Tag: NHM

  • ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

    ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

    ಬೆಂಗಳೂರು: ಪ್ರತಿಭಟನಾ ನಿರತ ಎನ್‍ಹೆಚ್‍ಎಮ್ (NHM) ಒಳಗುತ್ತಿಗೆ ನೌಕರರಿಗೆ ಆರೋಗ್ಯ ಇಲಾಖೆ (Department of Health and Family Welfare Services) ಎಸ್ಮಾ (ESMA) ಜಾರಿಗೊಳಿಸಿದೆ. ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲವೇ ಇಲಾಖೆ ನೌಕರರು ಕಾನೂನಾತ್ಮಕ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.

    ಆರೋಗ್ಯ ಇಲಾಖೆ ಸಿಬ್ಬಂದಿ ಒಂದು ತಿಂಗಳನಿಂದ ಪ್ರತಿಭಟನೆ ಮುಂದುವರೆಸಿರುವುದು ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿದೆ. ಮಾರ್ಚ್ 16 ರಂದು ನೀಡಿದ ಎಚ್ಚರಿಕೆಯನ್ನು ಮೀರಿ ಮೀರಿ ಪ್ರತಿಭಟನೆಯನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಎಸ್ಮಾ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

    ಮಣಿಪುರ ರಾಜ್ಯವನ್ನು ಹೊರತುಪಡಿಸಿ, ಒಡಿಸ್ಸಾ, ಪಂಜಾಬ್, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ರಾಜಸ್ಥಾನ ಇತರೆ ರಾಜ್ಯಗಳಲ್ಲಿ ಎನ್‍ಹೆಚ್‍ಎಂ ಒಳಗುತ್ತಿಗೆ ನೌಕರರನ್ನ ಖಾಯಂಗೊಳಿಸಲಾಗಿದೆ. ಹೀಗಾಗಿ ಕರ್ನಾಟಕದಲ್ಲೂ (Karnataka) ನಮ್ಮನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮವು 2005 ರಿಂದ ಜಾರಿಯಲ್ಲಿದ್ದು ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರವಾಗಿದೆ. ಇದು ಮಿಷನ್ ಮೋಡ್ ಪ್ರಾಜೆಕ್ಟ್ ಆಗಿರುವುದರಿಂದ ನಿಗದಿಪಡಿಸಿದ ಉದ್ದೇಶ ಹಾಗೂ ಗುರಿಗಳು ಸಫಲವಾದ ನಂತರ ಕಾರ್ಯಕ್ರಮ ಮುಕ್ತಾಯಗೊಳ್ಳುವುದರ ಬಗ್ಗೆ ಕೇಂದ್ರ ಸರ್ಕಾರವು ತಿರ್ಮಾನಿಸುತ್ತದೆ.

    ಈ ಯೋಜನೆಯಲ್ಲಿ ಸುಮಾರು 53 ಕಾರ್ಯಕ್ರಮಗಳು ರಾಜ್ಯದಲ್ಲಿ ವಿವಿಧ ಹಂತದಲ್ಲಿ ಜಾರಿಯಲ್ಲಿರುತ್ತವೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಒಳಗುತ್ತಿಗೆ ಆಧಾರದ ಮೇಲೆ 26,943 ಮತ್ತು 3,631 ಹೊರಗುತ್ತಿಗೆ ಒಟ್ಟು 30,574 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೌಕರರ ಪ್ರಮುಖ ಬೇಡಿಕೆಯಂದ ಸಂಬಳವನ್ನು ಏರಿಸಲಾಗಿದ್ದು, ಮಾರ್ಚ್ 4 ರಂದು ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಳಿದ ಬೇಡಿಕೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಆಶ್ವಾಸನೆ ನೀಡಿದ್ದಾರೆ.

    ಏನಿದು ಎಸ್ಮಾ?
    ಎಸ್ಮಾ ಎಂದರೆ (Essential Services Maintenance Act), ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ. ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968 ರಿಂದ ಜಾಲ್ತಿಯಲ್ಲಿದ್ದು, ಕರ್ನಾಟಕದಲ್ಲಿ ಎಸ್ಮಾ ಕುರಿತು 1994ರಲ್ಲಿ ಕಾನೂನಿನ ಮೊದಲ ರೂಪುರೇಷೆ ತಯಾರಾಯಿತು. 2013ರ ಜೂನ್ ನಿಂದ ರಾಜ್ಯದಲ್ಲಿ ಕಾನೂನಾಗಿ ಮಾರ್ಪಾಡಾಯಿತು. ನಂತರ 2015 ರಲ್ಲಿ ಸರ್ಕಾರ ಕೆಲ ತಿದ್ದುಪಡಿ ಮಾಡಿದೆ.

    ಪರಿಣಾಮ ಏನು?
    ಎಸ್ಮಾ ಎಂದರೆ ಕಡ್ಡಾಯ ಕೆಲಸ. ಸಂವಿಧಾನದಲ್ಲಿ ತಿಳಿಸಿರುವಂತೆ, 7ರಲ್ಲಿನ 2ನೇ ಪಟ್ಟಿಯಲ್ಲಿರುವ ಸಾರ್ವಜನಿಕ ಸುವ್ಯವಸ್ಥೆ ಮತ್ತು ಪೊಲೀಸ್ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ ಆರು ತಿಂಗಳು ಜೈಲು ವಾಸ ಶಿಕ್ಷೆಯನ್ನು ನೀಡುವ ಸಾಧ್ಯತೆಯೂ ಇರುತ್ತದೆ ಎಂಬ ಉಲ್ಲೇಖವಿದೆ. ಎಸ್ಮಾ ಜಾರಿಯಲ್ಲಿದ್ದ ಮೇಲೆ ಅದನ್ನು ಧಿಕ್ಕರಿಸಿ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಈ ಕಾರಣಕ್ಕೆ ರಾಜ್ಯ ಸರ್ಕಾರಗಳು ಉದ್ಯೋಗಿಗಳು ಹಠ ಮುಂದುವರಿಸಿದರೆ ಕೊನೆಯ ಅಸ್ತ್ರವಾಗಿ ಎಸ್ಮಾ ಜಾರಿಗೊಳಿಸುತ್ತದೆ. ಇದನ್ನೂ ಓದಿ: ಈಕ್ವೆಡಾರ್‌ನಲ್ಲಿ 6.8 ತೀವ್ರತೆಯ ಭಾರೀ ಭೂಕಂಪ – 14 ಜನ ಬಲಿ

  • 48 ಗಂಟೆಯ ಒಳಗಡೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಕಾನೂನು ಕ್ರಮ: NHM ಸಿಬ್ಬಂದಿಗೆ ಡೆಡ್‌ಲೈನ್‌

    48 ಗಂಟೆಯ ಒಳಗಡೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಕಾನೂನು ಕ್ರಮ: NHM ಸಿಬ್ಬಂದಿಗೆ ಡೆಡ್‌ಲೈನ್‌

    ಬೆಂಗಳೂರು: ಮುಷ್ಕರ ನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಸಿಬ್ಬಂದಿಗೆ ಸರ್ಕಾರ ಡೆಡ್‌ಲೈನ್‌ (Deadline) ನೀಡಿದ್ದು 48 ಗಂಟೆಗಳ‌ ಒಳಗೆ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ ಇಲಾಖೆ (Health Ministry) ಖಡಕ್‌ ಸೂಚನೆ ನೀಡಿದೆ.

    ಎನ್‌ಎಚ್‌ಎಂ ನಿರ್ದೇಶಕರು ನೋಟಿಸ್‌ ಕಳುಹಿಸಿದ್ದು, 48 ಗಂಟೆಯ ಒಳಗಡೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ಹಾಜರಾಗದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

    ಆರೋಗ್ಯ ಇಲಾಖೆ ತುರ್ತುಸೇವೆ ನೀಡುವ ಇಲಾಖೆಯಾಗಿದ್ದು ಮುಷ್ಕರದಿಂದ ರೋಗಿಗಳಿಗೆ ತೊಂದರೆ ಆಗುತ್ತಿದೆ. ಈ ಹಿನ್ನಲೆ ಎನ್‌ಹೆಚ್‌ಎಂ ಸಿಬ್ಬಂದಿಗೆ ನೋಟಿಸ್‌ ಜಾರಿಯಾಗಿದೆ. ಇದನ್ನೂ ಓದಿ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

    ಕಳೆದ ಒಂದು ತಿಂಗಳಿನಿಂದ ಕರ್ತವ್ಯಕ್ಕೆ ಹಾಜರಾಗದೇ ವೇತನ ಹೆಚ್ಚಳ ಮತ್ತು ಹುದ್ದೆ ಖಾಯಂಗೊಳಿಸುವಂತೆ ಆಗ್ರಹಿಸಿ ಎನ್‌ಹೆಚ್‌ಎಂ ಸಿಬ್ಬಂದಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ನೋಟಿಸ್‌ನಲ್ಲಿ ಏನಿದೆ?
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮವು 2005 ರಿಂದ ಜಾರಿಯಲ್ಲಿದ್ದು ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರವಾಗಿದೆ. ಇದು ಮಿಷನ್‌ ಮೋಡ್‌ ಪ್ರಾಜೆಕ್ಟ್‌ ಆಗಿರುವುದರಿಂದ ನಿಗದಿಪಡಿಸಿದ ಉದ್ದೇಶ ಹಾಗೂ ಗುರಿಗಳು ಸಫಲವಾದ ನಂತರ ಕಾರ್ಯಕ್ರಮ ಮುಕ್ತಾಯಗೊಳ್ಳುವುದರ ಬಗ್ಗೆ ಕೇಂದ್ರ ಸರ್ಕಾರವು ತಿರ್ಮಾನಿಸುತ್ತದೆ.

    ಈ ಯೋಜನೆಯಲ್ಲಿ ಸುಮಾರು 53 ಕಾರ್ಯಕ್ರಮಗಳು ರಾಜ್ಯದಲ್ಲಿ ವಿವಿಧ ಹಂತದಲ್ಲಿ ಜಾರಿಯಲ್ಲಿರುತ್ತವೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಒಳಗುತ್ತಿಗೆ ಆಧಾರದ ಮೇಲೆ 26,943 ಮತ್ತು 3,631 ಹೊರಗುತ್ತಿಗೆ ಒಟ್ಟು 30,574 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೌಕರರ ಪ್ರಮುಖ ಬೇಡಿಕೆಯಂದ ಸಂಬಳವನ್ನು ಏರಿಸಲಾಗಿದ್ದು, ಮಾರ್ಚ್‌ 4 ರಂದು ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಳಿದ ಬೇಡಿಕೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಆಶ್ವಾಸನೆ ನೀಡಿದ್ದಾರೆ.

  • ನಮ್ಮ ಅನ್ನದ ಪಾಲು ನಮ್ಗೆ ಕೊಡಿ, ಶೋಕಾಸ್ ನೋಟಿಸ್‍ಗೆ ಬಗ್ಗಲ್ಲ – ಎನ್‍ಎಚ್‍ಎಂ ಸಿಬ್ಬಂದಿ ಆಕ್ರೋಶ

    ನಮ್ಮ ಅನ್ನದ ಪಾಲು ನಮ್ಗೆ ಕೊಡಿ, ಶೋಕಾಸ್ ನೋಟಿಸ್‍ಗೆ ಬಗ್ಗಲ್ಲ – ಎನ್‍ಎಚ್‍ಎಂ ಸಿಬ್ಬಂದಿ ಆಕ್ರೋಶ

    ಉಡುಪಿ: ಕೊರೊನಾ ಸಾಂಕ್ರಾಮಿಕ ರೋಗದ ನಡುವೆಯೇ ರಾಜ್ಯಾದ್ಯಂತ 30 ಸಾವಿರ ಮಂದಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಂ) ಸಿಬ್ಬಂದಿ ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಗಮನವನ್ನೇ ಕೊಡದೆ ಅಸಡ್ಡೆ ಮೆರೆಯುತ್ತಿದೆ.

    ಉಡುಪಿ ಜಿಲ್ಲೆಯಲ್ಲಿ 512 ಜನ ಎನ್‍ಎಚ್‍ಎಂ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ವರ್ಷದಿಂದ ಮುಷ್ಕರ, ಹೋರಾಟ, ಅಸಹಕಾರ ಚಳುವಳಿ ಮಾಡುತ್ತಿದ್ದೇವೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಷನಲ್ ಹೆಲ್ತ್ ಮಿಷನ್ ಜಿಲ್ಲಾಧ್ಯಕ್ಷ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಗಲಿರುಳು ಕೊರೊನಾ ವಾರಿಯರ್ಸ್ ಗಳಾಗಿ ನಾವು ದುಡಿಯುತ್ತಿದ್ದೇವೆ. ಹೊರ ಗುತ್ತಿಗೆ ನೌಕರರಿಗೆ ಅತೀ ಹೆಚ್ಚು ಪಾಸಿಟಿವ್ ಬಂದಿದೆ. ಕಾಲ್ ಸೆಂಟರ್, ಗಡಿ ಪ್ರದೇಶದಲ್ಲಿ ಹಗಲಿರುಳು ಕೆಲಸ ಮಾಡಿದರೂ ನಮ್ಮನ್ನು ಗುರುತಿಸುವವರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೂನ್ ತಿಂಗಳಲ್ಲಿ ರಾಜ್ಯ ಸಂಘ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೆವು. ಗೌರವಾಧ್ಯಕ್ಷ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಮಾತುಕತೆ ಆಗಿತ್ತು. ಸರ್ಕಾರ ಸಮಯ ಕೇಳಿದ್ದಕ್ಕೆ ಪ್ರತಿಭಟನೆ ಹಿಂದಕ್ಕೆ ತೆಗದುಕೊಂಡಿದ್ದೆವು ಎಂದರು.

    ರಾಜ್ಯದ 30,000 ಎನ್‍ಎಚ್‍ಎಂ ಸಿಬ್ಬಂದಿ ಸೆಪ್ಟೆಂಬರ್ 24 ರಿಂದ ಮನೆಯಲ್ಲಿ ಇದ್ದಾರೆ. ಸರ್ಕಾರ ಶೋಕಾಸ್ ನೋಟಿಸ್ ಕೊಟ್ಟಿದೆ. ನಾವು ಇಂತಹ ನೋಟಿಸ್ ಗಳಿಗೆ ಬಗ್ಗುವುದಿಲ್ಲ. ನಮ್ಮ ಅನ್ನದ ಪಾಲು ನಮಗೆ ಕೊಡಿ ಎಂಬ ಹೆಸರಲ್ಲಿ ಅಭಿಯಾನ ನಡೆಯುತ್ತಿದೆ.

    ಸಮಾನ ಸಂಭಾವನೆ, ಕನಿಷ್ಠ ವೇತನ, ಬೋನಸ್ ಕಾಯ್ದೆ ಯಾವುದನ್ನೂ ಸರ್ಕಾರ ಪಾಲಿಸುತ್ತಿಲ್ಲ. ಬೀದಿಗಿಳಿಯದೆ ಮನೆಯಲ್ಲೇ ಕುಳಿತು ಅಸಹಕಾರ ಚಳುವಳಿ ಮಾಡುತ್ತಿದ್ದೇವೆ. ಶಿಕ್ಷಣ ಆರೋಗ್ಯ ಬಹಳಷ್ಟು ಮುಖ್ಯ. ನಮ್ಮ ಬೇಡಿಕೆ ನ್ಯಾಯಯುತ ಸಂವಿಧಾನ ಬದ್ಧವಾಗಿದೆ. ಹೋರಾಟ ಉಗ್ರ ರೂಪಕ್ಕೆ ಬದಲಾಗುವ ಬದಲು ಬೇಡಿಕೆ ಈಡೇರಿಸಿ ಎಂದು ಸಂಘಟನೆ ಮುಖಂಡ ಗಿರೀಶ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಗುರುರಾಜ್, ರೂಪಕ್ ನಾಗರಾಜ್, ಗಿರೀಶ್, ರೇಷ್ಮಾ ಪೈ ಇದ್ದರು.

  • ರಜೆ, ಸಂಬಳ, ಹಾಜರಿ ಯಾವುದೂ ಬೇಡ – ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ 450 ಎನ್‍ಹೆಚ್‍ಎಂ ಸಿಬ್ಬಂದಿ

    ರಜೆ, ಸಂಬಳ, ಹಾಜರಿ ಯಾವುದೂ ಬೇಡ – ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ 450 ಎನ್‍ಹೆಚ್‍ಎಂ ಸಿಬ್ಬಂದಿ

    ಉಡುಪಿ: ನ್ಯಾಶನಲ್ ಹೆಲ್ತ್ ಮಷೀನ್ (ಎನ್‍ಎಚ್‍ಎಂ)ನ 24,000 ಸಿಬ್ಬಂದಿ ರಾಜ್ಯದಲ್ಲಿ ಇಂದು ಗಾಂಧಿಗಿರಿ ಮಾಡಿದ್ದಾರೆ. ರಜೆ ತೆಗೆದುಕೊಳ್ಳದೆ ಹಾಜರಿ ಹಾಕದೆ ಸಂಬಳ ತೆಗೆದುಕೊಳ್ಳದೆ ಸೇವೆ ಮಾಡುತ್ತಿದ್ದಾರೆ.

    ಆರೋಗ್ಯ ಇಲಾಖೆಯ ಎನ್‍ಹೆಚ್‍ಎಂನ ಗುತ್ತಿಗೆ ಆಧಾರದ ಸಿಬ್ಬಂದಿಗೆ ಏಪ್ರಿಲ್ 1 ರಂದು ರಜೆ ಕೊಟ್ಟು ತಮ್ಮ ಹುದ್ದೆಯನ್ನು ರಿನಿವಲ್ ಮಾಡುವ ಉದ್ದೇಶವನ್ನು ಎನ್‍ಎಚ್‍ಎಂ ಹೊಂದಿತ್ತು. ಆದರೆ ರಾಜ್ಯದ 25 ಸಾವಿರ, ಉಡುಪಿ ಜಿಲ್ಲೆಯ 450 ಆರೋಗ್ಯ ಇಲಾಖೆಯ ಸಿಬ್ಬಂದಿ ವ್ಯವಸ್ಥೆಗೆ ಸೆಡ್ಡು ಹೊಡೆದಿದ್ದಾರೆ. ಇವತ್ತು ರಜೆ ತೆಗೆದುಕೊಳ್ಳದೆ ದಿನಪೂರ್ತಿ ಉಚಿತ ಸೇವೆ ಮಾಡುತ್ತಿದ್ದಾರೆ. ತಮ್ಮ ಹಲವಾರು ವರ್ಷದ ಬೇಡಿಕೆ ಈ ವರ್ಷವೂ ಈಡೇರಿಸಿಲ್ಲ ಎಂದು ಸರ್ಕಾರ ಮತ್ತು ಯೋಜನೆಯ ನಿರ್ದೇಶಕರ ವಿರುದ್ಧ ಕಪ್ಪು ಪಟ್ಟಿ ಧರಿಸಿ ಉಚಿತ ಸೇವೆ ಮಾಡುತ್ತಿದ್ದಾರೆ.

    ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿ ಪ್ರತಿವರ್ಷ ಕಾಂಟ್ರ್ಯಾಕ್ಟ್ ಲೆಕ್ಕದಲ್ಲಿ ರಿನಿವಲ್ ಆಗುತ್ತಾ ಬರುತ್ತಾರೆ. ರಾಜ್ಯದಲ್ಲಿ ಸದ್ಯ ಮಹಾಮಾರಿ ಕೊರೊನಾದ ವಿಷಮ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲೂ ಕಾನೂನು ನಿಯಮ ಎಂದು ರಜೆ ನೀಡಲು ಎನ್‍ಎಚ್‍ಎಂ ನಿರ್ಧಾರ ತೆಗೆದುಕೊಂಡಿತ್ತು. ಇದರ ವಿರುದ್ಧ ಸಾಕಷ್ಟು ಆಕ್ರೋಶ ಸಾರ್ವಜನಿಕ ವಲಯದಿಂದ ಕೇಳಿಬಂದಿತ್ತು. ಇಷ್ಟಾದರೂ ಇಲಾಖೆಯ ಅಧಿಕಾರಿಗಳು, ಸರ್ಕಾರ ತಮ್ಮ ಪಟ್ಟು ಸಡಿಲಿಸಿಲ್ಲ. ಇದೇ ಕಾರಣದಿಂದ ಉಡುಪಿ ಜಿಲ್ಲೆಯ ಸಿಬ್ಬಂದಿ ಗಾಂಧಿಗಿರಿ ಮಾಡಿದ್ದಾರೆ. ಸಂಬಳ ತೆಗೆದುಕೊಳ್ಳದೇ ರಜೆ ಮಾಡದೆ, ಹಾಜರಾತಿ ನಮೂದಿಸಿದೆ ಜಿಲ್ಲೆಯಾದ್ಯಂತ ಕೆಲಸ ಮಾಡುತ್ತಿದ್ದಾರೆ.

    ಆಶಾ ಕಾರ್ಯಕರ್ತೆಯರು ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಚೆಕ್ ಪೋಸ್ಟ್ ಹೀಗೆ ಎಲ್ಲ ಸ್ಥರದಲ್ಲಿ ಎನ್‍ಎಚ್‍ಎಂ ಸಿಬ್ಬಂದಿ ಉಚಿತ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಿಬ್ಬಂದಿಯೊಬ್ಬರು ಮಾತನಾಡಿ, ಕೊರೊನಾ ಪ್ರಕರಣಗಳೆಲ್ಲ ಹತೋಟಿಗೆ ಬಂದ ಮೇಲೆಯಾದರೂ ನಮ್ಮ ಬೇಡಿಕೆ ಈಡೇರಿಸಿ ಎಂದು ಮನವಿ ಮಾಡಿದ್ದಾರೆ.

  • ಬಗೆಹರಿಯದ ಎನ್‍ಹೆಚ್‍ಎಂ ಗೊಂದಲ- ಇದು ಚರ್ಚೆಯ ಸಮಯವಲ್ಲ ಎಂದ ಸಚಿವ ಕೋಟ

    ಬಗೆಹರಿಯದ ಎನ್‍ಹೆಚ್‍ಎಂ ಗೊಂದಲ- ಇದು ಚರ್ಚೆಯ ಸಮಯವಲ್ಲ ಎಂದ ಸಚಿವ ಕೋಟ

    ಉಡುಪಿ: ಆರೋಗ್ಯ ಇಲಾಖೆಯ ಎನ್‍ಎಚ್‍ಎಂ ಕಾಂಟ್ರ್ಯಾಕ್ಟ್ ಸಿಬ್ಬಂದಿಯ ರಿನಿವಲ್ ಮಾಡುವ ಉದ್ದೇಶದಿಂದ ಏಪ್ರಿಲ್ 1ಕ್ಕೆ 24,000 ವೈದ್ಯಕೀಯ ಸಿಬ್ಬಂದಿಗೆ ರಜೆ ಕೊಡಲಾಗುತ್ತಿದೆ. ಕೊರೊನಾ ಹಾವಳಿ ಇರುವ ಸಂದರ್ಭದಲ್ಲಿ ಕಾನೂನು ಪಾಲನೆ ಎಷ್ಟು ಸರಿ ಎಂಬುದು ಚರ್ಚೆಯಾಗುತ್ತಿದೆ.

    ಈ ನಡುವೆ ಇದು ನಿಯಮ ಕಾಯ್ದೆ ನೋಡುವ ಕಾಲ ಅಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಚರ್ಚೆ ನಡೆಸುವುದಾಗಿ ಮೀನುಗಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಕೊರೊನಾ ಎಮರ್ಜೆನ್ಸಿ ಇದೆ. ಒಂದು ದಿನ ರಜೆ ಕೊಡದಿದ್ದರೆ ಬೇರೆ ದಾರಿ ಇಲ್ಲ. ಎಪ್ರಿಲ್ 1ಕ್ಕೆ ಕೆಲಸಕ್ಕೆ ಬರುತ್ತೇವೆ ಸಂಬಳ ಕೊಡಿ ಎಂದು ಸಿಬ್ಬಂದಿ ಕೇಳಿದ್ದಾರೆ. ರಜೆ ಮತ್ತು ಸಂಬಳ ಕೊಡುವ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಇದೆ. ಕೊರೊನಾ ಬಾಧಿಸಿರುವ ಸಂದರ್ಭ ಕಾನೂನು ಕಾಯಿದೆ ನಿಯಮ ನೋಡಿಕೊಂಡು ಇರಲು ಸಾಧ್ಯವಿಲ್ಲ. ಇದು ವಾದ ಮಾಡುವ ಸಮಯವಲ್ಲ. ರಾಜ್ಯಕ್ಕೆ ಸಮಸ್ಯೆಯಾಗದ ರೀತಿಯಲ್ಲಿ ಗೊಂದಲವನ್ನು ನಿವಾರಿಸಲಾಗುವುದು ಎಂದು ತಿಳಿಸಿದರು.