Tag: NIA

  • ಡಿಕೆಶಿ ಹೇಳುವುದು ಒಂದು, ಮಾಡುವುದು ಇನ್ನೊಂದು: ನಾರಾಯಣಗೌಡ

    ಡಿಕೆಶಿ ಹೇಳುವುದು ಒಂದು, ಮಾಡುವುದು ಇನ್ನೊಂದು: ನಾರಾಯಣಗೌಡ

    ಬೆಂಗಳೂರು: ಡಿ.ಕೆ ಶಿವಕುಮಾರ್ ಅವರು ಕಾರ್ಯಕರ್ತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆದರೆ ಅವರು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂದು ಡಿ.ಕೆ ಶಿವಕುಮಾರ್ ಅವರಿಗೆ ರೇಷ್ಮೆ ಮತ್ತು ಯುವಜನ ಸೇವಾ ಕ್ರೀಡಾ ಸಚಿವ ಸಚಿವ ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದರು.

    ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಈಶ್ವರಪ್ಪರ ಮೇಲೆ 144 ಸೆಕ್ಷನ್ ಉಲ್ಲಂಘನೆ ಆರೋಪ ವಿಚಾರವಾಗಿ ಸಮರ್ಥಿಸಿಕೊಂಡರು. ಹರ್ಷ ಪಕ್ಷದ ಕಾರ್ಯಕರ್ತ. ಹಾಗಾಗಿ ಸಚಿವ ಈಶ್ವರಪ್ಪ ಅವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಡಿಕೆಶಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲವಾ ಎಂದು ವಾಗ್ದಾಳಿ ನಡೆಸಿದರು.

    ಹರ್ಷ ಕೊಲೆ ಪ್ರಕರಣ ಎನ್‍ಐಎಗೆ ವಹಿಸುವ ವಿಚಾರವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಮತ್ತೆ ಇಂತಹ ಘಟನೆ ಆಗಬಾರದು ಅಷ್ಟೇ ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

    ಶಿವಮೊಗ್ಗ ವಾತಾವರಣ ಕಂಟ್ರೋಲ್‍ನಲ್ಲಿದೆ. ಗೃಹ ಸಚಿವರನ್ನು ಭೇಟಿ ಮಾಡಿ ಬಂದೆ. ಒಂದೊಂದು ಗಂಟೆಗೂ ಮಾಹಿತಿ ಪಡೆಯುತ್ತಿದ್ದೇವೆ. ಗಲಭೆ ನಡೆದಿರುವ ಬಗ್ಗೆ ವೀಡಿಯೋ ರೆಕಾರ್ಡ್ ಸಿಕ್ಕಿವೆ. ನಿನ್ನೆ ಬೆಳಿಗ್ಗೆ ಐದು ಗಂಟೆಗೆ ಎರಡು ಆಟೋಗಳು ಸುಟ್ಟು ಹಾಕಿದ್ದಾರೆ. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ತನಿಖೆ ನಡೆಸುವ ಸಂದರ್ಭದಲ್ಲಿ ಈ ಮಾಹಿತಿ ಸೀಕ್ರೆಟ್ ಆಗಿ ಇಟ್ಟಿದ್ದೇವೆ ಎಂದರು. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

  • ಮುಸ್ಲಿಮರೇ ಹರ್ಷನನ್ನು ಹೊಡೆದಿರೋದು ಸಾಬೀತಾಗಿದೆ: ಈಶ್ವರಪ್ಪ

    ಮುಸ್ಲಿಮರೇ ಹರ್ಷನನ್ನು ಹೊಡೆದಿರೋದು ಸಾಬೀತಾಗಿದೆ: ಈಶ್ವರಪ್ಪ

    ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನು ಮುಸ್ಲಿಮರೇ ಹೊಡೆದಿರುವುದು ಸಾಬೀತಾಗಿದೆ. ಈಗಲಾದರೂ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರು ನನ್ನ ಮಾತನ್ನು ಒಪ್ಪಿಕೊಳ್ಳಲಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಹೇಳಿಕೆಯೊಂದನ್ನು ನೀಡಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ಷ ಕೊಲೆ ಮಾಡಿರುವವರು ಮುಸ್ಲಿಂ ಗೂಂಡಾಗಳು ಅಂತ ನಾನು ಹೇಳಿದ್ದೆ. ನಾನು ನಿನ್ನೆ ಎಸ್ ಪಿ ಬಳಿ ಮಾಹಿತಿ ಪಡೆದು ಹೇಳಿಕೆ ಕೊಟ್ಟಿದ್ದೆ. ಅರೆಸ್ಟ್ ಆಗಿರೋರು ಎಲ್ಲರೂ ಮುಸ್ಲಿಮರೇ ಆಗಿದ್ದಾರೆ ಎಂದು ನಿನ್ನೆ ನೀಡಿರುವ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಈ ಕೊಲೆ ಮಾಡಿಸಿರುವುದೇ ಈಶ್ವರಪ್ಪ – ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

    ಈ ಪ್ರಕರಣದ ತನಿಖೆ ಎನ್‍ಐಎಯಿಂದ ಆಗಬೇಕು. ಎನ್‍ಐಎ ತನಿಖೆ ಆದರೆ ಎಲ್ಲಾ ಸತ್ಯ ಹೊರ ಬರುತ್ತೆ. ಮುಸ್ಲಿಂ ಅವ್ರೆ ಹೊಡೆದಿರೋದು ಸಾಬೀತಾಗಿದ್ದು, ಈಗಲಾದ್ರು ಹರಿಪ್ರಸಾದ್ ಒಪ್ಪಿಕೊಳ್ಳಲಿ ಎಂದು ತಿಳಿಸಿದರು. ಇದನ್ನೂ ಓದಿ: ಮಗ ಕೇಸರಿ ಶಾಲು, ಕುಂಕುಮ ಮಾತ್ರ ಬಿಟ್ಟು ಹೋಗಿದ್ದಾನೆ: ಹರ್ಷ ತಾಯಿ

    ಈಗಾಗಲೇ ಹಲವರ ಬಂಧನ ಆಗಿದೆ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಗಿತ್ತು. ಗೋಹತ್ಯೆ ತಡೆಗೆ ಮುಂದಾದವರನ್ನ ಕೊಲೆ ಮಾಡಲಾಗಿತ್ತು. ಈಗ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸ್ರು ತರಲು ಕಗ್ಗೊಲೆ ಆಗ್ತಿದೆ. ಉದ್ದೇಶ ಪೂರ್ವಕವಾಗಿ ಇಂತಹ ಕೊಲೆ ಆಗ್ತಿದೆ. ಹೀಗಾಗಿ ನಾನು ಎನ್‍ಐಎ ತನಿಖೆಗೆ ಒತ್ತಾಯ ಮಾಡ್ತೀನಿ. ಸಿಎಂ ಬಳಿ ಎನ್‍ಐಎ ತನಿಖೆಗೆ ಮನವಿ ಮಾಡ್ತಿನಿ. ತನಿಖೆಯಿಂದ ಯಾರ್ ಯಾರ್ ಇದರ ಹಿಂದೆ ಇದ್ದಾರೆ ಅಂತ ಗೊತ್ತಾಗುತ್ತೆ ಎಂದು ಈಶ್ವರಪ್ಪ ಒತ್ತಾಯಿಸಿದರು. ಇದನ್ನೂ ಓದಿ: ಕೊಲೆಯಾದ ಹರ್ಷನನ್ನು ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ- ಡಿಜಿಪಿ ಸ್ಪಷ್ಟನೆ

  • ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

    ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

    ನವದೆಹಲಿ: ಪಾಕಿಸ್ತಾನದ ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾಗೆ ರಹಸ್ಯ ದಾಖಲೆ ನೀಡಿದ ಆರೋಪದಡಿ ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್ ನೇಗಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.

    ನೇಗಿ ಎನ್‍ಐಎ ತನಿಖಾಧಿಕಾರಿಯಾಗಿದ್ದಾಗ ಲಷ್ಕರ್ ಇ ತೊಯ್ಬಾಗೆ ಕೆಲವು ರಹಸ್ಯ ಮಾಹಿತಿಗಳನ್ನು ನೀಡಿದ್ದರು ಎಂಬ ಆರೋಪವಿದೆ. ಅಲ್ಲದೇ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದರು ಎಂಬ ಅಂಶ ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಎನ್‍ಐಎ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!

    ಕಳೆದ ವರ್ಷ ಉಗ್ರರಿಗೆ ರಹಸ್ಯ ಮಾಹಿತಿ ನೀಡಿದ ಆರೋಪದಡಿ ಜಮ್ಮು ಕಾಶ್ಮೀರದ ಮಾನವ ಹಕ್ಕುಗಳ ಹೋರಾಟಗಾರ ಖುರ್ರಂ ಪರ್ವೇಜ್‍ರನ್ನು ಎನ್‍ಐಎ ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ನೇಗಿ ಹೆಸರು ಕೂಡ ಈ ಪ್ರಕರಣದಲ್ಲಿ ಕೇಳಿಬಂದಿತ್ತು. ಎನ್‍ಐಎ ತನಿಖಾಧಿಕಾರಿಯಾಗಿದ್ದ ನೇಗಿ ಪ್ರಸ್ತುತ ಶಿಮ್ಲಾದ ಎಸ್‍ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ನೇಗಿ 2007ರಲ್ಲಿ ಅಜ್ಮೀರ್ ದರ್ಗಾ ಸ್ಫೋಟ ಸೇರಿದಂತೆ ಹಲವು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯಾಗಿದ್ದರು. ಇದೀಗ ಉಗ್ರರಿಗೆ ರಹಸ್ಯ ಮಾಹಿತಿ ನೀಡಿದ ಆರೋಪದಡಿ ಎನ್‍ಐಎ ಐಪಿಸಿ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ) 121 (ಸರ್ಕಾರದ ವಿರುದ್ಧ ನಡೆ) 17 (ಭಯೋತ್ಪಾದಕ ಕೃತ್ಯಕ್ಕೆ ನಿಧಿ ಸಂಗ್ರಹ) ಸೆಕ್ಷನ್ ಅಡಿ ಎನ್‍ಐಎ ಅರೆಸ್ಟ್ ಮಾಡಿದೆ. ದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

  • ISIS ಜೊತೆ ನಂಟು: ಮಾಜಿ ಶಾಸಕ ಇದಿನಬ್ಬರ ಮೊಮ್ಮಗನ ಪತ್ನಿ ಸೇರಿ 8 ಮಂದಿ ವಿರುದ್ಧ ಚಾರ್ಜ್ ಶೀಟ್

    ISIS ಜೊತೆ ನಂಟು: ಮಾಜಿ ಶಾಸಕ ಇದಿನಬ್ಬರ ಮೊಮ್ಮಗನ ಪತ್ನಿ ಸೇರಿ 8 ಮಂದಿ ವಿರುದ್ಧ ಚಾರ್ಜ್ ಶೀಟ್

    ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಇದಿನಬ್ಬ ಮಗನ ಮನೆಗೆ ಎನ್‍ಐಎ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು, ಇದೀಗ ಇದಿನಬ್ಬ ಮೊಮ್ಮಗನ ಪತ್ನಿ ದೀಪ್ತಿ ಮಾರ್ಲ, ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಸೇರಿದಂತೆ ಒಟ್ಟು ಎಂಟು ಮಂದಿಯ ವಿರುದ್ಧ ಎನ್‍ಐಎ ಚಾರ್ಜ್‍ಶೀಟ್ ಸಲ್ಲಿಸಿದೆ.

    ಈ ದೋಷಾರೋಪಣ ಪಟ್ಟಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಹಲವು ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಿದೆ. ಲವ್ ಜಿಹಾದ್‍ಗೆ ಒಳಗಾಗಿ ಉಗ್ರ ಮಹಿಳೆಯಾಗಿ ಬದಲಾಗಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಸೇರಿದಂತೆ ಎಂಟು ಜನರ ವಿರುದ್ಧ ಎನ್‍ಐಎ ಚಾರ್ಜ್‍ಶೀಟ್ ಸಲ್ಲಿಸಿದೆ. ಆರೋಪಿಗಳಾದ ದೀಪ್ತಿ ಮಾರ್ಲ, ಅಮ್ಮರ್ ಅಬ್ದುಲ್ ರಹಿಮಾನ್, ಮೊಹಮ್ಮದ್ ವಕಾರ್ ಲಾನ್ ಯಾನೆ ವಿಲ್ಸನ್ ಕಾಶ್ಮೀರಿ, ಮಿಜಾ ಸಿದ್ದೀಕ್, ಶಿಫಾ ಹಾರೀಸ್ ಯಾನೆ ಆಯಿಷಾ, ಒಬೈದ್ ಹಮೀದ್ ಮಟ್ಟಾ, ಮಾದೇಶ್ ಶಂಕರ್ ಯಾನೆ ಅಬ್ದುಲ್ಲಾ, ಮುಜಾಮಿಲ್ ಹಸನ್ ಭಟ್ ವಿರುದ್ಧ ಈ ದೋಷಾರೋಪಣ ಪಟ್ಟಿಯನ್ನು ಎನ್‍ಐಎ ನೀಡಿದೆ. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್‍ಐಎ ದಾಳಿ

    ಈ ಎಂಟು ಆರೋಪಿಗಳು ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ಐಸಿಸ್‍ಗೆ ಜನರನ್ನು ನೇಮಕ ಮಾಡುವುದು, ಭಯೋತ್ಪಾದಕ ಕೃತ್ಯಕ್ಕೆ ನಿಧಿ ಸಂಗ್ರಹಿಸಿವುದರಲ್ಲಿ ತೊಡಗಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಉಗ್ರ ಚಟುವಟಿಕೆ ಸಂಬಂಧಿಸಿ 5 ಮಾರ್ಚ್ 2021ರಂದು ಕೇರಳದ ಮಹಮ್ಮದ್ ಅಮೀನ್ ಮತ್ತು ಆತನ ಇಬ್ಬರು ಸಹಚರರನ್ನು ಎನ್‍ಐಎ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿತ್ತು. ಆ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು, ಭಟ್ಕಳ, ಬೆಂಗಳೂರು, ಜಮ್ಮು ಕಾಶ್ಮೀರದಲ್ಲಿ ದಾಳಿ ನಡೆಸಿ ಈ ಎಂಟು ಜನರನ್ನು ಬಂಧಿಸಲಾಗಿತ್ತು. ಲ್ಯಾಪ್‍ಟಾಪ್, ಸಿಮ್ ಕಾರ್ಡ್, ಹಾರ್ಡ್ ಡಿಸ್ಕ್, ಡ್ರೈವ್ ಸಹಿತ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿತ್ತು. ಈ ಎಲ್ಲದರ ಬಗ್ಗೆಯೂ ಜಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಾದ ಟೆಲಿಗ್ರಾಂ, ಹೂಪ್, ಇನ್‍ಸ್ಟಾಗ್ರಾಮ್ ಬಳಸಿಕೊಂಡು ಈ ಆರೋಪಿಗಳು ಐಸಿಸ್‍ಗೆ ಜನರನ್ನು ನೇಮಿಸುತ್ತಿದ್ದರು. ದೇಶದಲ್ಲೇ ಇದ್ದುಕೊಂಡು ಉಗ್ರ ಸಂಘಟನೆ ಐಸಿಸ್ ಜೊತೆ ನೇರ ಸಂಪರ್ಕ ಹೊಂದಿರುವುದು ಎನ್‍ಐಎ ವಿಚಾರಣೆಯಲ್ಲಿ ತಿಳಿದುಬಂದಿದೆ.

  • ISIS ಉಗ್ರ ಸಂಘಟನೆಯೊಂದಿಗೆ ನಂಟು – ಬೆಂಗಳೂರಿನ ಯುವಕನ ಬಂಧನ

    ISIS ಉಗ್ರ ಸಂಘಟನೆಯೊಂದಿಗೆ ನಂಟು – ಬೆಂಗಳೂರಿನ ಯುವಕನ ಬಂಧನ

    ಬೆಂಗಳೂರು: ಇಸ್ಲಾಮಿಕ್ ಸ್ಟೇಟ್ (ISIS) ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾದ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಬಂಧಿಸಿದ್ದಾರೆ.

    ಬಂಧಿತ ಆರೋಪಿ ಬೆಂಗಳೂರಿನ ಮುಹಮ್ಮದ್ ತಾಖಿರ್ ಮೊಹಮ್ಮದ್ (33) ಎಂದು ಗುರುತಿಸಲಾಗಿದೆ. ಈತನನ್ನು ಶನಿವಾರ ಬಂಧಿಸಲಾಯಿತು. ಸೆಕ್ಷನ್ 120ಬಿ, ಐಪಿಸಿ 125 ಮತ್ತು ಸೆಕ್ಷನ್ 17,18 ಹಾಗೂ ಯುಎ (ಪಿ) 18ಬಿ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‍ಐಎಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

    ಮುಸ್ಲಿಂ ಸಮುದಾಯದ ಯುವಕರಲ್ಲಿ ಮೂಲಭೂತವಾದವನ್ನು ಪಸರಿಸಿ, ಅವರನ್ನು ಐಎಸ್ ಉಗ್ರ ಸಂಘಟನೆಗೆ ಸೇರಲು ಸಿರಿಯಾಕ್ಕೆ ಕಳುಹಿಸುತ್ತಿದ್ದ ಎಂಬ ಆರೋಪದ ಮೇಲೆ ಮುಹಮ್ಮದ್‍ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ

    ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ಮುಹಮ್ಮೊದ್ ಜೊತೆಗೆ ಜುಹಾಬ್ ಹಮೀದ್ ಅಲಿಯಾಸ್ ಶಕೀಲ್ ಮನ್ನಾ, ಇರ್ಫಾನ್ ನಾಸಿರ್, ಮೊಹದ್ ಶಿಹಾಬ್ ಎಂಬವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

    ಎನ್‍ಐಎ ಈ ಹಿಂದೆ ಅಹಮ್ಮದ್ ಅಬ್ದುಲ್ ಕ್ಯಾಡರ್ ಮತ್ತು ಇರ್ಫಾನ್ ನಾಸಿರ್ ಅವರನ್ನು ಬಂಧಿಸಿ ಏ.1ರಂದು ಚಾರ್ಜ್‍ಶೀಟ್ ಸಲ್ಲಿಸಿತ್ತು.

  • ಡಿಜೆ ಹಳ್ಳಿ ಗಲಭೆ ಪ್ರಕರಣ- ವಾಹನಗಳಿಗೆ ಬೆಂಕಿ ಹಚ್ಚಿದ್ದ ತಬ್ರೇಜ್ ಬಂಧನ

    ಡಿಜೆ ಹಳ್ಳಿ ಗಲಭೆ ಪ್ರಕರಣ- ವಾಹನಗಳಿಗೆ ಬೆಂಕಿ ಹಚ್ಚಿದ್ದ ತಬ್ರೇಜ್ ಬಂಧನ

    – ವಾಟ್ಸಪ್ ಗ್ರೂಪ್ ನಲ್ಲಿ ಗಲಭೆಗೆ ಪ್ರಚೋದನೆ
    – ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳೊಂದಿಗೆ ತಬ್ರೇಜ್ ನಂಟು

    ಬೆಂಗಳೂರು: ನಗರದ ಡಿ.ಜೆ.ಹಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿ ತಬ್ರೇಜ್‍ನನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.

    ಗಲಭೆ ವೇಳೆ 35 ವರ್ಷದ ತಬ್ರೇಜ್ ಪೊಲೀಸ್ ವಾಹನ ಸೇರಿದಂತೆ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ್ದ. ಗಲಭೆ ಬಳಿಕ ತಬ್ರೇಜ್ ತಲೆಮರೆಸಿಕೊಂಡಿದ್ದ. ರಾಷ್ಟ್ರೀಯ ತನಿಖಾ ದಳದಿಂದ ಕಾರ್ಯಾಚರಣೆ ನಡೆಸಿ ಇದೀಗ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಇದನ್ನೂ ಓದಿ: ಡಿ.ಜೆ ಹಳ್ಳಿ ಪ್ರಕರಣದ ಎನ್ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್​​ಡಿಪಿಐ

    ಆಗಸ್ಟ್ 12, 2020ರಂದು ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದಿತ್ತು. ತಬ್ರೇಜ್ ವಾಟ್ಸಪ್ ಗ್ರೂಪ್ ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಲ್ಲದೆ ಈತ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ಎಂಬುದು ಸಹ ಇದೇ ವೇಳೆ ಬೆಳಕಿಗೆ ಬಂದಿದೆ.

    ನಡೆದಿದ್ದೇನು?
    ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ಆಗಸ್ಟ್ 11ರಂದು ರಾತ್ರಿ 8ಕ್ಕೆ ಕಾವಲ್ ಭೈರಸಂದ್ರದಲ್ಲಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿತ್ತು. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು ಕಚೇರಿಯನ್ನು ಒಡೆದು ಹಾಕಲು ಯತ್ನಿಸಿದ್ದರು. ಈ ವೇಳೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದರು. ಘಟನೆಯಲ್ಲಿ ಶಾಸಕರ ಮನೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಆಫೀಸ್ ಬಳಿ ನಿಂತಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯನ್ನು ನೋಡಿ ಅಲ್ಲಿದ್ದ ಜನ ಓಡಿ ಹೋಗಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಇತ್ತ ಗಲಭೆಗೂ ಮುನ್ನ ಶಾಸಕರು ಮನೆ ಖಾಲಿ ಮಾಡಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಘಟನೆ ಸಂಬಂಧಿಸದಂತೆ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

  • ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ: ಆರಗ ಜ್ಞಾನೇಂದ್ರ

    ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ: ಆರಗ ಜ್ಞಾನೇಂದ್ರ

    ಬೆಂಗಳೂರು: ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರನ್ನು ಗುರುತಿಸಿ, ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕೆಂದು ರಾಜ್ಯ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅಕ್ರಮವಾಗಿ ವೀಸಾ ಅವಧಿ ಮುಗಿದಿದ್ದರೂ ಕೂಡ ನೆಲೆಸಿರುವ ವಿದೇಶಿ ನಾಗರಿಕರು ಯಾವುದೇ ಅಕ್ರಮ ಚಟುವಟಿಕೆ, ದೇಶದ್ರೋಹಿ ಅಥವಾ ಸಮಾಜವಿರೋಧಿ ಕೃತ್ಯ ನಡೆಸದಂತೆ ನಿಗಾ ವಹಿಸಬೇಕು. ಅವರ ಬಗ್ಗೆ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವಂತೆ ಪ್ರತ್ಯೇಕ ದಾಖಲಾತಿಗಳನ್ನೂ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದರು.

    ರಾಜ್ಯದಲ್ಲಿ ಅಪರಾಧ ನಿಯಂತ್ರಣ ಹಾಗೂ ಅಪರಾಧಿಗಳ ವಿರುದ್ಧ ಹೂಡಲಾದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಸಮರ್ಥವಾಗಿ ಮಂಡಿಸಿ, ಶಿಕ್ಷೆ ಕೊಡಿಸುವ ಪ್ರಮಾಣ ಹೆಚ್ಚಿಸುವುದರ ಮೂಲಕ, ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ವಿಶ್ವಾಸ ಮೂಡಿಸಬೇಕಾದ ಅಗತ್ಯವಿದೆ. ರಾಜ್ಯದಲ್ಲಿ ಕರಾವಳಿ ರಕ್ಷಣಾ ಪಡೆಯನ್ನು ಬಲಪಡಿಸಬೇಕು, ಹಾಗೂ ಅಕ್ರಮವಾಗಿ ನುಸುಳುವುದನ್ನು ತಡೆಯಲು ನೌಕಾದಳ ಸಿಬ್ಬಂದಿಯೊಡನೆ ಸದಾ ಸಂಪರ್ಕ ಸಾದಿಸಿ ದೇಶದ ಭದ್ರತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಸೂಚನೆ ನೀಡಲಾಗಿದೆ. ಯಾವುದೇ ಅಜಾಗರೂಕತೆಗೆ ಆಸ್ಪದ ಇರಬಾರದು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಜಾತ್ಯಾತೀತ ನಾಯಕನಲ್ಲ, ಅವನೊಬ್ಬ ಜಾತಿ ರಾಜಕಾರಣಿ: ಶ್ರೀರಾಮುಲು

    ರಾಜ್ಯದಲ್ಲಿ ಅಕ್ರಮ ಜಾನುವಾರು ಸಾಗಣೆ ಹಾಗೂ ಹತ್ಯೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡದೆ, ಕಾನೂನು ಉಲ್ಲಂಘಿಸುವ ಸಮಾಜ ವಿರೋಧಿ ಶಕ್ತಿಗಳನ್ನು ನಿಗ್ರಹಿಸಬೇಕು ಎಂದು ಸೂಚನೆ ನೀಡಿದರು.

