Tag: Netaji Subash Chandra Boses

  • ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಈ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದ್ದೇ ಆದರೆ, ಇಡೀ ದೇಶವು ರಾಷ್ಟ್ರೀಯ ನಾಯಕನಿಗೆ ಗೌರವ ಸಲ್ಲಿಸಲು, ದೇಶ ನಾಯಕ್ ದಿವಸ್ ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋಂಕಿನಿಂದ ಗುಣಮುಖರಾಗಿ 3 ತಿಂಗಳ ನಂತರ ಲಸಿಕೆ, ಬೂಸ್ಟರ್ ಡೋಸ್: ಕೇಂದ್ರ

    ದೇಶದ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ನೇತಾಜಿಯವರು ದೇಶಭಕ್ತಿ, ಧೈರ್ಯ, ನಾಯಕತ್ವ, ಏಕತೆ ಮತ್ತು ಭ್ರಾತೃತ್ವದ ದ್ಯೋತಕರಾಗಿದ್ದಾರೆ. ಮುಂದಿನ ಪೀಳಿಗೆಗೆ ನೇತಾಜಿ ಸ್ಫೂರ್ತಿಯಾಗಿದ್ದು, ಇದು ಹೀಗೆಯೇ ಮುಂದುವರಿಯುತ್ತದೆ. ದೇಶನಾಯಕ್ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದಂದು ಅವರಿಗೆ ಗೌರವಾರ್ಪಣೆ. ರಾಷ್ಟ್ರೀಯ ಮತ್ತು ಜಾಗತಿಕ ಐಕಾನ್, ಬಂಗಾಳದಿಂದ ನೇತಾಜಿಯವರ ಉದಯವು ಭಾರತೀಯ ಇತಿಹಾಸದಲ್ಲಿ ಸಾಟಿಯಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

    ಪಶ್ಚಿಮ ಬಂಗಾಳ ಸರ್ಕಾರವು ನೇತಾಜಿಯವರ ಜನ್ಮದಿನವನ್ನು ದೇಶ್ ನಾಯಕ್ ದಿನವೆಂದು ಆಚರಿಸುತ್ತದೆ. ನಾವು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ನೇತಾಜಿ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿ. ಇಡೀ ರಾಷ್ಟ್ರವು ರಾಷ್ಟ್ರೀಯ ನಾಯಕನಿಗೆ ಗೌರವ ಸಲ್ಲಿಸಲು ಮತ್ತು ದೇಶ್ ನಾಯಕ್ ದಿನವನ್ನು ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಇದು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