Tag: Netizen

  • ಡೈ ಹೊಡೆದು ಸಿಎಂ ಪಟ್ಟ ಹಿಡಿದ ಫಡ್ನವೀಸ್: ನೆಟ್ಟಿಗರಿಂದ ಟ್ರೋಲ್

    ಡೈ ಹೊಡೆದು ಸಿಎಂ ಪಟ್ಟ ಹಿಡಿದ ಫಡ್ನವೀಸ್: ನೆಟ್ಟಿಗರಿಂದ ಟ್ರೋಲ್

    ಮುಂಬೈ: ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಹಾಗೂ ಎನ್‍ಸಿಪಿ ನಾಯಕ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

    ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಸಮ್ಮುಖದಲ್ಲಿ ಉಭಯ ನಾಯಕರು ಪದಗ್ರಹಣ ಮಾಡಿದರು. ಪ್ರಮಾಣವಚನ ಸಮಾರಂಭದ ಬಳಿಕ ಪ್ರಧಾನಿ ನರೇಂದ್ರ ಮೋದಿ, ದೇವೇಂದ್ರ ಫಡ್ನವೀಸ್ ಹಾಗೂ ಅಜಿತ್ ಪವಾರ್ ಅವರನ್ನು ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಉಭಯ ನಾಯಕರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಅಧಿಕಾರದ ಕುರ್ಚಿ ನೀಡಿದ ಅಜಿತ್ ಪವಾರ್ ಯಾರು? ಇಲ್ಲಿದೆ ಮಾಹಿತಿ

    ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆಯುತ್ತಿರುವ  ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟರ್ ರೋಹಿತ್ ಶರ್ಮಾ ಅದ್ಬುತ ಕ್ಯಾಚ್ ಹಿಡಿದಿದ್ದರು. ಈ ಫೋಟೋವನ್ನು ಹಂಚಿಕೊಂಡ ನೆಟ್ಟಿಗರೊಬ್ಬರು, ಶರ್ಮಾ ಅವರನ್ನು ದೇವೇಂದ್ರ ಫಡ್ನವೀಸ್ ಹಾಗೂ ವಿರಾಟ್ ಕೊಹ್ಲಿ ಅವರನ್ನು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರಿಗೆ ಹೋಲಿಸಿದ್ದಾರೆ. ಜೊತೆಗೆ, ಬಿಜೆಪಿ ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಿತು. ಅದು ಇಂದು ಆಪರೇಷನ್ ಎನ್‍ಸಿಪಿಯನ್ನು ಮುಗಿಸಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಜಿತ್ ಪವಾರ್ ನಿರ್ಧಾರದೊಂದಿಗೆ ಎನ್‍ಸಿಪಿ ಇಲ್ಲ: ಶರದ್ ಪವಾರ್

    ದೇವೇಂದ್ರ ಫಡ್ನವೀಸ್ ಅವರನ್ನು ಕೈ ಬಿಟ್ಟು ಬಂದಿದ್ದ ಉದ್ಧವ್ ಠಾಕ್ರೆ ಅವರಿಗೆ ಅಜಿತ್ ಪವಾರ್ ಶಾಕ್ ಕೊಟ್ಟ ನಡೆಯನ್ನು ವಿಡಿಯೋ ಮೂಲಕ ಬಿಂಬಿಸಿ ನೆಟ್ಟಿಗರೊಬ್ಬರು ಟ್ವೀಟ್ ಮಾಡಿದ್ದಾರೆ. ಇದೇ ಅನೇಕ ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ:  ಕದ್ದುಮುಚ್ಚಿ ಮಾಡೋದು ನಮಗೆ ಗೊತ್ತಿಲ್ಲ: ಬಿಜೆಪಿ ವಿರುದ್ಧ ಠಾಕ್ರೆ ಕೆಂಡ

    ಏಕಾಏಕಿ ಸರ್ಕಾರ ರಚನೆ ಮಾಡಿದ ಬಿಜೆಪಿ ನಡೆಯ ಬಗ್ಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯ ಮತ್ತು ದೇಶದ ಜನತೆ ಎಲ್ಲ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಜೆಪಿ ನಮ್ಮ ಮೇಲೆ ಹಲವು ಆರೋಪಗಳನ್ನು ಮಾಡುತ್ತಿದೆ. ಆದರೆ ಶಿವಸೇನೆ ಏನೇ ಮಾಡಿದರೂ ನಿರ್ಧರಿಸಿ ಮಾಡುತ್ತದೆ. ಅವರು (ಬಿಜೆಪಿ) ಒಡೆಯುವ ಕೆಲಸ ಮಾಡುತ್ತಾರೆ. ನಾವು ಏನೇ ಮಾಡಿದರೂ ಜನರನ್ನು ಜೊತೆಯಾಗಿಸುವ ಕೆಲಸ ಮಾಡುತ್ತೇವೆ. ಅವರ ಯೋಚನೆಯಲ್ಲಿ ‘ನಾನು ಕೇವಲ ನಾನು’ ಎಂಬ ಸ್ವಾರ್ಥವಿದ್ದು, ಮೈತ್ರಿಯ ನೈತಿಕ ಮೌಲ್ಯಗಳಿಲ್ಲ. ಇದು ಛತ್ರಪತಿ ಶಿವಾಜಿ ಮಹಾರಾಜರ ಭಾವನೆಗಳ ಮೇಲೆ ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.