Tag: NIA

  • ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ

    ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ

    ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ (Communal Violence) ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ (Nagamangala Violence) ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ (Congress) ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್‌ ಮಾಡಲು ಅರೆಸ್ಟ್‌: ಮುನಿರತ್ನ

    ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ. ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್

    ಮುನಿರತ್ನರನ್ನು ತಕ್ಷಣ ಬಂಧನ ಮಾಡಿದ್ದೇಕೆ?
    ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ (Muniratna) ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲಾ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ

    ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ (BJP) ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ

  • ಬಿಜೆಪಿ ಶಾಸಕ ಮುನಿರತ್ನ ಬಂಧನಕ್ಕೆ ಕೇಸರಿ ಕಲಿಗಳು ಕೆಂಡ – ಸರ್ಕಾರದ ವಿರುದ್ಧ ಅಶ್ವಥ್‌ ನಾರಾಯಣ್‌ ತೀವ್ರ ವಾಗ್ದಾಳಿ

    ಬಿಜೆಪಿ ಶಾಸಕ ಮುನಿರತ್ನ ಬಂಧನಕ್ಕೆ ಕೇಸರಿ ಕಲಿಗಳು ಕೆಂಡ – ಸರ್ಕಾರದ ವಿರುದ್ಧ ಅಶ್ವಥ್‌ ನಾರಾಯಣ್‌ ತೀವ್ರ ವಾಗ್ದಾಳಿ

    – ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲು ಆಗ್ರಹ

    ಬೆಂಗಳೂರು: ಶಾಸಕ ಮುನಿರತ್ನ (Munirathna) ಬಂಧನವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಸಂವಿಧಾನ ಪಾಲನೆ ಆಗಿಲ್ಲ ಅಂತಾ ಕಿಡಿಕಾರಿದ್ದಾರೆ ಅಶ್ವಥ್‌ ನಾರಾಯಣ್‌ (Ashwath Narayan), ರವಿಕುಮಾರ್, ಸಿ.ಟಿ ರವಿ ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿಂದು (Bengaluru) ಮಾತನಾಡಿದ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್, ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಯಾರೇ ತಪ್ಪು ಮಾಡಿದ್ರು ಕ್ರಮ ಆಗಬೇಕು. ಆದರೆ ಈ ಸರ್ಕಾರದಲ್ಲಿ ಏನು ಕಾನೂನು ಪಾಲನೆ ಆಗಿದೆ? ಇವರು ಕಾನೂನಿಗೆ ಬೆಲೆ ಕೊಡ್ತಿದ್ದಾರಾ? ಅಂತಾ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: Democracy Day | ಅತೀ ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ 

    ಕಲಬುರಗಿಯಲ್ಲಿ ಪಿಎಸ್‌ಐ ಪರಶುರಾಮ (PSI Parashuram) ಆತ್ಮಹತ್ಯೆ ಮಾಡಿಕೊಂಡರು. ಅಲ್ಲಿನ ಶಾಸಕ, ಶಾಸಕನ ಮಗನ ಬಂಧನ ಆಗಿದೆಯಾ? ವಿಜಯಪುರದಲ್ಲೂ ಕೃಷಿ ಸಚಿವರ ಮೇಲೆ ಆಪಾದನೆ ಮಾಡಿ ಆತ್ಮಹತ್ಯೆ ಆಗಿದೆ ಇದರ ಕ್ರಮ ಆಗಿದೆಯಾ? ಶಿವಮೊಗ್ಗದಲ್ಲಿ ಆತ್ಮಹತ್ಯೆ ಹತ್ಯೆ ಆಗಿದೆ, ಕ್ರಮ ಆಗಿದೆಯಾ? ಸರಣಿ ಪ್ರಶ್ನೆಗಳನ್ನ ಸರ್ಕಾರದ ಮುಂದಿಟ್ಟರು. ಇದನ್ನೂ ಓದಿ: ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್‌

    ಇನ್ನೂ ಎಂಎಲ್‌ಸಿ ರವಿಕುಮಾರ್ (Ravikumar) ಮಾತನಾಡಿ, ಮುನಿರತ್ನ ಬಂಧನ ಪ್ರಕರಣದಲ್ಲಿ ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಚರ್ಚೆ ಮಾಡುತ್ತಾರೆ. ನೋಟಿಸ್‌ ಅಂತೂ ಬಿಜೆಪಿ ಜಾರಿ ಮಾಡಿದೆ. ಆಡಿಯೋ ಅವರದ್ದೇನಾ? ಕಟ್ ಅಂಡ್ ಪೇಸ್ಟ್ ಆಗಿದ್ಯಾ? ಅಥವಾ ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿದ್ರಾ? ಅಂತಾ ಗೊತ್ತಾಗಬೇಕು. ಬಿಜೆಪಿ ಶಾಸಕರನ್ನು ಅರೆಸ್ಟ್ ಮಾಡ್ತೀರಿ, ಕಾಂಗ್ರೆಸ್ ಶಾಸಕರನ್ನು ಮೆರೆಯಲು ಬಿಡುತ್ತೀರಾ? ಎಂದು ಪ್ರಶ್ನಿಸಿದ ಅವರು, ನಾಗಮಂಗಲ ಗಲಭೆ ಪ್ರಕರಣ, ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ‌, ಮುನಿರತ್ನ ಬಂಧನ ವಿಚಾರಗಳಲ್ಲಿ ವಿಪಕ್ಷವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು ಎಂದು ಒತ್ತಾಯಿಸಿದರು.

    ನಾಗಮಂಗಲ ಗಲಭೆ ಕೇಸ್‌ ತನಿಖೆಯನ್ನು ಎನ್‌ಐಎಗೆ ವಹಿಸಿ:
    ಇದೇ ವೇಳೆ ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನ ಎನ್‌ಐಎಗೆ ವಹಿಸಬೇಕು ಅಂತ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಅವರು ಆಗ್ರಹಿಸಿದರು. ಇದನ್ನೂ ಓದಿ: ಪರಪ್ಪನ ಅಗ್ರಹಾರಕ್ಕೆ ಏಕಾಏಕಿ ಸಿಸಿಬಿ ದಾಳಿ: 18 ಮೊಬೈಲ್, ಮಾದಕ ವಸ್ತು, ಹಣ ಸೀಜ್

    ರಾಜ್ಯ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಕಾಂಗ್ರೆಸ್ ಕಾನೂನು ನಿರ್ವಹಣೆ ಮಾಡೋದ್ರಲ್ಲಿ ವಿಫಲವಾಗಿದೆ. ನಾಗಮಂಗಲ ವಿಚಾರವಾಗಿ ನನ್ನ ನೇತೃತ್ವದಲ್ಲಿ ಸತ್ಯ ಸಂಶೋಧನೆಗಾಗಿ ಒಂದು ಕಮಿಟಿ ಮಾಡಲಾಗಿದೆ. ಸತ್ಯ ಶೋಧನೆ ಮಾಡಲು ಅಲ್ಲಿಗೆ ಭೇಟಿ ನೀಡಿ ಜನರಿಂದ ಮಾಹಿತಿ ಪಡೆಯುತ್ತೇವೆ. ಆದ್ರೆ ಆಡಳಿತದಲ್ಲಿ ಸ್ಪಷ್ಟತೆ ಇಲ್ಲದ ಕಾರಣ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ. ಗಣೇಶ ಹಬ್ಬ ಆಚರಣೆ ಮಾಡೋದು ನಮ್ಮ ಸಂಸ್ಕೃತಿ. ಇದಕ್ಕೆ ಎಲ್ಲರೂ ಸಪೋರ್ಟ್ ಮಾಡಬೇಕು. ಈದ್ ಮಿಲಾದ್ ಇದೆ ಎಂದು ಗಣೇಶ ಇಡಲು ಕೆಲವು ಕಡೆ ಬಿಟ್ಟಿಲ್ಲ ಅಂತಾ ಆರೋಪಿಸಿದರು.

  • ವಾಲ್ಮೀಕಿ ನಿಗಮದ ಹಣ ಬಳ್ಳಾರಿ ಚುನಾಣೆಗೆ ಖರ್ಚು – ಸಂಸದ ಸ್ಥಾನದಿಂದ ತುಕಾರಾಂ ವಜಾಕ್ಕೆ ಬಿಜೆಪಿ ಆಗ್ರಹ

    ವಾಲ್ಮೀಕಿ ನಿಗಮದ ಹಣ ಬಳ್ಳಾರಿ ಚುನಾಣೆಗೆ ಖರ್ಚು – ಸಂಸದ ಸ್ಥಾನದಿಂದ ತುಕಾರಾಂ ವಜಾಕ್ಕೆ ಬಿಜೆಪಿ ಆಗ್ರಹ

    ಬೆಂಗಳೂರು: ವಾಲ್ಮೀಕಿ ನಿಗಮದ 21 ಕೋಟಿ ರೂ. ಮೊತ್ತವನ್ನು ಬಳ್ಳಾರಿ ಚುನಾವಣೆಗೆ ಖರ್ಚು ಮಾಡಿದ್ದಾಗಿ ಇಡಿ ತನ್ನ ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದ್ದರಿಂದ ಬಳ್ಳಾರಿ ಸಂಸದರ ಸ್ಥಾನದಿಂದ ತುಕಾರಾಂ ಅವರನ್ನು ಚುನಾವಣಾ ಆಯೋಗವು ಕೂಡಲೇ ವಜಾ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆ ಆಗಿರುವುದು ಸುಸ್ಪಷ್ಟ. ವಾಲ್ಮೀಕಿ ಅಭಿವೃದ್ಧಿ ನಿಗಮದ್ದು ಅಂತರರಾಜ್ಯ ಭ್ರಷ್ಟಾಚಾರದ ಹಗರಣ ಎಂದು ತಿಳಿಸಿದರು. ಇದನ್ನೂ ಓದಿ: ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ HD ಕುಮಾರಸ್ವಾಮಿ ಭರವಸೆ

    ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರು ಪ್ರಮುಖ ಪಾತ್ರ ವಹಿಸಿದ್ದಾಗಿ ಇಡಿ ಚಾರ್ಜ್ ಶೀಟಿನಲ್ಲಿ ತಿಳಿಸಿದೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್‌ವೆಸ್ಟಿಗೇಶನ್ ಟೀಂ (ಎಸ್‌ಐಟಿ) ನಾಗೇಂದ್ರರ ಹೆಸರನ್ನು ಉಲ್ಲೇಖಿಸಿಲ್ಲ. ಅವರಿಗೆ ಕ್ಲೀನ್ ಚಿಟ್ ಕೊಡಲಾಗಿದೆ. ಎಸ್‌ಐಟಿ ಇಬ್ಬರು ಅಧಿಕಾರಿಗಳ ಹೆಸರನ್ನಷ್ಟೇ ಉಲ್ಲೇಖಿಸಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಇಡಿ ಚಾರ್ಜ್ ಶೀಟ್‌ನಲ್ಲಿ ನಾಗೇಂದ್ರ ಹೆಸರು ಇರುವುದಕ್ಕೆ ಸಿಎಂ ಹೊಣೆ ಹೊರಬೇಕು: ಅಶ್ವಥ್ ನಾರಾಯಣ್

    ಎಸ್‌ಐಟಿ ಮೂಲಕ ಮಾಜಿ ಸಚಿವರನ್ನು ಉಳಿಸುವ ಧೋರಣೆ ಈ ಸರ್ಕಾರದ್ದು. ಸರ್ಕಾರದ ಹಸ್ತಕ್ಷೇಪ, ಬೆಂಬಲ ಇಲ್ಲದೆ, ವಾಲ್ಮೀಕಿ ನಿಗಮದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಮಹರ್ಷಿ ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಹಗರಣವನ್ನು ಮುಚ್ಚಿಹಾಕುವ ಕೆಲಸವನ್ನು ಎಸ್‌ಐಟಿ ಮಾಡುತ್ತಿರುವುದು ಸರಿಯಲ್ಲ. ಎಸ್‌ಐಟಿ ತನಿಖೆ, ಚಾರ್ಜ್ ಶೀಟ್ ಬಗ್ಗೆ ಜನರಿಗೆ ದೊಡ್ಡ ಶಂಕೆ, ಅನುಮಾನ ಇದೆ ಎಂದರು. ಇದನ್ನೂ ಓದಿ: ಸಿಎಂ ರಾಜೀನಾಮೆ ನಿಶ್ಚಿತ, ಖಾಲಿಯಾಗುವ ಸ್ಥಾನಕ್ಕೆ ಹಗ್ಗಜಗ್ಗಾಟ: ವಿಜಯೇಂದ್ರ ಟಾಂಗ್

    ಎನ್‌ಐಎ ವರದಿ ಬಂದಿದೆ. ಈ ವರದಿ ಪ್ರಕಾರ ಭಯೋತ್ಪಾದಕರು ಮೊದಲು ಕರ್ನಾಟಕ ರಾಜ್ಯದ ಬಿಜೆಪಿ ಕಚೇರಿ ಜಗನ್ನಾಥ ಭವನವನ್ನು ಟಾರ್ಗೆಟ್ ಮಾಡಿದ್ದು ಗೊತ್ತಾಗಿದೆ. ಜಗನ್ನಾಥ ಭವನವನ್ನು ಸ್ಫೋಟಿಸುವುದು ಅವರ ಗುರಿಯಾಗಿತ್ತು. ಅವರ ಯೋಜನೆ ಯಶ ಪಡೆಯದೆ ರಾಮೇಶ್ವರಂ ಕೆಫೆಯನ್ನು ಸ್ಫೋಟಿಸಿದ್ದಾರೆ ಎಂದು ವರದಿ ತಿಳಿಸಿದೆ. ರಾಜ್ಯದಲ್ಲಿ ಭಯೋತ್ಪಾದಕರು ಬಿಜೆಪಿ ಕಚೇರಿಯನ್ನು ಗುರಿಯಾಗಿ ಮಾಡಿದ್ದು ಇದು ಎರಡನೇ ಬಾರಿ. ಮೊದಲ ಬಾರಿ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬ್ಲಾಸ್ಟ್ ಆಗಿತ್ತು. ಆದರೆ ಸಾವು ನೋವು ಸಂಭವಿಸಿರಲಿಲ್ಲ. ಕರ್ನಾಟಕದಲ್ಲಿ ಗೂಢಚಾರಿ ಸಂಸ್ಥೆ ಏನು ಕೆಲಸ ಮಾಡುತ್ತಿದೆ? ಗೃಹ ಇಲಾಖೆ ಏನು ಕೆಲಸ ಮಾಡುತ್ತಿದೆ? ಬಸ್ 24 ಗಂಟೆ ಇಲ್ಲಿ ನಿಂತಿರುತ್ತದೆ. ಏನು ಕೆಲಸ ಮಾಡುತ್ತಿದ್ದಾರೆ? ಪೊಲೀಸರು, ಇಂಟೆಲಿಜೆನ್ಸ್ ವಿಭಾಗ ಏನು ಕೆಲಸ ಮಾಡುತ್ತಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್

  • ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಶಾಸಕ ರಂಗನಾಥ್

    ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಶಾಸಕ ರಂಗನಾಥ್

    ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬ್ಲಾಸ್ಟ್ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ (H D Ranganath) ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

    ಬಿಜೆಪಿ ಕಚೇರಿ ಬ್ಲಾಸ್ಟ್ ಮಾಡಲು ಪ್ಲ್ಯಾನ್ ಆಗಿತ್ತು ಎಂಬ ಎನ್‌ಐಎ ಚಾರ್ಜ್ ಶೀಟ್ ವಿಚಾರ ಮತ್ತು ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಪ್ರಕರಣಗಳು ಹೆಚ್ಚು ಆಗುತ್ತಿವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎನ್‌ಐಎ ಜಾರ್ಜ್ ಶೀಟ್ ನೋಡಿದರೆ ಭಾರತ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದಾಯಿತು. ಇದು ಕೇಂದ್ರ ಸರ್ಕಾರದ ವೈಫಲ್ಯ ಆಗಿದೆ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ಎನ್‌ಐಎ ಕೇಂದ್ರದ ಅಧೀನದಲ್ಲಿ ಬರುತ್ತೆ. ಹಾಗಾದರೆ ಅವರಿಗೆ ಜವಾಬ್ದಾರಿ ಇರಲಿಲ್ಲವಾ? ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಮುಂದೆ ಇಂತಹ ಘಟನೆ ಆಗದಂತೆ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಆರೋಗ್ಯ ಸ್ಥಿತಿ ತೀವ್ರ ಗಂಭೀರ

  • ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್‌ ಭದ್ರತೆ ಹೆಚ್ಚಳ

    ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್‌ ಭದ್ರತೆ ಹೆಚ್ಚಳ

    ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ (Malleswaram BJP Office) ಪೊಲೀಸ್ ಭದ್ರತೆಯನ್ನು (Police Security) ಹೆಚ್ಚಿಸಲಾಗಿದೆ.

    ಮಲ್ಲೇಶ್ವರ ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು ರೂಪಿಸಿದ ವಿಚಾರ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾದ ಬೆನ್ನಲ್ಲೇ ಬಿಜೆಪಿ ಕಚೇರಿ ಎದುರು ಮೆಟಲ್ ಡಿಟೆಕ್ಟರ್ (Metal Detector) ಅಳವಡಿಕೆ ಮಾಡಲಾಗಿದೆ.

    ಮೆಟಲ್ ಡಿಟೆಕ್ಟರ್ ಮೂಲಕವೇ ಬಿಜೆಪಿ ಕಚೇರಿಗೆ ಭೇಟಿಗೆ ಬರುವವರ ಒಳ ಪ್ರವೇಶ ಕಡ್ಡಾಯ ಮಾಡಲಾಗಿದೆ. ಇದರ ಜತೆಗೆ ಪ್ರವೇಶ ದ್ವಾರದ ಎದುರು 3-4 ಜನ ಹೆಚ್ಚುವರಿ ಪೊಲೀಸರನ್ನು ನಿಯೋಜಿಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು| ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ – ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ

    ನಿತ್ಯ ಬಿಜೆಪಿ ಕಚೇರಿಗೆ ಮಲ್ಲೇಶ್ವರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌, ಸಬ್ ಇನ್ಸ್‌ಪೆಕ್ಟರ್‌ ಭೇಟಿ ಮಾಡಿ ಭದ್ರತೆ ಪರಿಶೀಲನೆ ಮಾಡಲಿದ್ದಾರೆ.

    ಯಾಕೆ ಭದ್ರತೆ?
    ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚನ್ನು ಐಸಿಸ್‌ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಶಾಕಿಂಗ್‌ ವಿಚಾರ ಎನ್‌ಐಎ ತನಿಖೆಯಲ್ಲಿ ಬಯಲಾಗಿತ್ತು.

    ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ (Rameshwaram Cafe Blast Case) ಪ್ರಕರಣದ ಆರೋಪಿಗಳಾದ ಮುಸ್ಸಾವಿರ್‌ ಹುಸೇನ್‌ ಶಾಜಿದ್‌, ಅಬ್ದುಲ್‌ ಮತೀನ್‌ ತಾಹ, ಮಾಜ್‌ ಮುನೀರ್‌ ಅಹಮದ್‌, ಮುಜಾಮಿಲ್‌ ಷರೀಫ್‌ ವಿರುದ್ಧ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಆರೋಪಪಟ್ಟಿ ಸಲ್ಲಿಸಿದ್ದಾರೆ.

     

  • ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್

    ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್

    – ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶ ಬಯಲು

    ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಆರೋಪಿಗಳನ್ನು ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಷರೀಫ್ ಎಂದು ಗುರುತಿಸಲಾಗಿದ್ದು, ಐಪಿಸಿ, ಯುಎ (ಪಿ) ಆಕ್ಟ್, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಪಿಡಿಎಲ್‌ಪಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್‌ ಮಾಡಲಾಗಿದೆ. ಎಲ್ಲಾ ನಾಲ್ವರನ್ನು ಮೊದಲು ಬಂಧಿಸಲಾಗಿತ್ತು. ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು

    ಐಟಿಪಿಎಲ್ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಈ ವರ್ಷ ಮಾ.1 ರಂದು ಸಂಭವಿಸಿದ ಐಇಡಿ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ. ಹೋಟೆಲ್ ಆಸ್ತಿಗೆ ವ್ಯಾಪಕವಾಗಿ ಹಾನಿಯಾಗಿದೆ.

    ಮಾ.3 ರಂದು ಪ್ರಕರಣದ ತನಿಖೆಯನ್ನು ಆರಂಭಿಸಿದ ಎನ್‌ಐಎ, ವಿವಿಧ ರಾಜ್ಯ ಪೊಲೀಸ್ ಪಡೆಗಳು ಮತ್ತು ಇತರ ಏಜೆನ್ಸಿಗಳ ಸಮನ್ವಯದಲ್ಲಿ ಹಲವಾರು ತಾಂತ್ರಿಕ ಮತ್ತು ಕ್ಷೇತ್ರ ತನಿಖೆಯನ್ನು ನಡೆಸಿತು. ಶಜೀಬ್ ಬಾಂಬ್ ಇಟ್ಟಿದ್ದ ವ್ಯಕ್ತಿ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಆತ ತಾಹಾ ಜೊತೆಗೆ, ಈ ಹಿಂದೆ ಅಲ್-ಹಿಂದ್ ಮಾಡ್ಯೂಲ್ ಅನ್ನು ಸ್ಫೋಟಿಸಿದ ನಂತರ 2020 ರಿಂದ ತಲೆಮರೆಸಿಕೊಂಡಿದ್ದ. ರಾಮೇಶ್ವರಂ ಕೆಫೆ ಸ್ಫೋಟದ 42 ದಿನಗಳ ನಂತರ ಪಶ್ಚಿಮ ಬಂಗಾಳದ ಅವರ ಅಡಗುತಾಣದಿಂದ ಎನ್‌ಐಎ ನಡೆಸಿದ ವ್ಯಾಪಕ ಶೋಧನೆಗಳು ಅವರನ್ನು ಬಂಧಿಸಲು ಕಾರಣವಾಗಿವೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್‌ಶೀಟ್‌ ಸಲ್ಲಿಕೆ – ಗನ್ನಿಕಡ ತೋಟದ ಮನೆ ರಹಸ್ಯದ ಬಗ್ಗೆಯೂ ಉಲ್ಲೇಖ!

    ಕರ್ನಾಟಕದ ಶಿವಮೊಗ್ಗ ಜಿಲ್ಲೆಯವರಾದ ಇಬ್ಬರು ವ್ಯಕ್ತಿಗಳು ಐಸಿಸ್ ಮೂಲಭೂತವಾದಿಗಳಾಗಿದ್ದು, ಈ ಹಿಂದೆ ಸಿರಿಯಾದ ಐಸಿಸ್ ಪ್ರಾಂತ್ಯಗಳಿಗೆ ಹಿಜ್ರಾ ಮಾಡಲು ಸಂಚು ರೂಪಿಸಿದ್ದರು. ಅವರು ಇತರ ಮೋಸಗಾರ ಮುಸ್ಲಿಂ ಯುವಕರನ್ನು ಐಸಿಸ್ ಸಿದ್ಧಾಂತಕ್ಕೆ ತೀವ್ರಗಾಮಿಗೊಳಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ಅಂತಹ ಯುವಕರಲ್ಲಿ ಸೇರಿದ್ದಾರೆ.

    ತಾಹಾ ಮತ್ತು ಶಾಜಿಬ್ ಮೋಸದಿಂದ ಪಡೆದ ಭಾರತೀಯ ಸಿಮ್ ಕಾರ್ಡ್‌ಗಳು ಮತ್ತು ಭಾರತೀಯ ಬ್ಯಾಂಕ್ ಖಾತೆಗಳನ್ನು ಬಳಸಿದ್ದರು. ಡಾರ್ಕ್ ವೆಬ್‌ನಿಂದ ಡೌನ್‌ಲೋಡ್ ಮಾಡಿದ ವಿವಿಧ ಭಾರತೀಯ ಮತ್ತು ಬಾಂಗ್ಲಾದೇಶದ ಗುರುತಿನ ದಾಖಲೆಗಳನ್ನು ಸಹ ಬಳಸಿದ್ದಾರೆ. ಎಲ್‌ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶಹೀದ್ ಫೈಸಲ್‌ಗೆ ಮಾಜಿ ಅಪರಾಧಿ ಶೋಯೆಬ್ ಅಹ್ಮದ್ ಮಿರ್ಜಾ ಎಂಬಾತ ತಾಹಾಳನ್ನು ಪರಿಚಯಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ತಾಹಾ ನಂತರ ತನ್ನ ಹ್ಯಾಂಡ್ಲರ್ ಆಗಿರುವ ಫೈಸಲ್‌ನನ್ನು ಅಲ್-ಹಿಂದ್ ಐಸಿಸ್ ಮಾಡ್ಯೂಲ್ ಪ್ರಕರಣದ ಆರೋಪಿ ಮೆಹಬೂಬ್ ಪಾಷಾಗೆ ಮತ್ತು ಐಸಿಸ್ ದಕ್ಷಿಣ ಭಾರತದ ಅಮೀರ್ ಖಾಜಾ ಮೊಹಿದೀನ್‌ಗೆ ಮತ್ತು ನಂತರ ಮಾಜ್ ಮುನೀರ್ ಅಹ್ಮದ್‌ಗೆ ಪರಿಚಯಿಸಿದನು.

    ತಾಹಾ ಮತ್ತು ಶಾಜಿಬ್ ಕ್ರಿಪ್ಟೋ ಕರೆನ್ಸಿಗಳ ಮೂಲಕ ಅವರ ಹ್ಯಾಂಡ್ಲರ್‌ನಿಂದ ಹಣವನ್ನು ನೀಡಲಾಯಿತು. ಇದನ್ನು ತಾಹಾ ವಿವಿಧ ಟೆಲಿಗ್ರಾಮ್ ಆಧಾರಿತ ಪ್ಲಾಟ್‌ಫಾರ್ಮ್ಗಳ ಸಹಾಯದಿಂದ ಫಿಯೆಟ್‌ಗೆ ಪರಿವರ್ತಿಸಿತು. ಈ ಹಣವನ್ನು ಆರೋಪಿಗಳು ಬೆಂಗಳೂರಿನಲ್ಲಿ ವಿವಿಧ ಹಿಂಸಾಚಾರಗಳನ್ನು ನಡೆಸಲು ಬಳಸುತ್ತಿದ್ದರು ಎಂದು ತನಿಖೆಯಲ್ಲಿ ಮತ್ತಷ್ಟು ತಿಳಿದುಬಂದಿದೆ. 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಫಲವಾದ ಐಇಡಿ ದಾಳಿಯು ಇದರಲ್ಲಿ ಸೇರಿದೆ. ನಂತರ ಇಬ್ಬರು ಪ್ರಮುಖ ಆರೋಪಿಗಳು ರಾಮೇಶ್ವರಂ ಕೆಫೆ ಸ್ಫೋಟವನ್ನು ಯೋಜಿಸಿದ್ದರು. ಈ ಪ್ರಕರಣದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ದರ್ಶನ್‌ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ? – ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ

  • ಲಕ್ನೋದ ಹಾಸ್ಟೆಲ್‌ನಲ್ಲಿ ಎನ್‌ಐಎ ಅಧಿಕಾರಿ ಪುತ್ರಿಯ ನಿಗೂಢ ಸಾವು!

