Tag: Newly Marriedwomen

  • 3 ತಿಂಗ್ಳ ಹಿಂದೆ ಮದ್ವೆಯಾಗಿದ್ದ ನವವಿವಾಹಿತೆ ಸಾವು

    3 ತಿಂಗ್ಳ ಹಿಂದೆ ಮದ್ವೆಯಾಗಿದ್ದ ನವವಿವಾಹಿತೆ ಸಾವು

    ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನಲ್ಲಿ ನಡೆದಿದೆ.

    ರಂಜಿತಾ (24) ಮೃತ ದುರ್ದೈವಿ. ರಂಜಿತ ಮೂರು ತಿಂಗಳ ಹಿಂದೆ ಅಶೋಕ್ ಎಂಬಾತನೊಂದಿಗೆ ವಿವಾಹವಾಗಿತ್ತು. ವಿವಾಹವಾದ ಬಳಿಕ ರಂಜಿತಾ ಹಾಗೂ ಅಶೋಕ್ ಕೆ.ಆರ್ ಪುರಂನ ದೇವಸಂದ್ರ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

    ರಂಜಿತಾ ಮೂಲತಃ ಮುಳಬಾಗಿಲುದವರಾಗಿದ್ದು, ಬುಧವಾರ ಮನೆಯ ಕೋಣೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ರಂಜಿತಾರ ಮೃತ ದೇಹ ಪತ್ತೆಯಾಗಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಪತಿ ಅಶೋಕ್ ಕೊಲೆ ಮಾಡಿದ್ದಾನೆ ಎಂದು ರಂಜಿತಾ ಪೋಷಕರು ಆರೋಪಿಸುತ್ತಿದ್ದಾರೆ.

    ಈ ಬಗ್ಗೆ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv