Tag: NDRF

  • ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಾವಿನ ಸಂಖ್ಯೆ 30ಕ್ಕೆ ಏರಿಕೆ

    ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಾವಿನ ಸಂಖ್ಯೆ 30ಕ್ಕೆ ಏರಿಕೆ

    ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ (Vaishno Devi Route) ಮತ್ತೆ ಭಾರಿ ಭೂಕುಸಿತ (Landslide) ಉಂಟಾಗಿದ್ದು, 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

    ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸ್ಥಳೀಯ ಪೊಲೀಸ್ ಹಾಗೂ ಎನ್‌ಡಿಆರ್‌ಎಫ್ (NDRF) ಸ್ಥಳಕ್ಕೆ ದೌಡಾಯಿಸಿ, ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ. ಭೂಕುಸಿತದಿಂದ 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 23 ಜನರು ಗಾಯಗೊಂಡಿದ್ದಾರೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಸಿಆರ್‌ಪಿಎಫ್‌ನ 6ನೇ ಬೆಟಾಲಿಯನ್ ಸೈನಿಕರು ಹಾಗೂ ರಕ್ಷಣಾ ತಂಡಗಳು ಶೋಧ ಕಾರ್ಯ ನಡೆಸಿವೆ.ಇದನ್ನೂ ಓದಿ: ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳಲ್ಲ, ನಮ್ಮ ದೇವರು ಹೇಗೆ ಕರೆಸಿಕೊಳ್ಳುತ್ತೆ: ಬಾನು ಮುಷ್ತಾಕ್‌ಗೆ ಪ್ರತಾಪ್ ಸಿಂಹ ಪ್ರಶ್ನೆ

    ಮಂಗಳವಾರ (ಆ.26) ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಅರ್ಧಕುವರಿಯಲ್ಲಿರುವ ಇಂದ್ರಪ್ರಸ್ಥ ಭೋಜನಾಲಯದ ಬಳಿ ಭೂಕುಸಿತ ಸಂಭವಿಸಿತ್ತು. ಈ ವೇಳೆ ಎಂಟು ಮಂದಿ ಮೃತಪಟ್ಟಿದ್ದರು. ಇದಕ್ಕೂ ಮುನ್ನ ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ, ನಾಲ್ವರು ಸಾವನ್ನಪ್ಪಿದ್ದಾರೆ.

    ಗುಡ್ಡಗಾಡು ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಮನೆಯೊಳಗೆ ಇರುವಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸಲು ಹವಾಮಾನ ಇಲಾಖೆ ಸೂಚನೆ ನೀಡಿದೆ.ಇದನ್ನೂ ಓದಿ: ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

  • ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

    ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

    -ನಾಲ್ವರು ಎಂಜಿನಿಯರ್‌ಗಳ ಅಮಾನತು

    ಗಾಂಧಿನಗರ: ಗುಜರಾತ್‌ನ (Gujarat) ವಡೋದರಾ (Vadodara) ಜಿಲ್ಲೆಯಲ್ಲಿ ನಡೆದ ಸೇತುವೆ ದುರಂತದಲ್ಲಿ (Bridge Collapse) ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆಂದು ವಡೋದರಾ ಡಿಸಿ ಅನಿಲ್ ಧಮೇಲಿಯಾ ಮಾಹಿತಿ ನೀಡಿದ್ದಾರೆ.

    ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪಡೆಗಳು 4 ಕಿ.ಮೀ. ಕೆಳಭಾಗದವರೆಗೆ ಶೋಧಕಾರ್ಯ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಘಟನಾ ಸ್ಥಳದಲ್ಲಿ ಎರಡು ವಾಹನಗಳು ಕೆಸರಿನಲ್ಲಿ ಸಿಲುಕಿಕೊಂಡಿವೆ. ಆ ವಾಹನಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆಯಾಗುತ್ತಿರುವ ಕಾರಣ ನದಿಯ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಡಿಸಿ ಹೇಳಿದ್ದಾರೆ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

    ಇನ್ನೂ ಸೇತುವೆ ಮೇಲೆ ತೂಗಾಡುತ್ತಿರುವ ಟ್ರಕ್ ಕುರಿತು ಮಾತನಾಡಿ, ಅದು ಖಾಲಿ ಟ್ಯಾಂಕರ್ ಆಗಿದ್ದು, ಅದನ್ನು ಸರಿಸಿದರೆ ಮತ್ತಷ್ಟು ಸೇತುವೆ ಕುಸಿದು ಬೀಳಲಿದೆ. ಸೇತುವೆ ಕೆಳಗಡೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಟ್ಯಾಂಕರನ್ನು ಅಲ್ಲೇ ಉಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

    ಘಟನೆ ಬಳಿಕ ಆರ್&ಬಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತು ಮಾಡಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಆದೇಶ ಹೊರಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿರುವ ಎಲ್ಲಾ ಸೇತುವೆಗಳ ಸುರಕ್ಷತಾ ಪರಿಶೀಲನೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

  • ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ – ಪುತ್ತೂರಿಗೆ NDRF ತಂಡ ಆಗಮನ

    ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ – ಪುತ್ತೂರಿಗೆ NDRF ತಂಡ ಆಗಮನ

    – ದಕ್ಷಿಣ ಕನ್ನಡ ಜಿಲ್ಲೆಗೆ 5 ದಿನ ರೆಡ್‌ ಅಲರ್ಟ್‌
    – ಗುಡ್ಡ ಭಾಗದ ನಿವಾಸಿಗಳ ಸ್ಥಳಾಂತರಕ್ಕೆ ಆದೇಶ

    ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ (Kukke Subramanaya) ಕುಮಾರಧಾರಾ ಸ್ನಾನ ಘಟ್ಟ (Kumaradhara Snana Ghatta) ಮುಳುಗಡೆಯಾಗಿದೆ.

    ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಇದನ್ನೂ ಓದಿ: ಮೂಡಬಿದಿರೆಯ ಎರುಗುಂಡಿ ಫಾಲ್ಸ್ ಬಳಿ ಏಕಾಏಕಿ ನುಗ್ಗಿದ ನೀರು -ಹಗ್ಗ ಕಟ್ಟಿ ಕೊಚ್ಚಿ ಹೋಗಲಿದ್ದ ಐವರ ರಕ್ಷಣೆ


    ದೇವಸ್ಥಾನದ ಆಡಳಿತ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

    ಇಂದು ರೆಡ್‌ ಅಲರ್ಟ್‌:
    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಇಂದೂ ಕೂಡಾ ರೆಡ್ ಅಲರ್ಟ್ ಜಾರಿಯಾಗಿದೆ. ಬಿಟ್ಟು ಬಿಡದೇ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿಯುತ್ತಿದೆ. ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್‌ ಅಲರ್ಟ್‌, ಎಲ್ಲಿ ಅತಿಹೆಚ್ಚು ಮಳೆ?

    ಮಳೆ ಅಬ್ಬರದ ಹಿನ್ನೆಲೆಯಲ್ಲಿ ಪುತ್ತೂರಿಗೆ 25 ಸಿಬ್ಬಂದಿಯ ಎನ್‌ಡಿಆರ್‌ಎಫ್‌ (NDRF) ಸಿಬ್ಬಂದಿ ಆಗಮಿಸಿದ್ದಾರೆ. ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಸೂಚನೆ ನೀಡಲಾಗಿದೆ.

     

    5 ದಿನಗಳ ಕಾಲ ಜಿಲ್ಲೆಗೆ ರೆಡ್‌ ಅಲರ್ಟ್‌ ಜಾರಿಯಾಗಿರುವ ಕಾರಣ ಅಪಾಯದಲ್ಲಿರುವ ಗುಡ್ಡ ಭಾಗದ ನಿವಾಸಿಗಳನ್ನು ಸ್ಥಳಾಂತರ ಮಾಡುವಂತೆ ಆದೇಶಿಸಲಾಗಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ಬೋಟ್‌ಗಳು ತಕ್ಷಣ ದಡಕ್ಕೆ ಬಂದು ನವಮಂಗಳೂರು ಬಂದರಿನಲ್ಲಿ (NMPA) ಲಂಗರು ಹಾಕಲು ಅನುಮತಿ ನೀಡಲಾಗಿದೆ.

  • ದೆಹಲಿಯಲ್ಲಿ ಕಟ್ಟಡ ಕುಸಿತ – 9 ತಿಂಗಳ ಮಗು ಸೇರಿ ನಾಲ್ವರು ಸಾವು

    ದೆಹಲಿಯಲ್ಲಿ ಕಟ್ಟಡ ಕುಸಿತ – 9 ತಿಂಗಳ ಮಗು ಸೇರಿ ನಾಲ್ವರು ಸಾವು

    – 10ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

    ನವದೆಹಲಿ: ದೆಹಲಿಯ ಮುಸ್ತಫಾಬಾದ್‌ ಪ್ರದೇಶದಲ್ಲಿ ಇಂದು ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು (Mustafabad Building Collapse) ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈಶಾನ್ಯ ದೆಹಲಿಯ ದಯಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ ರಕ್ಷಿಸಲಾಗಿದ್ದು, ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ 14 ಮಂದಿಯನ್ನ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಹೂತು ಹೋಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? – ಅನುರಾಗ್‌ ಕಶ್ಯಪ್‌ ವಿವಾದ

    ಸದ್ಯ ಎನ್‌ಡಿಆರ್‌ಎಫ್‌, ಡಾಗ್ ಸ್ಕ್ವಾಡ್, ದೆಹಲಿ ಪೊಲೀಸರ (Delhi Police) ತಂಡಗಳು ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ 18 ಮಂದಿಯನ್ನ ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ ಎಂದು ಸ್ಥಳೀಯ ಡಿಸಿಪಿ ಸಂದೀಪ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಪೈಲಟ್‌ ಆಗಬಹುದು!

  • ತೆಲಂಗಾಣ ಸುರಂಗ ಕುಸಿತ – 10 ದಿನ ಕಳೆದ್ರೂ ಸಂಪರ್ಕಕ್ಕೆ ಸಿಗದ 8 ಕಾರ್ಮಿಕರು

    ತೆಲಂಗಾಣ ಸುರಂಗ ಕುಸಿತ – 10 ದಿನ ಕಳೆದ್ರೂ ಸಂಪರ್ಕಕ್ಕೆ ಸಿಗದ 8 ಕಾರ್ಮಿಕರು

    ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿ 10 ದಿನ ಕಳೆದರೂ 8 ಕಾರ್ಮಿಕರು ಪತ್ತೆಯಾಗಿಲ್ಲ.

    ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದರು. ಈಗಾಗಲೇ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.ಇದನ್ನೂ ಓದಿ:  ಸಿದ್ದರಾಮಯ್ಯ ಇರೋವರೆಗೂ ಅವರ ಸ್ಥಾನ ಕಿತ್ತುಕೊಳ್ಳುವುದು ಕಷ್ಟ: ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ

    ಈ ಕುರಿತು ಎನ್‌ಡಿಆರ್‌ಎಫ್ ಕಮಾಂಡೆಂಟ್ ವಿವಿಎನ್ ಪ್ರಸನ್ನ ಕುಮಾರ್ ಮಾತನಾಡಿ, ಸುರಂಗ ಕುಸಿತದ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ ಉತ್ತರಾಖಂಡದ ರ‍್ಯಾಟ್ ಮೈನರ್, 300 ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಕಳೆದ 10 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ ಯಾವುದೇ ಕಾರ್ಮಿಕರು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

    ಸದ್ಯ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಇನ್ನೂ ಹೈದರಾಬಾದ್‌ನ ರಾಷ್ಟ್ರೀಯ ಭೂಭೌತ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸುರಂಗದೊಳಗೆ ನೆಲಕ್ಕೆ ನುಗ್ಗುವ ರಾಡಾರ್ ಸಮೀಕ್ಷೆಯನ್ನು ನಡೆಸಿದ್ದಾರೆ. ಸಮೀಕ್ಷೆ ಬಳಿಕ ಗುರುತಿಸಿದ ಸ್ಥಳಗಳನ್ನು ರಕ್ಷಣಾ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ.

    ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಭಾನುವಾರ ಭೇಟಿ ನೀಡಿ, ಸಿಲುಕಿಕೊಂಡಿರುವ ಕಾರ್ಮಿಕರ ಮಾಹಿತಿ ಪಡೆದುಕೊಂಡರು ಮತ್ತು ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಬೆಂಬಲ ನೀಡುವ ಕುರಿತು ತಿಳಿಸಿದರು.

    ಘಟನೆ ಏನು?
    ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು.ಇದನ್ನೂ ಓದಿ: ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

     

     

  • ಅಸ್ಸಾಂನ ರ‍್ಯಾಟ್ ಹೋಲ್ ಮೈನಿಂಗ್‌ನಲ್ಲಿ ಉಕ್ಕಿದ ನೀರು – 18 ಕಾರ್ಮಿಕರು ಸಿಲುಕಿರುವ ಶಂಕೆ

    ಅಸ್ಸಾಂನ ರ‍್ಯಾಟ್ ಹೋಲ್ ಮೈನಿಂಗ್‌ನಲ್ಲಿ ಉಕ್ಕಿದ ನೀರು – 18 ಕಾರ್ಮಿಕರು ಸಿಲುಕಿರುವ ಶಂಕೆ

    ದಿಸ್ಪುರ್‌: ಅಸ್ಸಾಂನ (Assam) ದಿಮಾ ಹಸಾವೊ ಜಿಲ್ಲೆಯಲ್ಲಿರುವ 300 ಅಡಿ ಆಳದ ರ‍್ಯಾಟ್ ಹೋಲ್ ಮೈನಿಂಗ್‌ (Rat Hole Mine) ಒಂದರಲ್ಲಿ ನೀರು ತುಂಬಿದ್ದು, ಸುಮಾರು 18 ಕಾರ್ಮಿಕರು ಸಿಲುಕಿದ್ದಾರೆ.

    ಕ್ವಾರಿಯಲ್ಲಿ ಸುಮಾರು 100 ಅಡಿ ನೀರು ತುಂಬಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು. ಎರಡು ಪಂಪ್‌ಗಳನ್ನು ಬಳಸಿಕೊಂಡು ನೀರನ್ನು ಖಾಲಿ ಮಾಡುತ್ತಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಧಾವಿಸಿವೆ.

    ಪ್ರಸ್ತುತ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆಯ ನೆರವನ್ನು ಕೋರಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    ರ‍್ಯಾಟ್ ಹೋಲ್ ಗಣಿಗಾರಿಕೆಯು ಅಪಾಯಕಾರಿ ತಂತ್ರವಾಗಿದ್ದು, ಕಿರಿದಾದ ಸುರಂಗಗಳನ್ನು ಕಾರ್ಮಿಕರು ಕೈಯಾರೆ ಅಗೆಯುತ್ತಾರೆ. ಈ ಸುರಂಗಗಳು ಆಳವಾದ ಹೊಂಡಗಳಿಗೆ ಕಾರಣವಾಗುತ್ತವೆ. ಇದರಿಂದ ಕಲ್ಲಿದ್ದಲು ಗಣಿಗಾರಿಕೆ ಮಾಡಲಾಗುತ್ತದೆ. ಗಣಿಗಳಿಂದ ಹೊರಸೂಸುವ ಆಮ್ಲೀಯ ನೀರು ಮತ್ತು ಭಾರೀ ಲೋಹಗಳು ಕೃಷಿ ಮತ್ತು ಮಾನವ ಬಳಕೆಗೆ ಬಳಸುವ ನೀರಿನ ಮೂಲಗಳಿಗೆ ವಿಷಕಾರಿಯಾಗಿವೆ.

    2018 ರಲ್ಲಿ ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಅಕ್ರಮ ಕಲ್ಲಿದ್ದಲು ಗಣಿಗೆ ಹತ್ತಿರದ ನದಿಯಿಂದ ನೀರು ನುಗ್ಗಿತ್ತು. ಸುಮಾರು 15 ಕಾರ್ಮಿಕರು ಸಿಕ್ಕಿಬಿದ್ದಿದ್ದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ 2 ಮೃತದೇಹಗಳನ್ನು ಮಾತ್ರ ತೆಗೆಯುವಲ್ಲಿ ಯಶಸ್ವಿಯಾಗಿತ್ತು.

  • Punjab | ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಮಹಿಳೆ ಸಾವು – ಸಿಎಂ ಭಗವಂತ್‌ ಮಾನ್‌ ಕಂಬನಿ

    Punjab | ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಮಹಿಳೆ ಸಾವು – ಸಿಎಂ ಭಗವಂತ್‌ ಮಾನ್‌ ಕಂಬನಿ

    ಮೊಹಾಲಿ: ಇಲ್ಲಿನ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡ ಕುಸಿದು (Mohali Building Collapse) ಬಿದ್ದಿದ್ದು, ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

    ಥಿಯೋಗ್‌ ಪ್ರದೇಶದ ದೃಷ್ಟಿ ವರ್ಮಾ (20) ಮೃತ ಮಹಿಳೆ, ಈಕೆ ಮೂಲತಃ ಹಿಮಾಚಲ ಪ್ರದೇಶದವರು. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅವರನ್ನು ರಕ್ಷಿಸಿ ಸೊಹಾನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನಿನ್ನೆ (ಶನಿವಾರ) ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ಸಿ.ಟಿ ರವಿ ಹರಕು ಬಾಯಿ ಮನುಷ್ಯ – ಪ್ರಿಯಾಂಕ್‌ ಖರ್ಗೆ ಸಿಡಿಮಿಡಿ

    ಕಟ್ಟಡದ ಮಾಲೀಕರಾದ ಪರ್ವಿಂದರ್ ಸಿಂಗ್‌ ಮತ್ತು ಗಗನ್‌ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೊಹಾಲಿ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ದೀಪಕ್ ಪರೀಕ್ ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿಗಳ ಕಾದಾಟದ ಮೇಲೆ ಬೆಟ್ಟಿಂಗ್‌ – 81 ಮಂದಿ ಅರೆಸ್ಟ್‌, 19 ವಿದೇಶಿ ತಳಿ ಶ್ವಾನಗಳು ವಶಕ್ಕೆ

    ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಅವರು ದೂರವಾಣಿ ಕರೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರಲ್ಲದೇ, ಪರಿಸ್ಥಿತಿ ಅವಲೋಕಿಸಿದ್ದಾರೆ. ದುರಂತ ನೆನೆದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:  ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು – ಗಂಗಾವತಿ ಆಸ್ಪತ್ರೆಗೆ ಮುಗಿಬಿದ್ದ ಮಹಿಳೆಯರು

  • ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    – ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ

    ಡೆಹ್ರಾಡೂನ್‌: ಬಸ್‌ವೊಂದು ಕಮರಿಗೆ ಬಿದ್ದ (Bus Falls In Gorge) ಪರಿಣಾಮ ಕನಿಷ್ಠ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ (Uttarakhand) ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ.

    ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

    ಸದ್ಯ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

    ತಲಾ 4 ಲಕ್ಷ ರೂ. ಪರಿಹಾರ:
    ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

  • ಬೆಂಗಳೂರಲ್ಲಿ ಮಳೆಯಾರ್ಭಟ: ದಿ. ಅಬ್ದುಲ್ ಕಲಾಂ ಸಂಬಂಧಿಕರಿಗೆ ತಟ್ಟಿದ ಜಲ ಕಂಟಕ

    ಬೆಂಗಳೂರಲ್ಲಿ ಮಳೆಯಾರ್ಭಟ: ದಿ. ಅಬ್ದುಲ್ ಕಲಾಂ ಸಂಬಂಧಿಕರಿಗೆ ತಟ್ಟಿದ ಜಲ ಕಂಟಕ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ವರುಣ ಅಬ್ಬರಿಸುತ್ತಿದ್ದು, ದಿವಂಗತ ಅಬ್ದುಲ್ ಕಲಾಂ (Abdul Kalam) ಸಂಬಂಧಿಕರಿಗೆ ಬೆಂಗಳೂರು ಜಲ ಕಂಟಕ ತಟ್ಟಿದೆ.

    ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ನಗರಗಳು ಜಲಾವೃತಗೊಂಡಿದೆ. ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ (Kendriya Vihar Apartment) ಕೆರೆಯಂತಾಗಿದ್ದು, ಬೋಟಿಂಗ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.ಇದನ್ನೂ ಓದಿ: ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ

    ಅಪಾರ್ಟ್ಮೆಂಟ್‌ನ ಡಿ.6 ಬ್ಲಾಕ್‌ನಲ್ಲಿ ಮಾಜಿ ದಿವಂಗತ ಅಬ್ದುಲ್ ಕಲಾಂ ಸಂಬಂಧಿಕರು ವಾಸಿಸುತ್ತಿದ್ದು, ಬೆಂಗಳೂರು ಜಲ ಕಂಟಕ ತಟ್ಟಿದೆ. ಅಬ್ದುಲ್ ಕಲಾಂ ಸಂಬಂಧಿ ಹಾಗೂ ಅವರ ಮಗಳು ನಾಗು ರೋಜಾ ಎಂಬುವರು ವಾಸವಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಸುಮಾರು 80 ವರ್ಷ ಆಗಿರುವುದರಿಂದ ಅಪಾರ್ಟ್ಮೆಂಟ್‌ನಿಂದ ಅಂಬುಲೆನ್ಸ್‌ನಲ್ಲಿ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

    ಅಪಾರ್ಟ್ಮೆಂಟ್‌ನಲ್ಲಿ 2500 ಜನರಿದ್ದು, ಮಹಿಳೆಯರಿಗೆ ಲೈಫ್ ಜಾಕೆಟ್ ಹಾಕಿ ಹೊರತರಲಾಗುತ್ತಿದ್ದು, SDRF, NDRF ತಂಡದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಳಗಿನ ಜಾವ 3 ಗಂಟೆಯಿಂದ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅಪಾರ್ಟ್ಮೆಂಟ್‌ನ ನೀರಿನ ಪ್ರಮಾಣ ಕಡಿಮೆಯಾಗುತ್ತಿಲ್ಲ. ಜನರಿಗೆ ಅಲ್ಲಿಂದ ಬೇರೆ ಕಡೆಗೆ ತೆರಳುವಂತೆ ಸೂಚಿಸಿದ್ದು, 250 ಕುಟುಂಬಗಳು ಬೇರೆ ಕಡೆ ತೆರಳಿದ್ದಾರೆ. ಇನ್ನೂ 2000 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕಿದೆ.

    ಬಿಬಿಎಂಪಿ ಕಮಿಷನರ್ ಆದೇಶದ ಮೇರೆಗೆ ಅಲ್ಲಿಯ ಜನರು ಬೇರೆ ಕಡೆಗೆ ತೆರಳಿದ್ದು, ಬಟ್ಟೆ ಬರೆಯೊಂದಿಗೆ ತಾತ್ಕಾಲಿಕವಾಗಿ ಮನೆ ಖಾಲಿ ಮಾಡುತ್ತಿದ್ದಾರೆ.ಇದನ್ನೂ ಓದಿ: ಲವ್ ಸ್ಟೋರಿ ಶುರು ಮಾಡಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ

  • ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮಿಸ್ಸಿಂಗ್; ನಾಪತ್ತೆ ಹಿಂದಿದ್ಯಾ ಮಹಿಳೆ ಕೈವಾಡ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ?

    ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮಿಸ್ಸಿಂಗ್; ನಾಪತ್ತೆ ಹಿಂದಿದ್ಯಾ ಮಹಿಳೆ ಕೈವಾಡ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ?

