Tag: NIA

  • ನಿಷೇಧಿತ PFI ನಾಯಕರಿಗೆ ಸಂಬಂಧಿಸಿದ ಕೇರಳದ 56 ಕಡೆ NIA ದಾಳಿ

    ನಿಷೇಧಿತ PFI ನಾಯಕರಿಗೆ ಸಂಬಂಧಿಸಿದ ಕೇರಳದ 56 ಕಡೆ NIA ದಾಳಿ

    ತಿರುವನಂತಪುರಂ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಾಯಕರು ಹಾಗೂ ಕಾರ್ಯಕರ್ತರಿಗೆ ಸಂಬಂಧಿಸಿದ ಕೇರಳದ (Kerala) 56 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ.

    ಕೇರಳದ ಹಲವಾರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಆಲಪ್ಪುಳ ಹಾಗೂ ಮಲಪ್ಪುರಂನಲ್ಲಿ ಎನ್‌ಐಎ ರೇಡ್ ನಡೆಸಿದೆ. ಎರ್ನಾಕುಲಂನಲ್ಲಿ 8 ಕಡೆ, ಅಲಪ್ಪುಳ ಹಾಗೂ ಮಲಪ್ಪುರಂನಲ್ಲಿ 4 ಕಡೆ ಹಾಗೂ ತಿರುವನಂತಪುರಂನಲ್ಲಿ 3 ಕಡೆ ಏಜೆನ್ಸಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ.

    ಎನ್‌ಐಎ ಇತ್ತೀಚೆಗೆ ಕೇರಳದ ನ್ಯಾಯಾಲಯಕ್ಕೆ ವರದಿಯೊಂದನ್ನು ಸಲ್ಲಿಸಿದೆ. ಪಿಎಫ್‌ಐನ ಹಿರಿಯ ಸದಸ್ಯರು ವಿವಿಧ ಮಾಧ್ಯಮಗಳ ಮೂಲಕ ಅಲ್ ಖೈದಾದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ರಹಸ್ಯ ಶಾಖೆಗಳನ್ನೂ ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ. ಇದನ್ನೂ ಓದಿ: ದಲಿತರ ನೀರಿನ ತೊಟ್ಟಿಗೆ ಮಲ ಸುರಿದು ವಿಕೃತಿ – ಹಲವರು ಅಸ್ವಸ್ಥ

    ಈ ಹಿಂದಿನ ಕಾರ್ಯಾಚರಣೆಗಳಲ್ಲಿ ಎನ್‌ಐಎ ಕೆಲ ಸಾಧನಗಳನ್ನು ವಶಪಡಿಸಿಕೊಂಡಿತ್ತು. ಈ ಸಾಧನಗಳನ್ನು ಪರೀಕ್ಷೆಗೊಳಪಡಿಸಿದಾಗ ಇವು ಪಿಎಫ್‌ಐನ ಹಿರಿಯ ಸದಸ್ಯರು ಅಲ್ ಖೈದಾ ಸದಸ್ಯರೊಂದಿಗೆ ಸಂವಹನ ನಡೆಸುವ ವಿಚಾರಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದೆ.

    ಕೆಲ ತಿಂಗಳ ಹಿಂದೆ ಕಟ್ಟುನಿಟ್ಟಾದ ಭಯೋತ್ಪಾದನೆ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ ಅಡಿಯಲ್ಲಿ, ಕೇಂದ್ರ ಸರ್ಕಾರ ಪಿಎಫ್‌ಐ ಅನ್ನು ನಿಷೇಧಿಸಿದೆ. ಐಎಸ್‌ನಂತಹ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಇದು ಸಂಪರ್ಕ ಹೊಂದಿರುವುದಾಗಿ ಆರೋಪ ಮಾಡಲಾಗಿತ್ತು. ಇದನ್ನೂ ಓದಿ: ಗ್ಯಾಂಬಿಯಾ ಬಳಿಕ ಈಗ ಉಜ್ಬೇಕಿಸ್ತಾನದಿಂದ ಆರೋಪ – 18 ಮಕ್ಕಳ ಸಾವಿಗೆ ಭಾರತದ ಸಿರಪ್ ಕಾರಣ

    Live Tv
    [brid partner=56869869 player=32851 video=960834 autoplay=true]

  • ನೂಪೂರ್‌ಗೆ ಬೆಂಬಲ ನೀಡಿದ್ದಕ್ಕೆ ತಬ್ಲೀಘಿ ಜಮಾತ್‌ನ ಮೂಲಭೂತವಾದಿಗಳಿಂದ ಔಷಧ ವ್ಯಾಪಾರಿಯ ಹತ್ಯೆ: ಎನ್‌ಐಎ

    ನೂಪೂರ್‌ಗೆ ಬೆಂಬಲ ನೀಡಿದ್ದಕ್ಕೆ ತಬ್ಲೀಘಿ ಜಮಾತ್‌ನ ಮೂಲಭೂತವಾದಿಗಳಿಂದ ಔಷಧ ವ್ಯಾಪಾರಿಯ ಹತ್ಯೆ: ಎನ್‌ಐಎ

    ಮುಂಬೈ: ಔಷಧ ವ್ಯಾಪಾರಿ ಉಮೇಶ್‌ ಪ್ರಹ್ಲಾದ್‌ ರಾವ್ ಕೊಲ್ಹೆ ಅವರನ್ನು ಸುನ್ನಿ ಇಸ್ಲಾಮಿಕ್ ಸಂಘಟನೆಯಾದ ತಬ್ಲೀಘಿ ಜಮಾತ್‌ನ(Tablighi Jamaat) ಮೂಲಭೂತವಾದಿ ಇಸ್ಲಾಮಿಸ್ಟ್‌ಗಳು ಹತ್ಯೆ ಮಾಡಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ(NIA) ಹೇಳಿದೆ.

    ಪೂರ್ವ ಮಹಾರಾಷ್ಟ್ರದ ಅಮರಾವತಿಯ(Amravati) ಔಷಧ ವ್ಯಾಪಾರಿ ಉಮೇಶ್‌ ಪ್ರಹ್ಲಾದರಾವ್ ಕೊಲ್ಹೆ(54) ಅವರ ಹತ್ಯೆಯ ತನಿಖೆ ನಡೆಸಿದ ಎನ್‌ಐಎ 11 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಬಿಜೆಪಿ ವಕ್ತಾರೆ ನೂಪೂರ್‌ ಶರ್ಮಾ ಅವರನ್ನು ಬೆಂಬಲಿಸಿ ಉಮೇಶ್‌ ಕೊಲ್ಹೆ ವಾಟ್ಸಪ್‌ನಲ್ಲಿ ಸ್ಟೇಟಸ್‌ ಹಾಕಿದ್ದರು. ಈ ಸ್ಟೇಟಸ್‌ ನೋಡಿ ನಮ್ಮ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ತಿಳಿದು ಆರೋಪಿಗಳು ಹತ್ಯೆ ಮಾಡಿದ್ದಾರೆ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

    ಉಮೇಶ್ ಕೊಲ್ಹೆ ಜೂನ್ 21 ರಂದು ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಮೂವರು ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದರು. ಇದನ್ನೂ ಓದಿ: ನನ್ನ ಪಾಲಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕಸ: ನಿರ್ದೇಶಕ ಸಯಿದ್ ಅಖ್ತರ್

    ಪ್ರವಾದಿಗೆ ಅವಮಾನ ಮಾಡಿದ್ದಕ್ಕೆ ಆರೋಪಿಗಳು ಪ್ರತೀಕಾರಕ್ಕೆ ತೀರಿಸಲು ಪುತ್ರನ ಎದುರುಗಡೆಯೇ ಬರ್ಬರವಾಗಿ ಹತ್ಯೆ ಮಾಡಿದ್ದರು. ಎಲ್ಲಾ ಆರೋಪಿಗಳು ತಬ್ಲೀಘಿ ಜಮಾತ್‌ ಸಂಘಟನೆಯ ಸದಸ್ಯರಾಗಿದ್ದರು. ಈ ಕೃತ್ಯದ ಮಾಸ್ಟರ್‌ ಮೈಂಡ್‌ ತಬ್ಲಿಘಿ ಜಮಾತ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದ ಎಂದು ಎನ್‌ಐಎ ಹೇಳಿದೆ.

    ಇದು ಸಾಮಾನ್ಯ ಕೊಲೆಯಲ್ಲ. ಧಾರ್ಮಿಕ ಮೂಲಭೂತವಾದವನ್ನು ಬೆಳೆಸಿಕೊಂಡ ಮುಸ್ಲಿಂ ಯುವಕರು ಜನರಿಗೆ ಭಯ ಮಾಡಿಸಲು ಎಸಗಿದ ಈ ಕ್ರಿಮಿನಲ್‌ ಪಿತೂರಿ ಭಯೋತ್ಪಾದನಾ ಕೃತ್ಯಕ್ಕೆ ಸಮವಾಗಿದೆ. ಈ ಕೃತ್ಯದ ಬಳಿಕ ಆರೋಪಿಗಳು ಸಂಭ್ರಮಿಸಿದ್ದರು ಎಂದು ಉಲ್ಲೇಖಿಸಿದೆ.

    ಸೌದಿ ಸರ್ಕಾರದಿಂದ ನಿಷೇಧ:
    ಸೌದಿ ಅರೇಬಿಯಾ ಸರ್ಕಾರ ಸುನ್ನಿ ಇಸ್ಲಾಮಿಕ್ ಸಂಘಟನೆಯಾಗಿರುವ ತಬ್ಲಿಘಿ ಜಮಾತ್ ಅನ್ನು ನಿಷೇಧಿಸಿದೆ. ಈ ಸಂಘಟನೆ ಭಯೋತ್ಪಾದನೆ ಚಟುವಟಿಕೆಗಳಿಗೆ ಹೆಬ್ಬಾಗಿಲು ಎಂದಿರುವ ಸರ್ಕಾರ ಈ ಸಂಘಟನೆಯಿಂದ ದೂರ ಇರುವಂತೆ ಪ್ರಜೆಗಳಿಗೆ 2021ರ ಡಿಸೆಂಬರ್‌ನಲ್ಲಿ ಸೂಚಿಸಿತ್ತು.

    ತಬ್ಲಿಘಿಗಳು ಯಾರು?
    ಬ್ರಿಟಿಷರ ಅವಧಿಯಲ್ಲಿ 1926 ರಲ್ಲಿ ಭಾರತದಲ್ಲಿ ಹುಟ್ಟಿಕೊಂಡ ತಬ್ಲಿಘಿ ಜಮಾತ್ ಸುನ್ನಿ ಇಸ್ಲಾಮಿಕ್ ಮಿಷನರಿ ಸಂಘಟನೆಯಾಗಿದೆ. ಮುಸ್ಲಿಂ ಸಂಪ್ರದಾಯ, ಆಚರಣೆ, ಉಡುಪುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ಪ್ರತಿಪಾದಿಸುತ್ತದೆ. ಜಗತ್ತಿನಾದ್ಯಂತ 35 ರಿಂದ 40 ಕೋಟಿ ಅನುಯಾಯಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ರಾಜಕೀಯ ಚಟುವಟಿಕೆಯಿಂದ ದೂರ ಇದ್ದು ಧರ್ಮ ಪ್ರಚಾರ ಮಾತ್ರ ನಮ್ಮ ಕೆಲಸ ಎಂದು ಸಂಘಟನೆ ಹೇಳಿಕೊಳ್ಳುತ್ತದೆ.‌

    Live Tv
    [brid partner=56869869 player=32851 video=960834 autoplay=true]

  • ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    ಮಂಗಳೂರು : ಮಂಗಳೂರಿನ (Mangaluru) ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಶಂಕಿತ ಉಗ್ರ ಶಾರಿಕ್‌ನನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ಬಳಿಕ ಶಾರಿಕ್‌ ಗಂಭೀರವಾಗಿ ಗಾಯಗೊಂಡಿದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಉಗ್ರ ಶಾರಿಕ್ (Shariq) ಚಿಕಿತ್ಸೆ ಪಡೆಯುತ್ತಿದ್ದ. ಅಷ್ಟೇ ಅಲ್ಲದೇ ಆತನಿಗೆ NIA ಅಧಿಕಾರಿಗಳು ಭದ್ರತೆಯನ್ನು ನೀಡಿದ್ದರು. ಮೊನ್ನೆಯಷ್ಟೇ ಶಾರಿಕ್‌ ನಡೆಯುವ ಸ್ಥಿತಿಗೆ ತಲುಪಿದ್ದ. ಈ ವೇಳೆ ಆಸ್ಪತ್ರೆಯಲ್ಲೇ NIA ಅಧಿಕಾರಿಗಳು ಶಾರಿಕ್‌ನನ್ನು ವಿಚಾರಣೆ ನಡೆಸಿದ್ದರು.

    ಆದರೆ ಇಂದು ಬೆಳ್ಳಂ ಬೆಳಿಗ್ಗೆ ಶಾರಿಕ್‌ನನ್ನು NIA ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಇನ್ನೂ ಮಂಗಳೂರಿನಲ್ಲಿ ನಡೆದ ಕುಕ್ಕರ್‌ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ NIA ಅಧಿಕಾರಿಗಳು ವಿಚಾರಣೆ ಮುಂದುವರಿಸಲಿದ್ದಾರೆ.

    ಘಟನೆಯೇನು?: ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಕುಕ್ಕರ್‌ ಮುಚ್ಚಳ ಶಾರಿಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರಿಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು. ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೆಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    Live Tv
    [brid partner=56869869 player=32851 video=960834 autoplay=true]

  • ಟ್ರಬಲ್ ಶೂಟರ್‌ಗೆ ಈಗ ಟ್ರಬಲ್ – `ಕುಕ್ಕರ್ ಬ್ಲಾಸ್ಟ್’ ವಿವಾದದಲ್ಲಿ ಡಿಕೆಶಿ ಏಕಾಂಗಿ?

    ಟ್ರಬಲ್ ಶೂಟರ್‌ಗೆ ಈಗ ಟ್ರಬಲ್ – `ಕುಕ್ಕರ್ ಬ್ಲಾಸ್ಟ್’ ವಿವಾದದಲ್ಲಿ ಡಿಕೆಶಿ ಏಕಾಂಗಿ?

    ಬೆಂಗಳೂರು: ಟ್ರಬಲ್ ಶೂಟರ್, ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ (DK Shivakumar) ಅವರಿಗೇ ಈಗ ಟ್ರಬಲ್ ಶುರುವಾಗಿದೆ. ಕುಕ್ಕರ್ ಬ್ಲಾಸ್ಟ್ (Cooker Bomb Blast) ವಿವಾದದಲ್ಲಿ ಏಕಾಂಗಿಯಾಗಿದ್ದಾರೆ ಅನ್ನೋ ಮಾತುಗಳು ಪಕ್ಷದಲ್ಲಿ ಕೇಳಿಬರುತ್ತಿವೆ.

    ವಿವಾದ ಆದ ಕೂಡಲೇ ಡಿಕೆಶಿ ಪರ ಬ್ಯಾಟಿಂಗ್ ಮಾಡಬೇಕಿದ್ದ ಕಾಂಗ್ರೆಸ್ ನಾಯಕರು (Congress Leader) ಸೈಲೆಂಟ್ ಆಗಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್‌ನಲ್ಲೂ ಉತ್ತರಿಸಿಲ್ಲ. ಜಮೀರ್ ಅಹಮದ್ ಖಾನ್ ನೋ ಕಾಮೆಂಟ್ಸ್ ಎಂದು ಸೈಲೆಂಟ್ ಆಗಿದ್ದಾರೆ. ಡಿಕೆಶಿ ಬಣದ ಸ್ನೇಹಿತರಂತೂ ಏನೂ ಮಾತನಾಡದೇ ಸುಮ್ಮನಿದ್ದಾರೆ. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಡಿಕೆಶಿ ಏಕಾಂಗಿ ಆಗಿದ್ದೇಕೆ?
    ಚುನಾವಣೆ (Election) ಹತ್ತಿರ ಇರೋದ್ರಿಂದ ಉಗ್ರ ಶಾರಿಕ್ ವಿಚಾರದಲ್ಲಿ ಡಿಕೆಶಿ ಪರ ಮಾತನಾಡಿದ್ರೆ ನಮಗೆ ಡ್ಯಾಮೇಜ್ ಆಗುತ್ತೆ ಎಂಬ ಆತಂಕ ಶುರುವಾಗಿದೆ. ಅಲ್ಪಸಂಖ್ಯಾತ ಪರ ಇದ್ದಾರೆ ಎಂಬ ಹಣೆಪಟ್ಟಿ ಸಿಗಬಹುದು ಎಂಬ ಭಯ ಕಾಡುತ್ತಿದೆ. ಆದ್ರೆ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಇಕ್ಕಟ್ಟಿಗೆ ಸಿಲುಕೋದು ಕೊಂಚ ಸಮಾಧಾನವೇ ತರಿಸಿದೆ. ಹೀಗಾಗಿ ಅವರ ವಿವಾದ ಅವರಿಗೆ ಇರಲಿ ಅಂತ ಸುಮ್ಮನಾಗಿದೆ.

    ಡಿಕೆಶಿ ಪರ ಮಾತಾಡಿದ್ರೆ ಕ್ಷೇತ್ರದಲ್ಲಿ ನಮಗೂ ಡ್ಯಾಮೇಜ್ ಆಗಬಹುದು ಎಂಬ ಆತಂಕವಾಗಿದೆ. ಡಿಕೆಶಿ ಹೇಳಿಕೆ ರಾಷ್ಟ್ರಮಟ್ಟದ ವಿವಾದವಾಗಿದ್ದರಿಂದ ಆ ವಿಷಯದಲ್ಲಿ ತಲೆ ಹಾಕೋದು ಬೇಡವೆಂದು ನಾಯಕರು ತಟಸ್ಥತೆ ಕಾಯ್ದುಕೊಂಡಿರುವುದಾಗಿ ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ

    ಡಿಕೆಶಿ  ಹೇಳಿದ್ದೇನು?
    ನಿನ್ನೆ ಪತ್ರಕರ್ತರ ಭವನದಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣದ ಆರೋಪಿ ಶಾರೀಕ್‌ನನ್ನು ಟೆರರಿಸ್ಟ್ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ? ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ (Mumbai Attack) ಅಥವಾ ಪುಲ್ವಾಮಾ (Polwama), ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಅಂದುಕೊಂಡು ವೋಟರ್ ಐಡಿ ಹಗರಣವನ್ನು (Voter Id Scam) ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು (ADGP) ಅಷ್ಟು ಸ್ಪೀಡ್ ಆಗಿ ಹೇಗೆ ಹೇಳಿದರು ಎಂದು ಪ್ರಶ್ನಿಸಿದ್ದರು.

    ಬೆಂಗಳೂರಿನ ವೋಟರ್ ಐಡಿ ಹಗರಣ (Voter ID Scam) ವಿಷಯವನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಆಟ ಆಡುತ್ತಿದೆ. ಬಿಜೆಪಿ ಸರ್ಕಾರದ ಕೊನೆ ದಿನಗಳು ಬಂದಿದೆ ಇನ್ನೇನು 100 ದಿನ ಇದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ಮಾಡುತ್ತೀರಿ. ಶಿವಮೊಗ್ಗ, ಮಂಗಳೂರು, ಉಡುಪಿ ಕಡೆ ಯಾಕೆ ಯಾರೂ ಬಂಡವಾಳ ಹೂಡಿಕೆ ಮಾಡುತ್ತಿಲ್ಲ. ಶಿವಮೊಗ್ಗದಲ್ಲಿ ಕಮಲದ ರೂಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಿದೆ. ಯಾಕೆ ಆ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಯಾರು ಎಲ್ಲಿ ಹೂಡಿಕೆ ಮಾಡಿದ್ದಾರೆ? ಪಟ್ಟಿಯನ್ನು ಬಿಡುಗಡೆ ಮಾಡಲಿ ಎಂದು ಡಿಕೆಶಿ ಸರ್ಕಾರಕ್ಕೆ ಸವಾಲು ಎಸೆದರು.

    Live Tv
    [brid partner=56869869 player=32851 video=960834 autoplay=true]

  • ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    ಮಂಗಳೂರು: ಮಂಗಳೂರು (Mangaluru) ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ (Shariq) ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ.

    ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ದ ರೂವಾರಿ ಉಗ್ರ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ನಡೆಯುವ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‍ಐಎ (NIA) ಅಧಿಕಾರಿಗಳು ಇಂದು ವೈದ್ಯರ ಸಮ್ಮತಿಯ ಮೇರೆಗೆ ಶಾರೀಕ್‍ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

    ಘಟನೆಯೇನು?: ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರೀಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ RBI ಮಾಜಿ ಗವರ್ನರ್‌ ಭಾಗಿ

    ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೇಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರ

    ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರ

    ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಘಟನೆಯ ಹಿಂದೆ ಭಯೋತ್ಪಾದನೆಯ (Terrorism) ದೊಡ್ಡ ಪಿತೂರಿಯಿರುವುದು ತಿಳಿದುಬರುತ್ತಲೇ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲು ಒತ್ತಾಯಿಸಲಾಗಿತ್ತು. ಇದೀಗ ಪ್ರಕರಣದ ತನಿಖೆಗೆ ಎನ್‌ಐಎಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.

    ಇಂದು ಎನ್‌ಐಎ ಅಧಿಕಾರಿಗಳು ಮಂಗಳೂರು (Mangaluru) ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ್ದು, ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಕುಕ್ಕರ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದ್ದಾರೆ. ಎನ್‌ಐಎ ಇಂದಿನಿಂದಲೇ ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸಲಿದೆ.

    ಕುಕ್ಕರ್ ಬಾಂಬ್ ಅನ್ನು ಸ್ಫೋಟಿಸಿರುವ ಶಾರೀಕ್ (Shariq) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಶಾರೀಕ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಶಾರೀಕ್ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆ ಮಂಗಳೂರು ಪೊಲೀಸರು ಈಗಾಗಲೇ ವಿಚಾರಣೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: ಶಾಲೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿ – ನೋ ಎಂಟ್ರಿ ಎಂದ ಶಿಕ್ಷಕರು

    ಪೊಲೀಸರು ಈಗಾಗಲೇ ಶಂಕಿತ ಉಗ್ರ ಶಾರೀಕ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಖುದ್ದು ಪೊಲೀಸ್ ಕಮಿಷನರ್ ನೇತೃತ್ವದಲ್ಲೇ ತನಿಖಾ ತಂಡ ಶಾರೀಕ್ ಹೇಳಿಕೆಯನ್ನು ವೀಡಿಯೋ ರೆಕಾರ್ಡ್ ಮಾಡಿಕೊಂಡಿದೆ. ಶಾರೀಕ್‌ಗೆ 100ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಗಿದೆ. ಇಂದಿನಿಂದ ಪ್ರತ್ಯೇಕವಾಗಿ ಎನ್‌ಐಎ ಅಧಿಕಾರಿಗಳು ಶಾರೀಕ್‌ನ ಹೇಳಿಕೆಯನ್ನು ಪಡೆಯಲಿದ್ದಾರೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು

    Live Tv
    [brid partner=56869869 player=32851 video=960834 autoplay=true]

  • ಉತ್ತರ ಭಾರತದಾದ್ಯಂತ 20 ಕಡೆ NIA ದಾಳಿ

    ಉತ್ತರ ಭಾರತದಾದ್ಯಂತ 20 ಕಡೆ NIA ದಾಳಿ

    ನವದೆಹಲಿ: ಗ್ಯಾಂಗ್‌ಸ್ಟರ್ (Gangster) ಹಾಗೂ ಭಯೋತ್ಪಾದನೆಗೆ (Terrorism) ಸಂಬಂಧಪಟ್ಟಂತಹ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುಮಾರು 20 ಕಡೆಗಳಲ್ಲಿ ದಾಳಿ ನಡೆಸಿದೆ.

    ಲಾರೆನ್ಸ್ ಬಿಷ್ಣೋಯ್, ನೀರಜ್ ಬವಾನಾ ಹಾಗೂ ಟಿಲ್ಲಿ ತಾಜ್‌ಪುರಿಯಾ ಸೇರಿದಂತೆ 6 ಗ್ಯಾಂಗ್‌ಸ್ಟರ್‌ಗಳ ವಿಚಾರಣೆಯ ಬಳಿಕ ಎನ್‌ಐಎ ದೆಹಲಿ-ಎನ್‌ಸಿಆರ್, ರಾಜಸ್ಥಾನ, ಹರಿಯಾಣ ಹಾಗೂ ಪಂಜಾಬ್‌ನಾದ್ಯಂತ 20 ಸ್ಥಳಗಳಲ್ಲಿ ದಾಳಿ ನಡೆಸಲು ಪ್ರಾರಂಭಿಸಿದೆ.

    ಮೂಲಗಳ ಪ್ರಕಾರ, 6 ಮಂದಿ ಗ್ಯಾಂಗ್‌ಸ್ಟರ್‌ಗಳ ವಿಚಾರಣೆ ವೇಳೆ ಇನ್ನೂ ಹಲವು ಗ್ಯಾಂಗ್‌ಸ್ಟರ್‌ಗಳ ಹೆಸರುಗಳು ಬಯಲಿಗೆ ಬಂದಿವೆ. ಎನ್‌ಐಎ ಬಂಧಿತ ಗ್ಯಾಂಗ್‌ಸ್ಟರ್‌ಗಳ ಮನೆಗಳು, ಅವರಿಗೆ ಸಹಾಯ ಮಾಡುತ್ತಿದ್ದವರು ಹಾಗೂ ಅವರಿಗೆ ಸಂಬಂಧಪಟ್ಟ ಇತರ ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಇದನ್ನೂ ಓದಿ: ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ಈ ಗ್ಯಾಂಗ್‌ಸ್ಟರ್‌ಗಳು ಇತರ ದೇಶಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಲಾರೆನ್ಸ್ ಬಿಷ್ಣೋಯ್ ಹಾಗೂ ಬವಾನಾ ಗ್ಯಾಂಗ್ ಹೆಸರಿನಲ್ಲಿ ಭಾರತದಲ್ಲಿ ಭಯೋತ್ಪಾದನೆಗಾಗಿ ಸಾಕಷ್ಟು ಹಣ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಇದುವರೆಗೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧಿಸಲಾದ ಎಲ್ಲಾ ಗ್ಯಾಂಗ್‌ಸ್ಟರ್‌ಗಳ ವಿಚಾರಣೆಯ ಆಧಾರದ ಮೇಲೆ ಎನ್‌ಐಎ ಪಾಕಿಸ್ತಾನ-ಐಎಸ್‌ಐ ಮತ್ತು ಗ್ಯಾಂಗ್‌ಸ್ಟರ್‌ಗಳ ನಂಟಿನ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹನಿಟ್ರ್ಯಾಪ್ ಚಕ್ರವ್ಯೂಹ- ಸಂಸಾರ, ಕೆಲಸ, ಎಲ್ಲವೂ ಕಳೆದುಕೊಂಡ ಟೆಕ್ಕಿ!

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ತನಿಖೆಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

    ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ತನಿಖೆಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

    ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಳೆದ ವಾರ ನಡೆದ ಘಟನೆಯ ಹಿಂದೆ ಉಗ್ರರ ದೊಡ್ಡ ಸಂಚೇ ಇತ್ತು ಎಂಬುದು ಬೆಳಕಿಗೆ ಬರುತ್ತಲೇ ಇದರ ತನಿಖೆಯನ್ನು ಎನ್‌ಐಎಗೆ (NIA) ವಹಿಸಬೇಕೆಂಬ ಒತ್ತಾಯ ಕೇಳಿಬರುತ್ತಿತ್ತು. ಇದೀಗ ಮಂಗಳೂರು ಸ್ಫೋಟ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತಿಳಿಸಿದ್ದಾರೆ.

    ಮಂಗಳೂರಿನ ಕಂಕನಾಡಿ ಸಮೀಪ ಕುಕ್ಕರ್ ಬಾಂಬ್ ಸ್ಫೋಟ ಘಟನೆಯ ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲಾ ದೇವಾಲಯಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು – ಪ್ರಮೋದ್ ಮುತಾಲಿಕ್

    ನವೆಂಬರ್ 19ರಂದು ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢವಾಗಿ ಸ್ಫೋಟವೊಂದು ಸಂಭವಿಸಿತ್ತು. ಘಟನೆಯಲ್ಲಿ ಆಟೋ ಡ್ರೈವರ್ ಹಾಗೂ ಹಿಂಬದಿ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿತ್ತು. ತನಿಖೆಯ ವೇಳೆ ಪ್ರಯಾಣಿಕನ ಸೋಗಿನಲ್ಲಿ ಬಂದು ಬಾಂಬ್ ಬ್ಲಾಸ್ಟ್ ಮಾಡಿದ್ದ ವ್ಯಕ್ತಿ ಮೋಸ್ಟ್ ವಾಂಟೆಡ್ ಶಾರೀಕ್ (Shariq) ಎಂಬುದು ತಿಳಿದುಬಂದಿದೆ. ಈತ ಮಂಗಳೂರಿನ ದೇವಾಲಯಗಳು ಸೇರಿದಂತೆ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲು ಯೋಜಿಸಿದ್ದ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಶಾರೀಕ್ ಅಲ್ಲ ಘಜನಿಯಿಂದ ಟಿಪ್ಪುವರೆಗಿನ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡ್ಕೊಂಡೇ ಬಂದಿದ್ದಾರೆ: ಮುತಾಲಿಕ್

    Live Tv
    [brid partner=56869869 player=32851 video=960834 autoplay=true]

  • ಶಾರೀಕ್ ಅಲ್ಲ ಘಜನಿಯಿಂದ ಟಿಪ್ಪುವರೆಗಿನ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡ್ಕೊಂಡೇ ಬಂದಿದ್ದಾರೆ: ಮುತಾಲಿಕ್

    ಶಾರೀಕ್ ಅಲ್ಲ ಘಜನಿಯಿಂದ ಟಿಪ್ಪುವರೆಗಿನ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡ್ಕೊಂಡೇ ಬಂದಿದ್ದಾರೆ: ಮುತಾಲಿಕ್

    ಚಾಮರಾಜನಗರ: ಮೈಸೂರು (Mysuru) 2007 ರಿಂದಲೇ ಉಗ್ರರ ಸ್ಲೀಪರ್ ಸೆಲ್ ಆಗಿದೆ. ಮೈಸೂರು ಪಿಎಫ್‌ಐನ (PFI) ಪ್ರಯೋಗ ಶಾಲೆಯಾಗಿದೆ. ಈ ಜಿಲ್ಲೆಯಲ್ಲಿ ಸಾಕಷ್ಟು ಗಲಾಟೆ ಹಾಗೂ ಕೊಲೆಗಳಾಗಿವೆ. ಮೈಸೂರು ಅಥವಾ ಕರಾವಳಿಯಲ್ಲಿ ಎನ್‌ಐಎ (NIA) ಘಟಕ ತೆರೆಯಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಆಗ್ರಹಿಸಿದರು.

    ಚಾಮರಾಜನಗರದಲ್ಲಿ (Chamarajanagar) ಮಾತನಾಡಿದ ಮುತಾಲಿಕ್, ದೇವಸ್ಥಾನದ ಮೇಲೆ ದಾಳಿ ಮಾಡುವ ಮನಸ್ಥಿತಿ ಇರುವುದು ಶಂಕಿತ ಉಗ್ರ ಶಾರೀಕ್ ಒಬ್ಬನಿಗೆ ಅಲ್ಲ. ಘಜನಿಯಿಂದ ಟಿಪ್ಪು ಸುಲ್ತಾನ್‌ವರೆಗೂ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡಿಕೊಂಡೇ ಬಂದಿದ್ದಾರೆ. ಇಂತಹ ಸಾವಿರಾರು ಇನ್ನೂ ಇದ್ದು ಇಂತಹ ಕುಕೃತ್ಯಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಪ್ರಮೋದ್ ಮುತಾಲಿಕ್ ಆರೋಪಿಸಿದರು.

    ಪೊಲೀಸ್ ಇಲಾಖೆ ನಿದ್ರೆ ಮಾಡುತ್ತಿದೆ, ಅವರೇ ಮೋಸ್ಟ್ ಡೇಂಜರಸ್. ಪೊಲೀಸ್ ಇಲಾಖೆಗೆ ಭಯೋತ್ಪಾದಕರು ಹಾಗೂ ಕಿಡಿಗೇಡಿಗಳ ಬಗ್ಗೆ ಎಲ್ಲವೂ ಗೊತ್ತಿರುತ್ತದೆ. ಒಂದು ಕಡೆ ಸರ್ಕಾರದ ನಿರ್ಲಕ್ಷ್ಯ, ಇನ್ನೊಂದು ಕಡೆ ಕಾಂಗ್ರೆಸ್‌ನಿಂದ ಮುಸ್ಲಿಮರ ತುಷ್ಟೀಕರಣ. ಇದುವೇ ಇವತ್ತಿನ ಭಯೋತ್ಪಾದನೆಗೆ ಮೂಲ ಕಾರಣ ಎಂದು ಗುಡುಗಿದರು. ಇದನ್ನೂ ಓದಿ: ಸಿದ್ದರಾಮಯ್ಯನವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ – ಯತ್ನಾಳ್‌ ಲೇವಡಿ

    ಮುಸ್ಲಿಮರ ಬಗ್ಗೆ ಭಯವೋ, ಕಾಳಜಿಯೋ ಗೊತ್ತಿಲ್ಲ. ಪೊಲೀಸ್ ಇಲಾಖೆ ಸರಿಯಾಗಿ ಕ್ರಮ ತೆಗೆದುಕೊಳ್ಳದೇ ಇರುವುದೇ ಭಯೋತ್ಪಾದನೆಗೆ ಕಾರಣವಾಗಿದೆ. ಶಾರೀಕ್ ಮೇಲೆ ಹಿಂದೆಯೆ ಕೇಸ್ ಆಗಿ ಬಂಧಿಸಲಾಗಿತ್ತು. ಆತ ಜೈಲಿನಿಂದ ಬಂದಮೇಲೆ ಪೊಲೀಸರು ಆತನ ಮೇಲೆ ಕಣ್ಣಿಡಬೇಕಿತ್ತು ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ: ಶ್ರದ್ಧಾ ವಾಕರ್‌ ಕೊಲೆ ಪ್ರಕರಣ ಲವ್‌ ಜಿಹಾದ್‌ ಅಲ್ಲ – ಅಸಾದುದ್ದೀನ್‌ ಓವೈಸಿ

    Live Tv
    [brid partner=56869869 player=32851 video=960834 autoplay=true]

  • ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡೋದು ರೂಢಿ: ಚಕ್ರವರ್ತಿ ಸೂಲಿಬೆಲೆ

    ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡೋದು ರೂಢಿ: ಚಕ್ರವರ್ತಿ ಸೂಲಿಬೆಲೆ

    ಬೆಂಗಳೂರು: ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿಯಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele)  ಹೇಳಿದ್ದಾರೆ.

