Tag: New Prime Minister

  • ಶ್ರೀಲಂಕಾ ನೂತನ ಪ್ರಧಾನಿಯಾಗಿ ದಿನೇಶ್ ಗುಣವರ್ಧನಾ ಪ್ರಮಾಣ ವಚನ ಸ್ವೀಕಾರ

    ಶ್ರೀಲಂಕಾ ನೂತನ ಪ್ರಧಾನಿಯಾಗಿ ದಿನೇಶ್ ಗುಣವರ್ಧನಾ ಪ್ರಮಾಣ ವಚನ ಸ್ವೀಕಾರ

    ಕೊಲಂಬೋ: ಶ್ರೀಲಂಕಾದ ನೂತನ ಪ್ರಧಾನ ಮಂತ್ರಿಯಾಗಿ ಹಿರಿಯ ರಾಜಕಾರಣಿ ಮತ್ತು ಮಾಜಿ ಗೃಹ ಸಚಿವ ದಿನೇಶ್ ಗುಣವರ್ಧನಾ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ರಾಜಕೀಯದಲ್ಲಿ ಧೀಮಂತ ವ್ಯಕ್ತಿ ಎಂದೇ ಖ್ಯಾತಿ ಪಡೆದಿರುವ 73 ವರ್ಷದ ಗುಣವರ್ಧನಾ ಅವರು ಈ ಹಿಂದೆ ವಿದೇಶಾಂಗ ಸಚಿವ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ಏಪ್ರಿಲ್‍ನಲ್ಲಿ ಆಗಿನ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಗೃಹ ಸಚಿವರಾಗಿ ನೇಮಿಸಿದ್ದರು. ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಕೂಡ ಶುಕ್ರವಾರದಂದು ಹಿಂದಿನ ಸರ್ಕಾರದ ಸದಸ್ಯರನ್ನು ಒಳಗೊಂಡ ತಮ್ಮ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಇದನ್ನೂ ಓದಿ: ಸಾರ್ವಜನಿಕವಾಗಿ ಕಾರಿಗೆ ಅಲ್ಲ, ಅವರ ಮನೆಗೆ ಬೆಂಕಿ ಹಾಕಿಕೊಳ್ಳಬೇಕು – ಕಾಂಗ್ರೆಸ್‍ಗೆ ಆರಗ ತಿರುಗೇಟು

    ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ದೇಶ ಬಿಟ್ಟು ಪಲಾಯನ ಮಾಡಿ, ನಂತರ ತಮ್ಮ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಗೋತಬಯ ರಾಜಪಕ್ಸೆ ರಾಜೀನಾಮೆ ನೀಡಿದ ನಂತರ 73 ವರ್ಷದ ವಿಕ್ರಮಸಿಂಘೆ ಅವರು ದೇಶದ ಎಂಟನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಬ್ಯಾಗ್‍ನಲ್ಲಿ ಬಾಂಬ್ ಇದೆ ವಿಮಾನದಲ್ಲಿ ರಂಪಾಟ – ಬೆಚ್ಚಿಬಿದ್ದ ಸಹಪ್ರಯಾಣಿಕರು

    Live Tv
    [brid partner=56869869 player=32851 video=960834 autoplay=true]

  • ಒಬ್ಬ ಸ್ನೇಹಿತನಾಗಿ ಇಮ್ರಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ: ಸಿಧು

    ಒಬ್ಬ ಸ್ನೇಹಿತನಾಗಿ ಇಮ್ರಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ: ಸಿಧು

    ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಿ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥ, ಪಾಕ್ ಮಾಜಿ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ಇಂದು ಪದ ಗ್ರಹಣ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಕ್ರಿಕೆಟ್ ಆಟಗಾರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು ಭಾಗವಹಿಸಿ ಶುಭಕೋರಿದ್ದಾರೆ.

    ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಮ್ರಾನ್ ಖಾನ್ ಪಾಕ್ 22 ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪಾಕ್ ಅಧ್ಯಕ್ಷ ಮಾಮ್ನೂನ್ ಹುಸೇನ್ ಪ್ರಮಾಣ ವಚನ ಭೋದಿಸಿದರು.

    ಕಾರ್ಯಕ್ರಮ ಬಳಿಕ ಮಾತನಾಡಿರುವ ಸಿಧು, ತಾನು ರಾಜಕೀಯ ಮುಖಂಡನಾಗಿ ಇಲ್ಲಿಗೆ ಆಗಮಿಸಲ್ಲ. ಬದಲಾಗಿ ಸ್ನೇಹಿತನಾಗಿ ಆಗಮಿಸಿದ್ದೆನೆ. ನೂತನ ಪ್ರಧಾನಿ ಇಮ್ರಾನ್ ಖಾನ್‍ಗೆ ಕಾಶ್ಮೀರಿ ಶಾಲು ತೆಗೆದುಕೊಂಡು ಬಂದಿದ್ದು, ನಾನು ಕಾಶ್ಮೀರಿ ಶಾಲುಗಳನ್ನು ತುಂಬಾ ಇಷ್ಟ ಪಡುತ್ತೇನೆ. ಇದು ಪ್ರೀತಿಯ ಸಂಕೇತವಾಗಿದೆ ಎಂದು ಹೇಳಿದ್ದಾರೆ.

    ಸಿಧು ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಿಧು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಪಾಕಿಸ್ತಾನದಲ್ಲಿ ನಡೆದ ಚುನಾವಣೆಯಲ್ಲಿ ರಾಜಕೀಯ ಬದಲಾವಣೆ ಗಾಳಿ ಬೀಸಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೊಸದಾಗಿ ಆಯ್ಕೆಯಾದ ಸರ್ಕಾರಕ್ಕೆ ಶುಭಕೋರಿದ್ದೆನೆ. ಇಂತಹ ಸನ್ನಿವೇಶದಲ್ಲಿ ಸಾಧನೆ ಮಾಡಿರುವ ಇಮ್ರಾನ್ ಖಾನ್ ಅವರಿಗೂ ಅಭಿನಂದನೆ ಸಲ್ಲಿಸಿದ್ದು, ಇಮ್ರಾನ್ ರನ್ನು ಕಳೆದ ಮೂರೂವರೆ ದಶಕಗಳಿಂದ ವಿವಿಧ ಸನ್ನಿವೇಶಗಳಲ್ಲಿ ಭೇಟಿಯಾಗಿದ್ದಾಗಿ ತಿಳಿಸಿದರು.

    ತಾನು ಇಮ್ರಾನ್ ಖಾನ್ ಅಭಿಮಾನಿಯಾಗಿದ್ದು, ಕ್ರಿಕೆಟ್ ಮೈದಾನದಲ್ಲಿ ಅವರ ಸಾಧನೆ ಅಪಾರ. ಇಂತಹದ್ದೇ ಬದಲಾವಣೆಯನ್ನು ಕೇವಲ ಕ್ರೀಡೆಯಲ್ಲಿ ಮಾತ್ರವಲ್ಲದೇ ದೇಶದಲ್ಲೂ ತಂದಿದ್ದಾರೆ. ಕ್ರಿಕೆಟ್ ಹೊರತು ಪಡಿಸಿ ಅವರ ಸಂಪೂರ್ಣ ವ್ಯಕ್ತಿತ್ವಕ್ಕೆ ನಾನು ಆಕರ್ಷಿತನಾಗಿದ್ದೇನೆ. ಇದುವೇ ನನ್ನನ್ನು ಅವರೊಂದಿಗೆ ಆಪ್ತರಾಗಿರಲು ಕಾರಣವಾಗಿದೆ. ತಾನು ಸಾಧ್ಯ ರಾಜಕೀಯದಲ್ಲಿದ್ದು, ಈ ಮೂಲಕ ದೇಶ ಹಾಗೂ ಜನರ ಅಭಿವೃದ್ಧಿಗೆ ಕಾರ್ಯನಿರ್ವಹಿಸುವ ಚಿಂತನೆ ಹೊಂದಿದ್ದೆನೆ. ಈ ಗುರಿಯನ್ನು ಸಾಧಿಸಲು ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಸಿಧು ಸ್ಪಷ್ಟನೆ ನೀಡಿದರು.

    ಸಿಧು ಸೇರಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರದ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಅವರಿಗೂ ಇಮ್ರಾನ್ ಖಾನ್ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು. ಆದರೆ ಸಿಧು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕಪಿಲ್ ದೇವ್, ಸುನಿಲ್ ಗವಾಸ್ಕರ್ ವ್ಯಕ್ತಿಕ ಕಾರಣಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv