Tag: NIA

  • ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಪ್ರಕರಣ – ಉಗ್ರರಿಗೆ ಆಶ್ರಯ ನೀಡಿದ್ದ ಅಪ್ರಾಪ್ತನ ಬಂಧನ

    ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಪ್ರಕರಣ – ಉಗ್ರರಿಗೆ ಆಶ್ರಯ ನೀಡಿದ್ದ ಅಪ್ರಾಪ್ತನ ಬಂಧನ

    ನವದೆಹಲಿ: ಕಳೆದ ವರ್ಷ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಐವರು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಆಪ್ರಾಪ್ತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.  ಆತನನ್ನು ಜಮ್ಮುವಿನ ಆರ್‌ಎಸ್‌ಪುರದ ಬಾಲಮಂದಿರದಲ್ಲಿ ಇರಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    ಬಂಧಿತ ಅಪ್ರಾಪ್ತ, ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ಆರೋಪಿಗಳಾದ ನಿಸಾರ್ ಅಹ್ಮದ್ ಅಲಿಯಾಸ್ ಹಾಜಿ ನಿಸಾರ್ ಮತ್ತು ಮುಷ್ತಾಕ್ ಹುಸೇನ್ ಅಲಿಯಾಸ್ ಚಾಚಾ ಎಂಬ ಇಬ್ಬರ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: 9,999 ವಜ್ರಗಳಿಂದ ರಾಮಮಂದಿರದ ಕಲಾಕೃತಿ ರಚಿಸಿದ ಕಲಾವಿದ!

    ಹಾಜಿ ನಿಸಾರ್ ಮತ್ತು ಚಾಚಾ ಈ ಇಬ್ಬರು ಆರೋಪಿಗಳು ಎರಡು ತಿಂಗಳಿಗೂ ಹೆಚ್ಚಿನ ಕಾಲ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು. ಅಲ್ಲದೇ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ನಿರ್ವಾಹಕರಾದ ಸೈಫುಲ್ಲಾ ಅಲಿಯಾಸ್ ಸಾಜಿದ್ ಜುಟ್ ಮತ್ತು ಅಬು ಕತಾಲ್ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಯೋತ್ಪಾದಕ ದಾಳಿ ನಡೆದ ಬಳಿಕ ಎನ್‍ಐಎ ಅಧಿಕಾರಿಗಳ ತಂಡ ಆರೋಪಿಗಳ ಪತ್ತೆಗೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಪೂಂಚ್ ಮತ್ತು ರಿಯಾಸಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶದಲ್ಲಿ ಹಲವಾರು ತಿಂಗಳುಗಳ ಕಾಲ ಅಲ್ಲಿಯೇ ಬೀಡುಬಿಟ್ಟಿತ್ತು.

    2023ರ ಜ.1 ರಂದು ನಡೆದಿದ್ದ ಈ ಭಯೋತ್ಪಾದಕ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ ಮಾಡಿದ ಇಸ್ರೋ

  • ಇಬ್ಬರು ಅಲ್‌ ಖೈದಾ ಉಗ್ರರಿಗೆ 7 ವರ್ಷ ಜೈಲು ಶಿಕ್ಷೆ

    ಇಬ್ಬರು ಅಲ್‌ ಖೈದಾ ಉಗ್ರರಿಗೆ 7 ವರ್ಷ ಜೈಲು ಶಿಕ್ಷೆ

    ಬೆಂಗಳೂರು: ಇಬ್ಬರು ಅಲ್‌ ಖೈದಾ (Al-Qaeda) ಉಗ್ರರಿಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ (NIA Special Court) 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಅಖ್ತರ್ ಹುಸೇನ್ ಲಷ್ಕರ್ ಮತ್ತು ಅಬ್ದುಲ್ ಅಲೀಂ ಮೊಂಡಲ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 2022ರ ಆಗಸ್ಟ್ 30ರಂದು ಪ್ರಕರಣ ದಾಖಲಾಗಿತ್ತು.

    ಇಬ್ಬರು ಉಗ್ರರು ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳಿಂದ ಆನ್‌ಲೈನ್ ಮೂಲಕ ಮನ ಪರಿವರ್ತನೆಗೊಂಡು ಅಲ್‌ ಖೈದಾಗೆ ಹೊಸ ಯುವಕರನ್ನು ಸೇರ್ಪಡೆಗೊಳಿಸುತ್ತಿದ್ದರು. ಬಳಿಕ ಟೆಲಿಗ್ರಾಂ ಗ್ರೂಪ್‌ಗಳಿಗೆ ಸೇರಿಸಿ ಅಫ್ಘಾನಿಸ್ತಾನಕ್ಕೆ ತೆರಳಲು ಪ್ಲಾನ್ ಮಾಡುತ್ತಿದ್ದರು. ಇದನ್ನೂ ಓದಿ: ಮಂತ್ರಾಲಯದಲ್ಲಿ 2.95 ಕೋಟಿ ರೂ. ಕಾಣಿಕೆ ಸಂಗ್ರಹ

     

    ಅಸ್ಸಾಂ (Assam) ಮೂಲದ ಅಖ್ತರ್ ಹುಸೇನ್‍ನ್ನು ಸಿಸಿಬಿ ಪೊಲೀಸರು ಮೊದಲು ಬಂಧಿಸಿದ್ದರು. ಈತ ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಕೆಲ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ.   ಇದನ್ನೂ ಓದಿ: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

    10ನೇ ತರಗತಿ ಓದಿದ್ದ ಹುಸೇನ್ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನೆ ನೀಡುತ್ತಿದ್ದ. ಸೋಷಿಯಲ್ ಮೀಡಿಯಾ ಬಳಸಿಕೊಂಡು ಭಾರತದಲ್ಲಿ ಗಲಭೆ ಎಬ್ಬಿಸುವುದು, ಬೆಂಗಳೂರಿನಲ್ಲಿ ಶಾಂತಿ ಹದಗೆಡಿಸುವುದೇ ಇವನ ಕೆಲಸವಾಗಿತ್ತು. ಬೆಂಗಳೂರು ಮತ್ತು ಬೇರೆ ಬೇರೆ ಜಿಲ್ಲೆಯ ಮಾಹಿತಿಯನ್ನು ಬೇರೆ ಸಂಘಟನೆಯ ಜೊತೆ ಹಂಚಿಕೊಳ್ಳುತ್ತಿದ್ದ.

