Tag: new born baby

  • ಕಲಬುರಗಿಯಲ್ಲಿ ಬಾಣಂತಿ, ನವಜಾತ ಶಿಶು ಸಾವು – ಕುಟುಂಬಸ್ಥರಿಂದ ಆಸ್ಪತ್ರೆ ಗಾಜು ಪುಡಿ ಪುಡಿ, ಪೀಠೋಪಕರಣ ಧ್ವಂಸ

    ಕಲಬುರಗಿಯಲ್ಲಿ ಬಾಣಂತಿ, ನವಜಾತ ಶಿಶು ಸಾವು – ಕುಟುಂಬಸ್ಥರಿಂದ ಆಸ್ಪತ್ರೆ ಗಾಜು ಪುಡಿ ಪುಡಿ, ಪೀಠೋಪಕರಣ ಧ್ವಂಸ

    ಕಲಬುರಗಿ: ಜಿಲ್ಲೆಯಲ್ಲಿ ಬಾಣಂತಿ ಸಾವಿನ (Mternal Death) ಪ್ರಕರಣ ಮುಂದುವರಿದಿದೆ. ಕಲಬುರಗಿಯ (Kalaburagi) ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಇಬ್ಬರೂ ಸಾವನ್ನಪ್ಪಿದ್ದಾರೆ.

    ಸಭಾ ಪರ್ವಿನ್ ಎನ್ನುವ ಬಾಣಂತಿ ಸಾವನ್ನಪ್ಪಿದ್ದು, ಆಕೆಯ ನವಜಾತ ಶಿಶು ಕೂಡ ಮೃತಪಟ್ಟಿದೆ. ಕಲಬುರಗಿ ನಗರದ ಎಂಎಸ್‌ಕೆ ಮಿಲ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಭಾನುವಾರ ಸಂಜೆಯೇ ಹೆರಿಗೆಗಾಗಿ ಸಭಾ ಪರ್ವಿನ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಹೆರಿಗೆಗೂ ಮುನ್ನ ಗರ್ಭದಲ್ಲಿಯೇ ಮಗು ಸಾವನ್ನಪ್ಪುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದರು. ಕಡೆಗೆ ಲೋ ಬಿಪಿಯಿಂದ ತಾಯಿಯೂ ಮೃತಪಟ್ಟಿದ್ದಾರೆ. ಇದನ್ನೂ ಓದಿ: Delhi Budget 2025 | ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ – ನಾಳೆ ಬಜೆಟ್ ಮಂಡನೆ

    ವೈದ್ಯರ ನಿರ್ಲಕ್ಷತನವೇ ತಾಯಿ ಹಾಗೂ ಮಗು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆ ಗಾಜು ಪುಡಿ ಪುಡಿ ಮಾಡಿ ಪೀಠೋಪಕರಣ ಧ್ವಂಸಗೊಳಿಸಿದ್ದಾರೆ. ಆರ್.ಜಿ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಇದನ್ನೂ ಓದಿ: Kodagu | ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದಾಗ ಬೆನ್ನುಮೂಳೆಗೆ ಘಾಸಿ – ಮೊಬೈಲ್ ಶಾಪ್ ಮಾಲೀಕ ಸಾವು

  • ಮೈಕೊರೆವ ಚಳಿಯಲ್ಲಿ ಹಸುಗೂಸು ಬಿಟ್ಟು ಹೋದ ಮಹಿಳೆ – ಮಗು ಸಾವು

    ಮೈಕೊರೆವ ಚಳಿಯಲ್ಲಿ ಹಸುಗೂಸು ಬಿಟ್ಟು ಹೋದ ಮಹಿಳೆ – ಮಗು ಸಾವು

    ಬೀದರ್: ಮೈಕೊರೆವ ಚಳಿಯಲ್ಲಿ ಹಸುಗೂಸನ್ನು ಬಿಟ್ಟು ಹೋದ ಅಮಾನವೀಯ ಘಟನೆ ಜಿಲ್ಲೆಯ ಜಿಲ್ಲೆಯ ಭಾಲ್ಕಿ ತಾಲೂಕಿನ ರುದನೂರ್ (Rudnoor) ಗ್ರಾಮದಲ್ಲಿ ನಡೆದಿದೆ.

