Tag: Netaji Subhash Chandra Bose

  • ಸಾವರ್ಕರ್  ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಸಾವರ್ಕರ್ ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಬಾಲಿವುಡ್ ನಟ, ನಿರ್ದೇಶಕ ರಣದೀಪ್ ಹೂಡಾ (Randeep Hooda) ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ಚೆನ್ನೈ ಟೀಮ್ ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ವಿಘ್ನೇಶ್ ಶಿವನ್ ಪೋಸ್

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

    ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

    ಕೋಲ್ಕತ್ತಾ: ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವಾದ ಕಾರಣ ಎಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಕೋಲ್ಕತ್ತಾ ಬಳಿಯ ಪಶ್ಚಿಮ ಬಂಗಾಳದ ಭಟ್ಪರಾ ಪಟ್ಟಣದಲ್ಲಿ ನೇತಾಜಿ ಕಾರ್ಯಕ್ರಮದಲ್ಲಿ ನಡೆಯುತ್ತಿ ವೇಳೆ ಟಿಎಂಸಿ (ತೃಣಮೂಲ ಕಾಂಗ್ರೆಸ್) ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದೆ.

    ಭಾಟ್ಪಾರಾದಲ್ಲಿ ನೇತಾಜಿಗೆ ಪುಷ್ಪ ನಮನ ಸಲ್ಲಿಸುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮೇಲೆ ಕಲ್ಲು ತೂರಿದರು. ಪರಿಣಾಮ ಈ ಘರ್ಷಣೆಯನ್ನು ತಡೆಯಲು ಅರ್ಜುನ್ ಸಿಂಗ್ ಅವರ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಬ್ಯಾರಕ್‍ಪುರ ಸಂಸದ ಅರ್ಜುನ್ ಸಿಂಗ್ ಆರೋಪಿಸಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!

    ಈ ಗಲಾಟೆಯ ವೇಳೆ ಪೊಲೀಸ್ ವಾಹನ ಸೇರಿದಂತೆ ಎರಡು ಕಾರುಗಳನ್ನು ಧ್ವಂಸಗೊಳಿಸಲಾಗಿದೆ. ಬಿಜೆಪಿ ಸಂಸದರನ್ನು ರಕ್ಷಿಸಿ ಸುರಕ್ಷಿತವಾಗಿ ಅವರ ನಿವಾಸಕ್ಕೆ ಕಳುಹಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಧ್ರುಬಾ ಜ್ಯೋತಿ ಡೇ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.

    ಏನಿದು ಘಟನೆ?
    ಈ ಕುರಿತು ಅರ್ಜುನ್ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಂದು ಬೆಳಗ್ಗೆ 10:30ಕ್ಕೆ, ನಮ್ಮ ಶಾಸಕ ಪವನ್ ಸಿಂಗ್ ನೇತಾಜಿಗೆ ಶ್ರದ್ಧಾಂಜಲಿ ಸಲ್ಲಿಸಲು ಹೋಗಿದ್ದರು. ಟಿಎಂಸಿಯ ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿದ್ದು, ಅವರ ಮೇಲೆ ಗುಂಡು ಹಾರಿಸಿದರು. ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ನಾನು ಅಲ್ಲಿಗೆ ಹೋದಾಗ ನನ್ನ ಮೇಲೂ ದಾಳಿ ಮಾಡಿದರು. ನನ್ನ ಕಾರಿನ ಮೇಲೆಯೂ ದಾಳಿ ಮಾಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಜಿಲ್ಲೆಗೊಂದು ಮಠ ಮಾಡಲಿ ಮೂರನೇ ಪಂಚಮಸಾಲಿ ಪೀಠಕ್ಕೆ ನಮ್ಮ ಬೆಂಬಲ: ವಚನಾನಂದ ಸ್ವಾಮೀಜಿ

    ಶನಿವಾರ ರಾತ್ರಿ, ಪಾನಿಹಟಿ ಪ್ರದೇಶದ ಬಿಟಿ ರಸ್ತೆಯಲ್ಲಿರುವ ಟಿಎಂಸಿ ಪಕ್ಷದ ಕಚೇರಿಯ ಮೇಲೆ ಬಿಜೆಪಿ ಕಾರ್ಯಕರ್ತರು ಬಾಂಬ್‍ಗಳನ್ನು ಎಸೆದು ದಾಳಿ ಮಾಡಿದ್ದಾರೆ. ಈ ಹಿನ್ನೆಲೆ ಅವರು ಬಿಜೆಪಿ ಮೇಲೆ ದಾಳಿ ಮಾಡಿಸಿದ್ದಾರೆ. ಎರಡೂ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದರು.

  • ಬೋಸ್‍ರ ಆಜಾದ್ ಹಿಂದ್ ಫೌಜ್‍ನಿಂದ ಸ್ವಾತಂತ್ರ್ಯ: ಅರ್ಧೇಂದು ಬೋಸ್

    ಬೋಸ್‍ರ ಆಜಾದ್ ಹಿಂದ್ ಫೌಜ್‍ನಿಂದ ಸ್ವಾತಂತ್ರ್ಯ: ಅರ್ಧೇಂದು ಬೋಸ್

    ಕೊಲ್ಕತ್ತಾ: ಮಹಾತ್ಮ ಗಾಂಧೀಜಿ ಅವರ ಶಾಂತಿ ಚಳುವಳಿಯೊಂದರಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತಿಲ್ಲ. ಬದಲಾಗಿ ಸುಭಾಷ್ ಚಂದ್ರ ಬೋಸ್‍ರ ಆಜಾದ್ ಹಿಂದ್ ಫೌಜ್ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ನೇತಾಜಿಯವರ ಸೋದರಳಿಯ ಅರ್ಧೇಂದು ಬೋಸ್ ತಿಳಿಸಿದರು.

    ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರನ್ನು ಬದಿಗಿಟ್ಟಿದ್ದಾರೆ. ಬೋಸ್‍ರ ಕಥೆಯನ್ನು ಇತಿಹಾಸ ಪುಸ್ತಕಗಳಲ್ಲಿ ಪ್ರಕಟವಾಗದಂತೆ ನಿರ್ಬಂಧ ಹೇರಿದ್ದರು ಎಂದು ಆರೋಪಿಸಿದರು.

    ನೇತಾಜಿ ಹಾಗೂ ಜವಾಹರಲಾಲ್ ನೆಹರು ಅವರ ನಡುವೆ ಸಾಕಷ್ಟು ಪೈಪೋಟಿ ಇತ್ತು. ಇದರಿಂದಾಗಿ ನೇತಾಜಿಯನ್ನು ಇತಿಹಾಸದ ಪುಟದಿಂದ ತೆಗೆದು ಹಾಕಲು ನಿರ್ಧರಿಸಲಾಯಿತು. ಅದಕ್ಕೆ ಇತಿಹಾಸ ಪುಸ್ತಕಗಳಲ್ಲಿ ಸುಭಾಷ್ ಚಂದ್ರ ಬೋಸ್ ಬಗ್ಗೆ ಹೆಚ್ಚು ಬರೆದಿಲ್ಲ. ಇದರಿಂದಾಗಿ ಯುವಕರಿಗೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಅವರ ಆಜಾದ್ ಹಿಂದ್ ಫೌಜ್ ಬಗ್ಗೆ ಅರಿವಿಲ್ಲ ಎಂದು ವಿಷಾದಿಸಿದರು.

    ಜನವರಿ 23, 1897 ರಂದು ಜನಿಸಿದ ನೇತಾಜಿ ಅವರು ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಅವರು ಸ್ವಾತಂತ್ರ್ಯಕ್ಕಾಗಿ ಆಜಾದ್ ಹಿಂದ್ ಫೌಜ್ ಅನ್ನು ಸ್ಥಾಪಿಸಿದ್ದರು. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರ ಜ.23ನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದೆ. ಜೊತೆಗೆ ಈ ವರ್ಷದಿಂದ ಭಾರತ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಗಣರಾಜ್ಯೋತ್ಸವವನ್ನು ಜ.23ರಿಂದಲೇ ಆಚರಿಸುತ್ತಿದೆ. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

  • ಗಣರಾಜ್ಯೋತ್ಸವ ಆಚರಣೆಗೆ ರಾಜಪಥದಲ್ಲಿ ಸಿದ್ಧತೆ

    ಗಣರಾಜ್ಯೋತ್ಸವ ಆಚರಣೆಗೆ ರಾಜಪಥದಲ್ಲಿ ಸಿದ್ಧತೆ

    ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಇಡೀ ದೇಶವೇ ಗಣರಾಜ್ಯೋತ್ಸವದ ಸಿದ್ಧತೆಯಲ್ಲಿ ತೊಡಗಿದೆ. ದೆಹಲಿಯ ರಾಜಪಥನಲ್ಲಿ ಪರೇಡ್‌ಗಾಗಿ ಸೈನಿಕರು ಪೂರ್ಣ ಉಡುಗೆಯಲ್ಲಿ ಪೂರ್ವಾಭ್ಯಾಸ ಮಾಡಿದವು. ಇನ್ನೊಂದೆಡೆ ಹೆಲಿಕಾಪ್ಟರ್‌ಗಳು ಇಂದು ದೆಹಲಿಯ ರಾಜ್‌ಪಥ್‌ನ ಮೇಲೆ ಹಾರಾಡಿದವು.

    ಪ್ರತಿ ವರ್ಷ ಪರೇಡ್ ಸ್ಥಳದಲ್ಲಿ ನಡೆಯುವ ಪೂರ್ವ ಸಿದ್ಧತೆಯನ್ನು ವೀಕ್ಷಿಸಲು ಪ್ರೇಕ್ಷಕರು ಜಮಾಯಿಸಿದ್ದರು. ಈ ದೃಶ್ಯವು ರಾಜಪಥ ಸ್ಥಳದಿಂದ ರಾಷ್ಟ್ರಪತಿ ಭವನದವೆರೆಗೂ ನೋಡಬಹುದಾಗಿತ್ತು. ನಾಲ್ಕು ಮಿಗ್-17 ಹೆಲಿಕಾಪ್ಟರ್‌ಗಳು ವೈನ್‌ಗ್ಲಾಸ್ ರಚನೆಯಲ್ಲಿ ಹಾರಾಡುತ್ತಿದ್ದವು. ಇದನ್ನು ನೋಡಲು ಜನಸಂದಣಿಯೇ ತುಂಬಿತ್ತು. ರಾಷ್ಟ್ರ ಲಾಂಛನ ಹಾಗೂ ಸೇವಾ ಚಿಹ್ನೆಗಳು ಈ ಹೆಲಿಕಾಪ್ಟರ್ ಮೇಲಿದ್ದವು.

    ಭಾರತೀಯ ಸೈನಿಕರು ಗಣರಾಜ್ಯೋತ್ಸವಕ್ಕಾಗಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಪರೇಡ್ ಮಾಡುವ ಮೂಲಕ ಗಮನ ಸೆಳೆದರು. ಮೊದಲ ಬಾರಿಗೆ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವವು ಇಂದಿನಿಂದಲೇ ಪ್ರಾರಂಭಗೊಳ್ಳಲಿದೆ. ಪ್ರತಿ ವರ್ಷ ಜನವರಿ 24 ರಂದು ಪ್ರಾರಂಭಗೊಳ್ಳುತ್ತಿತ್ತು. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್‌ನಲ್ಲಿ ಸ್ವಾತಂತ್ರ‍್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್‌ರ ಪ್ರತಿಮೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

  • ದೇಶದ ಏಕತೆಗಾಗಿ ಶ್ರಮಿಸಿದ ಸುಭಾಷ್ ಚಂದ್ರ ಬೋಸ್: ವಿ.ಸೋಮಣ್ಣ

    ದೇಶದ ಏಕತೆಗಾಗಿ ಶ್ರಮಿಸಿದ ಸುಭಾಷ್ ಚಂದ್ರ ಬೋಸ್: ವಿ.ಸೋಮಣ್ಣ

    ಬೆಂಗಳೂರು: ನೇತಾಜಿ ಸುಭಾಷ್‌ ಚಂದ್ರ ಬೋಸ್ ಅಪ್ರತಿಮ ದೇಶಭಕ್ತ. ಅವರು ರಾಷ್ಟ್ರದ ಉದ್ದಗಲಕ್ಕೂ ಸಂಚರಿಸಿ ಭಾರತೀಯರ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸಿದ್ದಾರೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.

    ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೇತಾಜಿ ಸುಭಾಷ್ ಚಂದ್ರ ಬೋಸ್ ಉದ್ಯಾನವನದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ನಡೆದ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯೋತ್ಸವ ಹಾಗೂ ಪರಾಕ್ರಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣದ ಹಂಗು ತೊರೆದು ಶ್ರಮಿಸಿದ ನೇತಾಜಿ ಅವರ ಜೀವನದ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಭಾರತವನ್ನು ಬ್ರಿಟಿಷ್ ಮುಕ್ತನ್ನಾಗಿಸಿ ಸ್ವಾತಂತ್ರ‍್ಯ ದೊರಕಿಸಿಕೊಡುವಲ್ಲಿ ತಮ್ಮದೇ ಆದ ಉಪಾಯಗಳನ್ನು ಹೂಡಿ ಯಶಸ್ವಿಯಾಗಿದ್ದರು. ಇದರ ಪರಿಣಾಮವಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮೊದಲ ಬಾರಿಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟು ಅಲ್ಲಿ ತಿರಂಗಾ ಹಾರಿಸುವಲ್ಲಿ ಅವರು ಯಶಸ್ವಿಯಾಗಿದ್ದರು ಎಂದು ತಿಳಿಸಿದರು.

    ನೇತಾಜಿ ಅವರ ಸಂದೇಶಗಳು ಇಂದಿಗೂ ಅನುಕರಣೀಯ. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಇಂಥ ಅನೇಕರ ತ್ಯಾಗ ಮತ್ತು ಬಲಿದಾನದಿಂದ ನಾವೆಲ್ಲ ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಘೋಷಿಸಿದ್ದಾರೆ. ಅಪ್ರತಿಮ ನಾಯಕರೊಬ್ಬರ ಪುತ್ಥಳಿ ನಿರ್ಮಿಸುವುದರ ಬಗ್ಗೆ ಹೇಳಿದ ಅವರಿಗೆ ಭಾರತ ಋಣಿಯಾಗಿದೆ. ನೇತಾಜಿ ಅವರ ಸ್ಮರಣೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನೇತಾಜಿ ಅವರ ಹೆಸರಿನ ಉದ್ಯಾನವನ ನಿರ್ಮಿಸಿ ಅವರ ಪುತ್ಥಳಿ ಸ್ಥಾಪಿಸುವ ಮೂಲಕ ಅಪ್ರತಿಮ ವೀರನಿಗೆ ಋಣಿಯಾಗಿದ್ದೇವೆ. ಇನ್ನು ಮುಂದಿನ ನೇತಾಜಿ ಜಯಂತ್ಯೋತ್ಸವದ ವೇಳೆಗೆ ಅವರ ನುಡಿಗಳ- ಸಾಧನೆಗಳ ಬಗ್ಗೆ ಪುಸ್ತಕ ಹೊರತಂದು ಲಕ್ಷಕ್ಕೂ ಅಧಿಕ ಜನತೆಗೆ ಉಚಿತವಾಗಿ ಹಂಚುವ ಕಾರ್ಯ ನಡೆಯಲಿದೆ ಎಂದು ಹೇಳಿದರು.

    ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಮಾತನಾಡಿ, ನೇತಾಜಿ ಅವರ ಮೇಲೆ ಬಹುಮುಖ್ಯವಾಗಿ ಪ್ರಭಾವ ಬೀರಿದವರು ಸ್ವಾಮಿ ವಿವೇಕಾನಂದರು. ಮಹಾತ್ಮ ಗಾಂಧಿ ಅವರಿಗೆ ನೇತಾಜಿ ಅವರ ಅಪ್ರತಿಮ ಶಕ್ತಿಯ ಬಗ್ಗೆ ಅದಮ್ಯ ನಂಬಿಕೆಯಿತ್ತು. ಆದರೆ ಗಾಂಧಿಯವರದ್ದು ಶಾಂತಿಪಥ, ನೇತಾಜಿಯವರದ್ದು ಕ್ರಾಂತಿಪಥ. ಸ್ವಾತಂತ್ರ್ಯ ಗಳಿಸಲು ರಕ್ತವನ್ನು ಬೇಕಿದ್ದರೂ ಕೊಡುತ್ತೇನೆ. ಸ್ವಾತಂತ್ರ‍್ಯ ಪುಕ್ಕಟೆಯಾಗಿ ದೊರಕುವುದಲ್ಲ ಎಂದು ಹೇಳುವುದರ ಮೂಲಕ ದೇಶದ ಜನತೆಯನ್ನು ನೇತಾಜಿ ಬಡಿದೆಬ್ಬಿಸಿದ್ದರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ಕಾರ್ಯಕ್ರಮದಲ್ಲಿ ನೇತಾಜಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ, ನಿವೃತ್ತ ಸೈನಿಕರಾದ ಧನಂಜಯ್ ಮತ್ತು ಕೃಷ್ಣಗೌಡರವರಿಗೆ ಸನ್ಮಾನಿಸಲಾಯಿತು. ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್, ವಿ.ಸೋಮಣ್ಣ ಪ್ರತಿಷ್ಠಾನದ ಕೋಶಾಧ್ಯಕ್ಷ ಡಾ.ನವೀನ್ ಸೋಮಣ್ಣ, ಮಂಡಲ ಬಿ.ಜೆ.ಪಿ.ಅಧ್ಯಕ್ಷ ವಿಶ್ವನಾಥಗೌಡರು, ಹಿರಿಯ ರಾಜಕೀಯ ಮುಖಂಡರು, ಕನ್ನಡ ಪರ ಹೋರಾಟಗಾರ ಪಾಲನೇತ್ರ, ನಿಕಟಪೂರ್ವ ಬಿಬಿಎಂಪಿ ಸದಸ್ಯ ಶಿಲ್ಪ ಶ್ರೀಧರ್, ಶ್ರೀಧರ್, ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

  • ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

    ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

    ನವದೆಹಲಿ: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ 125ನೇ ಜನ್ಮದಿನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್‌ಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಇಂಡಿಯಾ ಗೇಟ್ ಬಳಿ ಸ್ಥಾಪನೆಗೊಂಡ ಅತಿ ದೊಡ್ಡ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ, ಈ ಬಗ್ಗೆ ಟ್ವಿಟ್ಟರ್‌ಲ್ಲಿ ಹಂಚಿಕೊಂಡಿದ್ದಾರೆ.

    ನೇತಾಜಿ ಸುಭಾಷ್ ಚಂದ್ರಬೋಸ್ ಅವರು ನಮ್ಮ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವರ ತ್ಯಾಗಕ್ಕೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಈ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರನ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಮೂಲಕ ಅವರಿಗೆ ಭಾರತ ಋಣಿಯಾಗಿದೆ ಎಂದು ಟ್ವೀಟ್ ಮಾಡಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪ ಸಮರ್ಪಣೆ ಮಾಡುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಇಡೀ ರಾಷ್ಟ್ರವು ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಮಯದಲ್ಲಿ ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂಬ ಮಾಹಿತಿ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಇದು ಅವರಿಗೆ ಭಾರತದ ಋಣದ ಸಂಕೇತವಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೂ, ಅವರ ಹೊಲೊಗ್ರಾಮ್ ಪ್ರತಿಮೆ ಅದೇ ಸ್ಥಳದಲ್ಲಿ ಇರುತ್ತದೆ. ಜನವರಿ 23ರಂದು ನೇತಾಜಿ ಅವರ ಹುಟ್ಟುಹಬ್ಬದ ದಿನ ಹೊಲೊಗ್ರಾಮ್ ಪ್ರತಿಮೆಯನ್ನು ನಾನು ಅನಾವರಣಗೊಳಿಸುತ್ತೇನೆ. ಈ ಮುನ್ನ ಕಿಂಗ್ ಜಾರ್ಜ್ ವಿ ಅವರ ಪ್ರತಿಮೆ ಈ ಸ್ಥಳದಲ್ಲಿತ್ತು. ಆದರೆ ಅದನ್ನು 1968ರಲ್ಲಿ ತೆಗೆದುಹಾಕಲಾಗಿತ್ತು. ಇದೀಗ ನೇತಾಜಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ ಎಂದು ಇತ್ತೀಚೆಗೆ ಮೋದಿ ತಿಳಿಸಿದ್ದರು. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ನೇತಾಜಿ ಅವರ ಜನ್ಮದಿನವನ್ನು ದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸಲಾಗುವುದು ಎಂದು ಸರ್ಕಾರ ಘೋಷಿಸಿತು. ಅಷ್ಟೇ ಅಲ್ಲ, ಈ ವರ್ಷ, ಗಣರಾಜ್ಯೋತ್ಸವ ಆಚರಣೆಗಳು ಸಾಮಾನ್ಯವಾಗಿ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಪ್ರಾರಂಭವಾಗುತ್ತಿದೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ

  • ಇಂಡಿಯಾ ಗೇಟ್‍ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಭವ್ಯ ಪ್ರತಿಮೆ ಅನಾವರಣ: ಮೋದಿ

    ಇಂಡಿಯಾ ಗೇಟ್‍ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಭವ್ಯ ಪ್ರತಿಮೆ ಅನಾವರಣ: ಮೋದಿ

    ನವದೆಹಲಿ: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವುದಾಗಿ ತಿಳಿಸಿದ್ದಾರೆ.

    ಸುಭಾಷ್ ಚಂದ್ರ ಬೋಸ್ ಅವರು 1897ರ ಜನವರಿ 23ರಂದು ಜನಿಸಿದ್ದು, ಭಾನುವಾರ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್‍ನಲ್ಲಿ ಸ್ಥಾಪಿಸುವುದಾಗಿ ಮೋದಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೂ, ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಇರುತ್ತದೆ. ಜನವರಿ 23ರಂದು ನೇತಾಜಿ ಅವರ ಹುಟ್ಟುಹಬ್ಬದ ದಿನ ಹೊಲೊಗ್ರಾಮ್ ಪ್ರತಿಮೆಯನ್ನು ನಾನು ಅನಾವರಣಗೊಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ

    ಈ ಮುನ್ನ ಕಿಂಗ್ ಜಾರ್ಜ್ ವಿ ಅವರ ಪ್ರತಿಮೆ ಈ ಸ್ಥಳದಲ್ಲಿತ್ತು. ಆದರೆ ಅದನ್ನು 1968ರಲ್ಲಿ ತೆಗೆದುಹಾಕಲಾಗಿತ್ತು. ಇದೀಗ ನೇತಾಜಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.

