Tag: Neerav Modi

  • ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಬಂಧನ

    ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಬಂಧನ

    – ಇಡಿ, ಸಿಬಿಐ ನೀಡಿದ ದೂರಿನ್ವಯ ಅಮೆರಿಕದಲ್ಲಿ ಅರೆಸ್ಟ್

    ನವದೆಹಲಿ: ಭಾರತದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ (Neerav Modi) ಸಹೋದರ ನೇಹಲ್ ಮೋದಿಯನ್ನು (Nehal Modi) ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ನೀಡಿದ ದೂರಿನ್ವಯ ಬಂಧಿಸಲಾಗಿದೆ.

    ನೀರವ್ ಮೋದಿಯ ಸಹೋದರ ನೇಹಲ್ ಮೋದಿಯನ್ನು ಜುಲೈ 4ರಂದು ಅಮೆರಿಕದ (America) ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಮೆರಿಕದ ನ್ಯಾಯಾಂಗ ಇಲಾಖೆ ಮಾಹಿತಿ ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002ರ ಸೆಕ್ಷನ್ 3ರ ಅಡಿಯಲ್ಲಿ ಹಣ ವರ್ಗಾವಣೆ ಪ್ರಕರಣ ಮತ್ತು ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 120-ಬಿ ಮತ್ತು 201ರಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ಸಹಕರಿಸಿದ್ದ ಆರೋಪ ಪ್ರಕರಣದಲ್ಲಿ ನೇಹಲ್ ಮೋದಿ ಅವರನ್ನು ಹಸ್ತಾಂತರ ಮಾಡುವಂತೆ ಅಮೆರಿಕದ ಪ್ರಾಸಿಕ್ಯೂಷನ್ ದೂರು ಸಲ್ಲಿಸಲಾಗಿತ್ತು. ಇದನ್ನೂ ಓದಿ: ಬಹುಭಾಷಾ ನಟ ಪ್ರಕಾಶ್ ರಾಜ್ ಗುಜರಾತ್‌ನಲ್ಲೂ ಹೋರಾಟ ಮಾಡಲಿ – ಎಂಬಿಪಿ ತಿರುಗೇಟು

    ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದ ತನಿಖೆಯಲ್ಲಿ, ನೇಹಲ್ ಮೋದಿಯು ನೀರವ್ ಮೋದಿಯ ಅಕ್ರಮ ಆದಾಯವನ್ನು ಕಾನೂನುಬದ್ಧಗೊಳಿಸಲು ಕೆಲಸ ಮಾಡುತ್ತಿದ್ದ ಪ್ರಮುಖ ವ್ಯಕ್ತಿ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಪರಾರಿಯಾದ ಆರ್ಥಿಕ ಅಪರಾಧಿ: ದೆಹಲಿ ವಿಶೇಷ ಕೋರ್ಟ್‌ ಆದೇಶ

    ಭಾರತೀಯ ಕಾನೂನುಗಳನ್ನು ಉಲ್ಲಂಘಿಸಿ ಶೆಲ್ ಕಂಪನಿ ಮತ್ತು ವಿದೇಶಿ ವಹಿವಾಟುಗಳ ಜಾಲದ ಮೂಲಕ ಅಪಾರ ಪ್ರಮಾಣದ ಅಕ್ರಮ ಹಣವನ್ನು ಮರೆಮಾಡಲು ಮತ್ತು ವರ್ಗಾಯಿಸಲು ಸಹಾಯ ಮಾಡಿದ ಆರೋಪ ನೇಹಲ್ ಮೇಲಿದೆ. ಹಸ್ತಾಂತರ ಪ್ರಕ್ರಿಯೆಗಳ ಮುಂದಿನ ವಿಚಾರಣೆಯ ದಿನಾಂಕವನ್ನು ಜುಲೈ 17ಕ್ಕೆ ನಿಗದಿಪಡಿಸಲಾಗಿದೆ. ಈ ಸಂದರ್ಭ ನೇಹಲ್ ಮೋದಿ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

  • ನೀರವ್ ಮೋದಿ ಸೋದರಿಯ ಸ್ವಿಸ್ ಬ್ಯಾಂಕಿನ 4 ಖಾತೆ ಜಪ್ತಿ

    ನೀರವ್ ಮೋದಿ ಸೋದರಿಯ ಸ್ವಿಸ್ ಬ್ಯಾಂಕಿನ 4 ಖಾತೆ ಜಪ್ತಿ

    ನವದೆಹಲಿ: ಪಿಎನ್‍ಬಿ ಬ್ಯಾಂಕ್ ಹಗರಣದ ಆರೋಪಿ ನೀರವ್ ಮೋದಿ ಸೋದರಿ ಪೂರ್ವಿ ಸ್ವಿಸ್ ಬ್ಯಾಂಕ್ ನಲ್ಲಿ ಹೊಂದಿರುವ ನಾಲ್ಕು ಖಾತೆಯನ್ನು ಜಪ್ತಿ ಮಾಡಲಾಗಿದೆ.

    ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‍ಎ) ಕಾಯ್ದೆಯ ಅಡಿ ಪ್ರಕರಣ ದಾಖಲಿಸಿದ್ದ ಜಾರಿ ನಿರ್ದೇಶನಾಲಯ ಸ್ವಿಜರ್ಲೆಂಡ್ ಸರ್ಕಾರಕ್ಕೆ ಪೂರ್ವಿ ಖಾತೆಯ ವ್ಯವಹಾರಗಳ ಮೇಲೆ ನಿರ್ಬಂಧ ಹೇರಬೇಕೆಂದು ಮನವಿ ಮಾಡಿಕೊಂಡಿತ್ತು. ಭಾರತದ ಮನವಿಯನ್ನು ಸ್ವೀಕರಿಸಿದ್ದ ಸ್ವಿಜರ್ಲೆಂಡ್ ಸರ್ಕಾರ ಪೂರ್ವಿ ಖಾತೆಯನ್ನು ವಶಕ್ಕೆ ಪಡೆದಿದೆ ಎಂದು ಜಾರಿ ನಿರ್ದೇಶನಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಒಟ್ಟು 6 ದಶಲಕ್ಷ ಅಮೆರಿಕನ್ ಡಾಲರ್(ಅಂದಾಜು 41.46 ಕೋಟಿ ರೂ.) ಹಣ ಇದ್ದ ಈ ನಾಲ್ಕು ಖಾತೆಗನ್ನು ಈಗ ಜಪ್ತಿ ಮಾಡಲಾಗಿದೆ. ನೀರವ್ ಮೋದಿ ತನ್ನ ಹಣವನ್ನು ಸೋದರಿಯ ಖಾತೆಯಲ್ಲಿ ಇರಿಸಿದ್ದ ಎಂಬ ಮಾಹಿತಿ ಮೇರೆಗೆ ಅಕೌಂಟ್ ಜಪ್ತಿ ಮಾಡಲಾಗಿದೆ.

    ಪಿಎನ್‍ಬಿ ಹಗರಣದ ಆರೋಪಿ ನೀರವ್ ಮೋದಿಯನ್ನು ಸದ್ಯ ಲಂಡನ್ ನಗರದ ವಾಂಡಸ್ವರ್ಥ್ ಜೈಲಿನಲ್ಲಿರಿಸಲಾಗಿದೆ. ನೀರವ್ ಮೋದಿ ಲಂಡನ್ ನಲ್ಲಿರುವ ಬಗ್ಗೆ ಟೆಲಿಗ್ರಾಫ್ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಲಂಡನ್ ಪೊಲೀಸರು ನೀರವ್ ಮೋದಿಯನ್ನು ಮಾರ್ಚ್ 19ರಂದು ಹೋಲ್ಬಾರ್ನ್ ಮೆಟ್ರೋ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೂವರೆಗೂ ನೀರವ್ ಮೋದಿ ಜಾಮೀನಿಗಾಗಿ ನಾಲ್ಕು ಬಾರಿ ಅರ್ಜಿ ಸಲ್ಲಿಸಿದ್ದರೂ, ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

    ಮಾರ್ಚ್ 9ರಂದು ವರದಿ:
    48 ವರ್ಷದ ನೀರವ್ ಮೋದಿ ಲಂಡನ್ ನಲ್ಲಿ ರಾಜರೋಷವಾಗಿ ಓಡಾಡುತ್ತಿರವ ಬಗ್ಗೆ ಟೆಲಿಗ್ರಾಫ್ ಮಾರ್ಚ್ 9 ರಂದು ವರದಿ ಮಾಡಿತ್ತು. ಪತ್ರಕರ್ತರು ಕೇಳಿದ ಎಲ್ಲ ಪ್ರಶ್ನೆಗಳಿಗೆ “ನೋ ಕಮೆಂಟ್ಸ್” ಎಂದು ಉತ್ತರಿಸಿದ್ದರು. 13 ಸಾವಿರ ಕೋಟಿ ರೂ. ವಂಚನೆಗೈದ ಆರೋಪಿ ನೀರವ್ ಮೋದಿಗೆ ಇನ್ನು ಎಷ್ಟು ದಿನ ಲಂಡನ್ ನಲ್ಲಿ ಇರಲಿದ್ದೀರಿ ಎನ್ನುವ ಪ್ರಶ್ನೆಗೆ ಅವರಿಂದ ಯಾವುದೇ ಉತ್ತರ ಸಿಕ್ಕಿರಲಿಲ್ಲ. 48 ವರ್ಷದ ನೀರವ್ ಮೋದಿ ಲಂಡನ್ ನಗರದಲ್ಲಿ ಹೋದ ಎಲ್ಲ ಕಡೆ ಪತ್ರಕರ್ತರು ಅವರನ್ನು ಹಿಂಬಾಲಿಸಿದ್ದರು. ಆದರೆ ಯಾವುದೇ ಪ್ರಶ್ನೆಗೆ ಉತ್ತರಿಸಲಿಲ್ಲ. ಕೊನೆಗೆ ನೀರವ್ ಮೋದಿ ಟ್ಯಾಕ್ಸಿ ಮಾಡಿ ಹೊರಟು ಹೋಗಿರುವ ದೃಶ್ಯ ಸೆರೆಯಾಗಿತ್ತು.

    ಏನಿದು ಪ್ರಕರಣ?:
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಆರೋಪ ನೀರವ್ ಮೋದಿ ಮೇಲಿದೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ಮುಟ್ಟುಗೋಲು ಹಾಕಿದೆ.

  • ಚುನಾವಣೆಗಾಗಿ ನೀರವ್ ಮೋದಿಯನ್ನು ಭಾರತಕ್ಕಾಗಿ ಕರೆತರುತ್ತಿದ್ದಾರೆ: ಗುಲಾಮ್ ನಬಿ ಆಜಾದ್

    ಚುನಾವಣೆಗಾಗಿ ನೀರವ್ ಮೋದಿಯನ್ನು ಭಾರತಕ್ಕಾಗಿ ಕರೆತರುತ್ತಿದ್ದಾರೆ: ಗುಲಾಮ್ ನಬಿ ಆಜಾದ್

    ನವದೆಹಲಿ: ದೇಶದಿಂದ ನೀರವ್ ಮೋದಿ ಓಡಿ ಹೋಗಲು ಸಹಾಯ ಮಾಡಿದ್ದ ಬಿಜೆಪಿಯೇ ಇಂದು ಚುನಾವಣೆಗಾಗಿ ಆತನನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

    ಲಂಡನ್‍ನಲ್ಲಿ ನೀರವ್ ಮೋದಿ ಬಂಧನದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಗುಲಾಮ್ ನಬಿ ಆಜಾದ್ ಮಾತನಾಡಿದ್ದು, ಬಿಜೆಪಿಯೇ ನೀರವ್ ಮೋದಿಗೆ ದೇಶ ಬಿಟ್ಟು ಓಡಿ ಹೋಗಲು ಸಹಾಯ ಮಾಡಿತ್ತು. ಆದರೆ ಇಂದು ಅದೇ ಬಿಜೆಪಿ ಚುನಾವಣೆಗಾಗಿ ನೀರವ್‍ನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ. ಚುನಾವಣೆಯ ಬಳಿಕ ಮತ್ತೆ ನೀರವ್‍ನನ್ನು ವಾಪಸ್ ಕಳುಹಿಸುತ್ತಾರೆ ಎಂದು ಆರೋಪ ಮಾಡಿದರು.

    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚಿಸಿ ಇಂಗ್ಲೆಂಡಿನಲ್ಲಿ ತಲೆಮರೆಸಿಕೊಂಡಿದ್ದ ವಜ್ರ ಉದ್ಯಮಿ ನೀರವ್ ಮೋದಿಯನ್ನು ಬಂಧಿಸಲು ಭಾರತ ಸರ್ಕಾರ ಇಂಗ್ಲೆಂಡ್ ಸರ್ಕಾರದ ಜೊತೆ ಮಾತುಕತೆ ನಡೆಸಿತ್ತು. ಇದಾದ ಬಳಿಕ ಬ್ರಿಟನ್‍ನ ವೆಸ್ಟ್ ಮಿನ್‍ಸ್ಟರ್ ಕೋರ್ಟ್ ನೀರವ್ ಮೋದಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಲಂಡನ್ ಪೊಲೀಸರು ನೀರವ್ ಮೋದಿಯನ್ನು ಬಂಧಿಸಿದ್ದರು.

    48 ವಷದ ನೀರವ್ ಮೋದಿ ಕಳೆದ ವರ್ಷ ದೇಶ ಬಿಟ್ಟು ಪರಾರಿಯಾಗಿದ್ದರು. ಅದಕ್ಕೂ ಮುನ್ನವೇ ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 13 ಸಾವಿರ ಕೋಟಿ ರೂ.ಗಳನ್ನು ನೀರವ್ ಪಾವತಿ ಮಾಡಬೇಕಿತ್ತು. ಇದನ್ನು ಓದಿ: ದೇಶ ಬಿಟ್ಟು ಪರಾರಿಯಾಗಿದ್ದ ನೀರವ್ ಮೋದಿ ಕೊನೆಗೂ ಅರೆಸ್ಟ್

    ಲೋಕಸಭಾ ಚುನಾವಣೆಯ ಪ್ರಚಾರ ಭಾಷಣದಲ್ಲಿ ದೇಶದ ಜನರ ದುಡ್ಡನ್ನು ನೀರವ್ ಮೋದಿ ಸೇರಿ ದೇಶ ಬಿಟ್ಟು ಓಡಿ ಹೋಗಿರುವ ಕಳ್ಳರಿಗೆ ಮೋದಿ ನೀಡಿದ್ದಾರೆ. ಇವರೆಲ್ಲಪರಾರಿಯಾಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಆರೋಪಿಸಿ ವಾಗ್ದಾಳಿ ನಡೆಸುತ್ತಿದ್ದರು. ವಿದೇಶ ಪ್ರವಾಸಕ್ಕೆ ಹೋಗಿ ರಾಜತಾಂತ್ರಿಕ ಸಂಬಂಧ ಬಹಳ ಗಟ್ಟಿಯಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ ಪರಾರಿಯಾಗಿರುವ ಕಳ್ಳರನ್ನು ದೇಶಕ್ಕೆ ಕರೆತರುವಲ್ಲಿ ಬಿಜಪಿ ಸರ್ಕಾರ ವಿಫಲವಾಗಿದೆ ಎಂದು ಕೈ ನಾಯಕರು ಟೀಕಿಸುತ್ತಿದ್ದರು.

  • ಎಲ್ಲ ಕಳ್ಳರ ಹೆಸರಿನ ಕೊನೆಗೆ ‘ಮೋದಿ’ ಯಾಕಿರುತ್ತೆ: ರಾಹುಲ್ ಗಾಂಧಿ ಪ್ರಶ್ನೆ

    ಎಲ್ಲ ಕಳ್ಳರ ಹೆಸರಿನ ಕೊನೆಗೆ ‘ಮೋದಿ’ ಯಾಕಿರುತ್ತೆ: ರಾಹುಲ್ ಗಾಂಧಿ ಪ್ರಶ್ನೆ

    ರಾಂಚಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಮುಖಂಡರ ಆರೋಪ-ಪ್ರತ್ಯಾರೋಪಗಳು ಆರಂಭಗೊಂಡಿವೆ. ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಎಲ್ಲ ಕಳ್ಳರ ಹೆಸರಿನ ಕೊನೆಗೆ ‘ಮೋದಿ’ ಯಾಕೆ ಇರುತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.

    ನೀವು ನೀರವ್ ಮೋದಿ ಹೆಸರನ್ನು ಕೇಳಿರಬೇಕು. ಹಾಗೆಯೇ ಲಲಿತ್ ಮೋದಿಯ ಹೆಸರನ್ನು ಕೇಳಿರುತ್ತೀರಿ. ನೀರವ್ ಮೋದಿಗೆ ನರೇಂದ್ರ ಮೋದಿ ಸೋದರ ಎಂದು ಕರೆಯುತ್ತಿದ್ರು. ಮೆಹುಲ್, ನೀರವ್, ಲಲಿತ್ ಎಂಬ ಹೆಸರುಗಳ ವ್ಯಕ್ತಿಗಳನ್ನು ಟಿವಿಯಲ್ಲಿ ನೋಡಿರುತ್ತೀರಿ. ಆದ್ರೆ ಎಲ್ಲ ಕಳ್ಳರ ಹೆಸರಿನ ಕೊನೆಗೆ ಮೋದಿ ಯಾಕಿರುತ್ತೆ ಎಂಬುವುದು ಗೊತ್ತಾಗುತ್ತಿಲ್ಲ ಎಂದು ಹೇಳಿದರು.

    ಭಾರತೀಯ ವಾಯುಸೇನೆ ದೇಶದ ರಕ್ಷಣೆ ಮಾಡುತ್ತದೆ. ವಾಯುಸೇನೆಯ ಪೈಲಟ್ ಗಳು ತಮ್ಮ ಜೀವವನ್ನು ಪಣಕ್ಕಿಟ್ಟು, ದೇಶದ ರಕ್ಷಣೆಯಲ್ಲಿ ನಿರತರಾಗಿರುತ್ತಾರೆ. ಆದ್ರೆ ನಮ್ಮ ಪ್ರಧಾನಿಗಳು ವಾಯುಸೇನೆಯಿಂದ ಹಣ ಕದ್ದು ಅನಿಲ್ ಅಂಬಾನಿಯಲ್ಲಿ ಜೇಬಿನಲ್ಲಡುತ್ತಾರೆ ಎಂದು ಪರೋಕ್ಷವಾಗಿ ರಫೇಲ್ ಡೀಲ್ ವಿಚಾರವನ್ನು ಪ್ರಸ್ತಾಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • EXCLUSIVE: ಬೆಂಗ್ಳೂರಿಗರೇ ಹುಷಾರ್, ನಗರದಲ್ಲಿದೆ ಬೃಹತ್ ಹಗರಣದ ಗ್ಯಾಂಗ್!

    EXCLUSIVE: ಬೆಂಗ್ಳೂರಿಗರೇ ಹುಷಾರ್, ನಗರದಲ್ಲಿದೆ ಬೃಹತ್ ಹಗರಣದ ಗ್ಯಾಂಗ್!

    ಬೆಂಗಳೂರು: ಪಂಜಾಬ್ ನ್ಯಾಷನಲ್ ಬ್ಯಾಂಕ್‍ನ (ಪಿಎನ್‍ಬಿ) ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯಂತೆ ನಗರದಲ್ಲಿ ಬರೋಬ್ಬರಿ 1,250 ಕೋಟಿಯ ಬೃಹತ್ ಹಗರಣವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ವಿಕ್ರಂ ಇನ್ವೆಸ್ಟ್‍ಮೆಂಟ್ ಕಂಪೆನಿಯಿಂದ ಈ ಬೃಹತ್ ವಂಚನೆ ನಡೆದಿದ್ದು, ರಾಘವೇಂದ್ರ ಶ್ರೀನಾಥ್, ಸೂತ್ರಂ ಸುರೇಶ್, ನರಸಿಂಹಮೂರ್ತಿ, ಪ್ರಹ್ಲಾದ್ ಸೇರಿದಂತೆ ವಂಚೆನಯ ಪ್ರಮುಖ ಆರೋಪಿಗಳಾಗಿದ್ದಾರೆ.

    ರಾಘವೇಂದ್ರ ಶ್ರೀನಾಥ್ ವಿಕ್ರಂ ಇನ್ವೆಸ್ಟ್ ಮೆಂಟ್ ಕಂಪೆನಿ ಎಂಡಿಯಾಗಿದ್ದು, ಸೂತ್ರಂ ಸುರೇಶ್ ಮಾಜಿ ಕ್ರೀಡಾ ವರದಿಗಾರನಾಗಿದ್ದಾನೆ. ಇವರುಗಳು ಖ್ಯಾತ ಕ್ರೀಡಾಪಟುಗಳು, ರಾಜಕಾರಣಿಗಳು, ಸಿನಿಮಾ ನಟರನ್ನೇ ಗುರಿಯಾಗಿಸಿಕೊಂಡು ಪಂಗನಾಮ ಹಾಕಿದ್ದಾರೆ. 

    ಹೆಚ್ಚಿನ ಲಾಭಾಂಶ ನೀಡೋದಾಗಿ ಕೋಟಿಗಟ್ಟಲೇ ಹಣ ಇನ್ವೆಸ್ಟ್ ಮಾಡಿಸಿದ್ದಾರೆ. ಒಬ್ಬೊಬ್ಬರು ಏನಿಲ್ಲವೆಂದ್ರೂ ಎಂಟರಿಂದ ಹತ್ತು ಕೋಟಿ ಹೂಡಿಕೆ ಮಾಡಿದ್ದಾರೆ. ಖ್ಯಾತ ಕ್ರಿಕೆಟಿಗ, ಬ್ಯಾಡ್ಮಿಂಟನ್ ಪಟು ಪ್ರಕಾಶ್ ಪಡುಕೋಣೆಗೆ ಕೋಟಿ ಕೋಟಿ ಮೋಸ ಮಾಡಿದ್ದಾರೆ.

    ಸ್ಟಾಕ್ ಕಮಾಡಿಟೀಸ್ ಮೇಲೆ ಹಣ ಹೂಡಿಕೆ ಮಾಡುವುದಾಗಿ ಅಂತಾ ಹೇಳಿ ಕಳೆದ ಅಕ್ಟೋಬರ್‍ನಿಂದ ಆರೋಪಿಗಳು ಯಾರಿಗೂ ಲಾಭಾಂಶ ನೀಡಿಲ್ಲ. ಸದ್ಯ ಇವರಿಂದ ವಂಚನೆಗೊಳಗಾದವರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಬನಶಂಕರಿ ಪೊಲೀಸರು ಐವರನ್ನು 14 ದಿನ ವಶಕ್ಕೆ ಪಡೆದಿದ್ದಾರೆ.

  • 11,400 ಕೋಟಿ ರೂ. ವಂಚಿಸಿದ್ದ ನೀರವ್ ಮೋದಿ ಕುಟುಂಬ ಕೆರಿಬಿಯನ್ ದ್ವೀಪಕ್ಕೆ ಓಡಿದ್ದು ಯಾಕೆ?

    11,400 ಕೋಟಿ ರೂ. ವಂಚಿಸಿದ್ದ ನೀರವ್ ಮೋದಿ ಕುಟುಂಬ ಕೆರಿಬಿಯನ್ ದ್ವೀಪಕ್ಕೆ ಓಡಿದ್ದು ಯಾಕೆ?

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‍ಬಿ) ವಂಚನೆ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ನೀರವ್ ಮೋದಿ ಬಂಧನದ ಭೀತಿಯಿಂದ ಪಾರಾಗಲು ಕೆರಿಬಿಯನ್ ಸೇಂಟ್ ಕಿಟ್ಸ್ ಮತ್ತು ನೇವಿಸ್ ದ್ವೀಪ ರಾಷ್ಟ್ರಗಳ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

    11,400 ಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ವಜ್ರಾಭರಣಗಳ ಉದ್ಯಮಿಯಾಗಿರುವ ನೀರವ್ ಕುಟುಂಬ ಪ್ರಕರಣ ಬೆಳಕಿಗೆ ಬರುವ ಮುನ್ನವೇ ದೇಶ ತೊರೆದು ಅಮೆರಿಕಕ್ಕೆ ಹಾರಿತ್ತು. ಈಗ ಭಾರತದ ವಿದೇಶಾಂಗ ಸಚಿವಾಲಯ ಅವರನ್ನು ವಶಕ್ಕೆ ಪಡೆಯಲು ಯತ್ನಿಸುತ್ತಿರುವಾಗ ನೀರವ್ ಮೋದಿ ಕುಟುಂಬ ಸೇಂಟ್ ಕೀಟ್ಸ್ ಮತ್ತು ನೇವಿಸ್ ದ್ವೀಪದಲ್ಲಿ ಆಶ್ರಯ ಪಡೆಯಲು ಮುಂದಾಗಿದೆ.

    ವಿದೇಶಾಂಗ ಸಚಿವಾಲಯ ಶನಿವಾರ ನೀರವ್ ಹಾಗೂ ಅವರ ಕುಟುಂಬ ಸದಸ್ಯರ ಪಾಸ್‍ಪೋರ್ಟ್ ರದ್ದು ಮಾಡಿತ್ತು. ಅಷ್ಟೇ ಅಲ್ಲದೇ ಅಮೆರಿಕದೊಂದಿಗೆ ಭಾರತದ ರಾಜತಾಂತ್ರಿಕ ಸಂಬಂಧ ಈಗ ಮತ್ತಷ್ಟು ಉತ್ತಮಗೊಂಡಿರುವ ಕಾರಣ ಅಮೆರಿಕ ಸರ್ಕಾರ ಯಾವ ಸಮಯದಲ್ಲಿ ಆದರೂ ನಮ್ಮನ್ನು ಭಾರತದ ವಶಕ್ಕೆ ನೀಡಬಹುದು ಎನ್ನುವ ಭೀತಿಯಿಂದ ನೀರವ್ ಕೆರೆಬಿಯನ್ ದ್ವೀಪ ರಾಷ್ಟ್ರಗಳ ಪೌರತ್ವ ಪಡೆಯಲು ಪ್ರಯತ್ನಿಸಿದ್ದಾರೆ.

    ನೀರವ್ ಕುಟುಂಬ ಈಗಾಗಲೇ ಅಮೆರಿಕದ ನ್ಯೂಯಾರ್ಕ್‍ನಿಂದ ಸೇಂಟ್ಸ್ ಕಿಟ್ಸ್ ಮತ್ತು ನೇವಿಸ್ ಐಲ್ಯಾಂಡ್‍ಗೆ ವಾಸಸ್ಥಳ ಬದಲಿಸಿ ಅಲ್ಲಿ ಐಷಾರಾಮಿ ಬಂಗಲೆಯನ್ನೂ ಖರೀದಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಪೌರತ್ವ ಪಡೆಯುವುದು ಹೇಗೆ?
    ಕೆರಿಬಿಯನ್ ದ್ವೀಪ ರಾಷ್ಟಗಳ ಪೌರತ್ವ ಪಡೆಯುವುದು ಅತ್ಯಂತ ಸರಳ ಪ್ರಕ್ರಿಯೆಯಾಗಿದೆ. ಈ ರಾಷ್ಟ್ರಗಳ ಪೌರತ್ವ ಪಡೆಯಲು ಅಲ್ಲಿನ ಶುಗರ್ ಇಂಡಸ್ಟ್ರಿ ಡೈವರ್ಸಿಫಿಕೇಷನ್ ಫೌಂಡೇಶನ್‍ಗೆ 1.6 ಕೋಟಿ ರೂ. ದೇಣಿಗೆ ಅಥವಾ ಪೂರ್ವ ನಿಗದಿತ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ 2.8 ಕೋಟಿ ರೂ. ಹಣ ಹೂಡಿಕೆ ಮಾಡಿದರೆ ಆ ದೇಶದ ಪೌರತ್ವ ಪಡೆಯಬಹುದು.