    ಬೆಳ್ಳಂಬೆಳಗ್ಗೆ ಗ್ರಾಮದ ಅಂಬೇಡ್ಕರ್ ವೃತ್ತದ ಹತ್ತಿರ ಇರುವ ಮಸೀದಿ ಕಾಂಪೌಂಡ್ ಪಕ್ಕದಲ್ಲಿ ಹಸುಗೂಸು ಪ್ರತ್ಯಕ್ಷವಾಗಿದ್ದು, ಗಂಡು ಮಗು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಮಾತು ತೊದಲಿದೆ, ಕೈ ನಡುಗುತ್ತಿದೆ: ವಿಶಾಲ್ ಸ್ಥಿತಿ ನೋಡಿ ಫ್ಯಾನ್ಸ್ ಶಾಕ್

    ಮಗುವನ್ನು ಬಿಟ್ಟು ಹೋದ ದೃಶ್ಯಾವಳಿಗಳು ಅಲ್ಲಿಯೇ ಹತ್ತಿರದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಒಂದು ಚೀಲದಲ್ಲಿ ಮಗುವನ್ನು ತಂದಿದ್ದಾಳೆ. ಸುತ್ತಲೂ ಯಾರಾದರೂ ಇದ್ದಾರಾ ಎಂಬುವುದನ್ನು ಗಮನಿಸಿ. ಮಗುವನ್ನು ಕಾಂಪೌಂಡ್ ಪಕ್ಕದಲ್ಲಿ ಬಿಟ್ಟು ಹೋಗಿರುವುದು ಕಂಡುಬಂದಿದೆ.

    ಬೆಳಗ್ಗೆ ಸುದ್ದಿ ತಿಳಿದ ಗ್ರಾಮಸ್ಥರು ಜಮಾವಣೆಯಾಗಿ, ಹಸುಗೂಸನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದೆ. ಸ್ಥಳಕ್ಕೆ ಧನ್ನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಹಸುಗೂಸು ಬಿಟ್ಟು ಹೋದ ಮಹಿಳೆಯನ್ನು ಪತ್ತೆ ಹಚ್ಚಲು ನಿರತರಾಗಿದ್ದಾರೆ.ಇದನ್ನೂ ಓದಿ:ವೈದ್ಯೆಯಿಂದ 2.52 ಕೋಟಿ ರೂ., 2.350 ಕೆಜಿ ಚಿನ್ನ ಪಡೆದು ವಂಚನೆ – ಐಶ್ವರ್ಯಗೌಡ ಮೇಲೆ ಮತ್ತೊಂದು ಎಫ್‌ಐಆರ್

  • ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ – ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

    ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ – ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

    ರಾಮನಗರ: ಜಿಲ್ಲೆಯ ಹಾರೋಹಳ್ಳಿ (Harohalli) ಸಮೀಪದ ದಯಾನಂದ ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಅಮಾನವೀಯ ಘಟನೆಯೊಂದು ನಡೆದಿದೆ.

    ಆಸ್ಪತ್ರೆಯ ರೇಡಿಯಾಲಜಿ ಡಿಪಾರ್ಟ್ಮೆಂಟ್ ಬ್ಲಾಕ್‌ನ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆಗ ತಾನೇ ಜನಿಸಿರುವ ಮಗುವನ್ನು ಟಾಯ್ಲೆಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ.ಇದನ್ನೂ ಓದಿ: ನಾವು ಜೆಡಿಎಸ್ ಶಾಸಕರನ್ನ ಕೊಂಡುಕೊಳ್ಳಲು ಹೋಗಿಲ್ಲ – ಪರಮೇಶ್ವರ್

    ಬಳಿಕ ಶೌಚಾಲಯದಲ್ಲಿ ನೀರು ಹೋಗದೇ ಕಟ್ಟಿಕೊಂಡ ಹಿನ್ನೆಲೆ ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ. ಮಗು ಜನನವನ್ನ ಮರೆಮಾಚಲು ಯಾರೋ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

    ಸದ್ಯ ಈ ಸಂಬಂಧ ಆಸ್ಪತ್ರೆ ವೈದ್ಯರು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದು, ಮಗುವಿನ ಡಿಎನ್‌ಎ ವರದಿ ಆಧರಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.ಇದನ್ನೂ ಓದಿ: ನಿಮ್ಮ ಹೆಸರಿಗೆ ಕಳಂಕ ತರ್ತೀನಿ- ನಟಿ ದೀಪಿಕಾ ದಾಸ್, ತಾಯಿಗೆ ಬೆದರಿಕೆ

  • ಹುಟ್ಟಿದ ಕೆಲ ಗಂಟೆಗಳಲ್ಲೇ ಶಿಶುವನ್ನು ಕತ್ತು ಹಿಸುಕಿ ಕೊಂದ ಪಾಪಿಗಳು!

    ಹುಟ್ಟಿದ ಕೆಲ ಗಂಟೆಗಳಲ್ಲೇ ಶಿಶುವನ್ನು ಕತ್ತು ಹಿಸುಕಿ ಕೊಂದ ಪಾಪಿಗಳು!

    ತಿರುವನಂತಪುರಂ: ಹುಟ್ಟಿದ ಕೆಲ ಗಂಟೆಗಳಲ್ಲಿಯೇ ಜೋಡಿಯೊಂದು ನವಜಾತ ಶಿಶು (New Born Baby) ವನ್ನು ಕತ್ತು ಹಿಸುಕಿ ಕೊಂದ ವಿಲಕ್ಷಣ ಘಟನೆಯೊಂದು ಇಡುಕ್ಕಿಯ ಕಂಬಮ್ಮೆಟ್ಟು ಎಂಬಲ್ಲಿ ನಡೆದಿದೆ.

    ಆರೋಪಿಗಳನ್ನು ಸಧುರಾಮ್ ಹಾಗೂ ಮಾಲತಿ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಮಧ್ಯಪ್ರದೇಶದ ಇಂದೋರ್ ಮೂಲದವರಾಗಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಜೋಡಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಏಪ್ರಿಲ್ 7 ರಂದು ಮಗು ಹುಟ್ಟಿದ್ದು, ಜನನವಾದ ಕೆಲ ಗಂಟೆಗಳಲ್ಲಿಯೇ ಸಾವನ್ನಪ್ಪಿದೆ. ನಂತರ ಮಗುವನ್ನು ಮರಣೋತ್ತರ ಪರೀಕ್ಷೆ ನಡೆಸಿದಾಗ ಕೊಲೆ ಪ್ರಸಂಗ ಬಯಲಾಗಿದೆ. ಶಿಶುವನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬುದಾಗಿ ವರದಿಯಾಗಿದೆ. ಇದನ್ನೂ ಓದಿ: ನಕ್ಸಲ್‌ ದಂಪತಿ ಮಗಳು 10 ನೇ ತರಗತಿ ಪಾಸ್‌; ಅಪ್ಪ-ಅಮ್ಮನ ಥರ ಆಗಲ್ಲ, ಡಾಕ್ಟರ್‌ ಆಗ್ತೀನಿ ಅಂದ್ಳು ಬಾಲಕಿ

    ಇತ್ತ ಸಧುರಾಮ್ ಹಾಗೂ ಮಾಲತಿಯನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಸಧುರಾಮ್ ಹಾಗೂ ಮಾಲತಿ ಮದುವೆಯಾಗಿರಲಿಲ್ಲ. ಆದರೆ ಮಾಲತಿ ಗರ್ಭಿಣಿಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಕುಟುಂಬದವರ ಭಯದಿಂದ ಕೇರಳದಿಂದ ಪರಾರಿಯಾಗಿ ಇಡುಕ್ಕಿಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

    ಮಾಲತಿ ಟಾಯ್ಲೆಟ್‍ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಕೆಲ ಗಂಟೆಗಳಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಸದ್ಯ ಮಾಲತಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಸಧುರಾಮ್‍ನನ್ನು ಪೊಲೀಸರು ಬಂಧಿಸಿದ್ದಾರೆ.

     

  • ಕಸದ ರಾಶಿಯಲ್ಲಿ ಎಸೆದಿದ್ದ ನವಜಾತ ಶಿಶುವನ್ನು ರಕ್ಷಿಸಿದ ಸ್ಥಳೀಯರು

    ಕಸದ ರಾಶಿಯಲ್ಲಿ ಎಸೆದಿದ್ದ ನವಜಾತ ಶಿಶುವನ್ನು ರಕ್ಷಿಸಿದ ಸ್ಥಳೀಯರು

    – ಅಳುವಿನ ಶಬ್ಧಕೇಳಿ ಶಿಶು ರಕ್ಷಣೆ

    ತಿರುವನಂತಪುರಂ: ಕಸದ ರಾಶಿಯಲ್ಲಿ ಎಸೆದು ಹೋಗಿರುವ ಮಗುವನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

    ನಿನ್ನೆ ಕೇರಳದ ನಡ್ಕಲ್‍ನ ಮನೆಯೊಂದರ ಹಿಂದೆ ಇರುವ ಕಸದ ರಾಶಿಯೊಂದರಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾರೆ. ಮಗುವಿನ ಅಳುವನ್ನು ಕೇಳಿ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ.

    ಸ್ಥಳೀಯರು ಮಗುವಿನ ಅಳುವ ಧ್ವನಿಯನ್ನು ಕೇಳಿ ಹುಡುಕಲು ಪ್ರಾರಂಭಿಸಿದ್ದಾರೆ. ಆಗ ಮಗು ಕಸದ ತೊಟ್ಟಿಯಲ್ಲಿರುವುದು ಕಂಡು ಬಂದಿದೆ. ಈ ಬಳಿಕ ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆಗ ತಾನೇ ಹುಟ್ಟಿದ ಶಿಶುವನ್ನು ಯಾರೋ ಕಸದ ತೊಟ್ಟಿಯಲ್ಲಿ ಎಸೆದು ಹೋಗಿದ್ದಾರೆ. ಈ ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ. ನವಜಾತ ಶಿಶುವನ್ನು ಪಾರಿಹಳ್ಳಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಶಿಶು ಆರೋಗ್ಯವಾಗಿದೆ. ಮೂರು ಕೆಜಿ ತೂಕವನ್ನು ಹೊಂದಿದೆ. ಹಸುಳೆಯನ್ನು ಕಸದ ರಾಶಿಯಲ್ಲಿ ಬಿಟ್ಟು ಹೋದವರ ಕುರಿತಾಗಿ ಮಾಹಿತಿ ಇಲ್ಲ. ನಾವು ಪ್ರಕರಣ ದಾಖಲಿಸಿದ್ದೇವೆ. ಮಗು ಬಿಟ್ಟು ಹೋದವರು ಯಾರು ಎಂದು ತಿಳಿಯಲು ತನಿಖೆ ನಡೆಸುತ್ತೇವೆ. ಸದ್ಯ ಮಗುವನ್ನು ಮಕ್ಕಳ ಕಲ್ಯಾಣ ಇಲಾಖೆಗೆ ಹಸ್ತಾಂತರ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ನವಜಾತ ಶಿಶುವನ್ನು ಕಸದ ಬುಟ್ಟಿಗೆ ಎಸೆದು ಹೋದ ಪಾಪಿ ತಾಯಿ

    ನವಜಾತ ಶಿಶುವನ್ನು ಕಸದ ಬುಟ್ಟಿಗೆ ಎಸೆದು ಹೋದ ಪಾಪಿ ತಾಯಿ

    – ನಗರಸಭೆ ನೌಕರನಿಂದ ಮಗು ರಕ್ಷಣೆ

    ಉಡುಪಿ: ಸುರಿಯುವ ಮಳೆಯಲ್ಲಿ ಪಾಪಿ ತಾಯಿಯೊಬ್ಬಳು ನವಜಾತ ಶಿಶುವನ್ನು ಕಸದಬುಟ್ಟಿಯಲ್ಲಿ ಎಸೆದು ಹೋಗಿದ್ದಾಳೆ. ಈ ಅಮಾನವೀಯ ಘಟನೆ ಉಡುಪಿ ನಗರದ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ.

    ಉಡುಪಿಯಲ್ಲಿ ಕಳೆದ 10 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇಂದು ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಭಾರೀ ಮಳೆಯ ನಡುವೆಯೇ ಹೋಟೆಲೊಂದರ ಮುಂಭಾಗದ ಕಸದ ಬುಟ್ಟಿಗೆ ಪಾಪಿಗಳು ಮಾನವೀಯತೆ ಮರೆತು ಮಗು ಎಸೆದು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಉಡುಪಿ ನಗರಸಭೆಯ ಪೌರಕಾರ್ಮಿಕರು ಕಸ ಕೊಂಡೊಯ್ಯಲು ಬರುವಾಗ ಮಗುವಿನ ಅಳು ಕೇಳಿದೆ.

    ಕಸದ ಬುಟ್ಟಿಯನ್ನು ಪರಿಶೀಲಿಸಿದಾಗ ನವಜಾತ ಶಿಶು ಪತ್ತೆಯಾಗಿದೆ. ಹೋಟೆಲ್ ಮಾಲೀಕರಿಗೆ, ಸುತ್ತಮುತ್ತ ಸಾರ್ವಜನಿಕರ ವಿಚಾರ ಗಮನಕ್ಕೆ ತಂದಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಸ್ಥಳಕ್ಕಾಗಮಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಉಡುಪಿ ಜಿಲ್ಲಾ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಸರ್ಕಾರಿ ಮಹಿಳಾ ಹೆರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮಗು ಇಂದು ಬೆಳಗ್ಗೆ ಹುಟ್ಟಿದ್ದು ಮಗುವಿನ ಕರುಳಬಳ್ಳಿಯನ್ನು ಕೂಡ ಕತ್ತರಿಸಲಾಗಿಲ್ಲ. 9 ತಿಂಗಳು ಹೊತ್ತು, ಮಗುವನ್ನು ಯಾವುದೇ ಕರುಣೆ ಇಲ್ಲದೆ ಕಸದಬುಟ್ಟಿಯಲ್ಲಿ ಎಸೆದ ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಹೆಣ್ಣು ಮಗುವೆಂದು ನವಜಾತ ಶಿಶುವನ್ನು ಕಸದಬುಟ್ಟಿಗೆ ಎಸೆದಿರುವ ಸಾಧ್ಯತೆ ಇದೆ. ಸದ್ಯ ಮಗು ಹೆರಿಗೆ ಆಸ್ಪತ್ರೆಯಲ್ಲಿ ಆರೋಗ್ಯವಾಗಿದೆ ಎಂದು ನಿತ್ಯಾನಂದ ಒಳಕಾಡು ಹೇಳಿದ್ದಾರೆ. ಉಡುಪಿ ನಗರ ಠಾಣೆಯ ಎಸ್ ಐ ಶಕ್ತಿವೇಲು, ಮಹಿಳಾ ಠಾಣೆ ಎಸ್ ಐ ವೈಲೆಟ್ ಫೆಮಿನಾ ಮತ್ತಿತರರು ಸಮ್ಮುಖದಲ್ಲಿ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

