Tag: Neighborhood

  • ಪಕ್ಕದ ಮನೆಯವರ ಕೋಳಿಗಳು ಕೂಗೋದ್ರಿಂದ ನಿದ್ರೆ ಮಾಡೋಕಾಗ್ತಿಲ್ಲ – ಬೆಂಗಳೂರು ಪೊಲೀಸರಿಗೆ ವ್ಯಕ್ತಿ ದೂರು

    ಪಕ್ಕದ ಮನೆಯವರ ಕೋಳಿಗಳು ಕೂಗೋದ್ರಿಂದ ನಿದ್ರೆ ಮಾಡೋಕಾಗ್ತಿಲ್ಲ – ಬೆಂಗಳೂರು ಪೊಲೀಸರಿಗೆ ವ್ಯಕ್ತಿ ದೂರು

    ಬೆಂಗಳೂರು: ಪಕ್ಕದ ಮನೆಯವರ ಕೋಳಿ ಕೂಗುವುದರಿಂದ ರಾತ್ರಿಹೊತ್ತು ನಾವು ಸರಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ. ತುಂಬಾ ತೊಂದರೆಯಾಗುತ್ತಿದೆ ಎಂದು ಬೆಂಗಳೂರು ಪೊಲೀಸರಿಗೆ (Bengaluru Police) ವ್ಯಕ್ತಿಯೊಬ್ಬ ದೂರು ನೀಡಿದ್ದಾನೆ.

    ನೆರೆಮನೆಯವರನ್ನು ದೂರಿ ನೆಮೊ ಹೆಸರಿನ ವ್ಯಕ್ತಿ ಟ್ವಿಟ್ಟರ್‌ ಖಾತೆ ಪೋಸ್ಟ್‌ ಹಾಕಿದ್ದಾನೆ. ಪೋಸ್ಟ್‌ನಲ್ಲಿ ಮನೆಯ ವೀಡಿಯೋ ಜೊತೆಗೆ ತಮಗಾಗುತ್ತಿರುವ ಸಮಸ್ಯೆ ಕುರಿತು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಂಡರ ಹಾವಳಿ – ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ರೌಡಿ

    ಜೆಪಿ ನಗರ 8ನೇ ಹಂತದಲ್ಲಿನ ಮನೆಯೊಂದರಲ್ಲಿ ಕೋಳಿ ಮತ್ತು ಬಾತುಕೋಳಿ ಸಾಕಾಣೆ ಮಾಡ್ತಾರೆ. ಬೆಳಗ್ಗೆ ಮೂರು ಗಂಟೆಗೆ ಕೋಳಿಗಳು ಒಟ್ಟಾಗಿ ಕೂಗುತ್ತವೆ. ಇದರಿಂದ ನಮ್ಮ ಮಗು ನಿದ್ರೆಯಿಂದ ಎದ್ದುಬಿಡ್ತಾನೆ.

    ಕೋಳಿ ಕೂಗೋದರಿಂದ ನಮಗೂ ನಿದ್ದೆ ಬರ್ತಿಲ್ಲ, ಅಕ್ಕಪಕ್ಕದವರಿಗೂ ನಿದ್ರೆ ಸಮಸ್ಯೆ ಎದುರಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ದೂರು ನೀಡಿ ಟ್ವೀಟ್‌ ಮಾಡಿರುವ ಆ ವ್ಯಕ್ತಿ, ಟ್ವಿಟ್ಟರ್‌ನಲ್ಲಿ ಪೊಲೀಸ್‌ ಕಮಿಷನರ್‌, ಡಿಸಿಪಿಗೆ ಟ್ಯಾಗ್‌ ಮಾಡಿ ದೂರಿದ್ದಾನೆ. ಇದನ್ನೂ ಓದಿ: ಕ್ಲಬ್, ಪಬ್‌ನಲ್ಲಿ ಮಹಿಳಾ ಸಿಬ್ಬಂದಿ ಕಡ್ಡಾಯ – ಹೊಸ ವರ್ಷಾಚರಣೆಗೆ ಪಿಂಕ್‌ಸ್ಕ್ವಾಡ್‌ ಸರ್ಪಗಾವಲು

    Live Tv
    [brid partner=56869869 player=32851 video=960834 autoplay=true]

  • ನೆರೆಮನೆ ದಂಪತಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ

    ನೆರೆಮನೆ ದಂಪತಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ

    ಲಕ್ನೋ: ನೆರೆಮನೆಯ ಗಂಡ, ಹೆಂಡತಿ ಜಗಳ ಬಿಡಿಸಲು ಹೋದ ಯುವಕನೊಬ್ಬ ಅನ್ಯಾಯವಾಗಿ ಪ್ರಾಣಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪ್ರೇಮನಗರದಲ್ಲಿ ನಡೆದಿದೆ.

    ಅರ್ಜುನ್(24) ಮೃತನಾಗಿದ್ದಾನೆ. ನವೀನ್ ಕುಮಾರ್ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ದಂಪತಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.

    ಕೆಲಸ ಕಳೆದುಕೊಂಡಿದ್ದ ನವೀನ್ ಕುಮಾರ್ ತನ್ನ ಹೆಂಡತಿ ದೀಪಮಾಲಾ ಜೊತೆಗೆ ಜಗಳವಾಡುತ್ತಿದ್ದನು. ಅವರ ಜಗಳ ಬಿಡಿಸಲು ಅರ್ಜುನ್ ಹೋಗಿದ್ದಾನೆ. ಆದರೆ ಈ ವೇಳೆ ನವೀನ್ ಕುಮಾರ್ ಅರ್ಜುನ್ ತಲೆಗೆ ಬಲವಾಗಿ ಹೊಡೆದಿದ್ದಾನೆ. ಅರ್ಜುನ್‍ಗೆ ತೀವ್ರ ರಕ್ತಸ್ರಾವವಾಗಿದೆ.

    ಗಾಯಗೊಂಡಿರುವ ಅರ್ಜುನ್‍ನನ್ನು ಅವರ ಕುಟುಂಬ ಆಸ್ಪತ್ರೆಗೆ ಕರೆದೊಯ್ಯುವ ಬದಲು ಪೊಲೀಸ್ ಠಾಣೆಗೆ ಕರೆದೊಯ್ಯಿತು. ದೂರು ನೀಡಿದ ನಂತರ, ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅರ್ಜುನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

    ಆರೋಪಿ ನವೀನ್‍ನನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ತಲೆಗೆ ಪೆಟ್ಟಾಗಿ ಮೃತಪಟ್ಟಿರುವುದು ಕಂಡುಬರುತ್ತದೆ. ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಎಂದು ಬರೇಲಿ ಎಸ್‍ಎಸ್‍ಪಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.

  • ಒಂದೇ ಕುಟುಂಬದ ಮೂವರ ನಿಗೂಢ ಸಾವು – ಕೊಲೆ ಕಮ್ ಮರ್ಡರ್ ಎಂದ ಪೊಲೀಸರು

    ಒಂದೇ ಕುಟುಂಬದ ಮೂವರ ನಿಗೂಢ ಸಾವು – ಕೊಲೆ ಕಮ್ ಮರ್ಡರ್ ಎಂದ ಪೊಲೀಸರು

    ಲಕ್ನೋ: ಒಂದೇ ಕುಟುಂಬದ ಮೂವರು ಸದಸ್ಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ಭಾನುವಾರ ನಡೆದಿದೆ.

    ಮೃತ ದೇಹವನ್ನು ಪತ್ತೆ ಮಾಡಿದ ಪೊಲೀಸರು ಮೃತರನ್ನು ನೀರಜ್ ಗೋಯಲ್, ಪತ್ನಿ ರೀಮಾ ಮತ್ತು ಮಗ ಅನ್ಮೋಲ್ ಎಂದು ಗುರುತಿಸಿದ್ದಾರೆ. ಅಲ್ಲದೆ ತನಿಖೆ ವೇಳೆ ನೀರಜ್ ಗೋಯಲ್ ಅಂಗಡಿ ವ್ಯಾಪಾರಿ ಎಂದು ತಿಳಿದುಬಂದಿದೆ.

    ನೀರಜ್ ಗೋಯಲ್ ಮನೆಯವರು ಮುಂಜಾನೆಯಾದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡ ಅವರ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲನ್ನು ಒಡೆದು ಮನೆಗೆ ನುಗ್ಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನೀರಜ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನ ಪತ್ನಿ ರೀಮಾ ಮತ್ತು ಮಗ ಅನ್ಮೋಲ್ ಹಾಸಿಗೆ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು.

    ಈ ಕುರಿತಂತೆ ಪರಿಶೀಲನೆ ನಡೆಸಿದ ಪೊಲೀಸರಿಗೆ ರಿಮಾ ಮತ್ತು ಆಕೆಯ ಮಗ ವಿಷ ಸೇವಿಸಿರುವ ವಿಚಾರ ತಿಳಿದುಬಂದಿದೆ. ಇದನೆಲ್ಲಾ ಗಮನಿಸಿದ ಪೊಲೀಸರು ಇದು ಮರ್ಡರ್ ಕಮ್ ಸೂಸೈಡ್ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

    ಪ್ರಕರಣ ಕುರಿತಂತೆ ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ನೀರಜ್ ಹಾಗೂ ರೀಮಾ ಸುಮಾರು 3 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಅವರಿಬ್ಬರ ನಡುವಿನ ಸಂಬಂಧ ಸರಿಯಾಗಿರಲಿಲ್ಲ ಎಂಬ ಸತ್ಯ ಬಹಿರಂಗಗೊಂಡಿದೆ. ಅಲ್ಲದೆ ರೀಮಾ ನೀರಜ್‍ಗಿಂತಲೂ ಮೊದಲೇ ವಿವಾಹವಾಗಿದ್ದು, ಇದು ಅವಳಿಗೆ ಎರಡನೇ ಮದುವೆಯಾಗಿದೆ ಹಾಗೂ ಅನ್ಮೋಲ್ ರೀಮಾಳ ಮೊದಲು ಮದುವೆಯಾಗಿದ್ದ ಸಮಯದಲ್ಲಿ ಜನಿಸಿದ ಮಗುವಾಗಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

  • ಕೇರಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿಕೆ: ಭೇಟಿ ನೀಡಲಿದ್ದಾರೆ ಮೋದಿ

    ಕೇರಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿಕೆ: ಭೇಟಿ ನೀಡಲಿದ್ದಾರೆ ಮೋದಿ

    ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 167ಕ್ಕೆ ಏರಿಕೆಯಾಗಿದ್ದು, ಪ್ರಧಾನಿ ಮೋದಿ ಈ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರ ಬಳಿ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

    ಕೇರಳ ಮುಖ್ಯಮಂತ್ರಿ ಜೊತೆ ನೆರೆ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಅಲ್ಲದೇ ನಾನೇ ಬಂದು ಅಲ್ಲಿನ ಪರಿಸ್ಥಿತಿಗಳನ್ನು ಪರೀಶಿಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

    ಕೇರಳ ದುರಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈಗಾಗಲೇ ಮೃತಪಟ್ಟವರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಹೇಳಿದ್ದಾರೆ. ಸುಧಾರಿಸಲು ಭಾರತೀಯ ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳನ್ನು ಕೊಚ್ಚಿನ್ ಗೆ ಕಳುಹಿಸಲಾಗಿದ್ದು, ಈಗಾಗಲೇ ಪ್ರವಾಹ ಪೀಡಿತ ಹಳ್ಳಿಗಳಿಗೆ 24 ತಂಡಗಳು ಕಾರ್ಯಚರಣೆ ಮಾಡುತ್ತಿವೆ. ಐಸಿಜಿ 1,764 ಜನರನ್ನು ರಕ್ಷಿಸಿದ್ದು, 4,688 ಜನರಿಗೆ ಸುರಕ್ಷಿತ ಸ್ಥಳಕ್ಕೆ ತಲುಪಿಸಿದೆ.

    ಶನಿವಾರ ಕಾಸರಗೋಡು ಎರ್ನಾಕುಲಂ ಮತ್ತು ಇಡುಕ್ಕಿ ಒಳಗೊಂಡಂತೆ ಇತರ 13 ಜಿಲ್ಲೆಗಳಿಗೂ ಎಚ್ಚರಿಕೆಯನ್ನು ಸೂಚಿಸಲಾಗಿದೆ. ಶುಕ್ರವಾರ ಬೆಳಗ್ಗೆ 5 ಘಟಕದ ರಾಷ್ಟ್ರೀಯ ವಿಪತ್ತು ಪಡೆ ತಿರುವನಂತಪುರಂ ತಲುಪಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ಇಂದು ಕೂಡ 35 ಸದಸ್ಯರ ತಂಡ ತಲುಪುವ ನೀರಿಕ್ಷೆ ಇದೆ. ಇದೀಗ ಐಸಿಜಿ ಪಡೆಯನ್ನು ವಂಡಿಪೆರಿಯರ್ ನಿಂದ ಮಂಜುಮಾಲಾ ಹಳ್ಳಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ 16 ಮಂದಿಯನ್ನು ರಕ್ಷಿಸಲಾಗಿದೆ. ಹಾಗೂ ಅವರಿಗೆ ಸೇವಿಸಲು ಆಹಾರ ಪದಾರ್ಥಗಳನ್ನು ನೀಡಿದ್ದಾರೆ.

    ಕೊಚ್ಚಿನ್‍ನ ವಿಮಾನ ನಿಲ್ದಾಣದಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಸ್ಥಳದಲ್ಲಿ ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ. ಕೇಂದ್ರ ವಿಮಾನಯಾನ ಖಾತೆಯ ಸಚಿವ ಸುರೇಶ್ ಪ್ರಭು ಟ್ವೀಟ್ ಮಾಡಿ, ವಿಮಾನಯಾನ ಕಂಪೆನಿಗಳ ಜೊತೆ ಮಾತನಾಡಿದ್ದೇವೆ. ನೆರೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಕ್ಕೆ ತಲುಪಬೇಕಾಗಿರುವ ಸಾಮಾಗ್ರಿಗಳನ್ನು ಉಚಿತವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ವಿಮಾನಯಾನ ಕಂಪೆನಿಗಳಿಗೆ ಧನ್ಯವಾದವನ್ನು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv