ನ್ಯೂ ಇಯರ್ ವೆಲ್‌ಕಮ್ ಗೆ ಬೆಂಗಳೂರಿನ ವಿವಿಧೆಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪ್ರಯಾಣಿಕರ ಅನುಕೂಲಕ್ಕೆ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆ ಇತ್ತು. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಯಲಹಂಕ ಸೇರಿ ಹಲವು ನಿಲ್ದಾಣದಿಂದ ಬಸ್ ಸೇವೆಯನ್ನು ಬಿಎಂಟಿಸಿ ಕಲ್ಪಿಸಿತ್ತು.
ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳ ಸೇವೆ ನಿಯೋಜಿಸಿದ ಪರಿಣಾಮ ಬಿಎಂಟಿಸಿ ಒಂದೇ ದಿನದಲ್ಲಿ4.37 ಕೋಟಿ ರೂ.ಆದಾಯಗಳಿಸಿದೆ.
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL) ಇಲ್ಲಿನ ಬಸವೇಶ್ವರ ನಗರದ ತಿಮ್ಮಯ್ಯ ರಸ್ತೆಯಲ್ಲಿ ಹೊಸದಾಗಿ ಆರಂಭಿಸಿರುವ ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ನೂತನ ವರ್ಷಾರಂಭದ ದಿನವಾದ ಸೋಮವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಮಧ್ಯಮ ವರ್ಗದಿಂದ ಹಿಡಿದು ಸಮಾಜದ ಪ್ರತಿಯೊಂದು ವರ್ಗದ ಗ್ರಾಹಕರನ್ನೂ ಸೆಳೆಯುವುದು ಎಂಎಸ್ಐಎಲ್ ನ ಗುರಿಯಾಗಿದೆ. ಇದರಂತೆ, ಹೊಸ ರೂಪ ಪಡೆದಿರುವ ಈ ಬೋಟಿಕ್‌ನಲ್ಲಿ ಸಾಮಾನ್ಯ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಬ್ರಾಂಡೆಡ್ ಮದ್ಯದ ಉತ್ಪನ್ನಗಳು ಸುಲಭವಾಗಿ ಸಿಗಲಿದೆ. ಚಿತ್ತಾಕರ್ಷಕ ಒಳಾಂಗಣ ವಿನ್ಯಾಸ ಮತ್ತು ಗ್ರಾಹಕರಿಗೆ ಹಿತಕರ ಅನುಭವ ಸಿಗುವಂತೆ ಮಾಡಲು ಇಲ್ಲಿ ಆದ್ಯತೆ ಕೊಡಲಾಗಿದ್ದು, ಜಾಗತಿಕ ಗುಣಮಟ್ಟದ ಮಾಲ್ ರೀತಿಯಲ್ಲಿ ಈ ಪ್ರೀಮಿಯಂ ಬೋಟಿಕ್ ಇದೆ” ಎಂದರು.
ಎಂಎಸ್ಐಎಲ್ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಅವರ ಸಲಹೆ ಮೇರೆಗೆ ಹಾಲಿ ಇರುವ ಮದ್ಯ ಮಾರಾಟ ಮಳಿಗೆಗಳನ್ನು ಹೈಟೆಕ್ ರೀತಿಯಲ್ಲಿ ವಿನ್ಯಾಸ ಮಾಡಲು ಆರಂಭಿಸಿದ್ದು ಹಂತಹಂತವಾಗಿ ಎಲ್ಲವನ್ನೂ ಬದಲಿಸಲಾಗುವುದು ಎಂದರು. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿಯಲ್ಲಿ ಗಲಾಟೆ – ಮೂಗನ್ನೇ ಕಚ್ಚಿಕಿತ್ತ ಯುವಕ
ಎಂಎಸ್ಐಎಲ್ ರಾಜ್ಯದಲ್ಲಿ ಒಟ್ಟು 1,029 ಮದ್ಯ ಮಾರಾಟ ಮಳಿಗೆಗಳನ್ನು ನಡೆಸುತ್ತಿದೆ. ಈ ಪೈಕಿ 200 ಮಳಿಗೆಗಳನ್ನು ಬೋಟಿಕ್ ಆಗಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಇದರಲ್ಲಿ 20 ಮಳಿಗೆಗಳು ಬೆಂಗಳೂರಿನಲ್ಲೇ ಇರಲಿವೆ. ಇನ್ನು ಕೆಲವೇ ದಿನಗಳಲ್ಲಿ ಡಾ.ರಾಜಕುಮಾರ್ ರಸ್ತೆ, ಆರ್ ಪಿಸಿ ಬಡಾವಣೆ ಮತ್ತು ವಿಜಯನಗರದಲ್ಲಿ ಇಂತಹ ಬೋಟಿಕ್ ಮದ್ಯಪ್ರಿಯರಿಗೆ ಮುಕ್ತವಾಗಲಿವೆ ಎಂದು ಅವರು ಹೇಳಿದರು.