  • ಕೊರೊನಾ ವೈರಸ್‍ಗೆ 6 ವಾರದ ಪುಟ್ಟ ಕಂದಮ್ಮ ಬಲಿ

    ಕೊರೊನಾ ವೈರಸ್‍ಗೆ 6 ವಾರದ ಪುಟ್ಟ ಕಂದಮ್ಮ ಬಲಿ

    ನ್ಯೂಯಾರ್ಕ್: ಕೊರೊನಾ ವೈರಸ್‍ಗೆ ಅಮೆರಿಕದಲ್ಲಿ ಮತ್ತೊಂದು ಪುಟ್ಟ ಕಂದಮ್ಮ ಬಲಿಯಾಗಿದೆ ಎಂದು ಅಲ್ಲಿನ ರಾಜ್ಯಪಾಲರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅತ್ಯಂತ ಕಿರಿಯ ವಯಸ್ಸಿನ ಕಂದಮ್ಮ ಕೊರೊನಾಗೆ ಬಲಿಯಾದ ಎರಡನೇ ಪ್ರಕರಣ ಇದಾಗಿದೆ.

    ಈ ಬಗ್ಗೆ ರಾಜ್ಯಪಾಲ ನೆಡ್ ಲ್ಯಾಮಂಟ್ ಟ್ವೀಟ್ ಮಾಡಿದ್ದು, ಕಳೆದ ವಾರ ಮಗುವನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಅಲ್ಲದೆ ಕಂದಮ್ಮ ಕೊರೊನಾ ವೈರಸ್‍ಗೆ ಬಲಿಯಾಗಿರುವುದು ದೃಢವಾಗಿದೆ ಎಂದು ಅವರು ವಿವರಿಸಿದ್ದಾರೆ.

    ಇದೊಂದು ನಿಜಕ್ಕೂ ಹೃದಯವಿದ್ರಾವಕ ಘಟನೆಯಾಗಿದೆ. ಯಾಕಂದ್ರೆ ಕೊರೊನಾ ವೈರಸ್‍ಗೆ ಬಲಿಯಾದ ಅತ್ಯಂತ ಕಿರಿಯ ವಯಸ್ಸಿನ ಪ್ರಕರಣ ಇದಾಗಿದೆ. ಈ ಹಿಂದೆ ಚಿಕ್ಯಾಗೋದಲ್ಲಿ ನಿಧನವಾದ ಮಗು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನದ್ದಾಗಿದೆ. ಕೊರೊನಾ ಪರೀಕ್ಷೆಯಲ್ಲಿ ಮಗುವಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಇಲಿಯಾನ್ಸ್ ರಾಜ್ಯದ ರಾಜ್ಯಪಾಲ ಜೆಬಿ ಪ್ರಿಟ್ ಜ್ಕೆರ್ ಮಾಹಿತಿ ನೀಡಿದ್ದರು.

    ಇದುವರೆಗೆ ಅಮೆರಿಕದಲ್ಲಿ ಕೊರೊನಾ ವೈರಸ್ ಗೆ 4,476 ಮಂದಿ ಬಲಿಯಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಸಾಮಾನ್ಯವಾಗಿ ಕೊರೊನಾ ವೈರಸ್ ವಯಸ್ಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತೆ ಎಂದು ನಂಬಲಾಗಿತ್ತು. ಆದರೆ ಇದೀಗ ಪುಟ್ಟ ಪುಟ್ಟ ಕಂದಮ್ಮಗಳು ಕೂಡ ಈ ಅಪಾಯಕಾರಿ ವೈರಸ್‍ಗೆ ಬಲಿಯಾಗುತ್ತಿದ್ದು, ಆತಂಕ ಹುಟ್ಟಿಸಿದೆ.

  • ಹುಟ್ಟಿದ ಎರಡೇ ಗಂಟೆಯಲ್ಲಿ ಭಾರತದಲ್ಲಿ ದಾಖಲೆ ನಿರ್ಮಿಸಿದ ಹೆಣ್ಣುಮಗು!

    ಹುಟ್ಟಿದ ಎರಡೇ ಗಂಟೆಯಲ್ಲಿ ಭಾರತದಲ್ಲಿ ದಾಖಲೆ ನಿರ್ಮಿಸಿದ ಹೆಣ್ಣುಮಗು!

    ಗಾಂಧಿನಗರ: ಹುಟ್ಟಿದ ಎರಡೇ ಗಂಟೆಯ ಅವಧಿಯಲ್ಲಿ ಗುಜರಾತ್ ದಂಪತಿ ತಮ್ಮ ಹೆಣ್ಣುಮಗುವಿನ ಹೆಸರನ್ನು ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿ ಮಾಡಿಸಿ ದಾಖಲೆ ನಿರ್ಮಿಸಿದ್ದಾರೆ.

    ಹುಟ್ಟಿದ ಎರಡೇ ಗಂಟೆಯಲ್ಲಿ ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿಯಾಗಿರುವ ಭಾರತದ ಮೊದಲ ಮಗು ಎಂಬ ಹೆಗ್ಗಳಿಕೆಗೆ ಈಗ ಈ ಮಗು ಪಾತ್ರವಾಗಿದೆ.

    ಅಂಕಿತ್ ನಾಗರಾಣಿ ಹಾಗೂ ತಾಯಿ ಭೂಮಿ ನಾಗರಾಣಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ. ಹೀಗಾಗಿ ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಅಭಿಯಾನದಲ್ಲಿ ತಮ್ಮ ಮಗುವಿನ ಹೆಸರನ್ನು ನೊಂದಣಿ ಮಾಡಿಸಲು ಕಾತುರದಿಂದ ಕಾಯುತ್ತಿದ್ದರು. ಅಲ್ಲದೆ ಅವರ ಮಗಳು ಹುಟ್ಟಿದ ಸ್ಥಳದಲ್ಲೇ ಎಲ್ಲಾ ಅಧಿಕೃತ ದಾಖಲೆಗಳನ್ನು ಹೊಂದಿರುವ ಮೊದಲ ಮಗು ಎಂಬ ಹೆಗ್ಗಳಿಕೆ ಪಡೆಯಬೇಕು ಎಂದು ಅಂಕಿತ್ ಕನಸು ಕಂಡಿದ್ದರು.

    ಆದರಿಂದ ಮಗು ಹುಟ್ಟುವ ಮೊದಲೇ ದಾಖಲೆಗಳಿಗೆ ನೊಂದಣಿಯಾಗಲು ಫಾರಂಗಳನ್ನು ತುಂಬಿಸಿಟ್ಟಿದ್ದರು. ಡಿಸೆಂಬರ್ 12 ರಂದು ಮಗಳು ಜನಿಸಿದ ಎರಡೇ ಗಂಟೆಯಲ್ಲಿ ಯಶಸ್ವಿಯಾಗಿ ಆಧಾರ್, ರೇಶನ್ ಕಾರ್ಡ್ ಹಾಗೂ ಪಾಸ್ರ್ಪೋಟ್ ಸೇರಿದಂತೆ ಎಲ್ಲಾ ದಾಖಲೆಗಳಿಗೆ ಮಗುವಿನ ಹೆಸರಾದ ರಮಿಯಾಳನ್ನು ನೊಂದಣಿ ಮಾಡಿಸಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

    ಈ ಹಿಂದೆ ಎಪ್ರೀಲ್‍ನಲ್ಲಿ ಮಹಾರಾಷ್ಟ್ರದಲ್ಲಿ ಹುಟ್ಟಿದ 1.48 ನಿಮಿಷದಲ್ಲೇ ಹೆಣ್ಣು ಮಗುವಿನ ಹೆಸರನ್ನು ಪೋಷಕರು  ಆಧಾರ್‌ಗೆ ನೊಂದಣಿ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ಗ್ರಾಮದ ಗದ್ದೆಯಲ್ಲಿ ಹೆಣ್ಣು ಶಿಶು ಪತ್ತೆ

    ಗ್ರಾಮದ ಗದ್ದೆಯಲ್ಲಿ ಹೆಣ್ಣು ಶಿಶು ಪತ್ತೆ

    ತುಮಕೂರು: ಆಗತಾನೆ ಹುಟ್ಟಿದ್ದ ನವಜಾತ ಹೆಣ್ಣು ಶಿಶುವೊಂದು ತುಮಕೂರು ತಾಲೂಕು ಹೊನ್ನೇನಹಳ್ಳಿ ಎಂಬ ಗ್ರಾಮದ ಗದ್ದೆಯಲ್ಲಿ ಪತ್ತೆಯಾಗಿದೆ.

    ಗ್ರಾಮಸ್ಥರೊಬ್ಬರು ಬಹಿರ್ದೆಸೆಗೆಂದು ತೆರಳಿದ್ದಾಗ ಮಗು ಅಳುವ ಶಬ್ದ ಕೇಳಿ ಸ್ಥಳಕ್ಕೆ ಹೋಗಿ ಮಗುವನ್ನು ನೋಡಿ ಗ್ರಾಮಕ್ಕೆ ತಂದಿದ್ದಾರೆ. ನಂತರ ಮಹದೇವಮ್ಮ ಎಂಬ ಮಹಿಳೆ ಮಗುವನ್ನ ಆರೈಕೆ ಮಾಡಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

    ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ಮಗು ಜನಿಸಿದ್ದು, ಮಗುವನ್ನ ಹಾಗೇ ಬೀಸಾಡಿ ಹೋಗಿರುವುದರಿಂದ ತೀವ್ರ ಶೀತಕ್ಕೆ ರಕ್ತ ಹೆಪ್ಪುಗಟ್ಟಿದೆ. ಅಲ್ಲದೇ ಮಗುವಿನ ಉಸಿರಾಟದಲ್ಲೂ ತೀವ್ರ ತೊಂದರೆ ಇದೆ ಅಂತ ಆರೈಕೆ ಮಾಡುತ್ತಿರುವ ನರ್ಸ್ ಹೇಳುತ್ತಿದ್ದಾರೆ.

    ಈ ಕುರಿತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮಗು ಹೆಣ್ಣಾಯ್ತೆಂದು ಆಸ್ಪತ್ರೆ ಹಿಂಬದಿ ಎಸೆದೇ ಹೋದ್ಳು!

    ಮಗು ಹೆಣ್ಣಾಯ್ತೆಂದು ಆಸ್ಪತ್ರೆ ಹಿಂಬದಿ ಎಸೆದೇ ಹೋದ್ಳು!

    ವಿಜಯಪುರ: ಹೆಣ್ಣು ಮಗು ಅನ್ನುವ ಕಾರಣಕ್ಕೆ ನವಜಾತ ಹೆಣ್ಣು ಶಿಶುವೊಂದನ್ನ ತಾಯಿಯೊಬ್ಬಳು ಬಿಸಾಡಿ ಹೋದ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಕಡಣಿ ಗ್ರಾಮದ ಸರಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಜನ್ಮ ನೀಡಿದ ಮಹಾತಾಯಿಯೊಬ್ಬಳು ಹೆಣ್ಣು ಅನ್ನುವ ಕಾರಣಕ್ಕೆ ಬೀಸಾಡಿ ಹೋಗಿದ್ದಾಳೆ. ಅದೇ ಆಸ್ಪತ್ರೆಯ ಹಿಂದುಗಡೆ ಮಗುವನ್ನ ಎಸೆದಿದ್ದಾಳೆ.

    ಆಸ್ಪತ್ರೆಯ ಹಿಂದುಗಡೆ ಹೋಗುತ್ತಿದ್ದವರು ಮಗು ಅಳುತ್ತಿರುವುದನ್ನು ಕೇಳಿ ಬಳಿಕ ಮಗುವನ್ನು ರಕ್ಷಿಸಿದ್ದಾರೆ. ನಂತರ ಮಗುವನ್ನ ಎತ್ತಿಕೊಂಡು ಬಂದು ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗುರುವಾರ ಮಗು ಜನಿಸಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv