ನವದೆಹಲಿ: ಇಲ್ಲಿನ ಆಸ್ಪತ್ರೆಯೊಂದರಲ್ಲಿ (Delhi Hospital) ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು (Newborn Babies) ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಂಡಾಗ ಕರ್ತವ್ಯದಲ್ಲಿದ್ದ ಮತ್ತೊಬ್ಬ ವೈದ್ಯನನ್ನೂ ಬಂಧಿಸಲಾಗಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ.ನವೀನ್ ಖಿಚಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಪರಾರಿಯಾಗಿದ್ದರು. ಇದನ್ನೂ ಓದಿ: ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ -6 ನವಜಾತ ಶಿಶುಗಳು ಬಲಿ
ಎರಡು ಅಂತಸ್ತಿನ ಕಟ್ಟಡದಲ್ಲಿ ಇರಿಸಲಾಗಿದ್ದ ಆಕ್ಸಿಜನ್ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಲೇನ್ ಕಿರಿದಾಗಿದ್ದು, ಓವರ್ ಹೆಡ್ ತಂತಿಗಳಿಂದ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅಗ್ನಿಶಾಮಕ ದಳದವರು ಸವಾಲುಗಳನ್ನು ಎದುರಿಸಿದರು.
ನಾವು ಎದುರಿಸಿದ ಮತ್ತೊಂದು ಸವಾಲೆಂದರೆ ಯಾವುದೇ ನೀರಿನ ಮೂಲವಿರಲಿಲ್ಲ. ನೇತಾಡುತ್ತಿದ್ದ ವಿದ್ಯುತ್ ತಂತಿಗಳು ದೊಡ್ಡ ಸಮಸ್ಯೆಯಾಗಿದ್ದವು ಎಂದು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲು ಆಯೋಗದ ತಂಡವು ಆಸ್ಪತ್ರೆಗೆ ಭೇಟಿ ನೀಡಲಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಹೇಳಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆಯಿಂದ ಯುವಕರಿಗೆ 100% ಉದ್ಯೋಗವಕಾಶ: ಅನುರಾಗ್ ಠಾಕೂರ್
ಮಕ್ಕಳ ಆಸ್ಪತ್ರೆಗೆ ಭಾರೀ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡ ಜನರು ಕಾಂಪೌಂಡ್ ಗೋಡೆ ಹತ್ತಿ ಧಾವಿಸಿದ್ದರು. ನವಜಾತ ಶಿಶುಗಳನ್ನು ರಕ್ಷಿಸಲು ಕಟ್ಟಡದ ಹಿಂಭಾಗದಿಂದ ಹತ್ತಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಲಂಡನ್: ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನ (Newborn Babies) ಹತ್ಯೆಗೈದು, ಇನ್ನೂ 6 ಶಿಶುಗಳನ್ನ ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್‌ಗೆ (33) (British Nurse) ಇಂಗ್ಲೆಂಡಿನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ (ಕ್ರೌನ್ ಪ್ರಾಸಿಕ್ಯೂಷನ್ ಸೇವೆ) ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆ ಇನ್ನು ಸಾಯುವವರೆಗೂ ಜೈಲಿನಲ್ಲೇ ಕೊಳೆಯಬೇಕು, ಇನ್ನೆಂದಿಗೂ ಬಿಡುಗಡೆ ಅನ್ನೋದೇ ಆಕೆಗೆ ಇಲ್ಲ ಎಂದು ಕೋರ್ಟ್ ಹೇಳಿದೆ.
ಲೂಸಿ ಲೆಟ್ಬಿಗೆ ಕ್ರೌನ್ ಕೋರ್ಟ್‌ನಲ್ಲಿ ಲಭ್ಯವಿರುವ ಅತ್ಯಂತ ಕಠಿಣ ಶಿಕ್ಷೆಯನ್ನ ವಿಧಿಸಲಾಗಿದೆ. ಆಕೆ ತನ್ನ ಉಳಿದ ಜೀವನವನ್ನು ಕೋರ್ಟ್‌ನಲ್ಲಿ ಕಳೆಯುತ್ತಾಳೆ ಎಂದು ಮ್ಯಾಂಚೆಸ್ಟರ್ ನ್ಯಾಯಾಧೀಶ ಜೇಮ್ಸ್ ಗಾಸ್ ಹೇಳಿದ್ದಾರೆ.
ಒಂದೇ ವರ್ಷದಲ್ಲಿ 7 ಶಿಶುಗಳ ಹತ್ಯೆ
ಲೂಸಿ ಲೆಟ್ಬಿ ಎಂದು ಗುರುತಿಸಲ್ಪಟ್ಟ ಬ್ರಿಟಿಷ್ ನರ್ಸ್ 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಸರಣಿ ಕೊಲೆಗಳನ್ನ ಮಾಡಿದ್ದಾಳೆ. ಕಳೆದ ಅಕ್ಟೋಬರ್‌ನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಕಳೆದ ಶುಕ್ರವಾರ ಈ ಕುರಿತು ವಿಚಾರಣೆ ನಡೆಸಿದ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್ ಕೋರ್ಟ್ (England Court) ಶಿಶುಹತ್ಯೆಯ ಆರೋಪಿ ನರ್ಸ್‌ಗೆ ಶಿಕ್ಷೆ ವಿಧಿಸಲು ಮುಂದಾಗಿತ್ತು. ಈಕೆಗೆ ಶಿಕ್ಷೆ ವಿಧಿಸಲು ಭಾರತೀಯ ಮೂಲದ ಮಕ್ಕಳ ವೈದ್ಯರ ಸಲಹೆಗಾರ ಡಾ. ರವಿ ಜಯರಾಮ್ ಸಹಕರಿಸಿದ್ದರು. ಇದರಿಂದಾಗಿ ಭಾರತೀಯ ಮೂಲದ ವೈದ್ಯನಿಗೆ ಭಾರೀ ಪ್ರಸಂಶೆ ವ್ಯಕ್ತವಾಗಿತ್ತು.
ಈಕೆ ಕೊಲೆ ಮಾಡುತ್ತಿದ್ದದ್ದು ಹೇಗೆ?
ಚಾಲಾಕಿ ಮಹಿಳೆಯಿಂದ ಕೊಲೆಯಾದ ಹೆಚ್ಚಿನ ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಏಕೆಂದರೆ ಲೂಸಿ ಲೆಟ್ಬಿ (33) ತನ್ನ ಆರೈಕೆಯಲ್ಲಿದ್ದ ಶಿಶುಗಳಿಗೆ ವಿಷಪೂರಿತ ಚುಚ್ಚುಮದ್ದು ನೀಡುತ್ತಿದ್ದಳು. ಜೊತೆಗೆ ಹಾಲಿನೊಂದಿಗೆ ವಿಷಪೂರಿತ ಲಿಕ್ವಿಡ್ ಬೆರಸಿಕೊಡುತ್ತಿದ್ದಳು. ಜೊತೆಗೆ ಮಕ್ಕಳನ್ನ ಉಸಿರುಗಟ್ಟಿಸಿ, ದೈಹಿಕವಾಗಿ ಹಲ್ಲೆ ನಡೆಸಿ ಕೊಂದಿದ್ದಾಳೆ ಎಂದು ಪ್ರಾಸಿಕ್ಯೂಟರ್‌ಗಳು ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್‌ಗೆ ತಿಳಿಸಿದ್ದರು.
ಈ ಹಿಂದೆ ಆಕೆಯ ನಿವಾಸದಲ್ಲಿ ತನಿಖೆ ನಡೆಸಿದಾಗ ಕೆಲ ಪತ್ರಗಳು ಪತ್ತೆಯಾಗಿದ್ದು, ಅದರಲ್ಲಿ ನಾನು ದೆವ್ವ, ಅವಳನ್ನು ನೋಡಿಕೊಳ್ಳಲು ನಾನು ಯೋಗ್ಯವಲ್ಲದ ಕಾರಣ ಉದ್ದೇಶಪೂರ್ವಕವಾಗಿ ಕೊಂದಿದ್ದೇನೆ. ನಾನು ಕೆಟ್ಟವಳು, ಅದಕ್ಕಾಗಿಯೇ ಹಾಗೆ ಮಾಡಿದ್ದೇನೆ ಮತ್ತು ಇಂದು ನಿಮ್ಮ ಜನ್ಮದಿನ ಆದ್ರೆ ನೀವೇ ಇಲ್ಲ, ಅದಕ್ಕಾಗಿ ನಾನು ತುಂಬಾ ವಿಷಾದಿಸುತ್ತೇನೆ ಎಂದು ಬರೆದಿದ್ದ ಪತ್ರಗಳು ಪತ್ತೆಯಾಗಿದ್ದವು.
ಮೊದಲಬಾರಿಗೆ 2015 ರಲ್ಲಿ ನರ್ಸ್ ಕೃತ್ಯ ಬೆಳಕಿಗೆ ಬಂದಿತ್ತು. ಅದೇ ವರ್ಷ ಮೂವರು ಮಕ್ಕಳು ಸಾವನ್ನಪ್ಪಿದ್ದವು. ಕೊನೆಗೆ ಏಪ್ರಿಲ್ 2017 ರಲ್ಲಿ ರಾಷ್ಟ್ರೀಯ ಆರೋಗ್ಯ ಸೇವೆ ಟ್ರಸ್ಟ್, ಪೊಲೀಸರು ವೈದ್ಯರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ನಂತರ ಪ್ರಕರಣದ ತನಿಖೆ ಮುಂದುವರಿಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 2018 ಮತ್ತು ನವೆಂಬರ್ 2020ರ ನಡುವೆ ನರ್ಸ್ ಅನ್ನು ಮೂರು ಬಾರಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಆಕೆಯನ್ನ ದೇಶದ ಅತ್ಯಂತ ಕೆಟ್ಟ ಬೇಬಿ ಸೀರಿಯಲ್ ಕಿಲ್ಲರ್ ಎಂದು ಪರಿಗಣಿಸಲಾಗಿತ್ತು.
ಹಿಂದೆಯೂ ನಡೆದಿದೆ ನೂರಾರು ಕೊಲೆ
ಬ್ರಿಟನ್‌ನಲ್ಲಿ ಈ ಬೆಚ್ಚಿ ಬೀಳಿಸುವ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆಯೂ ಡಾಕ್ಟರ್ ಹೆರಾಲ್ಡ್ ಶಿಪ್‌ಮನ್ ಮತ್ತು ನರ್ಸ್ ಬೆವರ್ಲಿ ಅಲಿಟ್ ಎಂಬವರು ಇಂತಹದ್ದೇ ಕುಕೃತ್ಯ ಎಸಗಿದ್ದರು. ಶಿಪ್‌ಮನ್ 2004ರಲ್ಲಿ 15 ರೋಗಿಗಳನ್ನ ಕೊಂದಿದ್ದ. ಆಗ ಆತನಿಕೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದ್ರೆ ಅವನು ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ 1971 ಮತ್ತು 1998ರ ಅವಧಿಯಲ್ಲಿ ವೈದ್ಯ ಮಾರ್ಫಿನ್ ಎಂಬಾತ ವಿಷಪೂರಿತ ಚುಚ್ಚುಮದ್ದು ನೀಡಿ ಸುಮಾರು 250 ರೋಗಿಗಳನ್ನ ಮಾರಣಹೋಮವಾಗಿತ್ತು.
– ಒಂದೇ ವರ್ಷದಲ್ಲಿ ಏಳು ನವಜಾತ ಶಿಶುಗಳನ್ನ ಕೊಂದ ಬ್ರಿಟಿಷ್ ನರ್ಸ್‌ಗೆ ಜೈಲು
ಲಂಡನ್: ಕಳೆದ ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನ (Newborn Babies) ಹತ್ಯೆ ಮಾಡಿ, ಇನ್ನೂ 6 ಶಿಶುಗಳನ್ನು ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್ (British Nurse) ಒಬ್ಬಳನ್ನ ತಪ್ಪಿತಸ್ಥೆ ಎಂದು ನ್ಯಾಯಾಲಯ ಪರಿಗಣಿಸಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಕ್ರೌನ್ ಪ್ರಾಸಿಕ್ಯೂಷನ್ ಸೇವೆ ತಿಳಿಸಿದೆ.