    ಗ್ರಾಮೀಣ ಪ್ರದೇಶದಲ್ಲಿ ಗಸ್ತು ಹೆಚ್ಚಳ:
    ಗ್ರಾಮೀಣ ಪ್ರದೇಶದಲ್ಲಿ ಪೊಲೀಸರ ಗಸ್ತು ಪದ್ದತಿಯನ್ನು ಪರಿಷ್ಕರಿಸಿ ಅಪರಾಧ ಪ್ರಕರಣಗಳನ್ನು, ಗಣನೀಯವಾಗಿ ತಗ್ಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ. ಪಟ್ಟಣ ಪ್ರದೇಶದಲ್ಲಿ ಈ-ಗಸ್ತು (E-Beat system) ವ್ಯವಸ್ಥೆಯನ್ನು ಬಲಪಡಿಸಲು ತೀರ್ಮಾನಿಸಲಾಗಿದೆ, ಎಂದು ಸಚಿವರು ತಿಳಿಸಿದರು.

    ಪ್ರತಿ ಪೊಲೀಸ್ ಠಾಣೆಯಲ್ಲಿ ಇರುವ ರೌಡಿ ಶೀಟರ್ ಪಟ್ಟಿಯನ್ನು ಕಾನೂನಿನ ಮಾನದಂಡ ಪ್ರಕಾರ ಪುನಃ ಪರಿಶೀಲಿಸಿ, ಕನ್ನಡ-ಪರ, ರೈತ-ಪರ ಹಾಗೂ ಇನ್ನಿತರ ಜನಪರ ಚಳುವಳಿ ಭಾಗವಿಸಿದವರ ವಿರುದ್ಧ ದಾಖಲಾದ ರೌಡಿ ಶೀಟರ್ ಹಣೆಪಟ್ಟಿಯನ್ನು ವೈಜ್ಞಾನಿಕವಾಗಿ ಪರಿಷ್ಕರಿಸಬೇಕು. ಅಮಾಯಕರ ಹೆಸರು ಒಂದುವೇಳೆ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಷ್ಕರಿಸಲು, ನಿರ್ಧಾರ ತೆಗೆದು ಕೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ರಾಜ್ಯದಲ್ಲಿ ಒಟ್ಟು 973 ಪಾಸಿಟಿವ್ – ದಕ್ಷಿಣ ಕನ್ನಡದಲ್ಲಿ ಕೇಸ್ ಏರಿಕೆ

    ರಾಷ್ಟ್ರ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲು, ಹಾಗೂ ಕೇಂದ್ರದ ರಾಷ್ಟೀಯ ತನಿಖಾ ದಳ (NIA)ದ ಜೊತೆಗೆ ಸಮನ್ವಯ ಸಾಧಿಸಲು ಬೆಂಗಳೂರು ಅಥವಾ ಮಂಗಳೂರಿನಲ್ಲಿ NIA ಘಟಕವನ್ನು ರಾಜ್ಯದಲ್ಲಿ ಸ್ಥಾಪಿಸುವ ಅಗತ್ಯವಿದೆ. ಈ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲೂ ನಿರ್ಧರಿಸಲಾಗಿದೆ ಎಂದು ನುಡಿದರು.

  • ಮಂಗಳೂರಿನಲ್ಲಿ ನಡೀತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಆರಗ ಜ್ಞಾನೇಂದ್ರ

    ಮಂಗಳೂರಿನಲ್ಲಿ ನಡೀತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಆರಗ ಜ್ಞಾನೇಂದ್ರ

    – ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರದ ಜೊತೆ ಚರ್ಚೆ

    ಮಂಗಳೂರು: ಕೆಲವು ವರ್ಷಗಳಿಂದ ಮಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿದ್ದು, ಇವುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎನ್.ಐ.ಎ ಕೇಂದ್ರ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಭಯೋತ್ಪಾದಕ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು ಎಂದು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರದ ಜೊತೆ ಮಾತನಾಡಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು. ಇದನ್ನೂ ಓದಿ: ಜಾಮೀನು ಸಿಕ್ಕರೂ ವಿನಯ್ ಕುಲಕರ್ಣಿಗಿಲ್ಲ ಬಿಡುಗಡೆ ಭಾಗ್ಯ

    ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರ ವಿಚಾರದ ಕುರಿತು ಮಾತನಾಡಿ, ಕೇಂದ್ರ ಸರ್ಕಾರದಿಂದ ಕರೆತರುವ ವ್ಯವಸ್ಥೆಯಾಗುತ್ತಿದೆ. ರಾಜ್ಯದಿಂದ ನೋಡಲ್ ಆಫೀಸರ್ ನೇಮಕ ಮಾಡಿದ್ದೇವೆ. ಸಿ.ಐ.ಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ. ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕ ಮಾಡಬಹುದು ಎಂದು ತಿಳಿಸಿದರು.

