Tag: Neha Patil

  • ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ನೇಹಾ ಪಾಟೀಲ್

    ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ನೇಹಾ ಪಾಟೀಲ್

    -ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆರ್ಟಿಸನ್ಸ್ ಬಜಾರ್‍ಗೆ ಚಾಲನೆ
    – ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪ್ರದರ್ಶನ, ಮಾರಾಟ ಮೇಳ

    ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ತೊಂದರೆಗೀಡಾಗಿರುವ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಭೇಟಿ ನೀಡಿ ಎಂದು ನಟಿ ನೇಹಾ ಪಾಟೀಲ್ ಹೇಳಿದರು.

    ಇಂದು ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಆರ್ಟಿಸನ್ಸ್ ಬಜಾರನ್ನು ಉದ್ಘಾಟಿಸಿ ಮಾತನಾಡಿದರು. ಕೊರೊನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರದ ಜನರನ್ನೂ ತೊಂದರೆಗೀಡು ಮಾಡಿದೆ. ಮಾರಕಟ್ಟೆಯ ಕೊರತೆಯನ್ನು ಅನುಭವಿಸುತ್ತಿರುವ ಕರಕುಶಲಕರ್ಮಿಗಳಿಗಂತೂ ಇದರ ಹೊಡೆತ ಹೆಚ್ಚಾಗಿಯೇ ಇದೆ. ಈ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ಹಾಗೂ ಅವರ ವಸ್ತುಗಳಿಗೆ ಅಗತ್ಯವಿರುವ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ಆರ್ಟಿಸನ್ಸ್ ಬಜಾರ್‍ಗೆ ಭೇಟಿ ನೀಡಿ ಎಂದು ನಟಿ ನೇಹಾ ಪಾಟೀಲ್ ಕರೆ ನೀಡಿದರು. ಇದನ್ನೂ ಓದಿ:  ಕೋಟಿಗಟ್ಟಲೆ ಹಣ ಸಂಭಾವನೆ ಪಡೆಯುತ್ತಾರೆ ಪರಮ ಸುಂದರಿ

    ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಆಗಸ್ಟ್ 20 ರಿಂದ ಆಗಸ್ಟ್ 29ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ. ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಇದನ್ನೂ ಓದಿ:  ದಾಖಲೆ ಆಹಾರ ಉತ್ಪಾದನೆ, ರಫ್ತಿನಲ್ಲೂ ದೇಶದ ಸಾಧನೆ: ಶೋಭಾ ಕರಂದ್ಲಾಜೆ

    ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನೇಹಾ ಪಾಟೀಲ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನೇಹಾ ಪಾಟೀಲ್

    ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಒಬ್ಬರ ನಂತರ ಒಬ್ಬರಂತೆ ವಿವಾಹವಾಗುತ್ತಿದ್ದು, ಇದೀಗ ನಟಿ ನೇಹಾ ಪಾಟೀಲ್ ಅವರು ಪ್ರಣವ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಹುಬ್ಬಳ್ಳಿ ಮೂಲದ ನಟಿ ನೇಹಾ ಪಾಟೀಲ್ ಅವರು ಸಿನಿಮಾ ಬಗ್ಗೆ ಆಸಕ್ತಿ ಇರುವ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಹುಡುಗ ಪ್ರಣವ್ ಅವರ ಜೊತೆ ಮದುವೆಯಾಗಿದ್ದಾರೆ. ಗುರುವಾರ ವಿಜಯನಗರದ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಆರತಕ್ಷತೆ ನೆರವೇರಿದ್ದು, ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಆರತಕ್ಷತೆಯಲ್ಲಿ ನಟಿ ದಿಪೀಕಾ ದಾಸ್, ಶರಣ್ಯ, ನಿರ್ದೇಶಕ ಮುರಳಿಕೃಷ್ಣ ಹಾಗೂ ನಿರೂಪಕ ರೆಹಮಾನ್ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಪಾಲ್ಗೊಂಡಿದ್ದು, ನವಜೋಡಿಗೆ ಶುಭಾಶಯ ತಿಳಿಸಿದ್ದಾರೆ.

    ನೇಹಾ ಪಾಟೀಲ್ ಅವರು ಮನೆಯಲ್ಲಿ ನೋಡಿರುವ ಹುಡುಗನ ಜೊತೆ ವಿವಾಹವಾಗಿದ್ದು, ಹಿರಿಯರ ನಿಶ್ಚಯದ ಮೇರೆಗೆ ಕಳೆದ ಅಕ್ಟೋಬರ್ 19 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನೇಹಾ ಪಾಟೀಲ್-ಪ್ರಣವ್ ನಿಶ್ಚಿತಾರ್ಥ ನಡೆದಿತ್ತು.

    ನೇಹಾ, ಸಂಕ್ರಾಂತಿ, ಸಂಯುಕ್ತ, ಸಿತಾರಾ, ವರ್ಧನ, ಟೈಟ್ಲು ಬೇಕಾ, ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೇ ಕಿರುತೆಯಲ್ಲೂ ನಟನೆ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ರಿಯಾಲಿಟಿ ಶೋನಲ್ಲೂ ನೇಹಾ ಪಾಟೀಲ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸದ್ಯಕ್ಕೆ ನೇಹಾ ನಾಲ್ಕು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಮದುವೆಯ ಬಳಿಕವೂ ಅಭಿನಯ ಮುಂದುವರಿಸಲು ನೇಹಾ ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಂಜಿನಿಯರ್ ಜೊತೆ ನಟಿ ನೇಹಾ ಪಾಟೀಲ್ ಮದ್ವೆ

    ಎಂಜಿನಿಯರ್ ಜೊತೆ ನಟಿ ನೇಹಾ ಪಾಟೀಲ್ ಮದ್ವೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಒಬ್ಬರ ನಂತರ ಒಬ್ಬರಂತೆ ವಿವಾಹವಾಗುತ್ತಿದ್ದು, ಇದೀಗ ನಟಿ ನೇಹಾ ಪಾಟೀಲ್ ಅವರು ಪ್ರಣವ್ ಜೊತೆ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ನಟಿ ನೇಹಾ ಪಾಟೀಲ್ ಅವರು ಸಿನಿಮಾ ಬಗ್ಗೆ ಆಶಕ್ತಿ ಇರುವ ಎಂಜಿನಿಯರಿಂಗ್ ಹುಡುಗ ಪ್ರಣವ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ 21 ಮತ್ತು 22 ರಂದು ನೇಹಾ ಪಾಟೀಲ್ ಕಲ್ಯಾಣ ನಡೆಯಲಿದ್ದು, ಹುಬ್ಬಳ್ಳಿ ಮೂಲದ ನೇಹಾ ಪಾಟೀಲ್ ಬೆಂಗಳೂರಿನಲ್ಲಿ ಎಂಜಿನಿಯರ್ ಪ್ರಣವ್ ಅವರನ್ನು ಮದುವೆಯಾಗುತ್ತಿದ್ದಾರೆ. ಇದೇ ತಿಂಗಳ 21 ರಂದು ಆರತಕ್ಷತೆ ನಡೆಯಲಿದ್ದು, ಮರುದಿನ ಅಂದರೆ 22 ರಂದು ವಿವಾಹ ನಡೆಯಲಿದೆ.

    ನೇಹಾ ಪಾಟೀಲ್ ಅವರು ಮನೆಯಲ್ಲಿ ನೋಡಿರುವ ಹುಡುಗನ ಜೊತೆ ವಿವಾಹವಾಗುತ್ತಿದ್ದಾರೆ. ಹಿರಿಯರ ನಿಶ್ಚಯದ ಮೇರೆಗೆ ಕಳೆದ ಅಕ್ಟೋಬರ್ 19 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನೇಹಾ ಪಾಟೀಲ್-ಪ್ರಣವ್ ನಿಶ್ಚಿತಾರ್ಥ ನಡೆದಿತ್ತು. ಈ ವರ್ಷ ದಾಪಂತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ನೇಹಾ ಸಂಕ್ರಾಂತಿ, ಸಂಯುಕ್ತ, ಸಿತಾರಾ, ವರ್ಧನ, ಟೈಟ್ಲು ಬೇಕಾ, ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೇ ಕಿರುತೆಯಲ್ಲೂ ನಟನೆ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ರಿಯಾಲಿಟಿ ಶೋನಲ್ಲೂ ನೇಹಾ ಪಾಟೀಲ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸದ್ಯಕ್ಕೆ ನೇಹಾ ನಾಲ್ಕು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಮದುವೆಯ ಬಳಿಕವೂ ಅಭಿನಯ ಮುಂದುವರಿಸಲು ನೇಹಾ ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv