Tag: nenapirali prem

  • ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ

    ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ

    – ವಿಷ್ಣು ಸರ್ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದ ನೆನಪಿರಲಿ ಪ್ರೇಮ್

    ಬೆಂಗಳೂರು: ಅಭಿಮಾನಿಗಳ ನೋವಲ್ಲಿ ಅರ್ಥ ಇದೆ. ಇದು ನೋವಾಗುವಂತಹ ವಿಷಯವೇ. ಏಕೆ ಹೀಗಾಗಿದೆ ಅನ್ನೋದು ಗೊತ್ತಿಲ್ಲ. ಹೈಕೋರ್ಟ್ ಆದೇಶದ ಮುಂದೆ ನಾವೆಲ್ಲರು ನಿಸ್ಸಹಾಯಕರಾಗಿದ್ದೇವೆ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಾಲತಾ (Sumalatha Ambareesh) ಬೇಸರ ಹೊರಹಾಕಿದ್ದಾರೆ.

    ಮೇರುನಟ ಡಾ. ವಿಷ್ಣುವರ್ಧನ್ ಸಮಾಧಿ (Vishnuvardhan Memorial) ತೆರವು ವಿಚಾರವಾಗಿ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಅವರು, ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌

    ಅಭಿಮಾನಿಗಳ (Vishnuvardhan Fans) ನೋವಲ್ಲಿ ಅರ್ಥ ಇದೆ. ಇದು ನೋವಾಗುವಂತಹ ವಿಷಯವೇ. ಏಕೆ ಹೀಗಾಗಿದೆ ಅನ್ನೋದು ಗೊತ್ತಿಲ್ಲ. ಹೈಕೋರ್ಟ್ ಆದೇಶ. ಅದರ ಮುಂದೆ ನಾವೆಲ್ಲರು ನಿಸ್ಸಹಾಯಕರು. ನೋವನ್ನ ಮಾತ್ರ ವ್ಯಕ್ತಪಡಿಸುವ ಪರಿಸ್ಥಿತಿಯಲ್ಲಿದ್ದೀವಿ. ಒಂದು ಕಡೆ ಅಧಿಕೃತ ಸಮಾಧಿ ಮೈಸೂರಿನಲ್ಲಿ ಸುಂದರವಾಗಿ ಬಂದಿದೆ. ಅದೊಂದು ಸ್ವಲ್ಪ ಸಮಾಧಾನ ಮಾಡಿಕೊಳ್ಳುವ ಅವಕಾಶ. ತೆರವು ಮಾಡುವ ಬಗ್ಗೆ ಮುಂಚೆನೇ ತಿಳಿಸಿ ಮಾಡಬೇಕಿತ್ತು. ಅಂತ್ಯಕ್ರಿಯೆ ನಡೆದ ಜಾಗವಾದ ಕಾರಣ ಸಣ್ಣದಾಗಿಯಾದ್ರು ಅಭಿಮಾನಿಗಳಿಗೆ ತಿಳಿಸುವ ಕೆಲಸ ಮಾಡಬೇಕಿತ್ತು. ಮೊದಲೇ ಘೋಷಣೆ ಮಾಡಿದ್ರೆ, ಅಭಿಮಾನಿಗಳಿಗೆ ಸಮಾಧಾನ ಇರುತ್ತಿತ್ತು. ಇದು ತಪ್ಪು ಅಂತ ನನಗೂ ಕೂಡ ಅನ್ನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ

    ವಿಷ್ಣು ಸರ್ ನಮ್ಮ ಜೊತೆ ಜೀವಂತವಾಗಿದ್ದಾರೆ: ನೆನಪಿರಲಿ ಪ್ರೇಮ್
    ಇನ್ನೂ ಇದೇ ವಿಚಾರಕ್ಕೆ ನಟ ನೆನಪಿರಲಿ ಪ್ರೇಮ್‌ ಮಾತನಾಡಿ, ನಾನು ಕೂಡ ವಿಷ್ಣುವರ್ಧನ್‌ರ ಅಭಿಮಾನಿ. ಸಮಾಧಿ ಕಟ್ಟೋದು ಸತ್ತವರಿಗೆ. ಆದರೆ ವಿಷ್ಣು ಸರ್ ಸತ್ತಿಲ್ಲ. ನಮ್ಮಂತ ನಿಮ್ಮಂತ ಅಭಿಮಾನಿಗಳ ಮನಸ್ಸಿನಲ್ಲಿದ್ದಾರೆ. ಈ ಬಗ್ಗೆ ಅಭಿಮಾನಿಗಳು ತಲೆಕೆಡಿಸಿಕೊಳ್ಳೋದು ಬೇಡ. ಅವರು ನಮ್ಮ ಜೊತೆ ಇದ್ದಾರೆ. ಸಮಾಧಿ ನೋಡಿದಾಗ, ಅವರು ಇಲ್ಲ ಅನ್ನೋ ನೋವು ಕಾಡುತ್ತೆ. ಅವರು ನಟನೆ ಮೂಲಕ ನಮ್ಮ ಜೊತೆ ಜೀವಂತವಾಗಿ ಇದ್ದಾರೆ. ಹಾಗಾಗಿ ಅಭಿಮಾನಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳೋದು ಬೇಡ ಎಂದು ಕಿವಿ ಮಾತು ಹೇಳಿದ್ದಾರೆ.  ಇದನ್ನೂ ಓದಿ: `ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್

  • `ಸ್ಮೋಕರ್ ಶಿವ’ ಚಿತ್ರಕ್ಕೆ ನೆನಪಿರಲಿ ಪ್ರೇಮ್ ಸಾಥ್

    `ಸ್ಮೋಕರ್ ಶಿವ’ ಚಿತ್ರಕ್ಕೆ ನೆನಪಿರಲಿ ಪ್ರೇಮ್ ಸಾಥ್

    ಸಿಗರೇಟ್ ಸೇದುವ ಚಟದಿಂದ ಏನೇನೆಲ್ಲ ಅನಾಹುತಗಳಾಗಬಹುದು ಎಂಬುವುದನ್ನು ಇಟ್ಟುಕೊಂಡು ಕಥಾಹಂದರ ಹೆಣೆಯಲಾಗಿರುವ ಚಿತ್ರ ಸ್ಮೋಕರ್ ಶಿವ. ಶಾರದಾ ಫಿಲಂಸ್ ಅಡಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಎಂ.ಶಿವ ಅವರು ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ.ಇದನ್ನೂ ಓದಿ: `ಮಹಾವತಾರ ಸಿನಿಮಾಟಿಕ್ ಯೂನಿವರ್ಸ್’ ಅನಾವರಣ – ಹೊಂಬಾಳೆ ಫಿಲ್ಮಸ್ ದಿಟ್ಟ ಹೆಜ್ಜೆ

     

    ಇತ್ತೀಚೆಗೆ ಸ್ಮೋಕರ್ ಶಿವ  ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಈ ಹಿಂದೆ ಧ್ರುವ ಸರ್ಜಾ ಅವರು ಪೋಸ್ಟರ್ ರಿಲೀಸ್ ಮಾಡಿದ್ದರೆ, ಈಗ ನೆನಪಿರಲಿ ಪ್ರೇಮ್ ಅವರು ಮುಹೂರ್ತದಲ್ಲಿ ಕ್ಲ್ಯಾಪ್‌ ಮಾಡಿ ಶುಭ ಹಾರೈಸಿದರು. ಬಿಗ್ ಬಜೆಟ್‌ನಲ್ಲಿ ತಯಾರಾಗುತ್ತಿರುವ ಅದ್ದೂರಿ ಚಲನಚಿತ್ರ ಇದಾಗಿದೆ. ಅಭಯ್ ಹರಿ ಅವರು ಸ್ಮೋಕರ್ ಶಿವ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಮುಂಬೈನಲ್ಲಿ ಆಕ್ಟಿಂಗ್ ಪಾಠ ಕಲಿತು, ಸುಮಾರು ವರ್ಷಗಳಿಂದ ಕಿರುತೆರೆ, ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡು ಬಂದಿದ್ದ ಅಭಯ್ ಹರಿ ಅವರು ಇದೇ ಮೊದಲ ಬಾರಿಗೆ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಉದಯಲೀಲಾ ಚಿತ್ರದ ಛಾಯಾಗ್ರಾಹಕರು. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಇನ್ನೂ ಸಂಗೀತ ನಿರ್ದೇಶಕರು ಫೈನಲ್ ಆಗಿಲ್ಲ.

    ನಾಯಕ ಶಿವ ಒಂಥರಾ ಚೈನ್ ಸ್ಮೋಕರ್. ಅಂತವನ ಬಾಳಲ್ಲಿ ಒಂದು ಸಿಗರೇಟ್ ಏನೆಲ್ಲ ಆಟವಾಡಿತು, ಆತನನ್ನು ಎಂಥ ಕಷ್ಟಕ್ಕೆ ದೂಡಿತು ಎಂಬುದನ್ನು ನಿರ್ದೇಶಕ ಶಿವ ಅವರು ಈ ಚಿತ್ರದ ಮೂಲಕ ಹೇಳಿದ್ದಾರೆ. ಚಿತ್ರದಲ್ಲಿ ವಿಲನ್ ಪಾತ್ರವೂ ಹೀರೋಗೆ ಸಮನಾಗಿ ಬರುತ್ತದೆ. ಆ ಪಾತ್ರಕ್ಕೆ ಹಾಗೂ ಸ್ನೇಹಿತನ ಪಾತ್ರಕ್ಕೆ ನಟ ರವಿಶಂಕರ್ ಹಾಗೂ ಸೋನು ಸೂದ್ ಅವರನ್ನು ಅಪ್ರೋಚ್ ಮಾಡಿದ್ದೇವೆ. ಇನ್ನೂ ಮಾತುಕತೆ ನಡೆಯುತ್ತಿದೆ. ಇನ್ನೂ ಬೆಂಗಳೂರು, ಮಂಗಳೂರು ಅಥವಾ ಕುಂದಾಪುರ, ಬೀದರ್ ಕೋಟೆ ಸುತ್ತಮುತ್ತ ಚಿತ್ರದ ಶೂಟಿಂಗ್ ನಡೆಸುವ ಪ್ಲ್ಯಾನ್‌ ಇದೆ. ಹೇಗಾದರೂ ಮಾಡಿ ಈ ವರ್ಷದ ಕೊನೆಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಬೇಕೆಂಬ ಯೋಜನೆ ನಮಗಿದೆ ಎಂದು ಚಿತ್ರತಂಡ ತಿಳಿಸಿದೆ.ಇದನ್ನೂ ಓದಿ: ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

     

  • Maha Kumbh Mela: ಪುಣ್ಯ ಸ್ನಾನ ಮಾಡಿದ ನೆನಪಿರಲಿ ಪ್ರೇಮ್

    Maha Kumbh Mela: ಪುಣ್ಯ ಸ್ನಾನ ಮಾಡಿದ ನೆನಪಿರಲಿ ಪ್ರೇಮ್

    ದೇಶದ ಕೋಟ್ಯಂತರ ಜನ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ (Maha Kumbh Mela) ಭಾಗವಹಿಸಿ ಪುನೀತರಾಗುತ್ತಿದ್ದಾರೆ. ಹೀಗಿರುವಾಗ ಕನ್ನಡದ ನಟ ‘ನೆನೆಪಿರಲಿ’ ಪ್ರೇಮ್ (Nenapirali Prem) ಕೂಡ ಪುಣ್ಯ ಸ್ನಾನ ಮಾಡಿದ್ದಾರೆ. ಈ ಕುರಿತು ನಟ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.

    ‘ಕುಂಭ ಮೇಳ ಪುಣ್ಯ ಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ’ ಎಂದು ಪ್ರೇಮ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಪುಣ್ಯ ಸ್ನಾನದ ಫೋಟೋ ಕೂಡ ನಟ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದ ಪೋಸ್ಟರ್ ಔಟ್

     

    View this post on Instagram

     

    A post shared by Prem Nenapirali (@premnenapirali)

    ಇನ್ನೂ ಇತ್ತೀಚೆಗೆ ಕನ್ನಡದ ಕಲಾವಿದರಾದ ರಾಜ್ ಬಿ ಶೆಟ್ಟಿ, ನಿರೂಪಕಿ ಅನುಶ್ರೀ, ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ, ಬಿಗ್ ಬಾಸ್ ಸಾನ್ಯ ಅಯ್ಯರ್ ಸೇರಿದಂತೆ ಅನೇಕರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು.

  • ಚಿತ್ರರಂಗದ ಏಳಿಗೆಗಾಗಿ ಪೂಜೆ- ಊಟಕ್ಕೆ ಕುತ್ತು ಬಂದಾಗ ದೇವರ ಮೊರೆ ಹೋಗುತ್ತೀವಿ ಎಂದ ನೆನಪಿರಲಿ ಪ್ರೇಮ್

    ಚಿತ್ರರಂಗದ ಏಳಿಗೆಗಾಗಿ ಪೂಜೆ- ಊಟಕ್ಕೆ ಕುತ್ತು ಬಂದಾಗ ದೇವರ ಮೊರೆ ಹೋಗುತ್ತೀವಿ ಎಂದ ನೆನಪಿರಲಿ ಪ್ರೇಮ್

    ನ್ನಡ ಚಿತ್ರರಂಗ (Sandalwood) ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಇಂದು (ಆ.14) ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ನಡೆಯುತ್ತಿರುವ ಅಶ್ಲೇಷ ಬಲಿ ಪೂಜೆಯಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಈ ವೇಳೆ, ನಮ್ಮ ಊಟಕ್ಕೆ ಕುತ್ತು ಬಂದಾಗ ನಾವು ಭಗವಂತನ ಮೊರೆ ಹೋಗುಬೇಕು ಎಂದು ನೆನಪಿರಲಿ ಪ್ರೇಮ್ (Nenapirali Prem) ಮಾತನಾಡಿದ್ದಾರೆ. ಇದನ್ನೂ ಓದಿ:ಪವಿತ್ರಾಗೌಡ ಚಪ್ಪಲಿಯಲ್ಲೂ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ

    ಪೂಜೆ ಕಾರ್ಯದಲ್ಲಿ ಭಾಗಿಯಾದ ನೆನಪಿರಲಿ ಪ್ರೇಮ್ ಮಾತನಾಡಿ, ಜೀವನದಲ್ಲಿ ಏನೇ ಕಷ್ಟ ಬಂದರೂ ಫಸ್ಟ್ ನಾವು ಹೋಗೋದೇ ದೇವರ ಹತ್ತಿರ. ಚಿತ್ರರಂಗಕ್ಕೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ ಇದನ್ನು ಮಾಡಲಾಗುತ್ತಿದೆ. ಕನ್ನಡ ಸಿನಿಮಾಗಳು ಸೋಲುತ್ತಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು ಬರುತ್ತಿಲ್ಲ. ನಮ್ಮ ಊಟಕ್ಕೆ ಕುತ್ತು ಬಂದಾಗ ನಾವು ಭಗವಂತನ ಮೊರೆ ಹೋಗಬೇಕು. ಹಾಗಾಗಿ ಪೂಜೆ ಹವನ ಮಾಡುತ್ತಿದ್ದೇವೆ ಎಂದಿದ್ದಾರೆ. ಇದೇ ವೇಳೆ ದರ್ಶನ್ ಭೇಟಿಯ ಬಗ್ಗೆ ಮಾತನಾಡಿ, ಸದ್ಯದಲ್ಲೇ ಅವರನ್ನು ಭೇಟಿಯಾಗೋದಾಗಿ ತಿಳಿಸಿದರು. ಇದನ್ನೂ ಓದಿ:ದರ್ಶನ್ ಪ್ರಕರಣ: ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ

    ರಾಕ್‌ಲೈನ್ ವೆಂಕಟೇಶ್ ನೇತೃತ್ವದಲ್ಲಿ ಈ ಪೂಜೆ ನಡೆಯುತ್ತಿದ್ದು, ಹಿರಿಯ ನಟಿ ಗಿರಿಜಾ ಲೋಕೇಶ್, ಶರಣ್, ಲವ್ಲಿ ಸ್ಟಾರ್ ಪ್ರೇಮ್, ನಟಿ ರಾಗಿಣಿ ದ್ವಿವೇದಿ, ಅಭಿಷೇಕ್ ಅಂಬರೀಶ್, ಗುರುಕಿರಣ್, ಪದ್ಮಜಾ ರಾವ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

  • ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ: ಪಾತ್ರದ ಬಗ್ಗೆ ನೆನಪಿರಲಿ ಪ್ರೇಮ್ ಮಾತು

    ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ: ಪಾತ್ರದ ಬಗ್ಗೆ ನೆನಪಿರಲಿ ಪ್ರೇಮ್ ಮಾತು

    ಪ್ಪ ಐ ಲವ್ ಯೂ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ (Nenapirali Prem) ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ. ನಿನ್ನೆ ಪ್ರೇಮ್ ಜನ್ಮದಿನ.. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಇಡೀ ಚಿತ್ರತಂಡ ಭಾಗಿಯಾಗಿ ತಾಯಿಯ ಆಶೀರ್ವಾದ ಪಡೆದುಕೊಂಡರು.

    ಬಳಿಕ ನೆನಪಿರಲಿ ಪ್ರೇಮ್ ಮಾತನಾಡಿ, ಇಂದು ನಾನು ಹುಟ್ಟಿದ ದಿನ . ಈ ದಿನ ಮುಹೂರ್ತ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. 2.0 ರೀಬ್ರ್ಯಾಂಡಿಂಗ್ ಅಂತಾ ನನ್ನ ಸ್ನೇಹಿತರು ಕೇಳಿದರು. ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೇವು. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ. ಸಿನಿಮಾದಲ್ಲಿ ಸ್ಟ್ರೀಕ್ಟ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಸ್ಟಾರ್ ಕಾಸ್ಟ್ ಡಿಸೈಡ್ ಆಗಿಲ್ಲ. ಮುಂದಿನ ದಿನಗಳಲ್ಲಿ ಮುಹೂರ್ತ ಮಾಡಬೇಕು ಎಂದುಕೊಂಡಿದ್ದೇವು. ಆದರೆ ನಿಮ್ಮ ಬರ್ತ್ ಡೇ ಒಳ್ಳೆ ಸಂದರ್ಭ ಸರ್ ಅಂತಾ ನಿರ್ದೇಶಕರು ಹೇಳಿದ್ದರು. ಹೀಗಾಗಿ ಈ ದಿನ ಮುಹೂರ್ತ ಮಾಡಿದ್ದೇವೆ ಎಂದರು.

    ತೇಜೇಶ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಸರ್ ಸೂಟ್ ಆಗಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಸರ್ ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳಾತ್ಯಂಕ್ಕೆ ಶೂಟಿಂಗ್ ಗೆ ಹೊರಡಲಿದ್ದೇವೆ ಎಂದು ಮಾಹಿತಿ ನೀಡಿದರು.

    ನೆನಪಿರಲಿ ಪ್ರೇಮ್ ಮತ್ತೆ ಪೊಲೀಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೊಲೀಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೊಲೀಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.

    ಯುವ ಪ್ರತಿಭೆ ತೇಜಸ್ ಬಿ.ಕೆ (Tejas) ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಈ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ. ಮುಹೂರ್ತ ನೆರವೇರಿಸಿರುವ ಚಿತ್ರತಂಡ ಈ ತಿಂಗಳ್ಯಾಂತಕ್ಕೆ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

  • ‘ಪಿಂಕ್ ನೋಟ್ ‘ಹುಡುಕಿಕೊಂಡು ದುಬೈಗೆ ಹೊರಟು ನಿಂತ ನೆನಪಿರಲಿ ಪ್ರೇಮ್

    ‘ಪಿಂಕ್ ನೋಟ್ ‘ಹುಡುಕಿಕೊಂಡು ದುಬೈಗೆ ಹೊರಟು ನಿಂತ ನೆನಪಿರಲಿ ಪ್ರೇಮ್

    ನೆನಪಿರಲಿ ಪ್ರೇಮ್  (Nenapirali Prem) ದುಬೈಗೆ ಹಾರಿದ್ದಾರೆ. ಜೊತೆಗೆ ಜಾಕಿ ಸಿನಿಮಾ ಖ್ಯಾತಿಯ ಭಾವನಾ (Bhavana) ಅವರನ್ನು ಅವರು ಕರೆದುಕೊಂಡು ಹೋಗಿದ್ದಾರೆ. ಅಷ್ಟಕ್ಕೂ ಪ್ರೇಮ್ ದುಬೈ ವಿಮಾನ ಏರಿದ್ದು, ಪಿಂಕಿ ನೋಟ್ ಹುಡುಕುವುದಕ್ಕಾಗಿ ಎನ್ನುವುದು ವಿಶೇಷ. ಅಂದರೆ, ಪಿಂಕ್ ನೋಟ್ (Pink Note) ಸಿನಿಮಾದ ಶೂಟಿಂಗ್ ದುಬೈನಲ್ಲಿ (Dubai) ನಡೆಯಲಿದ್ದು, ಭಾವನಾ ಮತ್ತು ಪ್ರೇಮ್ ಜೊತೆಯಾಗಿ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

    ಈ ಸಿನಿಮಾದ ಮೂಲಕ ಭಾವನಾ ಮತ್ತೆ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ಭಜರಂಗಿ 2 ಸಿನಿಮಾದ ನಂತರ ಅವರಿಗೆ ಮತ್ತಷ್ಟು ಅವಕಾಶಗಳು ಬರುತ್ತಿದ್ದು, ಇದೀಗ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ.

    ದುಡ್ಡಿನ ಹಿಂದೆ ಬಿದ್ದಾಗ ಮನುಷ್ಯ ಏನೆಲ್ಲ ಆಗುತ್ತಾನೆ ಎನ್ನುವ ಕುರಿತಾದ ಕಥಾ ಹಂದರ ಈ ಸಿನಿಮಾದಲ್ಲಿದ್ದು, ಮಂಗಳೂರಿನಲ್ಲಿ ನಡೆದ ನೈಜ ಘಟನೆಯನ್ನು ಈ ಸಿನಿಮಾಗಾಗಿ ಬಳಸಿಕೊಂಡಿದ್ದಾರಂತೆ ನಿರ್ದೇಶಕರು. ಮಧ್ಯಮ ವರ್ಗದ ಕುಟುಂಬದಲ್ಲಿ ನಡೆದ ಘಟನೆ ಇದಾಗಿದ್ದು, ಭಾವನಾ ಕೂಡ ಮಧ್ಯಮ ವರ್ಗದ ಅಕ್ಕ-ತಂಗಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

    ದಿಗಂತ್ ಅಲಿಯಾಸ್ ರಕ್ಷಣ್ ಈ ಸಿನಿಮಾದ ನಿರ್ದೇಶಕರಾಗಿದ್ದು, ಅಮ್ಮ ಎಂಟರ್ ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ತಯಾರಾಗಲಿದೆ. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮುಹೂರ್ತವಾಗಿದ್ದು, ಮೊದಲ ದೃಶ್ಯಕ್ಕೆ ಶಿವಮೂರ್ತಿ ಮುರಘಾ ಶರಣರು ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

     

    ‘2010ರಂದು ಮಂಗಳೂರಿನಲ್ಲಿ ನಡೆದ ಘಟನೆಯನ್ನು ನಿರ್ದೇಶಕರು ಹೇಳಿದಾಗ ಥ್ರಿಲ್ ಆಯಿತು. ದ್ವಿಪಾತ್ರ ಮಾಡುವುದು ಸವಾಲಿನ ಕೆಲಸವಾದರೂ, ಇಂತಹ ಪಾತ್ರದಲ್ಲಿ ನಟಿಸುವುದು ಥ್ರಿಲ್ ಅನಿಸುತ್ತದೆ’ ಎಂದಿದ್ದಾರೆ ಭಾವನಾ. ಪಾತ್ರದ ಹಿನ್ನೆಲೆ ಮತ್ತು ಕಥೆಯ ಗುಟ್ಟವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಶ್ರೀನಿವಾಸ್ ಪ್ರಭು, ಪದ್ಮಜರಾವ್ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಬಹುತೇಕ ಕಥೆಯು ಅರಬ್ ಪ್ರಾಂತ್ಯದಲ್ಲಿ ನಡೆಯುವುದರಿಂದ ದುಬೈನ ರಸಾಸೆಲ್ ಖೈಮ್ ದಲ್ಲಿ ಶೇಕಡಾ ಅರವತ್ತರಷ್ಟು ಶೂಟಿಂಗ್ ಮಾಡುತ್ತಾರಂತೆ ನಿರ್ದೇಶಕರು.

  • ಕಾವೇರಿ ವಿವಾದ : ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ನೆನಪಿರಲಿ ಪ್ರೇಮ್

    ಕಾವೇರಿ ವಿವಾದ : ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ನೆನಪಿರಲಿ ಪ್ರೇಮ್

    ಮೊನ್ನೆಯಷ್ಟೇ ಕಾವೇರಿ (Cauvery) ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ (Nenapirali Prem) ,ಇಂದು ಪತ್ರ  (Letter) ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ (Blood) ಪ್ರಧಾನಿಗೆ (Narendra Modi)  ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದಾರೆ ಪ್ರೇಮ್.

    ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದು. ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ ವಹಿಸಿ, ನಮ್ಮ ನೆಲದ ರೈತರಿಗೆ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಅವರು ಬರೆದಿದ್ದಾರೆ. ಇದನ್ನೂ ಓದಿ:ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ಪತ್ರ ಬರೆಯುತ್ತಿರುವ ವಿಡಿಯೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್ ಮತ್ತು ಪಾಸಿಟಿವ್ ಎರಡೂ ಕಾಮೆಂಟ್ಸ್ ಅಲ್ಲಿ ನೋಡಬಹುದಾಗಿದೆ. ಕೆಲವರು ಭಾವನಾತ್ಮಕವಾಗಿ ಸ್ಪಂದಿಸಿದರೆ, ಇನ್ನೂ ಕೆಲವರು ಕಾನೂನಿನ ಪಾಠವನ್ನೂ ಮಾಡಿದ್ದಾರೆ.

     

    ಕರವೇ (ನಾರಾಯಣ ಗೌಡ ಬಣ) ಇಂದು ರಕ್ತದಲ್ಲಿ ಬರೆದ ಒಂದು ಲಕ್ಷ ಪತ್ರವನ್ನು ಪ್ರಧಾನಿಗೆ ಬರೆಯುವಂತೆ ಕರೆಕೊಟ್ಟಿತ್ತು. ನಟಿ ಅಶ್ವಿನಿ ಗೌಡ ಸೇರಿದಂತೆ ಹಲವರು ಈ ಪತ್ರ ಚಳಿವಳಿಯಲ್ಲಿ ಭಾಗಿಯಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಪರಂವಃ’ ಸಿನಿಮಾದ 2ನೇ ಹಾಡು ರಿಲೀಸ್ ಮಾಡಿದ ಲವ್ಲಿ ಸ್ಟಾರ್ ಪ್ರೇಮ್

    ‘ಪರಂವಃ’ ಸಿನಿಮಾದ 2ನೇ ಹಾಡು ರಿಲೀಸ್ ಮಾಡಿದ ಲವ್ಲಿ ಸ್ಟಾರ್ ಪ್ರೇಮ್

    ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ  ಚಿತ್ರ ‘ಪರಂವಃ’ (Paramvah). ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ‌. ಇತ್ತೀಚೆಗೆ ಪರಂವಃ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ ‘ನೂರಾರೂ ರಂಗಿರೊ’ ಎಂಬ ಹಾಡನ್ನು (Song) ಜನಪ್ರಿಯ ನಟ ಲವ್ಲೀ ಸ್ಟಾರ್ ಪ್ರೇಮ್ (Nenapirali Prem) ಬಿಡುಗಡೆ ಮಾಡಿದರು. ನಿರ್ದೇಶಕ ಜಡೇಶ್ ಕುಮಾರ್ ಸಹ ಅತಿಥಿಗಳಾಗಿ ಆಗಮಿಸಿದ್ದರು.

    ಈ ಸಿನಿಮಾ ತಂಡದ ಬಗ್ಗೆ ತಿಳಿದು ಖುಷಿಯಾಯಿತು. ಸುಮಾರು 200 ಜನ ಬಂಡವಾಳ ಹಾಕಿ ನಿರ್ಮಾಣ ಮಾಡಿರುವ ಸಿನಿಮಾವಿದು. ಇದು ನಿಜಕ್ಕೂ ಖುಷಿಯ ವಿಚಾರ. ನನಗೆ ಸಿನಿಮಾ ಬಗ್ಗೆ ಆಸಕ್ತಿಯಿರುವ ಪ್ರೇಕ್ಷಕರೆ ನಿರ್ಮಾಣ ಮಾಡಿದ್ದಾರೆ ಅನಿಸುತ್ತದೆ. ಈಗ ಹೊಸತಂಡದ ಹೊಸಪ್ರಯತ್ನವನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಆ ಸಾಲಿಗೆ ಪರಂವಃ ಚಿತ್ರ ಸಹ ಸೇರಲಿ ಎಂದು ನಟ ಪ್ರೇಮ್ ಮನಸ್ಸಾರೆ ಹಾರೈಸಿದರು.

    ಪ್ರೇಮ್ ಸಿಡ್ಗಲ್ ನಾಯಕನಾಗಿ ಮತ್ತು ಮೈತ್ರಿ ಜೆ. ಕಶ್ಯಪ್ ನಾಯಕಿಯಾಗಿ ಅಭಿನಯಿಸಿದ್ದಾರೆ‌.  ಗಣೇಶ್ ಹೆಗ್ಗೋಡು, ನಾಜರ್, ಶ್ರುತಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.  ಸಂತೋಷ್ ಕೈದಾಳ  (Santhosh Kaidala) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌. ಇದನ್ನೂ ಓದಿ:ನಟಿ ತಮನ್ನಾ ಹಾಟ್‌ ಫೋಟೋಗೆ ಸ್ವೀಟ್‌ 16 ಎಂದ ನೆಟ್ಟಿಗರು

    ಶಿವನ ಢಮರುಗದಿಂದ ಹೊಮ್ಮುವ   ನಾದಕ್ಕೆ ಪರಂವಃ ಎನ್ನುತ್ತಾರೆ. ನಮ್ಮ ಸಿನಿಮಾದ ಕಥೆಗೆ ಈ ಪದ  ಸೂಕ್ತವೆಂಬ ಕಾರಣಕ್ಕೆ ಇದೇ ಹೆಸರಿಟ್ಟಿದ್ದೇವೆ.   ಸಿನಿಮಾದಲ್ಲಿ ವೀರಗಾಸೆ ಕಲೆಯ ಬಗ್ಗೆ ಮತ್ತು ತಂದೆ-ಮಗನ ಸಂಬಂಧದ ಬಗ್ಗೆ ಪ್ರಧಾನವಾಗಿ ಹೇಳಲಾಗಿದೆ. ಅಷ್ಟೇ  ಅಲ್ಲದೆ, ಪ್ರೀತಿ, ಸ್ನೇಹ,  ಸೆಂಟಿಮೆಂಟ್, ಥ್ರಿಲ್ಲರ್, ಆ್ಯಕ್ಷನ್ ಹೀಗೆ ಎಲ್ಲ ಥರದ ವಿಷಯಗಳು ಪರಂವಃ ಚಿತ್ರದಲ್ಲಿದೆ.  ಪೀಪಲ್ಸ್ ವಲ್ಡ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನಟ ಪ್ರೇಮ್, ನಿರ್ದೇಶಕ ಗುರು ದೇಶಪಾಂಡೆ ಅವರು ಸೇರಿದಂತೆ ಸ್ಯಾಂಡಲ್ ವಡ್ ನ ಗಣ್ಯರು ಹಾಗೂ ದಕ್ಷಿಣ ಭಾರತದ ಅನೇಕ ಸೆಲೆಬ್ರಿಟಿಗಳು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಮನತುಂಬಿ ಬಂದಿದೆ. ಸದ್ಯದಲ್ಲೇ ನಮ್ಮ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.ಎಂದರು ನಿರ್ದೇಶಕ ಸಂತೋಷ್ ಕೈದಾಳ.

    ಚಿತ್ರದ ನಾಯಕ ಪ್ರೇಮ್ ಸಿಡ್ಗಲ್ (Prem Sidgal) , ನಾಯಕಿ ಮೈತ್ರಿ  (Maitri) ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ   ಪರಂವಃ ಸಿನಿಮಾ ಕುರಿತು ಮಾತನಾಡಿದರು.

  • ನೆನಪಿರಲಿ ಪ್ರೇಮ್ ನಟನೆಯ ಹೊಸ ಸಿನಿಮಾಗೆ ಮುಹೂರ್ತ

    ನೆನಪಿರಲಿ ಪ್ರೇಮ್ ನಟನೆಯ ಹೊಸ ಸಿನಿಮಾಗೆ ಮುಹೂರ್ತ

    ಜೂಟಾಟ, ಗುಬ್ಬಚ್ಚಿ ಸಿನಿಮಾ ನಿರ್ದೇಶಿಸಿರುವ ಅಥರ್ವ ಆರ್ಯ (Atharva Arya) ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಚಿತ್ರಕ್ಕೆ ನಿನ್ನೆಯಷ್ಟೇ ಮುಹೂರ್ತವಾಗಿದೆ. ಚಿತ್ರದಲ್ಲಿ ಸಂಜಯ್ (Sanjay) ಹಾಗೂ ಜೀವಿತ ವಸಿಷ್ಠ (Jivita Vasistha) ನಾಯಕ ನಾಯಕಿಯಾಗಿ ನಟಿಸುತ್ತಿದ್ದು, ನೆನಪಿರಲಿ ಪ್ರೇಮ್ (Nenapirali Prem) ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಚಿತ್ರದ ಮುಹೂರ್ತ ಆಚರಿಸಿಕೊಂಡ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

    ತಬಲ ನಾಣಿ ಮಾತನಾಡಿ ಮೊದಲ ಬಾರಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಸಮಾನ ಮನಸ್ಕ ಸ್ನೇಹಿತರೆಲ್ಲರೂ ಸೇರಿ ಕೆ ಆರ್ ಎಸ್ ಪ್ರೊಡಕ್ಷನ್ಸ್ ಎಂಬ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇವೆ. ನೆನಪಿರಲಿ ಪ್ರೇಮ್ ಚಿತ್ರದ ಪ್ರಮುಖ ಪಾತ್ರವೊಂದನ್ನು ಮಾಡುತ್ತಿದ್ದಾರೆ ಜೊತೆಗೆ ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಈ ಚಿತ್ರದ ಕಥೆ ಮತ್ತು ನಿರ್ದೇಶನವನ್ನು ಅಥರ್ವ ಆರ್ಯ ಮಾಡುತ್ತಿದ್ದು, ಸಂಭಾಷಣೆಯನ್ನು ನಾನು ಹಾಗೂ ಅಥರ್ವ ಆರ್ಯ ಬರೆದಿದ್ದೇವೆ. ಚಿತ್ರದಲ್ಲಿ ತಂದೆ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ 45ರಿಂದ 60 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ಬಗ್ಗೆ ತಬಲ ನಾಣಿ ಮಾಹಿತಿ ಹಂಚಿಕೊಂಡ್ರು. ಇದನ್ನೂ ಓದಿ: ಸಾನ್ಯ ಅಯ್ಯರ್‌ ಬೆರಳಲ್ಲಿ ಶೆಟ್ಟಿ ವಧು ಧರಿಸುವ ರಿಂಗ್ ನೋಡಿ ಶಾಕ್‌ ಆದ ನೆಟ್ಟಿಗರು

    ನಟ ನೆನಪಿರಲಿ ಪ್ರೇಮ್ ಮಾತನಾಡಿ ತಬಲ ನಾಣಿ ಮತ್ತು ಸ್ನೇಹಿತರು ಕೆ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಮೊದಲ ಬಾರಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಪ್ರೊಡಕ್ಷನ್ ಮೊದಲ ಸಿನಿಮಾದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು ಎನ್ನೋದು ಅವರ ಆಸೆ ಅದರಂತೆ ಹೊಸ ನಿರ್ದೇಶಕ, ನಟ, ನಟಿಗೆ ಅವಕಾಶ ನೀಡಿದ್ದಾರೆ. ನಾನೂ ಕೂಡ ಈ ಚಿತ್ರದಲ್ಲಿ ಒಂದು ಪಾತ್ರ ಮಾಡುತ್ತಿದ್ದೇನೆ. ಚಿತ್ರದ ಕಥೆ ಕೇಳಿ ತುಂಬಾ ಇಷ್ಟ ಆಯ್ತು. ಸಿನಿಮಾದಲ್ಲಿ ತುಂಬಾ ಚೆನ್ನಾಗಿರೋ ಟ್ವಿಸ್ಟ್ ಇದೆ. ನನ್ನ ಪಾತ್ರ ತುಂಬಾ ಇಂಟ್ರಸ್ಟಿಂಗ್ ಆಗಿದೆ ಯಾರಿಗೂ ಈ ಪಾತ್ರ ಬಿಟ್ಟುಕೊಡಬಾರದು ನಾನೇ ಮಾಡಬೇಕು ಎಂದು ಇಷ್ಟಪಟ್ಟು ಮಾಡುತ್ತಿರುವ ಪಾತ್ರವಿದು. ಹೊಸ ಕಲಾವಿದರು, ನಿರ್ದೇಶಕರಿಗೆ ಪ್ರೋತ್ಸಾಹ ನೀಡಿ ಎಂದು ನೆನಪಿರಲಿ ಪ್ರೇಮ್ ಚಿತ್ರತಂಡಕ್ಕೆ ಶುಭ ಹಾರೈಸಿದ್ರು.

    ನಿರ್ದೇಶಕ ಅಥರ್ವ ಆರ್ಯ ಮಾತನಾಡಿ ತಬಲ ನಾಣಿ ಸರ್ ಜೊತೆ 12 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ತುಂಬಾ ದಿನಗಳಿಂದ ಸಿನಿಮಾ ಮಾಡಬೇಕು ಎಂದು ಇಬ್ಬರು ಪ್ಲ್ಯಾನ್ ಮಾಡುತ್ತಿದ್ವಿ. ಈಗ ಕಾಲ ಕೂಡಿ ಬಂದಿದೆ. ಇದು ಕಂಟೆಂಟ್ ಬೇಸ್ಡ್ ಸಿನಿಮಾ. ತಂದೆಯ ಮಹತ್ವ ಸಾರುವ ಸಿನಿಮಾ. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ತಂದೆಗೆ ಬೆಲೆ ಸಿಗದೇ ಇದ್ದಾಗ, ಆತ ಕಡೆಗಣನೆಗೆ ಒಳಗಾದಾಗ ಆತ ಯಾವ ರೀತಿ ಸಫರ್ ಮಾಡುತ್ತಾನೆ ಅನ್ನೋದು ಚಿತ್ರದ ಒನ್ ಲೈನ್ ಕಹಾನಿ. ತಬಲ ನಾಣಿ ತಂದೆ ಪಾತ್ರವನ್ನು ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಡಾನ್ಸರ್ ಆಗಿರುವ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ನೆನಪಿರಲಿ ಪ್ರೇಮ್ ಕೂಡ ಚಿತ್ರದ ಪ್ರಮುಖ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ. ಸಿನಿಮಾದ ಟೈಟಲ್ ಬಗ್ಗೆ ಸದ್ಯದಲ್ಲೇ ಅಪ್ಡೇಟ್ ನೀಡಲಾಗುವುದು ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಾಯಕ ನಟ ಸಂಜಯ್ ಮಾತನಾಡಿ ಈ ಚಿತ್ರದ ಪಾತ್ರ ಸಿಕ್ಕಿರೋದು ಲವ್ಲಿ ಸ್ಟಾರ್ ಪ್ರೇಮ್ ಅವರಿಂದ ಅವರಿಗೂ ಹಾಗೂ ತಬಲ ನಾಣಿ ಸರ್ ಗೆ ಧ್ಯನ್ಯವಾದಗಳು. ಒಂದು ಅದ್ಭುತ ಸಿನಿಮಾ. ಚಿತ್ರದಲ್ಲಿ ಅವಕಾಶ ಕೊಟ್ಟಿದ್ದಕ್ಕೆ ತುಂಬಾ ಥ್ಯಾಂಕ್ಸ್. ಹೊಸಬರಿಗೆ ಸಹಕಾರ ನೀಡಿ ಪ್ರೋತ್ಸಾಹಿಸಿ ಎಂದು ತಿಳಿಸಿದ್ರು. ಚಿತ್ರದ ನಾಯಕಿ ಜೀವಿತ ವಸಿಷ್ಠ ಮಾತನಾಡಿ ಕೆ ಆರ್ ಎಸ್ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದೆ. ಒಂದೊಳ್ಳೆ ಕಾನ್ಸೆಪ್ಟ್ ಚಿತ್ರದಲ್ಲಿದೆ. ನನ್ನ ಪಾತ್ರ ತುಂಬಾ ಚೆನ್ನಾಗಿದೆ. ನಟನೆಗೆ ತುಂಬಾ ಅವಕಾಶವಿದೆ. ಅವಕಾಶ ನೀಡಿದ್ದಕ್ಕಾಗಿ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಧನ್ಯವಾದಗಳು ಎಂದು ತಿಳಿಸಿದ್ರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಚ್ಚಿ ಬೀಳುವಂತಿದೆ ನಟ ಪ್ರೇಮ್‌ ಪುತ್ರಿಯ ಮೊದಲ ಚಿತ್ರದ ಸಂಭಾವನೆ

    ಬೆಚ್ಚಿ ಬೀಳುವಂತಿದೆ ನಟ ಪ್ರೇಮ್‌ ಪುತ್ರಿಯ ಮೊದಲ ಚಿತ್ರದ ಸಂಭಾವನೆ

    ಸ್ಯಾಂಡಲ್‌ವುಡ್‌ಗೆ (Sandalwood) ಇದೀಗ ಸ್ಟಾರ್ ಕಿಡ್‌ಗಳ ಹಾವಳಿ ಜೋರಾಗಿದೆ. `ನೆನಪಿರಲಿ’ ಪ್ರೇಮ್ (Nenapirali Prem) ಅವರ ಮುದ್ದು ಮಗಳು ಚಂದನವನಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಯುವ ನಟಿಯ ಸಂಭಾವನೆ ಕೇಳಿದ್ರೆ ನಿಜಕ್ಕೂ ನೀವು ಅಚ್ಚರಿಪಡ್ತೀರಾ.

    ಗಾಂಧಿನಗರದಲ್ಲಿ ಇದೀಗ ಮುದ್ದು ಕಲಾವಿದೆಯ ಪಾದಾರ್ಪಣೆಯಾಗುತ್ತಿದೆ. ಡಾಲಿ ನಿರ್ಮಾಣದ `ಟಗರು ಪಲ್ಯ’ (Tagaru Palya) ಚಿತ್ರದ ಮೂಲಕ ನೆನಪಿರಲಿ ಪ್ರೇಮ್ ಮಗಳು ಅಮೃತಾ (Amrutha Prem) ನಟ ನಾಗಭೂಷಣಗೆ ನಾಯಕಿಯಾಗಿ ಬರುತ್ತಿದ್ದಾರೆ. ಸಾಮಾನ್ಯವಾಗಿ ಮೊದಲ ಚಿತ್ರಕ್ಕೆ ಅವಕಾಶ ಕೊಡುವುದೇ ದೊಡ್ಡ ವಿಚಾರ. ನಟಿಯ ಮೊದಲ ಚಿತ್ರದ ಸಂಭಾವನೆ ಕೇಳಿದ್ರೆ ಬೆಚ್ಚಿ ಬೀಳುವಂತಿದೆ. ಚೊಚ್ಚಲ ಚಿತ್ರಕ್ಕೆ ಅಮೃತಾ ಪ್ರೇಮ್‌ಗೆ 10 ಲಕ್ಷ ರೂ. ಸಂಭಾವನೆ ಕೊಟ್ಟಿದ್ದಾರಂತೆ ಡಾಲಿ. ಇದನ್ನೂ ಓದಿ: ಅಕ್ಷಯ್ ಕುಮಾರ್ ನಟನೆಯ ಮರಾಠಿ ಚಿತ್ರದ ಫಸ್ಟ್ ಲುಕ್ ರಿಲೀಸ್

    ಡಾಲಿ ನಿರ್ಮಾಣದ ಮೂರನೇ ಸಿನಿಮಾ `ಟಗರುಪಲ್ಯ’ ಚಿತ್ರಕ್ಕೆ ಅಮೃತಾಗೆ 10 ಲಕ್ಷ ರೂ. ಸಂಭಾವನೆ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನಟನೆಯ ಯಾವುದೇ ಅನುಭವವಿಲ್ಲದ ಹೊಸ ಪ್ರತಿಭೆಗೆ ಇಷ್ಟೊಂದು ಸಂಭಾವನೆನಾ ಎಂಬ ಚರ್ಚೆ ಗಾಂಧಿನಗರದಲ್ಲಿ ಜೋರಾಗಿದೆ. ಇನ್ನೂ ತಮ್ಮ ಚೊಚ್ಚಲ ಚಿತ್ರದ ಮೂಲಕ ಮುಂದಿನ ದಿನಗಳಲ್ಲಿ ಗಟ್ಟಿ ನಾಯಕಿಯಾಗಿ ನಿಲ್ಲುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]