Tag: Negative

  • ಕೊರೊನಾ ಬಂದಿರೋ ಕಾರಣ ಬಿಚ್ಚಿಟ್ಟ ಮೆಗಾಸ್ಟಾರ್ ಚಿರಂಜೀವಿ

    ಕೊರೊನಾ ಬಂದಿರೋ ಕಾರಣ ಬಿಚ್ಚಿಟ್ಟ ಮೆಗಾಸ್ಟಾರ್ ಚಿರಂಜೀವಿ

    – ಮೊದ್ಲು ಕೊರೊನಾ ಪಾಸಿಟಿವ್, 3 ಬಾರಿ ನೆಗೆಟಿವ್

    ಹೈದರಾಬಾದ್: ಇತ್ತೀಚೆಗೆ ಮೆಗಾಸ್ಟಾರ್ ಜಿರಂಜೀವಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಸುದ್ದಿ ಸಖತ್ ಸದ್ದು ಮಾಡಿತ್ತು. ಆದರೆ ನನಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಜಿರಂಜೀವಿಯವರೇ ಸ್ಪಷ್ಟಪಡಿಸಿದ್ದಾರೆ.

    ಕಳೆದ ನಾಲ್ಕು ದಿನಗಳ ಹಿಂದೆ ಮೆಗಾಸ್ಟಾರ್ ಜಿರಂಜೀವಿಯವರಿಗೆ ಕೊರೊನಾ ಸೋಂಕು ಬಂದಿದೆ ಎಂದು ಹೇಳಲಾಗಿತ್ತು. ಆದರೆ ಈ ಸುದ್ದಿಯ ಹಿಂದಿನ ಕಾರಣವನ್ನು ಸ್ವತಃ ಜಿರಂಜೀವಿಯವರೇ ರೀವಿಲ್ ಮಾಡಿದ್ದು, ದೋಷಪೂರಿತ ಆರ್.ಟಿ-ಪಿ.ಸಿ.ಆರ್ ಕಿಟ್‍ನಿಂದ ನನ್ನ ಕೊರೊನಾ ವರದಿ ತಪ್ಪಾಗಿ ಬಂದಿತ್ತು ಎಂದು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಜಿರಂಜೀವಿಯವರು, ನನಗೆ ವೈದ್ಯರ ತಂಡ ಮೂರು ಬಗೆಯ ಕೊರೊನಾ ಟೆಸ್ಟ್ ಮಾಡಿದ್ದು, ಈ ವೇಳೆ ನನಗೆ ಕೊರೊನಾ ನೆಗೆಟಿವ್ ಇದೆ ಎಂದು ಖಚಿತವಾಗಿದೆ. ಇದಕ್ಕೂ ಮೊದಲು ಬಂದ ವರದಿ ಸುಳ್ಳಾಗಿದ್ದು, ದೋಷಪೂರಿತ ಆರ್.ಟಿ-ಪಿ.ಸಿ.ಆರ್ ಕಿಟ್ ಬಳಕೆಯಿಂದ ನನಗೆ ಕೊರೊನಾ ಪಾಸಿಟಿವ್ ಎಂದು ಬಂದಿತ್ತು. ಈ ಕಠಿಣ ಸಮಯದಲ್ಲಿ ನನ್ನ ಆರೋಗ್ಯದ ಮೇಲೆ ಕಾಳಜಿ ಮತ್ತು ಪ್ರೀತಿ ತೋರಿದ ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

    ಟೈಮ್ ಮತ್ತು ಕೊರೊನಾ ವೈರಸ್ ಕಳೆದ ನಾಲ್ಕು ದಿನದಿಂದ ನನ್ನ ಜೊತೆ ಆಟವಾಡುತ್ತಿದೆ. ಕಳೆದ ಭಾನುವಾರ ಕೊರೊನಾ ಪಾಸಿಟಿವ್ ಎಂದು ತಿಳಿದು ನಾನು ಕ್ವಾರಂಟೈನ್ ಆಗಿದ್ದೆ. ಆದರೆ ಎರಡು ದಿನವಾದರೂ ಕೊರೊನಾದ ಯಾವುದೇ ಗುಣಲಕ್ಷಣ ಕಾಣಿಸಿಕೊಳ್ಳಲಿಲ್ಲ. ಈ ವೇಳೆ ಮತ್ತೆ ಪರೀಕ್ಷೆ ಮಾಡಿಸೋಣ ಎಂದು ಅಪೋಲೋ ಆಸ್ಪತ್ರೆ ವೈದ್ಯರನ್ನು ಭೇಟಿ ಮಾಡಿದೆ. ಅಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದಾಗ ಕೊರೊನಾ ಸೋಂಕು ಇಲ್ಲ ಎಂಬುದು ತಿಳಿಯಿತು. ನಂತರ ಮತ್ತೆ ಮೂರು ಬಾರಿ ಕೊರೊನಾ ಟೆಸ್ಟ್ ಮಾಡಿಸಿದ್ದು, ಅಲ್ಲಿಯೂ ಕೂಡ ನನಗೆ ಕೊರೊನಾ ನೆಗೆಟಿವ್ ಬಂದಿದೆ ಎಂದು ಚಿರಂಜೀವಿ ಟ್ವಿಟ್ಟರಿನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಸದ್ಯ ಚಿರಂಜೀವಿಯವರು ತಮ್ಮ ಪುತ್ರ ರಾಮ್‍ಚರಣ್ ನಿರ್ಮಾಣ ಮಾಡುತ್ತಿರುವ ಆಚಾರ್ಯ ಎಂಬ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್‍ಗೆ ಹೋಗುವ ಮುನ್ನ ಚಿರಂಜೀವಿಯವರು ಕೊರೊನಾ ಟೆಸ್ಟ್ ಮಾಡಿಸಿದ್ದು, ಈ ವರದಿಯಲ್ಲಿ ಅವರಿಗೆ ಮೊದಲ ಬಾರಿ ಪಾಸಿಟಿವ್ ಬಂದಿತ್ತು. ಈ ಕಾರಣದಿಂದ ಆಚಾರ್ಯ ಸಿನಿಮಾದ ಶೂಟಿಂಗ್ ಅನ್ನು ಮುಂದೂಡಲಾಗಿತ್ತು.

  • ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಬಿಗ್ ರಿಲೀಫ್

    ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಬಿಗ್ ರಿಲೀಫ್

    ಜಮೈಕಾ: ಐಪಿಎಲ್‍ನಲ್ಲಿ ಭಾಗಹಿಸಲು ಯುಎಇಗೆ ಹಾರಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಬಿಗ್ ರಿಲೀಫ್ ಸಿಕಿದ್ದು, ತಂಡದ ಪ್ರಮುಖ ಆಟಗಾರ ಕ್ರಿಸ್ ಗೇಲ್ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ.

    ಸೋಮವಾರ ಜಮೈಕಾದ ದಿಗ್ಗಜ ಓಟಗಾರ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದಕ್ಕೂ ಮುನ್ನ ಉಸೇನ್ ಬೋಲ್ಟ್ ಅವರು ಅವರ ಹುಟ್ಟುಹಬ್ಬದ ಸಲುವಾಗಿ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಗೆ ಹಲವಾರು ಕ್ರೀಡಾಪಟುಗಳು ಆಗಮಿಸಿದ್ದರು. ಈ ಪಾರ್ಟಿಯಲ್ಲಿ ಗೇಲ್ ಅವರು ಕೂಡ ಭಾಗಹಿಸಿದ್ದರು.

    ಈ ಬಾರಿಯ ಐಪಿಎಲ್‍ನಲ್ಲಿ ಕ್ರಿಸ್ ಗೇಲ್ ಅವರು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಆಡಲಿದ್ದಾರೆ. ಒಂದೇ ವೇಳೆ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದರೆ, ಅವರು ಯುಎಇಗೆ ಪ್ರಯಾಣ ಬೆಳೆಸಲು ಆಗುತ್ತಿರಲಿಲ್ಲ. ಈಗ ನೆಗೆಟಿವ್ ಬಂದಿದ್ದು, ಪಂಜಾಬ್ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ತನಗೆ ನೆಗೆಟಿವ್ ಬಂದ ಮಾಹಿತಿಯನ್ನು ಸ್ವತಃ ಗೇಲ್ ಅವರೇ ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿಕೊಂಡಿದ್ದು, ಎರಡು ಬಾರಿ ನಡೆಸಿದ ಟೆಸ್ಟ್ ನಲ್ಲೂ ನೆಗೆಟಿವ್ ಬಂದಿದೆ ಎಂದಿದ್ದಾರೆ.

    ಕಳೆದ ಅಗಸ್ಟ್ 21ರಂದು ಉಸೇನ್ ಬೋಲ್ಟ್ ಅವರ 34ನೇ ವರ್ಷದ ಹುಟ್ಟುಹಬ್ಬವಿತ್ತು. ಹೀಗಾಗಿ ಅವರು ಸ್ನೇಹಿತರೊಂದಿಗೆ ಭರ್ಜರಿ ಪಾರ್ಟಿ ಮಾಡಿದ್ದರು. ಇದರಲ್ಲಿ ವೆಸ್ಟ್ ಇಂಡೀಸ್‍ನ ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್, ಫುಟ್‍ಬಾಲ್ ಆಟಗಾರ ರಹೀಮ್ ಸ್ಟೆರ್ಲಿಂಗ್ ಸೇರಿದಂತೆ ಹಲವು ಗಣ್ಯ ಕ್ರೀಡಾಪಟುಗಳು ಸಹ ಭಾಗಿಯಾಗಿದ್ದರು. ಪಾರ್ಟಿ ವೇಳೆ ಗಣ್ಯರು ಕುಣಿದು ಕುಪ್ಪಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

    ಕೊರೊನಾ ವೈರಸ್ ಕಾರಣದಿಂದ ಈ ಬಾರಿಯ ಐಪಿಎಲ್ ಯುಎಇಯಲ್ಲಿ ನಡೆಯಲಿದೆ. ಈಗಾಗಲೇ ಐಪಿಎಲ್ ತಂಡಗಳು ಯುಎಇಗೆ ತೆರಳಿ ಕ್ವಾರಂಟೈನ್‍ಗೆ ಒಳಗಾಗಿವೆ. ಕೊರೊನಾ ನೆಗೆಟಿವ್ ಬಂದ ಆಟಗಾರು ಮಾತ್ರ ಪಂದ್ಯಗಳಲ್ಲಿ ಭಾಗವಹಿಸಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ತಂಡಗಳು ಪ್ರತ್ಯೇಕ ಹೋಟೆಲ್‍ಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ. ಸೆಪ್ಟಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ.

  • ಕೊರೊನಾ ಗೆದ್ದ ಎಸ್‍ಪಿಬಿ- ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ: ಚರಣ್

    ಕೊರೊನಾ ಗೆದ್ದ ಎಸ್‍ಪಿಬಿ- ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ: ಚರಣ್

    ಚೆನ್ನೈ: ಹಿರಿಯ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಆಗಿದೆ ಎಂದು ಎಸ್‍ಪಿಬಿ ಅವರ ಪುತ್ರ ಚರಣ್ ಮಾಹಿತಿ ನೀಡಿದ್ದಾರೆ.

    ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರುವ ಚರಣ್ ಅವರು, ನನ್ನ ತಂದೆಗಾಗಿ ನಿಮ್ಮ ನಿರಂತರ ಬೆಂಬಲ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದ. ತಂದೆ ಅವರ ಆರೋಗ್ಯ ಮತ್ತಷ್ಟು ಉತ್ತಮವಾಗಿದ್ದು, ಸ್ಥಿರವಾಗಿದೆ. ಅವರ ಕೊರೊನಾ ವರದಿಯೂ ನೆಗೆಟಿವ್ ಬಂದಿದ್ದು, ನಿರಂತರವಾಗಿ ಈ ಕುರಿತ ಮಾಹಿತಿಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

    ನಿನ್ನೆಯೇ ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಗೀತಾ ಸಾಹಿತಿ ಕೆ ಕಲ್ಯಾಣ್ ಅವರು, ಎಸ್‍ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬುದನ್ನು ತಿಳಿಸಿದರು ಎಂದು ಮಾಹಿತಿ ನೀಡಿದ್ದರು. ಎಸ್‍ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ ಪ್ರಾರ್ಥನೆಗಳು ನಡೆದಿತ್ತು. ಈಗ ಗುಣಮುಖರಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

    ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು.

    ಎಸ್‍ಪಿಬಿಯವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶಾದ್ಯಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ. ಜೊತೆಗೆ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಹುಷಾರಾಗಲಿ ಎಂದು ಬೇಗ ಗುಣಮುಖರಾಗಿ ಎಸ್‍ಪಿಬಿ ಸರ್ ಎಂದು ಗುರುವಾರ ಟ್ಟಿಟ್ಟರ್ ನಲ್ಲಿ ಟ್ರೆಂಡ್ ಮಾಡಲಾಗಿತ್ತು. ಸೆಲೆಬ್ರಿಟಿಗಳು ಸೇರಿದಂತೆ ಎಸ್‍ಪಿಬಿಯವರ ಸಾವಿರಾರು ಅಭಿಮಾನಿಗಳು ಟ್ವೀಟ್ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು.

  • ಎಸ್‍ಪಿಬಿ ಕೋವಿಡ್ ವರದಿ ನೆಗೆಟಿವ್ – ಕೆ ಕಲ್ಯಾಣ್ ಮಾಹಿತಿ

    ಎಸ್‍ಪಿಬಿ ಕೋವಿಡ್ ವರದಿ ನೆಗೆಟಿವ್ – ಕೆ ಕಲ್ಯಾಣ್ ಮಾಹಿತಿ

    ಚೆನ್ನೈ: ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ.
    ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಎಸ್ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬದುನ್ನು ತಿಳಿಸಿದರು ಎಂದು ಮಾಹಿತಿ ನೀಡಿದರು. ಎಸ್ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ ಪ್ರಾರ್ಥನೆಗಳು ನಡೆದಿತ್ತು. ಈಗ ಗುಣಮುಖರಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.
    ಕಳೆದ ಆಗಸ್ಟ್ 5ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿಪಿಗೆ ಚಿಕಿತ್ಸೆ ನೀಡಿದ್ದವು.
    ಆದರೆ ಇಂದು ಬೆಳಗ್ಗೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಈಗ ಎಸ್ಪಿಬಿಯವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಕಳೆದ 19 ದಿನಗಳಿಂದ ಎಸ್ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು.
    ಎಸ್ಪಿಬಿಯವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶಾದ್ಯಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ. ಜೊತೆಗೆ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಹುಷಾರಾಗಲಿ ಎಂದು ಬೇಗ ಗುಣಮುಖರಾಗಿ ಎಸ್ಪಿಬಿ ಸರ್ ಎಂದು ಗುರುವಾರ ಟ್ಟಿಟ್ಟರ್ ನಲ್ಲಿ ಟ್ರೆಂಡ್ ಮಾಡಲಾಗಿತ್ತು. ಸೆಲೆಬ್ರಿಟಿಗಳು ಸೇರಿದಂತೆ ಎಸ್ಪಿಬಿಯವರ ಸಾವಿರಾರು ಅಭಿಮಾನಿಗಳು ಟ್ವೀಟ್ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು.
    ಎಸ್ಪಿಬಿ ಜೊತೆಗೆ ಅವರ ಪತ್ನಿ ಸಾವಿತ್ರಿಯವರಿಗೂ ಕೂಡ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನು ಕೂಡ ಎಸ್ಪಿಬಿಯವರು ದಾಖಲಾಗಿರುವ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.
  • ಅಮಿತ್ ಶಾಗೆ ಕೊರೊನಾ ನೆಗೆಟಿವ್

    ಅಮಿತ್ ಶಾಗೆ ಕೊರೊನಾ ನೆಗೆಟಿವ್

    ನವದೆಹಲಿ: ಕೇಂದ್ರಗೃಹ ಮಂತ್ರಿ ಅಮಿತ್ ಶಾ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಅವರು ಇನ್ನಷ್ಟು ದಿನ ಮನೆಯಲ್ಲೇ ಉಳಿಯಲಿದ್ದಾರೆ.

    ಕಳೆದ ಅಗಸ್ಟ್ 2ರಂದು ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಈಗ ಮತ್ತೆ ಟ್ವೀಟ್ ಮಾಡಿರುವ ಅವರು ನನ್ನ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಮಾಡಿಸಿದ ನನ್ನ ಕೊರೊನಾ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ನಾನು ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಯದಲ್ಲಿ ನನ್ನ ಶುಭ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು. ವೈದ್ಯರ ಸಲಹೆ ಹಿನ್ನೆಲೆ ಇನ್ನಷ್ಟು ದಿನ ಮನೆಯಲ್ಲಿ ಇರಲಿದ್ದೇನೆ ಎಂದು ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.

    ತಮಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ಟ್ವೀಟ್ ಮಾಡಿ ತಿಳಿಸಿದ್ದರು. ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ತಮ್ಮ ಸಂಪರ್ಕ ಬಂದವರು ಐಸೂಲೇಷನ್ ಆಗುವಂತೆ ಅಮಿತ್ ಶಾ ಮನವಿ ಮಾಡಿದ್ದರು.

  • ನನಗೆ ಕೊರೊನಾ ನೆಗೆಟಿವ್, ನಾಳೆಯಿಂದ ಕರ್ತವ್ಯಕ್ಕೆ ಹಾಜರ್: ಕೋಟ ಶ್ರೀನಿವಾಸ ಪೂಜಾರಿ

    ನನಗೆ ಕೊರೊನಾ ನೆಗೆಟಿವ್, ನಾಳೆಯಿಂದ ಕರ್ತವ್ಯಕ್ಕೆ ಹಾಜರ್: ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪರ್ಕಕ್ಕೆ ಬಂದಿದ್ದ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

    ಸಿಎಂ ಯಡಿಯೂರಪ್ಪ ಅವರಿಗೆ ಆಗಸ್ಟ್ 2 ರಂದು ಕೋವಿಡ್ ಪಾಸಿಟಿವ್ ಬಂದಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 30ರಂದು ಮುಖ್ಯಮಂತ್ರಿ ಅವರೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು ಒಂದು ಗಂಟೆ ಜೊತೆಗಿದ್ದರು. ಈ ಕಾರಣದಿಂದ ಸಚಿವರು ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಸ್ವಯಂ ಗೃಹ ದಿಗ್ಭಂದನಕ್ಕೊಳಗಾಗಿದ್ದರು.

    ಕೋವಿಡ್ ಪರೀಕ್ಷೆಯನ್ನು ಕೂಡ ನಡೆಸಿದ್ದು, ಇಂದು ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ಸ್ವತಃ ಸಚಿವ ಜೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

    “ಮುಖ್ಯಮಂತ್ರಿಗಳ ಸಂಪರ್ಕಕ್ಕೆ ಬಂದಿದ್ದೆ ಎನ್ನುವ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರಂಟೈನ್‍ನಲ್ಲಿದ್ದೆ. ಇದೀಗ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ” ಎಂದು ಸಚಿವರು ಬರೆದುಕೊಂಡಿದ್ದಾರೆ.

  • ಕೊರೊನಾದಿಂದ ಗುಣಮುಖರಾಗಿದ್ದ ಮಹಾರಾಷ್ಟ್ರದ ಮಾಜಿ ಸಿಎಂ ನಿಧನ

    ಕೊರೊನಾದಿಂದ ಗುಣಮುಖರಾಗಿದ್ದ ಮಹಾರಾಷ್ಟ್ರದ ಮಾಜಿ ಸಿಎಂ ನಿಧನ

    ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ (91) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

    ಶಿವಾಜಿರಾವ್ ಪಾಟೀಲ್ ಅವರು ಇತ್ತೀಚೆಗೆ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಪಾಟೀಲ್ ಅವರು ಕಿಡ್ನಿ ಸಮಸ್ಯೆಗೆ ಸಂಬಂಧಿಸಿದ ತೊಂದರೆಗಳಿಂದಾಗಿ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

    ಶಿವಾಜಿರಾವ್ ಪಾಟೀಲ್ ಕಳೆದ ತಿಂಗಳು ಕೊರೊನಾ ಟೆಸ್ಟ್ ಮಾಡಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿತ್ತು. ನಂತರ ಅವರು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅಂದರೆ ನಾಲ್ಕು ದಿನಗಳ ಹಿಂದೆ ಮತ್ತೆ ಟೆಸ್ಟ್ ಮಾಡಿದಾಗ ಕೊರೊನಾ ನೆಗೆಟಿವ್ ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

    ಕೊರೊನಾ ವೈರಸ್ ಪತ್ತೆಯಾದ ನಂತರ ಕಾಂಗ್ರೆಸ್ ಮುಖಂಡರು ಲಾತೂರ್ ಜಿಲ್ಲೆಯ ನೀಲಂಗದಲ್ಲಿರುವ ತಮ್ಮ ನಿವಾಸದಿಂದ ಪುಣೆಗೆ ಹೋಗಿದ್ದರು.

    ಲಾತೂರ್‌ನ ಪ್ರಬಲ ನಾಯಕರಾದ ಪಾಟೀಲ್ ನೀಲಂಗೆಕರ್ ಅವರು 1985 ರಿಂದ 1986 ರ ಮಾರ್ಚ್ ವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಇದಕ್ಕೂ ಮೊದಲು ನೀಲಂಗ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

    1985 ರಲ್ಲಿ ಎಂಡಿ ಪರೀಕ್ಷೆಯ ಫಲಿತಾಂಶದಲ್ಲಿ ವಂಚನೆ ಆರೋಪದ ಮೇಲೆ ಬಾಂಬೆ ಹೈಕೋರ್ಟ್ ಪಾಟೀಲ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಆಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

  • ಐಶ್ವರ್ಯಾ ರೈ, ಪುತ್ರಿಗೆ ಕೊರೊನಾ ನೆಗೆಟಿವ್- ಆಸ್ಪತ್ರೆಯಿಂದ ಡಿಸ್ಚಾರ್ಜ್

    ಐಶ್ವರ್ಯಾ ರೈ, ಪುತ್ರಿಗೆ ಕೊರೊನಾ ನೆಗೆಟಿವ್- ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

    “ನಿಮ್ಮ ನಿರಂತರ ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್ ನೆಗೆಟಿವ್ ಬಂದಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದು, ಈಗ ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯಕೀಯ ಸಿಬ್ಬಂದಿಯ ಆರೈಕೆಯಲ್ಲಿ ಆಸ್ಪತ್ರೆಯಲ್ಲಿದ್ದೇನೆ” ಎಂದು ಟ್ವೀಟ್ ಮಾಡುವ ಮೂಲಕ ಅಭಿಷೇಕ್ ಬಚ್ಚನ್ ತಿಳಿಸಿದ್ದಾರೆ.

    ಜು. 11 ರಂದು ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‍ಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ನಟಿ ಐಶ್ವರ್ಯಾ ರೈ ಅವರಿಗೂ ಮತ್ತು ಪುತ್ರಿ ಆರಾಧ್ಯ ಬಚ್ಚನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಎಲ್ಲರೂ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

  • ನನ್ನ ಅಣ್ಣನ ಆಶೀರ್ವಾದದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ಬಂದಿದೆ: ಧ್ರುವ

    ನನ್ನ ಅಣ್ಣನ ಆಶೀರ್ವಾದದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ಬಂದಿದೆ: ಧ್ರುವ

    ಬೆಂಗಳೂರು: ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿದ್ದಾರೆ.

    ಜುಲೈ 15ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ ಸೂಚಿಸಿದ್ದರು. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಬ್ಬರು ಮನೆಯಲ್ಲಿದ್ದರು.

    ಇಂದು ಈ ವಿಚಾರವಾಗಿ ಟ್ವೀಟ್ ಮಾಡಿರುವ ಧ್ರುವ ಸರ್ಜಾ ಅವರು, ಇಂದು ಮಾಡಿದ ಕೊರೊನಾ ಪರೀಕ್ಷೆಯಲ್ಲಿ ನನಗೂ ಮತ್ತು ನನ್ನ ಪತ್ನಿ ನೆಗೆಟಿವ್ ಫಲಿತಾಂಶ ಬಂದಿದೆ. ನನ್ನ ಅಣ್ಣ ಚಿರಂಜೀವಿ ಸರ್ಜಾ ಅವರ ಆಶೀರ್ವಾದಿಂದ ನಮಗೆ ನೆಗೆಟಿವ್ ಬಂದಿದೆ. ನಮ್ಮ ಆರೋಗ್ಯದ ವಿಚಾರವಾಗಿ ದೇವರ ಬಳಿ ಬೇಡಿಕೊಂಡ ಎಲ್ಲರಿಗೂ ಧನ್ಯವಾದ. ಜೊತೆಗೆ ನನ್ನ ಎಲ್ಲ ಕಷ್ಟದ ಸಮಯದಲ್ಲೂ ನನ್ನ ಪರವಾಗಿ ನಿಲ್ಲುವ ಅರ್ಜುನ್ ಸರ್ಜಾ ಅಂಕಲ್‍ಗೆ ಧನ್ಯವಾದಗಳು. ವಿಶೇಷವಾಗಿ ಡಾ. ಸುರ್ಜಿತ್ ಪಾಲ್ ಸಿಂಗ್ ಮತ್ತು ಮೆಡಿಕಲ್ ಸಹಾಯ ಮಾಡಿದ ರಾಜ್‍ಕುಮಾರ್ ಅವರಿಗೆ ಥಾಂಕ್ಯೂ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಅರ್ಜುನ್ ಸರ್ಜಾ ಮಗಳು ಐಶ್ವರ್ಯಾಗೆ ಕೊರೊನಾ ಪಾಸಿಟಿವ್

    ಇತ್ತೀಚೆಗೆ ಕೊರೊನಾ ವಿಚಾರವಾಗಿಯೇ ಲೈವ್ ಬಂದು ಮಾತನಾಡಿದ್ದ ಧ್ರುವ, ನಾನು ಮತ್ತು ಪ್ರೇರಣಾ ಆರೋಗ್ಯವಾಗಿದ್ದೇವೆ. ಕ್ಯಾಲರಿ ಕರಗಿಸಬೇಕಾಗಿದೆ ಮನೆಯಲ್ಲಿಯೇ ಟ್ರೆಡ್‍ಮಿಲ್ ಇತ್ತು ಹಾಗಾಗಿ ವರ್ಕೌಟ್ ಮಾಡುತ್ತಿದ್ದೇನೆ. ಆರಂಭದಲ್ಲಿ ಸ್ವಲ್ಪ ಸುಸ್ತಾಗುತ್ತೆ ಅಷ್ಟೆ. ಪ್ರೇರಣಾ ಅವರಿಗೂ ವರ್ಕೌಟ್ ಮಾಡಿಸಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ಅತ್ತಿಗೆ ಮೇಘನಾ ಬಗ್ಗೆಯೂ ಮಾತನಾಡಿ, ಮೇಘನಾ ಕೂಡ ಆರೋಗ್ಯವಾಗಿದ್ದಾರೆ. ಯಾರೂ ಆತಂಕ ಪಡಬೇಡಿ. ನಾವು ಬೇಗ ಗುಣಮುಖರಾಗಿ ಮನೆಯಿಂದ ಹೊರಗೆ ಬರುತ್ತೇವೆ ಎಂದು ತಿಳಿಸಿದ್ದಾರೆ.

    ಈ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಾಗೃತರಾಗಿರಿ ಎಂದು ಅಭಿಮಾನಿಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದರು. “ತಪ್ಪದೆ ಪ್ರತಿದಿನ ಬಿಸಿ ನೀರು ಕುಡಿಯಿರಿ. ಸಾಧ್ಯವಾದಷ್ಟು ವರ್ಕೌಟ್ ಮಾಡಿ. ಎಲ್ಲರೂ ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಎಲ್ಲರೂ ಖುಷಿಯಾಗಿ ಇರಬೇಕು ಅಷ್ಟೇ. ಈ ಕೊರೊನಾವನ್ನು ಒಟ್ಟಾಗಿ ಸೇರಿ ಓಡಿಸೋಣ” ಎಂದು ಧ್ರುವ ಸರ್ಜಾ ಹೇಳಿದ್ದಾರೆ.

  • ಕೊರೊನಾ ಪಾಸಿಟಿವ್‍ಅನ್ನು ನಿಮ್ಮ ಪಾಸಿಟಿವ್ ಆಲೋಚನೆಯ ಮೂಲಕ ಗೆಲ್ಲಿ: ಸುಮಲತಾ

    ಕೊರೊನಾ ಪಾಸಿಟಿವ್‍ಅನ್ನು ನಿಮ್ಮ ಪಾಸಿಟಿವ್ ಆಲೋಚನೆಯ ಮೂಲಕ ಗೆಲ್ಲಿ: ಸುಮಲತಾ

    ಬೆಂಗಳೂರು: ಸಂಸದೆ ಸುಮಲತಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.  ಇದನ್ನೂ ಓದಿ: ಕೊರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣೋದು ಸರಿಯಲ್ಲ: ಸುಮಲತಾ

