Tag: NHRC

  • 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ ಆರೋಪ

    27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ ಆರೋಪ

    – ಮುಸ್ಲಿಮೇತರ ಮಕ್ಕಳು ಕುರಾನ್‌ ಅಧ್ಯಯನ ಮಾಡಲು ಒತ್ತಾಯ

    ಭೋಪಾಲ್:‌ ಮಧ್ಯಪ್ರದೇಶದಲ್ಲಿ (Madhya Pradesh) ಮತಾಂತರ (Conversion) ಆರೋಪ ಕೇಳಿಬಂದಿದೆ. 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂಬ ದೂರು ಕೇಳಿಬಂದಿದೆ.

    ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ NHRC ನೋಟಿಸ್ ನೀಡಿದೆ. 15 ದಿನಗಳಲ್ಲಿ ವಿವರವಾದ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ರಾಜ್ಯದ ಹಲವಾರು ಮದರಸಾಗಳು ಮುಸ್ಲಿಮೇತರ ಮಕ್ಕಳನ್ನು ಕುರಾನ್ ಅಧ್ಯಯನ ಮಾಡಲು ಒತ್ತಾಯಿಸುತ್ತಿವೆ. ಇಸ್ಲಾಂ ಧರ್ಮವನ್ನು ಅಳವಡಿಸಿಕೊಳ್ಳಲು ಒತ್ತಡ ಹೇರುತ್ತಿವೆ ಎಂದು ದೂರಲಾಗಿದೆ. ಇದನ್ನೂ ಓದಿ: ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

    ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿದೆ. ಸೆ.26 ರಂದು ಈ ಬಗ್ಗೆ NHRCಗೆ ದೂರು ಬಂದಿತ್ತು.

    ಸರ್ಕಾರದ ಅನುಮೋದನೆಯಿಲ್ಲದೆ ಕಾರ್ಯನಿರ್ವಹಿಸುವ ಮದರಸಾಗಳಲ್ಲಿ ಮುಸ್ಲಿಮೇತರ ಮಕ್ಕಳ ಪ್ರವೇಶದ ಬಗ್ಗೆ NHRC ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಭೋಪಾಲ್, ಹೋಶಂಗಾಬಾದ್, ಜಬಲ್ಪುರ್, ಝಬುವಾ, ಧಾರ್, ಬರ್ವಾನಿ, ಖಾಂಡ್ವಾ, ಖಾರ್ಗೋನ್ ಮತ್ತು ಪರಾಸಿಯಾ ಸೇರಿದಂತೆ ಜಿಲ್ಲೆಗಳನ್ನು ನಿರ್ದಿಷ್ಟವಾಗಿ ಗುರುತಿಸಲಾಗಿದೆ. ಬಾಲ ನ್ಯಾಯ ಕಾಯ್ದೆ, 2015 ಮತ್ತು ಸಂವಿಧಾನದ 28(3) ನೇ ವಿಧಿಯ ಪ್ರಕಾರ, ಅನುಮೋದನೆಯಿಲ್ಲದೆ ಧಾರ್ಮಿಕ ಶಿಕ್ಷಣವನ್ನು ನೀಡುವುದನ್ನು ನಿಷೇಧಿಸಲಾಗಿದೆ ಎಂದು ಆಯೋಗವು ಸ್ಪಷ್ಟಪಡಿಸಿದೆ. ಅಂತಹ ಮಕ್ಕಳನ್ನು ಈ ಸಂಸ್ಥೆಗಳಿಂದ ತಕ್ಷಣ ಬಿಡುಗಡೆಗೊಳಿಸುವಂತೆ ಮತ್ತು ಅನುಮೋದಿಸದ ಮದರಸಾಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಇದನ್ನೂ ಓದಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಸದಸ್ಯರ ಆಯ್ಕೆಗೆ ಕಾಂಗ್ರೆಸ್‌ ಆಕ್ಷೇಪ

    ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಸದಸ್ಯರ ಆಯ್ಕೆಗೆ ಕಾಂಗ್ರೆಸ್‌ ಆಕ್ಷೇಪ

    ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ ಸಂಬಂಧ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರ ಅನುಸರಿಸಿದ ಪ್ರಕ್ರಿಯೆಯು ʻದೋಷಪೂರಿತʼ ಮತ್ತು ʻಪೂರ್ವನಿರ್ಧರಿತʼ ಕಸರತ್ತು. ಪರಸ್ಪರ ಸಮಾಲೋಚನೆ ಮತ್ತು ಒಮ್ಮತವನ್ನು ಕಡೆಗಣಿಸಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.

    ರಾಹುಲ್‌ ಮತ್ತು ಖರ್ಗೆ ಅವರು ಎನ್‌ಎಚ್‌ಆರ್‌ಸಿ ಅಧ್ಯಕ್ಷ ಸ್ಥಾನಕ್ಕೆ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಆದರೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ಮಾನವ ಹಕ್ಕುಗಳ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದೆ. ಎನ್‌ಎಚ್‌ಆರ್‌ಸಿ ಅಧ್ಯಕ್ಷರನ್ನು ನೇಮಿಸುವಾಗ ಪ್ರದೇಶ, ಧರ್ಮ ಮತ್ತು ಜಾತಿಯ ಸಮತೋಲನವನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಭಿನ್ನಾಭಿಪ್ರಾಯ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

    ನಿವೃತ್ತ ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಅವರ ನೇಮಕಕ್ಕೂ ಮುನ್ನ, ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರು ಜೂನ್ 1 ರಂದು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದಾಗಿನಿಂದ NHRC ಅಧ್ಯಕ್ಷರ ಹುದ್ದೆಯು ಖಾಲಿಯಾಗಿತ್ತು. ಮಿಶ್ರಾ ಅವರ ನಂತರ ವಿಜಯ ಭಾರತಿ ಸಯಾನಿ ಅವರು ಮಾನವ ಹಕ್ಕುಗಳ ಸಮಿತಿಯ ಹಂಗಾಮಿ ಅಧ್ಯಕ್ಷರಾದರು.

    ಡಿಸೆಂಬರ್ 18 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯು ಎನ್‌ಎಚ್‌ಆರ್‌ಸಿಯ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಭೆ ನಡೆಸಿತು. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಸಭೆಯಲ್ಲಿ ಭಾಗಿಯಾಗಿ ಹಲವು ಹೆಸರು ಹೆಸರು ಪ್ರಸ್ತಾಪಿಸಿದ್ದರು. ಆದರೆ ವಿರೋಧ ಪಕ್ಷದ ನಾಯಕರು ನೀಡಿದ ಹೆಸರು ಪ್ರಸ್ತಾಪಿಸದ ಸರ್ಕಾರ ನಿವೃತ್ತ ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಹೆಸರು ಅಂತಿಮಗೊಳಿಸಿದೆ.

    ಎನ್‌ಎಚ್‌ಆರ್‌ಸಿ ಸೋಮವಾರ ಟ್ವೀಟ್ ಮಾಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡುತ್ತಾರೆ ಮತ್ತು ಪ್ರಿಯಾಂಕ್ ಕಾನೂಂಗೊ ಮತ್ತು ಡಾ. ಬಿದ್ಯುತ್ ರಂಜನ್ ಸಾರಂಗಿ ಅವರನ್ನು ಸದಸ್ಯರಾಗಿ ನೇಮಕ ಮಾಡಿದ್ದಾರೆ ಎಂದು ತಿಳಿಸಿದೆ.

  • ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

    ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

    ಮುಂಬೈ: ಪುಣೆಯ ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ (CA) ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಕೇಂದ್ರ ಕಾರ್ಮಿ ಮತ್ತು ಉದ್ಯೋಗ ಸಚಿವಾಲಯದಿಂದ ವಿವರವಾದ ಪ್ರತಿಕ್ರಿಯೆ ನೀಡುವಂತೆ ಕೋರಿದೆ.

    ಅರ್ನ್ಸ್ಟ್ & ಯಂಗ್ (EY) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷ ವಯಸ್ಸಿನ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ (Anna Sebastian Perayil) ಕಳೆದ ಜುಲೈ 26ರಂದು ಸಾವನ್ನಪ್ಪಿದ್ದರು. ಸಾವಿನ ಬಳಿಕ ಕೆಲಸದ ಒತ್ತಡದಿಂದ ನಮ್ಮ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗವು ಪ್ರಸ್ತುತ ನಡೆಯುತ್ತಿರುವ ತನಿಖೆಯನ್ನು ಒಳಗೊಂಡಂತೆ ಪ್ರಕರಣದ ಸಮಗ್ರ ವರದಿ ನೀಡುವಂತೆ ಕೋರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಕಾರ್ಮಿಕ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ

    ಮಾನವ ಹಕ್ಕುಗಳ ಆಯೋಗ ಹೇಳುವುದೇನು?
    ಎನ್‌ಎಚ್‌ಆರ್‌ಸಿ ಪ್ರಕಾರ, ಪೆರಾಯಿಲ್ ಅವರ ಸಾವು ಕಳವಳಕಾರಿಯಾಗಿದೆ. ಕಾರ್ಪೋರೇಟ್‌ ಕೆಲಸದ ಸಂಸ್ಕೃತಿಯು ಮಾನಸಿಕ ಮತ್ತು ದೈಹಿಕವಾಗು ಉಂಟು ಮಾಡುವ ಹಾನಿಯ ಬಗ್ಗೆ ಆತಂಕಕಾರಿ ಭಾವನೆ ಮೂಡಿಸುತ್ತದೆ. ಇಂತಹ ಬೆಳವಣಿಗೆಗಳಿಂದ ನಿದ್ರಾಹೀನತೆ ಸೇರಿದಂತೆ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಕಾರ್ಪೋರೇಟ್‌ ಸಂಸ್ಥೆಗಳು ಅಸಾಧ್ಯ ಗುರಿಗಳತ್ತ ನಿರಂತರ ಅನ್ವೇಷಣೆಯೇ ಇದಕ್ಕೆ ಕಾರಣವಾಗಿದ್ದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಗಳಿಗೆ ಕಾರಣವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ತಿಮ್ಮಪ್ಪನ ಕ್ಷಮೆ ಕೋರಿ 11 ದಿನಗಳ ಉಪವಾಸ ಕೈಗೊಂಡ ಪವನ್ ಕಲ್ಯಾಣ್

    ಈ ಘಟನೆ ಬೆನ್ನಲ್ಲೇ ಮಾನವ ಹಕ್ಕುಗಳ ಆಯೋಗವು, ಕಾರ್ಪೋರೇಟ್‌ ಸಂಸ್ಥೆಗಳಲ್ಲಿ ಕಾರ್ಯಸ್ಥಳದ ಸುರಕ್ಷತೆ ಕಾಯ್ದುಕೊಳ್ಳು ವಿಶೇಷ ತಂಡವೊಂದನ್ನ ರಚಿಸಿದೆ. ಇದು ಕಾರ್ಮಿಕ ಶಾಸನಗಳು ಹಾಗೂ ನಿಬಂಧನೆಗಳನ್ನು ಪರಿಶೀಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶಿಫಾರಸು ಮಾಡಲಿದೆ. ಖಾಸಗಿ ವಲಯದ ಉದ್ಯೋಗಿಗಳಿಗೆ ಕೆಲಸ ಸಮಯ, ಸುರಕ್ಷತಾ ಕ್ರಮಗಳ ಕುರಿತು ವಿಶೇಷ ಮಾನದಂಡಗಳನ್ನು ರೂಪಿಸಲು ಶಿಫಾರಸು ಮಾಡಲಿದೆ ಎಂದು ಎನ್‌ಹೆಚ್‌ಆರ್‌ಸಿ ಹೇಳಿದೆ. ಇದನ್ನೂ ಓದಿ: ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

    ಏನಿದು ಘಟನೆ?
    ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. 26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ 4 ತಿಂಗಳಲ್ಲೇ ಸಾವನ್ನಪ್ಪಿದ್ದರು. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಅವಳು ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದರು. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿತ್ತು. ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿ ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

  • ಸಂದೇಶ್‌ಖಾಲಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ – ಸ್ಥಳ ಪರಿಶೀಲನೆಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ

    ಸಂದೇಶ್‌ಖಾಲಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ – ಸ್ಥಳ ಪರಿಶೀಲನೆಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ

    – NHRC ಯಿಂದ ಪ.ಬಂಗಾಳ ಡಿಜಿಪಿಗೆ ನೋಟಿಸ್

    ನವದೆಹಲಿ: ಪಶ್ಚಿಮ ಬಂಗಾಳದ (West Bengal) ಸಂದೇಶ್‌ಖಾಲಿಯಲ್ಲಿ (Sandeshkhali) ತೃಣಮೂಲ ಕಾಂಗ್ರೆಸ್‌ನ ಪ್ರಬಲ ವ್ಯಕ್ತಿಯಿಂದ ಮಹಿಳೆಯರ ಮೇಲಿನ ಶೋಷಣೆಯ ಬಗ್ಗೆ ಆರೋಪಗಳು ಕೇಳಿಬಂದ ಬೆನ್ನಲ್ಲೇ ಪರಿಸ್ಥಿತಿ ಉದ್ವಿಗ್ನ ರೂಪಕ್ಕೆ ತಿರುಗಿದೆ. ಈ ನಡುವೆ ‘ಮಾನವ ಹಕ್ಕುಗಳ ಉಲ್ಲಂಘನೆ’ (Violation Of Human Rights)  ಆರೋಪ ಕೇಳಿಬಂದಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.

    ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಸಂದೇಶ್‌ಖಾಲಿಯಲ್ಲಿ ‘ಮಾನವ ಹಕ್ಕುಗಳ ಉಲ್ಲಂಘನೆ’ ಯಾಗಿದೆ ಎನ್ನಲಾಗಿದೆ. ಆದ್ದರಿಂದ ಪ್ರಕರಣದ ಸುತ್ತಲಿನ ಸತ್ಯಾಸತ್ಯತೆಗಳನ್ನು ಕಂಡುಹಿಡಿಯಲು ‘ಸ್ಥಳೀಯ ವಿಚಾರಣೆ’ ನಡೆಸಲು ಎನ್‌ಹೆಚ್‌ಆರ್‌ಸಿ ವಿಶೇಷ ತಂಡವನ್ನು ಕಳುಹಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಎನ್‌ಎಚ್‌ಆರ್‌ಸಿ ಸದಸ್ಯರ ನೇತೃತ್ವ ಮತ್ತು ಪ್ಯಾನಲ್ ಅಧಿಕಾರಿಗಳ ಬೆಂಬಲದೊಂದಿಗೆ ತಂಡವು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸುತ್ತದೆ. ತನಿಖೆಯ ಪ್ರಾಥಮಿಕ ಆಧಾರವಾಗಿ ಮಾಧ್ಯಮ ವರದಿಗಳನ್ನೂ ಪರಿಗಣಿಸಿದೆ.

    ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮುಗ್ಧ ಮತ್ತು ಬಡ ಮಹಿಳೆಯ ಮೇಲೆ ಸ್ಥಳೀಯ ರಾಜಕೀಯ ಪ್ರಭಾವಿಯ ಗ್ಯಾಂಗ್‌ನಿಂದ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಪತ್ರಿಕೆ ಮತ್ತು ಡಿಜಿಟಲ್ ಮಾಧ್ಯಮ ವರದಿಗಳನ್ನು ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತವಾಗಿ ಸ್ವೀಕರಿಸಿದೆ. ಘೋರ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದ್ದಾರೆ. ಸ್ಥಳೀಯ ಆಡಳಿತವು ಅಪರಾಧ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾನವ ಹಕ್ಕುಗಳ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

    1993ರ ಪಿಹೆಚ್‌ಆರ್ ಕಾಯ್ದೆಯ ಸೆಕ್ಷನ್ 12 (ಎ) ಅಡಿಯಲ್ಲಿ ತನ್ನ ನ್ಯಾಯವ್ಯಾಪ್ತಿಯನ್ನು ಚಲಾಯಿಸುವುದಾಗಿ ಎನ್‌ಹೆಚ್‌ಆರ್‌ಸಿ ಹೇಳಿದೆ. ಈ ನಿಬಂಧನೆಯು ಮಾನವ ಹಕ್ಕುಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಎನ್‌ಹೆಚ್‌ಆರ್‌ಸಿಗೆ ಅಧಿಕಾರ ನೀಡುತ್ತದೆ.

    ಸದ್ಯ ಇನ್ನೂ ನಾಲ್ಕು ವಾರಗಳಲ್ಲಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ನೀಡಲಾಗಿದೆ. ಜೊತೆಗೆ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗಿದೆಯೇ ಅಥವಾ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸುವಂತೆ ಎನ್‌ಹೆಚ್‌ಆರ್‌ಸಿ ಕೇಳಿದೆ.