ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ (Rameshwara, Cafe) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ಉಗ್ರರ ಕೈವಾಡದ ಶಂಕೆ ವ್ಯಕ್ತವಾಗುತ್ತಿದೆ. ಜೈಲಲ್ಲಿದ್ದ ಬಳ್ಳಾರಿ ಮಾಡ್ಯುಲ್ ಸಂಸ್ಥಾಪಕ ಮಿನಾಜ್ ನನ್ನು ಬಾಡಿ ವಾರೆಂಟ್ ಮೂಲಕ ಮಾರ್ಚ್ 9 ರವರೆಗೂ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆತನನ್ನು ಅಜ್ಞಾತ ಸ್ಥಳದಲ್ಲಿಟ್ಟು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಹಾನಗಲ್ ಗ್ಯಾಂಗ್‌ರೇಪ್ ಕೇಸ್ – 58 ದಿನಗಳ ನಂತ್ರ 873 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಮಿನಾಜ್ ಸುಲೈಮನ್ ಜೊತೆ ಮುಂಬೈನ ಅನಾಸ್ ಇಕ್ಬಾಲ್, ದೆಹಲಿಯ ಶಯಾನ್ ರೆಹ್ಮಾನ್, ಬಳ್ಳಾರಿಯ ಸೈಯ್ಯದ್ ಸಮೀರ್‌ನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಳ್ಳಾರಿಯ ಸೈಯ್ಯದ್‌ನಿಂದ ತರಬೇತಿ ಪಡೆದವರಲ್ಲಿ ಒಬ್ಬ ನಾಪತ್ತೆಯಾಗಿರುವ ಮಾಹಿತಿ ಸಿಕ್ಕಿದೆ. ಕೆಫೆಯಲ್ಲಿ ಬಾಂಬ್ ಇಟ್ಟವನು ಅವನೇ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ನಾನಾ ಆಯಾಮಗಳಲ್ಲಿ ತನಿಖಾತಂಡಗಳು ತನಿಖೆ ನಡೆಸುತ್ತಿವೆ ಎಂಬುದಾಗಿ ತಿಳಿದುಬಂದಿದೆ.
– ಅಮೋನಿಯಂ ನೈಟ್ರೇಟ್ ಪೌಡರ್ ಸಾರ್ವಜನಿಕ ಮಾರಾಟಕ್ಕೆ ನಿಷೇಧ
– ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್ – ಬಗೆದಷ್ಟು ರಹಸ್ಯ ಬಯಲು
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದಲ್ಲಿ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿದ್ದು, ಎನ್‌ಐಎ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ.
ಕೆಫೆಯಲ್ಲಿ ಸ್ಫೋಟಿಸಿದ್ದ ಬಾಂಬ್‌ಗೆ ಅಮೋನಿಯಂ ನೈಟ್ರೇಟ್ (Ammonium Nitrate Powder) ಬಳಸಿದ್ದಾನೆ ಅನ್ನೋದು ತನಿಖೆಯಲ್ಲಿ ದೃಢಪಟ್ಟಿರುವುದಾಗಿ NIA ಅಧಿಕಾರಿಗಳು ತಿಳಿಸಿದ್ದಾರೆ. ಅಮೋನಿಯಂ ನೈಟ್ರೇಟ್ ಅನ್ನು ಹೆಚ್ಚಾಗಿ ಕಲ್ಲು ಗಣಿಗಾರಿಕೆಯಲ್ಲಿ ಬಂಡೆಗಳನ್ನು ಸಿಡಿಸಲು ಬಳಸಲಾಗುತ್ತದೆ. ಇದೇ ಶಂಕಿತ ಉಗ್ರ ಬಳಸಿದ್ದ ಬಾಂಬ್‌ಗೆ ಇದೇ ಪೌಡರ್ ಅನ್ನು ಬಳಸಿದ್ದಾನೆ. ಆದ್ದರಿಂದ ಸದ್ಯಕ್ಕೆ ಅಮೋನಿಯಂ ನೈಟ್ರೇಟ್ ಸಾರ್ವಜನಿಕವಾಗಿ ಮಾರಟ ಮಾಡಲು ನಿಷೇಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹೂಡಿಯ ಪ್ರಾರ್ಥನಾ ಮಂದಿರದ ಬಳಿ ಬಟ್ಟೆ ಬದಲಾಯಿಸಿ ಟೋಪಿ ಬಿಟ್ಟು ಹೋದ ಬಾಂಬರ್