    ಮಂಗಳೂರು (Mangaluru) ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿ. ಅವರ ರಕ್ತದಲ್ಲಿಯೇ ಇನ್ನೊಬ್ಬರನ್ನು ಕೊಲ್ಲುವುದು ಕಾಲಘಟ್ಟದಿಂದಲೂ ಬಂದಿದೆ. ಇಡೀ ಪಿಎಫ್‍ಐ (PFI) ತಾನು ಮುಂದಿನ ಒಂದು ವರ್ಷಗಳಲ್ಲಿ ಮಾಡಬೇಕಾದಂತ ಎಲ್ಲಾ ಯೋಜನೆಗಳನ್ನು ಮಾಡಲು ಸಿದ್ಧ ಮಾಡಿದ್ದಾಗ ಬ್ಯಾನ್ ಮಾಡುವ ಮೂಲಕ ಆಘಾತ ನೀಡಿದ್ದನ್ನು ಸಹಿಸಿಕೊಳ್ಳಲು ಆಗಲಿಲ್ಲ. ಆ ಕಾರಣಕ್ಕೆ ಈ ರೀತಿ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಜೊತೆಗೆ ಇಂತಹ ಪ್ರಕರಣಗಳಲ್ಲಿ ಸಿಕ್ಕಿಬಿದ್ದವರನ್ನು ಹಿಂದೂ ಭಯೋತ್ಪಾದಕರೆಂದು ಗುರುತಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

    ಹಿಂದೂಗಳ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವಂತಹ ನಿಟ್ಟಿನಲ್ಲಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಆತಂಕಕಾರಿಯಾಗಿದೆ. ಪ್ರೆಶರ್ ಕುಕ್ಕರ್ ಬಾಂಬ್‍ಗಿಂತ ಈ ಮನಸ್ಥಿತಿ ಕೆಟ್ಟದು. ಈ ಹಿಂದೆ ಮುಂಬೈ ದಾಳಿ ವೇಳೆಯೂ ಕಸಾಬ್ ಕೂಡ ಕೈಗೆ ದಾರ ಕಟ್ಟಿಕೊಂಡು ಹೀಗೆ ಬಂದಿದ್ದ. ಅವನನ್ನ ಬಂಧಿಸದಿದ್ದರೆ ಅವನನ್ನು ಹಿಂದೂ ಭಯೋತ್ಪಾದಕ ಎಂದು ಬಿಂಬಿಸುತ್ತಿದ್ದರು. ಅದರಂತೆ ಇವತ್ತು ಕೂಡ ಹಾಗೇ ಬಿಂಬಿಸುವ ಕೆಲಸವಾಗುತ್ತಿದೆ. ಪಿಎಫ್‍ಐ ಸಂಘಟನೆ ಬ್ಯಾನ್‌ನಿಂದ ಹೆದರಿದ್ದಾರೆ. ಪಿಎಫ್‍ಐನವರಿಗೆ ಬ್ಯಾನ್ ಜೀರ್ಣಿಸಿಕೊಳ್ಳಲು ಸಾಧ್ಯವಾಗಿಲ್ಲ. ಆ ಕಾರಣಕ್ಕಾಗಿಯೇ ಸದ್ಯ ಇರುವಂತ ನೆಟ್‍ವರ್ಕ್ ಮೂಲಕ ಬದುಕಿದ್ದೇವೆ ಎಂದು ತೋರಿಸಿಕೊಳ್ಳುವ ಪ್ರಯತ್ನವೇ ಇದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಪ್ರಕರಣ ಆದಾಗ ಮಾತ್ರ ಬಂದು ಪೊಲೀಸರು ಡ್ರಾಮಾ ಮಾಡುವುದನ್ನು ಬಿಟ್ಟುಬಿಡಿ. ಇತರೆ ಪ್ರಕರಣಗಳಂತೆ ನಾಲ್ಕು ದಿನ ಓಡಾಡಿ 5ನೇ ದಿನಕ್ಕೆ ಪ್ರಕರಣ ಸತ್ತು ಹೋಗುವಂತೆ ಮಾಡಬೇಡಿ. ಎಲ್ಲವನ್ನೂ ಎನ್‍ಐಎಗೆ ಕೊಟ್ಟಿದ್ದೇವೆಂದು ಕೈ ತೊಳೆದುಕೊಳ್ಳಬೇಡಿ. ಹರ್ಷನ ಕೇಸ್, ಪ್ರವೀಣ್ ನೆಟ್ಟಾರು ಕೇಸ್‍ನಲ್ಲೂ ಹೀಗೆ ಮಾಡಿದ್ದೀರಾ. ಅಂದೇ ಸರಿಯಾದ ಜಾಡು ಹಿಡಿದು ಹೋಗಿದ್ದರೆ, ಈ ಪ್ರಕರಣವನ್ನು ಭೇದಿಸಬಹುದಿತ್ತು. ಎಲ್ಲವನ್ನು ಗಮನಿಸಿದರೆ ಫೇಲ್ಯೂರ್ ಪೊಲೀಸ್ ಇಲಾಖೆಯದ್ದೆ ಅನ್ನಿಸುತ್ತದೆ. ಈಗಾಲಾದರು ಪ್ರಕರಣದ ಹಿಂದೆ ಬಿದ್ದು, ಭೇದಿಸಿ ಕರ್ನಾಟಕವನ್ನು ಕಾಪಾಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಕತ್ತಿಯಿಂದ ಜನರ ಶಿರಚ್ಛೇದ – 10 ದಿನಗಳಲ್ಲಿ 12 ಜನರಿಗೆ ಮರಣದಂಡನೆ

    Live Tv
    [brid partner=56869869 player=32851 video=960834 autoplay=true]