Tag: Nethravathi river

  • ಧರ್ಮಸ್ಥಳ ಕೇಸ್; ದೂರುದಾರ ಮಾನಸಿಕ ಅಸ್ವಸ್ಥನೋ, ಸ್ವಸ್ಥನೋ ಪರೀಕ್ಷಿಸಬೇಕು: ಬಿ.ಸಿ.ಪಾಟೀಲ್

    ಧರ್ಮಸ್ಥಳ ಕೇಸ್; ದೂರುದಾರ ಮಾನಸಿಕ ಅಸ್ವಸ್ಥನೋ, ಸ್ವಸ್ಥನೋ ಪರೀಕ್ಷಿಸಬೇಕು: ಬಿ.ಸಿ.ಪಾಟೀಲ್

    ಹಾವೇರಿ: ದೂರುದಾರ ಮಾನಸಿಕವಾಗಿ ಅಸ್ವಸ್ಥನೋ ಅಥವಾ ಸ್ವಸ್ಥನೋ ಎನ್ನುವುದನ್ನು ಮಾನಸಿಕ ತಜ್ಞರು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ (B C Patil) ಒತ್ತಾಯಿಸಿದ್ದಾರೆ.

    ಹಾವೇರಿ (Haveri) ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು ಮಾನಸಿಕವಾಗಿ ಸ್ವಸ್ತನಾಗಿದ್ದಾನೋ ಅಥವಾ ಅಸ್ವಸ್ಥನಾಗಿದ್ದಾನೋ ಎನ್ನುವುದನ್ನು ಮಾನಸಿಕ ತಜ್ಞರಿಂದ ಮೊದಲು ಪರೀಕ್ಷಿಸಬೇಕು. ನಂತರ ಕ್ರಮ ಜರುಗಿಸುವುದು ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಉತ್ಕನನ: 2 ಕಾರ್ಡ್‌, ಹರಿದ ರವಿಕೆ ಪತ್ತೆ

    ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ದೂರುದಾರ ಮೊದಲು ಮಾನಸಿಕವಾಗಿ ಆರೋಗ್ಯವಾಗಿದ್ದಾನಾ ಅನ್ನೋದನ್ನ ದೃಢಪಡಿಸಿಕೊಂಡ ನಂತರ ಎಸ್‌ಐಟಿ ತಂಡ ತನಿಖೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – 13 ಸ್ಥಳ ಗುರುತು ಮಾಡಿದ ದೂರುದಾರ

    ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – 13 ಸ್ಥಳ ಗುರುತು ಮಾಡಿದ ದೂರುದಾರ

    ಮಂಗಳೂರು: ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ಸದ್ಯ 13 ಸ್ಥಳಗಳನ್ನು ಗುರುತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ಎಸ್‌ಐಟಿ (SIT) ಬೆಳಗ್ಗೆ ಸ್ನಾನಘಟ್ಟದ ಎಡಭಾಗದಲ್ಲಿರುವ ಅರಣ್ಯ ಸ್ಥಳದಲ್ಲಿ ಪರಿಶೀಲನೆ ಮಾಡಿತ್ತು. ಬಳಿಕ ನೇತ್ರಾವತಿ ಸೇತುವೆ (Netravati Bridge) ಹಾಗೂ ಸ್ನಾನಘಟ್ಟದ ಮಧ್ಯಭಾಗದ ಕಾಡಿನಲ್ಲಿ ಸ್ಥಳ ಪರಿಶೀಲಿಸಿ, ಮೂರನೇ ಸ್ಥಳವಾಗಿ ನೇತ್ರಾವತಿ ಸ್ನಾನಘಟ್ಟದ ಬಲ ಭಾಗದ ಅಜಿಕುರಿ ರಸ್ತೆಯಲ್ಲಿ ಸ್ಥಳ ಪರಿಶೀಲನೆ ಮಾಡಿತ್ತು. ಸದ್ಯ ಈವರೆಗೆ ದೂರುದಾರ 13 ಸ್ಥಳಗಳನ್ನು ಗುರುತು ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜು.29 ರಿಂದ ಎರಡು ದಿನ ಹಿಮವದ್ ಗೋಪಾಲಸ್ವಾಮಿ ದೇವಾಲಯ ಬಂದ್‌ – ಯಾಕೆ ಗೊತ್ತಾ?