ಇದಲ್ಲದೆ ಶಿವಾನಂದ ವೃತ್ತ, ವರ್ತೂರು, ಕೆಂಗೇರಿ ಉಪನಗರ, ಮಾರುತಿ ಸೇವಾ ನಗರ, ಹನುಮಂತ ನಗರ ಮತ್ತು ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಕನ್ನಹಳ್ಳಿಯಲ್ಲಿ ಇರುವ ಎಂಎಸ್ಐಎಲ್ ಮಳಿಗೆಗಳನ್ನು ಬೋಟಿಕ್ ಗಳಾಗಿ ರೂಪಾಂತರಿಸುವ ಕೆಲಸ ಪ್ರಗತಿಯಲ್ಲಿದೆ. ಈ ಎಲ್ಲ ಮಳಿಗೆಗಳಲ್ಲೂ ಚಿಲ್ಲರೆ ಮಾರಾಟ ದರದಲ್ಲಿ ಅತ್ಯುತ್ಕೃಷ್ಟ ಮದ್ಯಗಳು ಲಭ್ಯವಾಗಲಿವೆ ಎಂದು ಅವರು ನುಡಿದರು.
ಎಂಎಸ್ಐಎಲ್ ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇಂತಹ ತಲಾ 2 ಬೋಟಿಕ್ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಇಂತಹ ಬೋಟಿಕ್ ತೆರೆಯಲಿದೆ. ಇವೆಲ್ಲವೂ ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ ಹಂತಹಂತವಾಗಿ ಆರಂಭವಾಗಲಿವೆ. ಮದ್ಯಪ್ರಿಯರು ಯಾವುದೇ ತೊಂದರೆ ಇಲ್ಲದೆ, ತಮಗೆ ಬೇಕಾದ ದರ್ಜೆಯ ಮದ್ಯದ ಉತ್ಪನ್ನಗಳನ್ನು ಇಲ್ಲಿ ಖರೀದಿಸಬಹುದು ಎಂದು ಮನೋಜ್ ಕುಮಾರ್ ಮಾಹಿತಿ ನೀಡಿದರು.
ಇಂತಹ ಬೋಟಿಕ್ ಗಳಿಂದ ಸಂಸ್ಥೆಯ ವಹಿವಾಟು 30%ರಿಂದ 40%ರಷ್ಟು ಏರಿಕೆಯಾಗಲಿದೆ. ಇಲ್ಲಿ ಸಿಗುವ ಬ್ರಾಂಡೆಡ್ ಮದ್ಯದ ಬಗೆಗಳಿಗೆ ಗುಣಮಟ್ಟದ ಖಾತ್ರಿ ಇರಲಿದೆ. ಈ ಮೂಲಕ ಸಂಸ್ಥೆಯು ಹೊಸ ಹೆಜ್ಜೆ ಇಡುತ್ತಿದೆ. ಸಂಸ್ಥೆಯು ವಹಿವಾಟನ್ನು 4 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ವಾರ್ಷಿಕ 10 ಸಾವಿರ ಕೋಟಿ ರೂ. ಮೊತ್ತದ ಚಿಟ್ ಫಂಡ್ ವ್ಯವಹಾರ, ಲೇಖನ ಸಾಮಗ್ರಿಗಳ ಮಾರಾಟಕ್ಕೆ ಫ್ರಾಂಚೈಸಿಗಳ ಆರಂಭ, 10 ಮೆಗಾ ಮೆಡಿಕಲ್ ಶಾಪ್ ಆರಂಭ ಮುಂತಾದ ಉಪಕ್ರಮಗಳನ್ನು ಕೈಗೊಳ್ಳಲಿದೆ. ಜೊತೆಗೆ ಪ್ರತಿಯೊಂದು ವಹಿವಾಟಿನಲ್ಲೂ ಕಾರ್ಪೊರೇಟ್ ಸ್ಪರ್ಶ ನೀಡಲಾಗುವುದು ಎಂದು ಅವರು ವಿವರಿಸಿದರು.
ಮಂಗಳೂರು: ನ್ಯೂ ಇಯರ್ (New Year) ಪಾರ್ಟಿಯಲ್ಲಿ (Party) ಗಲಾಟೆ ನಡೆದ ಹಿನ್ನೆಲೆ ಯುವಕನ ಮೂಗನ್ನು (Nose) ಮತ್ತೊಬ್ಬ ಯುವಕ ಕಚ್ಚಿ ಹೊರೆತೆಗೆದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಪಿಲ್ಯ ಗ್ರಾಮದಲ್ಲಿ ನಡೆದಿದೆ.
ಉಲ್ಪೆ ಗ್ರಾಮದ ನಿವಾಸಿ ದೀಕ್ಷಿತ್ (28) ಮೂಗಿನ ಒಂದು ಭಾಗವನ್ನು ಕಳೆದುಕೊಂಡ ಯುವಕ. ಮೂಡಿಗೆರೆ ಮೂಲದ ರಾಕೇಶ್ ಮೂಗನ್ನು ಕಚ್ಚಿಕಿತ್ತ ಆರೋಪಿ. ರಾಕೇಶ್ ಹಾಗೂ ದೀಕ್ಷಿತ್ ಇಬ್ಬರೂ ಇಯರ್ ಎಂಡ್ ಪಾರ್ಟಿಯೊಂದಕ್ಕೆ ತೆರಳಿದ್ದು, ಪಾರ್ಟಿಯಲ್ಲಿ ಮದ್ಯಸೇವನೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ
ರಾಯಚೂರು: ಹೊಸ ವರ್ಷಾಚರಣೆ (New Year) ಹಿನ್ನೆಲೆ ಮಂತ್ರಾಲಯದ (Mantralaya) ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ (Raghavendra Swamy Mutt) ವಿವಿಧೆಡೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರ (Devotees) ದಂಡು ಹರಿದು ಬಂದಿದೆ.
ಶನಿವಾರದಿಂದ ಈವರೆಗೂ ಸುಮಾರು 1 ಲಕ್ಷ ಭಕ್ತರು ರಾಯರ ದರ್ಶನ ಪಡೆದಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ರಾಯರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಲ್ಕು ಪ್ರತ್ಯೇಕ ಸರತಿ ಸಾಲುಗಳ ಮೂಲಕ ರಾಯರ ಮೂಲ ಬೃಂದಾವನ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದನ್ನೂ ಓದಿ: ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಎಣ್ಣೆ ಸೇಲ್
ಹೊಸ ವರ್ಷದಂದು ರಾಯರ ಕೃಪೆಗೆ ಪಾತ್ರರಾಗಲು ಭಕ್ತರು ವಿವಿಧ ರಾಜ್ಯಗಳಿಂದ ಆಗಮಿಸಿದ್ದಾರೆ. ಕ್ಯಾಲೆಂಡರ್ ಹೊಸ ವರ್ಷವಾಗಿರುವುದರಿಂದ ಮಠದಲ್ಲಿ ಯಾವುದೇ ವಿಶೇಷ ಪೂಜೆಗಳನ್ನ ನೇರವೇರಿಸಿಲ್ಲ. ಎಂದಿನಂತೆ ಬೆಳಗ್ಗೆ ನಿತ್ಯದ ಪೂಜೆಯನ್ನು ಮಾಡಲಾಗಿದೆ. ಇದನ್ನೂ ಓದಿ: ಹೊಸ ವರ್ಷ, ಹೊಸ ದಿನ- ದೇವರ ಮೊರೆ ಹೋದ ರಾಜ್ಯದ ಜನ
ಬೆಂಗಳೂರು: ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ಮದ್ಯದ (Alcohol sale on New Year) ಕಿಕ್ ಕೂಡ ಜೋರಾಗಿತ್ತು. ನ್ಯೂ ಇಯರ್ ಗೆ ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಾಸು ಹರಿದು ಬಂದಿದೆ.
2023ರ ಕೊನೆಯ ದಿನವಾದ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಸೇಲ್ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್, ಬಿಯರ್ (Beer) 1,95,005 ಬಾಕ್ಸ್ ಮಾರಾಟವಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 2,611 ಕೋಟಿ ಆದಾಯ ಬಂದಿತ್ತು. ಈ ವರ್ಷ ಡಿಸೆಂಬರ್ ತಿಂಗಳಲ್ಲಿ 3 ಸಾವಿರ ಕೋಟಿ ಆದಾಯ ಸಂಗ್ರಹವಾಗಿದೆ.
ಒಟ್ಟಿನಲ್ಲಿ ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ. ನಗರ ಹಾಗೂ ಗ್ರಾಮೀಣ ಭಾಗದ ಮೂಲೆ ಮೂಲೆಯಲ್ಲಿಯೂ ಜನರು ಮದ್ಯದ ನಶೆಯ ಮೂಲಕ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹೊಸ ವರ್ಷ, ಹೊಸ ದಿನ- ದೇವರ ಮೊರೆ ಹೋದ ರಾಜ್ಯದ ಜನ
ಬೆಂಗಳೂರು: ಹೊಸ ವರ್ಷದಂದು ರಾಜ್ಯದ ಜನತೆ ದೇವರ ಮೊರೆ ಹೋಗಿದ್ದಾರೆ. ವರ್ಷದ ಮೊದಲ ದಿನದಂದು ಎಲ್ಲಾ ದೇಗುಗಳಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ.
ಬೆಂಗಳೂರಿನ ದೇಗುಲಗಳಲ್ಲಿ ಭಕ್ತರ ಸಂಖ್ಯೆ ಇಂದು ಹೆಚ್ಚಾಗುತ್ತಿದೆ. ಬೆಂಗಳೂರಿನ ಶಕ್ತಿ ದೇವತೆ ಅಣ್ಣಮ್ಮ ದೇವಿಗೆ ವಿಶೇಷ ಅಲಂಕಾರ, ಪೂಜೆ ನಡೆಯುತ್ತಿದೆ. ಈ ವರ್ಷ ಒಳ್ಳೆಯದಾಗಲಿ ಅಂತಾ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಇದನ್ನೂ ಓದಿ: ಇಸ್ರೋ 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿ
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಾಡುಮಲ್ಲೇಶ್ವರ ದೇಗುಲದಲ್ಲೂ ಜನಸಾಗರ ಇದೆ. ಮಧ್ಯಾಹ್ನ 1 ಗಂಟೆಗೆ ಕ್ಲೋಸ್ ಆಗುತ್ತಿದ್ದ ದೇಗುಲ ಇಂದು 2:30ರವರೆಗೆ ಇರಲಿದೆ. ಭಕ್ತರ ಸಂಖ್ಯೆ ಹೆಚ್ಚಳವಾಗಿದ್ರಿಂದ ದೇಗುಲದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಘಾಟಿ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ ನೆರೆದಿದ್ದು, ಬೆಳ್ಳಂಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಜನ ನಿಂತಿದ್ದಾರೆ.
ಚಾಮರಾಜನಗರದ ಮಹದೇಶ್ವರನ ಸನ್ನಿಧಿಗೆ ಕೂಡ ಭಕ್ತ ಸಾಗರ ಹರಿದು ಬಂದಿದೆ. ಮಾದಪ್ಪನ ಸನ್ನಿಧಿ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಚಿನ್ನದ ತೇರು, ಬೆಳ್ಳಿ ರಥ, ಬಸವ ವಾಹನ, ಹುಲಿವಾಹನ ಸೇವೆಗಳು ನಡೆಯುತ್ತಿವೆ. ಕೋಲಾರದ ಕೋಟಿಲಿಂಗ ಕ್ಷೇತ್ರದಲ್ಲಿಯೂ ಭಕ್ತಗಣ ಸೇರಿದೆ. ಕೆಜಿಎಫ್ ತಾಲೂಕಿನ ಕಮ್ಮಸಂದ್ರದಲ್ಲಿರುವ ಕೋಟಿಲಿಂಗ ದೇಗುಲದಲ್ಲಿ ಸಾವಿರಾರು ಜನ ಶಿವನ ದರ್ಶನ ಪಡೆಯುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡು ನೆರೆದಿದೆ. ಮೇಲುಕೋಟೆ ಚೆಲುವನಾರಾಯಣಸ್ವಾಮಿ, ಶ್ರೀರಂಗಪಟ್ಟಣ ನಿಮಿಷಾಂಭ, ರಂಗನಾಥ ದೇವಸ್ಥಾನ ಹೀಗೆ ಪ್ರಮುಖ ದೇವಸ್ಥಾನಗಳಿಗೆ ಸಾಕಷ್ಟಯ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಚೆಲುವನಾರಾಯಣಸ್ವಾಮಿ ದೇಗುಲದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಬೆಂಗಳೂರು: ಹೊಸ ವರ್ಷ 2024 (New Year 2024) ಕರ್ನಾಟಕದ (Karnataka) ಜನತೆ ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನರು ಕುಣಿದು ಕುಪ್ಪಳಿಸಿ 2023ಕ್ಕೆ ಗುಡ್‌ಬೈ ಹೇಳಿ 2024 ಸ್ವಾಗತಿಸಿದ್ದಾರೆ.
ಬೆಂಗಳೂರಿನ (Bengaluru) ಪ್ರಮುಖ ಸ್ಥಳಗಳಾದ ಎಂಜಿರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರದ ಸ್ಟ್ರೀಟ್‌ಗಳು ಕಲರ್‌ಫುಲ್ ಆಗಿತ್ತು.
ಕೆಲವೊಂದಿಷ್ಟು ಸಣ್ಣಪುಟ್ಟ ಗಲಾಟೆಗಳು ಕೂಡ ನಡೆದಿದ್ದು, ಪೊಲೀಸರು (Police) ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿ ವರ್ಷದಂತೆ ಭಾನುವಾರ ರಾತ್ರಿ ಬೆಂಗಳೂರಿನ ಎಲ್ಲಾ ಫ್ಲೈ ಓವರ್‌ಗಳನ್ನು ಬಂದ್ ಮಾಡಲಾಗಿದೆ.
ಮೊಬೈಲ್ ಕಳ್ಳನಿಗೆ ಥಳಿತ
ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಥಳಿಸಿ ಸ್ಥಳೀಯರು ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ. ಈ ವೇಳೆ ಪೊಲೀಸರು ಮುಂದೆ ಕಳ್ಳ ಕೈ ಮುಗಿದು ಬೇಡಿಕೊಂಡಿದ್ದಾನೆ. ನಂತರ ಮೊಬೈಲನ್ನು ಯುವಕನಿಗೆ ಪೊಲೀಸರು ಹಸ್ತಾಂತರಿಸಿದರು. ಇದನ್ನೂ ಓದಿ: ಹೊಸ ವರ್ಷವನ್ನು ಸ್ವಾಗತಿಸಿದ ಆಸ್ಟ್ರೇಲಿಯಾ, ನ್ಯೂಜಿಲೆಂಡ್
ತೂರಾಡಿದ ಯುವತಿ
ಕೋರಮಂಗಲದಲ್ಲಿ ಯುವತಿಯೊಬ್ಬಳು ಎಣ್ಣೆ ಮತ್ತಿನಲ್ಲಿ ತೂರಾಡಿದ್ದಾಳೆ. ಈ ವೇಳೆ ನಾಲ್ಕು ಮಂದಿ ಮಹಿಳಾ ಸಿಬ್ಬಂದಿ ಆಕೆಯನ್ನು ನಿಯಂತ್ರಿಸಲು ಪ್ರಯತ್ನ ಮಾಡಿದರೂ ಯುವತಿ ನಿಯಂತ್ರಣ ಸಿಗದೇ ನೆಲಕ್ಕೆ ಬಿದ್ದಿದ್ದಾಳೆ. ಇದನ್ನೂ ಓದಿ: New Year 2024 – ಪಾನಮತ್ತರಾಗಿ ಬಿದ್ದರೆ ನೇರ ಆಸ್ಪತ್ರೆಗೆ ಶಿಫ್ಟ್
ವ್ಯಕ್ತಿಗೆ ಧರ್ಮದೇಟು:
ಗೆಳತಿ ಜೊತೆ ಅಸಭ್ಯ ವರ್ತನೆ ತೋರಿದ್ದಕ್ಕೆ ಪ್ರಿಯತಮನೊಬ್ಬ ಅಪರಿಚಿತ ವ್ಯಕ್ತಿಗೆ ಬ್ರಿಗೇಡ್ ರಸ್ತೆಯಲ್ಲಿ ಧರ್ಮದೇಟು ನೀಡಿದ್ದಾನೆ. ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆಯನ್ನು ನಿಯಂತ್ರಿಸಿದ್ದಾರೆ.
