Tag: Newyear 2024

  • ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

    ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

    ನವದೆಹಲಿ: ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ (Goldy Brar) ಭಯೋತ್ಪಾದಕ ಎಂದು ಸೋಮವಾರ ಕೇಂದ್ರ ಸರ್ಕಾರ ಘೋಷಿಸಿದೆ.

    ದರೋಡೆಕೋರ ಗೋಲ್ಡಿ ಬ್ರಾರ್‌ನನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಭಯೋತ್ಪಾದಕ ಎಂದು ಘೋಷಿಸಿದೆ. ಈತ ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ (Babbar Khalsa International) ಜೊತೆಗೆ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ (Home Ministry) ಪ್ರಕಟಣೆಯಲ್ಲಿ ತಿಳಿಸಿದೆ.

    ಗೋಲ್ಡಿ ಬ್ರಾರ್ ಗಡಿಯಾಚೆಗಿನ ಏಜೆನ್ಸಿಗಳಿಂದ ಬೆಂಬಲಿತನಾಗಿ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದು ಉಗ್ರವಾದದ ಆಮೂಲಾಗ್ರ ಸಿದ್ಧಾಂತ ಪ್ರತಿಪಾದಿಸಿದ್ದಾನೆ. ರಾಷ್ಟ್ರವಾದದ ಪರ ನಾಯಕರಿಗೆ ಬೆದರಿಕೆ ಕರೆಗಳನ್ನ ಹಾಕಿದ್ದಾನೆ. ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾನೆ ಎಂದು ಗೃಹ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಶ್ರೀರಾಮನ ಭಕ್ತರಿಗೆ ಮಾತ್ರ ಅಯೋಧ್ಯೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

    ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು ಮತ್ತು ಸ್ಫೋಟಕಗಳನ್ನ ಕಳ್ಳಸಾಗಣಿಕೆಯಲ್ಲೂ ತೊಡಗಿಸಿಕೊಂಡಿದ್ದು, ಹತ್ಯೆಗಳನ್ನು ನಡೆಸಲು ಶಾರ್ಪ್ ಶೂಟರ್‌ಗಳಿಗೆ ಸರಬರಾಜು ಮಾಡುತ್ತಿದ್ದ. ಆತನ ಸಹಚರರು ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳನ್ನು ನಡೆಸುವುದು ಮತ್ತು ಇತರ ದೇಶ ವಿರೋಧಿ ಯೋಜನೆಗಳ ಮೂಲಕ ಪಂಜಾಬ್ ರಾಜ್ಯದಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಹಾಳುಮಾಡಲು ಪಿತೂರಿ ನಡೆಸಿದ್ದಾರೆ ಎಂದು ಗೃಹ ಸಚಿವಾಲಯ ಹೇಳಿದೆ.

    ಸಿಧು ಮೂಸೆವಾಲಾ ಹತ್ಯೆಯ ದಿನಗಳ ನಂತರ, 2022ರ ಜೂನ್‌ನಲ್ಲಿ ಗೋಲ್ಡಿ ಬ್ರಾರ್ ಅವರ ಹಸ್ತಾಂತರಕ್ಕಾಗಿ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಿತ್ತು. ಆ ನಂತರ ಕ್ಯಾಲಿಫೋರ್ನಿಯಾದಲ್ಲಿ ಆತನನ್ನ ಬಂಧಿಸಲಾಗಿತ್ತು ಎಂದು ಭಾರತದ ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ರಾಮಜನ್ಮಭೂಮಿ ನಮಗೆ ಮತ ಪಡೆಯುವ ರಾಜಕೀಯ ವಿಚಾರವಲ್ಲ: ರಾಜನಾಥ್ ಸಿಂಗ್

  • ಹೆಚ್ಚಾಗ್ತಿದೆ ಕೋವಿಡ್ ಉಪತಳಿ JN.1 ಭೀತಿ – ಕ್ರಿಸ್‌ಮಸ್, ಹೊಸವರ್ಷ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್?

    ಹೆಚ್ಚಾಗ್ತಿದೆ ಕೋವಿಡ್ ಉಪತಳಿ JN.1 ಭೀತಿ – ಕ್ರಿಸ್‌ಮಸ್, ಹೊಸವರ್ಷ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್?

    ಬೆಂಗಳೂರು: ಕೋವಿಡ್‌ ಉಪತಳಿ JN.1 (covid sub Variant JN1 ಭೀತಿ ಮತ್ತೆ ಹೆಚ್ಚಾಗುತ್ತಿದೆ. ಈ ನಡುವೆ ಹೊಸ ವರ್ಷ ಮತ್ತು ಕ್ರಿಸ್‌ಮಸ್ ಸಂಭ್ರಮಕ್ಕೆ ಸಿದ್ಧತೆ ಜೋರಾಗಿದ್ದು, ಈ ಬಾರಿಗೂ ಅದ್ಧೂರಿ ಸಂಭ್ರಮಕ್ಕೆ ಬ್ರೇಕ್ ಬೀಳುತ್ತಾ ಅನ್ನೋ ತಲೆನೋವು ಶುರುವಾಗಿದೆ.

    ಹೊಸ ವರ್ಷ ಮತ್ತು ಕ್ರಿಸ್‌ಮಸ್ ಹಬ್ಬ ನೋಡಿಕೊಂಡು ಕೊರೊನಾ ಜಾಗೃತಿಗಾಗಿ ಹೊಸ ರೂಲ್ಸ್ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಮಂಗಳವಾರ (ಡಿ.19) ತಾಂತ್ರಿಕ ಸಲಹಾ ಸಮಿತಿ ಸಭೆ ಕೂಡ ಇದ್ದು. ಹೊಸ ಮಾರ್ಗಸೂಚಿಯ ವರದಿ ಆರೋಗ್ಯ ಇಲಾಖೆಗೆ ಸಲ್ಲಿಕೆಯಾಗಲಿದೆ. ಇದನ್ನೂ  ಓದಿ: ಯೋಧರ ಮೇಲೆ ಹಲ್ಲೆಗೆ ಯತ್ನ – ಬಾಂಗ್ಲಾ ಮೂಲದ ಇಬ್ಬರು ಸ್ಮಗ್ಲರ್‌ಗಳು ಗುಂಡೇಟಿಗೆ ಬಲಿ

    ಕೇರಳದಲ್ಲಿ ಕೊವಿಡ್-19 ಉಪತಳಿ ಜೆಎನ್.1 ಕಾಣಿಸಿಕೊಂಡಿದ್ದು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಯಾರಿ ಶುರು ಮಾಡಿದೆ. ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

    ದೇಶದಲ್ಲಿ ಆಕ್ಟೀವ್ ಕೇಸ್‌ಗಳ ಸಂಖ್ಯೆ 1,300 ಗಡಿ ದಾಟಿದೆ. ಒಂದು ಕಡೆ ಕೇರಳದಲ್ಲೂ ಪ್ರತಿನಿತ್ಯ 300ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿಯೇ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇದನ್ನೂ  ಓದಿ: ಕೋಲಾರದಲ್ಲಿ ವಸತಿ ಶಾಲೆ ಕರ್ಮಕಾಂಡ – ನಾಲ್ವರ ವಿರುದ್ಧ FIR, ಪ್ರಾಂಶುಪಾಲೆ ಸೇರಿ ಇಬ್ಬರು ಅರೆಸ್ಟ್

    ಟಫ್‌ ರೂಲ್ಸ್‌ ಏನೇನು ಮಾಡಬಹುದು?
    * ಕ್ರಿಸ್‌ಮಸ್, ನ್ಯೂ ಇಯರ್ ವೇಳೆ ಗುಂಪುಗೂಡದಂತೆ ಎಚ್ಚರ
    * ಸಾಮಾಜಿಕ ಅಂತರ ಪಾಲನೆ, ಸ್ಯಾನಿಟೈಸ್ ಬಳಕೆ
    * ಆಸ್ಪತ್ರೆ ಒಳಗೆ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
    * ಮಾಸ್ಕ್ ಧರಿಸಿಯೇ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಬೇಕು
    * ಆಸ್ಪತ್ರೆಗಳಲ್ಲಿ, ಜನಸಂದಣಿ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು
    * ಜ್ವರ, ಶೀತ, ಬೇರೆ ರೋಗದಿಂದ ಬಳಲುತ್ತಿರುವವರು ವೈದ್ಯರನ್ನ ಭೇಟಿಯಾಗಬೇಕು
    * ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಕೋವಿಡ್ ಟೆಸ್ಟ್ಗೆ ಟಾರ್ಗೆಟ್
    * ಆಸ್ಪತ್ರೆಗಳಲ್ಲಿ ರೋಗ ಲಕ್ಷಣಗಳು ಇರೋ ರೋಗಿಗಳಿದ್ರೆ ಕೋವಿಡ್ ಟೆಸ್ಟ್ ಕಡ್ಡಾಯ
    * ಸಾರ್ವಜನಿಕರಿಗೆ ಕಡ್ಡಾಯವಾಗಿ ಈಗಿನಿಂದಲೇ ಜಾಗೃತಿ ಮೂಡಿಸಬೇಕು
    * ಐಎಲ್‌ಐ, ಸ್ಯಾರಿ ಕೇಸ್‌ಗಳಿದ್ರೆ ಕೂಡಲೇ ಕೋವಿಡ್ ಟೆಸ್ಟ್ ಮಾಡಬೇಕು
    * ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಬೇಕು