Tag: New Delhi

  • ಮುಂದಿನ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ನೇಮಕ; ನ.24 ರಂದು ಅಧಿಕಾರ ಸ್ವೀಕಾರ

    ಮುಂದಿನ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ನೇಮಕ; ನ.24 ರಂದು ಅಧಿಕಾರ ಸ್ವೀಕಾರ

    ನವದೆಹಲಿ: ಸುಪ್ರೀಂ ಕೋರ್ಟ್‌ನ (Supreme Court) 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ (Justice Surya Kant) ನೇಮಕಗೊಂಡಿದ್ದು, ನವೆಂಬರ್ 24ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    ಸಿಜೆಐ ಭೂಷಣ್ ಆರ್. ಗವಾಯಿ ಅವರ ಅಧಿಕಾರಾವಧಿ ನವೆಂಬರ್ 23ರಂದು ಅಂತ್ಯಗೊಳ್ಳಲಿದೆ. ಹೀಗಾಗಿ, ಸಿಜೆ ಹುದ್ದೆಗೆ ಸೂರ್ಯಕಾಂತ್ ಹೆಸರನ್ನು ಗವಾಯಿ ಅವರು ಕೇಂದ್ರ ಸರ್ಕಾರಕ್ಕೆ (Central Government) ಶಿಫಾರಸು ಮಾಡಿದ್ರು. ಇದೀಗ ಕೇಂದ್ರ ಕಾನೂನು ಸಚಿವಾಲಯ ಬಿ.ಆರ್ ಗವಾಯಿ ಶಿಫಾರಸನ್ನು ಪರಿಗಣಿಸಿದೆ. ನವೆಂಬರ್ 24ರಂದು ನ್ಯಾ. ಸೂರ್ಯಕಾಂತ್ ಸಿಜೆ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    ಗವಾಯಿ ಅವರಿಗೂ ಮುನ್ನ ಸಂಜೀವ್‌ ಖನ್ನಾ, ಡಿ.ವೈ ಚಂದ್ರಚೂಡ್‌, ಉದಯ್‌ ಉಮೇಶ್‌ ಲಲಿತ್‌, ಎನ್‌.ವಿ ರಮಣ ಸಿಜೆಗಳಾಗಿ ಕರ್ವವ್ಯ ನಿರ್ವಹಿಸಿದ್ದರು.

  • ದೆಹಲಿಯಲ್ಲಿ ಮೋಡ ಬಿತ್ತನೆ ಪ್ರಯೋಗ ವಿಫಲ – ತಾತ್ಕಲಿಕವಾಗಿ ಮುಂದೂಡಿಕೆ

    ದೆಹಲಿಯಲ್ಲಿ ಮೋಡ ಬಿತ್ತನೆ ಪ್ರಯೋಗ ವಿಫಲ – ತಾತ್ಕಲಿಕವಾಗಿ ಮುಂದೂಡಿಕೆ

    ನವದೆಹಲಿ: ವಾತಾವರಣದಲ್ಲಿ ಸಾಕಷ್ಟು ತೇವಾಂಶವಿಲ್ಲದ (Insufficient Moisture) ಕಾರಣ ಬುಧವಾರ ದೆಹಲಿಯಲ್ಲಿ ನಡೆಯಬೇಕಿದ್ದ ಮೋಡ ಬಿತ್ತನೆ ಪ್ರಯೋಗವನ್ನು (Cloud Seeding Trial) ಸ್ಥಗಿತಗೊಳಿಸಲಾಗಿದೆ ಎಂದು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT Kanpur) ಪ್ರಕಟಣೆಯಲ್ಲಿ ತಿಳಿಸಿದೆ.

