Tag: NewlywedBride

  • ನವವಿವಾಹಿತೆಯ ಶವ ಕಾಲುವೆಯಲ್ಲಿ ಪತ್ತೆ

    ನವವಿವಾಹಿತೆಯ ಶವ ಕಾಲುವೆಯಲ್ಲಿ ಪತ್ತೆ

    ಹಾಸನ: ನವವಿವಾಹಿತೆಯ ಶವ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ.

    ಆಶಾ(21) ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ. ಆಶಾ ಹಾಸನ ತಾಲೂಕಿನ ಹೆರಗು ಗ್ರಾಮದ ಚಂದ್ರಪ್ಪ ಎಂಬವರ ಪುತ್ರಿಯಾಗಿದ್ದು ಕಳೆದ ಮೂರು ತಿಂಗಳ ಹಿಂದೆಯಷ್ಟೇ ಜೆಸಿಬಿ ಚಾಲಕ ಮಹೇಶ್ ಗೆ ಮದುವೆ ಮಾಡಿಕೊಡಲಾಗಿತ್ತು.

    ಇದೀಗ ಆಶಾ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಆಶಾಳನ್ನು ಕೊಲೆ ಮಾಡಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸುತ್ತಿದ್ದಾರೆ. ಹೀಗಾಗಿ ಮೃತಳ ಪತಿ ಮನೆಯವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಈ ಬಗ್ಗೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಪತ್ತೆ

    ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಪತ್ತೆ

    ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಅನುಮಾನಸ್ಪದವಾಗಿ ಮೃತಪಟ್ಟ ಘಟನೆಯೊಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿ ನಡೆದಿದೆ.

    ಲಾವಣ್ಯ(24) ನೇಣು ಬಿಗಿದ ರೀತಿಯಲ್ಲಿ ಪತ್ತೆಯಾದ ನವವಿವಾಹಿತೆ. ಲಾವಣ್ಯ ಕಳೆದ 7 ತಿಂಗಳ ಹಿಂದೆ ಗೊಲ್ಲಹಳ್ಳಿಯ ರೇಣುಕಾ ಪ್ರಸಾದ್ ಜೊತೆ ಮದುವೆಯಾಗಿದ್ದರು. ಪತಿ ಕುಟುಂಬವೇ ಕೊಲೆ ಮಾಡಿದೆ ಎಂದು ಲಾವಣ್ಯ ಪೋಷಕರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇತ್ತ ಕಲಬುರಗಿಯಲ್ಲಿ ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. 25 ವರ್ಷದ ಕಾವ್ಯ ನೇಣಿಗೆ ಶರಣಾದ ಗೃಹಿಣಿ. ಈಕೆಯನ್ನು ಅಗ್ರಿಕಲ್ಚರ್ ಫಿಲ್ಡ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜ್ ಜೊತೆ ಕಳೆದ ಒಂದೂವರೆ ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು.

    ಪತಿ ಬಸವರಾಜ್ ಮತ್ತು ಆಕೆಯ ಮನೆಯವರು, ತವರು ಮನೆಯಿಂದ ಎರಡು ಲಕ್ಷ ರೂಪಾಯಿ ತಗೊಂಡು ಬಾ ಅಂತಾ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv