Tag: Nelson Dilip Kumar

  • ಮೂರು ಭಾಷೆಗಳಲ್ಲಿ ರಜನಿ-ಶಿವಣ್ಣ ನಟನೆಯ ಜೈಲರ್

    ಮೂರು ಭಾಷೆಗಳಲ್ಲಿ ರಜನಿ-ಶಿವಣ್ಣ ನಟನೆಯ ಜೈಲರ್

    ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

    ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ (Nelson Dilip Kumar) ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ (Shivaraj Kumar) ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ (Mohanlal), ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ. ಇದನ್ನೂ ಓದಿ:ತಮನ್ನಾ ಭಾರತೀಯ ಚಿತ್ರರಂಗದ ಶಕೀರಾ: ಸೆಕ್ಸಿ ಸ್ಟೆಪ್ ಹಾಕಿದ್ದಕ್ಕೆ ಬಿರುದು

    ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

    ಒಟ್ಟು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಮೂರು ಭಾಷೆಯ ಕಲಾವಿದರು ಚಿತ್ರದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡದ ಶಿವರಾಜ್ ಕುಮಾರ್, ತಮಿಳಿನ ಸೂಪರ್ ಸ್ಟಾರ್ ಜೊತೆ ತೆರೆ ಹಂಚಿಕೊಂಡಿರುವುದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರಿನಲ್ಲಿ ರಜನಿ-ಶಿವಣ್ಣ  ನಟನೆ ಜೈಲರ್ ಸಿನಿಮಾದ ಡಬ್ಬಿಂಗ್

    ಬೆಂಗಳೂರಿನಲ್ಲಿ ರಜನಿ-ಶಿವಣ್ಣ ನಟನೆ ಜೈಲರ್ ಸಿನಿಮಾದ ಡಬ್ಬಿಂಗ್

    ಶಿವರಾಜ್ ಕುಮಾರ್ (Shivaraj Kumar) ಮತ್ತು ರಜನಿಕಾಂತ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ತಮಿಳಿನ ಜೈಲರ್ ಸಿನಿಮಾದ ಡಬ್ಬಿಂಗ್ (dubbing) ಕಾರ್ಯ ಬೆಂಗಳೂರಿನಲ್ಲೇ ನಡೆಯುತ್ತಿದೆ. ಚಿತ್ರದ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಮಾತಿನ ಮರುಲೇಪನ ಕಾರ್ಯಕ್ಕೆಂದೇ ಬೆಂಗಳೂರಿಗೆ ಬಂದಿಳಿದಿದ್ದಾರೆ. ಶಿವಣ್ಣ ಡಬ್ಬಿಂಗ್ ಸ್ಟುಡಿಯೋದಲ್ಲಿರುವ ಫೋಟೋವನ್ನು ಎನ್.ಎಸ್. ರಾಜಕುಮಾರ್ ಅವರು ಹಂಚಿಕೊಂಡಿದ್ದಾರೆ.

    ರಜನಿಕಾಂತ್‌ (Rajanikanth) ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ಕಾಲಿವುಡ್‌ನ (Kollywood) ಬಹುನಿರೀಕ್ಷಿತ ಸಿನಿಮಾ ಇದಾಗಿದ್ದು, `ಜೈಲರ್’ (Jailer) ಸಿನಿಮಾ ಬಿಡುಗಡೆಗೆ ದಿನಾಂಕ ಕೂಡ ಘೋಷಣೆಯಾಗಿದೆ. ಮುಂದಿನ ಆಗಸ್ಟ್ 10 ರಂದು ತೆರೆಗೆ ಬರಲಿದೆ. ದಕ್ಷಿಣ ಭಾರತದ ಸ್ಟಾರ್‌ ನಟರು ನಟಿಸಿರುವ ಈ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ (Nelson Dilip Kumar) ಆಕ್ಷನ್‌ ಕಟ್‌ ಹೇಳಿದ್ದಾರೆ.

    ರಜನಿಕಾಂತ್, ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌, ಮೋಹನ್ ಲಾಲ್, ತಮನ್ನಾ ಭಾಟಿಯಾ ಇನ್ನೂ ಅನೇಕ ತಾರೆಯರು ಟೀಸರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು ಚಿತ್ರದಲ್ಲಿ ಶಿವರಾಜ್‌ ಕುಮಾರ್‌ ನಟಿಸುತ್ತಿರುವುದು ಅಭಿಮಾನಿಗಳಿಗೆ ಹಬ್ಬವಾಗಿದೆ. ಇದನ್ನೂ ಓದಿ:ಅಮ್ಮು ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಸ್ಪಷ್ಟನೆ

    ಅಲ್ಲದೇ ಶಿವಣ್ಣ ಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ (Tamil Cinema) ನಟಿಸುತ್ತಿದ್ದು, ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬಹು ತಾರಾಗಣ ಹೊಂದಿರುವ ಈ ಸಿನಿಮಾ ಪೋಸ್ಟರ್‌ ಮೂಲಕವೇ ನಿರೀಕ್ಷೆ ಹುಟ್ಟಿಸಿತ್ತು. ಇದೀಗ ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವ ಚಿತ್ರತಂಡ ಟೀಸರ್‌ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ತಲೈವಾ ನಟನೆಯ 169ನೇ ಸಿನಿಮಾ ಆಗಿರುವ ಕಾರಣ, ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

  • ರಜನಿಕಾಂತ್ ಜತೆ ಶಿವರಾಜ್ ಕುಮಾರ್ ನಟಿಸುವುದು ಪಕ್ಕಾ: ಬೆಂಗಳೂರಿನಲ್ಲಿ ‘ಬೀಸ್ಟ್’ ಡೈರೆಕ್ಟರ್

    ರಜನಿಕಾಂತ್ ಜತೆ ಶಿವರಾಜ್ ಕುಮಾರ್ ನಟಿಸುವುದು ಪಕ್ಕಾ: ಬೆಂಗಳೂರಿನಲ್ಲಿ ‘ಬೀಸ್ಟ್’ ಡೈರೆಕ್ಟರ್

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಹೊಸ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿಯನ್ನು ಈ ಹಿಂದೆ ಪಬ್ಲಿಕ್ ಟಿವಿ ಡಿಜಿಟೆಲ್ ಬ್ರೇಕ್ ಮಾಡಿತ್ತು. ಆದರೆ, ನಿರ್ದೇಶಕರು ಇನ್ನೂ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡದೇ ಇರುವ ಕಾರಣಕ್ಕಾಗಿ ಈ ಸುದ್ದಿ ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿದೆ ಎಂದು ಬರೆಯಲಾಗಿತ್ತು. ಆದರೆ, ಇದೀಗ ರಜನಿ ಜತೆ ಶಿವರಾಜ್ ಕುಮಾರ್ ಸಿನಿಮಾ ಮಾಡುವುದು ಪಕ್ಕಾ ಆಗಿದೆ. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

    ರಜನಿ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಶಿವಣ್ಣನ ಮನೆಗೆ ನೆಲ್ಸನ್ ದಿಲೀಪ್ ಕುಮಾರ್ ಭೇಟಿ ನೀಡಿ, ಕಥೆ ಮತ್ತು ಪಾತ್ರದ ವಿವರಣೆಯನ್ನೂ ನೀಡಿದ್ದಾರೆ. ಪಾತ್ರವು ತೆರೆಯ ಮೇಲೆ ತುಂಬಾ ಹೊತ್ತು ಇಲ್ಲದೇ ಇದ್ದರೂ ಅದೊಂದು ಪವರ್ ಫುಲ್ ಪಾತ್ರವಾಗಿದ್ದು, ಆ ಪಾತ್ರವನ್ನು ಶಿವರಾಜ್ ಕುಮಾರ್ ಒಪ್ಪಿದ್ದಾರೆ. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

    ಸಾಮಾನ್ಯವಾಗಿ ಶಿವರಾಜ್ ಕುಮಾರ್ ಪರಭಾಷಾ ಚಿತ್ರಗಳಲ್ಲಿ ನಟಿಸುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ಆದರೆ, ರಜನಿ ಮೇಲಿರುವ ಗೌರವದಿಂದಾಗಿ ಈ ಚಿತ್ರವನ್ನು ಒಪ್ಪಿದ್ದಾರೆ ಎನ್ನಲಾಗುತ್ತಿದೆ. ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ಮತ್ತು ರಜನಿ ನಟನೆಯ ಸಿನಿಮಾ ತೆರೆಯ ಮೇಲೆ ಬರುತ್ತಿದೆ. ಇದನ್ನೂ ಓದಿ : ಹಾಲಿವುಡ್‌ಗೆ ಹಾರಲಿದ್ದಾರೆ ಬಾಲಿವುಡ್ ರಾಧೆ ಆಲಿಯಾ ಭಟ್

    ಈ ಹಿಂದೆ ಬಾಲಕೃಷ್ಣ ನಟನೆಯ ‘ಗೌತಮಪುತ್ರ ಶಾತಕರ್ಣಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರು. ಅದನ್ನು ಬಿಟ್ಟರೆ, ಪರಭಾಷಾ ಸಿನಿಮಾಗಳಲ್ಲಿ ನಟಿಸುವಂತೆ ಅವಕಾಶ ಬಂದರೂ, ನಿರಾಕರಿಸಿದ್ದಾರೆ. ಹಾಗಾಗಿ ಸೂಪರ್ ಸ್ಟಾರ್ ನಟನೆಯ 169ನೇ ಚಿತ್ರದಲ್ಲಿ ಶಿವರಾಜ್ ಕುಮಾರ್ ಇರಲಿದ್ದಾರಾ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು.

  • ರಜನಿಕಾಂತ್ ಸಿನಿಮಾದಲ್ಲಿ ಶಿವರಾಜ್ ಕುಮಾರ್: ಏನಿದು ಭರ್ಜರಿ ಕಾಂಬಿನೇಷನ್?

    ರಜನಿಕಾಂತ್ ಸಿನಿಮಾದಲ್ಲಿ ಶಿವರಾಜ್ ಕುಮಾರ್: ಏನಿದು ಭರ್ಜರಿ ಕಾಂಬಿನೇಷನ್?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಹೊಸ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿದೆ. ಸಾಮಾನ್ಯವಾಗಿ ಶಿವರಾಜ್ ಕುಮಾರ್ ಪರಭಾಷಾ ಚಿತ್ರಗಳಲ್ಲಿ ನಟಿಸುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ಆದರೆ, ರಜನಿ ಮೇಲಿರುವ ಗೌರವದಿಂದಾಗಿ ಈ ಚಿತ್ರವನ್ನು ಒಪ್ಪಬಹುದು ಎನ್ನುತ್ತಾರೆ ಅವರು ಆಪ್ತರು. ಇದನ್ನೂ ಓದಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಈ ಹಿಂದೆ ಬಾಲಕೃಷ್ಣ ನಟನೆಯ ‘ಗೌತಮಪುತ್ರ ಶಾತಕರ್ಣಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರು. ಅದನ್ನು ಬಿಟ್ಟರೆ, ಪರಭಾಷಾ ಸಿನಿಮಾಗಳಲ್ಲಿ ನಟಿಸುವಂತೆ ಅವಕಾಶ ಬಂದರೂ, ನಿರಾಕರಿಸಿದ್ದಾರೆ. ಹಾಗಾಗಿ ಸೂಪರ್ ಸ್ಟಾರ್ ನಟನೆಯ 169ನೇ ಚಿತ್ರದಲ್ಲಿ ಶಿವರಾಜ್ ಕುಮಾರ್ ಇರಲಿದ್ದಾರಾ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು. ಇದನ್ನೂ ಓದಿ : ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನ

    ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಸದ್ಯದಲ್ಲೇ ಶಿವಣ್ಣನ ಮನೆಗೆ ನೆಲ್ಸನ್ ದಿಲೀಪ್ ಕುಮಾರ್ ಭೇಟಿ ನೀಡಿ, ಕಥೆ ಮತ್ತು ಪಾತ್ರದ ವಿವರಣೆಯನ್ನೂ ಕೊಡಲಿದ್ದಾರೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿದೆ. ಅದೊಂದು ಪವರ್ ಫುಲ್ ಪಾತ್ರವಾಗಿದ್ದು, ಆ ಪಾತ್ರವನ್ನು ಒಪ್ತಾರೆ ಎನ್ನುವ ವಿಶ್ವಾಸ ನಿರ್ದೇಶಕರದ್ದು. ಇದನ್ನೂ ಓದಿ : ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಆದರೆ, ಅಧಿಕೃತವಾಗಿ ಈ ಕುರಿತು ಎಲ್ಲಿಯೂ ಹೇಳಿಕೊಂಡಿಲ್ಲವಾದರೂ, ಶಿವರಾಜ್ ಕುಮಾರ್ ಅಥವಾ ರಜನಿಕಾಂತ್ ಅಭಿಮಾನಿಗಳು ಈ ಕುರಿತು ಕೆಲ ಮಾಹಿತಿಗಳನ್ನು ಲೀಕ್ ಮಾಡಿದ್ದಾರೆ. ಅಲ್ಲದೇ, ನೆಲ್ಸನ್ ಕೂಡ ಅತೀ ಶೀಘ್ರದಲ್ಲೇ ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಲಿದ್ದಾರೆ.