    ಕೃತಕವಾಗಿ ಮಳೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿರುವ ಈ ಪ್ರಕ್ರಿಯೆಯು ಸರಿಯಾದ ಮೋಡ ಮತ್ತು ತೇವಾಂಶದ ಪರಿಸ್ಥಿತಿಗಳನ್ನು ಅವಲಂಬಿಸಿರುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ದೆಹಲಿ ಸರ್ಕಾರವು ಐಐಟಿ-ಕಾನ್ಪುರದ ಸಹಯೋಗದೊಂದಿಗೆ ಮಂಗಳವಾರ ಬುರಾರಿ, ಉತ್ತರ ಕರೋಲ್ ಬಾಗ್, ಮಯೂರ್ ವಿಹಾರ್ ಮತ್ತು ಬದ್ಲಿ ಸೇರಿದಂತೆ ಎರಡು ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸಿತು. ದೆಹಲಿಯಲ್ಲಿ ಯಾವುದೇ ಮಳೆ ದಾಖಲಾಗಿಲ್ಲವಾದರೂ, ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಕೆಲವು ಭಾಗಗಳಲ್ಲಿ ಲಘು ಮಳೆಯಾಗಿದೆ. ಇದನ್ನೂ ಓದಿ: ಕಾರಿನ ಮಿರರ್‌ಗೆ ಟಚ್‌ ಆಯ್ತು ಅಂತ ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ; ದಂಪತಿ ಬಂಧನ

    ಪ್ರಯೋಗಗಳ ಸಮಯದಲ್ಲಿ ತೇವಾಂಶದ ಮಟ್ಟವು ಕೇವಲ 15-20 ಪ್ರತಿಶತದಷ್ಟಿತ್ತು, ಇದು ಮಳೆಯನ್ನು ಉಂಟುಮಾಡಲು ಸಾಕಾಗಲಿಲ್ಲ. ಮೋಡ ಬಿತ್ತನೆ ಬಳಿಕ ತೇವಾಂಶದ ಮಟ್ಟವು ಕೇವಲ 50-60 ಪ್ರತಿಶತದಷ್ಟಿರಬೇಕು. ಈ ಕಾರಣದಿಂದ ದೆಹಲಿಯಲ್ಲಿ ಮಳೆ ಸಾಧ್ಯವಾಗಿಲ್ಲ. ಹವಾಮಾನ ಪರಿಸ್ಥಿತಿಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಪ್ರಯತ್ನಿಸಲಾಗುವುದು ಎಂದು ಐಐಟಿ-ಕೆ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

  • ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

    ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

    – ಸೌರಶಕ್ತಿ ವಿದ್ಯುತ್ ಉತ್ಪಾದನೆ ಜತೆಗೆ ಸಬಲೀಕರಣ-ಸಮಗ್ರ ಅಭಿವೃದ್ಧಿಗೆ ಪೂರಕ
    – ಅಂತಾರಾಷ್ಟ್ರೀಯ ಸೌರ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ

    ನವದೆಹಲಿ: ಹವಾಮಾನ ಬದಲಾವಣೆ ಪ್ರಪಂಚದಾದ್ಯಂತ ಪರಿಣಾಮ ಬೀರುತ್ತಿದ್ದು, ಇದನ್ನೆದುರಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಗುರಿ ಸಾಧನೆ ಮೂಲಕ ದೃಢವಾದ ಹೆಜ್ಜೆಯಿರಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಶ್ಲಾಘಿಸಿದರು.

    ನವದೆಹಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸೌರ ಒಕ್ಕೂಟದ (International Solar Alliance Assembly) 8ನೇ ಅಧಿವೇಶನವನ್ನು ಉದ್ಘಾಟಿಸಿ, ಹವಾಮಾನ ಬದಲಾವಣೆ ಎದುರಿಸಲು ಇಂದು ತುರ್ತು ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಸೌರಶಕ್ತಿ ಅಳವಡಿಕೆ ಮತ್ತು ಬಳಕೆ ಮೂಲಕ ಈ ಜಾಗತಿಕ ಸವಾಲೆದುರಿಸುವಲ್ಲಿ ಐಎಸ್‌ಎ ಮಹತ್ವದ ಪಾತ್ರವಹಿಸಿದೆ ಎಂದು ಪ್ರತಿಪಾದಿಸಿದರು.

    ಸೌರಶಕ್ತಿ ವಿದ್ಯುತ್ ಉತ್ಪಾದನೆಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸಮಾಜ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಬಲೀಕರಣ, ಅಂತರ್ಗತ ಅಭಿವೃದ್ಧಿಗೂ ಪೂರಕವಾಗಿದೆ. ದೊಡ್ಡ ಪ್ರಮಾಣದ ಸೌರ ಸ್ಥಾಪನೆಗಳ ವಿಸ್ತರಣೆ ವೇಳೆ ಆಯಾ ಪ್ರದೇಶದ ಪರಿಸರ ಸಮತೋಲನ ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದರು.

    ಸೌರಶಕ್ತಿಯನ್ನು ಘನತೆ ಮತ್ತು ಸಾಮೂಹಿಕ ಸಮೃದ್ಧಿಯ ಮೂಲವಾಗಿ ಬಳಸಿಕೊಳ್ಳುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವು ಜಗತ್ತಿಗೆ ಮತ್ತು ಭವಿಷ್ಯದ ಪೀಳಿಗೆಗೆ ಹೆಚ್ಚಿನ ಸಮರ್ಪಣಾಭಾವದಿಂದ ಕೆಲಸ ಮಾಡಬೇಕು ಎಂದು ರಾಷ್ಟ್ರಪತಿ ಕರೆ ನೀಡಿದರು.

    ಭಾರತ ಮಹತ್ವದ ಮೈಲಿಗಲ್ಲು:
    ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ ಒಂದು ಮಹತ್ವದ ಮೈಲಿಗಲ್ಲಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡುತ್ತಿದೆ. ಕೈಗೆಟುಕುವ ಮತ್ತು ಶುದ್ಧ ಇಂಧನ ಸಮುದಾಯಗಳನ್ನು ಸಬಲಗೊಳಿಸುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಮುನ್ನಡೆಸುತ್ತದೆ. ಸೌರಶಕ್ತಿ ವಿದ್ಯುತ್ ಉತ್ಪಾದನೆ ಮಾತ್ರವಲ್ಲ, ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಗೂ ಪೂರಕವಾಗಿದೆ ಎಂದು ದ್ರೌಪದಿ ಮುರ್ಮು ಪ್ರತಿಪಾದಿಸಿದರು.

    ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷ ಮತ್ತು ಎಲ್ಲಾ ಸದಸ್ಯ ರಾಷ್ಟ್ರಗಳು ಮೂಲಸೌಕರ್ಯ ಮತ್ತು ಜನಜೀವನದ ಮೇಲೆ ಕೇಂದ್ರೀಕರಿಸಬೇಕು. ಉದ್ಯೋಗ ಸೃಷ್ಟಿ, ಮಹಿಳಾ ನಾಯಕತ್ವ, ಗ್ರಾಮೀಣ ಜೀವನೋಪಾಯ ಮತ್ತು ಡಿಜಿಟಲ್ ಸೇರ್ಪಡೆಗೆ ನೆರವಾಗುವಂತೆ ಸೌರಶಕ್ತಿ ಸಾಮೂಹಿಕ ಕ್ರಿಯಾ ಯೋಜನೆ ಅಭಿವೃದ್ಧಿಪಡಿಸಬೇಕೆಂದು ರಾಷ್ಟ್ರಪತಿ ಇದೇ ವೇಳೆ ಸಲಹೆ ನೀಡಿದರು.

    ಸೌರ ಪ್ರಗತಿಯನ್ನು ಮೆಗಾವ್ಯಾಟ್ ಮೂಲಕ ಮಾತ್ರವಲ್ಲದೆ ಸುಧಾರಿತ ಕುಟುಂಬಗಳ ಸಂಖ್ಯೆ ಮತ್ತು ಸಮುದಾಯಗಳ ಸಂಖ್ಯೆ ಮೂಲಕ ಅಳೆಯಬೇಕು. ತಂತ್ರಜ್ಞಾನ ಅಭಿವೃದ್ಧಿಗೆ ಗಮನ ಹರಿಸಬೇಕು. ಸೌರ ಸ್ಥಾಪನೆಗಳ ವೇಳೆ ಪರಿಸರ ಸಂರಕ್ಷಣೆ, ಹಸಿರು ಶಕ್ತಿಯತ್ತ ಗಮನಹರಿಸಿ ಪ್ರದೇಶದ ಪರಿಸರ ಸಮತೋಲನಕ್ಕೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಿಸಿದರು.

    125 ಸದಸ್ಯ ರಾಷ್ಟ್ರಗಳ ಸಹಿ: ಸೌರಶಕ್ತಿಯಲ್ಲಿ ಜಾಗತಿಕ ಸಹಕಾರ ಮತ್ತು ಹೂಡಿಕೆಯನ್ನು ತ್ವರಿತಗೊಳಿಸಲು 125 ಸದಸ್ಯ ರಾಷ್ಟ್ರಗಳು ಮತ್ತು ಪಾಲುದಾರರು, ಸಹಿ ಹಾಕಿದರು. ವಿವಿಧ ದೇಶಗಳ 550ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು 30 ಸಚಿವರು, ಸಹಾಯಕ ಸಚಿವರು ಭಾಗವಹಿಸಿದ್ದರು.

  • ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    – ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯ

    ನವದೆಹಲಿ: ಆರ್‌ಎಸ್‌ಎಸ್ (RSS) ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಚಾಟಿ ಬೀಸಿದ್ದಾರೆ.

    ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ಯತೀಂದ್ರ ಸಿದ್ದರಾಮಯ್ಯ

    ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಖಂಡಿಸಿದರು. ಇದನ್ನೂ ಓದಿ: ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ. ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

  • CJI ಗವಾಯಿ ಮೇಲೆ ಶೂ ಎಸೆದ ಕೇಸ್ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ ಸುಪ್ರೀಂ

    CJI ಗವಾಯಿ ಮೇಲೆ ಶೂ ಎಸೆದ ಕೇಸ್ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ ಸುಪ್ರೀಂ

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ (BR Gavai) ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ನೋಟಿಸ್ ನೀಡಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.

    ವಿಚಾರಣೆ ವೇಳೆ ಈ ವಿಷಯದಲ್ಲಿ ನೋಟಿಸ್ ಜಾರಿ ಮಾಡುವಂತೆ ನ್ಯಾ.ಸೂರ್ಯ ಕಾಂತ್ ಮತ್ತು ನ್ಯಾ.ಜೋಯ್ಮಲ್ಯ ಬಾಗ್ಚಿ ಅವರ ಪೀಠವನ್ನು ಒತ್ತಾಯಿಸಿದರೂ ಕೂಡ ನ್ಯಾಯಾಲಯ ನಿರಾಕರಿಸಿದೆ. ಈ ರೀತಿ ಪ್ರಕರಣಗಳನ್ನು ತಡೆಗಟ್ಟಲು ಮಾರ್ಗಸೂಚಿಗಳ ಅಗತ್ಯವಿದೆ. ಹೀಗಾಗಿ ಒಂದು ವಾರದ ನಂತರ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಪೀಠ ತಿಳಿಸಿದೆ.ಇದನ್ನೂ ಓದಿ: ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನ – ವಕೀಲನ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ

    ಈ ಬಗ್ಗೆ ವಾದ ಮಂಡಿಸಿದ ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ವಿಕಾಸ್ ಸಿಂಗ್, ಘಟನೆ ನಡೆದ ಬಳಿಕ ಕೆಲ ಸಮಯ ವಕೀಲ ರಾಕೇಶ್ ಕಿಶೋರ್‌ನ್ನು ಅರೆಸ್ಟ್ ಮಾಡಿದ್ದರು. ಬಳಿಕ ಅವರನ್ನು ಬಿಡುಗಡೆ ಮಾಡಲಾಯಿತು. ನಂತರ ಈ ಬಗ್ಗೆ ಸ್ವತಃ ರಾಕೇಶ್ ಕಿಶೋರ್ ಹೇಳಿಕೆ ನೀಡಿದ್ದು, ದೇವರು ನನಗೆ ಹಾಗೇ ಮಾಡುವಂತೆ ತಿಳಿಸಿದ. ಆದರೆ ನಾನು ಮತ್ತೆ ಅದೇ ರೀತಿಯಾಗಿ ಮಾಡುತ್ತೇನೆ ಅಂತ ಹೇಳಿದ್ದರು ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾ.ಸೂರ್ಯಕಾಂತ್, ಈ ಕೃತ್ಯವು ತೀವ್ರ ಮತ್ತು ಗಂಭೀರವಾದ ನ್ಯಾಯಾಂಗ ನಿಂದನೆಯಾಗಿದೆ. ಇದು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಆದರೆ ಒಮ್ಮೆ ಸಿಜೆಐ ಸ್ವತಃ ಕ್ಷಮಿಸಿದ ನಂತರವೂ ಹೀಗೆ ಹೇಳುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

    ಈ ಘಟನೆಯನ್ನು ನಾವು ಹಾಗೇ ಬಿಡುವುದಿಲ್ಲ. ಜನರು ತಮಾಷೆ ಮಾಡುತ್ತಿದ್ದಾರೆ, ಇದು ಸಂಸ್ಥೆಗೆ ಅಗೌರವವನ್ನು ತರುತ್ತದೆ, ದಯವಿಟ್ಟು ನೋಟಿಸ್ ನೀಡಿ ಅವರು ಪಶ್ಚಾತ್ತಾಪ ವ್ಯಕ್ತಪಡಿಸಲಿ. ಇಲ್ಲದಿದ್ದರೆ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ವಕೀಲ ವಿಕಾಸ್ ಸಿಂಗ್ ಹೇಳಿದರು.

    ಈ ಸಂಬಂಧ ಸಿಜೆಐ ಅವರು ಈಗಾಗಲೇ ಆರೋಪಿಯನ್ನು ಕ್ಷಮಿಸಿದ್ದಾರೆ. ಅವರ ನಿರ್ಧಾರವನ್ನು ನಾವು ಪ್ರಶ್ನಿಸಲು ಸಾಧ್ಯವಿಲ್ಲ. ಹೀಗಾಗಿ ವಿರೋಧ ಮಾಡುವ ಪ್ರಕ್ರಿಯೆ ಆರಂಭಿಸುವ ಬದಲು ಈ ರೀತಿಯ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಪೀಠ ತಿಳಿಸಿದೆ.ಇದನ್ನೂ ಓದಿ: ಯಾವುದೇ ಪಶ್ಚಾತ್ತಾಪವಿಲ್ಲ, ಕ್ಷಮೆ ಕೇಳಲ್ಲ, ಶೂ ಎಸೆಯಲು ದೇವರೇ ಪ್ರಚೋದಿಸಿದ್ದಾನೆ: ವಕೀಲ ರಾಕೇಶ್‌ ಕಿಶೋರ್‌

  • ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ನವದೆಹಲಿ: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ‍್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಇದನ್ನೂ ಓದಿ: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ – ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯುವಂತಿಲ್ಲ!

    ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ (SIT) ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ – ಸಚಿವನಾಗುವ ಇಂಗಿತ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

    ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

  • ಬಂಗಾಳ ಕೊಲ್ಲಿಯಲ್ಲಿ ‘ಮೋಂಥಾ’ ಸೈಕ್ಲೋನ್ ಅಬ್ಬರ – ಚೆನ್ನೈನಲ್ಲಿ ಭಾರೀ ಮಳೆ ಸಾಧ್ಯತೆ

    ಬಂಗಾಳ ಕೊಲ್ಲಿಯಲ್ಲಿ ‘ಮೋಂಥಾ’ ಸೈಕ್ಲೋನ್ ಅಬ್ಬರ – ಚೆನ್ನೈನಲ್ಲಿ ಭಾರೀ ಮಳೆ ಸಾಧ್ಯತೆ

    ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ (Bay Of Bengal) ವಾಯಭಾರ ಕುಸಿತ ಹಿನ್ನೆಲೆ ಅ.27ರ ಹೊತ್ತಿಗೆ ಚಂಡಮಾರುತ (Cyclone) ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಹೀಗಾಗಿ ಮುಂದಿನ ಎರಡ್ಮೂರು ದಿನಗಳ ಕಾಲ ಚೈನ್ನೈನಲ್ಲಿ (Chennai) ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಇಂದು ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ನಾಳೆ ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯುವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ. ಚಂಡಮಾರುತ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ.28ರವರೆಗೂ ಮಳೆ ಮುಂದುವರಿಯಲಿದೆ. ಇದನ್ನೂ ಓದಿ: ವಂಚಕರ ಪರವಾಗಿ ಪಿಎಸ್‌ಐಗೆ ಕರೆ – ಆಪ್ತನ ಕೇಸ್ ಕಾಂಪ್ರಮೈಸ್‌ಗೆ ಸಚಿವ ಜಮೀರ್ ಒತ್ತಡ ಹೇರಿದ್ರಾ?

    ಈ ಚಂಡಮಾರುತಕ್ಕೆ ಅಂತರರಾಷ್ಟ್ರೀಯ ಸಮುದಾಯದ ಶಿಫಾರಸಿನಂತೆ ಥಾಯ್ಲೆಂಡ್‌ನ ಮೊಂಥಾ (Montha Cyclone) ಎಂಬ ಹೆಸರು ಇಡಲಾಗಿದೆ. ಅ.27ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬಾಲಿವುಡ್ ಹಾಸ್ಯ ನಟ ಸತೀಶ್‌ ಶಾ ನಿಧನ

  • ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ನವದೆಹಲಿ: ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಸೇನೆಯ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ (Human Rights Violation) ಎಂದು ಭಾರತ (India) ಖಂಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ (Parvathaneni Harish), ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಕ್ರೌರ್ಯವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದರು.

    80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ ಮುಕ್ತ ಚರ್ಚೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಹರೀಶ್, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮತ್ತು ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗೊಳಿಸಬೇಕೆಂದು ನಾವು ಪಾಕಿಸ್ತಾನವನ್ನು ಒತ್ತಾಯಿಸುತ್ತೇವೆ. ಪಾಕಿಸ್ತಾನದ ಮಿಲಿಟರಿ ಆಕ್ರಮಣ, ದಬ್ಬಾಳಿಕೆ, ಕ್ರೂರತೆ ಮತ್ತು ಸಂಪನ್ಮೂಲಗಳ ಅಕ್ರಮ ಶೋಷಣೆಯ ವಿರುದ್ಧ ಜನಸಂಖ್ಯೆಯು ಬಹಿರಂಗ ದಂಗೆಯಲ್ಲಿ ತೊಡಗಿದೆ ಎಂದರು. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

    ಜಮ್ಮು ಮತ್ತು ಕಾಶ್ಮೀರವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿ ಉಳಿಯುತ್ತದೆ ಮತ್ತು ಇಲ್ಲಿನ ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಆನಂದಿಸುತ್ತಾರೆ. ಅಂತಹ ಸ್ವಾತಂತ್ರ‍್ಯಗಳು ಪಾಕಿಸ್ತಾನದಲ್ಲಿ ಪರಕೀಯ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

    ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದ ಜನರು ಭಾರತದ ಕಾಲ-ಪರೀಕ್ಷಿತ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಅನುಸಾರವಾಗಿ ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಾರೆ. ಇವು ಪಾಕಿಸ್ತಾನಕ್ಕೆ ಅನ್ಯವಾದ ಪರಿಕಲ್ಪನೆಗಳು ಎಂದು ನಮಗೆ ತಿಳಿದಿದೆ ಎಂದರು. ಇದನ್ನೂ ಓದಿ: ‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ – ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ

    ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆ ಗುಂಡು ಹಾರಿಸಿದ ನಂತರ ಹಲವಾರು ನಾಗರಿಕರು ಸಾವನ್ನಪ್ಪಿದರು. ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ ನಂತರ ಅಶಾಂತಿ ಭುಗಿಲೆದ್ದಿತು. ಜಂಟಿ ಅವಾಮಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು. ಮಾರುಕಟ್ಟೆಗಳು, ಅಂಗಡಿಗಳು ಮತ್ತು ಸಾರಿಗೆ ಸೇವೆಗಳು ಹಲವಾರು ದಿನಗಳವರೆಗೆ ಈ ಪ್ರದೇಶದಾದ್ಯಂತ ಮುಚ್ಚಲ್ಪಟ್ಟವು. ಇದನ್ನೂ ಓದಿ: ಪರೀಕ್ಷೆಯಲ್ಲಿ ಕಳಪೆ ಅಂಕ ಬಂತೆಂದು MBBS ವಿದ್ಯಾರ್ಥಿನಿ ಆತ್ಮಹತ್ಯೆ

  • ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

    ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

    – ದೆಹಲಿಯ ಹಲವೆಡೆ ಭಯೋತ್ಪಾದಕ ದಾಳಿಗೆ ಪ್ಲ್ಯಾನ್‌
    – ಆತ್ಮಹತ್ಯಾ ದಾಳಿಗೆ ತರಬೇತಿ ಪಡೆಯುತ್ತಿದ್ದ ಶಂಕಿತರು

    ನವದೆಹಲಿ: ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ (Suspected Terrorists) ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ.

    ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌ ವಿಶೇಷ ಘಟಕ (Delhi Police Speical Unit) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐಸಿಸ್‌ ಮಾಡ್ಯೂಲ್‌ (ISIS Module) ಭೇದಿಸಿದ್ದು, ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬನನ್ನ ಅದ್ನಾನ್‌ ಎಂದು ಗುರುತಿಸಲಾಗಿದೆ. ಈತ ಮೂಲತಃ ಮಧ್ಯಪ್ರದೇಶದ ಭೋಪಾಲ್ ಮೂಲದವನು, ಮತ್ತೊಬ್ಬ ಶಂಕಿತನನ್ನ ದೆಹಲಿಯ ಸಾದಿಕ್ ನಗರದಲ್ಲಿ ಬಂಧಿಸಲಾಗಿದೆ. ಈ ಇಬ್ಬರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ದೆಹಲಿಯಲ್ಲಿ ಪ್ರಮುಖ ದಾಳಿ ನಡೆಸಲು ಪ್ಲ್ಯಾನ್‌ ಮಾಡುತ್ತಿದ್ದರು. ಇಬ್ಬರು ಫಿದಾಯೀನ್ (ಆತ್ಮಹತ್ಯಾ) ದಾಳಿಗಳಿಗೆ ತರಬೇತಿ ಪಡೆದಿದ್ದರು. ಸದ್ಯ ಇಬ್ಬರನ್ನ ಬಂಧಿಸಿದ್ದು, ಅವರ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಸ್ಫೋಟಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ತಾಪುರ ಆರ್‌ಎಸ್‌ಎಸ್ ಫೈಟ್‌ – ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ

    ಇನ್ನೂ ಕಾರ್ಯಾಚರಣೆ ಮುಂದುವರಿಸಿರುವ ಅಧಿಕಾರಿಗಳು ಸಂಪೂರ್ಣ ಜಾಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಐಸಿಸ್‌ ಜಾಲದಲ್ಲಿ ಇನ್ನು ಎಷ್ಟು ಮಂದಿ ಇದ್ದಾರೆ? ಭಾರತದಲ್ಲಿ ಬೇರೆ ಎಲ್ಲೆಲ್ಲಿ ದಾಳಿಗೆ ಯೋಜನೆ ರೂಪಿಸಲಾಗಿದೆ? ಎಂಬೆಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಬಲಿ

  • ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

    ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

    – 2011ರ VOPPA ಆದೇಶಕ್ಕೆ ಪ್ರಮುಖ ತಿದ್ದುಪಡಿ
    – ಆದೇಶ ಪಾಲಿಸದಿದ್ರೆ ಕಠಿಣ ಕ್ರಮ; ಸಚಿವರ ಎಚ್ಚರಿಕೆ

    ನವದೆಹಲಿ: ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ತರಕಾರಿ ತೈಲ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ (ನಿಯಂತ್ರಣ) ಆದೇಶ-2011 (VOPPA ಆದೇಶ)ಕ್ಕೆ ಪ್ರಮುಖ ತಿದ್ದುಪಡಿಗೆ ಸೂಚಿಸಿದೆ. ತಿದ್ದುಪಡಿ ಮಾಡಲಾದ VOPPA ಆದೇಶ-2025 ಭಾರತದಲ್ಲಿ ಖಾದ್ಯ ತೈಲ ವಲಯದಾದ್ಯಂತ ನಿಯಂತ್ರಕ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆ ಗುರಿ ಹೊಂದಿದೆ ಎಂದಿದ್ದಾರೆ. ಇದನ್ನೂ ಓದಿ: Bihar Election| ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ

    ನೋಂದಣಿ ಕಡ್ಡಾಯ: ತಿದ್ದುಪಡಿ ಆದೇಶದಂತೆ ಖಾದ್ಯ ತೈಲ ಪೂರೈಕೆಯಲ್ಲಿ ಭಾಗಿಯಾಗಿರುವ ಎಲ್ಲಾ ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್‌ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯವಾಗಿದೆ. ಅಲ್ಲದೇ, ಆನ್‌ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್‌ ಸಲ್ಲಿಕೆ ಸಹ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

    ಎಲ್ಲಾ ಖಾದ್ಯ ತೈಲ ಸಂಬಂಧಿತ ಘಟಕಗಳು https://www.nsws.gov.in ನಲ್ಲಿ ರಾಷ್ಟ್ರೀಯ ಏಕ ವಿಂಡೋ ವ್ಯವಸ್ಥೆ ಮೂಲಕ ನೋಂದಾಯಿಸಿಕೊಳ್ಳಬೇಕು. ನಂತರ ಘಟಕಗಳು ಮಾಸಿಕ ಉತ್ಪಾದನೆ, ಸ್ಟಾಕ್ ಮತ್ತು ಲಭ್ಯತೆಯ ರಿಟರ್ನ್‌ಗಳನ್ನು https://www.edibleoilindia.in ಮೂಲಕ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಮೋದಿ

    ಖಾದ್ಯ ತೈಲ ವಲಯದಲ್ಲಿ ನಿಖರ ದತ್ತಾಂಶ ಸಂಗ್ರಹಣೆ, ನೈಜ-ಸಮಯದ ಮೇಲ್ವಿಚಾರಣೆ ಮತ್ತು ನೀತಿಗಳ ಸುಧಾರಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಣಾಯಕ ಹೆಜ್ಜೆಯಿರಿಸಿದೆ. ತಪಾಸಣೆ ಮತ್ತು ಕ್ಷೇತ್ರ ಪರಿಶೀಲನೆಗೆ ಯೋಜಿಸಿದ್ದು, ಎಣ್ಣೆ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ ಬಗೆಗಿನ ಕ್ರಮವನ್ನು ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

    ಆದೇಶ ಉಲ್ಲಂಘಿಸಿದರೆ ಕ್ರಮ: ಈ ತಿದ್ದುಪಡಿ VOPPA ಆದೇಶ-2025 ಅನ್ನು ಪಾಲಿಸದಿದ್ದರೆ, ನೋಂದಣಿ, ರಿಟರ್ನ್‌ ಸಲ್ಲಿಸಲು ವಿಫಲವಾದ ತೈಲ ಘಟಕಗಳ ವಿರುದ್ಧ ದಂಡ ವಿಧಿಸುವ ಜತೆಗೆ VOPPA ಆದೇಶ ಉಲ್ಲಂಘನೆ ಎಂದು ಪರಿಗಣಿಸಿ ಕಾಯ್ದೆ 2008ರ ನಿಬಂಧನೆಯಡಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಎಚ್ಚರಿಸಿದ್ದಾರೆ.

    VOPPA ತಿದ್ದುಪಡಿ ಆದೇಶದ ಅನುಸರಣೆ ಕೇವಲ ನಿಯಂತ್ರಕ ಅವಶ್ಯಕತೆಯಲ್ಲ. ಇದು ಭಾರತದ ಆಹಾರ ಭದ್ರತಾ ಮೂಲಸೌಕರ್ಯಕ್ಕೆ ನಿರ್ಣಾಯಕ ಕೊಡುಗೆಯಾಗಿದೆ. ಖಾದ್ಯ ತೈಲ ವಲಯದಲ್ಲಿ ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕತೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.