    ಮಂಗಳೂರು: ಇಲ್ಲಿನ ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್ (Congress) ಶಾಸಕ ಮೊಯಿದ್ದೀನ್ ಬಾವ (Moideen Bava) ಅವರ ಸಹೋದರ ನಾಪತ್ತೆಯಾಗಿದ್ದಾರೆ. ಬಾವಾ ತಮ್ಮ 52 ವರ್ಷದ ಮುಮ್ತಾಜ್ ಅಲಿ ಭಾನುವಾರ (ಅ.6) ಬೆಳಗ್ಗೆ ದಿಢೀರ್ ನಾಪತ್ತೆಯಾಗಿದ್ದಾರೆ. ಕೂಳೂರಿನ ಸೇತುವೆ ಬಳಿ ಅಪಘಾತ ನಡೆದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದೆ. ಇದು ಹಲವು ಅನುಮಾಗಳನ್ನು ಹುಟ್ಟುಹಾಕಿದೆ.

    ಮುಮ್ತಾಜ್ ಅಲಿ ಫಿಶ್‌ಮಿಲ್ (Mumtaz Ali), ಕಾಲೇಜು ಸೇರಿದಂತೆ ಹಲವು ಉದ್ಯಮ ನಡೆಸಿಕೊಂಡಿದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ನಿನ್ನೆ ರಾತ್ರಿ ಮನೆಯವರೊಂದಿಗೆ ಮುನಿಸಿಕೊಂಡು ಮಾತುಕತೆ ನಡೆಸಿದ್ರು. ಭಾನುವಾರ ಬೆಳಗ್ಗಿನ ಜಾವ 3 ಗಂಟೆಗೆ ಯಾರಿಗೂ ತಿಳಿಯದಂತೆ ತನ್ನ ಬಿಎಂಡಬ್ಲ್ಯೂ ಕಾರನ್ನು (BMW Car) ಚಲಾಯಿಸಿಕೊಂಡು ಕದ್ರಿಯ ತನ್ನ ಮನೆಯಿಂದ ಪಣಂಬೂರು ಬಳಿ ಬಂದಿದ್ದಾರೆ. ಅಲ್ಲಿಂದ ವೇಗವಾಗಿ ಕೂಳೂರು ಹೈವೆಯಲ್ಲಿ ಬರುತ್ತಿದ್ದು ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದುಕೊಂಡು ಬಂದಿದ್ದಾರೆ.

    ಬಳಿಕ ಕೂಳೂರು ಸೇತುವೆಯ ಮಧ್ಯದಲ್ಲಿ ಕಾರನ್ನು ನಿಲ್ಲಿಸಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಶಂಕಿಸಲಾಗಿದೆ.

    ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ನಿಂದ ಶೋಧ:
    ಮುಮ್ತಾಜ್ ಅಲಿಗಾಗಿ ಫಲ್ಗುಣಿ ನದಿಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡ ಸೇರಿದಂತೆ ಈಜುತಜ್ಞ ಈಶ್ವರ್ ಮಲ್ಪೆ ತಂಡ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ರು. ಮೊಯಿದ್ದೀನ್ ಬಾವ ನಾಪತ್ತೆಯಾದ ಸಹೋದರನ ನೆನದು ಕಣ್ಣೀರು ಹಾಕಿದರು.

    ನದಿಯ ಆಳ ಹೆಚ್ಚಾಗಿರೋದ್ರಿಂದ ನೀರಿನಡಿಲ್ಲಿ ಕತ್ತಲು ಆವರಿಸಿ ಕಾರ್ಯಾಚರಣೆಗೆ ತೊಡಕಾಗಿದೆ. ಇತ್ತ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ನಾಪತ್ತೆ ಹಿಂದೆ ಮಹಿಳೆಯ ಕೈವಾಡ ಶಂಕೆ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ..?
    ಮುಮ್ತಾಜ್ ಅಲಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆಯ ಕೈವಾಡ ಇದ್ಯಾ ಅನ್ನೋ ಅನುಮಾನವೂ ವ್ಯಕ್ತವಾಗಿದೆ. ಮಹಿಳೆಯ ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಆ ಮಹಿಳೆಗೆ ಇನ್ನು ಕೆಲ ಪುರುಷರು ಸಹಾಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರ್ಯಾದೆಗೆ ಅಂಜಿ ನಾಪತ್ತೆಯಾದ್ರಾ ಮುಮ್ತಾಜ್ ಅಲಿ ಅನ್ನೊ ಅನುಮಾನ ಮೂಡಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.