    ಬೆಂಗಳೂರಿನ ಪ್ರಮುಖ ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಶಂಕಿತ ಸಂಚು ರೂಪಿಸುತ್ತಿದ್ದ. ವಿಧಾನಸೌಧದ ಬಳಿ ಇರುವ ಅತಿ ಹೆಚ್ಚು ವಿಐಪಿಗಳ ಬಂದು ಹೋಗುವ ಹೋಟೆಲ್ ಟಾರ್ಗೆಟ್ ಮಾಡಿದ್ದ ಈತ ಹಲವು ಬಾರಿ ಆ ಹೋಟೆಲ್ ಬಳಿ ಬಂದು ಹೋಗಿದ್ದ. ಶಂಕಿತ ಉಗ್ರನ ಚಲನವಲನದ ಬಗ್ಗೆ ಸಿಸಿಟಿವಿ ಹಾಗೂ ಟೆಕ್ನಿಕಲ್ ಸಾಕ್ಷ್ಯವನ್ನು ಪೊಲೀಸರು ಸಂಗ್ರಹಿಸಿದ್ದರು.

    ಅಲ್ ಖೈದಾ ಸಂಘಟನೆ ಜೊತೆ ನಿಕಟ ಸಂಪರ್ಕ ಹೊಂದಿದ್ದ ಈತ ದೊಡ್ಡ ಪ್ಲ್ಯಾನ್ ಮಾಡಿದ್ದ. ಈ ಬಗ್ಗೆ ತೆಲಂಗಾಣ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳು ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಐಬಿ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣ ಎನ್‌ಐಎ ಹಸ್ತಾಂತರವಾಗಿತ್ತು.

     

  • NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!

    NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!

    ಬಳ್ಳಾರಿ: ಕಳೆದ 2 ದಿನಗಳ ಹಿಂದೆ ಗಣಿನಾಡು ಬಳ್ಳಾರಿಯಲ್ಲಿ (Ballary) ಎನ್‌ಐಎ (NIA) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಯ ಕತೆ ಕೇಳಿದರೆ ಒಂದು ಕ್ಷಣ ಬೆಚ್ಚಿಬೀಳೋದು ಗ್ಯಾರಂಟಿ. ಬಂಧನಕ್ಕೆ ಒಳಗಾದ ಸಮೀರ್ ಕಾಲೇಜು ವಿದ್ಯಾರ್ಥಿಯಾಗಿದ್ದು, ವ್ಯಾಸಂಗ ಮಾಡೋವಾಗಲೇ ಆತನಿಗೆ ಐಎಸ್‌ಐಎಸ್ (ISIS) ಸಂಪರ್ಕ ಇತ್ತು ಎನ್ನುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.

    ಎನ್‌ಐಎ ದಾಳಿಯಲ್ಲಿ ಬಳ್ಳಾರಿ ಮೂಲದ ಇಬ್ಬರನ್ನು ಬಂಧಿಸಿದ್ದು ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಾಲೇಜಿನಲ್ಲಿ ವ್ಯಾಸಂಗ ಮಾಡೋವಾಗಲೇ ಆ ಯುವಕನಿಗಿರೋ ಸಂಪರ್ಕ ಮಾತ್ರ ಬೆಚ್ಚಿ ಬೀಳುವಂತಿದೆ. ಕೌಲ್ ಬಜಾರ್ ಪ್ರದೇಶ, ಜಾಗೃತಿ ನಗರ ಬ್ರೂಸ್ ಪೇಟೆ ಏರಿಯಾ ಸೇರಿ ಒಟ್ಟು 8 ಕಡೆ ದಾಳಿ ಮಾಡಲಾಗಿತ್ತು.

    ದಾಳಿಯಲ್ಲಿ ಸೈಯದ್ ಸಮೀರ್ ಮತ್ತು ಮೊಹಮ್ಮದ್ ಸುಲೇಮಾನ್ ಬಂಧಿಸಲಾಗಿತ್ತು. ಮೊಹಮ್ಮದ್ ಸುಲೇಮಾನ್ ಉಗ್ರ ಸಂಘಟನೆ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ. ಇದರಲ್ಲಿ ಸೈಯದ್ ಸಮೀರ್ 20ರ ಹರೆಯದ ಬಿಸಿಎ ವಿದ್ಯಾರ್ಥಿ. ಬಳ್ಳಾರಿಯ ಕಾಲೇಜೊಂದರಲ್ಲಿ ಬಿಸಿಎ 3ನೇ ಸೆಮಿಸ್ಟರ್ ಓದುತ್ತಿದ್ದಾನೆ. ಮುಸ್ಲಿಂ ಬಹುಪತ್ನಿತ್ವ ಬಗ್ಗೆ ಮತ್ತು ಮೊಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿದ ಉಪನ್ಯಾಸಕರ ವಿರುದ್ಧ ಸಮೀರ್ ತಿರುಗಿ ಬಿದ್ದಿದ್ದ. ಇದನ್ನೂ ಓದಿ: ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ಪ್ರಾಧ್ಯಾಪಕರ ವಿರುದ್ಧ ಕಳೆದ ತಿಂಗಳು ಈತ ದೊಡ್ಡ ಪ್ರತಿಭಟನೆ ಮಾಡಿದ್ದ. ಕಾಲೇಜು ಮುಂದೆ ಅಷ್ಟೇ ಅಲ್ಲದೇ ಎಸ್‌ಪಿ ಕಚೇರಿ ಮುಂದೆ ಹೈಡ್ರಾಮಾ ಮಾಡಿದ್ದ. ನೂರಾರು ಜನರನ್ನು ಸೇರಿಸಿ ಅಂದು ರಾತ್ರಿ ಕೌಲ್ ಬಜಾರ್ ಠಾಣೆ ಮುಂದೆ ಪ್ರತಿಭಟನೆ ಮಾಡಿದ್ದ. ಇವನ ವರ್ತನೆಯಿಂದ ಅಂದು ಪೊಲೀಸರೇ ಒಂದು ಕ್ಷಣ ಹೌಹಾರಿದ್ದರು. ಆದರೆ ಇದೀಗ ಎನ್‌ಐಎ ಅಧಿಕಾರಿಗಳು ಬಂಧಿಸಿರೋದು ಪೊಲೀಸರಿಗೂ ಅಚ್ಚರಿ ಮೂಡಿಸಿದೆ.

    ಬಳ್ಳಾರಿಯ ಜಾಗೃತಿ ನಗರ ನಿವಾಸಿಯಾಗಿರುವ ಸಮೀರ್ ತಂದೆ-ತಾಯಿಯವರು ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮತ್ತೊಬ್ಬ ಆರೋಪಿ ಮೊಹಮ್ಮದ್ ಸುಲೇಮಾನ್ ನಿಷೇಧಿತ ಸಂಘಟನೆ ಪಿಎಫ್‌ಐನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ. ಈತ ಕೌಲ್ ಬಜಾರ್ ಮುಖ್ಯ ರಸ್ತೆಯಲ್ಲಿ ಬಟ್ಟೆ ಅಂಗಡಿ ವ್ಯಾಪಾರ ಮಾಡುತ್ತಿದ್ದ. ಸುಲೇಮಾನ್ ಸಹಚರನಾಗಿ ಕೆಲಸ ಮಾಡುತ್ತಿದ್ದ ಸಮೀರ್ ವಿಚಾರಣೆಗೆ ಎನ್‌ಐಎ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಉಪರಾಷ್ಟ್ರಪತಿಗೆ ಅವಮಾನಿಸಿದ್ದನ್ನು ನೋಡಿ ದಿಗ್ಭ್ರಮೆಗೊಂಡಿದ್ದೇನೆ: ಮುರ್ಮು ಬೇಸರ

  • ಬೆಂಗ್ಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಸೀಜ್ – ಎನ್‍ಐಎಯಿಂದ 8 ಮಂದಿ ಅರೆಸ್ಟ್

    ಬೆಂಗ್ಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಸೀಜ್ – ಎನ್‍ಐಎಯಿಂದ 8 ಮಂದಿ ಅರೆಸ್ಟ್

    ಬೆಂಗಳೂರು: ಮನೆಯೊಂದರಲ್ಲಿ ಸಂಗ್ರಹಿಸಿದ್ದ ಸ್ಫೋಟಕ ತಯಾರಿಕೆಯಲ್ಲಿ ಬಳಸುವ ಸೋಡಿಯಂ ನೈಟ್ರೇಟ್‍ನ್ನು (Sodium Nitrate) ಎನ್‍ಐಎ (NIA) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸೋಡಿಯಂ ನೈಟ್ರೇಟ್‍ನ್ನು ಅಡಗಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

    ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ನಗರದ ಸಂಪತ್ ಎಂಬವರ ಮನೆಯಲ್ಲಿ ಬಾಡಿಗೆಗಿದ್ದ ಶಮಿವುಲ್ಲಾ ಹಾಗೂ ಅಲ್ತಾಫ್, ಮಿಸ್ಬಾ ಹಾಗೂ ಮುನಿರುದ್ದೀನ್ ಸೋಡಿಯಂ ನೈಟ್ರೇಟ್ ಸಂಗ್ರಹಿಸಿದ್ದರು ಎಂದು ತಿಳಿದು ಬಂದಿದೆ. ಶಮಿವುಲ್ಲಾ ಎಲ್‍ಎಲ್‍ಬಿ ಪದವೀಧರನಾಗಿದ್ದು, ಅಲ್ತಾಫ್ ಪೀಣ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮುನಿರುದ್ದೀನ್ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದು, ಮಿಸ್ಬಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇವರನ್ನು ಎನ್‍ಐಎ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: 5000 ಅಮೆರಿಕನ್‌ ಡೈಮಂಡ್‌, ಬೆಳ್ಳಿಯಲ್ಲಿ ಅರಳಿದ ʼಅಯೋಧ್ಯೆ ರಾಮಮಂದಿರʼ ನೆಕ್ಲೆಸ್‌

    ಮುಂಜಾನೆಯಿಂದಲೇ ಬಳ್ಳಾರಿಯಲ್ಲಿ ಕಾರ್ಯಾಚರಣೆ ಆರಂಭಿಸಿದ್ದ 9 ಎನ್‍ಐಎ ತಂಡಗಳು ನಿಷೇಧಿತ ಪಿಎಫ್‍ಐನ 7 ಮಂದಿಯ ಮನೆಗಳ ಮೇಲೆ ದಾಳಿ ನಡೆಸಿದೆ. ಬಳ್ಳಾರಿಯ ಮಾಜಿ ಪಿಎಫ್‍ಐ ಪ್ರಧಾನ ಕಾರ್ಯದರ್ಶಿ ಸುಲೇಮಾನ್, ನಿಖಿಲ್ @ ಸೂಫಿಯಾನ್, ಇಜಾಜ್ ಅಹ್ಮದ್, ತಬ್ರೇಜ್ ಮತ್ತು ಮುಜಾಮಿಲ್ ಎಂಬವರ ಮನೆ ಮೇಲೆ ಸಹ ದಾಳಿ ನಡೆಸಿದ್ದು, 8 ಜನರನ್ನು ಬಂಧಿಸಲಾಗಿದೆ.

    ಸುಲೇಮಾನ್ ಅಫ್ಘಾನಿಸ್ತಾನಕ್ಕೆ ಹೋಗಿ ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡಲು ಯೋಜನೆ ರೂಪಿಸಿರುವುದು ತನಿಖೆ ವೇಳೆ ತಿಳಿದು ಬಂದಿದೆ.

    ಇತ್ತೀಚೆಗೆ ಹೈದ್ರಬಾದ್‍ನಲ್ಲಿ ಯುಎಪಿಎ ಹಾಗೂ ಕ್ರಿಮಿನಲ್ ಸಂಚಿನ ಪ್ರಕರಣ ದಾಖಲಿಸಿದ್ದ ಎನ್‍ಐಎ ಅಧಿಕಾರಿಗಳು ಶಂಕಿತರನ್ನು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಪ್ರಕರಣದಲ್ಲಿ ರಾಜ್ಯದ ಲಿಂಕ್ ಇರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ದೇಶಾದ್ಯಂತ ಎನ್‍ಐಎ ಅಧಿಕಾರಿಗಳು 41 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ – ಶಾಲೆಗೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಆರ್‌.ಅಶೋಕ್‌ ಭೇಟಿ

  • ಐಸಿಸ್ ಉಗ್ರರ ನಂಟು ಪ್ರಕರಣ – ಬೆಂಗ್ಳೂರು ಸೇರಿದಂತೆ 4 ರಾಜ್ಯಗಳ 19 ಕಡೆ NIA ದಾಳಿ

    ಐಸಿಸ್ ಉಗ್ರರ ನಂಟು ಪ್ರಕರಣ – ಬೆಂಗ್ಳೂರು ಸೇರಿದಂತೆ 4 ರಾಜ್ಯಗಳ 19 ಕಡೆ NIA ದಾಳಿ

    – ರಾಜ್ಯದಲ್ಲಿ ಬೆಂಗಳೂರು, ಬಳ್ಳಾರಿ ಜಿಲ್ಲೆಗಳಲ್ಲಿ ಎನ್‌ಐಎ ಭರ್ಜರಿ ಭೇಟೆ

    ಬೆಂಗಳೂರು: ಐಸಿಸ್‌ ಉಗ್ರರ ಜೊತೆಗಿನ ನಂಟು ಪ್ರಕರಣಕ್ಕೆ (ISIS Network Case) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕದ ಬೆಂಗಳೂರು (Bengaluru) ಸೇರಿದಂತೆ 4 ರಾಜ್ಯಗಳಲ್ಲಿ 4 ರಾಜ್ಯಗಳಾದ್ಯಂತ ಸುಮಾರು 20 ಸ್ಥಳಗಳಲ್ಲಿ ದಾಳಿ ನಡೆಸಿದೆ.

    ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್‌ನ 4, ಮಹಾರಾಷ್ಟ್ರದ 3 ಮತ್ತು ದೆಹಲಿಯ 1 ಸ್ಥಳಗಳಲ್ಲಿ ಅಧಿಕಾರಿಗಳ ತಂಡ ದಾಳಿ (NIA Raid) ನಡೆಸಿದೆ. ಕರ್ನಾಟಕದಲ್ಲಿ ಬೆಂಗಳೂರಿನ ಆರ್‌.ಸಿ ನಗರ, ಹೆಬ್ಬಾಳ, ಪುಲಿಕೇಶಿ ನಗರ, ಶಿವಾಜಿ ನಗರ, ಜೆ.ಸಿ. ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ. ಬಳ್ಳಾರಿಯಲ್ಲಿಯೂ ಒಟ್ಟು 9 ತಂಡಗಳು ಕಾರ್ಯಾಚರಣೆ ನಡೆಸಿವೆ.

    ಸೋಮವಾರ (ಇಂದು) ಮುಂಜಾನೆಯಿಂದಲೇ ಬಳ್ಳಾರಿಯಲ್ಲಿ ಎನ್‌ಐಎ ಕಾರ್ಯಾಚರಣೆ ಭರ್ಜರಿಯಾಗಿ ಸಾಗಿದೆ. ನಿಷೇಧಿತ ಪಿಎಫ್‌ಐನ 7 ಮಂದಿಯ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಬಳ್ಳಾರಿಯ ಶಮೀವುಲ್ಲಾ, ಅಜಾಜ್ ಅಹಮದ್, ಸುಲೇಮಾನ್, ತಬ್ರೇಜ್, ನಿಖಿಲ್ ಅಲಿಯಾಸ್‌ ಸೂಫಿಯಾನ್, ಮುಜಾಮಿಲ್ ಎಂಬವರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ ಕೇಸ್‌ – ತನಿಖೆಗೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ವಿಶೇಷ ಸೆಲ್‌

    ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದ ಬಳ್ಳಾರಿಯ ಶಮಿವುಲ್ಲಾನ ಬಳಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್‌ ಅನ್ನೂ ವಶಪಡಿಸಿಕೊಳ್ಳಲಾಗಿದೆ. ಅಫ್ಘಾನಿಸ್ತಾನಕ್ಕೆ ಹೋಗಿ ಕಾನೂನುಬಾಹಿರ ಚಟುವಟಿಕೆ ನಡೆಸಲು ಯತ್ನಿಸಿದ್ದಾರೆ ಎಂಬ ಅನುಮಾನದ ಮೇರೆಗೆ ಪಿಎಫ್‌ಐ ಮಾಜಿ ಪ್ರಧಾನ ಕಾರ್ಯದರ್ಶಿ ಸುಲೇಮಾನ್ ಮನೆಯಲ್ಲೂ ಅಧಿಕಾರಿಗಳು ಶೋಧ ನಡೆಸಿದ್ದಾರೆ.

    ಇತ್ತೀಚೆಗೆ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಹಾಗೂ ಯುವಕರನ್ನು ಐಸಿಸ್‌ ಭಯೋತ್ಪಾದನಾ ಸಂಘಟನೆ ಸೇರಿಸುತ್ತಿದ್ದ ಮಾಹಿತಿ ಮೇರೆಗೆ ಎನ್ಐಎ ಅಧಿಕಾರಿಗಳು ದೇಶದ 40 ಕಡೆ ದಾಳಿ ನಡೆಸಿದ್ದರು.‌ ಬೆಂಗಳೂರಿನಲ್ಲಿಯೂ ದಾಳಿ ನಡೆಸಿ 15 ಮಂದಿಯನ್ನ ಬಂಧಿಸಲಾಗಿತ್ತು. ಈ ಪೈಕಿ ಓರ್ವ ಐಸಿಸ್ ಮಾಡ್ಯೂಲ್‌ನ ನಾಯಕನಾಗಿದ್ದ. ಹೊಸದಾಗಿ ಸೇರ್ಪಡೆಗೊಂಡವರಿಗೆ ನಿಷ್ಠೆಯ ಪ್ರಮಾಣ ವಚನ ಬೋಧಿಸುತ್ತಿದ್ದ ಎಂದು ಮೂಲಗಳೂ ತಿಳಿಸಿವೆ.

    ದಾಳಿಯ ಸಮಯದಲ್ಲಿ, ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರಗಳು, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದನ್ನೂ ಓದಿ: ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

  • ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

    ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

    ಬೆಂಗಳೂರು: ರಾಜಭವನಕ್ಕೆ (Raj Bhavan) ಬಾಂಬ್ ಬೆದರಿಕೆ (Bomb Threat) ಕರೆ ಬಂದಿದೆ. ಸೋಮವಾರ ರಾತ್ರಿ 11:30ರ ವೇಳೆಗೆ ಯಾರೋ ದುಷ್ಕರ್ಮಿಗಳು ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಿದ್ದಾರೆ.

    ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಬೆದರಿಕೆ ಜಾಡು ಹಿಡಿದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬಾಂಬ್ ಬೆದರಿಕೆ ಕರೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ತನಿಖೆಗೆ ಹಾಜರಾಗದೇ ಶ್ರೀಕಿ ಕಳ್ಳಾಟ

    ಈ ಕಿಡಿಗೇಡಿಗಳು ಎನ್‌ಐಎ (NIA) ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿದ್ದು, ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಎನ್‌ಐಎ ಅಧಿಕಾರಿಗಳಿಗೆ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕೇಂದ್ರ ವಿಭಾಗದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ

  • ಬೆಂಗಳೂರು, ಮಹಾರಾಷ್ಟ್ರದಲ್ಲಿ ಎನ್‌ಐಎ ದಾಳಿ, 15 ಮಂದಿ ಅರೆಸ್ಟ್‌ – 51 ಹಮಾಸ್‌ ಧ್ವಜ, ಪಿಸ್ತೂಲ್‌, ಗನ್‌, ಮಾರಕಾಸ್ತ್ರಗಳು ಜಪ್ತಿ

    ಬೆಂಗಳೂರು, ಮಹಾರಾಷ್ಟ್ರದಲ್ಲಿ ಎನ್‌ಐಎ ದಾಳಿ, 15 ಮಂದಿ ಅರೆಸ್ಟ್‌ – 51 ಹಮಾಸ್‌ ಧ್ವಜ, ಪಿಸ್ತೂಲ್‌, ಗನ್‌, ಮಾರಕಾಸ್ತ್ರಗಳು ಜಪ್ತಿ

    ನವದೆಹಲಿ:   ಬೆಂಗಳೂರು (Bengaluru) ಮತ್ತು  ಮಹಾರಾಷ್ಟ್ರ (Maharashtra) ಹಲವೆಡೆ  ರಾಷ್ಟ್ರೀಯ ತನಿಖಾ ದಳ (NIA) ದಾಳಿ ನಡೆಸಿದ ವೇಳೆ 51 ಹಮಾಸ್‌ ಧ್ವಜಗಳು (Hamas Flag) ಪತ್ತೆಯಾಗಿದೆ.

    ದಾಳಿ ವೇಳೆ ಪತ್ತೆಯಾದ 68.03 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಒಂದು ಪಿಸ್ತೂಲ್, ಎರಡು ಏರ್ ಗನ್, ಎಂಟು ಚಾಕುಗಳು, ಎರಡು ಲ್ಯಾಪ್‌ಟಾಪ್, ಆರು ಹಾರ್ಡ್ ಡಿಸ್ಕ್, ಮೂರು ಸಿಡಿಗಳು, 38 ಮೊಬೈಲ್, ಹತ್ತು ಮ್ಯಾಗಜೀನ್ ಪುಸ್ತಕಗಳನ್ನು ಮಹಾರಾಷ್ಟ್ರದಲ್ಲಿ ಎನ್‌ಐಎ ವಶ ಪಡಿಸಿಕೊಂಡಿದೆ.

    ಬೆಂಗಳೂರಿನ ಪುಲಿಕೇಶಿನಗರ, ಮಹಾರಾಷ್ಟ್ರದ ಪಡ್ಗಾ, ಬೊರಿವಿಲಿ, ಥಾಣೆ, ಮೀರಾ ರಸ್ತೆ ಹಾಗೂ ಪುಣೆ ಸೇರಿದಂತೆ 44 ಕಡೆ ಎನ್‌ಐಎ ದಾಳಿ ನಡೆಸಿ 15 ಮಂದಿಯನ್ನು ಬಂಧಿಸಿದೆ.

    ಬಂಧಿತರು ವಿದೇಶಿ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿರುವುದು ತಿಳಿದು ಬಂದಿದೆ. ದೇಶದ ಯುವಕರಿಗೆ ಐಸಿಸ್‌ ಪರ ಪ್ರಚಾರ ನಡೆಸಿ ದೇಶದಲ್ಲಿ ಶಾಂತಿ ಕದಡಲು ಪ್ರಯತ್ನ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

    ಆದಿಲ್ ಖೋತ್ ಎಂಬಾತನ ಮನೆಯಲ್ಲಿ ಹಮಾಸ್‌ ಧ್ವಜಗಳು ಪತ್ತೆಯಾದರೆ ಫಿರೋಜ್ ದಸ್ತಗೀರ್ ಖುವಾನ್, ರಾಜೀಲ್ ಅಬ್ದುಲ್, ಜಿಶಾನದ ಅಝಾಜ್, ಮುಕ್ಬುಲ್ ನಚಾಮ್ ಎಂಬುವರ ಮನೆಯಲ್ಲಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳು ಸಿಕ್ಕಿವೆ.

    ಸೈಫ್ ಅತೀಕ್ ನಚಾಮ್, ರೇಹಾನದ ಅಶ್ಫಾಕ್ ಸೂಸೆ ಹಾಗೂ ಅತೀಫ್ ನಾಸಿರ್ ಮುಲ್ಲಾ ಎಂಬುವರ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ.

    ಮಹಾರಾಷ್ಟ್ರದ ಸುಳಿವಿನ ಆಧಾರದ ಮೇಲೆ ಬೆಂಗಳೂರಿನಲ್ಲಿ ಎನ್‌ಐಎ ಅಲಿ ಅಬ್ಬಾಸ್ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿತ್ತು. ಎನ್ಐಎ ಪರಿಶೀಲನೆ ವೇಳೆ ಅಲಿ ಅಬ್ಬಾಸ್ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ. ಸದ್ಯ ಮನೆಯಲ್ಲೇ ಅಲಿ ಅಬ್ಬಾಸ್ ವಿಚಾರಣೆ ನಡೆಸಿ ಎನ್ಐಎ ಅಧಿಕಾರಿಗಳು ತೆರಳಿದ್ದಾರೆ.

  • ದೇಶದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಸಂಚು ಆರೋಪ; 15 ಮಂದಿ ಐಸಿಸ್ ಶಂಕಿತರ ಬಂಧನ

    ದೇಶದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಸಂಚು ಆರೋಪ; 15 ಮಂದಿ ಐಸಿಸ್ ಶಂಕಿತರ ಬಂಧನ

    – ಬೆಂಗಳೂರಲ್ಲಿ ಶಂಕಿತನ ಮನೆ ಪರಿಶೀಲಿಸಿದ ಎನ್‌ಐಎ

    ಬೆಂಗಳೂರು: ದೇಶದಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಶಂಕೆ ಮೇಲೆ ಎನ್‌ಐಎ (NIA) ಅಧಿಕಾರಿಗಳು ಬೆಂಗಳೂರು ಸೇರಿದಂತೆ ದೇಶದ 44 ಕಡೆ ಶನಿವಾರ ದಾಳಿ ನಡೆಸಿದರು. ಈ ವೇಳೆ ಶಂಕಿತ 15 ಮಂದಿಯನ್ನು ಬಂಧಿಸಿದ್ದಾರೆ.

    ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ಬೆಂಗಳೂರು (Bengaluru), ಕರ್ನಾಟಕ, ಪುಣೆ, ಮಹಾರಾಷ್ಟ್ರ ಸೇರಿದಂತೆ ದೇಶದ್ಯಂತ ಒಟ್ಟು 44 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಐಸಿಸ್ ಉಗ್ರರೊಂದಿಗೆ ನಂಟು ಹೊಂದಿದ್ದರ ಶಂಕೆಯ ಜಾಡು ಹಿಡಿದಿದ್ದ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರುವ ಶಂಕಿತನ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದಾರೆ. ಮುಂಜಾನೆ ನಾಲ್ಕು ಗಂಟೆಗೆ ಶಂಕಿತನ ಮನೆಗೆ ಭೇಟಿ ಕೊಟ್ಟಿದ್ದ ಎನ್‌ಐಎ ಅಧಿಕಾರಿಗಳ ತಂಡ ಸತತವಾಗಿ 9 ಗಂಟೆಗಳ ಕಾಲ ನಿರಂತರವಾಗಿ ಶೋಧ ಕಾರ್ಯ ನಡೆಸಿದ್ದರು. ಆತನಿಗೆ ಸೇರಿದ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    ಮುಂಬೈ ಮೂಲದ ಶಂಕಿತ ವ್ಯಕ್ತಿ ಮೂಲತಃ ವೃತ್ತಿಯಲ್ಲಿ ಟೆಕ್ಕಿ. ಈತ ಮುಂಬೈನಿಂದ ಕಳೆದ ಐದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಟ್ಯಾನರಿ ರಸ್ತೆಯಲ್ಲಿ ಪ್ಲಾಟ್ ಖರೀದಿಸಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದ. ಎನ್‌ಐಎ ಅಧಿಕಾರಿಗಳು ಜುಲೈನಲ್ಲಿ ಪುಣೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನ ಬಂಧನ ಮಾಡಿದ್ದರು. ಅಮೀರ್ ಅಬ್ದುಲ್, ಮೊಹಮ್ಮದ್ ಎಂಬವರನ್ನ ಬಂಧನ ಮಾಡಿ ತನಿಖೆ ಮಾಡಿದಾಗ ಬೆಂಗಳೂರಿನಲ್ಲಿ ಈತನು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಬಂಧವಾಗಿರೋ ಶಂಕಿತರ ಜೊತೆ ಸಂಪರ್ಕದಲ್ಲಿರೋ ಬಗ್ಗೆ ಮಾಹಿತಿ ತಿಳಿದು ಬಂತು. ಹೀಗಾಗಿ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಶಂಕಿತರ ವ್ಯಕ್ತಿ ಕಳೆದ ಐದು ವರ್ಷದಿಂದ ಟ್ಯಾನರಿ ರಸ್ತೆಯ ಅಪಾರ್ಟ್ಮೆಂಟ್‌ನಲ್ಲಿ ವಾಶವಾಗಿದ್ದ. ಅಕ್ಕಪಕ್ಕದವರ ಜೊತೆ ಅಷ್ಟು ಅನ್ಯೂನ್ಯತೆಯಿಂದ ಇರುತ್ತಿರಲಿಲ್ಲ. ನಿತ್ಯ ಸಂಜೆ ಸಮಯಕ್ಕೆ ಮಗಳಿಗೆ ವಾಕ್ ಮಾಡಿಸುವಾಗ ಹಾಯ್ ಬಾಯ್ ಬಿಟ್ಟರೆ ಬೇರೆ ಮಾತನಾಡುತ್ತಿರಲಿಲ್ಲ. ಪತ್ನಿ ನ್ಯೂಟ್ರಿ ಕೇರ್ ನಡೆಸುತ್ತಿದ್ದರಿಂದ ನ್ಯೂಟ್ರಿ ಕೇರ್ ಸೆಂಟರ್‌ಗೆ ಜನರು ಬಂದು ಹೋಗುತ್ತಿದ್ದರು. ಉಳಿದಂತೆ ಸೌಮ್ಯ ಸ್ವಭಾವದವರ ರೀತಿಯಲ್ಲಿ ಈತ ನಡೆದುಕೊಳ್ಳುತ್ತಿದ್ದ ಎಂದು ಶಂಕಿತ ವ್ಯಕ್ತಿಯ ನಡವಳಿಕೆಯ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ಐಟಿ ದಾಳಿಯಲ್ಲಿ 290 ಕೋಟಿ ರೂ. ಜಪ್ತಿ – ಎಣಿಸಿದಷ್ಟು ಹೆಚ್ಚುತ್ತಲೇ ಇದೆ ಹಣ

    ಸದ್ಯ ಶಂಕಿತನ ಬಗ್ಗೆ ಎನ್‌ಐಎ ಅಧಿಕಾರಿಗಳಿಗೆ ಇರುವ ಮಾಹಿತಿ ಆಧಾರದ ಮೇಲೆ ತನಿಖೆ ಮಾಡಿ ಮೊಬೈಲ್ ವಶಕ್ಕೆ ಪಡೆದು ಹೋಗಿದ್ದು ತನಿಖೆ ಮುಂದುವರೆಸಿದ್ದಾರೆ. ತನಿಖೆ ಮುಗಿಯುವ ತನಕ ಯಾವುದೇ ಕಾರಣಕ್ಕೂ ವಿದೇಶಗಳಿಗೆ ಹೋಗದಂತೆ ಎಚ್ಚರಿಸಿ ತನಿಖೆಗೆ ಹಾಜರಾಗಲು ನೋಟಿಸ್ ಕೊಟ್ಟು ಹೋಗಿದ್ದಾರೆ.

    ಮಹಾರಾಷ್ಟ್ರದ ಬೊರಿವಿಲಿ, ಪಡ್ಗಾ, ಮೀರಾ ರಸ್ತೆ, ಪುಣೆ ಹಾಗೂ ಕರ್ನಾಟಕದ ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪಾರ ಪ್ರಮಾಣದ, ಲೆಕ್ಕವಿಲ್ಲದ ಹಣ ಪತ್ತೆಯಾಗಿದೆ. ಭಯೋತ್ಪಾದನೆಗೆ ಪ್ರಚೋದನೆ, ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರ ಬಂಧಿಸಲಾಗಿದೆ. ದಾಳಿ ವೇಳೆ ಶಸ್ತ್ರಾಸ್ತ್ರಗಳು, ಮಾರಕಾಸ್ತ್ರಗಳು ಪತ್ತೆಯಾಗಿವೆ. ಸ್ಮಾರ್ಟ್ ಫೋನ್‌ಗಳು, ಡಿಜಿಟಲ್ ಡಿವೈಸಸ್ ಸೀಜ್ ಮಾಡಲಾಗಿದೆ. ಶಂಕಿತರು, ವಿದೇಶಿ ಹ್ಯಾಂಡ್ಲರ್‌ಗಳ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಐಇಡಿ ತಯಾರಿ, ಶಾಂತಿ ಕದಡುವ ಕೆಲಸದಲ್ಲಿ ಭಾಗಿಯಾಗಿದ್ದರು ಎಂಬ ಆರೋಪವಿದೆ.

  • ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    – ಎನ್‌ಐಎಯಿಂದ 13 ಜನರ ಬಂಧನ

    ನವದೆಹಲಿ: ಐಸಿಸ್ ಭಯೋತ್ಪಾದನೆ ಮಾಡ್ಯೂಲ್ ಪ್ರಕರಣದಲ್ಲಿ ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕ (Karnataka), ಮಹಾರಾಷ್ಟ್ರದ (Maharashtra) ಹಲವು ಸ್ಥಳಗಳಲ್ಲಿ ಎನ್‌ಐಎ (NIA) ಭಯೋತ್ಪಾದನಾ ವಿರೋಧಿ ದಾಳಿ ನಡೆಸಿದೆ.

    ಶನಿವಾರ ಬೆಳ್ಳಂಬೆಳಗ್ಗೆ ರಾಜಧಾನಿ ಬೆಂಗಳೂರಿನ ಪ್ರೇಜರ್ ಟೌನ್‌ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ ಎನ್‌ಐಎ ಪರಿಶೀಲನೆ ಕೈಗೊಂಡಿದೆ. ಐಸಿಸ್‌ (ISIS) ಉಗ್ರರ ಜೊತೆ ಸಂಪರ್ಕದಲ್ಲಿರುವ ಹಾಗೂ ವಾಸವಾಗಿರುವ ಶಂಕೆ ಹಿನ್ನೆಲೆ ಈ ದಾಳಿ ನಡೆದಿದೆ. ಇದನ್ನೂ ಓದಿ: ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡ್ತಿದ್ದಾಗ ಮಹಿಳೆಗೆ ಗುಂಡೇಟು – ಸ್ಥಿತಿ ಗಂಭೀರ

    ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಕಡೆ ಶೋಧ ನಡೆದಿದೆ. ಪುಣೆಯಲ್ಲಿ ಎರಡು ಮತ್ತು ಮೀರಾ ಭಯಂದರ್‌ನಲ್ಲಿ ಒಂದು ಕಡೆ ದಾಳಿ ನಡೆದಿದೆ.

    ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಾಗತಿಕ ನಾಯಕರ ಪಟ್ಟಿ ರಿಲೀಸ್‌ – ಮೋದಿಯೇ ನಂಬರ್‌ 1

  • ದೇಶಾದ್ಯಂತ ಸಂಚಲನ ಮೂಡಿಸಿದ್ದ ನಕಲಿ ನೋಟ್ ಹಾವಳಿ ಪ್ರಕರಣ – ಬಳ್ಳಾರಿ ಯುವಕನ ಬಂಧಿಸಿದ ಎನ್‍ಐಎ

    ದೇಶಾದ್ಯಂತ ಸಂಚಲನ ಮೂಡಿಸಿದ್ದ ನಕಲಿ ನೋಟ್ ಹಾವಳಿ ಪ್ರಕರಣ – ಬಳ್ಳಾರಿ ಯುವಕನ ಬಂಧಿಸಿದ ಎನ್‍ಐಎ

    ಬಳ್ಳಾರಿ: ದೇಶಾದ್ಯಾಂತ ಸಂಚಲನ ಮೂಡಿಸಿದ್ದ ನಕಲಿ ನೋಟ್ (Fake Note) ಮುದ್ರಣ ಮತ್ತು ಚಲಾವಣೆ ಪ್ರಕರಣದಲ್ಲಿ ಎನ್‍ಐಎ (NIA) ತಂಡ ಬಳ್ಳಾರಿ ಯುವಕ ಸೇರಿದಂತೆ ವಿವಿಧ ರಾಜ್ಯದ ನಾಲ್ವರನ್ನು ಬಂಧಿಸಿದೆ.

    ಬಳ್ಳಾರಿಯಲ್ಲಿ (Ballari) ಬಂಧಿಸಲಾದ ಆರೋಪಿಯನ್ನು ಗೌತಮ ನಗರದ ಮಹೇಂದ್ರ (19) ಎಂದು ಗುರುತಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಉತ್ತರ ಪ್ರದೇಶದ ಮೂಲದ ಕಿಂಗ್‍ಪಿನ್‍ಗಳಾದ ರಾಹುಲ್ ತಾನಜಿ ಪಾಟೀಲ್, ಮಹಾರಾಷ್ಟ್ರದ ವಿವೇಕ್ ಠಾಕೂರ್, ಶಿವು ಪಾಟೀಲ್, ಬಿಹಾರದ ಶಶಿಭೂಷಣ್ ಎಂಬ ನಾಲ್ವರನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ಗಲಾಟೆ – ಬೈಕ್ ಅಡ್ಡಗಟ್ಟಿ ಚಿಕ್ಕಪ್ಪನನ್ನೇ ಪೆಟ್ರೋಲ್ ಸುರಿದು ಸುಟ್ಟ ಮಗ

    ಆರೋಪಿ ಮಹೇಂದ್ರನ ಮನೆಯಲ್ಲಿ 500 ರೂ. ಮುಖಬೆಲೆಯ ಅಚ್ಚಿನ ಮಾದರಿ ಮತ್ತು ಒಂದು ಮುದ್ರಣ ಯಂತ್ರವನ್ನು ಸೀಜ್ ಮಾಡಲಾಗಿದೆ. 10ನೇ ತರಗತಿಯವರೆಗೂ ಆಂಧ್ರದಲ್ಲಿ ವ್ಯಾಸಂಗ ಮಾಡಿದ್ದ ಮಹೇಂದ್ರ ಕಳೆದ ಎರಡು ವರ್ಷಗಳ ಹಿಂದೆ ಬಳ್ಳಾರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದ. ಯುವಕನ ಮನೆ ಪರಿಸ್ಥಿತಿ ಹಾಗೂ ಅಲ್ಲಿನ ವಾತಾವರಣ ನೋಡಿದರೆ ಯುವಕನಿಗೆ ಇಷ್ಟೊಂದು ದೊಡ್ಡ ಮಟ್ಟದ ಕಾಂಟ್ಯಾಕ್ಟ್ ಹೇಗೆ ಎಂಬುದು ಹಲವು ಶಂಕೆಗಳಿಗೆ ಕಾರಣವಾಗಿದೆ. ಆರೋಪಿ ಮಹೇಂದ್ರ ಕುಟುಂಬಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿದು ಬಂದಿದೆ.

    ಆರೋಪಿ ಮಹೇಂದ್ರನ ತಂದೆ ರಾಮಣ್ಣ ಕಳೆದ ಎಂಟು ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ತಾಯಿ ರಾಜೇಶ್ವರಿ ಮೂರು ಮಕ್ಕಳೊಂದಿಗೆ ಜನತಾ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಆರೋಪಿ ಕುಟುಂಬದ ಹಿರಿಯ ಮಗನಾಗಿದ್ದು, ಆತ ಒಮ್ಮೆಯೂ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ರಾಜ್ಯಗಳಿಗೆ ಹೋಗಿಲ್ಲ ಎನ್ನಲಾಗಿದೆ. ಆತನಿಗೆ ಪ್ರಮುಖ ಆರೋಪಿಗಳ ಪರಿಚಯ ಹೇಗೆ ಆಗಿದೆ ಎಂಬುದು ತಿಳಿದು ಬಂದಿಲ್ಲ. ಇದನ್ನೂ ಓದಿ: 6 ವರ್ಷದ ಬಾಲಕನಿಗೆ 11 ಕಡೆ ಕಚ್ಚಿ ಗಾಯಗೊಳಿಸಿದ ನಾಯಿ