    ಇಡೀ ರಾಷ್ಟ್ರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್‍ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‍ನಲ್ಲಿ ಸ್ಥಾಪಿಸಲಾಗುತ್ತಿದೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಭಾರತ ಅವರಿಗೆ ಚಿರಋಣಿಯಾಗಿರುತ್ತದೆ ಎಂಬುವುದನ್ನು ಇದು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಡಾನ್ಸ್ ಮಾಡಿದ ವಧುವಿನ ಕೆನ್ನೆಗೆ ಹೊಡೆದ ವರ- ಮದುವೆ ಮುರಿದು ಬಿತ್ತು

    ಈ ಮುನ್ನ ಬಿಜೆಪಿ ನಾಯಕರಾಗಿರುವ ಚಂದ್ರಬೋಸ್ ಅವರು ದೆಹಲಿಯ ಇಂಡಿಯಾ ಗೇಟ್ ಎದುರು ನೇತಾಜಿ ಅವರ ಪ್ರತಿಮೆ ಸ್ಥಾಪಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಕರೆನ್ಸಿ ನೋಟುಗಳ ಮೇಲೆ ನೇತಾಜಿ ಅವರ ಭಾವ ಚಿತ್ರವನ್ನು ಮುದ್ರಿಸಲು ಮತ್ತು ಜನವರಿ 23ರಂದು ರಾಷ್ಟ್ರೀಯ ರಜಾ ದಿನವೆಂದು ಘೋಷಿಸುವಂತೆ ಪ್ರಧಾನಿ ಬಳಿ ಮನವಿ ಮಾಡಿದ್ದರು.

  • ನೇತಾಜಿ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭ

    ನೇತಾಜಿ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭ

    ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭಿಸಲು ಸರ್ಕಾರ ಮುಂದಾಗಿದೆ.

    ಗಣರಾಜ್ಯೋತ್ಸವನ್ನು ಭಾರತದಲ್ಲಿ ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುತ್ತದೆ. ಆದರೆ ಈಗ ನೇತಾಜಿ ಹುಟ್ಟುಹಬ್ಬವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ಮಾಧ್ಯಮಗಳಿಗೆ ತಿಳಿಸಿದೆ. ಇದನ್ನೂ ಓದಿ:  ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ನರೇಂದ್ರ ಮೋದಿ ಸರ್ಕಾರವು ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಆಚರಿಸಲು ಮತ್ತು ಸ್ಮರಿಸಲು ಯಾವಾಗಲೂ ಗಮನಕೊಡುತ್ತಾರೆ. ಅದಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿದೆ.

    ಭಾರತದ ನೇತಾಜಿ ಎಂದೇ ಪ್ರಸಿದ್ಧಿ ಹೊಂದಿದ ಸುಭಾಷ್ ಚಂದ್ರ ಬೋಸ್ 23 ಜನವರಿ 1897 ರಂದು ಜನಿಸಿದರು. ಈ ಹಿಂದೆ ಸರ್ಕಾರವು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸಲು ಪ್ರಾರಂಭಿಸಿತ್ತು. ಆದರೆ ಈಗ ಅವರ ಹುಟ್ಟಿದ ದಿನದಿಂದಲೇ ಗಣರಾಜ್ಯೋತ್ಸವ ಪ್ರಾರಂಭಿಸಲು ನಿರ್ಧರಿಸಿದೆ.

    ಅದೇ ರೀತಿ ಅಕ್ಟೋಬರ್ 31 ಅನ್ನು ರಾಷ್ಟ್ರೀಯ ಏಕತಾ ದಿನ(ಸರ್ದಾರ್ ಪಟೇಲ್ ಅವರ ಜನ್ಮದಿನ), ನವೆಂಬರ್ 15 ಜನಜಾತಿಯ ಗೌರವ್ ದಿವಸ್(ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವ), ನವೆಂಬರ್ 26 ಅನ್ನು ಸಂವಿಧಾನದ ದಿನವಾಗಿ ಮತ್ತು ಡಿಸೆಂಬರ್ 26 ರಂದು ವೀರ್ ಬಾಲ್ ದಿವಸ್ (ಗುರು ಗೋವಿಂದ್ ಸಿಂಗ್ ಅವರ ನಾಲ್ವರು ಪುತ್ರರಿಗೆ ಗೌರವ) ದಿನವನ್ನು ಆಚರಿಸಲಾಗುತ್ತದೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಅತ್ಯಂತ ಸುರಕ್ಷಿತವಾಗಿ, ಸಂತೋಷವಾಗಿದ್ದಾರೆ: ಸಯ್ಯದ್ ಸಯೀದ್

    ಕೇಂದ್ರ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ತೆರಳಿದ್ದ ಜಾಗಗಳನ್ನು ದೇಶಾದ್ಯಂತ ಪ್ರಚಾರ ಮಾಡಲು ಯೋಜನೆಗಳನ್ನು ರೂಪಿಸಿದೆ. ಅಕ್ಟೋಬರ್ 21, 1943 ರಂದು ಬೋಸ್ ಅವರು ‘ಆಜಾದ್ ಹಿಂದ್ ಫೌಜ್’ ಹೆಸರಿನ ಸೇನೆಯನ್ನು ಘೋಷಿಸಿದ್ದರು. ನೇತಾಜಿ ಸ್ಮರಣಾರ್ಥ ಕಾರ್ಯಕ್ರಮಗಳ ಭಾಗವಾಗಿ ಪ್ರವಾಸೋದ್ಯಮ ಸಚಿವಾಲಯವು ಪ್ರವಾಸಗಳನ್ನು ಆಯೋಜಿಸಲು ಮುಂದಾಗಿದೆ.

  • ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ಕೊಲ್ಕತ್ತಾ: ಕರೆನ್ಸಿ ನೋಟುಗಳ ಮೇಲೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರವನ್ನು ಮುದ್ರಿಸುವಂತೆ 94 ವರ್ಷದ ಸ್ವಾತಂತ್ರ್ಯ ಹೋರಾಟಗಾರ ಹರೇನ್ ಬಗ್ಚಿ ಬಿಸ್ವಾಸ್ ಕೊಲ್ಕತ್ತಾ ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ.

    ಹರೇನ್ ಬಗ್ಚಿ ಬಿಸ್ವಾಸ್ ಅವರು ಕೊಲ್ಕತ್ತಾ ಹೈಕೋರ್ಟ್‍ನಲ್ಲಿ ಕರೆನ್ಸಿ ನೋಟುಗಳ ಮೇಲೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಫೋಟೋವನ್ನು ಮುದ್ರಿಸಿ ಎಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು(ಪಿಐಎಲ್) ಸಲ್ಲಿಸಿದ್ದಾರೆ. ಅವರು ತಮ್ಮ ಪಿಐಎಲ್‍ನಲ್ಲಿ, ‘ಮಹಾತ್ಮ ಗಾಂಧಿ’ ಅವರಂತೆ ಕರೆನ್ಸಿ ನೋಟುಗಳಲ್ಲಿ ನೇತಾಜಿ ಅವರ ಚಿತ್ರವನ್ನು ಏಕೆ ಸೇರಿಸಬಾರದು? ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿ ಅವರ ಕೊಡುಗೆಗೆ ಭಾರತ ಸರ್ಕಾರವು ಸರಿಯಾದ ಮನ್ನಣೆಯನ್ನು ನೀಡಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಭದ್ರಕೋಟೆ ಕೊಡಗಿನಲ್ಲಿ ಮತ್ತೆ ಅರಳಿದ ಬಿಜೆಪಿ

    ಈ ಹಿನ್ನೆಲೆ ಕೊಲ್ಕತ್ತಾ ಹೈಕೋರ್ಟ್ ಸೋಮವಾರ ಎಂಟು ವಾರಗಳಲ್ಲಿ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ್ ಮತ್ತು ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರ ಪೀಠವು ಸೋಮವಾರ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರವನ್ನು ಸಲ್ಲಿಸಲು ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ವೈಜೆ ದಸ್ತೂರ್ ಅವರು ಈ ಸಂಬಂಧ ಅಫಿಡವಿಟ್ ಸಲ್ಲಿಸಲು ಸಮಯ ಕೋರಿದ್ದಾರೆ ಎಂದು ಲೈವ್ ಲಾ ತಿಳಿಸಿದೆ.

    ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 21 ರಂದು ನಡೆಯಲಿದೆ.