Tag: NIA raid

  • ಐಸಿಸ್ ಉಗ್ರರ ನಂಟು ಪ್ರಕರಣ – ಬೆಂಗ್ಳೂರು ಸೇರಿದಂತೆ 4 ರಾಜ್ಯಗಳ 19 ಕಡೆ NIA ದಾಳಿ

    ಐಸಿಸ್ ಉಗ್ರರ ನಂಟು ಪ್ರಕರಣ – ಬೆಂಗ್ಳೂರು ಸೇರಿದಂತೆ 4 ರಾಜ್ಯಗಳ 19 ಕಡೆ NIA ದಾಳಿ

    – ರಾಜ್ಯದಲ್ಲಿ ಬೆಂಗಳೂರು, ಬಳ್ಳಾರಿ ಜಿಲ್ಲೆಗಳಲ್ಲಿ ಎನ್‌ಐಎ ಭರ್ಜರಿ ಭೇಟೆ

    ಬೆಂಗಳೂರು: ಐಸಿಸ್‌ ಉಗ್ರರ ಜೊತೆಗಿನ ನಂಟು ಪ್ರಕರಣಕ್ಕೆ (ISIS Network Case) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕದ ಬೆಂಗಳೂರು (Bengaluru) ಸೇರಿದಂತೆ 4 ರಾಜ್ಯಗಳಲ್ಲಿ 4 ರಾಜ್ಯಗಳಾದ್ಯಂತ ಸುಮಾರು 20 ಸ್ಥಳಗಳಲ್ಲಿ ದಾಳಿ ನಡೆಸಿದೆ.

    ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್‌ನ 4, ಮಹಾರಾಷ್ಟ್ರದ 3 ಮತ್ತು ದೆಹಲಿಯ 1 ಸ್ಥಳಗಳಲ್ಲಿ ಅಧಿಕಾರಿಗಳ ತಂಡ ದಾಳಿ (NIA Raid) ನಡೆಸಿದೆ. ಕರ್ನಾಟಕದಲ್ಲಿ ಬೆಂಗಳೂರಿನ ಆರ್‌.ಸಿ ನಗರ, ಹೆಬ್ಬಾಳ, ಪುಲಿಕೇಶಿ ನಗರ, ಶಿವಾಜಿ ನಗರ, ಜೆ.ಸಿ. ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ. ಬಳ್ಳಾರಿಯಲ್ಲಿಯೂ ಒಟ್ಟು 9 ತಂಡಗಳು ಕಾರ್ಯಾಚರಣೆ ನಡೆಸಿವೆ.

    ಸೋಮವಾರ (ಇಂದು) ಮುಂಜಾನೆಯಿಂದಲೇ ಬಳ್ಳಾರಿಯಲ್ಲಿ ಎನ್‌ಐಎ ಕಾರ್ಯಾಚರಣೆ ಭರ್ಜರಿಯಾಗಿ ಸಾಗಿದೆ. ನಿಷೇಧಿತ ಪಿಎಫ್‌ಐನ 7 ಮಂದಿಯ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಬಳ್ಳಾರಿಯ ಶಮೀವುಲ್ಲಾ, ಅಜಾಜ್ ಅಹಮದ್, ಸುಲೇಮಾನ್, ತಬ್ರೇಜ್, ನಿಖಿಲ್ ಅಲಿಯಾಸ್‌ ಸೂಫಿಯಾನ್, ಮುಜಾಮಿಲ್ ಎಂಬವರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ ಕೇಸ್‌ – ತನಿಖೆಗೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ವಿಶೇಷ ಸೆಲ್‌

    ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದ ಬಳ್ಳಾರಿಯ ಶಮಿವುಲ್ಲಾನ ಬಳಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್‌ ಅನ್ನೂ ವಶಪಡಿಸಿಕೊಳ್ಳಲಾಗಿದೆ. ಅಫ್ಘಾನಿಸ್ತಾನಕ್ಕೆ ಹೋಗಿ ಕಾನೂನುಬಾಹಿರ ಚಟುವಟಿಕೆ ನಡೆಸಲು ಯತ್ನಿಸಿದ್ದಾರೆ ಎಂಬ ಅನುಮಾನದ ಮೇರೆಗೆ ಪಿಎಫ್‌ಐ ಮಾಜಿ ಪ್ರಧಾನ ಕಾರ್ಯದರ್ಶಿ ಸುಲೇಮಾನ್ ಮನೆಯಲ್ಲೂ ಅಧಿಕಾರಿಗಳು ಶೋಧ ನಡೆಸಿದ್ದಾರೆ.

    ಇತ್ತೀಚೆಗೆ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಹಾಗೂ ಯುವಕರನ್ನು ಐಸಿಸ್‌ ಭಯೋತ್ಪಾದನಾ ಸಂಘಟನೆ ಸೇರಿಸುತ್ತಿದ್ದ ಮಾಹಿತಿ ಮೇರೆಗೆ ಎನ್ಐಎ ಅಧಿಕಾರಿಗಳು ದೇಶದ 40 ಕಡೆ ದಾಳಿ ನಡೆಸಿದ್ದರು.‌ ಬೆಂಗಳೂರಿನಲ್ಲಿಯೂ ದಾಳಿ ನಡೆಸಿ 15 ಮಂದಿಯನ್ನ ಬಂಧಿಸಲಾಗಿತ್ತು. ಈ ಪೈಕಿ ಓರ್ವ ಐಸಿಸ್ ಮಾಡ್ಯೂಲ್‌ನ ನಾಯಕನಾಗಿದ್ದ. ಹೊಸದಾಗಿ ಸೇರ್ಪಡೆಗೊಂಡವರಿಗೆ ನಿಷ್ಠೆಯ ಪ್ರಮಾಣ ವಚನ ಬೋಧಿಸುತ್ತಿದ್ದ ಎಂದು ಮೂಲಗಳೂ ತಿಳಿಸಿವೆ.

    ದಾಳಿಯ ಸಮಯದಲ್ಲಿ, ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರಗಳು, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದನ್ನೂ ಓದಿ: ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

  • ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – 45ಕ್ಕೂ ಹೆಚ್ಚು ಕಡೆ NIA ದಾಳಿ

    ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – 45ಕ್ಕೂ ಹೆಚ್ಚು ಕಡೆ NIA ದಾಳಿ

    ಚೆನ್ನೈ: ಕೊಯಮತ್ತೂರಿನಲ್ಲಿ (Coimbatore) ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ (Cylinder Car Blast) ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಚೆನ್ನೈನ 45ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದೆ.

    ಸ್ಫೋಟಕ್ಕೆ ಸಂಬಂಧಿಸಿದ ಶಂಕಿತರು ಮತ್ತು ಬೆಂಬಲಿಗರ ಆಸ್ತಿಗಳನ್ನು ಎನ್‍ಐಎ (National Investigation Agency) ಪರಿಶೀಲನೆ ನಡೆಸುತ್ತಿದ್ದು, ಚೆನ್ನೈನ ಪುದುಪೇಟ್, ಮನ್ನಾಡಿ, ಜಮಾಲಿಯಾ ಮತ್ತು ಪೆರಂಬೂರ್‌ನಲ್ಲಿ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಕೊಯಮತ್ತೂರಿನ ಕೊಟ್ಟೈಮೇಡು, ಉಕ್ಕಡಂ, ಪೊನ್ವಿಜ ನಗರ ಮತ್ತು ರಥಿನಪುರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇದನ್ನೂ ಓದಿ: ಬಸ್‍ಗಳ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ ಮೂವರು ಸಾವು, 12 ಮಂದಿಗೆ ಗಾಯ

    ಅಕ್ಬೋಬರ್ 23ರ ಭಾನುವಾರ ದೀಪಾವಳಿ ಸಮಯದಲ್ಲಿ ಮುಂಜಾನೆ 4.20ರ ಸುಮಾರಿಗೆ ತಮಿಳುನಾಡಿನ ಕೊಯಮತ್ತೂರಿನ ಈಶ್ವರನ್ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎಲ್‍ಪಿಜಿ ಸಿಲಿಂಡರ್ ಅಳವಡಿಸಿದ್ದ ಮಾರುತಿ 800 ಕಾರೊಂದು ಸ್ಫೋಟಗೊಂಡಿತ್ತು. ಈ ವೇಳೆ 25 ವರ್ಷದ ಜಮೀಶಾ ಮುಬಿನ್ ಎಂಬ ವ್ಯಕ್ತಿ ಮೃತಪಟ್ಟಿದ್ದನು. ಈ ಕುರಿತಂತೆ ತನಿಖೆ ನಡೆಸಿದ ಪೊಲೀಸರು ಜಮೀಶಾ ಮುಬಿನ್ ಮನೆಯಲ್ಲಿ ದೇಶಿ ನಿರ್ಮಿತ ಮದ್ದುಗುಂಡುಗಳು ಮತ್ತು ಕೆಲವು ಐಸಿಸ್ ಬೆಂಬಲಿತ ಬರಹಗಳನ್ನು ವಶಪಡಿಸಿಕೊಂಡಿದ್ದರು.

    ಅಕ್ಟೋಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುವ ಜವಾಬ್ದಾರಿ ಹೊತ್ತುಕೊಂಡಿದೆ. ಎನ್‍ಐಎ ಭಾರತದ ಪ್ರಾಥಮಿಕ ಭಯೋತ್ಪಾದನಾ ನಿಗ್ರಹ ಕಾರ್ಯಪಡೆಯಾಗಿದೆ. ಇದನ್ನೂ ಓದಿ: ನಮ್ಮ ಮೆಟ್ರೋಗೆ ಹೈಟೆಕ್ ಟಚ್ – ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಪ್ಲ್ಯಾನ್

    Live Tv
    [brid partner=56869869 player=32851 video=960834 autoplay=true]

  • ಭಟ್ಕಳದಲ್ಲಿ NIA ದಾಳಿ- ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

    ಭಟ್ಕಳದಲ್ಲಿ NIA ದಾಳಿ- ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

    ಕಾರವಾರ: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ (ರಾಷ್ಟ್ರೀಯ ತನಿಖಾ ದಳ) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ದಾಳಿ ನಡೆಸಿದೆ. ಭಟ್ಕಳದ ಉಮರ್ ಸ್ಟ್ರೀಟ್, ತೆಂಗಿನ ಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದೆ.

    ಭಟ್ಕಳದ ಅಮೀನ್ ಜುವೇಬ್ ಹಾಗೂ ಜವಾದ್ ಇಬ್ಬರನ್ನು ತೀವ್ರ ತನಿಖೆ ನಡೆಸುತ್ತಿದ್ದು, ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ತಮ್ಮನನ್ನೂ ಎನ್‍ಐಎ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಮಾಜಿ ಶಾಸಕ ಇದಿನಬ್ಬನವರ ಮೊಮ್ಮಗನಿಗೆ ಐಸಿಸ್ ನಂಟು – ಎನ್‍ಐಎಯಿಂದ ಅರೆಸ್ಟ್

    ಸ್ಥಳದಲ್ಲಿ ಕೆಎಸ್‍ಆರ್ ಪಿ ತುಕಡಿ ಜಮಾವಣೆ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮೊಕ್ಕಾಂ ಹೂಡಿದ್ದಾರೆ. ವಶಕ್ಕೆ ಪಡೆದವರಿಗೆ ಐಸಿಸ್ ನಂಟಿರುವ ಕುರಿತು ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್‍ಐಎ ದಾಳಿ