ಬ್ರಿಟಿಷ್ ನರ್ಸ್ ಮಹಿಳೆಯನ್ನು ಲೂಸಿ ಲೆಟ್ಬಿ ಎಂದು ಗುರುತಿಸಲಾಗಿದೆ. 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಸರಣಿ ಕೊಲೆಗಳನ್ನ ಮಾಡಿದ್ದಾಳೆ. ಕಳೆದ ಅಕ್ಟೋಬರ್‌ನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಶುಕ್ರವಾರ ಈ ಕುರಿತು ವಿಚಾರಣೆ ನಡೆಸಿದ ಇಂಗ್ಲೆಂಡ್‌ನ ಕೋರ್ಟ್ (England Court) ಶಿಶುಹತ್ಯೆಯ ಆರೋಪಿ ನರ್ಸ್‌ಗೆ ಶಿಕ್ಷೆ ವಿಧಿಸಲು ಮುಂದಾಗಿದೆ. ಈಕೆಗೆ ಶಿಕ್ಷೆ ವಿಧಿಸಲು ಭಾರತೀಯ ಮೂಲದ ಮಕ್ಕಳ ವೈದ್ಯರ ಸಲಹೆಗಾರ ಡಾ. ರವಿ ಜಯರಾಮ್ ಸಹಕರಿಸಿದ್ದಾರೆ.
ಈಕೆ ಕೊಲೆ ಮಾಡುತ್ತಿದ್ದದ್ದು ಹೇಗೆ?
ಚಾಲಾಕಿ ಮಹಿಳೆಯಿಂದ ಕೊಲೆಯಾದ ಹೆಚ್ಚಿನ ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಏಕೆಂದರೆ ಲೂಸಿ ಲೆಟ್ಬಿ (33) ತನ್ನ ಆರೈಕೆಯಲ್ಲಿದ್ದ ಶಿಶುಗಳಿಗೆ ವಿಷಪೂರಿತ ಚುಚ್ಚುಮದ್ದು ನೀಡುತ್ತಿದ್ದಳು. ಜೊತೆಗೆ ಹಾಲಿನೊಂದಿಗೆ ವಿಷಪೂರಿತ ಲಿಕ್ವಿಡ್ ಬೆರಸಿ ಕೊಡುತ್ತಿದ್ದಳು. ಜೊತೆಗೆ ಮಕ್ಕಳನ್ನ ಉಸಿರುಗಟ್ಟಿಸಿ, ದೈಹಿಕವಾಗಿ ಹಲ್ಲೆ ನಡೆಸಿ ಕೊಂದಿದ್ದಾಳೆ ಎಂದು ಪ್ರಾಸಿಕ್ಯೂಟರ್‌ಗಳು ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: 21 ಚರ್ಚ್‌ಗಳನ್ನು ಧ್ವಂಸಗೊಳಿಸಿದ 600 ಜನರ ಮೇಲೆ ಕೇಸ್ – 135 ಆರೋಪಿಗಳನ್ನು ಬಂಧಿಸಿದ ಪಾಕ್ ಪೊಲೀಸರು
ಈ ಹಿಂದೆ ಆಕೆಯ ನಿವಾಸದಲ್ಲಿ ತನಿಖೆ ನಡೆಸಿದಾಗ ಕೆಲ ಪತ್ರಗಳು ಪತ್ತೆಯಾಗಿದ್ದು, ಅದರಲ್ಲಿ ನಾನು ದೆವ್ವ, ಅವಳನ್ನು ನೋಡಿಕೊಳ್ಳಲು ನಾನು ಯೋಗ್ಯವಲ್ಲದ ಕಾರಣ ಉದ್ದೇಶಪೂರ್ವಕವಾಗಿ ಕೊಂದಿದ್ದೇನೆ. ನಾನು ಕೆಟ್ಟವಳು, ಅದಕ್ಕಾಗಿಯೇ ಹಾಗೆ ಮಾಡಿದ್ದೇನೆ ಮತ್ತು ಇಂದು ನಿಮ್ಮ ಜನ್ಮದಿನ ಆದ್ರೆ ನೀವೇ ಇಲ್ಲ, ಅದಕ್ಕಾಗಿ ನಾನು ತುಂಬಾ ವಿಷಾದಿಸುತ್ತೇನೆ ಎಂದು ಬರೆದಿದ್ದ ಪತ್ರಗಳು ಪತ್ತೆಯಾಗಿದ್ದವು.
ಮೊದಲಬಾರಿಗೆ 2015 ರಲ್ಲಿ ನರ್ಸ್ ಕೃತ್ಯ ಬೆಳಕಿಗೆ ಬಂದಿತ್ತು. ಅದೇ ವರ್ಷ ಮೂವರು ಮಕ್ಕಳು ಸಾವನ್ನಪ್ಪಿದ್ದವು. ಕೊನೆಗೆ ಏಪ್ರಿಲ್ 2017 ರಲ್ಲಿ ರಾಷ್ಟ್ರೀಯ ಆರೋಗ್ಯ ಸೇವೆ ಟ್ರಸ್ಟ್, ಪೊಲೀಸರು ವೈದ್ಯರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ನಂತರ ಪ್ರಕರಣದ ತನಿಖೆ ಮುಂದುವರಿಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 2018 ಮತ್ತು ನವೆಂಬರ್ 2020ರ ನಡುವೆ ನರ್ಸ್ ಅನ್ನು ಮೂರು ಬಾರಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಆಕೆಯನ್ನ ದೇಶದ ಅತ್ಯಂತ ಕೆಟ್ಟ ಬೇಬಿ ಸೀರಿಯಲ್ ಕಿಲ್ಲರ್ ಎಂದು ಪರಿಗಣಿಸಲಾಗಿತ್ತು. ಇದನ್ನೂ ಓದಿ: 27 ವರ್ಷ ರಜೆ ಇಲ್ಲದೇ ಕೆಲಸ ಮಾಡಿದ ವ್ಯಕ್ತಿಗೆ ಸಿಕ್ತು 3.5 ಕೋಟಿ ರೂ. ಗಿಫ್ಟ್
ಹಿಂದೆಯೂ ನಡೆದಿದೆ ಮಾರಣಹೋಮ:
ಬ್ರಿಟನ್‌ನಲ್ಲಿ ಈ ಬೆಚ್ಚಿ ಬೀಳಿಸುವ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆಯೂ ಡಾಕ್ಟರ್ ಹೆರಾಲ್ಡ್ ಶಿಪ್‌ಮನ್ ಮತ್ತು ನರ್ಸ್ ಬೆವರ್ಲಿ ಅಲಿಟ್ ಎಂಬವರು ಇಂತಹದ್ದೇ ಕುಕೃತ್ಯ ಎಸಗಿದ್ದರು. ಶಿಪ್‌ಮನ್ 2004ರಲ್ಲಿ 15 ರೋಗಿಗಳನ್ನ ಕೊಂದಿದ್ದ. ಆಗ ಆತನಿಕೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದ್ರೆ ಅವನು ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ 1971 ಮತ್ತು 1998ರ ಅವಧಿಯಲ್ಲಿ ವೈದ್ಯ ಮಾರ್ಫಿನ್ ಎಂಬಾತ ವಿಷಪೂರಿತ ಚುಚ್ಚುಮದ್ದು ನೀಡಿ ಸುಮಾರು 250 ರೋಗಿಗಳನ್ನ ಮಾರಣಹೋಮವಾಗಿತ್ತು.
ರಾಯ್ಪುರ: ವಿದ್ಯುತ್ ಕಡಿತದಿಂದಾಗಿ (Power Cut) 4 ಕಂದಮ್ಮಗಳು (Babies) ಆಸ್ಪತ್ರೆಯಲ್ಲೇ (Hospital) ಸಾವನ್ನಪ್ಪಿರುವ ಘಟನೆ ಸೋಮವಾರ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.
ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿದ್ದ (SNCU) 4 ನವಜಾತ ಶಿಶುಗಳು (Newborn Babies) ಸೋಮವಾರ ಸಾವನ್ನಪ್ಪಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಅಂಬಿಕಾಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (GMCH) ಮುಂಜಾನೆ 5:30 ರಿಂದ 8:30ರ ನಡುವೆ ಶಿಶುಗಳ (Infants) ಸಾವು ಸಂಭವಿಸಿದೆ. ವೆಂಟಿಲೇಟರ್‌ನಲ್ಲಿದ್ದ ಶಿಶುಗಳೇ ಸಾವನ್ನಪ್ಪಿದ್ದು, ಇದಕ್ಕೆ ವಿದ್ಯುತ್ ಕಡಿತವೇ ಕಾರಣ ಎಂದು ಮೃತ ಕಂದಮ್ಮಗಳ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಶಿಶುಗಳ ಸಾವಿಗೆ ಹಾಗೂ ವಿದ್ಯುತ್ ಕಡಿತಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಆಡಳಿತ ಸಮರ್ಥಿಸಿಕೊಂಡಿದೆ. ಇದನ್ನೂ ಓದಿ: SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಪ್ರಾಥಮಿಕ ಮಾಹಿತಿಯ ಪ್ರಕಾರ 4 ಶಿಶುಗಳು ಮೊದಲೇ ಗಂಭೀರ ಸ್ಥಿತಿಯಲ್ಲಿದ್ದು, ಅವನ್ನು ಎಸ್‌ಎನ್‌ಸಿಯುಗೆ ದಾಖಲಿಸಲಾಗಿತ್ತು. ಅದರಲ್ಲಿ 2 ಶಿಶುಗಳು ವೆಂಟಿಲೇಟರ್ ಬೆಂಬಲದಲ್ಲಿದ್ದವು. ಮಧ್ಯರಾತ್ರಿ 1 ಗಂಟೆಯಿಂದ 1:30ರ ವರೆಗೆ ಆಸ್ಪತ್ರೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಆದರೆ ಕೆಲವೇ ಹೊತ್ತಿನಲ್ಲಿ ಅದನ್ನು ಸರಿಪಡಿಸಲಾಗಿದೆ.
ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದರೂ ಅದು ಎಸ್‌ಎನ್‌ಸಿಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ಅಲ್ಲಿಗೆ ಪರ್ಯಾಯ ವಿದ್ಯುತ್ ಸರಬರಾಜಿನ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ. ಆದರೆ ಆಸ್ಪತ್ರೆಯಲ್ಲಿ ರಾತ್ರಿ 3 ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಮೃತ ಶಿಶುಗಳ ಪೋಷಕರು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಛತ್ತೀಸ್‌ಗಢ ರಾಜ್ಯಪಾಲ ಅನುಸೂಯಾ ಉಯ್ಕೆ, ಶಿಶುಗಳ ಸಾವಿನ ಕಾರಣವನ್ನು ತನಿಖೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: JNUನಲ್ಲಿ ಬ್ರಾಹ್ಮಣ ವಿರೋಧಿ ಗೋಡೆ ಬರಹ ಖಂಡನೀಯ – ಅಖಿಲ ಭಾರತ ಬ್ರಾಹ್ಮಣ ಮಹಾಸಂಘ
Live Tv
[brid partner=56869869 player=32851 video=960834 autoplay=true]
ಮುಂಬೈ: ಭಾಂಡೂಪ್‌ನಲ್ಲಿರುವ ಬೃಹನ್‌ಮುಂಬೈ ಮುನ್ಸಿಪಲ್ (ಬಿಎಂಸಿ) ನಡೆಸುತ್ತಿರುವ ಸಾವಿತ್ರಿಬಾಯಿ ಫುಲೆ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವುದು ಆತಂಕ ಮೂಡಿಸಿದೆ.
ಕಳೆದ 4 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿರಿಸಿದ ನವಜಾತಾ ಶಿಶುಗಳು ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಬಿಎಂಸಿ ಗುರುವಾರ ತಿಳಿಸಿದೆ.
ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಿದವು. ನಂತರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಅಮಾನತು ಗೊಳಿಸಲಾಗುವುದು. ಈ ಕುರಿತು ಉನ್ನತ ಮಟ್ಟದ ತನಿಖೆಯನ್ನು ನಡೆಸುವುದಾಗಿ ತಿಳಿಸಿದರು. ಇದನ್ನೂ ಓದಿ: ಕೋವಿಡ್ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ
ಇದಕ್ಕೂ ಮುನ್ನ ಪ್ರತಿಪಕ್ಷಗಳು ಬಿಎಂಸಿಯನ್ನು ಟೀಕಿಸಿದ್ದವು. ಆಡಳಿತದ ನಿರ್ಲಕ್ಷ್ಯದಿಂದ ಶಿಶುಗಳು ಸಾವನ್ನಪ್ಪುತ್ತಿವೆ ಎಂದು ಹೇಳಲಾಗಿತ್ತು. ಆದರೆ ಸೋಂಕಿನಿಂದಾಗಿ ಶಿಶುಗಳ ಸಾವು ಸಂಭವಿಸಿದೆ ಎಂದು ವೈದ್ಯರು ಪೋಷಕರಿಗೆ ತಿಳಿಸಿರುವ ಬಗ್ಗೆ ವರದಿಯಾಗಿದೆ.
ನಾಲ್ಕು ಶಿಶುಗಳ ಪೈಕಿ ಮೂರು ಶಿಶುಗಳು ಸೆಪ್ಟಿಕ್ ಶಾಕ್‌ನಿಂದಾಗಿ ಮೃತಪಟ್ಟಿವೆ. ಶಿಶುಗಳಿಗೆ ಸೋಂಕು ತಗುಲಿದ್ದು, ಔಷಧಿಗೆ ಗುಣಮುಖವಾಗಿಲ್ಲ ಎಂದು ಶಿಶುಗಳ ಸಾವಿನ ಬಗ್ಗೆ ವೈದ್ಯಾಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಮೇಲೆ ಮಹಿಳಾ ಸಿಬ್ಬಂದಿ ದರ್ಪ
ಭೋಪಾಲ್: ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ನವಜಾತ ಶಿಶುಗಳ ಪಾದಗಳನ್ನು ಕಚ್ಚಿ ತಿಂದ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಈ ಘಟನೆಗೆ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.
ಈ ಸಂಬಂಧ ಆಸ್ಪತ್ರೆಯ ಅಧೀಕ್ಷಕ ಡಾ. ಪ್ರಮೇಂದ್ರ ಠಾಕೂರ್ ಪ್ರತಿಕ್ರಿಯಿಸಿ, ಸರ್ಕಾರದ ಅಧೀನದಲ್ಲಿರುವ ಮಹಾರಾಜ ಯಶವಂತರಾವ್(ಎಂವೈ) ಆಸ್ಪತ್ರೆಯಲ್ಲಿ ಇಲಿಗಳು ನವಜಾತ ಶಿಶುಗಳ ಕಾಲುಗಳನ್ನು ಕಚ್ಚಿ ತಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಆದರೆ ಹೆಚ್ಚಿನ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿಲ್ಲ. ಈ ಸಂಬಂಧ ತನಿಖೆ ಮಾಡುವುದಾಗಿ ಠಾಕೂರ್ ಹೇಳಿದ್ದಾರೆ.
ಇಬ್ಬರು ವೈದ್ಯರು ಮತ್ತು ಆಡಳಿತಾಧಿಕಾರಿಯನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಠಾಕೂರ್ ತಿಳಿಸಿದ್ದಾರೆ.