    ದ್ವೀಪ ರಾಷ್ಟ್ರದ ಪೌರತ್ವವೇ ಏಕೆ?
    ಭಾರತೀಯ ನಾಗರಿಕರಿಗೆ ಈ ರಾಷ್ಟ್ರದಲ್ಲಿ ಉಳಿದುಕೊಳ್ಳಲು 30 ದಿನಗಳ ವರೆಗೆ ಯಾವುದೇ ಪ್ರವಾಸಿ ವೀಸಾದ ಅಗತ್ಯವಿಲ್ಲ. ಈ ಎಲ್ಲಾ ನಿಯಮಗಳನ್ನು ಚೆನ್ನಾಗಿ ತಿಳಿದಿರುವ ನೀರವ್ ಪ್ರಸ್ತುತ ಸೇಂಟ್ ಕಿಟ್ಸ್ ಮತ್ತು ನೇವಿಸ್ ದ್ವೀಪ ರಾಷ್ಟ್ರಗಳ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ದ್ವೀಪ ರಾಷ್ಟ್ರ ಕೇವಲ 50 ಸಾವಿರ ಜನಸಂಖ್ಯೆ ಮಾತ್ರ ಹೊಂದಿದ್ದು, ಈ ರಾಷ್ಟ್ರಗಳ ಜೊತೆಗೆ ಭಾರತ ಯಾವುದೇ ಒಪ್ಪಂದ ಇದುವರೆಗೂ ಮಾಡಿಕೊಂಡಿಲ್ಲ. ಈ ಕಾರಣಗಳಿಂದ ಇದು ಸುರಕ್ಷಿತ ಸ್ಥಳವಾಗಿರುವ ಹಿನ್ನೆಲೆಯಲ್ಲಿ ನೀರವ್ ಕುಟುಂಬ ಇಲ್ಲಿಗೆ ವಾಸಸ್ಥಳ ಬದಲಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ನಿಯಮಗಳು ಏನು ಹೇಳುತ್ತೆ?
    ಕಾಮನ್‍ವೆಲ್ತ್ ಮತ್ತು ಸ್ನೇಹ ರಾಷ್ಟ್ರದ ಭಾಗವಾಗಿ ಸೇಂಟ್ ಕಿಟ್ಸ್ ಮತ್ತು ನೇವಿಸ್ ದ್ವೀಪ ಭಾರತದ ಜತೆ ಹಸ್ತಾಂತರ ಒಪ್ಪಂದ ಮಾಡಿಕೊಂಡಿಲ್ಲ. ಒಂದು ವೇಳೆ ಈ ದೇಶದ ಪೌರತ್ವ ಪಡೆದರೆ ನೀರವ್ ಅಲ್ಲಿಂದಲೇ ಸಿಂಗಾಪುರ ಮತ್ತು ಹಾಂಕಾಂಗ್‍ನಲ್ಲಿ ವಜ್ರಾಭರಣಗಳ ವಹಿವಾಟನ್ನು ಮತ್ತೆ ಆರಂಭಿಸಬಹುದಾಗಿದೆ. ಅಲ್ಲದೇ ಈ ದ್ವೀಪ ರಾಷ್ಟ್ರಗಳ ಹಕ್ಕನ್ನು ಪಡೆದಿರುವವರನ್ನ ಭಾರತಕ್ಕೆ ಹಸ್ತಾಂತರ ಮಾಡುವ ಹಕ್ಕನ್ನು ಸಿಂಗಾಪುರ ಹಾಗೂ ಹಾಂಕಾಂಗ್ ಹೊಂದಿಲ್ಲ. ಹೀಗಾಗಿ ಈ ದ್ವೀಪ ಸದ್ಯಕ್ಕೆ ಸುರಕ್ಷಿತ ತಾಣವೆನಿಸಿದೆ. ಇದನ್ನೂ ಓದಿ: ನೀರವ್ ಮೋದಿಗೆ ಸೇರಿದ 10,000ಕ್ಕೂ ಹೆಚ್ಚು ವಾಚ್‍ಗಳನ್ನ ಜಪ್ತಿ ಮಾಡಿದ ಇಡಿ

    ಜತಿನ್ ಮೆಹ್ತಾ ವರ್ಶನ್ 2:
    ಎಂಟು ವರ್ಷಗಳ ಹಿಂದೆ ಉದ್ಯಮಿ ಜತಿನ್ ಮೆಹ್ತಾ ಮಾಲೀಕತ್ವದ ವಿನ್‍ಸಮ್ ಡೈಮಂಡ್ಸ್ ಅಂಡ್ ಜ್ಯುವೆಲ್ಲರಿ ಕಂಪನಿ ಎಸ್‍ಬಿಐ ಹಾಗೂ ಬ್ಯಾಂಕ್ ಆಫ್ ಬರೋಡಾಗೆ ವಂಚನೆ ಮಾಡಿತ್ತು. ಸುಮಾರು 4,686 ಕೋಟಿ ರೂ. ವಂಚಿಸಿದ್ದ ಜತಿನ್ ಮೆಹ್ತಾ 2013 ರಲ್ಲಿ ವಿದೇಶಕ್ಕೆ ಪರಾರಿಯಾಗಿದ್ದರು. ಅವರು ಸಹ ಸೇಂಟ್ ಕಿಟ್ಸ್ ಮತ್ತು ನೇವಿಸ್ ರಾಷ್ಟ್ರದ ಪೌರತ್ವ ಪಡೆದು ರಕ್ಷಣೆ ಪಡೆದಿದ್ದರು. ಸರ್ಕಾರ ಈ ಪ್ರಕರಣದಲ್ಲಿ ಆರೋಪಿಗಳ ಹಸ್ತಾಂತರಕ್ಕೆ ಸತತ ಪ್ರಯತ್ನ ನಡೆಸುತ್ತಿದ್ದರೂ ಇದುವರೆಗೆ ಅವರನ್ನು ಭಾರತದ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ.