    ಇದೇ ವೇಳೆ ಜನಾಶೀರ್ವಾದ ಯಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಾಟ ವಿಚಾರದ ಸಂಬಂಧ ಮಾತನಾಡಿ, ಮಲೆನಾಡು ಭಾಗದಲ್ಲಿ ತುಂಬಾ ಖುಷಿಯಾದಾಗ ಗಾಳಿಯಲ್ಲಿ ಗುಂಡು ಹಾರಾಟ ಮಾಡುತ್ತೇವೆ. ಯಾರಾದರೂ ತೀರಿ ಹೋದ ಸಂದರ್ಭದಲ್ಲೂ ಗಾಳಿಯಲ್ಲಿ ಗುಂಡು ಹಾರಾಟ ಮಾಡುತ್ತೇವೆ. ಕೊಡಗು ಮಲೆನಾಡು ಭಾಗದಲ್ಲಿ ಇಂತಹ ಸಂಪ್ರದಾಯ ಇದೆ. ಇನ್ನೂ ಕೆಲವೆಡೆ ಇಂತಹ ಸಂಪ್ರದಾಯಗಳು ಇರಬಹುದು. ಭಗವಂತ್ ಖೂಬಾ ಬಂದ ಸಂದರ್ಭದಲ್ಲೂ ಖುಷಿಗೆ ಗಾಳಿಯಲ್ಲಿ ಗುಂಡು ಹಾರಾಟ ಮಾಡಿರಬಹುದು. ಆದರೆ ಇದು ಸಾರ್ವಜನಿಕವಾಗಿ ಮಾಡಿದ್ದು ತಪ್ಪು. ಇದರಿಂದ ಯಾರಿಗಾದೂ ತಾಗಿ ಅನಾಹುತವಾಗಬಹುದು. ಈ ಬಗ್ಗೆ ಈಗಾಗಲೇ ಎಫ್ ಐ ಆರ್ ದಾಖಲಾಗಿದೆ ಎಂದರು.

  • ಕರಾವಳಿ ಉಗ್ರರ ಅಡ್ಡೆಯಾಗದಂತೆ ತಡೆಯಿರಿ- ಎನ್‍ಐಎ ಕೇಂದ್ರ ಸ್ಥಾಪನೆಗೆ ಹಿಂದೂ ಜಾಗರಣ ವೇದಿಕೆ ಒತ್ತಾಯ

    ಕರಾವಳಿ ಉಗ್ರರ ಅಡ್ಡೆಯಾಗದಂತೆ ತಡೆಯಿರಿ- ಎನ್‍ಐಎ ಕೇಂದ್ರ ಸ್ಥಾಪನೆಗೆ ಹಿಂದೂ ಜಾಗರಣ ವೇದಿಕೆ ಒತ್ತಾಯ

    ಉಡುಪಿ: ಕರಾವಳಿಯಲ್ಲಿ ಎನ್‍ಐಎ ಕೇಂದ್ರ ಸ್ಥಾಪಿಸುವ ಮೂಲಕ ಉಗ್ರರ ಅಡ್ಡೆ ಆಗದಂತೆ ತಡೆಯಿರಿ ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ.

    ಜಿಲ್ಲೆಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉಡುಪಿಯ ರಜತಾದ್ರಿ ಕಟ್ಟಡದ ಬಳಿ ಪ್ರತಿಭಟಿಸಿದ ಹಿಂಜಾವೇ ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸಮುದ್ರ ತಟದಲ್ಲಿ ರಕ್ಷಣೆ ಭದ್ರಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಲವ್ ಜಿಹಾದ್ ಮತ್ತು ಉಗ್ರಗಾಮಿ ಚಟುವಟಿಕೆಗಳಿಗೆ ನಿಕಟ ಸಂಪರ್ಕವಿದೆ. ಲವ್ ಜಿಹಾದ್ ಕೃತ್ಯ ತಡೆಗಟ್ಟಲು ಉತ್ತರಪ್ರದೇಶ ಮಾದರಿಯ ಕಾನೂನು ರಚನೆ ಮಾಡಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿನ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸಿದ್ಧ: ಜೋಶಿ

    ಮತಾಂತರಗೊಂಡಿರುವ ಹಿಂದೂ ಯುವತಿಯರ ಸದ್ಯದ ಸ್ಥಿತಿಗತಿಗಳ ಬಗ್ಗೆ ತನಿಖೆ ನಡೆಸಬೇಕು. ಉಗ್ರಗಾಮಿ ಚಟುವಟಿಕೆಗಳಿಗೆ ಆರ್ಥಿಕ ಮತ್ತು ನೈತಿಕ ಬೆಂಬಲ ನೀಡುವವರ ಬಗ್ಗೆ ತನಿಖೆ ನಡೆಸಬೇಕು. ಮಂಗಳೂರಿನಲ್ಲಿ ಎನ್‍ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅಪರ ಜಿಲ್ಲಾಧಿಕಾರಿಯವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

  • ಐಸಿಸ್ ಸಂಪರ್ಕ – ಭಟ್ಕಳದಲ್ಲಿ ಓರ್ವ ಅರೆಸ್ಟ್

    ಐಸಿಸ್ ಸಂಪರ್ಕ – ಭಟ್ಕಳದಲ್ಲಿ ಓರ್ವ ಅರೆಸ್ಟ್

    ಕಾರವಾರ: ಐಸಿಸ್ ನೊಂದಿಗೆ ನಂಟು ಹೊಂದಿರುವ ಶಂಕೆಯ ಮೇರೆಗೆ ಭಟ್ಕಳದಲ್ಲಿ ಮತ್ತೆ ಎನ್‍ಐಎ ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಲಾಗಿದೆ.

    ಪಟ್ಟಣದ ಉಮರ್ ಸ್ಟ್ರೀಟ್ ಹಾಗೂ ತೆಂಗಿನಗುಂಡಿಯ ಸಾಗರ ರಸ್ತೆಯಲ್ಲಿರುವ ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿ ಓರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಜುಪ್ರಿ ಜವಾಹರ್ ದಾಮುದಿ ಎಂದು ಗುರುತಿಸಲಾಗಿದೆ. ಈತ ಐಸಿಸ್ ವೈಸ್ ಆಫ್ ಹಿಂದ್ ನ ವೆಬ್ ಸೈಟ್ ಮೂಲಕ ಭಯೋತ್ಪಾದಕ ಸಂಬಂಧಿ ಬರಹಗಳನ್ನು ದಕ್ಷಿಣ ಭಾರತೀಯ ಭಾಷೆಗಳಿಗೆ ಭಾಷಾಂತರಿಸುತ್ತಿದ್ದ. ಅಬು ಹಜೀರ್ ಅಲ್ ಬದ್ರಿ ಎಂಬುವವನ ಸಂಪರ್ಕದಲ್ಲಿದ್ದ ಕಾರಣ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಇದನ್ನೂ ಓದಿ: ಭಟ್ಕಳದಲ್ಲಿ NIA ದಾಳಿ- ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

    ಜುಪ್ರಿ ಜವಾಹರ್ ದಾವುದಿ ಸದ್ಯ ಅಫ್-ಪಾಕ್ ಪ್ರದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಐಸಿಸ್ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದನು. ಅವರು ಭಯೋತ್ಪಾದಕ ಸಂಬಂಧಿ ವಿಚಾರಗಳನ್ನು ಈತನ ಮೂಲಕ ಪ್ರಚಾರ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ತನಿಖೆ ನಡೆಸಿದ ಎನ್‍ಐಎ ಅಧಿಕಾರಿಗಳಿಗೆ ಭಟ್ಕಳದ ಜುಪ್ರಿ ಬಳಿ ಎನ್ಕ್ರಿಪ್ಟ್ ಸಂದೇಶ ವಿನಿಮಯ ಮಾಡಿದ್ದ ಮತ್ತು ಈತ ಐಸಿಸ್ ಪ್ರಸಾರ ಚಾನಲ್ ಗಳಲ್ಲಿ ಸದಸ್ಯನಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ಮಾಜಿ ಶಾಸಕ ಇದಿನಬ್ಬನವರ ಮೊಮ್ಮಗನಿಗೆ ಐಸಿಸ್ ನಂಟು – ಎನ್‍ಐಎಯಿಂದ ಅರೆಸ್ಟ್

    ಈ ಎಲ್ಲ ಮಾಹಿತಿ ಆಧರಿಸಿ ಶುಕ್ರವಾರ ಬೆಳಗ್ಗೆಯೇ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಗುಪ್ತವಾಗಿ ದಾಳಿ ಮಾಡಿರುವ ಎನ್‍ಐಎ ಅಧಿಕಾರಿಗಳು, ಎರಡು ಮನೆಗಳ ಪರಿಶೀಲನೆ ನಡೆಸಿ, ಒಟ್ಟು ಮೂವರನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಎಲ್ಲರನ್ನೂ ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದು, ಅದರಲ್ಲಿ ಜುಪ್ರಿ ಜವಾಹರ್ ದಾಮುದಿ ಬಂಧಿಸಲಾಗಿದೆ. ಅಲ್ಲದೆ ಈತ ಬಳಸುತ್ತಿದ್ದ ಹಲವು ಮೊಬೈಲ್, ಹಾರ್ಡ್ ಡಿಸ್ಕ್, ಎಸ್‍ಡಿ ಕಾರ್ಡ್ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಸಂಬಂಧ ತನಿಖೆ ಮುಂದುವರಿದಿದೆ.

    ದಾಳಿಯ ವೇಳೆ ಭಟ್ಕಳ ತಾಲೂಕಿನ ಹಲವೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ವಶಕ್ಕೆ ಪಡೆದಿರುವವರ ಮನೆಯ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ತನಿಖೆ ನಡೆಯುತ್ತಿದೆ.