Tag: netravathi

  • ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‍ಮೆಂಟ್‍ನಿಂದ ಜಿಗಿದು ಸಾವು

    ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‍ಮೆಂಟ್‍ನಿಂದ ಜಿಗಿದು ಸಾವು

    ಬೆಂಗಳೂರು: ಈ ಹಿಂದೆ ಧರ್ಮಸ್ಥಳದಲ್ಲಿ (Dharmasthala) ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾಟ್ಮೆರ್ಂಟ್‍ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯ ರಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿ ಯನ್ನು ವಾಪಸ್ ಕಳುಹಿಸಿದ್ರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

    ಇತ್ತ ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೈಂಟ್ ಕೂಡ ದಾಖಲಾಗಿತ್ತು. ಸದ್ಯ ಯುವತಿ ಆತ್ಮಹತ್ಯೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಪ್ಪಿನಂಗಡಿ ಬಳಿ ರಸ್ತೆಗೆ ನುಗ್ಗಿದ ನೀರು – ಮಂಗಳೂರು, ಬೆಂಗಳೂರು ರಸ್ತೆ ಸಂಪರ್ಕ ಬಂದ್

    ಉಪ್ಪಿನಂಗಡಿ ಬಳಿ ರಸ್ತೆಗೆ ನುಗ್ಗಿದ ನೀರು – ಮಂಗಳೂರು, ಬೆಂಗಳೂರು ರಸ್ತೆ ಸಂಪರ್ಕ ಬಂದ್

    ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.

    ಕುಮಾರಾಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ನೆಲ್ಯಾಡಿ ಸಮೀಪದ ಉದನೆಯಲ್ಲಿ ಹೆದ್ದಾರಿಗೆ ನೀರು ನುಗ್ಗಿದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಸದ್ಯಕ್ಕೆ ಬಂದ್ ಆಗಿದೆ. ಹೆದ್ದಾರಿಯಲ್ಲಿ ಉದ್ದಕ್ಕೂ ವಾಹನಗಳ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದು, ಉಪ್ಪಿನಂಗಡಿ ಪೊಲೀಸರು ಹೆದ್ದಾರಿಯಲ್ಲಿ ಬಂದೋಬಸ್ತ್ ಕಲ್ಪಿಸಿದ್ದಾರೆ.

    ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಕುಮಾರಧಾರಾ ನದಿ ನೀರು ನುಗ್ಗಿದ ಪರಿಣಾಮ ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಮಾಡಲಾಗುತ್ತಿದೆ.

    ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೂ ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.

    ಮತ್ತೆ ಕುಸಿತ: ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ನಾಲ್ಕು ಕಡೆಗಳಲ್ಲಿ ಗುಡ್ಡೆ ರಸ್ತೆಗೆ ಜಾರಿದೆ. 6 ಜೆಸಿಬಿ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಸ್ತೆ ಸಂಚಾರವನ್ನು ನಿಷೇಧಿಸಲಾಗಿದೆ.

  • ಎಸ್‍ಎಂಕೆ ಅಳಿಯ ನಾಪತ್ತೆ- ಪೊಲೀಸರಿಂದ ಸಿದ್ದಾರ್ಥ್ ಡ್ರೈವರ್ ವಿಚಾರಣೆ

    ಎಸ್‍ಎಂಕೆ ಅಳಿಯ ನಾಪತ್ತೆ- ಪೊಲೀಸರಿಂದ ಸಿದ್ದಾರ್ಥ್ ಡ್ರೈವರ್ ವಿಚಾರಣೆ

    ಮಂಗಳೂರು: ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಏಕಾಏಕಿ ಸಿದ್ದಾರ್ಥ್ ನಾಪತ್ತೆಯಾಗಿದ್ದರಿಂದ ನೇತ್ರಾವತಿ ಸೇತುವೆಯ ಬಳಿ ತೀವ್ರ ಆತಂಕ ಎದುರಾಗಿದ್ದು, ಇತ್ತ ಕಂಕನಾಡಿ ಪೊಲೀಸರು ಬಸವರಾಜ್ ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಬಸವರಾಜ್, `ಸಾಹೇಬ್ರು ಇಂಗ್ಲೀಷ್ ನಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ನನಗೆ ಅದು ಅರ್ಥವಾಗಲಿಲ್ಲ’ ಎಂದು ಹೇಳಿದ್ದಾರೆ.

    ಸಿದ್ದಾರ್ಥ್ ಅವರು ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಮೊಬೈಲ್ ನಲ್ಲಿ ಮಾತನಾಡಿಕೊಂಡು ಸೇತುವೆಯ ಮೇಲೆ ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವೇಳೆ ಸಿದ್ದಾರ್ಥ್ ಅವರು `ನೀನು ಬರಬೇಡ ಇಲ್ಲೇ ಇರು’ ಎಂದು ಹೇಳಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ತಮ್ಮ ಡ್ರೈವರ್ ಗೆ ಬರಬೇಡ ಎಂದು ತಿಳಿಸಿ ಹೋದ ಸಿದ್ದಾರ್ಥ್ ಮತ್ತೆ ಬರದೇ ಇದ್ದಾಗ ಆತಂಕಗೊಂಡ ಬಸವರಾಜ್, ಸಿದ್ದಾರ್ಥ್ ಅವರ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಫೆ ಕಾಫಿ ಡೇ ಮಾಲೀಕ, ಎಸ್‍ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ನಾಪತ್ತೆ

    ಕೂಡಲೇ ಪೊಲೀಸರು ದೌಡಾಯಿಸಿದ್ದಾರೆ. ಆದರೆ ಒಂದೆ ಕತ್ತಲು ಹಾಗೂ ಇನ್ನೊಂದೆಡೆ ಮಳೆ ಸುರಿಯುತ್ತಿದ್ದರಿಂದ ಹುಡುಕಾಟ ನಡೆಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಸ್ಥಳಕ್ಕೆ ಸಾಕಷ್ಟು ಮಂದಿ ಪೊಲೀಸರು, ಅಗ್ನಿಶಾಮಕ ದಳ, ಹಾಗೂ ಸಾರ್ವಜನಿಕರು ದೌಡಾಯಿಸಿ ಸಿದ್ದಾರ್ಥ್ ಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. 2 ಬೋಟ್ ಗಳಲ್ಲಿ ಈಜು ತಜ್ಞರು ಶೋಧ ಕಾರ್ಯ ಕೈಗೊಂಡಿದ್ದಾರೆ.