    ಸೂರತ್‍ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಉದ್ಯಮಿ ಜತಿನ್ ಮೆಹ್ತಾ ಗೆ ಸಂಬಂಧಿಸಿದ ಆಸ್ತಿಯನ್ನು ವಶಕ್ಕೆ ಪಡೆದ ನಂತರ ಕೇವಲ 120 ಕೋಟಿ ರೂ. ಹಣವನ್ನಷ್ಟೇ ಪಡೆಯಲು ಸಾಧ್ಯವಾಯಿತು. ಪ್ರಸ್ತುತ ನೀರವ್ ಮೋದಿ ಸಹ ಇದೇ ಹಾದಿಯನ್ನು ತುಳಿದಿದ್ದು, ಒಂದು ವೇಳೆ ಕೆರಿಬಿಯನ್ ದ್ವೀಪ ರಾಷ್ಟ್ರಗಳ ಪೌರತ್ವ ಪಡೆದರೆ ಮತ್ತೆ ಭಾರತಕ್ಕೆ ಕರೆತರುವುದು ಕಷ್ಟ ಸಾಧ್ಯವಾಗಲಿದೆ. ಇದನ್ನೂ ಓದಿ: ನೀರವ್ ಮೋದಿಗೆ ಬೈ ಬೈ ಹೇಳಿದ ಪ್ರಿಯಾಂಕಾ ಚೋಪ್ರಾ

  • ಮಾಯಾವತಿ ತಮ್ಮ ರಾಜ್ಯದಲ್ಲೇ ಏನೂ ಮಾಡಿಲ್ಲ, ಇಲ್ಲೇನು ಮಾಡ್ತಾರೆ: ಸಿಎಂ ಪ್ರಶ್ನೆ

    ಮಾಯಾವತಿ ತಮ್ಮ ರಾಜ್ಯದಲ್ಲೇ ಏನೂ ಮಾಡಿಲ್ಲ, ಇಲ್ಲೇನು ಮಾಡ್ತಾರೆ: ಸಿಎಂ ಪ್ರಶ್ನೆ

    ರಾಯಚೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿಯಿಂದ ಏನು ಆಗಲ್ಲ. ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ರಾಜ್ಯದಲ್ಲಿಯೇ ಏನು ಮಾಡಿಲ್ಲ, ಇಲ್ಲೇನು ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

    ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಆಗಮಿಸಿದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಶಾಸಕರ ಮಗನಾದರೇನು ಯಾರಾದರೇನು ತಪ್ಪು ತಪ್ಪೇ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತೆ ಅಂತ ಹೇಳಿದ್ದಾರೆ.

    ತಮ್ಮ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಹಿಸುತ್ತಾರೆ. ಅವರು ನಮ್ಮಂತೆ ಜನರ ಕೈಗೆ ಸಿಗುವುದಿಲ್ಲ. ನರೇಂದ್ರ ಮೋದಿ ಬ್ಯಾಂಕ್ ನಲ್ಲಿ ಹಣ ಇಡಿ ಅಂತಾರೆ. ಹಣ ಹೂಡಿಕೆ ಮಾಡಿದ್ರೆ ನೀರವ್ ಮೋದಿ ಲೂಟಿ ಮಾಡ್ತಾರೆ. ಪ್ರಧಾನಿ ಮೋದಿ ಇದರ ಬಗ್ಗೆ ಎಲ್ಲೂ ಮಾತಾಡಿಲ್ಲ ಕೂಡಲೇ ಮಾತಾಡಬೇಕು ಎಂದು ಸಿಎಂ ಆಗ್ರಹಿಸಿದ್ರು. ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿಗೂ ನೀರವ್ ಮೋದಿಗೂ ಸಂಬಂಧ ಇಲ್ಲ. ಇದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿಂಘ್ವಿ ಮುಂದಾಗಿದ್ದಾರೆ ಅಂತಾ ತಿಳಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರಿಗೆ ಅನ್ಯಾಯ ಮಾಡಿದೆ: ಮಯಾವತಿ

    ಹೆಲಿಪ್ಯಾಡ್ ನಲ್ಲಿ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್ ಸಿದ್ದರಾಮಯ್ಯರ ಕಾಲಿಗೆ ನಮಸ್ಕರಿಸುವ ಮೂಲಕ ಸ್ವಾಗತ ಕೋರಿದರು. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 540 ಕೋಟಿ ರೂಪಾಯಿ ಅಭಿವೃದ್ಧಿ ಯೋಜನೆಗಳಿಗೆ ಸಿದ್ದರಾಮಯ್ಯ ಚಾಲನೆ ನೀಡಿದರು.