Tag: Neha Hiremath Murder

  • ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಯುವತಿಗೆ ಟಾರ್ಚರ್, ಕೊಲೆ ಯತ್ನ

    ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಯುವತಿಗೆ ಟಾರ್ಚರ್, ಕೊಲೆ ಯತ್ನ

    – ನೇಹಾ ಹಿರೇಮಠ ಪ್ರಕರಣಕ್ಕೆ ವರ್ಷ ತುಂಬುತ್ತಲೇ ಅದೇ ರೀತಿಯ ಮತ್ತೊಂದು ಘಟನೆ

    ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಪ್ರಕರಣಕ್ಕೆ ವರ್ಷ ತುಂಬುತ್ತಲೇ ಅದೇ ರೀತಿಯ ಘಟನೆಯೊಂದು ಹುಬ್ಬಳ್ಳಿಯ (Hubballi) ವಿದ್ಯಾನಗರದಲ್ಲಿ (Vidya Nagar) ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಧರ್ಮೀಯ ಯುವಕನೊಬ್ಬ ಯುವತಿಗೆ ಟಾರ್ಚರ್ ನೀಡಿ, ಕೊಲೆಗೆ ಯತ್ನಿಸಿದ್ದಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

    ಸಂತ್ರಸ್ತೆ ಹಾಗೂ ಸಿರಾಜ್ ಒಂದೇ ಪಟ್ಟಣದ ನಿವಾಸಿಗಳು. ಸದ್ಯ ಸಂತ್ರಸ್ತೆ ಪ್ಯಾರಾ ಮೆಡಿಕಲ್ ಕೋರ್ಸ್ನಲ್ಲಿ ಓದುತ್ತಿದ್ದಾಳೆ. ಮೊದಲಿನಿಂದಲೂ ಸಂತ್ರಸ್ತೆಗೆ ಸಿರಾಜ್‌ನ ಪರಿಚಯವಿತ್ತು. ಪ್ರೀತಿಸುವಂತೆ ಸಂತ್ರಸ್ತೆಗೆ ಒತ್ತಾಯ ಮಾಡಿದ್ದು, ಬಳಿಕ ಟಾರ್ಚರ್ ಕೂಡ ನೀಡಿದ್ದ. ಅಲ್ಲದೇ ಸಂತ್ರಸ್ತೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.ಇದನ್ನೂ ಓದಿ:ಪ್ರತಿದಿನ ಕಿರುಕುಳ ಕೊಡ್ತಿದ್ಲು, ನಾನೇ ದೌರ್ಜನ್ಯಕ್ಕೆ ಒಳಗಾಗಿದ್ದೇನೆ – ಪತ್ನಿಯ ಕೊಲೆ ರಹಸ್ಯ ಬಿಚ್ಚಿಟ್ಟ ಟೆಕ್ಕಿ ಪತಿ!

    ರಂಜಾನ್ ಹಬ್ಬದಂದು ಸಿರಾಜ್ ಹುಬ್ಬಳ್ಳಿಯಲ್ಲಿ ಸಂತ್ರಸ್ತೆ ಓದುತ್ತಿದ್ದ ಕಾಲೇಜಿಗೆ ತೆರಳಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೆಲ್ಲದರಿಂದ ತ್ರೀವವಾಗಿ ಮನನೊಂದ ಸಂತ್ರಸ್ತೆ ಕಾಲೇಜಿನ ಹಾಸ್ಟೆಲ್‌ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಕೆಎಂಸಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಈ ಪರಿಸ್ಥಿತಿಯನ್ನು ನೆನೆದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಸಿರಾಜ್ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇನ್ನೂ ಇದು ಅನ್ಯಧರ್ಮೀಯ ಯುವಕನಿಂದ ಲವ್ ಜಿಹಾದ್, ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

    ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿ, ಪ್ರಕರಣದ ಕುರಿತು ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿಯೇ ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ (Vidya Nagar Police Station) ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ನೇಹಾ ಹಿರೇಮಠ ಪ್ರಕರಣದ ನಂತರ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ, ಪಾಲಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಹೀಗಾಗಿ ಜನರು ಪೊಲೀಸ್ ಇಲಾಖೆಯ ಜೊತೆ ಸಹಕಾರ ನೀಡದರೆ ಮುಂದೆ ಈ ರೀತಿ ಘಟನೆ ನಡೆಯದಂತೆ ಸಕಾಲದಲ್ಲಿ ತಡೆಗಟ್ಟಲು ಸಹಾಯವಾಗುತ್ತದೆ ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿ:ಉಕ್ರೇನ್‌ ಮಹಿಳೆಯರನ್ನ ರೇಪ್‌ ಮಾಡುವಂತೆ ಒತ್ತಾಯಿಸುತ್ತಿದ್ದ ರಷ್ಯಾ ಸೈನಿಕನ ಪತ್ನಿಗೆ ಕಠಿಣ ಜೈಲು ಶಿಕ್ಷೆ

  • ಹುಬ್ಬಳ್ಳಿ ನೇಹಾ ಹತ್ಯೆ ಕೇಸ್‌ – ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತಯಾರಿ‌

    ಹುಬ್ಬಳ್ಳಿ ನೇಹಾ ಹತ್ಯೆ ಕೇಸ್‌ – ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತಯಾರಿ‌

    ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ (Neha Hiremath Murder) ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತಂಡ (CID Investigation) ತಯಾರಿ ನಡೆಸಿದೆ. ಇನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕಳೆದ ಏಪ್ರಿಲ್ 18 ರಂದು ಹುಬ್ಬಳ್ಳಿ ನಗರ ಪಾಲಿಕೆ ಕಾಂಗ್ರೆಸ್‌ (congress) ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾಳ ಭೀಕರ ಕೊಲೆಯಾಗಿತ್ತು. ಬಳಿಕ ನಿರಂಜನ್‌ ಅವರು ಈ ಪ್ರಕರಣದಲ್ಲಿ ಹಂತಕ ಫಯಾಜ್ ಅಷ್ಟೇ ಅಲ್ಲ ಇನ್ನೂ ಕೆಲವರು ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಅಲ್ಲದೇ ಲವ್‌ ಜಿಹಾದ್ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮೋದಿಯಂಥ ವ್ಯಕ್ತಿಯೊಂದಿಗೆ ಚರ್ಚಿಸಲು ರಾಹುಲ್‌ ಗಾಂಧಿ ಪ್ರಧಾನಿ ಅಭ್ಯರ್ಥಿಯೇ? – ಸ್ಮೃತಿ ಇರಾನಿ ವ್ಯಂಗ್ಯ

    ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ತನಿಖೆ ನಡೆಸಲು ಸಿಐಡಿಗೆ ವಹಿಸಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳ ತಂಡ ಫಯಾಜ್ ಪೋಷಕರು ಹಾಗೂ ಇತರೇ 10 ಮಂದಿಯನ್ನು ತನಿಖೆಗೆ ಒಳಪಡಿಸಿತ್ತು.

    ಇದೀಗ ವಿಚಾರಣೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಸಿಐಡಿ ತಂಡ ಚಾರ್ಜ್‌ ಶೀಟ್‌ ಸಲ್ಲಿಸಲು ಸಕಲ ತಯಾರಿ ಮಾಡಿಕೊಂಡಿದೆ. ಇನ್ನೊಂದೇ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಯಾರಾದ್ರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರವೇ ಕಾರಣ: ಹೆಚ್‌ಡಿಕೆ

  • ನೇಹಾ ಹತ್ಯೆ ಕೇಸ್‌ – 14 ದಿನ ನ್ಯಾಯಾಂಗ ಬಂಧನಕ್ಕೆ ಫಯಾಜ್‌

    ನೇಹಾ ಹತ್ಯೆ ಕೇಸ್‌ – 14 ದಿನ ನ್ಯಾಯಾಂಗ ಬಂಧನಕ್ಕೆ ಫಯಾಜ್‌

    ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ (Neha Hiremath Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಫಯಾಜ್ (Fayaz) ವಿಚಾರಣೆಯನ್ನು ಸಿಐಡಿ (CID) ಮುಗಿಸಿದ್ದು ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿದೆ.

    ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ (CID) ಅಧಿಕಾರಿಗಳು ಒಂದನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ಅನುಮತಿ ಮೇರೆಗೆ ಆರು ದಿನ ವಶಕ್ಕೆ ಪಡೆದಿದ್ದರು. 6 ದಿನಗಳ ವಿಚಾರಣೆ ಬಳಿಕ ಇಂದು ನ್ಯಾಯಾಲಯದ ಮುಂದೆ ಹಾಜರು ಪಡೆಸಲಾಯಿತು.  ಇದನ್ನೂ ಓದಿ: ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ಬಂಧನ ಮಾಡಿದ್ಯಾಕೆ – ಇಡಿಗೆ ಸುಪ್ರೀಂ ಪ್ರಶ್ನೆ

     

    ಸಿಐಡಿ ತನಿಖೆ ವೇಗವಾಗಿ ನಡೆಯುತ್ತಿದ್ದು ಸೋಮವಾರ ಸಿಐಡಿ ಡಿಜಿಪಿ ಹುಬ್ಬಳ್ಳಿಗೆ ಆಗಮಿಸಿ ತನಿಖೆ ವರದಿ ಗಮನಿಸಿದ್ದರು.