Tag: NIA

  • ಎನ್‌ಐಎಗೆ ಸುಹಾಸ್ ಶೆಟ್ಟಿ ಕೊಲೆ ಕೇಸ್ – ಚರ್ಚೆ ಮಾಡಿ ತೀರ್ಮಾನ: ಪರಮೇಶ್ವರ್

    ಎನ್‌ಐಎಗೆ ಸುಹಾಸ್ ಶೆಟ್ಟಿ ಕೊಲೆ ಕೇಸ್ – ಚರ್ಚೆ ಮಾಡಿ ತೀರ್ಮಾನ: ಪರಮೇಶ್ವರ್

    ಬೆಂಗಳೂರು: ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣ ಎನ್‌ಐಎ (NIA) ತನಿಖೆಗೆ ಕೊಟ್ಟಿರುವ ಬಗ್ಗೆ ಇಂದು ಸಭೆ ಮಾಡಿ ತೀರ್ಮಾನ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದ್ದಾರೆ.

    ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್‌ಐಎಗೆ ವಹಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಕೊಲೆ ಕೇಸ್ ಎನ್‌ಐಎಗೆ ಕೇಂದ್ರ ಗೃಹ ಇಲಾಖೆ ಕೊಟ್ಟಿದೆ ಎಂಬ ಮಾಹಿತಿ ಬಂದಿದೆ. ಕೇಂದ್ರದಿಂದ ಪತ್ರ ಬಂದಿರುವ ಬಗ್ಗೆ ಡಿಜಿ ಅವರು ನನ್ನ ಗಮನಕ್ಕೆ ತಂದಿದ್ದಾರೆ. ಯಾಕೆ ಕೊಟ್ಟರು ಎಂಬ ಮಾಹಿತಿ ಇಲ್ಲ. ಅಧಿಕೃತವಾಗಿ ಇವತ್ತು ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ನನ್ನ ಖಾತೆ ಬದಲಾವಣೆ ಮಾಡಿ ಅಂತ ಮುಖ್ಯಮಂತ್ರಿಗಳ ಬಳಿ ಕೇಳಿಲ್ಲ: ಪರಮೇಶ್ವರ್

    ಕೇಂದ್ರ ಗೃಹ ಇಲಾಖೆಗೆ ಯಾರು ಪತ್ರ ಬರೆದು ಮನವಿ ಮಾಡಿದ್ರೋ ಗೊತ್ತಿಲ್ಲ. ಬಿಜೆಪಿ ನಾಯಕರು, ಶಾಸಕರು, ಸಂಸದರು ಪತ್ರ ಬರೆದಿದ್ದರು ಅಂತ ನನಗೆ ಗೊತ್ತಿಲ್ಲ. ಆದರೆ ನಮಗೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ. ಇವತ್ತು ಈ ಬಗ್ಗೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಆರೋಪ – ಓಯೋ ರೂಮಿನಲ್ಲಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ

  • ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ NIA ಹೆಗಲಿಗೆ

    ನವದೆಹಲಿ: ಕೇಂದ್ರ ಗೃಹ ಸಚಿವಾಲಯ (MHA)  ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ  ಹತ್ಯೆ ಪ್ರಕರಣದ (Suhas Shetty Murder Case) ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA)  ವಹಿಸಿದೆ.

    ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು.

    ಮೇ 1 ರಂದು ಫಾಜಿಲ್‌ ಹತ್ಯೆಯ ಆರೋಪಿ ಸುಹಾಸ್‌ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್‌ ನಡೆದಿದೆ. ರಾಜ್ಯದ ಪೊಲೀಸ್‌ (Police) ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು.

    ವಿಜಯೇಂದ್ರ ಸ್ವಾಗತ:
    ಕರಾವಳಿ ಜನತೆಯ ಮನವಿಗೆ ಸ್ಪಂದಿಸಿ ನಮ್ಮ ಕೇಂದ್ರ ಸರ್ಕಾರ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿರುವ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ, ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

    ಕರಾವಳಿಯಲ್ಲಿ ಹಿಂದೂ ಸಮುದಾಯ ಆತಂಕ ಪಡುವ ಪರಿಸ್ಥಿತಿ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಭೀಕರವಾಗಿ ನಡು ರಸ್ತೆಯಲ್ಲಿ ಸುಹಾಸ್ ಕೊಲೆ ನಡೆದಿದೆ, ಈ ಪ್ರಕರಣದ ತನಿಖೆಯ ಹಾದಿ ಕಾಂಗ್ರೆಸ್ ಸರ್ಕಾರದ ಆಡಳಿತದ ನೆರಳಿನಲ್ಲಿ ದಿಕ್ಕು ತಪ್ಪುತ್ತಿದ್ದ ಪರಿ ಹಾಗೂ ನ್ಯಾಯದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರ ನಿರೀಕ್ಷೆ ಕುಸಿಯುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎನ್ಐಎ ಗೆ ವಹಿಸಿರುವ ಕ್ರಮ ಕೊಲೆಗಡುಕರಿಗೆ ಶಿಕ್ಷೆಯಾಗುವ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳ ಷಡ್ಯಂತರ ಬಯಲು ಮಾಡುವ ಭರವಸೆ ಹುಟ್ಟಿಸಿದೆ ಎಂದಿದ್ದಾರೆ.

    ಕೋಮು ನಿಗ್ರಹ ದಳದ ಮೂಲಕ ಹಿಂದೂ ಕಾರ್ಯಕರ್ತರನ್ನಷ್ಟೇ ಟಾರ್ಗೆಟ್ ಮಾಡಿ ಕರಾವಳಿ ಪ್ರದೇಶದಲ್ಲಿ ಹಿಂದೂ ಸಮಾಜದ ಯುವಕರ ಭವಿಷ್ಯವನ್ನು ಮುಸುಕಾಗಿಸುವ ಮುಸ್ಲಿಂ ಓಲೈಕೆಯ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆಯನ್ನು ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಬಳಸಿಕೊಳ್ಳುತ್ತಿದ್ದು ಈ ಸಂಬಂಧ ಬಿಜೆಪಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ CRPF ಸಿಬ್ಬಂದಿ ಅರೆಸ್ಟ್ – ಜೂ.6ರ ವರೆಗೆ NIA ಕಸ್ಟಡಿಗೆ

    ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ CRPF ಸಿಬ್ಬಂದಿ ಅರೆಸ್ಟ್ – ಜೂ.6ರ ವರೆಗೆ NIA ಕಸ್ಟಡಿಗೆ

    – ಭಯೋತ್ಪಾದಕ ದಾಳಿಗೆ 6 ದಿನ ಮುಂಚಿತವಾಗಿ ಪಹಲ್ಗಾಮ್‌ಗೆ ವರ್ಗವಣೆಯಾಗಿದ್ದ ಸಿಬ್ಬಂದಿ
    – 2 ವಾರಗಳಲ್ಲಿ 15 ಪಾಕ್‌ ಸ್ಪೈಗಳು ಅರೆಸ್ಟ್‌

    ನವದೆಹಲಿ: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (PIO) ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇಂದ್ರ ಮೀಸಲು ಪಡೆ (CRPF) ಸಿಬ್ಬಂದಿಯೊಬ್ಬರನ್ನು ಬಂಧಿಸಿದೆ.

    ಬಂಧಿಸಲ್ಪಟ್ಟ ಸಿಆರ್‌ಪಿಎಫ್‌ ಸಿಬ್ಬಂದಿಯನ್ನ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಪಹಲ್ಗಾಮ್‌ನಲ್ಲಿ 26 ಮಂದಿಯ ನರಮೇಧ ನಡೆಯುವುದಕ್ಕೆ 6 ದಿನಗಳ ಮುಂಚೆ ಅವರನ್ನ ಅಲ್ಲಿಗೆ ವರ್ಗಾತಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಬಂಧಿತ ಆರೋಪಿಯನ್ನ ಮೋತಿ ರಾಮ್‌ ಜಾಟ್‌ ಎಂದು ಗುರುತಿಸಲಾಗಿದೆ.

    ಈತ 2023 ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (ಪಿಐಒ) ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ. ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ. ಅದಕ್ಕಾಗಿ ಪಾಕಿಸ್ತಾನಿ ಅಧಿಕಾರಿಗಳಿಂದ ಬಹು ಮಾರ್ಗಗಳ ಮೂಲಕ ಹಣ ಪಡೆಯುತ್ತಿದ್ದ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

    ಸಿಆರ್‌ಪಿಎಫ್‌ನ 116ನೇ ಬೆಟಾಲಿಯನ್‌ನಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಮೋತಿ ರಾಮ್ ಜಾಟ್‌ರನ್ನ ಕಳೆದ ಏಪ್ರಿಲ್ 22 ರಂದು ಹಿಂದೂಗಳ ನರಮೇಧ ನಡೆಯುವುದಕ್ಕೆ 6 ದಿನಗಳ ಹಿಂದೆ ಪಹಲ್ಗಾಮ್‌ಗೆ ವರ್ಗಾವಣೆ ಮಾಡಲಾಗಿತ್ತು.

    ದೆಹಲಿಯಲ್ಲಿ ಮೋತಿ ರಾಮ್ ಅವರನ್ನು ಎನ್‌ಐಎ ಬಂಧಿಸಿದ್ದು, ಪಟಿಯಾಲ ಹೌಸ್ ವಿಶೇಷ ನ್ಯಾಯಾಲಯವು ಮೋತಿ ರಾಮ್ ಅವರನ್ನ ಜೂನ್ 6ರ ವರೆಗೆ ಎನ್‌ಐಎ ಕಸ್ಟಡಿಗೆ ನೀಡಿದೆ ಆದೇಶಿಸಿದೆ.

    ಏಪ್ರಿಲ್‌ 22ರ ಪಹಲ್ಗಾಮ್‌ ದಾಳಿಯ ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆ ಬೇಹುಗಾರಿಕೆ ಚಟುವಟಿಕೆಗಳ ವಿರುದ್ಧ ಸಮರ ಸಾರಿದೆ. ಇದರ ಪರಿಣಾಮ ಕಳೆದ 2 ವಾರಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ 15ಕ್ಕೂ ಹೆಚ್ಚು ಬೇಹುಗಾರರನ್ನ ಬಂಧಿಸಲಾಗಿದೆ.

  • ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ

    ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ

    ಚಂಡೀಗಢ: ಪಾಕಿಸ್ತಾನದ (Pakistan) ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ (Haryana) ಮೂಲದ ಯೂಟ್ಯೂಬರ್ (Youtuber) ಸೇರಿ ಇಬ್ಬರನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.

    ಜ್ಯೋತಿ ಮಲ್ಹೋತ್ರಾ ಹಾಗೂ ಗುಜಾಲಾ ಬಂಧಿತ ಆರೋಪಿಗಳು. 2023ರಲ್ಲಿ ಪಾಕ್‌ಗೆ ಹೋಗಿದ್ದ ಜ್ಯೋತಿ ಪಾಕ್ ಹೈಕಮಿಷನ್ ಉದ್ಯೋಗಿ ಡ್ಯಾನಿಶ್ ಜೊತೆ ನಿಕಟ ಸಂಬಂಧ ಬೆಳೆಸಿದ್ದಳು.  ಅಲ್ಲದೇ ಪಾಕ್ ಗುಪ್ತಚರ ಏಜೆಂಟ್‌ಗಳೊಂದಿಗೆ ಸಹ ಸಂಪರ್ಕ ಹೊಂದಿದ್ದಳು.  ಮೇ 1 3ರಂದು ಡ್ಯಾನಿಶ್‌ನನ್ನು ಸರ್ಕಾರ  ಮನೆಗೆ ಕಳುಹಿಸಿತ್ತು. ‘ಟ್ರಾವೆಲ್ ವಿತ್ ಜೋ’ ಯೂಟ್ಯೂಬ್ ನಡೆಸುತ್ತಿದ್ದ ಜ್ಯೋತಿ ತನ್ನ ಯೂಟ್ಯೂಬ್‌ ಚಾನಲ್‌ನಲ್ಲಿ ಪಾಕಿಸ್ತಾನ ಪರ ಇರುವ ವಿಷಯಗಳನ್ನು ಅಪ್ಲೋಡ್‌ ಮಾಡುತ್ತಿದ್ದಳು. ಅಲ್ಲದೇ ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ ನೀಡುತ್ತಿದ್ದ ಹರಿಯಾಣದ ಯುವಕ ಅರೆಸ್ಟ್

    ಜ್ಯೋತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152 ಮತ್ತು 1923ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3, 4 ಮತ್ತು 5ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಹಿಸಾರ್‌ನ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಸಾಕ್ಷಿ ಕೇಳೋರನ್ನ ಪಾಕಿಸ್ತಾನಕ್ಕೆ ಕಳಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕಿಡಿ

  • ಪುಣೆಯ ಐಸಿಸ್‌ ಮಾಡ್ಯೂಲ್‌ ಕೇಸ್‌ – ಇಬ್ಬರು ಉಗ್ರರ ಬಂಧನ

    ಪುಣೆಯ ಐಸಿಸ್‌ ಮಾಡ್ಯೂಲ್‌ ಕೇಸ್‌ – ಇಬ್ಬರು ಉಗ್ರರ ಬಂಧನ

    ನವದೆಹಲಿ: ಪುಣೆಯ ಐಸಿಸ್( ISIS) ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ.

    ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಇಬ್ಬರನ್ನೂ ಇಂಡೋನೇಷ್ಯಾದಲ್ಲಿ ಬಂಧಿಸಲಾಗಿದೆ. ಇಬ್ಬರನ್ನು ಭಾರತಕ್ಕೆ ಕಳುಹಿಸಲಾಗಿದ್ದು, ಮುಂಬೈನಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ಖಂಡಾಂತರ ಕ್ಷಿಪಣಿ ದಾಳಿಗೆ ನೂರ್‌ ಖಾನ್‌ ವಾಯುನೆಲೆ ಧ್ವಂಸ – ʻಆಪರೇಷನ್ ಸಿಂಧೂರʼದ ಯಶಸ್ಸು ಒಪ್ಪಿಕೊಂಡ ಪಾಕ್ ಪ್ರಧಾನಿ

    ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಮೂಲಕ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ತನಿಖೆಯಲ್ಲಿ ಈ ಬಂಧನವು ಪ್ರಮುಖ ಹಂತವೆಂದು ಪರಿಗಣಿಸಲಾಗಿದೆ.

    ಎನ್‌ಐಎ ಪ್ರಕಾರ, ಆರೋಪಿಗಳು ಐಇಡಿಗಳಿಗಾಗಿ ಕಾರ್ಯಾಗಾರಗಳನ್ನು ಆಯೋಜಿಸುವುದು, ಗುಂಡು ಹಾರಿಸುವ ಅಭ್ಯಾಸಕ್ಕಾಗಿ ಸ್ಥಳಗಳನ್ನು ಹುಡುಕುವುದು ಮತ್ತು ಕಾಡುಗಳಲ್ಲಿ ಅಡಗಿಕೊಳ್ಳುವುದು, ಹಾಗೆಯೇ ಸಶಸ್ತ್ರ ದರೋಡೆ ಮತ್ತು ಕಳ್ಳತನದ ಮೂಲಕ ಹಣವನ್ನು ಸಂಗ್ರಹಿಸುವುದು ಮುಂತಾದ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಪಾಕ್‌ಗೆ ಡ್ರೋನ್ ಸಪ್ಲೈ ಮಾಡಿದ ಟರ್ಕಿಗೆ ಕಂಟಕ – ಟರ್ಕಿ ಮಾರ್ಬಲ್‌ಗೆ ಬೆಂಗಳೂರಲ್ಲಿ ಬಹಿಷ್ಕಾರ

    ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ‘ದಿಯಾಪರ್‌ವಾಲಾ’ ಪುಣೆಯ ಕೊಂಡವದಲ್ಲಿರುವ ಮಿತಾನಗರ ನಿವಾಸಿಯಾಗಿದ್ದರೆ, ತಲ್ಹಾ ಲಿಯಾಕತ್ ಖಾನ್ ವನ್ವಾಡಿ (ಪುಣೆ)ಯಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಸ್ವಲ್ಪ ಸಮಯದಿಂದ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ, ಎನ್‌ಐಎ 3 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

  • ಸುಹಾಸ್ ಶೆಟ್ಟಿ ಹತ್ಯೆ ಕೇಸ್ | NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿಗೆ ಪಾಕ್ ಸಂಪರ್ಕವಿದೆ: ಅಶೋಕ್

    ಸುಹಾಸ್ ಶೆಟ್ಟಿ ಹತ್ಯೆ ಕೇಸ್ | NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿಗೆ ಪಾಕ್ ಸಂಪರ್ಕವಿದೆ: ಅಶೋಕ್

    ಮಂಗಳೂರು/ಬೆಂಗಳೂರು: ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಂಗ್ರೆಸ್  (Congress) ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎಗೆ (NIA) ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ತಿಳಿಸಿದರು.

    ಬಿಜೆಪಿಯ (BJP) ಪ್ರಮುಖರೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಇದನ್ನೂ ಓದಿ: ಭಾರತೀಯ ಯೋಧರಿಗೆ ಶಕ್ತಿ ತುಂಬಲು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಗ್ಗೆ ವಿವರಣೆ ನೀಡಿ, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಕೊಲೆಯಾಗಿದ್ದ ಮುಸ್ಲಿಂ ಹುಡುಗನ ಕುಟುಂಬಕ್ಕೆ ಕಾಂಗ್ರೆಸ್ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ಅವರು, ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಸ್ಪೀಕರ್ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದರು.

    ಕಾಂಗ್ರೆಸ್ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದAತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: IPL 2025 ಟೂರ್ನಿ 1 ವಾರ ಸ್ಥಗಿತ – ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

  • ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಎನ್ಐಎ ತನಿಖೆ ಅಗತ್ಯ ಇಲ್ಲ: ಪರಮೇಶ್ವರ್

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಎನ್ಐಎ ತನಿಖೆ ಅಗತ್ಯ ಇಲ್ಲ: ಪರಮೇಶ್ವರ್

    ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(NIA) ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Parameshwara) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ನಾಯಕರು (BJP Leaders) ಹೇಳುತ್ತಿರುವುದು ಅವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಎಂಟು ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ ಅದರ ಅಗತ್ಯ ಇಲ್ಲ ಎಂದರು.

     

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರ ಬಗ್ಗೆ ಮಾತಾಡಿದ ಪರಮೇಶ್ವರ್, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್‌ಗಳು ಅವರ ಮೇಲಿವೆ. ಹಾಗಾಗಿ ನಾವು ಹಾಗೂ ಭೇಟಿ ಕೊಟ್ಟಿಲ್ಲ. ಆದರೆ ಸುಹಾಸ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಪರಮೇಶ್ವರ್ ಭರವಸೆ ನೀಡಿದರು.

    ಇದು ಪ್ರತೀಕಾರಕ್ಕೆ ನಡೆದಿದೆಯಾ ಇಲ್ವಾ ಎನ್ನುವುದು ಗೊತ್ತಿಲ್ಲ. ಏನೇ ಕಾರಣ ಇದ್ದರೂ ತನಿಖೆ ನಡೆಸಿದ ಮೇಲೆ ಗೊತ್ತಾಗುತ್ತದೆ. ನಾವು ಊಹೆ ಮಾಡಿ‌ ಇದೇ ಕಾರಣ ಅಂತ ಹೇಳಲು ಬರುವುದಿಲ್ಲ. ತನಿಖೆ ಮುಗಿಯೋವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದರು.

  • ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

    ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

    ಮಂಗಳೂರು: ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ನಡೆದಿದೆ. ಮಗನ ಸಾವಿನಿಂದ ಕಂಗೆಟ್ಟಿರುವ ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ (NIA) ನೀಡುವಂತೆ ಆಗ್ರಹಿಸಿದ್ದಾರೆ.

    ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಪ್ರಕರಣ ಭೇದಿಸಿರುವ ಮಂಗಳೂರಿನ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ‌ ಬಳಿಕ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದು

     

     

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ನಡೆಸಿದ ಎಲ್ಲಾ ಆರೋಪಿಗಳಿಗೆ ಮರಣದಂಡನೆ ನೀಡಬೇಕೆಂದು ತಾಯಿ ಸುಲೋಚನ ಶೆಟ್ಟಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ಎನ್‌ಐಎ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಮ್ಮ ಮಗನಿಗೆ ಪೊಲೀಸರು ತೊಂದರೆ ಕೊಟ್ಟಿದ್ದಾರೆ. ಈ ರೀತಿ ಆಗಲು ಬಜ್ಪೆ ಪೊಲೀಸರೇ ಕಾರಣ, ಅವರೂ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಕೆಲ ದಿನಗಳಿಂದ ಪೊಲೀಸರು ಕಿರುಕುಳ ಹೆಚ್ಚಿಸಿದ್ದು, ವಾಹನವನ್ನು ತಪಾಸಣೆ ಮಾಡುತ್ತಿದ್ದರು. ಏನಾದರೂ ನಾವು ಹೇಳಿದಂತೆ ಕೇಳದಿದ್ದರೆ ಕಾಲಿಗೆ ಗುಂಡು ಹಾಕುತ್ತೇವೆ ಎಂದು ಹೆದರಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್‌ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ

    ಇನ್ನು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮಾತನಾಡಿ, ಕೆಲವರು ನನ್ನ ಮಗನನ್ನು ರೌಡಿ ಶೀಟರ್ ಎಂದು ಬಿಂಬಿಸುತ್ತಿದ್ದಾರೆ. ಅವನು ರೌಡಿಶೀಟರ್ ಆಗಿದ್ದರೆ ನಮ್ಮ ಮನೆ ಹೀಗೆ ಇರುತ್ತಿತ್ತಾ? ನನ್ನ ಪತ್ನಿಗೆ ಕ್ಯಾನ್ಸರ್ ಚಿಕಿತ್ಸೆ ನೀಡಲು ಪರದಾಡುತ್ತಿದ್ದೇವೆ. ನಮ್ಮ ಹೆಸರಿನಲ್ಲಿ ಸಾಲ ಮಾಡಿ ಅವನ ವ್ಯವಹಾರಕ್ಕೆ ಸಹಾಯ ಮಾಡಿದ್ದೆ. ಮಂಗಳೂರಿನಲ್ಲಿ ಮರಳಿನ ವ್ಯವಹಾರ ಮಾಡುತ್ತಿದ್ದ. ಮನೆಗೆ ಆಧಾರ ಸ್ಥಂಭವಾಗಿದ್ದ ಮಗನನ್ನು ಕಳೆದುಕೊಂಡ ನಮಗೆ ನ್ಯಾಯ ಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಅವರ ಮನೆಯ ಆಧಾರ ಸ್ತಂಭವೇ ಕುಸಿದು ಬಿದ್ದಂತಾಗಿದೆ. ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿದ್ದ ಸುಹಾಸ್ ಶೆಟ್ಟಿ ತನ್ನ ಗುಡಿಸಲಿನಂತಿರುವ ಮನೆಯಲ್ಲೇ ತಂದೆ ತಾಯಿಯೊಂದಿಗೆ ಇದ್ದು, ಆದಷ್ಟು ಬೇಗ ಹೊಸ ಮನೆ ಕಟ್ಟಿ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ ವಿಧಿಯಾಟವೇ ಬೇರೆ ಆಗಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬರ್ಬರವಾಗಿ ಹತ್ಯೆ ಆಗಿದ್ದಾನೆ. ಇದನ್ನೂ ಓದಿ: ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಮೃತ ಸುಹಾಸ್ ಶೆಟ್ಟಿ ತಾಯಿ ಆಗ್ರಹಿಸಿದ್ದು, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

  • ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

    ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

    ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ (Suhas Shetty Case) ಅನ್ನು ಎನ್‌ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಸದಾನಂದ ಗೌಡ (Sadananda Gowda) ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

    ಸುಹಾಸ್ ಕೇಸ್‌ನಲ್ಲಿ 8 ಜನರ ಬಂಧನ ಆಗಿದೆ. ಆದರೆ ಅಶ್ರಫ್ ಕೊಲೆ ಕೇಸ್‌ನಲ್ಲಿ 25 ಜನ ಅರೆಸ್ಟ್ ಮಾಡ್ತಾರೆ. ಆದರೆ ಈ ಕೇಸ್ ನಲ್ಲಿ ಅಲ್ಲೇ 25 ಜನ ಇದ್ದರು,ಬುರ್ಕಾ ಹಾಕಿರೋ ವಿಡಿಯೋ ಇದ್ದರು ಅರೆಸ್ಟ್ ಆಗಿಲ್ಲ. ಈ ಸರ್ಕಾರ ಮೈನಾರಿಟಿ ಪರ ಅಂತ ತೋರಿಸಿಸೋಕೆ ಹೋಗ್ತಿದೆ.ಈ ಸರ್ಕಾರ ಈ ಕೇಸ್ ನಲ್ಲಿ ಏನು ಮಾಡೊಲ್ಲ. ಜನರು ಬೀದಿಗೆ ಇಳಿಯಬೇಕು. ಹೀಗಾಗಿ ಈ ಕೇಸ್ ಎನಐಎಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

    ಕರಾವಳಿ ಭಾಗದಲ್ಲಿ ಇಂತಹ ಕೇಸ್ ಹೆಚ್ಚು ಆಗುತ್ತಿದೆ. ಹೀಗಾಗಿ ಎನ್‌ಐಎ (NIA) ಬ್ರ‍್ಯಾಂಚ್ ಈ ಭಾಗದಲ್ಲಿ ಪ್ರಾರಂಭ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು. ಈ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕೇವಲ ಸಚಿವರು ಮೈನಾರಿಟಿ ಅವರನ್ನು ಕರೆದು ಸಭೆ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕರೆದಿಲ್ಲ. ಇಂತಹ ಘಟನೆ ಆದರೆ ಆರ್‌ಎಸ್‌ಎಸ್, ಬಿಜೆಪಿ ಬಿಟ್ಟರೆ ಇವರು ಬೇರೆ ಯಾರ ಮೇಲೂ ಹೇಳಲ್ಲ. ಇಂತಹ ರಾಜನೀತಿ ಸಮಾಜಕ್ಕೆ ದೊಡ್ಡ ಮಾರಕ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

    ಕೊಲೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಮಾಡುವ ಪೋಸ್ಟರ್ ಹರಿದಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಶೆಟ್ಟಿಗೆ ರಕ್ಷಣೆ ಕೊಡಬೇಕಿತ್ತು. ಬೇರೆ ಕೇಸ್‌ನಲ್ಲಿ ಆರೋಪಿ ಆಗಿದ್ದ. ಸರ್ಕಾರ ಆತನ ಜೀವ ರಕ್ಷಣೆ ಮಾಡಬೇಕಿತ್ತು. ಇದನ್ನ ಮಾಡದೇ ಇರುವುದರಿಂದ ಇದಕ್ಕೆ ಒಂದು ಹಂತದಲ್ಲಿ ಸರ್ಕಾರದ ಲೋಪ ಇದೆ. ಒಲೈಕೆ ರಾಜಕೀಯ ಜಾಸ್ತಿ ಆಗುತ್ತಿದೆ. ಸರ್ಕಾರ ಇದನ್ನ ಬಿಡಬೇಕು. ಸರ್ಕಾರ ಒಂದು ಸಮುದಾಯಕ್ಕೆ ಬೆಂಬಲ ಕೊಡುತ್ತಿದೆ. ಕರಾವಳಿ ಭಾಗದಲ್ಲಿ ಎಲ್ಲಾ ಹಿಂದೂಗಳು ಬೀದಿಗೆ ಇಳಿದರೆ ಏನು ಆಗಬಹುದು. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ಕೊಡೋದಲ್ಲ ಬಹುಸಂಖ್ಯಾತರ ರಕ್ಷಣೆಯೂ ಮಾಡಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ

    ಅಲ್ಪಸಂಖ್ಯಾತರಿಂದ ಕಾಂಗ್ರೆಸ್ 15 ಸೀಟು ಗೆದ್ದಿರಬಹುದು. ಉಳಿದ ಸೀಟು ಯಾರಿಂದ ಗೆದ್ದಿರಿ. ಜೆಡಿಎಸ್ ಈಗ ಎನ್‌ಡಿಎ ಜೊತೆ ಬಂದಿದೆ. ಅವರ ಜೊತೆ ಇದ್ದ ಅಲ್ಪಸಂಖ್ಯಾತರ ಮತಗಳ ಒಲೈಕೆ ಮಾಡೋಣ ಎಂದು ಹೋಗುತ್ತಿದ್ದಾರೆ. ಕ್ರಿಶ್ಚಿಯನ್ನರು ಕರಾವಳಿ ಭಾಗದಲ್ಲಿ ಇದ್ದಾರೆ. ಅವರು ಹೀಗೆ ಮಾಡುತ್ತಾರೆ. ಕಾಂಗ್ರೆಸ್ ಅವರು ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲಾ ದುರ್ಯೋಧನನ ಪಾತ್ರವೇ ಎಂದು ಗುಡುಗಿದರು. ಇದನ್ನೂ ಓದಿ: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ

  • ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಎನ್‌ಐಎಗೆ ಹಸ್ತಾಂತರಿಸಲು ಅಮಿತ್ ಶಾಗೆ ಸಂಸದ ಕ್ಯಾ.ಚೌಟ ಪತ್ರ

    ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಎನ್‌ಐಎಗೆ ಹಸ್ತಾಂತರಿಸಲು ಅಮಿತ್ ಶಾಗೆ ಸಂಸದ ಕ್ಯಾ.ಚೌಟ ಪತ್ರ

    ಮಂಗಳೂರು: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತ್‌ಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ (Captain Brijesh Chowta) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲೇನಿದೆ?
    ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಘಟನೆಯಿಂದ ನಾನು ದಿಗ್ಭ್ರಮೆಗೊಂಡಿದ್ದು, ಭೀಕರ ಕೊಲೆ ಕೃತ್ಯದ ಕುರಿತು ತೀವ್ರ ಆತಂಕ ಮತ್ತು ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಘಟನೆಯು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರತೆ, ಬಲಗೊಳ್ಳುತ್ತಿರುವ ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳ ಅಟ್ಟಹಾಸಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯು ಕರಾವಳಿ ಮಾತ್ರವಲ್ಲ, ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್‌ಡಿಪಿಐ, ಪಿಎಫ್ಐ ಮೇಲಿನ ಕೇಸ್‌ ವಾಪಸ್‌ ಪಡೆದು ಅಪರಾಧಕ್ಕೆ ಬೆಂಬಲ: ಸಿಎಂ ವಿರುದ್ಧ ಸಿ.ಟಿ ರವಿ ಕೆಂಡ

    ಈ ಹಿಂದೆಯೂ ಇದೇ ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರಾದ ಸುಳ್ಯದ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ನಡೆಸಿದ್ದರು. ಈ ಸಂಘಟನೆಯನ್ನು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಈಗಾಗಲೇ ನಿಷೇಧಿಸಿದೆ. ಇಷ್ಟಾಗಿಯೂ ಈಗ ಪ್ರವೀಣ್ ಮಾದರಿಯಲ್ಲೇ ಮತ್ತೊಬ್ಬ ಹಿಂದೂ ಯುವಕ ತನ್ನ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ನೋವಿನ ವಿಚಾರ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್‌ಐನಂತಹ ಮೂಲಭೂತವಾದಿ ಸಂಘಟನೆಗಳು ಇನ್ನೂ ಸ್ಲೀಪರ್ ಸೆಲ್‌ನಂತೆ ಜೀವಂತವಾಗಿರುವುದನ್ನು ಸ್ಪಷ್ಟಪಡಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಇದು ಧರ್ಮದ ನಡುವೆ ಆದ ಗಲಾಟೆ ಅಲ್ಲ: ಯು.ಟಿ.ಖಾದರ್

    ತಮ್ಮ ಮಗನನ್ನು ಕಳೆದುಕೊಂಡಿರುವ ಸುಹಾಸ್ ಶೆಟ್ಟಿ ಅವರ ಕುಟುಂಬವು ದಿಗ್ಭ್ರಾಂತಗೊಂಡು ನ್ಯಾಯಕ್ಕಾಗಿ ಕಾಯುತ್ತಿದೆ. ಈ ಭಾಗದ ಚುನಾಯಿತ ಪ್ರತಿನಿಧಿಯಾಗಿ ಮತ್ತು ಇಲ್ಲಿನ ನೋವು ಹಾಗೂ ಹತಾಶೆಯನ್ನು ವೈಯಕ್ತಿಕವಾಗಿ ಕಂಡಿರುವ ವ್ಯಕ್ತಿಯಾಗಿ, ಈ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಈ ಕೂಡಲೇ ಎನ್‌ಐಎಗೆ (National Investigation Agency) ಹಸ್ತಾಂತರಿಸಬೇಕೆಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

    ಈ ಭೀಕರ ಘಟನೆಯಲ್ಲಿ ನಿಷೇಧಿತ ಪಿಎಫ್‌ಐ (Popular Front of India) ಸಂಘಟನೆಯ ಕಾರ್ಯಕರ್ತರ ಕೈವಾಡದ ಸಾಧ್ಯತೆ ಇರುವುದರಿಂದ ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅತ್ಯಗತ್ಯ. ದಕ್ಷಿಣ ಕನ್ನಡ (Dakshina Kannada) ಮಾತ್ರವಲ್ಲ ಈ ದೇಶದ ಯಾವುದೇ ಭಾಗದಲ್ಲಿ ಮೂಲಭೂತವಾದಿ, ರಾಷ್ಟ್ರ ವಿರೋಧಿ ಮತ್ತು ಜಿಹಾದಿ ಮಾನಸಿಕತೆಯ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕೊಲೆ ಕೃತ್ಯದ ಹಿಂದಿರುವ ಸಮಾಜ ಘಾತುಕ ಸಂಘಟನೆಗಳು, ಹತ್ಯೆ ಹಿಂದಿನ ಒಳಸಂಚು, ಇದರಲ್ಲಿ ಭಾಗಿಯಾದವರು ಹಾಗೂ ಕುಮ್ಮಕ್ಕು ನೀಡಿರುವ ದುಷ್ಟಶಕ್ತಿಯನ್ನು ಬುಡ ಸಮೇತ ಕಿತ್ತು ಹಾಕಬೇಕು. ಆ ಮೂಲಕ ಕಾನೂನು ಮೇಲಿರುವ ಜನರ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ: ವಿಜಯೇಂದ್ರ ಘೋಷಣೆ

    ಸುಹಾಸ್ ಶೆಟ್ಟಿ ಅವರ ಹತ್ಯೆ ವಿಚಾರವಾಗಿ ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ಮಧ್ಯಪ್ರವೇಶಿಸಿ, ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ನೆರವು ನೀಡಿದ ಎಲ್ಲರನ್ನೂ ತ್ವರಿತವಾಗಿ ನ್ಯಾಯದ ಮುಂದೆ ತರಲು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದ್ದಾರೆ.