    ನೇತ್ರಾವತಿ ಸ್ನಾನಘಟ್ಟ ಹಾಗೂ ಸಮೀಪದ ಕಾಡಿನಲ್ಲಿ ಒಳಗೆ 1 ಕಿ.ಮೀ. ವ್ಯಾಪ್ತಿಯಲ್ಲಿ ಸುಮಾರು 2 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದ್ದರು. ದೂರುದಾರ ತಂದಿರುವ ತಲೆಬುರುಡೆಯಲ್ಲಿದ್ದ ಮಣ್ಣಿನ ತಾಳೆಗಾಗಿ ನೇತ್ರಾವತಿ ಸ್ನಾನಘಟ್ಟದ ಅರಣ್ಯ ಪ್ರದೇಶದಲ್ಲಿ ಮಣ್ಣನ್ನು ಎಸ್‌ಐಟಿ ಸಂಗ್ರಹಿಸಿದೆ. ನಂತರ ದೂರುದಾರನನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಎಸ್‌ಐಟಿ ತಂಡ ಕರೆದೊಯ್ದಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

    ಎಸ್‌ಐಟಿ ವಿಚಾರಣೆ ವೇಳೆ ದೂರುದಾರ, ತಲೆ ಬುರುಡೆಯನ್ನು ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಹೊರತೆಗೆದಿರುವುದಾಗಿ ತಿಳಿಸಿದ್ದ. ಈ ಹಿನ್ನೆಲೆ ಎಸ್‌ಐಟಿ ತಂಡವು ವಿಧಿ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಸ್ಥಳ ಮಹಜರು ಆರಂಭಿಸಿದ್ದರು.

    ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್, ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಸೇರಿ ಇನ್ನಿತರರ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಯಿತು.

  • ಸಿದ್ಧಾರ್ಥ್ ಆತ್ಮಹತ್ಯೆ ಮಾಡ್ಕೊಂಡಿದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ

    ಸಿದ್ಧಾರ್ಥ್ ಆತ್ಮಹತ್ಯೆ ಮಾಡ್ಕೊಂಡಿದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ

    – ಕಾಫಿ ಡೇ ಸಂಸ್ಥಾಪಕನ ಬಳಿಕ 14 ಮಂದಿ ಸೂಸೈಡ್
    – 55 ಲಕ್ಷ ರೂ. ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ

    ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ, ಕೋಟಿ ಒಡೆಯ ವಿ.ಜಿ. ಸಿದ್ಧಾರ್ಥ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಕರುಣಿಸಲಾಗಿದೆ.

    ಹೌದು. ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷವೇ ಕಳೆದು ಹೋಗಿದೆ. ಮಂಗಳೂರಿನ ಜಪ್ಪಿನಮೊಗರು ಬಳಿಯ ನೇತ್ರಾವತಿ ಸೇತುವೆಯಿಂದ ಹಾರಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ದಿನದಿಂದಲೇ ಈ ಸೇತುವೆಗೆ ತಡೆಬೇಲಿ ನಿರ್ಮಿಸಬೇಕೆಂದು ಸಾಕಷ್ಟು ಒತ್ತಾಯ ಕೇಳಿ ಬಂದಿದ್ದು, ರಾಜಕಾರಣಿಗಳು ಕೂಡ ಒಪ್ಪಿಕೊಂಡಿದ್ರು. ಇದನ್ನೂ ಓದಿ: ನೇತ್ರಾವತಿ ನದಿಗೆ ಮತ್ತೊಂದು ಜೀವ ಆಹುತಿ

    ಅಂದಿನಿಂದ ಇಂದಿನವರೆಗೆ ಈ ಸೇತುವೆಯಿಂದ ನದಿಗೆ ಹಾರಿ ಬರೋಬ್ಬರಿ 14 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು. ಈ ಜಾಗವೊಂದು ಸೂಸೈಡ್ ಪಾಯಿಂಟ್ ಆಗಿತ್ತು. ಇದೀಗ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಒದಗಿ ಬಂದಿದೆ. ಇದನ್ನೂ ಓದಿ: ಸಿದ್ಧಾರ್ಥ್ ಕಾಣೆಯಾಗಿದ್ದ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ

    ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಆರಂಭಗೊಂಡಿದೆ. ಸಿದ್ದಾರ್ಥ್ ಆತ್ಮಹತ್ಯೆಯ ಬಳಿಕ ಈ ಸೇತುವೆ ಬಳಿ ಬಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಅನಾಹುತ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಸೇತುವೆಯ 8ನೇ ಕಂಬದಿಂದ ವ್ಯಕ್ತಿ ನೀರಿಗೆ ಹಾರಿದ್ದನ್ನು ಕಣ್ಣಾರೆ ಕಂಡ ಮೀನುಗಾರ

    ಸೇತುವೆ 800 ಮೀ.ಉದ್ದವಿದೆ. ಸೇತುವೆಯ ತಡೆಗೋಡೆಯ ಮೇಲೆ ರಕ್ಷಣಾ ಬೇಲಿಯು 5 ಅಡಿ ಎತ್ತರವಿದ್ದು, ಬೇಲಿಯ ಮೇಲ್ಗಡೆಯೂ ಹತ್ತಲು ಸಾಧ್ಯವಾಗದಂತೆ ಮೇಲ್ಭಾಗಕ್ಕೂ ನಾಲ್ಕು ಸಾಲು ಮುಳ್ಳು ತಂತಿಯನ್ನು ರಸ್ತೆಯ ಭಾಗಕ್ಕೆ ಬಗ್ಗಿಸಿ ಜೋಡಣೆ ಮಾಡಲಾಗುತ್ತಿದೆ.

  • ಸಿದ್ಧಾರ್ಥ್ ಕಾಣೆಯಾಗಿದ್ದ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ

    ಸಿದ್ಧಾರ್ಥ್ ಕಾಣೆಯಾಗಿದ್ದ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ

    – ಕೊನೆಯ ಕ್ಷಣದಲ್ಲಿ ಪತ್ನಿ, ಮಗುವನ್ನ ನೆನೆದು ಈಜಿ ದಡ ಸೇರಿದ

    ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರು ಕಾಣೆಯಾಗಿದ್ದ ಮಂಗಳೂರು ಹೊರವಲಯದ ನೇತ್ರಾವತಿ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ ನದಿಗೆ ಹಾರಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ.

    ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಗಿರೀಶ್ (32) ಆತ್ಮಹತ್ಯೆಗೆ ಯತ್ನಿಸಿದವರು. ಕೊನೆ ಕ್ಷಣದಲ್ಲಿ ಗಿರೀಶ್ ಪತ್ನಿ, ಮಗುವನ್ನು ನೆನೆದು ನಿರ್ಧಾರವನ್ನು ಬದಲಿಸಿ, ದಡದತ್ತ ಈಜಿಕೊಂಡು ಬಂದಿದ್ದಾರೆ. ಬಳಿಕ ಅವರನ್ನು ಮೀನುಗಾರರು ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ.

    ಗಿರೀಶ್ ಅವರು ನಗರದ ಉರ್ವ ಸ್ಟೋರ್ ನಲ್ಲಿ ಸೀಯಾಳ ವ್ಯಾಪಾರ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಗಿರೀಶ್ ಅವರ ಪತ್ನಿ ನಗರದ ಕೋರ್ಟ್ ನಲ್ಲಿ ಉದ್ಯೋಗಿಯಾಗಿದ್ದಾರೆ. ಗಿರೀಶ್ ಅವರು ಪತ್ನಿ, ಮಗುವಿನೊಂದಿಗೆ ಉರ್ವ ಪಿಡಬ್ಲ್ಯುಡಿ ಕ್ವಾಟರ್ಸ್ ನಲ್ಲಿ ವಾಸಿಸುತ್ತಿದ್ದಾರೆ.

    ಗಿರೀಶ್  ಭಾನುವಾರ ಸಂಜೆ ಮಂಗಳೂರಿನಿಂದ ಉಳ್ಳಾಲ ಕಡೆಗೆ ತೆರಳಿದ್ದಾರೆ. ಈ ವೇಳೆ ನೇತ್ರಾವತಿ ಸೇತುವೆಗೆ ಬಂದ ಅವರು ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಆದರೆ ಕೊನೆಯ ಕ್ಷಣದಲ್ಲಿ ಪತ್ನಿ ಹಾಗೂ ಮಗು ನೆನಪಾಗಿ ಬದುಕಬೇಕು ಎಂದು ನಿರ್ಧರಿಸಿ, ಈಜಿ ದಡ ಸೇರಲು ಯತ್ನಿಸಿದ್ದರು. ಗಿರೀಶ್ ನದಿಗೆ ಹಾರಿದ್ದನ್ನು ಮೀನುಗಾರರು ನೋಡಿದ್ದರು. ಹೀಗಾಗಿ ಗಿರೀಶ್ ಈಜಿ ದಡದ ಕಡೆಗೆ ಬರುವುದನ್ನು ಕಂಡು ರಕ್ಷಣೆಗೆ ಮುಂದಾದರು. ಗಿರೀಶ್ ಅವರನ್ನು ರಕ್ಷಿಸಿ ಪೊಲೀಸರು ಹಾಗೂ ಸಾರ್ವಜನಿಕರ ಸಹಾಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರು ಜುಲೈ 29ರಂದು ಮಂಗಳೂರು-ಉಳ್ಳಾಲ ಸಂಪರ್ಕ ಕಲ್ಪಿಸುವ ಸೇತುವೆಯಿಂದ ಕಾಣೆಯಾಗಿದ್ದರು. ಎರಡು ದಿನಗಳ ಬಳಿಕ ಅಂದರೆ ಜುಲೈ 31ರಂದು ಸಿದ್ಧಾರ್ಥ್ ಅವರ ಮೃತ ದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿತ್ತು. ಈಗ ಗಿರೀಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಅದೃಷ್ಟವಶಾತ್ ಬದುಕುಳಿದಿದ್ದಾರೆ. ಈ ಸೇತುವೆ ಸುಸೈಡ್ ಪಾಯಿಂಟ್ ಆಯಿತೆ ಎಂಬ ಚರ್ಚೆ ಎದ್ದಿದೆ.