    ಲಕ್ನೋದ ಹಾಸ್ಟೆಲ್‌ನಲ್ಲಿ ಎನ್‌ಐಎ ಅಧಿಕಾರಿ ಪುತ್ರಿಯ ನಿಗೂಢ ಸಾವು!

    – 19 ವರ್ಷದ ಕಾನೂನು ವಿದ್ಯಾರ್ಥಿನಿ ಸಾವಿನ ಬಗ್ಗೆ ಪೊಲೀಸರು ಹೇಳಿದ್ದೇನು?

    ಲಕ್ನೋ: 19 ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ಲಕ್ನೋದ ಹಾಸ್ಟೆಲ್‌ (Lucknow Hostel) ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

    ಲಕ್ನೋದ ಆಶಿಯಾನಾ ಪ್ರದೇಶದಲ್ಲಿರುವ ರಾಮ್ ಮನೋಹರ್ ಲೋಹಿಯಾ ಕಾನೂನು ವಿವಿ (Ram Manohar Lohia National Law University) ಹಾಸ್ಟೆಲ್ ಕೊಠಡಿಯಲ್ಲಿ ನೆಲದ ಮೇಲೆ ಕಾನೂನು ವಿದ್ಯಾರ್ಥಿನಿ ಅನಿಕಾ ರಸ್ತೋಗಿ ಶವವಾಗಿ ಪತ್ತೆಯಾಗಿದ್ದಾರೆ. 3ನೇ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿನಿಯಾಗಿರುವ ಅನಿಕಾ, ಪ್ರಸ್ತುತ ದೆಹಲಿ NIA (ರಾಷ್ಟ್ರೀಯ ತನಿಖಾ ಸಂಸ್ಥೆ) ಇನ್ಸ್ಪೆಕ್ಟರ್‌ ಜನರಲ್‌ ಆಗಿ ಸೇವೆ ಸಲ್ಲಿಸುತ್ತಿರುವ ಸಂತೋಷ್‌ ರಸ್ತೋಗಿ ಅವರ ಪುತ್ರಿ.

    ಅನಿಕಾ (Anika Rastogi) ಶನಿವಾರ ತಡರಾತ್ರಿ ಹಾಸ್ಟೆಲ್‌ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಆಕೆಯನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಕೆಯ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕೇಸ್‌ ದಾಖಲಿಸಿಕೊಂಡು ಆಶಿಯಾನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: MUDA Scam | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ – ಕೋವಿಡ್ ಹಗರಣ ವರದಿಗೆ ಉತ್ತರ ಕೊಡ್ತೇವೆ: ಬೊಮ್ಮಾಯಿ

    ಪ್ರಾಥಮಿಕ ವರದಿಗಳ ಪ್ರಕಾರ, ಅನಿಕಾ ಶನಿವಾರ ಬೇಗನೆ ಹಾಸ್ಟೆಲ್‌ ರೂಮ್‌ ಸೇರಿಕೊಂಡಿದ್ದರು. ಎಷ್ಟು ಬಾರಿ ಫೋನ್‌ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗಲಿಲ್ಲ. ಹಾಸ್ಟೆಲ್‌ ರೂಮ್‌ ಬಾಗಿಲು ಬಡಿದರೂ ಆಕೆ ತೆರೆಯದೇ ಇದ್ದಾಗ ಬಾಗಿಲು ಒಡೆದು ನೋಡಿದ್ದಾರೆ. ಆಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆಕೆಯಿದ್ದ ಕೊಠಡಿಯಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಸಹ ತಿಳಿದುಬಂದಿದೆ. ಇದನ್ನೂ ಓದಿ: Bengaluru | ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಆಯುಕ್ತರಿಗೆ ಡಿಸಿಎಂ 15 ದಿನಗಳ ಗಡುವು

    ಅಲ್ಲದೇ ಅನಿಕಾ ಅವರ ಬಟ್ಟೆ ಯಥಾಸ್ಥಿತಿಯಲ್ಲಿತ್ತು, ಆಕೆ ದೇಹದಲ್ಲೂ ಯಾವುದೇ ಗಾಯಗಳು ಕಂಡುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಕುಟುಂಬದಿಂದ ಯಾವುದೇ ದೂರು ಸ್ವೀಕರಿಸಿಲ್ಲ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ

  • ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಶಂಕಿತ ಉಗ್ರ ಅರೆಸ್ಟ್‌

    ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಶಂಕಿತ ಉಗ್ರ ಅರೆಸ್ಟ್‌

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಶಂಕಿತ ಉಗ್ರನನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.

    ಬಂಧಿತ ಶಂಕಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೋರಟಿದ್ದ. ವೇಳೆ‌ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

    ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.

  • ಪಾಕ್‌ ಸೇರಿ ಇತರ ವಿದೇಶಿ ಏಜೆಂಟರಿಗೆ ನೌಕಾದಳದ ರಹಸ್ಯ ಫೋಟೋ ಹಂಚಿಕೆ – NIAಯಿಂದ ಮೂವರು ವಶಕ್ಕೆ

    ಪಾಕ್‌ ಸೇರಿ ಇತರ ವಿದೇಶಿ ಏಜೆಂಟರಿಗೆ ನೌಕಾದಳದ ರಹಸ್ಯ ಫೋಟೋ ಹಂಚಿಕೆ – NIAಯಿಂದ ಮೂವರು ವಶಕ್ಕೆ

    ಕಾರವಾರ: ಹಣದ ಆಮಿಷಕ್ಕೆ ಒಳಗಾಗಿ ಇಲ್ಲಿನ ಕದಂಬ ನೌಕಾನೆಲೆಯ (Kadamba Naval Base Karwar) ಶಿಪ್‌ಗಳ ಮಾಹಿತಿ ಹಾಗೂ ನೌಕಾದಳದ ಫೋಟೋಗಳನ್ನು ಪಾಕಿಸ್ತಾನ (Pakistan) ಹಾಗೂ ವಿದೇಶಿ ಗುಪ್ತಚರ ಏಜೆಂಟರಿಗೆ ನೀಡಿರುವ ಆರೋಪದ ಮೇಲೆ ಮೂವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಶಕ್ಕೆ ಪಡೆದಿದೆ.

    ಎನ್‌ಐಎಯ ಡಿವೈಎಸ್‌ಪಿ ಹಾಗೂ ಮೂವರು ಇನ್ಸ್‌ಪೆಕ್ಟರ್‌ಗಳ ತಂಡ ಕಾರವಾರಕ್ಕೆ ಆಗಮಿಸಿ, ನೌಕಾದಳದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕಿನ ತೋಡೂರಿನ ಸುನೀಲ್ ನಾಯ್ಕ್, ಮುದುಗಾದ ವೇತನ್ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ರವಿ ನಾಯ್ಕ್ ಮೂವರನ್ನು ವಶಕ್ಕೆ ಪಡೆದಿದೆ. ರಾಷ್ಟ್ರವಿರೋಧಿ ಚಟುವಟಿಕೆ ಅಡಿ 2023ರಲ್ಲಿ ಹೈದ್ರಾಬಾದ್‌ನಲ್ಲಿ NIA ದೀಪಕ್ ಹಾಗೂ ಇತರರನ್ನು ಬಂಧಿಸಲಾಗಿತ್ತು.

    ಪಾಕಿಸ್ತಾನ ಹಾಗೂ ವಿದೇಶಿ ಏಜೆಂಟರು, ಅಧಿಕಾರಿಗಳಿಗೆ ಕದಂಬ ನೌಕಾನೆಯ ಮಾಹಿತಿ ರವಾನಿಸುತ್ತಿದ್ದ ದೀಪಕ್ ವಿಚಾರಣೆ ವೇಳೆ ಸುನೀಲ್ ನಾಯ್ಕ್, ವೇತನ್ ತಾಂಡೇಲ್ ಹಾಗೂ ಅಕ್ಷಯ್ ನಾಯ್ಕ್ ಹೆಸರನ್ನು ಬಾಯ್ಬಿಟ್ಟಿದ್ದ. ನೌಕಾದಳದ ಶಿಪ್‌ಗಳು, ಸ್ಥಳದ ಮಾಹಿತಿ ಫೋಟೋ ಹಾಗೂ ಇತರ ಮಾಹಿತಿಗಳನ್ನ ದೀಪಕ್ ಹಾಗೂ ಇತರರಿಗೆ ಈ ಮೂವರು ರವಾನಿಸಿದ್ದರು. ಇದನ್ನೂ ಓದಿ: ನಮ್ಮ ಆಸ್ತಿ ಬಗ್ಗೆ ದಾಖಲೆ ಇದ್ದರೆ ಬಹಿರಂಗ ಪಡಿಸಲಿ: ಛಲವಾದಿ ಮಾತಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ಅಲ್ಲದೇ, ಮಾಹಿತಿ ನೀಡಿದ್ದಕ್ಕೆ ಸುನೀಲ್ ನಾಯ್ಕ್, ವೇತನ್ ತಾಂಡೇಲ್ ಹಾಗೂ ಅಕ್ಷಯ್ ನಾಯ್ಕ್‌ ಖಾತೆಗೆ ಹಣ ಕೂಡ ಜಮೆ ಮಾಡಲಾಗಿತ್ತು. ಅಕ್ಷಯ್ ನಾಯ್ಕ್ ಈ ಹಿಂದೆ ಸೀ ಬರ್ಡ್ ಒಳಗೆ ಕೆಲಸ ಮಾಡ್ತಿದ್ದನಾದರೂ ಬಳಿಕ ಗೋವಾದಲ್ಲಿ ಕ್ಯಾಂಟೀನ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಇದನ್ನೂ ಓದಿ: ಮದುಮಗನ ಗೆಟಪ್‌ನಲ್ಲಿ ನಾಗಚೈತನ್ಯ- ಸೀಕ್ರೆಟ್ ಆಗಿ ಶೋಭಿತಾ ಜೊತೆ ಮದುವೆಗೆ ರೆಡಿಯಾದ್ರಾ ಸಮಂತಾ ಮಾಜಿ ಪತಿ?

    ಸದ್ಯ ಅಕ್ಷಯ್‌ಗೆ ಸೇರಿದ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಸುನೀಲ್‌ ನಾಯ್ಕ್‌ಗೆ ನೋಟೀಸ್ ನೀಡಿ ಹೊರಗೆ ಬಿಟ್ಟಿದ್ದಾರೆ. ಆದ್ರೆ ವೇತನ್ ತಾಂಡೇಲ್‌‌ನನ್ನು ಹಾಗೂ ಅಕ್ಷಯ್ ನಾಯ್ಕ್‌ನನ್ನು ಗೌಪ್ಯ ಸ್ಥಳದಲ್ಲಿರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹೆಂಡತಿ ಕೊಂದು ದೃಶ್ಯ ಸಿನಿಮಾ ಮಾದರಿಯಲ್ಲಿ ಹೂತಿಟ್ಟ; ಸ್ನೇಹಿತನ ಹೆಂಡತಿ ಕೊಲೆಯಲ್ಲಿ ಭಾಗಿಯಾಗಿ ಹಳೇ ಕೇಸಲ್ಲೂ ತಗ್ಲಾಕೊಂಡ ಖತರ್ನಾಕ್ 

  • ಬೆಂಗಳೂರಿನ‌ ಗುರಪ್ಪನಪಾಳ್ಯದಲ್ಲಿ ಅಲ್-ಹಿಂದ್ ISIS ಮಾಡ್ಯೂಲ್ ಕೇಸ್‌ – NIAಯಿಂದ ಚಾರ್ಜ್ ಶೀಟ್ ಸಲ್ಲಿಕೆ

    ಬೆಂಗಳೂರಿನ‌ ಗುರಪ್ಪನಪಾಳ್ಯದಲ್ಲಿ ಅಲ್-ಹಿಂದ್ ISIS ಮಾಡ್ಯೂಲ್ ಕೇಸ್‌ – NIAಯಿಂದ ಚಾರ್ಜ್ ಶೀಟ್ ಸಲ್ಲಿಕೆ

    – ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಬ್ಬರ ವಿರುದ್ಧ ಜಾರ್ಜ್‌ ಶೀಟ್

    ಬೆಂಗಳೂರು: ಐಸಿಸ್ ಮಾಡ್ಯೂಲ್ ಕೇಸ್‌ನಲ್ಲಿ ಇಲ್ಲಿನ ಗುರಪ್ಪನಪಾಳ್ಯದಲ್ಲಿ ಅರೆಸ್ಟ್ ಆಗಿದ್ದ ಇಬ್ಬರು ಉಗ್ರರ ವಿರುದ್ಧ NIA ಚಾರ್ಜ್‌ಶೀಟ್ (NIA Chargesheet) ಸಲ್ಲಿಕೆ ಮಾಡಿದೆ.

    ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜಿಬ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಇಬ್ಬರು ಕರ್ನಾಟಕದ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಗಳು. ಇದನ್ನೂ ಓದಿ: ಮೊಘಲ್‌ ದೊರೆ ಹುಮಾಯೂನ್-ರಾಣಿ ಕರ್ಣಾವತಿಯಿಂದ ಬಂತಾ ‘ರಾಖಿ ಹಬ್ಬ’; ಚರ್ಚೆ ಹುಟ್ಟುಹಾಕಿದ ಸಂಸದೆ ಸುಧಾಮೂರ್ತಿ ಪೋಸ್ಟ್‌

    ISISನ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದಲ್ಲದೇ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ (Rameshwaram Cafe Blast Case) ಕೋಲ್ಕತ್ತಾದಲ್ಲಿ ‌ಆರೋಪಿಗಳು ಅರೆಸ್ಟ್ ಆಗಿದ್ರು. 2020ರ ಜನವರಿ 23 ರಂದು ಬೆಂಗಳೂರು ನಗರ ಪೊಲೀಸರಿಂದ ಎನ್‌ಐಎಗೆ ಪ್ರಕರಣ ವರ್ಗಾವಣೆಯಾಗಿತ್ತು. ಇದುವರೆಗೆ ಒಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

    ಅಬ್ದುಲ್ ಮತೀನ್ ತಾಹಾ ಮುಸಾವೀರ್ ಹುಸೇನ್‌ಗೆ ಮನಃಪರಿವರ್ತನೆ ಮಾಡಿದ್ದ. ಆನ್‌ಲೈನ್ ನಲ್ಲಿ ಹ್ಯಾಂಡ್ಲರ್ ಭಾಯಿ @ ಲ್ಯಾಪ್‌ಟಾಪ್ ಭಾಯ್ ಎಂದು ಪರಿಚಯ ಮಾಡಿಕೊಂಡು ಗುರಪ್ಪನಪಾಳ್ಯದಲ್ಲಿ ಕುಟುಂಬ ಸದಸ್ಯರ ಸಹಯೋಗದೊಂದಿಗೆ ಅಲ್-ಹಿಂದ್ ಟ್ರಸ್ಟ್ ಅನ್ನು ರಚಿಸಿದ್ದ ಮೆಹಬೂಬ್ ಪಾಷಾ, ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಅಲ್ ಹಿಂದ್ ಟ್ರಸ್ಟ್‌ ರಚನೆ ಮಾಡಿದ್ದ ಆರೋಪದಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇದನ್ನೂ ಓದಿ: ಹೆತ್ತ ಮಗನ ಮುಂದೆಯೇ ತಾಯಿಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ ದುರುಳರು!