ಸಿಡ್ನಿ: ಹೊಸ ವರ್ಷದ (New Year) ಸಂಭ್ರಮ ಶುರುವಾಗಿವೆ. ಎಲ್ಲರಿಗಿಂತಲೂ ಮೊದಲು 2024ಕ್ಕೆ ವೆಲ್‌ಕಮ್ ಹೇಳಿದ್ದು ಕಿರಿಬಾಟಿ, ಸಮೋವಾ, ಟೊಂಗಾ ದೇಶಗಳು. ನಂತರ ನ್ಯೂಜಿಲೆಂಡ್‌ನ (New Zealand) ಆಕ್ಲೆಂಡ್ ನಗರದ ಜನ ಸಡಗರ, ಸಂಭ್ರಮದ ಮಧ್ಯೆ ಹ್ಯಾಪಿ ನ್ಯೂ ಇಯರ್ ಎಂದು ಹೇಳಿದರು.
ಆಸ್ಟ್ರೇಲಿಯಾದ (Australia) ಸಿಡ್ನಿ ನಗರದಲ್ಲಿ ಲೇಸರ್ ಶೋ ಗಮನ ಸೆಳೆಯಿತು. ಜಪಾನ್, ಉತ್ತರ ಕೊರಿಯಾ, ದಕ್ಷಿಣ ಕೊರಿಯಾಗಳು ಹೊಸ ವರ್ಷಕ್ಕೆ ವೆಲ್‌ಕಮ್ ಹೇಳಿತು.
ಸಮೋವಾದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಶುರುವಾದ ಎಂಟೂವರೆ ಗಂಟೆ ನಂತರ ಭಾರತ-ಶ್ರೀಲಂಕಾಗೆ 2024 ಕಾಲಿಡಲಿದೆ. ನಮ್ಮ ದೇಶದ ಬಳಿಕ ಸುಮಾರು ನಾಲ್ಕೂವರೆ ಗಂಟೆಯ ಬಳಿಕ 43 ದೇಶಗಳು ಏಕಕಾಲದಲ್ಲಿ ಹೊಸ ವರ್ಷವನ್ನು ಸ್ವಾಗತಿಸಲಿದೆ. ಇದನ್ನೂ ಓದಿ: New Year 2024 – ಪಾನಮತ್ತರಾಗಿ ಬಿದ್ದರೆ ನೇರ ಆಸ್ಪತ್ರೆಗೆ ಶಿಫ್ಟ್
2023ರ ಆರಂಭವು ಭಾರತ (Team India) ಮತ್ತು ಶ್ರೀಲಂಕಾ ನಡುವಿನ ಟಿ20 ಹಾಗೂ ಏಕದಿನ ದ್ವಿಪಕ್ಷೀಯ ಸರಣಿಯೊಂದಿಗೆ ಆರಂಭವಾಯಿತು. ಇದರೊಂದಿಗೆ 2023ರಲ್ಲಿ ನಡೆಯಬೇಕಿದ್ದ ವಿಶ್ವಕಪ್ ಕ್ರಿಕೆಟ್‌ಗೆ ತಯಾರಿಯೂ ಆರಂಭವಾಯಿತು. ಪೂರ್ವ ಸಿದ್ಧತೆಯಲ್ಲಿದ್ದ ಭಾರತ ಹಲವು ಸರಣಿಗಳನ್ನ ಗೆದ್ದುಕೊಂಡಿತ್ತು. ಶ್ರೀಲಂಕಾ ಬಳಿಕ ನ್ಯೂಜಿಲೆಂಡ್ ವಿರುದ್ಧದ ದ್ವಿಪಕ್ಷೀಯ ಸರಣಿಯನ್ನ ಗೆದ್ದು ಬೀಗಿತು. ಹೀಗೆ ಗೆಲುವಿನ ಓಟ ಮುಂದಿರಿಸಿದ್ದ ಭಾರತ ಪ್ರಮುಖ ಪಂದ್ಯಗಳಲ್ಲಿ ಸೋಲು ಕಂಡಿದ್ದನ್ನು ಮರೆಯುವಂತಿಲ್ಲ.
2023ರ ವರ್ಷದಲ್ಲಿ ಕ್ರಿಕೆಟ್ ವಿಭಾಗದಲ್ಲಿ ಏಕದಿನ ವಿಶ್ವಕಪ್ ಕ್ರಿಕೆಟ್ (World Cup Cricket) ಟೂರ್ನಿ ಗಮನ ಸೆಳೆದರೂ ಈ ಸಂದರ್ಭದಲ್ಲಿ ನಡೆದ ಅನೇಕ ಬೆಳವಣಿಗೆಗಳ ಬಗ್ಗೆ ತಿಳಿಯಲೇ ಬೇಕಾದ ಸಂಗತಿಗಳಿವೆ. ಅವುಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನವನ್ನು ಈ ಲೇಖನದಲ್ಲಿ ಮಾಡಲಾಗಿದೆ.
ನವೆಂಬರ್ 19ರ ವರೆಗೂ ಟೀಂ ಇಂಡಿಯಾದ ರೋಹಿತ್ ಶರ್ಮಾ (Rohit Sharma) ಬಳಗವು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದ್ರೆ ಆಸ್ಟ್ರೇಲಿಯಾ 6ನೇ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ 140 ಕೋಟಿ ಭಾರತೀಯರ ಕನಸು ಭಗ್ನಗೊಳಿಸಿತು. ಅಕ್ಟೋಬರ್ 5 ರಿಂದ ನವೆಂಬರ್ 19ರವರೆಗೆ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ 10 ಪಂದ್ಯಗಳನ್ನು ಗೆದ್ದಿದ್ದ ಟೀಂ ಇಂಡಿಯಾ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತು. ಆದ್ರೆ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಆಟಗಾರರ ಹಲವು ದಾಖಲೆಗಳು ಅಚ್ಚಳಿಯದೇ ಉಳಿದವು.
ವಿಶ್ವಕಪ್‌ನಲ್ಲಿ ಗಮನ ಸೆಳೆದ ದಾಖಲೆಗಳು:
2008ರ ಆಗಸ್ಟ್ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟಿದ್ದ ಕೊಹ್ಲಿ (Virat Kohli) 2023ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಸಿಡಿಸಿದ ಸಾಧನೆ ಮಾಡಿದರು. ಈ ಮೂಲಕ 49 ಶತಕ ಸಿಡಿಸಿದ್ದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನ ನುಚ್ಚುನೂರು ಮಾಡಿದರು.
2023ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆಗಾಗಿ ಆಡದಿದ್ದರೂ 11 ಪಂದ್ಯಗಳಿಂದ 597 ರನ್ ಸಿಡಿಸಿ ಇತಿಹಾಸ ಸೃಷ್ಟಿದರು. ಈ ಮೂಲಕ ತಂಡ ಒಂದರ ನಾಯಕನಾಗಿ ಅತಿ ಹೆಚ್ಚು ರನ್ ಸಿಡಿಸಿದ ಬ್ಯಾಟರ್ ಆಗಿ ರೋಹಿತ್ ಹೊರಹೊಮ್ಮಿದರು. ಅಷ್ಟೇ ಅಲ್ಲ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ 50 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದರು.
ಟೈಮ್ಡ್ ಔಟ್ ಅಪಖ್ಯಾತಿ:
ವಿಶ್ವಕಪ್ ಕ್ರಿಕೆಟ್‌ನಲ್ಲಿ ಶ್ರೀಲಂಕಾದ ಏಂಜಲೋ ಮಾಥ್ಯೂಸ್ ಒಂದೇ ಒಂದು ಎಸೆತವನ್ನೂ ಎದುರಿಸದೇ ಟೈಮ್ಡ್ ಔಟ್‌ಗೆ ಬಲಿಯಾದ ವಿಶ್ವದ ಮೊದಲ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾ ನಾಯಕ ಶಕೀಬ್ ಉಲ್ ಹಸನ್ ಅಂಪೈರ್ ಜೊತೆ ಬ್ಯಾಟರ್ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿ ಟೈಮ್ಡ್ ಔಟ್‌ಗೆ ಮನವಿ ಮಾಡಿದರು. ಈ ಮನವಿಯನ್ನು ಅಂಪೈರ್ ಪುರಸ್ಕರಿಸಿದರು. ಈ ವೇಳೆ ಮ್ಯಾಥ್ಯೂಸ್ ಅವರು, ನನ್ನ ಹೆಲ್ಮೆಟ್ ಪಟ್ಟಿ ಮುರಿದು ಹೋಗಿದೆ. ಹೀಗಾಗಿ ಬೇರೆ ಹೆಲ್ಮೆಟ್ ತರುವಂತೆ ಹೇಳಿದ್ದೇನೆ ಎಂದು ಅಂಪೈರ್‌ಗೆ ಸಮಸ್ಯೆಯನ್ನು ವಿವರಿಸಿದರು. ಅಂಪೈರ್ ಮತ್ತು ಬಾಂಗ್ಲಾ ಆಟಗಾರರ ಜೊತೆ ಹೆಲ್ಮೆಟ್ ದೋಷದ ಬಗ್ಗೆ ಮನವರಿಕೆ ಮಾಡಿದರೂ ಶಕೀಬ್ ಮಾತ್ರ ತಮ್ಮ ಟೈಮ್ಡ್ ಔಟ್ ಮನವಿಯಿಂದ ಹಿಂದಕ್ಕೆ ಸರಿಯಲಿಲ್ಲ. ಕೊನೆಗೆ ಏಂಜಲೋ ಮಾಥ್ಯೂಸ್ ಔಟ್ ಎಂದು ತೀರ್ಪು ಪ್ರಕಟಿಸಲಾಯಿತು.
ಭಾರತದ ವಿರುದ್ಧ ದಾಖಲೆ ಬರೆದ ಆಸೀಸ್:
ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ನ (WTC) 2ನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕೇರಿತು. 2019ರಲ್ಲಿ ಆರಂಭಗೊಂಡ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯಲ್ಲಿ ಕಿವೀಸ್ ಎದುರು ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದ್ದ ಟೀಂ ಇಂಡಿಯಾ 2ನೇ ಬಾರಿಯೂ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲನುಭವಿಸಿತು. ಆಸ್ಟ್ರೇಲಿಯಾ ಈ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ಏಕದಿನ, ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗಳಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಏಕೈಕ ತಂಡ ಎನಿಸಿಕೊಂಡಿತು.
8ನೇ ಬಾರಿಗೆ ಏಷ್ಯಾಕಪ್ ಕಿರೀಟ:
2023ರ ಏಕದಿನ ಏಷ್ಯಾಕಪ್ (Asia Cup 2023) ಟೂರ್ನಿಯ ಫೈನಲ್‌ಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ 8ನೇ ಬಾರಿಗೆ ಏಷ್ಯಾಕಪ್ ಕಿರೀಟ ಮುಡಿಗೇರಿಸಿಕೊಂಡಿತು. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತ 2023ರಲ್ಲಿ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಅಲ್ಲದೇ ಇದು ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಗೆದ್ದ 2ನೇ ಏಷ್ಯಾಕಪ್ ಟೂರ್ನಿಯೂ ಆಗಿತ್ತು.
ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ದಿಗ್ಗಜರು:
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರಿಂದ 6 ಎಸೆತಗಳಲ್ಲಿ 6 ಸಿಕ್ಸರ್ ಚಚ್ಚಿಸಿಕೊಂಡಿದ್ದ ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಡ್ ಬ್ರಾಡ್, ದಕ್ಷಿಣ ಆಫ್ರಿಕಾದ ಹಾಶೀಂ ಆಮ್ಲಾ, ಡ್ವೈನ್ ಪ್ರಿಟೊರಿಯಸ್, ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್, ಭಾರತದ ಮುರಳಿ ವಿಜಯ್, ಅಂಬಟಿ ರಾಯುಡು ಅವರು ಕ್ರಿಕೆಟ್‌ಗೆ ವಿದಾಯ ಹೇಳಿದರು.
5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್ ಕಿರೀಟ
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2023ರಲ್ಲಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಳ್ಳುವುದರ ಜೊತೆಗೆ 5ನೇ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಈ ಮೂಲಕ 5 ಬಾರಿ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದ ಮುಂಬೈ ಇಂಡಿಯನ್ಸ್ ದಾಖಲೆಯನ್ನ ಸರಿಗಟ್ಟಿತು.
ವನಿತೆಯರಿಗೆ ಐತಿಹಾಸಿಕ ಜಯ:
ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ಏಕೈಕ ಟೆಸ್ಟ್ ಕ್ರಿಕೆಟ್‌ನಲ್ಲಿ 347 ರನ್ ಗೆಲುವು ಸಾಧಿಸಿತು. ಇದೇ ಮೊದಲ ಬಾರಿಗೆ ಏಷ್ಯನ್ಸ್ ಗೇಮ್ಸ್‌ನಲ್ಲಿ ಪ್ರತಿನಿಧಿಸಿದ ಭಾರತ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿತು.
ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆ:
ಅಮೆರಿಕದ ಲಾಸ್ ಏಂಜಲಿಸ್‌ನಲ್ಲಿ 2028ಕ್ಕೆ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯಾಯಿತು. ಈ ನಡುವೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ ಹೇರಿತು. ಇದನ್ನೂ ಓದಿ: IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್ ಸ್ಟಾರ್ಕ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸ್ಟಾರ್ಕ್:
2024ರ ಐಪಿಎಲ್ ಟೂರ್ನಿಗಾಗಿ ಡಿಸೆಂಬರ್ 19ರಂದು ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್ ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾದರು. ಇದರೊಂದಿಗೆ ಮತ್ತೊಬ್ಬ ಆಸೀಸ್ ಸ್ಟಾರ್ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿ ರೂ.ಗೆ ಬಿಕರಿಯಾಗಿ ದಾಖಲೆ ಬರೆದರು. 2 ವರ್ಷ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿ ಒಮ್ಮೆ ಚಾಂಪಿಯನ್ ಮತ್ತೊಮ್ಮೆ ರನ್ನರ್ ಅಪ್ ಪ್ರಶಸ್ತಿ ತಂದುಕೊಟ್ಟಿದ್ದ ಹಾರ್ದಿಕ್ ಪಾಂಡ್ಯ ಟ್ರೇಡ್ ವಿಂಡೋ ನಿಯಮದ ಪ್ರಕಾರ ಮುಂಬೈ ಇಂಡಿಯನ್ಸ್‌ಗೆ ನಾಯಕನಾಗಿ ಕಂಬ್ಯಾಕ್ ಮಾಡಿದರು.
ಬೌಲರ್‌ಗಳಿಗೆ ಸ್ಟಾಪ್ ಕ್ಲಾಕ್ ಶಾಕ್ ಕೊಟ್ಟ ಐಸಿಸಿ:
ಫೀಲ್ಡಿಂಗ್ ತಂಡವು ಓವರ್ ರೇಟ್ ಕಾಯ್ದುಕೊಳ್ಳುವುದನ್ನು ತಪ್ಪಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹೊಸ ನಿಯಮವೊಂದನ್ನು ಪರಿಚಯಿಸಿತು. ಒಂದು ಓವರ್ ಮುಗಿದು 60 ಸೆಕೆಂಡ್‌ಗಳಲ್ಲಿ, ಅಂದರೆ ಒಂದು ನಿಮಿಷದ ಅವಧಿಯಲ್ಲಿ ಮುಂದಿನ ಓವರ್ ಆರಂಭಿಸದೇ ಹೋದರೆ 3ನೇ ನಿರ್ದೇಶನದ ಬಳಿಕ ಎದುರಾಳಿ ತಂಡಕ್ಕೆ 5 ಪೆನಾಲ್ಟಿ ರನ್ ಲಭಿಸಲಿದೆ. ಮೊದಲೆರಡು ಬಾರಿ ಈ ರೀತಿಯ ವಿಳಂಬಕ್ಕೆ ರಿಯಾಯಿತಿ ಇರಲಿದೆ ಎಂಬ ಸ್ಟಾಪ್ ಕ್ಲಾಕ್ ನಿಯಮವನ್ನ ಪರಿಚಯಿಸಿತು.
146 ವರ್ಷಗಳ ಇತಿಹಾಸದಲ್ಲಿ ಹೊಸ ಮೈಲುಗಲ್ಲು:
ಟೀಂ ಇಂಡಿಯಾದ ಟಾಪ್ ಕ್ಲಾಸ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಸ್ವರೂಪದಲ್ಲೂ 2 ಸಾವಿರ ರನ್ ಪೂರ್ಣಗೊಳಿಸಿದ ಸಾಧನೆ ಮಾಡಿದರು. ಭಾರತದ ಆತಿಥ್ಯದಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ 50ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನ ನುಚ್ಚುನೂರು ಮಾಡಿದ್ದರು. ಆ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ 146 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮಹತ್ವದ ಮೈಲುಗಲ್ಲು ಸ್ಥಾಪಿಸಿದರು. ಇದು ಅಭಿಮಾನಿಗಳಿಗೆ ಮರೆಯದ ಕ್ಷಣವಾಗಿತ್ತು.
ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣವೆಂದರೆ ಅದು ನಂದಿಗಿರಿಧಾಮ. ಆದರೆ ಇಂತಹ ನಂದಿಬೆಟ್ಟದಲ್ಲಿ (Nandihills) ನೀವೇನಾದರೂ ಈ ಬಾರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಬೇಕು ಎಂಬ ಪ್ಲ್ಯಾನ್ ಮಾಡಿಕೊಂಡಿದ್ದರೆ ಕ್ಯಾನ್ಸಲ್ ಮಾಡಿಕೊಳ್ಳಿ. ಯಾಕೆಂದರೆ ನಂದಿಬೆಟ್ಟಕ್ಕೆ ಪ್ರವಾಸಗರಿಗೆ ನಿರ್ಬಂಧ ಹೇರಲಾಗಿದೆ.
ಹೌದು. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರಿಗೆ ಬ್ರೇಕ್ ಬಿದ್ದಿದೆ. ಡಿಸೆಂಬರ್ 31ರ ಸಂಜೆ 06 ಗಂಟೆಯಿಂದ ಜನವರಿ 01 ರ 06 ಗಂಟೆಯವರೆಗೆ ನಿಷೇಧ ಹೇರಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಆದೇಶವನ್ನು ನೀಡಿದೆ.
ಇಷ್ಟು ಮಾತ್ರವಲ್ಲದೇ ನಂದಿಗಿರಿಧಾಮದಲ್ಲಿ ರೂಂ ಬುಕ್ಕಿಂಗ್ ಸಹ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಸದ್ಯ ಜಿಲ್ಲಾಡಳಿತದ ಆದೇಶದಿಂದ ನ್ಯೂ ಇಯರ್ ಸೆಲೆಬ್ರೇಟ್ ಮಾಡಬೇಕು ಎಂದು ಕನಸು ಕಂಡಿದ್ದ ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 5 ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