಮತಗಳನ್ನು ಪಡೆದಿರುವ ಸುದರ್ಶನ್ ರೆಡ್ಡಿ ಪರಾಭಗೊಂಡಿದ್ದಾರೆ. ಎನ್‌ಡಿಎ ಅಭ್ಯರ್ಥಿಗಳ ಸ್ವಂತ ಸಂಸದರನ್ನು ಹೊರತುಪಡಿಸಿ ಇನ್ನೂ 14 ಸಂಸದರು ಅಡ್ಡಮತದಾನ ನಡೆಸಿದ್ದಾರೆ. ಅಲ್ಲದೇ ಎನ್‌ಡಿಎ ಬಲಕ್ಕಿಂತ 25 ಮತಗಳು ಹೆಚ್ಚಾಗಿ ರಾಧಾಕೃಷ್ಣನ್‌ಗೆ ಬಂದಿವೆ.

    ಜಗದೀಪ್ ಧನ್ಕರ್‌ ಅವರು ಆರೋಗ್ಯ ಕಾರಣಗಳನ್ನು ನೀಡಿ ಕಳೆದ ಜುಲೈ 21 ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

  • ಜಿಎಸ್‍ಟಿ ಬಗ್ಗೆ ಅರಿವು ಮೂಡಿಸಲು ಸಮ್ಮೇಳನ ಆಯೋಜಿಸಿ – ಎನ್‍ಡಿಎ ಸಂಸದರಿಗೆ ಮೋದಿ ಸೂಚನೆ

    ಜಿಎಸ್‍ಟಿ ಬಗ್ಗೆ ಅರಿವು ಮೂಡಿಸಲು ಸಮ್ಮೇಳನ ಆಯೋಜಿಸಿ – ಎನ್‍ಡಿಎ ಸಂಸದರಿಗೆ ಮೋದಿ ಸೂಚನೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಜಿಎಸ್‍ಟಿ (GST) ಸುಧಾರಣೆಗಳ ಕುರಿತು ಸಭೆಯಲ್ಲಿ ಎನ್‍ಡಿಎ (NDA) ಸಂಸದರಿಗೆ ತಮ್ಮ ತಮ್ಮ ಕ್ಷೇತ್ರಗಳಲ್ಲಿ 20-30 ವ್ಯಾಪಾರಿ ಸಮ್ಮೇಳನಗಳನ್ನು ಆಯೋಜಿಸಲು ಸೂಚಿಸಿದ್ದಾರೆ.

    ಸಮ್ಮೇಳನದಲ್ಲಿ ಜಿಎಸ್‍ಟಿಯ ಪ್ರಯೋಜನಗಳು ಮತ್ತು ಸುಧಾರಣೆಗಳ ಬಗ್ಗೆ ವ್ಯಾಪಾರಿಗಳು ಮತ್ತು ಅಂಗಡಿಯವರಿಗೆ ಅರಿವು ಮೂಡಿಸಲು ಹೇಳಿದ್ದಾರೆ. “ಗರ್ವ್ ಸೆ ಕಹೋ ಯೇ ಸ್ವದೇಶಿ ಹೈ” ಥೀಮ್‍ನಡಿ ಭಾರತೀಯ ಉತ್ಪನ್ನಗಳನ್ನು ಉತ್ತೇಜಿಸಲು ಸಮ್ಮೇಳನ ನಡೆಸುವಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್‌ – ಸೆ.22 ರಿಂದ ಜಾರಿ| ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪಟ್ಟಿ

    ಇತ್ತೀಚೆಗೆ ಜಿಎಸ್‌ಟಿ ಕೌನ್ಸಿಲ್‌ ಸಿಹಿಸುದ್ದಿ ನೀಡಿತ್ತು. 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್‌ (GST Slab) ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದ್ದು ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಗೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ಎರಡರ ಜೊತೆಗೆ ಐಷರಾಮಿ ವಸ್ತುಗಳಿಗೆ 40% ಜಿಎಸ್‌ಟಿಯ ಸ್ಲ್ಯಾಬ್ ಅನ್ವಯವಾಗಲಿದೆ.

    ಸಾಮಾನ್ಯ ಜನರನ್ನು ಗಮನದಲ್ಲಿಟ್ಟುಕೊಂಡು ಜಿಎಸ್‌ಟಿ ಸ್ಲ್ಯಾಬ್‌ ಬದಲಾವಣೆ ಮಾಡಲಾಗಿದೆ. ದಿನ ಬಳಕೆ ವಸ್ತುಗಳು, ಆರೋಗ್ಯ ವಲಯ ಸೇರಿ ಹಲವು ವಲಯಗಳಿಗೆ ಅನುಕೂಲವಾಗಲಿದೆ. ಸಾಕಷ್ಟು ಚರ್ಚೆ ಬಳಿಕ ನಿರ್ಧಾರಕ್ಕೆ ಬರಲಾಗಿದ್ದು ಎಲ್ಲರೂ ಒಮ್ಮತದಿಂದ ಬೆಂಬಲವನ್ನು ನೀಡಿದ್ದಾರೆ. ಇದಕ್ಕಾಗಿ ನಾನು ಜಿಎಸ್‌ಟಿ ಕೌನ್ಸಿಲ್ ನ ಎಲ್ಲ ಸದಸ್ಯರಿಗೂ ಅಭಾರಿಯಾಗಿದ್ದಾನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ತಿಳಿಸಿದ್ದರು. ಇದನ್ನೂ ಓದಿ: ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ – ಹೆಚ್‌ಡಿಕೆ ಹರ್ಷ

  • ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

    ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

    – ಮೈತ್ರಿಕೂಟಕ್ಕೆ ಆಘಾತ; 234 ರಿಂದ 208ಕ್ಕೆ ಇಳಿಯುವ ನಿರೀಕ್ಷೆ

    ನವದೆಹಲಿ: ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಜಯಗಳಿಸಿದ ನಂತರ ಬಿಜೆಪಿ ಚೇತರಿಸಿಕೊಂಡಿದೆ. ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ (NDA) ಪ್ರಬಲ ಪ್ರದರ್ಶನ ನೀಡುವ ಮೂಲಕ 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್, ಮೂಡ್ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ.

    ಮತ್ತೊಂದೆಡೆ 2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ. ಇದನ್ನೂ ಓದಿ: ಬಿಜೆಪಿ-ಆರ್‌ಎಸ್‌ಎಸ್‌ ನಡ್ವೆ ಕೆಲ ಭಿನ್ನಾಭಿಪ್ರಾಯ ಇರಬಹುದು, ಎಲ್ಲಿಯೂ ಸಂಘರ್ಷವಿಲ್ಲ: ಮೋಹನ್ ಭಾಗವತ್

    ಈ ಸಮೀಕ್ಷೆಯನ್ನು 2025 ರ ಜುಲೈ 1 ರಿಂದ ಆಗಸ್ಟ್ 14ರ ನಡುವೆ ನಡೆಸಲಾಯಿತು. ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ 54,788 ವ್ಯಕ್ತಿಗಳನ್ನು ಸಮೀಕ್ಷೆ ಮಾಡಲಾಯಿತು. ಸಿ-ವೋಟರ್‌ನ ನಿಯಮಿತ ಟ್ರ್ಯಾಕರ್ ಡೇಟಾದಿಂದ ಹೆಚ್ಚುವರಿಯಾಗಿ 1,52,038 ಜನರ ಅಭಿಪ್ರಾಯಗಳನ್ನು ಸಹ ವಿಶ್ಲೇಷಿಸಲಾಗಿದೆ.

    2024 ರ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿತ್ತು. ಸ್ವಂತವಾಗಿ ಸರ್ಕಾರ ರಚಿಸಲು ಸರಳ ಬಹುಮತಕ್ಕೆ ಅಗತ್ಯವಿರುವ 272 ಸ್ಥಾನಗಳಿಗೆ 32 ಸ್ಥಾನಗಳ ಕೊರತೆಯಾಗಿತ್ತು. ಎನ್‌ಡಿಎ ಪಾಲುದಾರರೊಂದಿಗೆ, ಒಟ್ಟಾರೆ 293 ಸ್ಥಾನಗಳೊಂದಿಗೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸರ್ಕಾರ ರಚಿಸಿದರು. ಇದನ್ನೂ ಓದಿ: ಸರ್ಕಾರಿ ಸೌಲಭ್ಯಗಳ ದುರ್ಬಳಕೆ ಆರೋಪ – ಕರ್ನಾಟಕ ಭವನದ ಹೆಚ್ಚುವರಿ ಆಯುಕ್ತೆ ವಿರುದ್ಧ ಸಿಎಸ್‌ಗೆ ದೂರು

  • ದೇವೇಗೌಡರನ್ನು ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

    ದೇವೇಗೌಡರನ್ನು ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

    ನವದೆಹಲಿ: ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಸಿಪಿ ರಾಧಾಕೃಷ್ಣನ್‌ಗೆ (CP Radhakrishnan) ಮೈತ್ರಿ ಪಕ್ಷ ಜೆಡಿಎಸ್ (JDS) ಬೆಂಬಲ ಘೋಷಿಸಿದೆ. ದೆಹಲಿಯ ದೇವೇಗೌಡರ (HD Deve Gowda) ನಿವಾಸದಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ದೇವೇಗೌಡರನ್ನ ಭೇಟಿಯಾಗಿ ಚರ್ಚೆ ನಡೆಸಿದರು.

    ಭೇಟಿಯ ಸಮಯದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಕುಮಾರಸ್ವಾಮಿ, ಸಂಸದರಾದ ಮಂಜುನಾಥ್ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ದೇವೇಗೌಡರು, ನನ್ನ 10 ವರ್ಷದ ಅನುಭವದಲ್ಲಿ ಮೋದಿ ಅವರ ಮನಸ್ಸನ್ನು ಯಾರು ಪತ್ತೆ ಹಚ್ಚಲು ಸಾಧ್ಯವಿಲ್ಲ. ಕೊನೆಯ ಘಳಿಗೆಯ ತನಕ ಗುಟ್ಟು ಬಿಟ್ಟು ಕೊಡುವುದಿಲ್ಲ. ರಾಧಾಕೃಷ್ಣನ್ ಅವರು ಅಂತಿಮವಾಗಿ ಆಯ್ಕೆಯಾದರು. ಎಲ್ಲಾ ದೃಷ್ಟಿಯಿಂದಲೂ ಸಮರ್ಥರು, ಅರ್ಹರು ಆಗಿರುವ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಪೋಕ್ಸೊ ಪ್ರಕರಣದಲ್ಲಿ ಮಹಿಳೆಗೆ 20 ವರ್ಷ ಜೈಲು

    ರಾಜ್ಯಪಾಲರಾಗಿ, ಲೆಫ್ಟಿನೆಂಟ್ ಗವರ್ನರ್ ಆಗಿ, ಲೋಕಸಭಾದ ಹಲವು ಸಮಿತಿಗಳಲ್ಲಿ ಕೆಲಸ ಮಾಡಿದ್ದಾರೆ. ವಿವಿಧ ಸಮಿತಿಗಳ ಭಾಗವಾಗಿ 24 ದೇಶಗಳಲ್ಲಿ ಪ್ರವಾಸ ಮಾಡಿದ್ದಾರೆ. ಜನಸಾಮಾನ್ಯರ ಮಧ್ಯದಿಂದ ಬೆಳದು ಬಂದ ವ್ಯಕ್ತಿ ಇವರು, ನನಗೆ ತುಂಬಾ ಸಂತೋಷ ಆಗಿದೆ. ನಾನು ಒಬ್ಬ ಸಾಮಾನ್ಯ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಮ್ಮ ಪಕ್ಷದಿಂದ ಬೆಂಬಲ ಇದೆ ಎಂದು ದೇವೇಗೌಡರು ಹೇಳಿದರು. ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ

  • ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

    ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

    ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್‌ (CP Radhakrishnan) ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ (NDA Candidate) ಆಯ್ಕೆ ಮಾಡಲಾಗಿದೆ.

    ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ (Narendra Modi), ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ನೇತೃತ್ವತದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್‌ ಹೆಸರನ್ನು ಅಂತಿಮಗೊಳಿಸಲಾಯಿತು. ಉಪರಾಷ್ಟ್ರಪತಿ ಹುದ್ದೆಗೆ ಹಲವು ಹೆಸರುಗಳು ಕೇಳಿ ಬಂದಿದ್ದರೂ ಅಂತಿಮವಾಗಿ ಸಿಪಿ ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಯಿತು.

    ವಿಷಯಗಳ ಬಗ್ಗೆ ಜ್ಞಾನ, ಉತ್ತಮ ಸಂಸದೀಯ ಪಟು ಜೊತೆಗೆ ದಕ್ಷಿಣ ಭಾರತದ ಮೂಲದ ವ್ಯಕ್ತಿಯನ್ನು ಆಯ್ಕೆ ಮಾಡಲಾಗಿದೆ ಎಂಬ ಸಂದೇಶ ಕಳುಹಿಸಲು ಸಿಪಿ ರಾಧಾಕೃಷ್ಣನ್‌ ಅವರ ಹೆಸರನ್ನೇ ಬಿಜೆಪಿ ಅಂತಿಮಗೊಳಿಸಿದೆ.

    ಈ ವೇಳೆ ಮಾತನಾಡಿದ ನಡ್ಡಾ, ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ. ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ ಎಂದು ತಿಳಿಸಿದರು.

    ಸಿಪಿ ರಾಧಾಕೃಷ್ಣನ್‌ ಯಾರು?
    * ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್, ಕಳೆದ ವರ್ಷ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: 7 ದಿನಗಳಲ್ಲಿ ಅಫಿಡವಿಟ್‌ ಸಲ್ಲಿಸಿ ಇಲ್ಲವೇ ದೇಶದ ಕ್ಷಮೆ ಕೇಳಿ: ರಾಹುಲ್‌ಗೆ ಚುನಾವಣಾ ಆಯೋಗ ಡೆಡ್‌ಲೈನ್‌

    * 68 ವರ್ಷ ವಯಸ್ಸಿನ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024 ರ ನಡುವೆ ಅವರು ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.

    * 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ, ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದರು.

    * ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನ ಸಂಘದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ಇವರು 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

     

    * ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ(2004-2007) ಅವರು 93 ದಿನಗಳ ಕಾಲ 19 ಸಾವಿರ ಕಿಮೀ ‘ರಥ ಯಾತ್ರೆ’ಯನ್ನು ಕೈಗೊಂಡಿದ್ದರು. ಭಾರತದ ಎಲ್ಲಾ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಮತ್ತು ಮಾದಕ ದ್ರವ್ಯಗಳ ಪಿಡುಗನ್ನು ಎದುರಿಸುವುದು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಯಾತ್ರೆಯನ್ನು ಆಯೋಜಿಸಲಾಗಿತ್ತು. ಅವರು ವಿಭಿನ್ನ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ಕೈಗೊಂಡಿದ್ದರು.  ಇದನ್ನೂ ಓದಿ:  ರಿಸಲ್ಟ್‌ ಪ್ರಕಟವಾದ ಬಳಿಕ ದೂರು ದಾಖಲಿಸದೇ ಆರೋಪ ಮಾಡೋದು ಸಂವಿಧಾನಕ್ಕೆ ಮಾಡೋ ಅವಮಾನ: ಚುನಾವಣಾ ಆಯೋಗ

    * ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ಅವರು ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಗೌರವಾನ್ವಿತ ಹೆಸರನ್ನು ಹೊಂದಿದ್ದಾರೆ.

    *1957 ರಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಿಂದ ಬಿಬಿಎ ಪದವಿ ಪಡೆದಿದ್ದಾರೆ. ಒಬ್ಬ ಉತ್ಸಾಹಿ ಕ್ರೀಡಾಪಟುವಾಗಿರುವ ಇವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಆಗಿದ್ದರು. ಅಷ್ಟೇ ಅಲ್ಲದೇ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

    * ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಿಗೆ ಕೊಡುಗೆ ನೀಡಿದ್ದಾರೆ.

    * ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (2004) ಸಂಸದೀಯ ನಿಯೋಗದ ಭಾಗವಾಗಿದ್ದರು ಮತ್ತು ತೈವಾನ್‌ಗೆ ತೆರಳಿದ್ದ ಮೊದಲ ಭಾರತೀಯ ನಿಯೋಗದ ಭಾಗವಾಗಿದ್ದರು. ಇದನ್ನೂ ಓದಿಬಿಹಾರದಲ್ಲಿ ಮತದಾರರ ಹಕ್ಕುಗಳ ಯಾತ್ರೆಗೆ ಚಾಲನೆ  ಬಿಜೆಪಿ, ಚು. ಆಯೋಗ ವಿರುದ್ಧ ರಾಗಾ ವಾಗ್ದಾಳಿ

    * ರಾಧಾಕೃಷ್ಣನ್ ಸಾರ್ವಜನಿಕ ಆಡಳಿತದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ತೆಂಗಿನ ನಾರು ಮಂಡಳಿಯ ಅಧ್ಯಕ್ಷರಾಗಿದ್ದಾಗ (2016–2020) ಬೋರ್ಡ್‌ ದಾಖಲೆಯ 2,532 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಫ್ತು ಮಾಡಿತ್ತು. ಕೇರಳದ ಬಿಜೆಪಿಯ ಅಖಿಲ ಭಾರತ ಉಸ್ತುವಾರಿಯಾಗಿ (2020–2022) ಕೆಲಸ ಮಾಡಿದ್ದಾರೆ.

    * ರಾಜಕೀಯ ಮತ್ತು ಆಡಳಿತದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ತಮಿಳುನಾಡಿನ ರಾಜಕೀಯ ಮತ್ತು ಬಿಜೆಪಿಯ ಸಂಘಟನೆಯ ಅನುಭವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

  • ಬಿಹಾರ ಚುನಾವಣೆ ಹೊತ್ತಲ್ಲೇ ಸೀತಾ ಮಂದಿರಕ್ಕೆ ಪ್ಲ್ಯಾನ್‌ – 882 ಕೋಟಿಯ ದೇಗುಲಕ್ಕಿಂದು ಅಮಿತ್ ಶಾ ಶಂಕುಸ್ಥಾಪನೆ

    ಬಿಹಾರ ಚುನಾವಣೆ ಹೊತ್ತಲ್ಲೇ ಸೀತಾ ಮಂದಿರಕ್ಕೆ ಪ್ಲ್ಯಾನ್‌ – 882 ಕೋಟಿಯ ದೇಗುಲಕ್ಕಿಂದು ಅಮಿತ್ ಶಾ ಶಂಕುಸ್ಥಾಪನೆ

    ಪಾಟ್ನಾ: ಬಿಹಾರ ಚುನಾವಣೆ (Bihar Election) ಹೊತ್ತಲ್ಲೇ ರಾಜ್ಯದಲ್ಲಿ ಸೀತಾ ಮಂದಿರಕ್ಕೆ (Sita Mandir) ಯೋಜನೆ ಹಾಕಿಕೊಂಡಿದ್ದು, 882 ಕೋಟಿ ರೂ. ವೆಚ್ಚದಲ್ಲಿ ದೇಗುಲದ ಪುನರ್ ಅಭಿವೃದ್ಧಿ ಕಾಮಗಾರಿಗೆ ಇಂದು (ಆ.8) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ಸೀತಾ ದೇವಿಯ ಜನ್ಮಸ್ಥಳವೆಂದು ಪರಿಗಣಿಸಲಾದ ಬಿಹಾರದ (Bihar) ಸೀತಾಮರ್ಹಿ (Sitamarhi) ಜಿಲ್ಲೆಯ ಪುನೌರಾಧಂನಲ್ಲಿರುವ ಜಾನಕಿ ಮಂದಿರದ ಪುನರ್ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 67 ಎಕರೆ ವ್ಯಾಪ್ತಿಯಲ್ಲಿರುವ ದೇವಸ್ಥಾನದ ಕಾಮಗಾರಿಯನ್ನು 11 ತಿಂಗಳೊಳಗೆ ಪೂರ್ಣಗೊಳಿರುವ ಸಾಧ್ಯತೆಯಿದ್ದು, 882 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ಪ್ಲ್ಯಾನ್‌ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ನಿತೀಶ್ ಕುಮಾರ್ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಆನ್‌ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ

    ಶಂಕುಸ್ಥಾಪನೆಗೆ 112 ನದಿಗಳಿಂದ ಪವಿತ್ರ ನೀರು ಹಾಗೂ 36 ಪವಿತ್ರ ಸ್ಥಳಗಳಿಂದ ಮಣ್ಣನ್ನು ತರಲಾಗಿದ್ದು, ಇಂದು ಮಧ್ಯಾಹ್ನ 2 ರಿಂದ 3:15 ಒಳಗಡೆ ಈ ಕಾರ್ಯಕ್ರಮ ನಡೆಯಲಿದೆ. ಕಾಶಿ, ದರ್ಭಾಂಗ ಮತ್ತು ಇತರ ನಗರಗಳ ಆರು ಆಚಾರ್ಯರು ಶಂಕುಸ್ಥಾಪನೆಯ ನೇತೃತ್ವ ವಹಿಸಲಿದ್ದಾರೆ. ಅಯೋಧ್ಯೆ, ವೃಂದಾವನ, ಮಥುರಾ, ಜನಕಪುರ ಮತ್ತು ವಾರಣಾಸಿಯಿಂದ ನೂರಾರು ಸಂತರು ಮತ್ತು ಋಷಿಗಳು ಭಾಗವಹಿಸುವ ನಿರೀಕ್ಷೆಯಿದೆ.

    ಅಯೋಧ್ಯೆಯ ರಾಮ ಮಂದಿರದ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ ವಿನ್ಯಾಸಗೊಳಿಸಿದ ಈ ದೇವಾಲಯವು 151 ಅಡಿ ಎತ್ತರವಿದ್ದು, 67 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿದೆ. ದೇವಾಲಯದ ಆವರಣವು ಮರಗಳು ಸೇರಿದಂತೆ ಹಚ್ಚಹಸಿರು ಜಾಗವನ್ನು ಹೊಂದಿದೆ. ಇಲ್ಲಿ ಸೀತಾ ವನ, ಲವ-ಕುಶ ವನ, ಪ್ರದರ್ಶನ ಮಂಟಪ, ವೇದ ಶಾಲೆ, ವಸ್ತುಸಂಗ್ರಹಾಲಯ, ಅತಿಥಿಗೃಹ, ಪಾರ್ಕಿಂಗ್ ವ್ಯವಸ್ಥೆ ಮತ್ತು ಸಾಂಸ್ಕೃತಿಕ ಸ್ಥಳಗಳನ್ನು ಒಳಗೊಂಡಿದೆ.

    ಶಂಕುಸ್ಥಾಪನೆ ಬಳಿಕ ಅಮಿತ್ ಶಾ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆ ಈ ಕಾರ್ಯಕ್ರಮ ರಾಜಕೀಯವಾಗಿ ಮಹತ್ವದ್ದು ಎನ್ನಲಾಗಿದೆ. 2023ರಲ್ಲಿ ನಿತೀಶ್ ಕುಮಾರ್ ಅವರು ದೇವಾಲಯದ ಆವರಣಕ್ಕಾಗಿ 72 ಕೋಟಿ ರೂ. ಮಂಜೂರು ಮಾಡಿದ್ದರು. ಇದೀಗ ಎನ್‌ಡಿಎ ಸರ್ಕಾರವು ಸಂಪೂರ್ಣ ಯೋಜನೆಗಾಗಿ 882 ಕೋಟಿ ರೂ.ಯನ್ನು ಮಂಜೂರು ಮಾಡಿದೆ. ಇದನ್ನೂ ಓದಿ: ಆಂಜನೇಯ ದೇಗುಲ ನಿರ್ಮಾಣಕ್ಕೆ 1.83 ಲಕ್ಷ ದೇಣಿಗೆ ನೀಡಿದ ಭಿಕ್ಷುಕಿ

  • ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್‌ ಧನಕರ್‌ ರಾಜೀನಾಮೆ – ಆಯ್ಕೆ ಪ್ರಕ್ರಿಯೆ ಹೇಗೆ? ಅರ್ಹತೆಗಳೇನು?

    ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್‌ ಧನಕರ್‌ ರಾಜೀನಾಮೆ – ಆಯ್ಕೆ ಪ್ರಕ್ರಿಯೆ ಹೇಗೆ? ಅರ್ಹತೆಗಳೇನು?

    ನಾರೋಗ್ಯದ ಕಾರಣ ಕೊಟ್ಟು ಉಪರಾಷ್ಟ್ರಪತಿ (Vice President) ಸ್ಥಾನಕ್ಕೆ ಜಗದೀಪ್‌ ಧನಕರ್‌ (Jagdeep Dhankhar) ರಾಜೀನಾಮೆ ಕೊಟ್ಟಿದ್ದಾರೆ. ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆ ಬಳಿಕ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.‌ ಸಂಸತ್ತಿನ ಮೊದಲ ದಿನದ ಅಧಿವೇಶದ ಮೊದಲ ದಿನದ ಕಲಾಪವನ್ನು ನಡೆಸಿ, ಜಗದೀಪ್ ಧನಕರ್ ರಾಜೀನಾಮೆಯನ್ನು ನೀಡಿದ್ದರು. ಇವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಆಂಗೀಕರಿಸಿದ್ದಾರೆ. ಹಾಗಾಗಿ, ಮುಂದಿನ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ (Election Commission Of India) ಹೇಳಿದೆ. ಹಾಗಿದ್ರೆ ಉಪರಾಷ್ಟ್ರಪತಿ ಆಯ್ಕೆ ಹೇಗೆ ನಡೆಯುತ್ತದೆ? ಅರ್ಹತೆಗಳೇನು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

    ಜಗದೀಪ್‌ ಧನಕರ್‌ ರಾಜೀನಾಮೆ ನೀಡಿದ್ದು ಯಾಕೆ?
    ಆರೋಗ್ಯದ ಕಾರಣವನ್ನು ನೀಡಿ 74 ವರ್ಷದ ಜಗದೀಪ್ ಧನಕರ್ ಪದತ್ಯಾಗ ಮಾಡಿದ್ದಾರೆ. ಮೊದಲ ದಿನದ ಕಲಾಪವನ್ನು ಸುಮಾರು 65 ನಿಮಿಷ ನಡೆಸಿಕೊಟ್ಟು, ರಾಜ್ಯಸಭೆಯಲ್ಲಿ ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜನ್ಮದಿನದ ಶುಭವನ್ನು ಕೋರಿ, ಐದು ನೂತನ ಸಂಸದರಿಗೆ ಪ್ರಮಾಣವಚನವನ್ನು ಜಗದೀಪ್ ಧನಕರ್ ಬೋಧಿಸಿದ್ದರು. ಆದರೆ, ಅದೇ ದಿನ ರಾಜೀನಾಮೆಯನ್ನು ನೀಡಿ ಎಲ್ಲರಿಗೂ ಶಾಕ್ ನೀಡಿದ್ದರು.

    ಜನತಾ ದಳದ ಅಭ್ಯರ್ಥಿಯಾಗಿ 1991ರಲ್ಲಿ ರಾಜಕೀಯ ಜೀವನ ಆರಂಭಸಿದ ಧನಕರ್‌ ಆ ಬಳಿಕ ಕಾಂಗ್ರೆಸ್‌ ಸೇರಿದ್ದರು. ನಂತರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಕೆಲಸ ನಿರ್ವಹಿಸುತ್ತಿದ್ದಾಗಲೇ ಬಿಜೆಪಿ ನಾಯಕತ್ವದ ಗಮನ ಸೆಳೆದ ಅವರು 2019ರಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ನೇಮಕಗೊಂಡರು. 2022ರಲ್ಲಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಇನ್ನು ಸರಿಸುಮಾರು 2 ವರ್ಷಗಳ ಕಾಲ ಉಪರಾಷ್ಟ್ರಪತಿ ಅವಧಿ ಬಾಕಿ ಇದ್ದರೂ ಧನಕರ್ ಆರೋಗ್ಯದ ಕಾರಣದಿಂದ ರಾಜೀನಾಮೆ ನೀಡಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದ ರಾಜೀನಾಮೆ ಪತ್ರದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಸಲಹೆಗಳಿಂದ ಈ ತಕ್ಷಣದಿಂದ ರಾಜೀನಾಮೆ ನೀಡುವುದಾಗಿ ಉಲ್ಲೇಖಿಸಿದ್ದಾರೆ. ಜಗದೀಪ್ ಧನಕರ್ ಅವರ ಮೂರು ವರ್ಷಗಳ ಅಧಿಕಾರಾವಧಿಯಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಆಗಾಗ್ಗೆ ಘರ್ಷಣೆಗಳು ನಡೆದವು. ಹಲವು ಬಾರಿ ಅವರು ಸುದ್ದಿಗೆ ಗ್ರಾಸವಾಗಿದ್ದರು.

    ರಾಷ್ಟ್ರಪತಿಯ ಹುದ್ದೆ ತೆರವಾದಾಗ ಅಥವಾ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ಸಂದರ್ಭದಲ್ಲಿ ಹಂಗಾಮಿ ರಾಷ್ಟ್ರಪತಿಯಾಗಿ ಗರಿಷ್ಠ 6 ತಿಂಗಳ ಕಾಲ
    ಉಪರಾಷ್ಟ್ರಪತಿಯು ಕಾರ್ಯನಿರ್ವಹಿಸುತ್ತಾರೆ. ಈ ಮೂಲಕ ಆಡಳಿತ ವ್ಯವಸ್ಥೆ ನಿರಾತಂಕವಾಗಿರುವಂತೆ ಖಾತರಿಪಡಿಸುತ್ತಾರೆ. ಉಪರಾಷ್ಟ್ರಪತಿಯು ರಾಜ್ಯಸಭೆಯ ಸಭಾಪತಿಯಾಗಿ, ಚರ್ಚೆಗಳನ್ನು ಮೇಲ್ವಿಚಾರಣೆ ಮಾಡುವ ಜೊತೆಗೆ ಶಿಷ್ಟಾಚಾರಗಳನ್ನು ಖಾತರಿಪಡಿಸುತ್ತಾರೆ. ರಾಜಕೀಯ ಪಕ್ಷಪಾತವಿಲ್ಲದೆ ಉನ್ನತ ಸದನವನ್ನು ನಿರ್ದೇಶಿಸುವ ಮೂಲಕ, ಸಾಂವಿಧಾನಿಕ ಪ್ರಜಾಪ್ರಭುತ್ವದ ನೈತಿಕತೆಯನ್ನು ಬಲಪಡಿಸುತ್ತಾರೆ.

    ಉಪರಾಷ್ಟ್ರಪತಿ ಚುನಾವಣೆ ಯಾವಾಗ?
    ಹಾಲಿ ಉಪರಾಷ್ಟ್ರಪತಿ 5 ವರ್ಷ ತಮ್ಮ ಅಧಿಕಾರಾವಧಿ ಪೂರ್ಣ ಗೊಳಿಸಿದಾಗ, ಇಲ್ಲವೇ ರಾಜೀನಾಮೆ ನೀಡಿದಾಗ ಚುನಾವಣೆ ನಡೆಯುತ್ತದೆ. ಜೊತೆಗೆ ಈ ಹುದ್ದೆಯಲ್ಲಿರುವವರು ಮರಣ ಹೊಂದಿದರೆ, ಸಂಸದೀಯ ಪ್ರಕ್ರಿಯೆಯ ಮೂಲಕ ಪದಚ್ಯುತಗೊಂಡರೆ ಇಲ್ಲವೇ ಚುನಾವಣೆ ವೇಳೆ ಅನರ್ಹತೆ ಸಾಬೀತಾದಾಗ ಉಪರಾಷ್ಟ್ರಪತಿ ಚುನಾವಣೆಯನ್ನು ನಡೆಸಲಾಗುತ್ತದೆ.

    ಆಯೋಗವು ಅಧಿಸೂಚನೆ ಹೊರಡಿಸಿದ ನಂತರ ನಾಪತ್ರ ಸಲ್ಲಿಕೆ, ಅಧಿಸೂಚನೆ, ಹಿಂಪಡೆಯುವಿಕೆ ಮತದಾನ ಹಾಗೂ ಎಣಿಕೆ ಪ್ರಕ್ರಿಯೆ 30 ದಿನಗಳ ಒಳಗಾಗಿ ಪೂರ್ಣಗೊಳ್ಳಬೇಕು.

    ಉಪರಾಷ್ಟ್ರಪತಿ ಆಯ್ಕೆ ಹೇಗೆ ನಡೆಯುತ್ತದೆ?
    ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು.

    ಪಕ್ಷಗಳ ವಿಪ್ ಅಗತ್ಯವಿಲ್ಲದೆ ಗೌಪ್ಯ ಮತಪತ್ರದ ಮೂಲಕ ಮತದಾನ ನಡೆಯುತ್ತದೆ. ರಾಷ್ಟ್ರಪತಿ ಚುನಾವಣೆಯಂತೆ ರಾಜ್ಯಗಳ ವಿಧಾನಸಭೆ ಶಾಸಕ ರಿಗೆ ಮತದಾನದ ಅವಕಾಶವಿಲ್ಲ. ಏಕಮತದಾನ ವರ್ಗಾವಣೆ ವಿಧಾನದಲ್ಲಿ ಪ್ರತಿಯೊಬ್ಬ ಮತದಾರ ಅಭ್ಯರ್ಥಿಗಳನ್ನು ಪ್ರಾಶಸ್ಯದ ಕ್ರಮದಲ್ಲಿ ಶ್ರೇಣೀಕರಿಸುತ್ತಾರೆ. ಅವರ ಪ್ರಾಶಸ್ಯವನ್ನು ಸಂಖ್ಯೆಗಳ ರೂಪದಲ್ಲಿ ಗುರುತಿಸುತ್ತಾರೆ. (ಮೊದಲ ಪ್ರಾಶಸ್ಯಕ್ಕೆ 1, 2ನೇ ಪ್ರಾಶಸ್ಯಕ್ಕೆ 2, ಇತ್ಯಾದಿ.) ಮತಪತ್ರವು ಮಾನ್ಯವಾಗಿರಲು ಮೊದಲ ಪ್ರಾಶಸ್ಯವನ್ನು ಗುರುತಿಸುವುದು ಕಡ್ಡಾಯವಾಗಿದೆ. ನಂತರದ ಆದ್ಯತೆಗಳು ಐಚ್ಛಿಕವಾಗಿರುತ್ತವೆ. ಎಣಿಕೆ ವೇಳೆ ಎಲ್ಲ ಅಭ್ಯರ್ಥಿಗಳಿಗೆ ಸಿಗುವ ಮೊದಲ ಪ್ರಾಶಸ್ಯದ ಮತಗಳನ್ನು ಆರಂಭಿಕವಾಗಿ ಎಣಿಕೆ ಮಾಡಲಾಗುತ್ತದೆ. ಮೊದಲ ಪ್ರಾಶಸ್ಯದ ಮತಗಳ ಎಣಿಕೆಯಲ್ಲಿ ಬಹುಮತ ದೊರೆಯದಿದ್ದಲ್ಲಿ 2ನೇ ಪ್ರಾಶಸ್ಯದ ಮತದಾನವನ್ನು ಪರಿಗಣಿಸಲಾಗುತ್ತದೆ. ಹೀಗೆಯೇ ಬಹುಮತ ಬರುವವರೆಗೂ ಮುಂದುವರಿಯುತ್ತದೆ.

    ಮುಂದಿನ ಚುನಾವಣೆ ಯಾವಾಗ?
    ಸಂವಿಧಾನದ ಪ್ರಕಾರ, ಉಪರಾಷ್ಟ್ರಪತಿ ಹುದ್ದೆ ಖಾಲಿಯಾದ 60 ದಿನಗಳ ಒಳಗೆ ಹೊಸ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುವುದು ಕಡ್ಡಾಯವಾಗಿದೆ. ಚುನಾವಣಾ ಆಯೋಗವು ಶೀಘ್ರದಲ್ಲೇ ಉಪ ರಾಷ್ಟ್ರಪತಿ ಚುನಾವಣಾ ಅಧಿಸೂಚನೆಯನ್ನು ಹೊರಡಿಸುತ್ತದೆ. ಉಪಾಧ್ಯಕ್ಷರನ್ನು ಲೋಕಸಭೆ ಮತ್ತು ರಾಜ್ಯಸಭಾ ಸಂಸದರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಆಯ್ಕೆ ಮಾಡಲಾಗುತ್ತದೆ. ಪ್ರಸ್ತುತ, 543 ಲೋಕಸಭಾ ಸಂಸದರು ಮತ್ತು 245 ರಾಜ್ಯಸಭಾ ಸಂಸದರು (ನಾಮನಿರ್ದೇಶಿತ ಸದಸ್ಯರು ಸೇರಿದಂತೆ) ಸೇರಿದಂತೆ ಒಟ್ಟು 788 ಮತದಾರರು ಈ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ಈ ಚುನಾವಣೆಯನ್ನು ರಹಸ್ಯ ಮತದಾನದ ಮೂಲಕ ನಡೆಸಲಾಗುತ್ತದೆ.

    ಲೋಕಸಭೆಯಲ್ಲಿ ಎನ್‌ಡಿಎ ಒಕ್ಕೂಟವೂ 542ರ ಪೈಕಿ 293 ಸದಸ್ಯರ ಬೆಂಬಲ ಹೊಂದಿದ್ದು, ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲ ಹೊಂದಿದೆ. ಆಡಳಿತರೂಢ ಒಕ್ಕೂಟವೂ ಒಟ್ಟು 422 ಸದಸ್ಯರ ಬೆಂಬಲ ಹೊಂದಿದೆ.

    ಅರ್ಹತೆಗಳೇನು?
    *ಉಪರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಯು ಭಾರತದ ನಾಗರಿಕನಾಗಿರಬೇಕು.
    *ಕನಿಷ್ಠ 35 ವರ್ಷ ವಯಸ್ಸಾಗಿರಬೇಕು.
    *ರಾಜ್ಯಸಭೆಯ ಸದಸ್ಯನಾಗಿ ಚುನಾಯಿತಗೊಳ್ಳಲು ಅರ್ಹತೆಯನ್ನು ಹೊಂದಿರಬೇಕು.
    *ಕೇಂದ್ರ ಅಥವಾ ರಾಜ್ಯ ಸರ್ಕಾರಗಳು, ಸ್ಥಳೀಯ ಪ್ರಾಧಿಕಾರಗಳು ಅಥವಾ ಇತರ ಸಾರ್ವಜನಿಕ ಪ್ರಾಧಿಕಾರಗಳ ಅಡಿಯಲ್ಲಿ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿರಬಾರದು.
    *1974ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳ ಅಡಿಯಲ್ಲಿ, ಅಭ್ಯರ್ಥಿಯ ನಾಮನಿರ್ದೇಶನವನ್ನು ಚುನಾವಣಾ ಕಾಲೇಜಿನಿಂದ ಕನಿಷ್ಠ 20 ಪ್ರಸ್ತಾವಕರು ಮತ್ತು 20 ಸಮರ್ಥಕರು ಬೆಂಬಲಿಸಬೇಕು,
    *15,000 ರೂ. ಭದ್ರತಾ ಠೇವಣಿಯನ್ನು ಇಡಬೇಕು.

    ಬಿಜೆಪಿ ನೇತೃತ್ವದ ಎನ್​ಡಿಎ ಲೋಕಸಭೆಯಲ್ಲಿ 293 ಸದಸ್ಯರ ಬೆಂಬಲವನ್ನು ಹೊಂದಿದೆ( 542 ಸದಸ್ಯರು) ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲವನ್ನು ಹೊಂದಿದೆ. ಇನ್ನು ನಾಮನಿರ್ದೇಶಿತ ಸದಸ್ಯರುಗಳನ್ನು ಸೇರಿಸಿದರೆ, ಆಡಳಿತ ಒಕ್ಕೂಟವು 786 ಸದಸ್ಯರಲ್ಲಿ 422 ಸದಸ್ಯರ ಬೆಂಬಲವನ್ನು ಹೊಂದಿದೆ.

    ಸಂಭಾವ್ಯ ಅಭ್ಯರ್ಥಿ ಯಾರು?
    ಜನತಾದಳ-ಸಂಯುಕ್ತ ಸಂಸದರಾಗಿರುವ ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರನ್ನು ಸಂಭಾವ್ಯ ಅಭ್ಯರ್ಥಿಯಾಗಿ ನೋಡಲಾಗುತ್ತಿದೆ. ಅವರು 2020 ರಿಂದ ಈ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದು,ಸರ್ಕಾರದ ವಿಶ್ವಾಸವನ್ನು ಹೊಂದಿದ್ದಾರೆ.

    ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಕೂಡ ಮುಂದಿನ ಉಪ ರಾಷ್ಟ್ರಪತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೆಸರು ಕೂಡ ಚಾಲ್ತಿಯಲ್ಲಿದೆ. ಅವರು ಮೋದಿ ಮತ್ತು ಅಮಿತ್ ಶಾ ಅವರ ಸಮೀಪದಲ್ಲಿದ್ದು, ಬಿಜೆಪಿ ಅಧ್ಯಕ್ಷತ್ವ ಅವಧಿ ಮುಕ್ತಾಯವಾಗುತ್ತಿರುವುದರಿಂದ ನಡ್ಡಾ ಅವರಿಗೆ ಈ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಉಪರಾಷ್ಟ್ರಪತಿ ಚುನಾವಣೆ ರೇಸ್‌ನಲ್ಲಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್‌ ಅವರಿಗೂ ಈ ಹುದ್ದೆಗೇರುವ ಅವಕಾಶವಿದೆ ಎಂಬ ಚರ್ಚೆಗಳು ಕೇಳಿಬರುತ್ತಿವೆ.

    ಉಪರಾಷ್ಟ್ರಪತಿ ಹುದ್ದೆಯ ಇತಿಹಾಸ:
    1950ರಲ್ಲಿ ಭಾರತದ ಸಂವಿಧಾನವನ್ನು ಅಂಗೀಕರಿಸಿದಾಗ ಉಪರಾಷ್ಟ್ರಪತಿ ಹುದ್ದೆಯನ್ನು ಸೃಜಿಸಲಾಯಿತು. ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಮೊದಲ ಉಪರಾಷ್ಟ್ರಪತಿಯಾಗಿ 1952ರಲ್ಲಿ ಆಯ್ಕೆಯಾದರು. ಒಟ್ಟಾರೆಯಾಗಿ, ಭಾರತವು ಇದುವರೆಗೆ 14 ಉಪರಾಷ್ಟ್ರಪತಿಗಳನ್ನು ಕಂಡಿದೆ.

  • ಬಿಜೆಪಿಯಿಂದ ಮುಂದಿನ ಉಪರಾಷ್ಟ್ರಪತಿ ಆಯ್ಕೆ – ಮೋದಿ ವಿದೇಶಿ ಪ್ರವಾಸದ ಬಳಿಕ ಅಂತಿಮ ನಿರ್ಧಾರ

    ಬಿಜೆಪಿಯಿಂದ ಮುಂದಿನ ಉಪರಾಷ್ಟ್ರಪತಿ ಆಯ್ಕೆ – ಮೋದಿ ವಿದೇಶಿ ಪ್ರವಾಸದ ಬಳಿಕ ಅಂತಿಮ ನಿರ್ಧಾರ

    ನವದೆಹಲಿ: ವ್ಯಾಪಕ ಚರ್ಚೆ ಬೆನ್ನಲ್ಲೇ ಭಾರತದ ಮುಂದಿನ ಉಪ ರಾಷ್ಟ್ರಪತಿ (Vice President) ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಎನ್‌ಡಿಎ ಮೈತ್ರಿಕೂಟ ತೆರೆ ಎಳೆದಿದೆ. ಬಿಜೆಪಿಯಿಂದಲೇ (BJP) ಮುಂದಿನ ಅಭ್ಯರ್ಥಿ ಆಯ್ಕೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸ ಮುಗಿಸಿ ವಾಪಸ್‌ ಆದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

    ಮೂಲಗಳ ಪ್ರಕಾರ, ಬಿಜೆಪಿಯೊಂದಿಗೆ ಸೈದ್ಧಾಂತಿಕ ಹೊಂದಾಣಿಕೆ ಹಾಗೂ ಸಂಸದೀಯ ಕಾರ್ಯವಿಧಾನದಲ್ಲಿ ಹೆಚ್ಚಿನ ಅನುಭವ ಹೊಂದಿರುವ ವ್ಯಕ್ತಿಯನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈಗ ಆಯ್ಕೆಯಾಗುವ ರಾಷ್ಟ್ರಪತಿಗಳು 5 ವರ್ಷಗಳ ಅಧಿಕಾರವಧಿಯಲ್ಲಿ ಇರುತ್ತಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

    ಎನ್‌ಡಿಎ ಭಾಗವಾದ ಜೆಡಿ(ಯು) ನಿಂದ ಉಪ ರಾಷ್ಟ್ರಪತಿ ಹುದ್ದೆಗೆ ಯಾರೊಬ್ಬರೂ ಸ್ಪರ್ಧೆಯಲ್ಲಿಲ್ಲ. ಹೀಗಾಗಿ ತೆಲುಗು ದೇಶಂ ಪಕ್ಷ (TDP) ಮತ್ತು ಜೆಡಿ(ಯು) ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬಿಜೆಪಿಯಿಂದಲೇ ಅಭ್ಯರ್ಥಿ ಆಯ್ಕೆ ಮಾಡಲು ಒಮ್ಮತ ಸೂಚಿಸಿವೆ ಎಂದು ಹೇಳಲಾಗಿದೆ. ಸದ್ಯ ಪ್ರಧಾನಿ ಮೋದಿ (Narendra Modi) ಅವರು ಬ್ರಿಟನ್‌, ಮಾಲ್ಡೀವ್ಸ್‌ ಪ್ರವಾಸದಲ್ಲಿದ್ದು, ವಾಪಸ್‌ ಬಂದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 4 ವರ್ಷಗಳಲ್ಲಿ 1.9 ಲಕ್ಷ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ಅಶ್ವಿನಿ ವೈಷ್ಣವ್

    ಚುನಾವಣಾ ಪ್ರಕ್ರಿಯೆ ಶುರು ಮಾಡಿದ ಆಯೋಗ
    ಅನಾರೋಗ್ಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ (Jagdeep Dhankhar) ರಾಜೀನಾಮೆ ನೀಡಿದ 2 ದಿನಗಳ ನಂತರ, ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ (Election Commission) ಶುರು ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಇದನ್ನೂ ಓದಿ: ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

    ಆಯೋಗದ ಪ್ರಕಟಣೆಯಲ್ಲಿ ಏನಿದೆ?
    ಭಾರತದ ಚುನಾವಣಾ ಆಯೋಗವು, ವಿಧಿ 324ರ ಅಡಿಯಲ್ಲಿ, ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ (Vice Presidential Election) ನಡೆಸುವ ಅಧಿಕಾರವನ್ನು ಹೊಂದಿದೆ. ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆಯನ್ನು ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆ, 1952 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು, ಅಂದ್ರೆ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳು, 1974ರ ಮೂಲಕ ನಿಯಂತ್ರಿಸಲಾಗುತ್ತದೆ. ಅದರಂತೆ ಭಾರತೀಯ ಚುನಾವಣಾ ಆಯೋಗವು 2025ರ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಈ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡ ಬಳಿಕ, ಚುನಾವಣಾ ವೇಳಾಪಟ್ಟಿಯನ್ನ ಆದಷ್ಟು ಬೇಗ ಘೋಷಿಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

    74 ವರ್ಷದ ಧನಕರ್‌ ಅವರು ಅನಾರೋಗ್ಯ ಕಾರಣ ನೀಡಿ ಸೋಮವಾರ (ಜು.21) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಈ ವೇಳೆ ಅವಕಾಶಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿದ್ದರು.

    ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್ 10ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: 5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

  • ಉಪ ರಾಷ್ಟ್ರಪತಿ ಚುನಾವಣೆ| ಸಂಸತ್ತಿನಲ್ಲಿ ಎನ್‌ಡಿಎ, ವಿಪಕ್ಷಗಳ ಬಲ ಎಷ್ಟಿದೆ?

    ಉಪ ರಾಷ್ಟ್ರಪತಿ ಚುನಾವಣೆ| ಸಂಸತ್ತಿನಲ್ಲಿ ಎನ್‌ಡಿಎ, ವಿಪಕ್ಷಗಳ ಬಲ ಎಷ್ಟಿದೆ?

    ನವದೆಹಲಿ: ಉಪ ರಾಷ್ಟ್ರಪತಿ ಧನಕರ್ (Jagdeep Dhankhar) ರಾಜೀನಾಮೆ ಬೆನ್ನಲ್ಲೇ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ. ಚುನಾವಣೆಗೆ ಅಧಿಕಾರಿಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಶೀಘ್ರದಲ್ಲೇ ಚುನಾವಣೆಗೆ (Vice President Election) ದಿನಾಂಕ ಘೋಷಣೆಯಾಗಲಿದೆ.

    ಮೂಲಗಳ ಪ್ರಕಾರ, ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಮೊನ್ನೆ ರಾಜೀನಾಮೆ ನೀಡುವ ಮುನ್ನ ರಾಷ್ಟ್ರಪತಿ ಭವನಕ್ಕೆ ಅನಿರೀಕ್ಷಿತವಾಗಿ ಧನಕರ್ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಯನ್ನು ತಬ್ಬಿಬ್ಬುಗೊಳಿಸಿರುವುದಾಗಿ ತಿಳಿದುಬಂದಿದೆ. ರಾಷ್ಟ್ರಪತಿಗಳ ಜೊತೆ ಚರ್ಚಿಸಿದ ಬಳಿಕ ರಾಜೀನಾಮೆ ನೀಡಿರುವುದಾಗಿ ಗೊತ್ತಾಗಿದೆ.

    ಮುಂದಿನ ಬಿಹಾರ ಚುನಾವಣೆಯ (Bihar Election) ದೃಷ್ಟಿಯಿಂದ ಎನ್‌ಡಿಎ ಅಭ್ಯರ್ಥಿಯಾಗಿ ಅಚ್ಚರಿ ವ್ಯಕ್ತಿಯನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಭಾರತರತ್ನ ಪ್ರಶಸ್ತಿ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ಅವರ ಹೆಸರು ಮುಂಚೂಣಿಯಲ್ಲಿದೆ. ಅತ್ಯಂತ ಹಿಂದುಳಿದ ವರ್ಗ (ಕ್ಷೌರಿಕ) ಸಮಾಜಕ್ಕೆ ರಾಮ್‌ನಾಥ್ ಠಾಕೂರ್ ಸೇರಿದವರಾಗಿದ್ದಾರೆ. ಇದನ್ನೂ ಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

     

    ಬಿಜೆಪಿ ಅಧ್ಯಕ್ಷ ನಡ್ಡಾ, ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ, ಬಿಹಾರ ರಾಜ್ಯಪಾಲ ಮೊಹಮ್ಮದ್ ಆರಿಫ್ ಖಾನ್, ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು ಕೂಡ ಕೇಳಿಬರುತ್ತಿದೆ. ಇದನ್ನೂ ಓದಿ: ಅಲ್-ಖೈದಾ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಉಗ್ರರ ಬಂಧನ

    ಈ ಮಧ್ಯೆ, ಧನಕರ್ ರಾಜೀನಾಮೆ ಅನುಮಾನಸ್ಪದವಾಗಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕು ಅಂತ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. ಜಗದೀಪ್ ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಸಮರ್ಥಿಸಿಕೊಳ್ಳುತ್ತಿದ್ದರು. ಅವರ ನಿಷ್ಠೆ ಬಿಜೆಪಿ- ಆರ್‌ಎಸ್‌ಎಸ್ ಜೊತೆಗಿತ್ತು ಆದ್ರೂ, ರಾಜೀನಾಮೆ ಕೊಟ್ಟಿದ್ಯಾಕೆ ಅಂತ ಪ್ರಶ್ನೆ ಮಾಡಿದ್ದಾರೆ.

    ಸಂಸತ್ತಿನಲ್ಲಿ ಎನ್‌ಡಿಎ ಬಲ
    ಈಗಿನ ಬಲ – 782, ಬಹುಮತ: 392
    (ಲೋಕಸಭೆ 1 ಖಾಲಿ; ರಾಜ್ಯಸಭೆ- 5 ಸ್ಥಾನ ಖಾಲಿ)
    ಎನ್‌ಡಿಎ ಪರ – 427
    ಲೋಕಸಭೆ – 293
    ರಾಜ್ಯಸಭೆ – 134

    ಸಂಸತ್ತಿನಲ್ಲಿ ವಿಪಕ್ಷಗಳ ಬಲ
    ವಿಪಕ್ಷಗಳ ಪರ – 355
    ಲೋಕಸಭೆ – 249
    ರಾಜ್ಯಸಭೆ – 106