    ಈ ಬಗ್ಗೆ ಟ್ವೀಟ್ ಮಾಡಿರುವ ಸುಮಲತಾ ಅವರು, “ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ, ಕೋವಿಡ್‍ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದೇನೆ. ಪರೀಕ್ಷೆಯ ನಂತರ ನಾನೀಗ ಕೋವಿಡ್ 19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ” ಜನರಿಗೆ ತಿಳಿಸಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ, ಕೋವಿನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದೇನೆ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ಮಗದೊಮ್ಮೆ ನಿಮ್ಮೆಲ್ಲರ ಪ್ರೀತಿ, ಆಶೀರ್ವಾದಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಈ ಸುದ್ದಿಯನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಖುಷಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

    ತಮ್ಮೊಂದಿಗೆ ಲವಲವಿಕೆಯಿಂದ ಬೆರೆಯಲು ಇನ್ನೂ ನಾಲ್ಕೈದು ವಾರ ಮನೆಯಲ್ಲೇ ವಿಶ್ರಾಂತಿ ಪಡೆಯಲು ವೈದ್ಯರು ನನಗೆ ಸಲಹೆ ನೀಡಿದ್ದಾರೆ. ದೇಹಕ್ಕೆ ಚೈತನ್ಯ ತುಂಬಲು ಮನೆಯಲ್ಲಿ ವಿಶ್ರಾಂತಿ ಪಡೆಯುವುದು ಅನಿವಾರ್ಯ. ಕೊರೊನಾ ಪಾಸಿಟಿವ್ ಆದ ಸಮಯದಲ್ಲಿ ನೀವೆಲ್ಲ ನನಗಾಗಿ ಪ್ರಾರ್ಥಿಸಿದ್ದೀರಿ. ಶುಭ ಹಾರೈಸಿದ್ದೀರಿ, ಬೇಗ ಗುಣಮುಖವಾಗುವಂತೆ ಶುಭ ಕೋರಿದ್ದೀರಿ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಈಗ ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಈ ಪ್ರೀತಿಗೆ ನಾನು ಋಣಿಯಾಗಿದ್ದೇನೆ ಎಂದಿದ್ದಾರೆ.

    ಜೊತೆಗೆ ದೇವರ ಅನುಗ್ರಹ ಮತ್ತು ವೈದ್ಯರಾದ ಡಾ.ಸತೀಶ್ ಅವರ ಚಿಕಿತ್ಸೆ ಮತ್ತು ಸಲಹೆ ನನ್ನಲ್ಲಿ ಸಾಕಷ್ಟು ಧೈರ್ಯ ತಂದವು, ಕೊರೊನಾ ಗೆದ್ದು ಬರುವಲ್ಲಿ ಸಹಕಾರಿ ಆದವು. ಆದಷ್ಟು ಬೇಗ ನಿಮ್ಮ ಸೇವೆಗೆ ನಾನು ಬರಲು ಎದುರು ನೋಡುತ್ತಿದ್ದೇನೆ. ನಿಮ್ಮ ಕಾಳಜಿ ಮತ್ತು ಹಾರೈಕೆಗೆ ನನ್ನ ಕೃತಜ್ಞತೆ ಪದ ಸಣ್ಣದಾಗಬಹುದು. ನಿಮ್ಮೆಲ್ಲರ ಪ್ರೀತಿ, ವಿಶ್ವಾಸವನ್ನು ಯಾವತ್ತೂ ನಾನು ಮರೆಯಲಾರೆ.

    ಕೋವಿಡ್ ಪಾಸಿಟಿವ್ ಆದ ಜನರು ಹೆದರಬೇಕಿಲ್ಲ. ದಯವಿಟ್ಟು ವೈದ್ಯರು ಹೇಳುವ ಎಲ್ಲ ಸಲಹೆಯನ್ನು ಚಾಚೂ ತಪ್ಪದೇ ಪಾಲಿಸಿ, ಅನುಸರಿಸಿ. ಸದಾ ಸಕಾರಾತ್ಮಕವಾಗಿ ಯೋಚಿಸಿ. ಯಾವುದೇ ಕಾರಣಕ್ಕೂ ಅಧೈರ್ಯ ಪಡಬೇಡಿ. ಕೊರೊನಾ ಪಾಸಿಟಿವ್ ಅನ್ನು ನಿಮ್ಮ ಪಾಸಿಟಿವ್ ಆಲೋಚನೆಯ ಮೂಲಕ ಗೆಲ್ಲಿ. ಎಲ್ಲೇ ಇರಿ ಸೇಫ್ ಆಗಿರಿ ಎಂದು ಸಲಹೆ ನೀಡಿದ್ದಾರೆ.