ಈ ಹಿಂದೆ ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಡೆದಿದ್ದ ಬಾಂಬ್ ಸ್ಫೋಟ (Mangaluru, Shivamogga Blast) ಪ್ರಕರಣಗಳಲ್ಲಿ ಸಲ್ಫರಿಕ್ ಗನ್ ಪೌಡರ್ ಮತ್ತು ಪೊಟ್ಯಾಶಿಯಂ ನೈಟ್ರೇಟ್ ಕೆಮಿಕಲ್‌ಗಳನ್ನು ಬಳಸಿರುವುದು ಕಂಡುಬಂದಿತ್ತು. ಹಾಗಾಗಿ ಶಂಕಿತ ಉಗ್ರನನ್ನು ಪತ್ತಹೆಚ್ಚಲು ತನಿಖೆ ಚುರುಕುಗೊಳಿಸಿರುವ ಎನ್‌ಐಎ ಹೊರ ರಾಜ್ಯಗಳಿಂದ ಅಮೋನಿಯಂ ನೈಟ್ರೇಟ್ ಪೂರೈಕೆದಾರರ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿಸಿಬಿಯಿಂದ ರಾಮೇಶ್ವರಂ ಕೆಫೆ ಬಾಂಬರ್ ರೇಖಾಚಿತ್ರ ಬಿಡುಗಡೆ
ಕ್ಷಣಕ್ಕೊಂದು ಬಸ್ ಬದಲಿದ್ದಾನೆ:
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಬಾಂಬರ್ ಚಲನವಲನದ ಬಗ್ಗೆ ಮತ್ತಷ್ಟು ದೃಶ್ಯಸಾಕ್ಷ್ಯ ಸಿಕ್ಕಿದೆ. ಇದನ್ನು ಆಧರಿಸಿ ತನಿಖಾಧಿಕಾರಿಗಳು ಕಾರ್ಯಚರಣೆ ನಡೆಸಿದ್ದಾರೆ. ಕೆಫೆಯಲ್ಲಿ ಬಾಂಬ್ ಇದ್ದ ಬ್ಯಾಗ್ ಇರಿಸಿದ್ದ ಬಾಂಬರ್ ಅಲ್ಲಿಂದ ಹಲವು ಬಸ್ ಬದಲಿಸಿದ್ದಾನೆ. ಸಮೀಪದ ಪ್ರಾರ್ಥನಾ ಮಂದಿರ ಬಳಿ ಹೋಗಿ ಅಲ್ಲಿ ಬಟ್ಟೆ ಬದಲಿಸಿದ್ದ. ಈ ಮೊದಲು ಬಳಸಿದ್ದ ಟೋಪಿ ಬಿಸಾಡಿ ಬೇರೊಂದು ಟೋಪಿ ಧರಿಸಿದ್ದ. ಮತ್ತೆ ಬಿಎಂಟಿಸಿ ಬಸ್ ಹತ್ತಿದ ಬಾಂಬರ್ ನೇರವಾಗಿ ಮಧ್ಯಾಹ್ನ 3 ಗಂಟೆಗೆ ಓಕಳಿಪುರಂನ ಸುಜಾತಾ ಬಸ್ ನಿಲ್ದಾಣದ ಬಳಿ ಬಂದಿದ್ದ. ಅಲ್ಲಿ ಬೀದರ್‌ಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಹತ್ತಿ ರಾತ್ರಿ 8.58ರ ಹೊತ್ತಿಗೆ ಬಳ್ಳಾರಿಯಲ್ಲಿ ಇಳಿದಿದ್ದ. ಇಲ್ಲಿಯವರೆಗಿನ ಬಾಂಬರ್ ಚಲನವಲನಗಳು ಹಲವೆಡೆ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಬಿಎಂಟಿಸಿಯ ವೋಲ್ವೋ ಬಸ್‌ನಲ್ಲಿ ಓಡಾಡುವ, ಬಸ್ಸಲ್ಲಿ ಕುಳಿತು ಸಾಗಿರುವ ಮತ್ತು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಡೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದ್ರೆ ಮುಂದೆ ಎಲ್ಲಿ ಹೋದ ಎಂಬ ಸುಳಿವು ಸಿಕ್ಕಿಲ್ಲ. ಬಳ್ಳಾರಿಯಲ್ಲಿಯೇ ತಲೆ ಮರೆಸಿಕೊಂಡಿದ್ದಾನಾ? ಅಥವಾ ಬೇರೆ ರಾಜ್ಯಕ್ಕೆ ಹೋಗಿದ್ದಾನಾ ಎಂಬ ಬಗ್ಗೆ ಇದೀಗ ತನಿಖೆ ನಡೆಯುತ್ತಿದೆ.
ಬೆಂಗಳೂರು/ ಬಳ್ಳಾರಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ (Bengaluru) ಸುಜಾತ ಸರ್ಕಲ್‌ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ (Tumakauru) ಇಳಿದಿದ್ದಾನೆ. ತುಮಕೂರಿನಿಂದ ಬಳ್ಳಾರಿಗೆ (Ballari) ಬಸ್‌ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ (Bhatkal) ತೆರಳಿರುವ ಶಂಕೆ ವ್ಯಕ್ತವಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ (NIA) ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ. ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‌ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ. ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ವಿಶ್ವಪ್ರಸಿದ್ಧ ಯಾಣದಲ್ಲಿ ದೇಶದ ಮೊದಲ WiFi-7 ಸೇವೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ (Suspected Terrorist) ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ (Reward) ಘೋಷಣೆ ಮಾಡಲಾಗಿದೆ. ಎನ್‌ಐಎ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದು, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್‌ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ.
ಭಟ್ಕಳದ ನೆಲೆಸಿಗದ ಮಂದಿಗೂ ಉಗ್ರರ ಜೊತೆ ನಂಟು ಇರುವುದು ಹೊಸದೆನಲ್ಲ. ಹಲವು ಮಂದಿಗೆ ಈ ಹಿಂದೆ ಉಗ್ರರ ಜೊತೆ ಸಂಪರ್ಕ ಇರುವುದು ತನಿಖೆಯಿಂದ ದೃಢಪಟ್ಟಿತ್ತು. ಈ ಹಿಂದೆ ಭಟ್ಕಳ ಸಹೋದರರಾದ ರಿಯಾಜ್ ಮತ್ತು ಇಕ್ಬಾಲ್ ಅವರನ್ನು ಕೇಂದ್ರ ಸರ್ಕಾರ ಉಗ್ರರ ಪಟ್ಟಿಗೆ ಸೇರಿಸಿತ್ತು. ಇದನ್ನೂ ಓದಿ: ಅತ್ತೆ ಬೇಗ ಸಾಯಬೇಕು- 50 ರೂ. ನೋಟ್ ಮೇಲೆ ಹರಕೆ ಬರೆದ ಸೊಸೆ!
ಇದೇ ಜನವರಿ ಕೊನೆಯ ವಾರದಲ್ಲಿ ಮುಂಬೈನಲ್ಲಿ ಬಂಧನವಾದ ಶಂಕಿತ ಉಗ್ರನೋರ್ವನ ಜತೆ ನಂಟು ಹೊಂದಿರುವ ಆರೋಪದಡಿ ಭಟ್ಕಳದ ಮಹಿಳೆಯ ಮನೆಯ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರದ ದಳ ಮಾಡಿ ವಶಕ್ಕೆ ಪಡೆದಿತ್ತು.
ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ (Suspected Terrorist) ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ (Reward) ಘೋಷಣೆ ಮಾಡಲಾಗಿದೆ.
ಎನ್‌ಐಎಯಿಂದ (NIA) 10 ಲಕ್ಷ ಬಹುಮಾನ ಘೋಷಣೆ ಮಾಡಿದ್ದು, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ಎನ್‌ಐಎ ತಿಳಿಸಿದೆ. ಶಂಕಿತ ಉಗ್ರನ ಸುಳಿವು ಸಿಕ್ಕಲ್ಲಿ 08029510900, 8904241100 ನಂಬರಿಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ. ಎನ್‌ಐಎ ಟ್ವಿಟ್ಟರ್‌ನಲ್ಲಿ (Twitter) ಶಂಕಿತ ಬಾಂಬರ್‌ನ ಫೋಟೋ ರಿವೀಲ್ ಮಾಡಿದ್ದು, ರಾಮೇಶ್ವರಂ ಬಾಂಬ್ ಬ್ಲಾಸ್ಟ್ ರುವಾರಿಯ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನ ನೀಡಲಾಗುತ್ತದೆ. ಇದನ್ನೂ ಓದಿ: ಅತ್ತೆ ಬೇಗ ಸಾಯಬೇಕು- 50 ರೂ. ನೋಟ್ ಮೇಲೆ ಹರಕೆ ಬರೆದ ಸೊಸೆ!
NIA announces cash reward of 10 lakh rupees for information about bomber in Rameshwaram Cafe blast case of Bengaluru. Informants identity will be kept confidential. pic.twitter.com/F4kYophJFt
ಮುಖಕ್ಕೆ ಮಾಸ್ಕ್ ಇಲ್ಲದೇ ಇರುವ ಹತ್ತಿರದ ಫೋಟೋವೊಂದನ್ನು ಎನ್‌ಐಎ ರಿಲೀಸ್ ಮಾಡಿದೆ. ಎನ್‌ಐಎ ಇಂದ ಆರೋಪಿಗಾಗಿ ತೀವ್ರ ತಲಾಷ್ ನಡೆಯುತ್ತಿದೆ. ಇದುವರೆಗೂ ಆರೋಪಿ ಹೋಲುವ ಫೋಟೋ ಇರಲಿಲ್ಲ. ಎನ್‌ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಚಹರೆ ಪತ್ತೆಯಾಗಿದೆ. ಇದನ್ನೂ ಓದಿ: ಅಮೇಥಿಯಿಂದ ರಾಹುಲ್ ಗಾಂಧಿ, ರಾಯ್‌ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?
ಬೆಂಗಳೂರು: ಬಾಂಬ್ ಸ್ಫೋಟಗೊಂಡ ಸ್ಥಳದಲ್ಲಿ ನೆಲ ಹಾಸಿನ ಟೈಲ್ಸ್ ಛಿದ್ರ ಛಿಧ್ರವಾಗಿದ್ದು, 20 ಮೀಟರ್ ದೂರದಲ್ಲಿದ್ದ ಗ್ಲಾಸ್‌ಗಳು ಪುಡಿ ಪುಡಿಯಾಗಿವೆ. ಸಿಸಿಬಿ ಹಾಗೂ ಎನ್‌ಐಎ ಕ್ರೈಂ ಸೀನ್‌ಗಾಗಿ ಹೋಟೆಲ್ ಸೀಜ್ ತೆರವುಗೊಳಿಸಲಾಗಿದ್ದು, ಕ್ಲೀನಿಂಗ್ ಕಾರ್ಯ ಆರಂಭವಾಗಿದೆ. ಇಂದಿನಿಂದ ಅಧಿಕೃತವಾಗಿ ಎನ್‌ಐಎ ತನಿಖೆ ಆರಂಭಿಸಿದೆ.
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ (Rameshwaram Cafe) ಪ್ರಕರಣದ ತನಿಖೆ ಅಧಿಕೃತವಾಗಿ ಇಂದು (ಮಂಗಳವಾರ) ಎನ್ಐಎ ಹೆಗಲೇರಿದೆ. ಬಾಂಬ್ ಸ್ಪೋಟ ಸಂಬಂಧ ನಿನ್ನೆ ಎಫ್ಐಆರ್ ದಾಖಲು ಮಾಡಿದ್ದ ಎನ್ಐಎ (NIA) ಅಧಿಕಾರಿಗಳು ಇಂದು ಸಿಸಿಬಿಯಿಂದ ಕೇಸ್ ಫೈಲ್ ಪಡೆದು ತನಿಖೆಗೆ ಇಳಿದಿದ್ದಾರೆ. ಸ್ಪೋಟ ನಡೆದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಗೆ ಎನ್ಐಎಯ ಮೂವರು ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸರಿಂದ ಘಟನೆಯ ಮಾಹಿತಿ ಪಡೆದರು. ಇದನ್ನೂ ಓದಿ: ಬಸ್ ನಿಲ್ದಾಣದಲ್ಲೇ ಟೈಮರ್ ಫಿಕ್ಸ್ – ಕೊನೆಯ 10 ನಿಮಿಷದ ಕಂಪ್ಲೀಟ್ ವರದಿ ಓದಿ
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆದ ಸ್ಥಳ, ಕ್ಯಾಷ್ ಕೌಂಟರ್, ಆರೋಪಿ ಬಂದು ಹೋದ ಮಾರ್ಗ ಹಾಗೂ ಸಿಸಿಟಿವಿಗಳನ್ನ ಪರಿಶೀಲನೆ ನಡೆಸಿದರು. ಬಳಿಕ ಕೆಲ ಹೊತ್ತು ಪ್ರಕರಣದ ಬಗ್ಗೆ ಹೊಟೇಲ್‌ನಲ್ಲಿ ಚರ್ಚೆ ನಡೆಸಿದ ಮೂವರು ಅಧಿಕಾರಿಗಳು, ಹೆಚ್ಎಎಲ್ ಪೊಲೀಸರಿಂದ ಕೆಲವು ಮಾಹಿತಿಗಳನ್ನ ಸಂಗ್ರಹಿಸಿದರು. ಇನ್ನೂ ಸ್ಪೋಟದ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದು, ಇಂದು ತಮ್ಮ ಬಳಿಯಿದ್ದ ಕೇಸ್ ಫೈಲ್ ಸೇರಿದಂತೆ ಟೆಕ್ನಿಕಲ್ ಎವಿಡೆನ್ಸ್, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನ ಎನ್ಐಎ ಅಧಿಕಾರಿಗಳ ಜೊತೆ ವಿನಿಮಯ ಮಾಡಿಕೊಂಡಿದ್ದಾರೆ. ಈ ಮೂಲಕ ಬಾಂಬ್ ಸ್ಪೋಟದ ಸಂಪೂರ್ಣ ತನಿಖೆ ಎನ್ಐಎ ಹೆಗಲೇರಿದೆ.
ಬಾಂಬ್ ಸ್ಫೋಟದ ನಂತರ ರಾಮೇಶ್ವರಂ ಕೆಫೆಯನ್ನ ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದರು. ಕ್ರೈಂ ಸೀನ್ ಹಾಳಾಗಬಾರದು ಎವಿಡೆನ್ಸ್ ನಾಶವಾಗಬಾರದು ಅಂತಾ ಹೋಟೆಲ್‌ನ ಒಳಗೆ ಯಾರನ್ನೂ ಬಿಟ್ಟಿರಲಿಲ್ಲ. ಇದೀಗ ಸ್ಪೋಟಕ್ಕೆ ಸಂಬಂಧಿಸಿದಂತೆ ತನಿಖೆ, ಪರಿಶೀಲನೆ, ಎವಿಡೆನ್ಸ್ ಸಂಗ್ರಹ, ಸ್ಪೋಟದ ಸ್ಯಾಂಪಲ್ ಸಂಗ್ರಹ ಕಾರ್ಯ ಮುಗಿದಿದ್ದು, ಇಂದು ಪೊಲೀಸರು ಹೋಟೆಲನ್ನು ಮಾಲೀಕರಿಗೆ ಹಸ್ತಾಂತರ ಮಾಡಿದರು. ಹೋಟೆಲ್ ಹಸ್ತಾಂತರವಾಗುತ್ತಿದ್ದಂತ್ತೆ, ಸಿಬ್ಬಂದಿ ಸ್ವಚ್ಚತಾ ಕಾರ್ಯ ಆರಂಭಿಸಿದರು. ಅಲ್ಲದೇ ಇದೇ ಶುಕ್ರವಾರ ಶಿವರಾತ್ರಿಯಂದು ಹೊಟೇಲ್ ಮತ್ತೆ ಆರಂಭವಾಗಲಿದ್ದು, ಕೆಲವು ದುರಸ್ತಿ ಕಾರ್ಯಗಳನ್ನ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಾಂಬ್ ಬ್ಲಾಸ್ಟ್ ಗಾಯಾಳುಗಳಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ – ಭರವಸೆ ಕೊಟ್ಟು ಸರ್ಕಾರ ಸೈಲೆಂಟ್
ಕೆಫೆಯಲ್ಲಿ ಬಾಂಬ್ ಇಡಲಾಗಿದ್ದ ವಿಡಿಯೋ ಹೊರ ಬಂದಿದ್ದು, ಸ್ಪೋಟ ತೀವ್ರತೆಗೆ ಕಬ್ಬಿಣದ ಪಿಲ್ಲರ್ ಕಿತ್ತು ಬಂದಿದೆ. ನೆಲದ ಟೈಲ್ಸ್ ಕೂಡ ಛಿದ್ರವಾಗಿರುವುದು ಕಂಡು ಬಂದಿದೆ. 20 ಮೀಟರ್ ದೂರದಲ್ಲಿದ್ದ ಗ್ಲಾಸ್ ಪುಡಿಪುಡಿಯಾಗಿದೆ. ಡಸ್ಟ್ ಬಿನ್ ಹಿಂಭಾಗದಲ್ಲಿ ಮರವೊಂದರ ಪಕ್ಕದಲ್ಲಿ ಬ್ಯಾಗ್ ಇಟ್ಟಿದ್ರಿಂದ ಗ್ರಾಹಕರು ಹಾಗೂ ಸಿಬ್ಬಂದಿ ಗಮನಿಸಿರಲಿಲ್ಲ. ಸ್ಫೋಟದ ತೀವ್ರತೆಗೆ ಹೋಟೆಲ್ ಹಾಳಾಗಿದ್ದು, ರಿನೋವೇಷನ್ ಕೆಲಸ ಸಹ ಆರಂಭಿಸಲಾಗಿದೆ.
ಬೆಂಗಳೂರು/ ನವದೆಹಲಿ: ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕ ಸೇರಿದಂತೆ ದೇಶದ 17 ಕಡೆ ದಾಳಿ ನಡೆಸಿದೆ.
ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police) ಐವರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳ ಜೊತೆ ಜೈಲಿನಲ್ಲಿದ್ದ ಉಗ್ರ ಟಿ.ನಾಸೀರ್ (T Naseer) ಸಂಪರ್ಕ ಬೆಳೆಸಿದ್ದ ವಿಚಾರ ತನಿಖೆಯಿಂದ ಬಯಲಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಇದನ್ನೂ ಓದಿ: ಸರ್, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?
ಈ ವರ್ಷದ ಜನವರಿ 12 ರಂದು ಎನ್‌ಐಎ ಈ ಪ್ರಕರಣದ ಸಂಬಂಧ 8 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಚಾರ್ಜ್‌ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳಿದ ಇಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಸಹ ಖೈದಿಗಳನ್ನ ಸೆಳೆದು ಉಗ್ರ ಕೃತ್ಯಕ್ಕೆ ಪ್ರೇರೇಪಣೆ ನೀಡಿದ ಹಿನ್ನೆಲೆಯಲ್ಲಿ ಇಂದು ಏಳು ರಾಜ್ಯದಲ್ಲಿ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯ ತೂಬಾ ಲೇಔಟ್ ಮತ್ತು ಸರಾಯಿ ಪಾಳ್ಯದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಆರ್‌ಟಿ ನಗರ ಮನೆಯಲ್ಲಿ ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು.
ಬೆಂಗಳೂರು ದಾಳಿಯ ವೇಳೆ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದ ಗ್ರೆನೇಡ್‌ಗಳು
ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು. ಇದನ್ನೂ ಓದಿ: ಆಪಲ್ ಐಫೋನ್‌ಗೆ ಭರ್ಜರಿ 16,584 ಕೋಟಿ ರೂ. ದಂಡ
ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ.
ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿಕೊಂಡಿದ್ದರು ವಿಚಾರ ಅಂಶ ಚಾರ್ಜ್‌ಶೀಟ್‌ನಲ್ಲಿದೆ.
ಕಾರವಾರ: ಬೆಂಗಳೂರು ಬಾಂಬ್ ಸ್ಪೋಟ ಪೂರ್ವಯೋಜಿತ ಕೃತ್ಯ. ಸತ್ಯಾಸತ್ಯತೆ ಹೊರಬರಬೇಕಾದ್ರೆ NIA ತನಿಖೆಗೆ ವಹಿಸಬೇಕು. ಎರಡೂ ರಾಷ್ಟ್ರೀಯ ಪಕ್ಷಗಳು ಬಾಯಿ ಮುಚ್ಚಿಕೊಂಡು ಕೂರಬೇಕು. ನಿಮ್ಮ ನಿಮ್ಮ ಕಾಲದಲ್ಲಿ ಏನೇನು ಆಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಬಾಂಬ್ ಸ್ಫೋಟ ಆಗಲು ಎರಡೂ ಪಕ್ಷದವರು ಕಾರಣ ಇದ್ದೀರಿ. ನಿಮ್ಮ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆ ಕೊಡಬೇಡಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸಲಿದೆ. ಬಿಜೆಪಿ ಅವಧಿಯಲ್ಲಿಯೂ ಸ್ಫೋಟ ನಡೆದಿತ್ತು. ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣ. ರಾಜ್ಯ ಸರ್ಕಾರದ ಬದಲು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ರಾಜ್ಯ ಸರ್ಕಾರ ಪೊಲೀಸರ ಕೈ ಕಟ್ಟಿಹಾಕಿದೆ. ಪೊಲೀಸರನ್ನು ಫ್ರೀಯಾಗಿ ತನಿಖೆಗೆ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್ ವರದಿಗೆ ಪರಮೇಶ್ವರ್ ಗರಂ
ಪಾಕಿಸ್ತಾನ ಪರ ಘೋಷಣೆ ಕೂಗುವವರು ದೇಶದ ಪಾಲಿಗೆ ಕ್ಯಾನ್ಸರ್ ವೈರಸ್ ಇದ್ದಂತೆ. ಮೊದಲು ನಾಸಿರ್ ಹುಸೇನ್ ಮೇಲೆ ಕ್ರಮ ಕೈಗೊಳ್ಳಬೇಕು. ಭಟ್ಕಳಕ್ಕೆ ಪಾಕಿಸ್ತಾನದ ನಂಟಿದೆ ಎಂದು ಜಗನ್ನಾಥ ಶೆಟ್ಟಿ ಆಯೋಗ ವರದಿ ನೀಡಿತ್ತು. ವರದಿಯನ್ನು ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಒಪ್ಪಲಿಲ್ಲ. ಬಿಜೆಪಿ, ಕಾಂಗ್ರೆಸ್ ಗೆ ಹೆಚ್ಚು ವ್ಯತ್ಯಾಸವಿಲ್ಲ ಎಂದರು. ಇದನ್ನೂ ಓದಿ: ರಾಜಕೀಯ ಪ್ರವೇಶಕ್ಕೆ ಮಂಜುನಾಥ್ ಸಮ್ಮತಿ ಸೂಚಿಸುವುದಿಲ್ಲ: ಹೆಚ್‌ಡಿಡಿ ಅಚ್ಚರಿಯ ಹೇಳಿಕೆ
ಜಾತಿ ಗಣತಿ ವರದಿಗೆ ವಿರೋಧವಿದೆ. ದೇಶದಲ್ಲಿ ಒಟ್ಟಾಗಿ ಸಾಗಬೇಕಿದೆ. ರಾಜಕೀಯ ಪಕ್ಷಗಳು ಸಮುದಾಯಗಳನ್ನು ಒಡೆದು ಆಳಲು ಈ ವರದಿ ಸಿದ್ದಪಡಿಸಿವೆ. ಇದೊಂದು ಅವೈಜ್ಞಾನಿಕ ವರದಿ ಎಂದರು.
ದೇಶಕ್ಕೆ ಒಳಿತಾಗಬೇಕೆಂದರೆ ರಾಜ್ಯದ ಕೆಲ ಬಿಜೆಪಿ ನಾಯಕರು ಸ್ವಯಂ ನಿವೃತ್ತಿ ತೆಗೆದುಕೊಂಡು ಬೇರೆಯವರಿಗೆ ಮಾದರಿಯಾಗಲಿ. ಆದರೆ ನಿವೃತ್ತಿ ಆಗಬೇಕಾದವರ ಹೆಸರು ಬಹಿರಂಗವಾಗಿ ಹೇಳುವುದಿಲ್ಲ ಎಂದು ಹೇಳಿದರು.
ದೇಶದ ಒಳಗಡೆ ಯಾವುದೇ ಉಗ್ರ ಚಟುವಟಿಕೆ, ಬಾಂಬ್ ಸ್ಫೋಟದ ತನಿಖೆಯನ್ನು ಎನ್‌ಐಎ ವಹಿಸಿಕೊಳ್ಳುತ್ತದೆ. ಈ ಹಿಂದೆ ಬೇರೆ ರಾಜ್ಯದಲ್ಲಿ ಹಲವು ಪ್ರಕರಣಗಳಿಗೆ ಹೊಸ ಪ್ರಕರಣಗಳು ಸಾಮ್ಯತೆ ಮತ್ತು ಆರೋಪಿಗಳು ಭಾಗಿಯಾಗಿರುವುದರಿಂದ ಎನ್‌ಐಎ ಈ ಪ್ರಕರಣಗಳನ್ನು ಬೇಧಿಸುತ್ತದೆ. ಈ ಕಾರಣಕ್ಕೆ ರಾಜ್ಯಗಳು ಉಗ್ರ ಕೃತ್ಯದಂತಹ ಪ್ರಕರಣಗಳು ದಾಖಲಾದಾಗ ಅದನ್ನು ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎನ್‌ಐಎಗೆ ವರ್ಗಾಯಿಸುತ್ತದೆ. ಎಲ್ಲಾ ರಾಜ್ಯಗಳ ಗೃಹ ಇಲಾಖೆ ಎನ್‌ಐಎ ತನಿಖೆಗೆ ಸಹಕಾರ ನೀಡುತ್ತದೆ.
ನವದೆಹಲಿ/ಕೇಪ್‌ಟೌನ್: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮೋಸ್ಟ್ ವಾಂಟೆಡ್ ದರೋಡೆಕೋರರಲ್ಲಿ ಒಬ್ಬನಾದ ಮೊಹಮ್ಮದ್ ಗೌಸ್ ನಿಯಾಜಿನನ್ನ (Mohammed Gaus Niyazi) ದಕ್ಷಿಣ ಆಫ್ರಿಕಾದಲ್ಲಿ ಯಶಸ್ವಿಯಾಗಿ ಬಂಧಿಸಿದೆ. ಎನ್‌ಐಎ ಏಜೆನ್ಸಿಯು ನಿಯಾಜಿಯ ಪತ್ತೆಗಾಗಿ 5 ಲಕ್ಷ ರೂ.ಗಳ ಬಹುಮಾನ ಘೋಷಣೆ ಮಾಡಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ.
ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಾಯಕ ಮೊಹಮ್ಮದ್ ಗೌಸ್ ನಿಯಾಜಿ, 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಎಂಬಾತನನ್ನ ಹತ್ಯೆಗೈದಿದ್ದ. ಘಟನೆ ನಂತರ ದೇಶದಿಂದ ಪಲಾಯನ ಮಾಡಿದ್ದ ನಿಯಾಜಿ, ವಿವಿಧ ದೇಶಗಳಲ್ಲಿ ತಲೆ ಮರೆಸಿಕೊಂಡಿದ್ದ ಎಂದು ಎನ್‌ಎಐ ಮೂಲಗಳು ಹೇಳಿವೆ. ಇದನ್ನೂ ಓದಿ: ರಾಜಕೀಯ ಕರ್ತವ್ಯದಿಂದ ನನ್ನನ್ನು ಮುಕ್ತಗೊಳಿಸಿ – ರಾಜಕೀಯ ನಿವೃತ್ತಿ ಸುಳಿವು ನೀಡಿದ ಗಂಭೀರ್
ರುದ್ರೇಶ್‌ನನ್ನ ಹತ್ಯೆಗೈದಿದ್ದ ನಿಯಾಜಿ ವಿವಿಧ ದೇಶಗಳಲ್ಲಿ ತಲೆ ಮರೆಸಿಕೊಂಡಿದ್ದ. ತನಿಖೆಯ ಮುಂದಾಳತ್ವ ವಹಿಸಿದ್ದ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ನಿಯಾಜಿಯ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಕೊನೆಗೆ ಆತ ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಬಗ್ಗೆ ಸುಳಿವು ಸಿಕ್ಕಿತು. ಕೂಡಲೇ ಈ ಮಾಹಿತಿಯನ್ನು ಕೇಂದ್ರದ ಭದ್ರತಾ ಏಜೆನ್ಸಿಗೆ ರವಾನಿಸಿತು. ನಂತರ ಎನ್‌ಐಎ ದಕ್ಷಿಣ ಆಫ್ರಿಕಾದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: ಪಾಕ್ ವಶದಲ್ಲಿದ್ದ ‘ಸಿಂಗಂ’ ವಿಂಗ್ ಕಮಾಂಡರ್ ತಾಯ್ನಾಡಿಗೆ ವಾಪಸ್ – ಭಾರತದ ಗೆಲುವಿಗೆ 5ರ ಸಂಭ್ರಮ
ಆರೋಪಿ ನಿಯಾಜಿನನ್ನ ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಿದ ನಂತರ ತ್ವರಿತವಾಗಿ ಹಸ್ತಾಂತರ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಸದ್ಯ ಆರೋಪಿಯನ್ನು ಮುಂಬೈಗೆ ಕರೆತರಲಾಗುತ್ತಿದ್ದು, ಮುಂಬೈನಲ್ಲೇ ವಿಚಾರಣೆ ನಡೆಸಲಾಗುತ್ತದೆ ಎಂದು ಎನ್‌ಐಎ ಅಧಿಕಾರಿ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: CAA ಉಲ್ಲೇಖವಿರೋ ಅಮಿತ್ ಶಾ, ರಾಜನಾಥ್ ಸಿಂಗ್ ಕಾರಿನ ನಂಬರ್ ಪ್ಲೇಟ್ ವೈರಲ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರಣಿ ಬಾಂಬ್ ಸ್ಫೋಟ (Serial Bomb Blast) ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police) ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು.
ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಉಗ್ರರಿಗೆ ಆಶ್ರಯ ಕೊಟ್ಟಿದ್ದವರಿಗೆ ಶುರುವಾಯ್ತು ಸಂಕಷ್ಟ
ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ಗಳು
ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು. ಇದನ್ನೂ ಓದಿ: ದೇಶವನ್ನ ಇನ್ನೆಷ್ಟು ಭಾಗವಾಗಿ ಒಡೆಯುತ್ತೀರಿ: ಡಿ.ಕೆ.ಸುರೇಶ್ ಹೇಳಿಕೆಗೆ ಮೋದಿ ಕಿಡಿ
ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ
ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿಕೊಂಡಿದ್ದರು. ಸಿಸಿಬಿ ಪೊಲೀಸರು ಎರಡು ಮೂರು ದಿನ ತಡ ಮಾಡಿದ್ದರೇ ಬೆಂಗಳೂರಿನ ಕೆಲವು ಕಡೆ ಸ್ಫೋಟಗೊಳಿಸಲು ತಯಾರಿ ಮಾಡಿಕೊಂಡಿದ್ದ ವಿಚಾರ ತನಿಖೆಯಿಂದ ಬಯಲಾಗಿತ್ತು.