Tag: NHAI

  • ಗರಿಷ್ಠ ಮಟ್ಟ ತಲುಪಿದ ಫಾಸ್ಟ್‌ಟ್ಯಾಗ್  ಟೋಲ್ – ಏಪ್ರಿಲ್‍ನಲ್ಲಿ 193.15 ಕೋಟಿ ಸಂಗ್ರಹ

    ಗರಿಷ್ಠ ಮಟ್ಟ ತಲುಪಿದ ಫಾಸ್ಟ್‌ಟ್ಯಾಗ್  ಟೋಲ್ – ಏಪ್ರಿಲ್‍ನಲ್ಲಿ 193.15 ಕೋಟಿ ಸಂಗ್ರಹ

    ನವದೆಹಲಿ: ಫಾಸ್ಟ್‌ಟ್ಯಾಗ್ (FASTag) ದೈನಂದಿನ ಟೋಲ್ ಸಂಗ್ರಹವು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highways Authority of India) ಮಂಗಳವಾರ ತಿಳಿಸಿದೆ.

    ಫಾಸ್ಟ್‌ಟ್ಯಾಗ್  ವ್ಯವಸ್ಥೆಯ ಮೂಲಕ ದೈನಂದಿನ ಟೋಲ್ ಸಂಗ್ರಹವು ಏ. 29 ರಂದು ಸಾರ್ವಕಾಲಿಕ ಗರಿಷ್ಠ 193.15 ಕೋಟಿ ರೂ. ತಲುಪಿದೆ. ಒಂದೇ ದಿನದಲ್ಲಿ 1.16 ಕೋಟಿ ವಹಿವಾಟುಗಳು ದಾಖಲಾಗಿದೆ. ಭಾರತದಲ್ಲಿ ಟೋಲ್ ಸಂಗ್ರಹಕ್ಕಾಗಿ ಫಾಸ್ಟ್‌ಟ್ಯಾಗ್ ವ್ಯವಸ್ಥೆಯ ಅನುಷ್ಠಾನ ಉತ್ತಮ ಬೆಳವಣಿಗೆಯೊಂದಿಗೆ ಯಶಸ್ಸನ್ನು ಕಂಡಿದೆ ಎಂದು ಪ್ರಾಧಿಕಾರ (NHAI) ಹೇಳಿಕೊಂಡಿದೆ. ಇದನ್ನೂ ಓದಿ: ಪುತ್ತೂರು ಕೈ ಅಭ್ಯರ್ಥಿಯ ಸಹೋದರ ಮನೆ ಮೇಲೆ ಐಟಿ ರೇಡ್ – ಗಿಡದಲ್ಲಿ ಕಂತೆ ಕಂತೆ ನೋಟು 1 ಕೋಟಿ ಜಪ್ತಿ

    ದೇಶದಾದ್ಯಂತ 50 ಕ್ಕೂ ಹೆಚ್ಚು ನಗರಗಳಲ್ಲಿ 140 ಕ್ಕೂ ಹೆಚ್ಚು ನಿಗದಿತ ಪಾರ್ಕಿಂಗ್ ಸ್ಥಳಗಳಲ್ಲಿ ಶುಲ್ಕ ಪಾವತಿಗೆ ಫಾಸ್ಟ್‍ಟ್ಯಾಗ್ ವ್ಯವಸ್ಥೆ ಮಾಡಿದೆ. ಅಲ್ಲದೆ ತಡೆರಹಿತ ಪ್ರಯಾಣ ಮತ್ತು ಸುರಕ್ಷಿತ ಪಾವತಿಯನ್ನು ಸುಗಮಗೊಳಿಸಿದೆ. ಫಾಸ್ಟ್‌ಟ್ಯಾಗ್ ಕಾರ್ಯಕ್ರಮದ ಅಡಿಯಲ್ಲಿ ಟೋಲ್ ಪ್ಲಾಜಾಗಳ (Toll Plazas) ಸಂಖ್ಯೆಯು 339 ರಾಜ್ಯ ಟೋಲ್ ಪ್ಲಾಜಾಗಳನ್ನು ಒಳಗೊಂಡಂತೆ 770 ರಿಂದ 1,228 ಕ್ಕೆ ಏರಿಕೆ ಮಾಡಲಾಗಿದೆ.

    ಹೆದ್ದಾರಿ‌ (Expressways) ಬಳಕೆದಾರರಿಂದ ಫಾಸ್ಟ್‌ಟ್ಯಾಗ್‌ನ ಅಳವಡಿಕೆ ಟೋಲ್ ಕಾರ್ಯಾಚರಣೆಗಳ ದಕ್ಷತೆಯನ್ನು ಹೆಚ್ಚಿಸಿದೆ. ಭಾರತದ ಹೆದ್ದಾರಿ ಮೂಲಸೌಕರ್ಯದಲ್ಲಿ ಮತ್ತಷ್ಟು ಹೂಡಿಕೆ ಅಗತ್ಯವಿದೆ ಎಂದು ಪ್ರಾಧಿಕಾರ ಹೇಳಿದೆ.

    ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಣಾ ಬೂತ್‍ಗಳಲ್ಲಿ ವಾಹನ ಸವಾರಾರು ನಿಲ್ಲಿಸದೆಯೇ ಟೋಲ್ ಶುಲ್ಕವನ್ನು ಪಾವತಿಸಲು ಫಾಸ್ಟ್‌ಟ್ಯಾಗ್ ಅನುಕೂಲವಾಗಿದೆ. ಫೆ.2021 ರಲ್ಲಿ ಸರ್ಕಾರ ಕಮರ್ಶಿಯಲ್ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿತು.

    ಫಾಸ್ಟ್‌ಟ್ಯಾಗ್ ಕಡ್ಡಾಯ ಮಾಡಿರುವ ಕಾರಣ ಟೋಲ್ ಸಂಗ್ರಹ ಹೆಚ್ಚಾಗುತ್ತಿದೆ. 2019 ರಲ್ಲಿ ಒಂದು ದಿನದಲ್ಲಿ 70 ಕೋಟಿ ರೂ. ಸಂಗ್ರಹವಾಗುತ್ತಿದ್ದರೆ 2020ರಲ್ಲಿ ಇದು 92 ಕೋಟಿ ರೂಗಳಿಗೆ ಏರಿಕೆಯಾಗಿತ್ತು.  ಇದನ್ನೂ ಓದಿ: ಹಾರಾಟ ನಿಲ್ಲಿಸಿದ ಗೋ ಫಸ್ಟ್ – ಕಂಪನಿ ದಿವಾಳಿಯಾಗಿದ್ದು ಯಾಕೆ?

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ; ಯಾವ ಬಸ್‌ನಲ್ಲಿ ಹೋದ್ರೆ ಎಷ್ಟು?

    ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru Mysuru Expressway) ಮಾರ್ಚ್ 14ರಿಂದಲೇ ಟೋಲ್ (Toll) ಸಂಗ್ರಹ ಆರಂಭವಾಗಿದ್ದು, ಈ ಟೋಲ್ ಶುಲ್ಕದ ಹೊರೆಯನ್ನು ಕೆಎಸ್‌ಆರ್‌ಟಿಸಿ (KSRTC) ಪ್ರಯಾಣಿಕರ ಹೆಗಲಿಗೆ ಹೊರಿಸಿದೆ.

    ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದೆ. ಎಕ್ಸ್‌ಪ್ರೆಸ್‌ವೇಯ ಮೊದಲ ಹಂತದ ಬೆಂಗಳೂರು-ನಿಡಘಟ್ಟ ಮಧ್ಯದಲ್ಲಿನ ಕಣಿಮಿಣಿಕೆ ಟೋಲ್ ಮುಖಾಂತರ ಸಂಚರಿಸುವ ಬಸ್ಸುಗಳಿಂದ ಮಾರ್ಚ್ 14ರಿಂದಲೇ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಾರಂಭಿಸಿದೆ. ಇದನ್ನೂ ಓದಿ: ಮಾರ್ಚ್ 14ರಿಂದಲೇ ದಶಪಥ ರಸ್ತೆಯಲ್ಲಿ ಟೋಲ್ ಸಂಗ್ರಹ ಶುರು

    ಈ ವೆಚ್ಚ ಸರಿದೂಗಿಸಲು ಟೋಲ್ ಶುಲ್ಕದ ಹೊರೆಯನ್ನು ಪ್ರಯಾಣಿಕರ ಹೆಗಲಿಗೆ ಹೊರಿಸಲಾಗಿದೆ. ಎಕ್ಸ್‌ಪ್ರೆಸ್‌ವೇ ಮೂಲಕ ಸಂಚರಿಸುವ ನಿಗಮದ ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವ ತಲಾ ಪ್ರಯಾಣಿಕರಿಂದ 15 ರೂ., ರಾಜಹಂಸ ಬಸ್ಸುಗಳಲ್ಲಿ ತಲಾ 18 ರೂ. ಹಾಗೂ ಮಲ್ಟಿ ಆಕ್ಸಲ್ ಅಥವಾ ಇತರೇ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ತಲಾ 20 ರೂ. ಅನ್ನು ಬಳಕೆದಾರರ ಶುಲ್ಕವನ್ನಾಗಿ (ಟೋಲ್) ಸಂಗ್ರಹಿಸುವುದು ಅನಿವಾರ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ:ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಮತಿ

    ಬಳಕೆದಾರರ ಶುಲ್ಕವು ಎಕ್ಸ್‌ಪ್ರೆಸ್‌ವೇ ಮೂಲಕ ಕಾರ್ಯಾಚರಣೆಯಾಗುವ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾತ್ರ ಅನ್ವಯವಾಗುತ್ತದೆ. ಉಳಿದ ಸಾರಿಗೆಗಳಿಗೆ ಅನ್ವಯಿಸುವುದಿಲ್ಲ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

  • ಮಾರ್ಚ್ 14ರಿಂದಲೇ ದಶಪಥ ರಸ್ತೆಯಲ್ಲಿ ಟೋಲ್ ಸಂಗ್ರಹ ಶುರು

    ಮಾರ್ಚ್ 14ರಿಂದಲೇ ದಶಪಥ ರಸ್ತೆಯಲ್ಲಿ ಟೋಲ್ ಸಂಗ್ರಹ ಶುರು

    ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ಸಂಚಾರಕ್ಕೆ ಮುಕ್ತಗೊಂಡಿದ್ದು, ಮಾರ್ಚ್ 14ರಿಂದಲೇ ಟೋಲ್ (Toll) ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

    ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಯಹಳ್ಳಿ ಮತ್ತು ಕಣಮಿಣಕಿಯ ಟೋಲ್‌ಗಳು ಕಾರ್ಯಾಚರಣೆ ಆರಂಭಿಸಲಿವೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುವವರು ಕಣಮಿಣಕಿ ಬಳಿ, ಮೈಸೂರು ಕಡೆಯಿಂದ ಬೆಂಗಳೂರು ಬರುವವರು ಶೇಷಗಿರಿಹಳ್ಳಿಯ ಟೋಲ್‌ನಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ. ಮೊದಲ ಹಂತದ 55.63 ಕಿಮೀ ರಸ್ತೆಗೆ ಶುಲ್ಕ ಸಂಗ್ರಹ ಮಾಡಲಾಗುತ್ತದೆ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

    narendra modi 1

    ಈ ಬೆನ್ನಲ್ಲೇ ಕಾಮಗಾರಿ ಪೂರ್ಣಗೊಳಿಸದೇ, ಸರ್ವೀಸ್ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡಬಾರದೆಂದು ಹಲವು ಸಂಘ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ನಡುವೆ ಟೋಲ್ ಸಂಗ್ರಹ ಮಾಡಲು ಎನ್‌ಹೆಚ್‌ಎಐ (NHAI) ಮುಂದಾಗಿದೆ. ಮಂಗಳವಾರ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಮತಿ

    Narendra Modi mandya 3

    ಪ್ರಧಾನಿ ನರೇಂದ್ರ ಮೋದಿ (NarendraModi) ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೊಳಿಸಿದ ಬಳಿಕ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

    ಟೋಲ್‌ ಶುಲ್ಕ ಎಷ್ಟು – ಹೇಗೆ?
    NHAI ಟೋಲ್‌ ಸಂಗ್ರಹಿಸಲು 6 ರೀತಿಯಲ್ಲಿ ವಾಹನಗಳನ್ನ ವರ್ಗೀಕರಿಸಲಾಗಿದೆ. ನಿಗದಿತ ಶುಲ್ಕದ ಪ್ರಕಾರ ಬೆಂಗಳೂರು-ನಿಡಘಟ್ಟ ವಿಭಾಗದಲ್ಲಿ ಒಂದು ಟ್ರಿಪ್‌ಗೆ ಕಾರು ಮಾಲೀಕರು 135 ರೂ. ಪಾವತಿಸಬೇಕಾಗುತ್ತದೆ. ಅಲ್ಲದೇ ಒಂದೇ ದಿನದಲ್ಲಿ ಮರಳಿದರೆ, 205 ರೂ. ನಿಗದಿಮಾಡಲಾಗಿದೆ. ಮಿನಿ ಬಸ್‌ಗೆ 220 ರೂ. ಹಾಗೂ ಬಸ್‌ಗೆ ಒಂದು ಬಾರಿ ಪ್ರಯಾಣಕ್ಕೆ 460 ರೂ. ಶುಲ್ಕ ವಿಧಿಸಲಾಗುತ್ತದೆ ಎಂದು NHAI ಹೇಳಿದೆ.

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸದ್ಯಕ್ಕೆ ಟೋಲ್‌ ಸಂಗ್ರಹ ಇಲ್ಲ

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸದ್ಯಕ್ಕೆ ಟೋಲ್‌ ಸಂಗ್ರಹ ಇಲ್ಲ

    ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣವಾಗುವವರೆಗೆ ಸುಂಕ ವಸೂಲಾತಿಯನ್ನು (Toll Collection) ಮುಂದೂಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಧರಿಸಿದೆ.

    ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಸರ್ವಿಸ್ ರಸ್ತೆ (Service Road) ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

     

    ಸರ್ವಿಸ್‌ ರಸ್ತೆ ಕಾಮಗಾರಿ ಪೂರ್ಣವಾಗದೇ ಇದ್ದರೂ ಸುಂಕ ವಸೂಲಾತಿ ಮಾಡಲು ತೀರ್ಮಾನ ಕೈಗೊಂಡಿದ್ದಕ್ಕೆ ಜನಸಾಮಾನ್ಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ:ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ಸಂಗ್ರಹ  – ಯಾವ ವಾಹನಕ್ಕೆ ಎಷ್ಟು ದರ?

    ಸುಮಾರು 8000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ (Bangalore Mysore Expressway) ಮೊದಲ ಹಂತದ 55.63 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಲ್ಕ ವಸೂಲಾತಿ ಕುರಿತು ಕೇಂದ್ರ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿತ್ತು.

    ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 11ರಂದು ನೂತನ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿಯೇ ಎರಡನೇ ಹಂತದ ಕಾಮಗಾರಿಯು ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ.

    ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಮೊದಲ ಹಂತದ ಟೋಲ್ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ ಎಂದು ಎನ್‌ಎಚ್‌ಎಐ ಪ್ರಕಟಣೆ ಹೊರಡಿಸಿತ್ತು.

  • ಡಿ.1 ರಿಂದ ಸುರತ್ಕಲ್ ಬಂದ್, ಹೆಜಮಾಡಿ ಟೋಲ್ ಜೊತೆ ವಿಲೀನ – ದರ ಎಷ್ಟು?

    ಡಿ.1 ರಿಂದ ಸುರತ್ಕಲ್ ಬಂದ್, ಹೆಜಮಾಡಿ ಟೋಲ್ ಜೊತೆ ವಿಲೀನ – ದರ ಎಷ್ಟು?

    ಮಂಗಳೂರು: ಡಿಸೆಂಬರ್ 01 ರಿಂದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ (Surathkal Toll Gate) ಸ್ಥಗಿತಗೊಳಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ (MR Ravikumar) ಅಧಿಕೃತ ಆದೇಶ ಹೊರಡಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಆದೇಶದನ್ವಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸುರತ್ಕಲ್ ನಲ್ಲಿ ಸ್ಥಗಿತಗೊಳಿಸಿ ಉಡುಪಿಯ ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಲೂಟಿ ಹೊಡೆದು ರಾಜಕೀಯ ಮಾಡಿಲ್ಲ, ಅಕ್ರಮ ಮಾಡಿ ಜೀವನ ಮಾಡಿಲ್ಲ: HDK

    ಹೆಜಮಾಡಿ ಟೋಲ್ ಗೇಟ್ ದರ ಪರಿಷ್ಕರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್‌ಗೇಟ್ ಅನ್ನು ವಿಲೀನಗೊಳಿಸಿ ಹೆಚ್ಚುವರಿ ಶುಲ್ಕವನ್ನು ಹೆಜಮಾಡಿ ಟೋಲ್ (Toll) ನಲ್ಲಿಯೇ ಸಂಗ್ರಹಿಸಲಾಗುತ್ತದೆ. ಇದನ್ನೂ ಓದಿ: ನ.30 ರಿಂದ ಪುರುಷ ಸಂತಾನಹರಣ ಚಿಕಿತ್ಸಾ ಶಿಬಿರ – ಚಿಕಿತ್ಸೆಗುಂಟು 1,100 ರೂ. ಪ್ರೋತ್ಸಾಹಧನ

    ಯಾವುದಕ್ಕೆ ಎಷ್ಟು ಶುಲ್ಕ?
    ವಿಲೀನಗೊಂಡ ನಂತರ ಹೆಜಮಾಡಿ ಟೋಲ್ ಗೇಟ್ ಪಾಸ್ ಆಗಲು ಕಾರಿಗೆ 100 ರೂ. ಶುಲ್ಕ ವಿಧಿಸಲಾಗುತ್ತದೆ. ಈ ಹಿಂದೆ ಹೆಜಮಾಡಿಯಲ್ಲಿ ಕಾರ್‌ಗೆ (Car) ಏಕಮುಖ ಪಾಸಿಂಗ್ 40 ರೂ. ನಿಗದಿಮಾಡಲಾಗಿತ್ತು. ಬಸ್ ಮತ್ತು ಟ್ರಕ್ ಗಳಿಗೆ ಏಕಮುಖ ಪಾಸಿಂಗ್‌ಗೆ ನಿಗದಿಪಡಿಸಲಾಗಿದ್ದ 210 ರೂ. ಶುಲ್ಕವನ್ನು 355 ರೂ.ಗಳಿಗೆ ಹೆಚ್ಚಿಸಲಾಗಿದೆ. ಭಾರೀ ಗಾತ್ರದ ಮತ್ತು ಮಲ್ಟಿ ಆಕ್ಸೆಲ್‌ನ 225 ರೂ. ಶುಲ್ಕವನ್ನು 555 ರೂ.ಗಳಿಗೆ ಹಾಗೂ 70 ರೂ. ನಿಗದಿಯಾಗಿದ್ದ ಲಘು ವಾಣಿಜ್ಯ ಮತ್ತು ಸರಕು ವಾಹನಗಳಿಗೆ 170 ರೂ. ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಂಸದರ ಟ್ವೀಟ್‍ಗೆ ಸಿಮೀತವಾದ ಸುರತ್ಕಲ್ ಟೋಲ್ ರದ್ದತಿ – ಮುಂದುವರಿದ ಹಣ ಸಂಗ್ರಹ

    ಸಂಸದರ ಟ್ವೀಟ್‍ಗೆ ಸಿಮೀತವಾದ ಸುರತ್ಕಲ್ ಟೋಲ್ ರದ್ದತಿ – ಮುಂದುವರಿದ ಹಣ ಸಂಗ್ರಹ

    ಮಂಗಳೂರು: ಸುರತ್ಕಲ್ ಟೋಲ್‍ಗೇಟ್ (Surathkal Toll Gate) ರದ್ದಾಗಿದೆ ಆದ್ರೂ ಟೋಲ್ ಸಂಗ್ರಹ ಮಾತ್ರ ಇನ್ನೂ ನಿಂತಿಲ್ಲ. ನಮಗೆ ಸರ್ಕಾರದ ನೋಟಿಫಿಕೇಷನ್ ಕೈಸೇರಿಲ್ಲ ಎನ್ನುತ್ತಿದ್ದಾರೆ ಟೋಲ್‍ಗೇಟ್ ಗುತ್ತಿಗೆದಾರರು.

    ಈ ಟೋಲ್‍ಗೇಟ್ ಹೆಜಮಾಡಿ ಟೋಲ್‍ಗೇಟ್ ಜೊತೆಗೆ ವಿಲೀನಗೊಳ್ಳುತ್ತಿರುವುದರಿಂದ ಜನತೆಗೆ ದುಪ್ಪಟ್ಟು ಬರೆ ಬೀಳುವ ಆತಂಕ ಎದುರಾಗಿದೆ. ಟೋಲ್‍ಗೇಟ್ ವಿಚಾರದಲ್ಲಿ ಈವರೆಗೆ ಒಂದು ಹಂತದ ರಾಜಕೀಯ ಮೇಲಾಟ ನಡೆದಿದ್ರೆ ಇದೀಗ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಟೋಲ್‍ಗೇಟ್ ರದ್ದಾಯ್ತು ಎನ್ನುವ ಸಂಸದರ ಟ್ವೀಟ್ ನಂಬಿ ಟೋಲ್‍ಗೇಟ್ ರದ್ದಾಯ್ತು ಅಂತಾ ಅಂದ್ಕೊಂಡ್ರೆ ಅಲ್ಲಿ ಟೋಲ್ ಕಲೆಕ್ಷನ್ ಮಾತ್ರ ನಡೆಯುತ್ತಲೇ ಇದೆ. ಯಾಕೆ ಅಂತಾ ಕೇಳಿದ್ರೆ ಸರ್ಕಾರದ ನೋಟಿಫಿಕೇಷನ್ ಟೋಲ್ ಕಂಪನಿಯ ಕೈಸೇರಿಲ್ಲ ಎನ್ನುವ ಉತ್ತರ ಬರ್ತಾ ಇದೆ. ಅಷ್ಟೇ ಅಲ್ಲ, ಈ ಟೋಲ್‍ಗೇಟ್ ಹೆಜಮಾಡಿ ಟೋಲ್ ಜೊತೆ ವಿಲೀನ ಆಗಿರೋದ್ರಿಂದ ಇಲ್ಲಿನ ಹಣವನ್ನೂ ಸೇರಿಸಿ ಪಡೆಯುವ ಸಾಧ್ಯತೆಯಿದ್ದು, ಜನತೆಯ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಈ ವಿಚಾರ ಮತ್ತೆ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಮದ್ರಾಸ್ ಐ ಹಾವಳಿ- ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್

    ಹೌದು ಈ ಆತಂಕಕ್ಕೆ ಕಾರಣವಾಗಿರೋದು ಸ್ಥಳೀಯ ಶಾಸಕ ಭರತ್ ಶೆಟ್ಟಿ (Bharath Shetty) ನೀಡಿರುವ ಹೇಳಿಕೆ. ಸರ್ಕಾರದ ನಿಯಮದ ಪ್ರಕಾರ ಹೆಜಮಾಡಿಯಲ್ಲಿ ಸುಂಕ ಜಾಸ್ತಿ ಪಡೆಯಬಹುದು. ಎಷ್ಟು ದರ ಅನ್ನೋದು ನೋಟಿಫಿಕೇಶನ್ ಬಂದ ಬಳಿಕವಷ್ಟೇ ಗೊತ್ತಾಗಲಿದೆ. ಒಂದು ವಾರದಲ್ಲಿ ನೋಟಿಫಿಕೇಶನ್ ಬರುವ ಸಾಧ್ಯತೆಗಳಿವೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಹೇಳಿಕೆ ನೀಡಿದ್ದು, ಇದು ಹೆಜಮಾಡಿ ಟೋಲ್‍ಗೇಟ್‍ನಲ್ಲಿ ದರ ಏರಿಕೆಯಾಗುವ ಮುನ್ಸೂಚನೆ ಎನ್ನಲಾಗಿದೆ. ಈ ಮೂಲಕ ಸುರತ್ಕಲ್ ಟೋಲ್ ರದ್ದಾದರೂ ಜನರಿಗೆ ಉಪಯೋಗವಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

    ಈ ನಿರ್ಧಾರವನ್ನು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ (UTKhader) ವಿರೋಧಿಸಿದ್ದಾರೆ. ಟೋಲ್‍ಗೇಟ್‍ನ್ನು ಶಿಫ್ಟ್ ಮಾಡಿದ್ದಾರಷ್ಟೇ. ಎಲ್ಲೂ ಕೂಡ ರದ್ದಾಗಿಲ್ಲ. ಇದನ್ನು ಹೆಜಮಾಡಿ ಟೋಲ್‍ಗೇಟ್ ಜೊತೆಗೆ ಮರ್ಜ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೋರಾಟಕ್ಕೆ ಜಯ – ಕೊನೆಗೂ ಸುರತ್ಕಲ್‌ ಟೋಲ್‌ ಸಂಗ್ರಹ ಕೇಂದ್ರ ರದ್ದು

    ಸುರತ್ಕಲ್‍ನಲ್ಲಿ ಟೋಲ್ ಸಂಗ್ರಹ ಮುಂದುವರೆಸಿದ್ದು, ಒಂದು ವಾರದಲ್ಲಿ ನೋಟಿಫಿಕೇಶನ್ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹೆಜಮಾಡಿ ಟೋಲ್‍ಗೇಟ್‍ನಲ್ಲಿ ದರ ಎಷ್ಟಾಗಬಹುದು ಎನ್ನುವ ಬಗ್ಗೆ ನಿರೀಕ್ಷೆಯಿದ್ದು, ಎಷ್ಟು ದರ ಅನ್ನೋದು ನೋಟಿಫಿಕೇಶನ್ ಬಂದ ಬಳಿಕವಷ್ಟೇ ಗೊತ್ತಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ನೋಟಿಫಿಕೇಶನ್‍ನತ್ತ ಎಲ್ಲರ ಚಿತ್ತ ನೆಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • BBMP ಕಾಮಗಾರಿಗಳ ಬಗ್ಗೆ ನಂಬಿಕೆಯಿಲ್ಲ – ರಸ್ತೆ ಗುಂಡಿಗಳ ವಿಚಾರವಾಗಿ ಹೈಕೋರ್ಟ್ ತರಾಟೆ

    BBMP ಕಾಮಗಾರಿಗಳ ಬಗ್ಗೆ ನಂಬಿಕೆಯಿಲ್ಲ – ರಸ್ತೆ ಗುಂಡಿಗಳ ವಿಚಾರವಾಗಿ ಹೈಕೋರ್ಟ್ ತರಾಟೆ

    ಬೆಂಗಳೂರು: ರಸ್ತೆ ಗುಂಡಿಗಳ (Potholes) ವಿಚಾರವಾಗಿ ಬಿಬಿಎಂಪಿಯನ್ನು (BBMP) ಮತ್ತೊಮ್ಮೆ ಹೈಕೋರ್ಟ್ (High Court) ತರಾಟೆಗೆ ತೆಗೆದುಕೊಂಡಿದೆ.

    ಕೋರ್ಟ್ ಆದೇಶಗಳು ಕೇವಲ ಆದೇಶಕ್ಕೆ ಮಾತ್ರ ಸೀಮಿತ ಆಗಿವೆ. ಆರು ವರ್ಷಗಳಿಂದ ಬೆಂಗಳೂರಿನ (Bengaluru) ರಸ್ತೆಗಳು ದುಸ್ಥಿತಿಯಲ್ಲಿಯೇ ಇವೆ. ರಸ್ತೆ ಗುಂಡಿಗಳಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಿದೆ. ಆದರೂ ಬಿಬಿಎಂಪಿ (BBMP) ತಲೆಕೆಡಿಸಿಕೊಳ್ಳುತ್ತಿಲ್ಲ. ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಬಿಬಿಎಂಪಿ ಅಧಿಕಾರಿಗಳನ್ನು ನಂಬಲು ನಾವು ಸಿದ್ಧ ಇಲ್ಲ. 3ನೇ ಸಂಸ್ಥೆಯಿಂದ ಕಾಮಗಾರಿ ದೃಢೀಕರಣದ ಅಗತ್ಯವಿದೆ. ಗುಣಮಟ್ಟ ಪರಿಶೀಲನೆಗೆ ಒಂದು ವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್, ಹಿರಿಯ ಎಂಜಿನಿಯರ್‌ಗಳನ್ನು ನಿಯೋಜನೆ ಮಾಡಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದನ್ನೂ ಓದಿ: ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ – ಅಶ್ವಥ್ ನಾರಾಯಣ ಸಂಬಂಧಿ ಕಾರಣ ಎಂದ ಮಾಜಿ ಶಾಸಕ

    BBMP

    ಎನ್‍ಹೆಚ್‍ಎಐ (NHAI) ಎಂಜಿನಿಯರ್‌ಗಳಿಗೆ ಬಿಬಿಎಂಪಿ ಎಲ್ಲಾ ರೀತಿಯ ಸಹಕಾರ ಕೊಡಬೇಕು. ಗುಣಮಟ್ಟ ಪರಿಶೀಲನಾ ವರದಿಯನ್ನು ಹೈಕೋರ್ಟ್‍ಗೆ ಎನ್‍ಹೆಚ್‍ಎಐ ನೀಡಬೇಕು. ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವರದಿ ಮಾಡಬೇಕು. ಸಲಹೆಗಳನ್ನು ಕೂಡ ವರದಿ ರೂಪದಲ್ಲಿ ನೀಡಬಹುದು ಎಂದು ಎನ್‍ಹೆಚ್‍ಎಐಗೆ ಹೈಕೋರ್ಟ್ ತಿಳಿಸಿದೆ. ಮುಂದಿನ ವಿಚಾರಣೆ ಡಿಸೆಂಬರ್ 7ಕ್ಕೆ ನಡೆಯಲಿದೆ. ಈ ಮಧ್ಯೆ, ಬಿಬಿಎಂಪಿ ಮುಖ್ಯ ಆಯುಕ್ತರು ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವನ್ನು ನವೆಂಬರ್ 5 ರಿಂದ ನವೆಂಬರ್ 10ಕ್ಕೆ ವಿಸ್ತರಣೆ ಮಾಡಿದ್ದಾರೆ. ಇನ್ನೂ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಕಾರಣ, ಹೂಡಿಕೆದಾರರಿಗೆ ಗುಂಡಿ ದರ್ಶನ ತಪ್ಪಿಸಲು ಅರಮನೆ ಮೈದಾನದ ಸುತ್ತಮುತ್ತಲ ರಸ್ತೆಗಳಿಗೆ ರಾತ್ರೋರಾತ್ರಿ ಡಾಂಬರೀಕರಣದ ಭಾಗ್ಯ ಕರುಣಿಸಲಾಗಿದೆ. ಜಯಮಹಲ್ ರಸ್ತೆಗೆ ಡಾಂಬರು ಹಾಕಲಾಗಿದೆ. ಆದ್ರೆ, ಪಕ್ಕದ ರಸ್ತೆಗಳ ಗುಂಡಿಗಳನ್ನು ಹಾಗೆಯೇ ಬಿಡಲಾಗಿದೆ. ಇದನ್ನೂ ಓದಿ: ಗೆಹ್ಲೋಟ್‌ ಹೊಗಳಿದ ಮೋದಿ – ಲಘುವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಪೈಲಟ್‌

    Live Tv
    [brid partner=56869869 player=32851 video=960834 autoplay=true]

  • ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    ನವದೆಹಲಿ: ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಟೋಲ್ ಪ್ಲಾಜಾಗಳನ್ನು (Toll Plaza) ನೋಡುತ್ತವೆ. ಅಲ್ಲಿ ಟೋಲ್ (Toll) ಪಾವತಿಗಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಆಗುವುದುಂಟು. ಆದರೆ ಭವಿಷ್ಯದಲ್ಲಿ ಈ ಟೋಲ್ ಪ್ಲಾಜಾಗಳಿಂದ ಕಿರಿಕಿರಿ ಆಗುವುದೇ ಇಲ್ಲ.

    ಈ ಕುರಿತು ಮಾತನಾಡಿರುವ ಕೇಂದ್ರ ನಿತಿನ್ ಗಡ್ಕರಿ (Nitin Gadkari), ಶೀಘ್ರದಲ್ಲೇ ಸ್ವಯಂಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸುವ ವ್ಯವಸ್ಥೆ ಅಳವಡಿಸಲಾಗುವುದು. ಸ್ವಯಂ ಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಈಗಾಗಲೇ ಪ್ರಾಯೋಗಿಕ ಯೋಜನೆಗಳನ್ನು ನಡೆಸುತ್ತಿದೆ. ಇದು ವಾಹನ ಮಾಲೀಕರ ಬ್ಯಾಂಕ್ ಖಾತೆಗಳಿಂದ (Bank Account) ಶುಲ್ಕವನ್ನು ಖಡಿತಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ಆರಗ ಜ್ಞಾನೇಂದ್ರ

    ಫಾಸ್ಟ್ಯಾಗ್‌ಗಳನ್ನು (FASTags) ಪರಿಚಯಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(NHAI) ಟೋಲ್ ಆದಾಯವು ವರ್ಷಕ್ಕೆ 15 ಸಾವಿರ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಅದಕ್ಕಾಗಿ ಈಗ ಆಟೋ ಮೊಬೈಲ್ ನಂಬರ್‌ಪ್ಲೇಟ್(ಸ್ವಯಂಚಾಲಿನ ನಂಬರ್‌ಪ್ಲೇಟ್ ರೀಡರ್ ಕ್ಯಾಮೆರಾ) (Automatic Number Plate Reader Cameras) ತ್ರಜ್ಞಾನವನ್ನು ಪರಿಚಯಿಸಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೇಜಾವರ ಶ್ರೀಗಳ ಎದೆ ಮೇಲೆ ಕಾಲಿಟ್ಟು ಸೊಪ್ಪು ತಿಂದ ಆಡು

    2018-19ರಲ್ಲಿ ಟೋಲ್ ಪ್ಲಾಜಾಗಳಲ್ಲಿ (Toll Plaza) ವಾಹನಗಳು ಕಾಯುತ್ತಿದ್ದ ಸಮಯ ಸರಿಸುಮಾರು 8 ನಿಮಿಷಗಳಿತ್ತು. 2020 ರಿಂದ 2022ರ ಅವಧಿಯಲ್ಲಿ ಫಾಸ್ಟ್ಯಾಗ್‌ಗಳನ್ನು ಪರಿಚಯಿಸಿದ ನಂತರ ವಾಹನಗಳ ಸರಾಸರಿ ಸಮಯವು 47 ಸೆಕೆಂಡುಗಳಿಗೆ ಇಳಿಕೆಯಾಯಿತು. ಹೀಗಿದ್ದೂ ಕೆಲವು ನಗರಗಳಲ್ಲಿ ಸಂದಿಗ್ಧ ಸಮಯಗಳಲ್ಲಿ ಹೆಚ್ಚಿನ ವಿಳಂಬವಾಗುತ್ತಿವೆ. ಅದಕ್ಕಾಗಿ ಸಂಪೂರ್ಣ ಬದಲಿ ವ್ಯವಸ್ಥೆ ಕಲ್ಪಿಸಲು ಸ್ವಯಂಚಾಲಿನ ಟೋಲ್ ಸಂಗ್ರಹಿಸುವ ವಿಧಾನವನ್ನು ಪರಿಚಯಿಸಲಾಗುತ್ತಿದೆ ಎಂದಿದ್ದಾರೆ.

    ಸರ್ಕಾರ ಒಟ್ಟು ಎರಡು ರೀತಿಯ ಆಯ್ಕೆಗಳನ್ನು ಎದುರುನೋಡುತ್ತಿದೆ. ಮೊದಲಿಗೆ ಟೋಲ್ ಅನ್ನು ನೇರವಾಗಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸುವುದು, 2ನೇ ಅಯ್ಕೆಯಾಗಿ ಕಾರಿನಲ್ಲಿ ಜಿಪಿಎಸ್ ಅಳವಡಿಸಿ ಉಪಗ್ರಹ ಆಧಾರಿತವಾಗಿ ಟೋಲ್ ಸಂಗ್ರಹ ಮಾಡುವ ವಿಧಾನವನ್ನು ಎದುರು ನೋಡುತ್ತಿದೆ. ಉಪಗ್ರಹ ವಿಧಾನ ಅನುಸರಿಸಿದರೆ ಫಾಸ್ಟ್ಯಾಗ್‌ ಬದಲಾಗಿ ಜಿಪಿಎಸ್ ಅಳವಡಿಸಬೇಕಾಗುತ್ತದೆ. ಯಾವ ಆಯ್ಕೆಯನ್ನು ಈಗಲೇ ಅಂತಿಮಗೊಳಿಸಿಲ್ಲ. ಆದರೆ ಟೋಲ್ ಪ್ಲಾಜಾಗಳಿಂದ ಮುಕ್ತಿ ನೀಡುವುದು ಖಚಿತ. ಸ್ವಯಂ ಚಾಲಿತ ಟೋಲ್ ಸಂಗ್ರಹಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ

    ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ

    ಬೆಂಗಳೂರು: ನಗರದಿಂದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದೆ. ಇಂದು ಸಂಜೆ 6 ಗಂಟೆಯಿಂದ ಲಘುವಾಹನಗಳ ಸಂಚಾರಕ್ಕೆ ಫ್ಲೈಓವರ್ ಮುಕ್ತಾವಾಗಲಿದೆ.

    ತಿಂಗಳ ಹಿಂದೆ ಕಾಮಗಾರಿಗಾಗಿ ಬಂದ್ ಮಾಡಲಾಗಿದ್ದ ಪೀಣ್ಯ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಕಾರು, ಬೈಕ್, ಆಟೋ ಸೇರಿದಂತೆ ಲೈಟ್ ವೇಟ್ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮತಿ ನೀಡಿದೆ. ಇದನ್ನೂ ಓದಿ: ಪೀಣ್ಯ ಫ್ಲೈಓವರ್‌ ಧ್ವಂಸವಾಗುತ್ತಾ?- ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದ ಸಿಎಂ

    ಇಂದು ಸಂಜೆಯಿಂದ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಂಚಾರ ವಿಭಾಗದ ಡಿಸಿಪಿಗೆ ಪತ್ರದ ಮೂಲಕ ತಿಳಿಸಿದೆ. ಫ್ಲೈಓವರ್ ಕಾಮಗಾರಿ ಕುಂಟುತ್ತ ಸಾಗುತ್ತಿದ್ದರಿಂದಾಗಿ ಹಲವು ಸಮಸ್ಯೆಗಳು ಎದುರಾಗಿದ್ದವು. ಇದೀಗ ಕಾಮಗಾರಿ ಬಳಿಕ ರಸ್ತೆಗೆ ಹೆಚ್ಚಿನ ದೀಪಗಳ ಅಳವಡಿಕೆ, ತುರ್ತು ಸಂದರ್ಭದಲ್ಲಿ ಅಗತ್ಯ ವಾಹನ ವ್ಯವಸ್ಥೆ ಸೇರಿದಂತೆ ಕೆಲವು ಅಗತ್ಯ ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರಕ್ಕೆ ಪೊಲೀಸರಿಂದ ಮನವಿ ಸಲ್ಲಿಸಲಾಗಿದೆ.

    ಮಂಗಳವಾರ ಸಿಎಂ ಹೇಳಿದ್ದು ಏನು?
    ಎನ್‌ಎಚ್‌ಎಐ ಲೋಡ್‌ ಟೆಸ್ಟ್‌ನಲ್ಲಿ ಫ್ಲೈಓವರ್‌ ಸುರಕ್ಷಿತ ಅಲ್ಲ ಎನ್ನುವುದು ದೃಢಪಟ್ಟಿದೆ. ವಾಹನ ಸಂಚಾರಕ್ಕೆ ಅನುಮತಿ ನೀಡಿದರೆ ಫ್ಲೈಓವರ್‌ ಬಾಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹೊಸ ಫ್ಲೈಓವರ್‌ಗಾಗಿ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಅವರಿಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ಕೆಂಪುಕೋಟೆ ಮೇಲೆ ಸಿಖ್‌ ಬಾವುಟ ಹಾರಿಸಿದ್ದ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

    ಎರಡು ಪಿಲ್ಲರ್‌ಗಳನ್ನು ಸಂಪರ್ಕಿಸುವ ಕೇಬಲ್‌ನಲ್ಲಿ ಕಂಡುಬಂದಿರುವ ದೋಷ ಸರಿಪಡಿಸಿದರೂ, ಇದು ವಾಹನ ಸಂಚಾರಕ್ಕೆ ಸುರಕ್ಷಿತವಲ್ಲವೆಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ತಜ್ಞರು ವರದಿ ನೀಡಿದ್ದಾರೆ. ಈ ಮಧ್ಯೆ ಲಘು ಲಘು ವಾಹನ ಬಿಡಲು ಹೇಳಿದ್ದೇವೆ. ಒಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಮನವಿ ಮಾಡಲಾಗಿದೆ.

    ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಅನಾಹುತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಹೊರುತ್ತಾರೆ? ಹೊಸ ಫ್ಲೈ ಓವರ್‌ ನಿರ್ಮಾಣ ಮಾಡಬೇಕಿದೆ ಎಂದು ಎಂಜಿನಿಯರ್‌ ಹೇಳಿದ್ದಾರೆ. ಈ ಫ್ಲೈ ಓವರ್‌ ಯಾರ ಕಾಲದಲ್ಲಿ ಆಗಿದೆ? ಯಾರು ನಿರ್ಮಾಣ ಮಾಡಿದ್ದು ಎಂಬುದನ್ನು ನೋಡಬೇಕಿದೆ. ಕಳಪೆ ಕಾಮಗಾರಿಯಿಂದ ಈ ಸಮಸ್ಯೆ ನಿರ್ಮಾಣವಾಗಿದೆ ಎಂದು ಸಿಎಂ ಸದನಕ್ಕೆ ಮಾಹಿತಿ ನೀಡಿದರು.

     

  • ಪೀಣ್ಯ ಫ್ಲೈಓವರ್‌ ಧ್ವಂಸವಾಗುತ್ತಾ?- ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದ ಸಿಎಂ

    ಪೀಣ್ಯ ಫ್ಲೈಓವರ್‌ ಧ್ವಂಸವಾಗುತ್ತಾ?- ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದ ಸಿಎಂ

    ಬೆಂಗಳೂರು: ರಾಜಧಾನಿಯಿಂದ ರಾಜ್ಯ ಮತ್ತು ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆಯನ್ನು ಧ್ವಂಸಗೊಳಿಸಲಾಗುತ್ತಾ ಎಂಬ ಗಂಭೀರ ಪ್ರಶ್ನೆ ಈಗ ಎದ್ದಿದೆ.

    ವಿಧಾನ ಸಭೆಯಲ್ಲಿ ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಉತ್ತರದಿಂದ ಈ ಪ್ರಶ್ನೆ ಎದ್ದಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟವಾದ ನಿರ್ಧಾರ ಪ್ರಕಟವಾಗಲಿದೆ.

    ಒಂದು ವೇಳೆ ಧ್ವಂಸಗೊಳಿಸುವ ನಿರ್ಧಾರ ಪ್ರಕಟವಾದರೆ ರಾಜ್ಯದ ಇತಿಹಾಸದಲ್ಲೇ ಉದ್ಘಾಟನೆಗೊಂಡ 12 ವರ್ಷದಲ್ಲೇ ಕೆಡವಲಾದ ಮೊದಲ ಫ್ಲೈಓವರ್ ಎಂಬ ಕುಖ್ಯಾತಿಗೆ ಪಾತ್ರವಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) 4.5 ಕಿ.ಮೀ ಉದ್ದದ ಫ್ಲೈಓವರ್‌ ಅನ್ನು 775.70 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿತ್ತು.

    ಎನ್‌ಎಚ್‌ಎಐ ನಿರ್ಮಿಸಿದ್ದ ಈ ಮೇಲ್ಸೇತುವೆಯ ಸ್ಥಿತಿ ಹೀಗಾದರೆ ಇತರೆ ಸ್ಥಳೀಯ ಸಂಸ್ಥೆಗಳಿಂದ ನಿರ್ಮಾಣವಾಗಿರುವ ಮೇಲ್ಸೇತುವೆಗಳ ಗುಣಮಟ್ಟ, ಕ್ಷಮತೆಯ ಕತೆ ಏನು ಎಂಬ ಗಂಭೀರ ಪ್ರಶ್ನೆ ಎದ್ದಿದೆ.  ಇದನ್ನೂ ಓದಿ: ರಾಜೀನಾಮೆ ನೀಡಿದ ಬೆಂಗಳೂರು ಶಿಕ್ಷಕಿಗೆ ಬೇರೆ ಕಡೆ ಉದ್ಯೋಗ: ಸುರೇಶ್‌ ಕುಮಾರ್‌ ಭರವಸೆ

    ಜೆಡಿಎಸ್‌ ಶಾಸಕ ಆರ್‌.ಮಂಜುನಾಥ್‌ ಅವರು ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಮೇಲ್ಸೇತುವೆಯ ಬಗ್ಗೆ ಕೇಳಿದ ಪ್ರಶ್ನೆಗೆ ಸಿಎಂ ಬೊಮ್ಮಾಯಿ, ಮೇಲ್ಸೇತುವೆಯು ಭಾರೀ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಹೊಸದಾಗಿ ಮೇಲ್ಸೇತುವೆ ನಿರ್ಮಿಸಿಕೊಡುವಂತೆ ಮನವಿ ಮಾಡಲಾಗಿದೆ. ಸದ್ಯಕ್ಕೆ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ತೀರ್ಮಾನಿಸುತ್ತದೆ ಎಂದು ಉತ್ತರಿಸಿದ್ದಾರೆ.

    ಸಿಎಂ ಹೇಳಿದ್ದು ಏನು?
    ಎನ್‌ಎಚ್‌ಎಐ ಲೋಡ್‌ ಟೆಸ್ಟ್‌ನಲ್ಲಿ ಫ್ಲೈಓವರ್‌ ಸುರಕ್ಷಿತ ಅಲ್ಲ ಎನ್ನುವುದು ದೃಢಪಟ್ಟಿದೆ. ವಾಹನ ಸಂಚಾರಕ್ಕೆ ಅನುಮತಿ ನೀಡಿದರೆ ಫ್ಲೈಓವರ್‌ ಬಾಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹೊಸ ಫ್ಲೈಓವರ್‌ಗಾಗಿ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಅವರಿಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ಕೆಂಪುಕೋಟೆ ಮೇಲೆ ಸಿಖ್‌ ಬಾವುಟ ಹಾರಿಸಿದ್ದ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

    ಎರಡು ಪಿಲ್ಲರ್‌ಗಳನ್ನು ಸಂಪರ್ಕಿಸುವ ಕೇಬಲ್‌ನಲ್ಲಿ ಕಂಡುಬಂದಿರುವ ದೋಷ ಸರಿಪಡಿಸಿದರೂ, ಇದು ವಾಹನ ಸಂಚಾರಕ್ಕೆ ಸುರಕ್ಷಿತವಲ್ಲವೆಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ತಜ್ಞರು ವರದಿ ನೀಡಿದ್ದಾರೆ. ಈ ಮಧ್ಯೆ ಲಘು ಲಘು ವಾಹನ ಬಿಡಲು ಹೇಳಿದ್ದೇವೆ. ಒಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಮನವಿ ಮಾಡಲಾಗಿದೆ.

    ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಅನಾಹುತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಹೊರುತ್ತಾರೆ? ಹೊಸ ಫ್ಲೈ ಓವರ್‌ ನಿರ್ಮಾಣ ಮಾಡಬೇಕಿದೆ ಎಂದು ಎಂಜಿನಿಯರ್‌ ಹೇಳಿದ್ದಾರೆ. ಈ ಫ್ಲೈ ಓವರ್‌ ಯಾರ ಕಾಲದಲ್ಲಿ ಆಗಿದೆ? ಯಾರು ನಿರ್ಮಾಣ ಮಾಡಿದ್ದು ಎಂಬುದನ್ನು ನೋಡಬೇಕಿದೆ. ಕಳಪೆ ಕಾಮಗಾರಿಯಿಂದ ಈ ಸಮಸ್ಯೆ ನಿರ್ಮಾಣವಾಗಿದೆ ಎಂದು ಸಿಎಂ ಸದನಕ್ಕೆ ಮಾಹಿತಿ ನೀಡಿದರು.