Tag: nice road

  • ಲಾಯರ್ ಜಗದೀಶ್ ಸಾವಿಗೆ ಟ್ವಿಸ್ಟ್ – ಪೊಲೀಸರ ತನಿಖೆ ವೇಳೆ ರಹಸ್ಯ ಬಯಲು

    ಲಾಯರ್ ಜಗದೀಶ್ ಸಾವಿಗೆ ಟ್ವಿಸ್ಟ್ – ಪೊಲೀಸರ ತನಿಖೆ ವೇಳೆ ರಹಸ್ಯ ಬಯಲು

    ಬೆಂಗಳೂರು: ವಕೀಲ ಜಗದೀಶ್ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆ ವೇಳೆ ರಹಸ್ಯ ಬಯಲಾಗಿದೆ.

    ಶನಿವಾರ ರಾತ್ರಿ ವಕೀಲ ಜಗದೀಶ್ ಅವರ ದೇಹ ರಕ್ತಸಿಕ್ತವಾಗಿ ನೈಸ್ ರಸ್ತೆಯಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ಮೃತ ಜಗದೀಶ್ ಸೋದರ ಸಂಬಂಧಿಯೊಬ್ಬರು ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಸಾವಿಗೆ ರಹಸ್ಯವನ್ನು ಬಯಲಿಗೆಳೆದಿದ್ದಾರೆ.ಇದನ್ನೂ ಓದಿ: ಲಾಯರ್‌ ಜಗದೀಶ್‌ ಹತ್ಯೆ? – ನೈಸ್‌ ರಸ್ತೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿರೋ ದೇಹ

    ಪ್ರಾಥಮಿಕ ತನಿಖೆ ಮಾಹಿತಿ ಪ್ರಕಾರ, ವಕೀಲ ಜಗದೀಶ್ ಸಾವಿಗೆ ರೋಡ್ ರೇಜ್ ಕಾರಣವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೇಲ್ನೋಟಕ್ಕೆ ಜಗದೀಶ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ವಕೀಲ್ ಜಗದೀಶ್ ನೈಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಅವರ ಕಾರಿಗೆ ಲಾರಿಯೊಂದು ಟಚ್ ಆಗಿದೆ. ಟಚ್ ಆಗುತ್ತಿದ್ದಂತೆ ಚಾಲಕ ಸ್ವಲ್ಪ ಮುಂದೆ ಹೋಗಿ ಲಾರಿ ನಿಲ್ಲಿಸಿದ್ದ. ಆಗ ಜಗದೀಶ್ ಕಾರು ನಿಲ್ಲಿಸಿ ಲಾರಿ ಚಾಲಕನ ಬಳಿಗೆ ಹೋಗಿದ್ದಾರೆ. ಈ ವೇಳೆ ಅವರಿಬ್ಬರ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದದ ಭರದಲ್ಲಿ ಜಗದೀಶ್ ಅರಿವಿಲ್ಲದೇ ನಡುರಸ್ತೆಗೆ ಹೋಗಿದ್ದಾರೆ. ಇದೇ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯ ಹಿಂಬದಿಯ ಭಾಗ ಜಗದೀಶ್‌ಗೆ ಟಚ್ ಆಗಿದೆ. ಇದರಿಂದ ತಕ್ಷಣ ಕೆಳಗೆ ಬಿದ್ದು, ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.

    ಲಾರಿ ಚಾಲಕನಿಗೆ ಹಿಂಬದಿಗೆ ಏನೋ ತಾಗಿದೆ ಎಂದು ಅನಿಸಿದಾಗ, ಸುಮಾರು ಅರ್ಧ ಕಿ.ಮೀ ಮುಂದೆ ಹೋಗಿ ಲಾರಿ ನಿಲ್ಲಿಸಿದ್ದ. ಆದರೆ ಯಾರು ಲಾರಿಯ ಹಿಂದೆ ಬರದ ಕಾರಣ ಏನು ಆಗಿಲ್ಲ ಎಂದು ಹಾಗೆಯೇ ತೆರಳುತ್ತಾನೆ ಎಂದು ತನಿಖೆ ವೇಳೆ ಮಾಹಿತಿ ಲಭ್ಯವಾಗಿದೆ.

    ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೆಂಗೇರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದಾರೆ. ಇನ್ನೂ ಮೃತ ಜಗದೀಶ್ ಅವರ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದೆ.ಇದನ್ನೂ ಓದಿ: ರೇಬೀಸ್‌ ಲಸಿಕೆ ಪಡೆದರೂ ಚಿಕಿತ್ಸೆ ಪಡೆಯುತ್ತಿದ್ದ 7ರ ಬಾಲಕಿ ಸಾವು

  • ನೈಸ್‌ ರಸ್ತೆಯನ್ನು ಬಂದ್‌ ಮಾಡಿ ಪ್ರತಿಭಟಿಸಿದ ಲಾರಿ ಚಾಲಕರು – ಫುಲ್‌ ಟ್ರಾಫಿಕ್‌ ಜಾಮ್‌

    ನೈಸ್‌ ರಸ್ತೆಯನ್ನು ಬಂದ್‌ ಮಾಡಿ ಪ್ರತಿಭಟಿಸಿದ ಲಾರಿ ಚಾಲಕರು – ಫುಲ್‌ ಟ್ರಾಫಿಕ್‌ ಜಾಮ್‌

    ಬೆಂಗಳೂರು: ಸಂಚಾರಿ ಪೊಲೀಸರು (Traffic Police) ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ರೊಚ್ಚಿಗಿದ್ದ ಚಾಲಕರು ಕಂಟೈನರ್‌ಗಳ ಮೂಲಕ ನೈಸ್‌ ರಸ್ತೆಯನ್ನೇ (NICE Road) ಬಂದ್‌ ಮಾಡಿದ್ದಾರೆ.

    ಎಲೆಕ್ಟ್ರಾನಿಕ್‌ ಸಿಟಿ (Electronic City) ಪಿಇಎಸ್ ಕಾಲೇಜು ಬಳಿಯ ನೈಸ್‌ ರಸ್ತೆಯಲ್ಲಿ ಬುಧವಾರ ರಾತ್ರಿ 8:30ಕ್ಕೆ ಈ ಘಟನೆ ನಡೆದಿದೆ. ಒಂದು ಗಂಟೆಗೂ ಅಧಿಕ ಸಮಯ ರಸ್ತೆ ಬ್ಲಾಕ್ ಮಾಡಿದ ಚಾಲಕರು ಪ್ರತಿಭಟನೆ‌ ನಡೆಸಿದರು. ಇದನ್ನೂ ಓದಿ: ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ – ಬೀದರ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

    ಪೊಲೀಸರ ವಿರುದ್ಧ ಘೋಷಣೆ ಹಾಕುತ್ತಾ ನೈಸ್ ರಸ್ತೆ ಹಾಗೂ ಸರ್ವಿಸ್ ರಸ್ತೆಗಳನ್ನು ಚಾಲಕರು ಬ್ಲಾಕ್‌ ಮಾಡಿದ್ದರು.

    ದಿಢೀರ್‌ ಪ್ರತಿಭಟನೆಯಿಂದ ಸಿಲ್ಕ್ ಬೋರ್ಡ್‌ನಿಂದ ಹೊಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಆಗಿತ್ತು.

  • ನೈಸ್‌ ರಸ್ತೆಯಲ್ಲಿ ಬೈಕ್‌ ರಾತ್ರಿ ಸಂಚಾರಕ್ಕೆ ನಿಷೇಧ; ವಾಹನಗಳಿಗೆ ವೇಗದ ಮಿತಿ ನಿಗದಿ

    ನೈಸ್‌ ರಸ್ತೆಯಲ್ಲಿ ಬೈಕ್‌ ರಾತ್ರಿ ಸಂಚಾರಕ್ಕೆ ನಿಷೇಧ; ವಾಹನಗಳಿಗೆ ವೇಗದ ಮಿತಿ ನಿಗದಿ

    – ಅಪಘಾತ ತಡೆಯಲು ಸಂಚಾರಿ ಪೊಲೀಸರಿಂದ ಮಾರ್ಗಸೂಚಿ

    ಬೆಂಗಳೂರು: ಅಪಘಾತ ತಡೆಯಲು ಸಂಚಾರಿ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ನೈಸ್‌ ರಸ್ತೆಯಲ್ಲಿ ವಾಹನಗಳಿಗೆ ವೇಗದ ಮಿತಿ ನಿಗದಿಪಡಿಸಲಾಗಿದೆ. ಅಲ್ಲದೇ, ರಾತ್ರಿ ಹೊತ್ತಿನಲ್ಲಿ ಬೈಕ್‌ಗಳ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ.

    ಯಾವ ವಾಹನಕ್ಕೆ ಎಷ್ಟು ವೇಗದ ಮಿತಿ?
    ಎಂಟಕ್ಕಿಂತ ಹೆಚ್ಚು ಪ್ರಯಾಣಿಕರು ಇರುವ ವಾಹನಗಳಿಗೆ 120 ಕಿಮೀ ವೇಗದ ಮಿತಿ ನಿಗದಿಪಡಿಸಲಾಗಿದೆ. 9 ಕ್ಕಿಂತ ಹೆಚ್ಚು ಪ್ರಯಾಣಿಕರು ಇರುವ ವಾಹನಗಳ ವೇಗದಿ ಮಿತಿ 100 ಕಿಮೀ ಇದೆ. ಗೂಡ್ಸ್ ವಾಹನಗಳು 80 ಕಿಮೀ ಹಾಗೂ ದ್ವಿಚಕ್ರ ವಾಹನಗಳಿಗೆ 80 ಕಿಮೀ ವೇಗದ ಮಿತಿ ನಿಗದಿ ಮಾಡಲಾಗಿದೆ.

    ನೈಸ್ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ. ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯ ತನಕ ಬೈಕ್ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

    ನೈಸ್ ರಸ್ತೆಯಲ್ಲಿ ಅಪಘಾತಕ್ಕೆ ನೈಸ್ ರಸ್ತೆ ಸುತ್ತಮುತ್ತ ಇರುವ ಸಂಚಾರಿ ಪೊಲೀಸರು ಕಾರಣ ಹುಡುಕಿದ್ದಾರೆ. ಎಂಟು ಸಂಚಾರಿ ಪೊಲೀಸರ ವರದಿಯನ್ನ ಆಧರಿಸಿ ಆದೇಶ ಹೊರಡಿಸಲಾಗಿದೆ. ನಿಯಮ ಉಲ್ಲಂಘನೆ ಹಾಗೂ ಅತಿ ವೇಗ, ಅಜಾಗರೂಕತೆ ಅಪಘಾತಗಳಿಗೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಕಾಮಾಕ್ಷಿಪಾಳ್ಯ, ಕೆಂಗೇರಿ, ಜ್ಞಾನಭಾರತಿ, ಹುಳಿಮಾವು, ಬ್ಯಾಟರಾಯನಪುರ, ತಲಘಟ್ಟಪುರ, ಕೆ.ಎಸ್ ಲೇಔಟ್, ಎಲೆಕ್ಟ್ರಾನ್ ಸಿಟಿ ಸಂಚಾರಿ ಪೊಲೀಸರು ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಕಮಿಷನರ್‌ಗೆ ವರದಿ ಕೊಟ್ಟಿದ್ದರು. ಕಳೆದ ಮೂರು ವರ್ಷದಲ್ಲಿ ನೈಸ್ ರಸ್ತೆಯಲ್ಲಿ ಸಂಭವಿಸಿರುವ ಅಪಘಾತಗಳ ಸಂಖ್ಯೆ ಆಧರಿಸಿ ವರದಿ ಸಿದ್ಧಪಡಿಸಲಾಗಿದೆ.

    ಯಾವ ವರ್ಷ ಎಷ್ಟು ಅಪಘಾತ?
    2022:
    ಮಾರಣಾಂತಿಕ ಅಪಘಾತಗಳ ಸಂಖ್ಯೆ: 42
    ಮಾರಣಾಂತಿಕವಲ್ಲದ ಅಪಘಾತಗಳು: 69

    2023:
    ಮಾರಣಾಂತಿಕ ಅಪಘಾತಗಳ ಸಂಖ್ಯೆ: 37
    ಮಾರಣಾಂತಿಕವಲ್ಲದ ಅಪಘಾತಗಳು: 83

    2024 ಜೂನ್ ವರೆಗೆ
    ಮಾರಣಾಂತಿಕ ಅಪಘಾತಗಳ ಸಂಖ್ಯೆ: 13
    ಮಾರಣಾಂತಿಕವಲ್ಲದ ಅಪಘಾತಗಳು: 52

  • ಬೆಂಗಳೂರಲ್ಲಿ ತಲೆ ಎತ್ತಲಿದೆ ಸ್ಕೈ ಡೆಕ್ – 12 ಸಾವಿರ ಕೋಟಿ ವೆಚ್ಚದಲ್ಲಿ 100 ಕಿಮೀ ಫ್ಲೈಓವರ್‌ ನಿರ್ಮಿಸಲು ಪ್ಲ್ಯಾನ್‌!

    ಬೆಂಗಳೂರಲ್ಲಿ ತಲೆ ಎತ್ತಲಿದೆ ಸ್ಕೈ ಡೆಕ್ – 12 ಸಾವಿರ ಕೋಟಿ ವೆಚ್ಚದಲ್ಲಿ 100 ಕಿಮೀ ಫ್ಲೈಓವರ್‌ ನಿರ್ಮಿಸಲು ಪ್ಲ್ಯಾನ್‌!

    ಬೆಂಗಳೂರು: ಸಿಲಿಕಾನ್‌ ಸಿಟಿ ಅಂದ್ರೆನೇ ಥಟ್ ಅಂತ ಕಣ್ಣೆದುರು ಬರೋದು ವಿಧಾನಸೌಧ (Vidhana Soudha), ಹೈಕೋರ್ಟ್, ಕಬ್ಬನ್ ಪಾರ್ಕ್, ಲಾಲ್‌ಬಾಗ್. ಅದು ಬಿಟ್ರೆ, ವಿಶ್ವೇಶ್ವರಯ್ಯ ಮ್ಯೂಸಿಯಂ, ನೆಹರು ತಾರಾಲಯ. ಆದ್ರೆ ಕಾಲ ಬದಲಾಗಿದೆ. ಜನರ ಆಲೋಚನೆಯೂ ಚೇಂಜ್ ಆಗಿದೆ. ಬೆಂಗಳೂರನ್ನ ಮತ್ತಷ್ಟು ಆಕರ್ಷಿಸಲು ಸರ್ಕಾರ ಮುಂದಾಗಿದೆ. ಪ್ರವಾಸಿಗರನ್ನ ಮತ್ತಷ್ಟು ಸೆಳೆಯಲು ಸಿಲಿಕಾನ್ ಸಿಟಿಯಲ್ಲಿ ಅತಿ ಎತ್ತರದ ಸ್ಕೈ ಡೆಕ್ (Sky Deck) ನಿರ್ಮಾಣ ಆಗಲಿದೆ. ಅದರ ಜೊತೆಗೆ ಬ್ರ್ಯಾಂಡ್‌ ಬೆಂಗಳೂರಿಗೆ (Brand Bengaluru) ಮತ್ತಷ್ಟು ಪ್ಲ್ಯಾನ್‌ಗಳು ಸಹ ರೆಡಿಯಾಗಿದೆ.

    ಕಾಲ ಬದಲಾದಂತೆ ಜನರ ಅಭಿರುಚಿಯೂ ಬದಲಾಗ್ತಿದೆ. ಉದ್ಯಾನ ನಗರಿಯ ಸೌಂದರ್ಯವನ್ನು ಬಾನೆತ್ತರದಲ್ಲಿ ನಿಂತು ನೋಡುವ ಅಪೂರ್ವ ಅವಕಾಶವನ್ನ ಜನರಿಗೆ ಒದಗಿಸಲು ಸರ್ಕಾರ (Karnataka Govt) ಮುಂದಾಗಿದೆ. ಅದಕ್ಕಾಗಿಯೇ ಸ್ಕೈ ಡೆಕ್ ಅಂದ್ರೆ ವೀಕ್ಷಣಾ ಗೋಪುರ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದನ್ನೂ ಓದಿ: ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

    ನೈಸ್ ರಸ್ತೆಯಲ್ಲಿ ಸ್ಕೈ ಡೆಕ್ ತಲೆ ಎತ್ತಲಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಬೆಂಗಳೂರು ಶಾಸಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸರ್ಕಾರದಿಂದಲೇ ಸ್ಕೈ ಡೆಕ್ ನಿರ್ಮಾಣವಾಗಲಿದೆ. ಶನಿವಾರ (ಜು.27) ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಬೆಂಗಳೂರು ಶಾಸಕರ ಸಭೆಯಲ್ಲಿ ಸ್ಕೈ ಡೆಕ್ ನಿರ್ಮಾಣಕ್ಕೆ ಎಲ್ಲಾ ಶಾಸಕರು ಒಪ್ಪಿಗೆ ನೀಡಿದ್ದಾರೆ. ನೈಸ್ ರಸ್ತೆಯಲ್ಲಿ ಸ್ಕೈ ಡೆಕ್ ನಿರ್ಮಾಣಕ್ಕೆ ಜಾಗ ಫೈನಲ್ ಮಾಡಲಾಗಿದೆ. 400 – 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಅಗತ್ಯ ಜಾಗವನ್ನ ನೈಸ್ ಸಂಸ್ಥೆಯಿಂದ ಬಿಡಿಸಿಕೊಳ್ಳಲು ತೀರ್ಮಾನ ಮಾಡಲಾಗಿದೆ.

    ಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆ:
    ಒಂದೆಡೆ ಸ್ಕೈ ಡೆಕ್ ನಿರ್ಮಾಣಕ್ಕೆ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಟನಲ್ ರೋಡ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಮೊದಲ ಹಂತದಲ್ಲಿ ಎಸ್ಟೀಮ್ ಮಾಲ್ ಟು ಸಿಲ್ಕ್ ಬೋರ್ಡ್ ವರೆಗೂ 18.5 ಕಿಮೀ ಟನಲ್ ರೋಡ್ ನಿರ್ಮಾಣ ಮಾಡಲಾಗುತ್ತದೆ. ಟನಲ್ ರೋಡ್‌ಗೆ ಕೆಲವು ಕಡೆ ಭೂಸ್ವಾಧೀನ ಅವಶ್ಯಕತೆ ಇದೆ. ಭೂಸ್ವಾಧೀನಕ್ಕೂ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗಿದೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ಪೂರ್ವ ಪಶ್ಚಿಮ ಭಾಗದಲ್ಲಿ 2ನೇ ಹಂತದಲ್ಲಿ ಮತ್ತೊಂದು ಟನಲ್ ರೋಡ್ ನಿರ್ಮಾಣ ಮಾಡಲು ಚರ್ಚೆಯೂ ಸಹ ನಡೆದಿದೆ. ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗಕ್ಕಾಗಿ ಇನ್ಮುಂದೆ ಭೂಸ್ವಾಧೀನ ಇಲ್ಲ. ಭೂಸ್ವಾಧೀನ ಬದಲಿಗೆ ಡಬಲ್ ಡಕ್ಕರ್ ರಸ್ತೆಗಳನ್ನ ನಿರ್ಮಾಣ ಮಾಡಲು ಆದ್ಯತೆ ನೀಡಲಾಗುತ್ತದೆ. ಪಾಲಿಕೆ ಮತ್ತು ಮೆಟ್ರೋದವರೇ ಈ ಪ್ರಾಜೆಕ್ಟ್‌ಗೆ ಹಣ ಖರ್ಚು ಮಾಡಲಿವೆ. ಇನ್ನು ಸಿಗ್ನಲ್ ಫ್ರೀ ಕಾರಿಡಾರ್‌ಗೆ 100 ಕಿಮೀ ಫ್ಲೈಓವರ್‌ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಫ್ಲೈಓವರ್‌ ನಿರ್ಮಾಣಕ್ಕೆ 12 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತೆ. ಕಸ ಸಮಸ್ಯೆ ನಿವಾರಣೆಗೆ ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದಲ್ಲಿ 4 ಜಾಗ ಗುರುತಿಸಲಾಗಿದೆ. ಪ್ರತಿ ಭಾಗದಲ್ಲಿ 100 ಎಕರೆ ಜಾಗದಲ್ಲಿ ಕಸ ಡಂಪಿಂಗ್ ಮಾಡುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಇನ್ನು ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಜೊತೆಗೆ ಎಲ್ಲಾ ಶಾಸಕರು ವಿಶೇಷ ಅನುದಾನಕ್ಕೆ ಬೇಡಿಕೆ ಇಟ್ಟರು. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ಡಿಸಿಎಂ ಶಾಸಕರಿಗೆ ನೀಡಿದ್ದಾರೆ. ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

  • ನೈಸ್‌ ರಸ್ತೆ ಟೋಲ್‌ ದರ ಏರಿಕೆ ಬೆನ್ನಲ್ಲೇ ಶಾಕ್‌ – ಟೋಲ್‌ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ!

    ನೈಸ್‌ ರಸ್ತೆ ಟೋಲ್‌ ದರ ಏರಿಕೆ ಬೆನ್ನಲ್ಲೇ ಶಾಕ್‌ – ಟೋಲ್‌ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ!

    ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಇದೇ ತಿಂಗಳ ಜುಲೈ 1 ರಿಂದ ನೈಸ್ ರಸ್ತೆ ಟೋಲ್ (Nice Road Toll) ದರ ಹೆಚ್ಚಿಸಿರುವ ಬೆನ್ನಲ್ಲೇ, ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ  ಏರಿಕೆಯ ಬಿಸಿ ತಟ್ಟಿದೆ.

    ನೈಸ್ ರೋಡ್ ಟೋಲ್‌ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್ ಟಿಕೆಟ್ ದರ (BMTC Ticket Price) ಏರಿಸಲಾಗತ್ತಿದೆ. ಮಾದಾವರ ಟು ಎಲೆಕ್ಟ್ರಾನಿಕ್ ಸಿಟಿ ಮಾರ್ಗದ ಬಿಎಂಟಿಸಿ ಬಸ್ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ʻಪಬ್ಲಿಕ್ ಟಿವಿʼಗೆ ತಿಳಿಸಿದ್ದಾರೆ. ಇದನ್ನೂ ಓದಿ: ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಬ್ಯಾಡ್‌ ನ್ಯೂಸ್- ಡಿಸೆಂಬರ್‌ನಲ್ಲೂ ‘ಪುಷ್ಪ 2’ ರಿಲೀಸ್ ಆಗೋದು ಡೌಟ್

    ಪ್ರತಿದಿನ ಮಾದಾವರದಿಂದ ಎಲೆಕ್ಟ್ರಾನಿಕ್‌ ಸಿಟಿಗೆ 21 ಬಿಎಂಟಿಸಿ ಬಸ್‌ಗಳನ್ನು 170 ಟ್ರಿಪ್‌ಗಳಲ್ಲಿ ಓಡಿಸಲಾಗುತ್ತಿದೆ. ಪ್ರಸ್ತುತ ಟಿಕೆಟ್ ದರ 60 ರೂಪಾಯಿ ಇದೆ. ಇದರಲ್ಲಿ ಟೋಲ್ ದರ 25 ರೂ. ಸಹ ಸೇರಿದೆ. ಈ ಟೋಲ್ ದರ ಏರಿಕೆಯಿಂದ 5 ರೂ. ಹೆಚ್ಚಳವಾಗೋ ಸಾಧ್ಯತೆಯಿದ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ‘ಬ್ಯಾಡ್ ನ್ಯೂಸ್’ ಚಿತ್ರದ 27 ಸೆಕೆಂಡ್‌ನ ಕಿಸ್ಸಿಂಗ್ ದೃಶ್ಯಕ್ಕೆ ಕತ್ತರಿ ಹಾಕಿದ ಸೆನ್ಸಾರ್ ಬೋರ್ಡ್

    ಬಿಎಂಟಿಸಿ ಬಸ್‌ ನೈಸ್ ರಸ್ತೆಯಲ್ಲಿ ಸಂಚರಿಸಲು ಒಂದು ಟ್ರಿಪ್‌ಗೆ 675 ರೂ. ಟೋಲ್ ನೀಡಬೇಕಿತ್ತು. ಜುಲೈ 1ರಿಂದ ಟೋಲ್‌ ದರ ಹೆಚ್ಚಾಗಿರುವುದರಿಂದ ಒಂದು ಬಸ್ ಟ್ರೀಪ್‌ಗೆ 785 ರೂ. ಟೋಲ್ ನೀಡಲಾಗುತ್ತಿದೆ. ಅಂದರೆ ಪ್ರತೀ ಟ್ರೀಪ್‌ಗೆ 110 ರೂ. ಹೆಚ್ಚಳವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧನುಷ್ ನಟನೆಯ ‘ರಾಯನ್’ ಚಿತ್ರದ ಟ್ರೈಲರ್ ರಿಲೀಸ್- ರಕ್ತಸಿಕ್ತವಾಗಿ ಕಾಣಿಸಿಕೊಂಡ ನಟ

    ನಾವು ಬಸ್ ದರ ಏರಿಕೆ ಮಾಡಿಲ್ಲ. ಆದ್ರೆ ಟೋಲ್‌ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ನೈಸ್ ರೋಡ್ ಟೋಲ್ ನಲ್ಲಿ ಸಂಚರಿಸೋ ಬಸ್ ದರ ಏರಿಕೆ ಆಗಿದೆ. ಎಲ್ಲಿ ಟೋಲ್‌ ಸಿಗುತ್ತೋ ಅಲ್ಲಿ ಬಸ್‌ ಸೀಟುಗಳನ್ನು ಡಿವೈಡ್ ಮಾಡತ್ತೇವೆ. ಟೋಲ್ ರೇಟ್ ಎಷ್ಟು ಜಾಸ್ತಿ ಮಾಡಿರುವ ಕಾರಣ ಅಷ್ಟು ದರವನ್ನ ಗ್ರಾಹಕರಿಂದ ಸಂಗ್ರಹಿಸುತ್ತೇವೆ. ಬಿಎಂಟಿಸಿ ಬಸ್‌ಗಳಿ ಗಳಿಗೆ ರಿಯಾಯಿತಿ ನೀಡಿ ಅಂತಾ ಎಂಡಿಯಿಂದ ಎರಡು ಸಲ ಪತ್ರ ಬರೆದಿದ್ದಾರೆ. ಯಾವುದಕ್ಕೂ ಉತ್ತರ ಬಂದಿಲ್ಲ. ಹಾಗಾಗಿ ಇದು ಬಸ್‌ ದರ ಏರಿಕೆಯಲ್ಲ, ಟೋಲ್‌ ಸೇರಿಸುತ್ತಿದ್ದೇವೆ ಅಷ್ಟೇ ಎಂದು ಮಾಹಿತಿ ನೀಡಿದ್ದಾರೆ.

    ನೈಸ್‌ರೋಡ್‌ನಲ್ಲಿ ಟೋಲ್‌ ಹೆಚ್ಚಳ – ಯಾವುದಕ್ಕೆ ಎಷ್ಟು?
    * ಹೊಸೂರು ರಸ್ತೆಯಿಂದ ಬನ್ನೇರುಘಟ್ಟ ರಸ್ತೆವರೆಗಿನ 9 ಕಿಮೀ ಉದ್ದದ ಕಾರ್ ಟೋಲ್ 50 ರೂ. ನಿಂದ 60 ರೂ.ಗೆ ಹೆಚ್ಚಳ
    * ಬನ್ನೇರುಘಟ್ಟ ರಸ್ತೆಯಿಂದ ಕನಕಪುರ ರಸ್ತೆಗೆ 40 ರೂ. ನಿಂದ 45 ರೂ.ಗೆ ಹೆಚ್ಚಳ
    * ಕಾರುಗಳಿಗೆ, ಟೋಲ್ ಶುಲ್ಕ 5 ರೂ.ನಿಂದ 10 ರೂ. ವರೆಗೆ ಹೆಚ್ಚಳ
    * ಬಿಎಂಟಿಸಿ ಬಸ್ ಪ್ರತಿ ಟ್ರೀಪ್‌ಗೆ 675 ರೂ.ನಿಂದ 785 ರೂ. ವರೆಗೆ ಹೆಚ್ಚಳ
    * ದ್ವಿಚಕ್ರ ವಾಹನ ಶುಲ್ಕದಲ್ಲಿ ಯಾವುದೇ ಬದಲಾವಣೆ ಇಲ್ಲ.

  • ನೈಸ್‌ರೋಡ್ ಬಳಿ ಲಾರಿಗೆ ಬಸ್ ಡಿಕ್ಕಿಯಾಗಿ ಸರಣಿ ಅಪಘಾತ – ಓರ್ವ ಸಾವು, ನಾಲ್ವರು ಗಂಭೀರ

    ನೈಸ್‌ರೋಡ್ ಬಳಿ ಲಾರಿಗೆ ಬಸ್ ಡಿಕ್ಕಿಯಾಗಿ ಸರಣಿ ಅಪಘಾತ – ಓರ್ವ ಸಾವು, ನಾಲ್ವರು ಗಂಭೀರ

    ಬೆಂಗಳೂರು: ನಿಂತಿದ್ದ ಲಾರಿಗೆ (Lorry) ಹಿಂಬದಿಯಿಂದ ಮಿನಿ ಬಸ್ (Mini Bus) ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನೈಸ್‌ರೋಡ್ (Nice Road) ಬಳಿ ನಡೆದಿದೆ.

    ಬೆಳಗ್ಗೆ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ (Electronic City) ಟೋಲ್ ಬಳಿ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದೆ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿ ಸರಣಿ ಅಪಘಾತ ಉಂಟಾಗಿದೆ. ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ | ಸಿಬಿಐ ಪ್ರಕರಣ ರದ್ದಿಲ್ಲ – ಸುಪ್ರೀಂನಲ್ಲಿ ಡಿಕೆಶಿ ಅರ್ಜಿ ವಜಾ

    ಘಟನೆಯಲ್ಲಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಇದನ್ನೂ ಓದಿ: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ : ರಾಮಲಿಂಗಾ ರೆಡ್ಡಿ

  • ‘ನೈಸ್ ರೋಡ್’ನಲ್ಲಿ ಕಾಣಿಸಿಕೊಂಡ ಧರ್ಮ : ಟ್ರೈಲರ್ ರಿಲೀಸ್

    ‘ನೈಸ್ ರೋಡ್’ನಲ್ಲಿ ಕಾಣಿಸಿಕೊಂಡ ಧರ್ಮ : ಟ್ರೈಲರ್ ರಿಲೀಸ್

    ಗೋಪಾಲ್ ಹಳೇಪಾಳ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ  ನೈಸ್ ರೋಡ್ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಳೆದ ಜನ್ಮದಲ್ಲಿ ಮಾಡಿದ ತಪ್ಪಗೆ ಈ  ಜನ್ಮದಲ್ಲಿ ಶಿಕ್ಷೆ ಕೊಡುವುದು ಯಾವ ನ್ಯಾಯ  ಎನ್ನುವ  ಅಂಶವನ್ನಿಟ್ಟುಕೊಂಡು ಕರ್ಮ ಮತ್ತು ಧರ್ಮದ (Dharma)  ಮೇಲೆ ‘ನೈಸ್ ರೋಡ್’ (Nice Road) ಚಿತ್ರದ  ಕಥೆ ಹೆಣೆಯಲಾಗಿದೆ.  ನಿರ್ದೇಶನದ ಜೊತೆಗೆ ಪುನರ್ ಗೀತಾ ಸಿನಿಮಾಸ್  ಬ್ಯಾನರ್ ಅಡಿ ಗೋಪಾಲ್ ಹಳೇಪಾಳ್ಯ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.‌

    ಈ ಸಂದರ್ಭದಲ್ಲಿ ನಿರ್ದೇಶಕ ಗೋಪಾಲ್  ಮಾತನಾಡುತ್ತ ಈ ಹಿಂದೆ ನಾನು  ತಾಂಡವ ಎಂಬ  ಸಿನಿಮಾ ನಿರ್ದೇಶನ ಮಾಡಿದ್ದೆ. ನೈಸ್ ರೋಡ್ ಸಸ್ಪೆನ್ಸ್, ಥ್ರಿಲ್ಲರ್ ಕಥೆಯಾಗಿದ್ದು  ಪಾಪ, ಪುಣ್ಯ, ಪುನರ್ಜನ್ಮದ ಕಾನ್ಸೆಪ್ಟ್  ಇಟ್ಟುಕೊಂಡು ಮಾಡಿದ ಚಿತ್ರ.  ಈ  ಕಥೆ ಬರೆಯುವಾಗಲೇ ಇನ್ವೆಸ್ಟಿಗೇಶನ್ ಆಫೀಸರ್ ಪಾತ್ರಕ್ಕೆ  ಧರ್ಮ ಅವರನ್ನು ಆಯ್ಕೆ  ಮಾಡಿಕೊಂಡಿದ್ದೆ,  ಮತ್ತೊಂದು ಮುಖ್ಯ ಪಾತ್ರದಲ್ಲಿ ಜೋತಿ ರೈ ಕಾಣಿಸಿಕೊಂಡಿದ್ದಾರೆ.‌ ಗೋವಿಂದೇಗೌಡ, ಮಂಜು ನಾಥ್ ರಂಗಾಯಣ, ಮಂಜು ಕ್ರಿಶ್, ರೇಣು ಶಿಕಾರಿ, ಪ್ರಭು, ಸಚ್ಚಿ ರವಿಕಿಶೋರ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. 25 ದಿನಗಳ ಕಾಲ ಬೆಂಗಳೂರು,  ಕುಣಿಗಲ್ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದು ಈ ತಿಂಗಳ ಕೊನೆಯ ವಾರ ರಿಲೀಸ್ ಮಾಡೋ  ಪ್ಲ್ಯಾನ್ ಇದೆ, ನೈಸ್ ರೋಡ್ ಗೂ  ನಮ್ಮ ಸಿನಿಮಾಗೂ  ಸಂಬಂಧವಿಲ್ಲ. ಹಳ್ಳಿಯ ಮುಂದೆ ಹೈವೇ ರಸ್ತೆಯಿರುತ್ತದೆ. ಆ ರಸ್ತೆ ಎಷ್ಟು ನೈಸಾಗಿದೆ ಅಂತ ಊರ ಜನ ಹೇಳ್ತಿರ್ತಾರೆ. ಅದನ್ನೇ ಚಿತ್ರದ ಟೈಟಲ್ ಆಗಿಟ್ಟಿದ್ದೇವೆ ಎಂದು ಹೇಳಿದರು.

    ನಟ ಧರ್ಮ ಮಾತನಾಡಿ ಈವರೆಗೆ ಎಲ್ಲಾ ಥರದ ಪಾತ್ರಗಳನ್ನು ಮಾಡಿದ್ದೇನೆ.  ಇಲ್ಲೂ ಪೊಲೀಸ್ ಆಫೀಸರ್  ಪಾತ್ರ ಮಾಡಿದ್ದು, ಇದರಲ್ಲಿ ಕಥೆಯೇ ಹೀರೋ. ಕರ್ಮದ ಬಗ್ಗೆ ಕಥೆ ಹೇಳಲಾಗಿದ್ದು,  ಡಿಫರೆಂಟ್ ಆಗಿ ಬಂದಿದೆ. ಗೋಪಾಲ್ ನೀವೇ ಬೇಕು ಅಂತ ಬಂದಿದ್ದರು  ಎಂದು ಹೇಳಿದರು. ರಾಜುಗೌಡ ಮಾತನಾಡುತ್ತ ಈ ಕಾನ್ಸೆಪ್ಟ್ ಕೇಳಿದಾಗ ತುಂಬಾ ಇಷ್ಟ ಆಯ್ತು. ಕ್ಯಾರೆಕ್ಟರ್ ಗಳಲ್ಲಿ ನಮ್ಮ ಸುತ್ತಲಿನ ಅನೇಕ ಪಾತ್ರಗಳು ಸಿಗುತ್ತವೆ, ಇದು ಬದುಕಿನ ಆಯಾಮ ಕಟ್ಟಿಕೊಡುವ ಚಿತ್ರ ಈ ಬಳಗದ ಜೊತೆ ನಾನು ನಿಂತದ್ದು ಖುಷಿಯಿದೆ ಎಂದರು.

     

    ಸಂಗೀತ ನಿರ್ದೇಶಕ ಸತೀಶ್ ಆರ್ಯನ್ ಮಾತನಾಡುತ್ತ  ಪ್ರಾರಂಭದಲ್ಲಿ ಹಾಡುಗಳು ಇರಲಿಲ್ಲ. ಆರ್.ಆರ್. ತುಂಬಾ ಚಾಲೆಂಜಿಂಗ್ ಆಗಿತ್ತು. ಸಾಕಷ್ಟು ಟ್ವಿಸ್ಟ್ ಅಂಡ್ ಟರ್ನ್ ಇರುವ ಚಿತ್ರ. ಮನುಷ್ಯ ಜೀವನದಲ್ಲಿ ನಡೆವ ಹಲವಾರು ಘಟನೆಗಳನ್ನು ಇಟ್ಟುಕೊಂಡು ಈ ಚಿತ್ರ ಮಾಡಲಾಗಿದೆ ಎಂದರು.ಉಳಿದಂತೆ ಛಾಯಾಗ್ರಾಹಕ ಪ್ರವೀಣ್ ಶೆಟ್ಟಿ, ಕಲಾವಿದರಾದ ಮಂಜು ರಂಗಾಯಣ, ಗೋವಿಂದೇ ಗೌಡ, ರವಿಕಿಶೋರ್, ಸಚ್ಚಿ, ಸುರೇಖ, ಮಂಜು ಕ್ರಿಶ್, ಪ್ರಭು ರಾಜ್ ತಮ್ಮ ಪಾತ್ರಗಳ ಕುರಿತು ಮಾತನಾಡಿದರು.

  • ನನ್ನ ಜೀವನಲ್ಲಿ ಒಂದೇ ಒಂದು ದೊಡ್ಡ ತಪ್ಪು ಮಾಡಿದೆ: ಹೆಚ್‌ಡಿಡಿ

    ನನ್ನ ಜೀವನಲ್ಲಿ ಒಂದೇ ಒಂದು ದೊಡ್ಡ ತಪ್ಪು ಮಾಡಿದೆ: ಹೆಚ್‌ಡಿಡಿ

    ಬೆಂಗಳೂರು: ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಉತ್ತಮ ರಸ್ತೆ ಆಗುತ್ತದೆ ಎಂದು ಮಹಾತ್ವಕಾಂಕ್ಷೆಯಿಂದ ನೈಸ್‌ ರಸ್ತೆ (NICE Road) ಮಾಡಿದೆ. ಆದರೆ‌ ಮಹಾನುಭಾವರು ದೊಡ್ಡ ಪೆಟ್ಟು ಕೊಟ್ಟರು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಬೇಸರ ವ್ಯಕ್ತಪಡಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೈಸ್ ಯೋಜನೆಯಿಂದ ಬಡವರಿಗೆ ಅನ್ಯಾಯವಾಗಿದೆ. ನಮ್ಮ ಪಕ್ಷ ಇದರ ವಿರುದ್ದ ಧ್ವನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ವಿಧಾನಸಭೆಯಲ್ಲಿ ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಿ ವರದಿ ಕೊಟ್ಟಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ತಲುಪಬಹುದು ಎಂಬ ಕಾರಣಕ್ಕೆ ಯೋಜನೆಗೆ ಅನುಮತಿ ನೀಡಿದೆ. ರಾಜ್ಯ ಸರ್ಕಾರ ಕೂಡಲೇ ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.  ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್‌ ಅಂತ್ಯವಾಗುತ್ತೆ: ಹೆಚ್‌ಡಿಡಿ ಭವಿಷ್ಯ

    ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ಸದನ ಸಮಿತಿ ವರದಿ ಕೊಟ್ಟಿದೆ. ಆದರೆ ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಅಕ್ಟೋಬರ್ 19 ರಲ್ಲಿ ಸಿಎಂ ಅವರಿಗೆ ಪತ್ರ ಬರೆದು ನೈಸ್ ಈ ಭೂಮಿಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ಆಗ್ರಹ ಮಾಡಿದ್ದೆ. ಆದರೆ ಸಿಎಂ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದರು.

    ಒಟ್ಟು 13,404 ಎಕರೆ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. 13 ಸಾವಿರ ಎಕರೆ ಬೆಲೆ 707,77,766,040 ಕೋಟಿ ರೂ. ಎಂದು ಸದನ ಸಮಿತಿ ವರದಿ ಕೊಟ್ಟಿದೆ. ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಈಗ ಈ ಭೂಮಿಯ ಬೆಲೆ ಇನ್ನೂ ಜಾಸ್ತಿ ಆಗುತ್ತದೆ ಎಂದು ಹೇಳಿದರು.  ಇದನ್ನೂ ಓದಿ: ‘ಗಟ್ಟಿಮೇಳ’ ಧಾರಾವಾಹಿ ಅಂತ್ಯ: ಕಣ್ಣೀರಿಟ್ಟ ಫ್ಯಾನ್ಸ್

     

    ಬಡವರ ಪರ ಮಾತನಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ. ಸಿದ್ದರಾಮಯ್ಯ ಎಷ್ಟು ವರ್ಷ ಆಳಿದರು ಕಪ್ಪುಚುಕ್ಕೆಯಿಂದ ಹೊರಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಕ್ರಮ ತೆಗೆದುಕೊಳ್ಳದೇ ಹೋದರೆ ಕಪ್ಪುಚುಕ್ಕೆಯಿಂದ ಹೊರ ಬರುವುದಿಲ್ಲ. ಹೀಗಾಗಿ ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹ ಮಾಡಿದರು.

    ಸೋನಿಯಾ ಗಾಂಧಿ ಅವರ ಬಳಿಯು ಇದು ಚರ್ಚೆ ಆಗಿದೆ. ಧರ್ಮಸಿಂಗ್ ಕಾಲದಲ್ಲಿ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳಲ್ಲ ಎಂದರು.

  • ನೈಸ್ ರಸ್ತೆ ಅಪಘಾತ – ಗಾಯಗೊಂಡಿದ್ದ ಇನ್ನೊಂದು ಮಗು ಆಸ್ಪತ್ರೆಯಲ್ಲಿ ಸಾವು

    ನೈಸ್ ರಸ್ತೆ ಅಪಘಾತ – ಗಾಯಗೊಂಡಿದ್ದ ಇನ್ನೊಂದು ಮಗು ಆಸ್ಪತ್ರೆಯಲ್ಲಿ ಸಾವು

    ಬೆಂಗಳೂರು: ನೈಸ್ ರಸ್ತೆಯಲ್ಲಿ (Nice Road) ನಡೆದ ಕಾರು (Car) ಮತ್ತು ಲಾರಿ (Lorry) ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಮಗು ಕಾರಿನಲ್ಲೇ ಸಜೀವ ದಹನವಾಗಿದ್ದಾರೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ತಂದೆ ಹಾಗೂ ಇನ್ನೊಂದು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮಗು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.

    ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ಕಾರು ಲಾರಿಗೆ ಡಿಕ್ಕಿಯಾಗಿ ರಸ್ತೆ ಪಕ್ಕದ ಡಿವೈಡರ್‌ಗೆ ಡಿಕ್ಕಿಯಾಗಿತ್ತು. ಪರಿಣಾಮ, ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ತಾಯಿ ಸಿಂಧು (31), ಮಗಳು ಕುಷಾವಿ (2) ಕಾರಿನಲ್ಲೇ ಸಜೀವ ದಹನವಾಗಿದ್ದರು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತಂದೆ ಮಹೇಂದ್ರನ್ ಮತ್ತು ಇನ್ನೊಂದು ಮಗು ಪ್ರಣವಿಯನ್ನು (6) ಉತ್ತರ ಹಳ್ಳಿಯ ಸಂತೋಷ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ಮಗು ಪ್ರಣವಿ ಕೂಡಾ ಸಾವನ್ನಪ್ಪಿದ್ದಾಳೆ. ತಂದೆ ಮಹೇಂದ್ರನ್‌ಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಕಾರು, ಲಾರಿ ನಡುವೆ ಭೀಕರ ಅಪಘಾತ – ತಾಯಿ, ಮಗು ಸ್ಥಳದಲ್ಲೇ ಸಾವು

    ಅಪಘಾತವಾದ (Accident) ವೇಳೆ ಕಾರಿನಲ್ಲಿದ್ದ ಪತಿ ಮಹೇಂದ್ರನ್ ಒಂದು ಮಗುವನ್ನು ಕಾರಿನಿಂದ ಹೊರಗೆ ಎಳೆದುಕೊಂಡಿದ್ದಾರೆ. ಆದರೆ ಪತ್ನಿ ಸಿಂಧು ಹಾಗೂ ಮತ್ತೊಂದು ಮಗುವಿನ ರಕ್ಷಣೆ ಸಾಧ್ಯವಾಗದೇ ಇಬ್ಬರೂ ಬೆಂಕಿಗೆ ಆಹುತಿಯಾಗಿದ್ದಾರೆ. ನಿದ್ರೆ ಮಂಪರಿನಲ್ಲಿ ಅಪಘಾತ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

    ಕಾರು ಮೈಸೂರು ರಸ್ತೆ ಕಡೆಯಿಂದ ಕನಕಪುರದ ಕಡೆಗೆ ಹೋಗುತ್ತಿದ್ದು, ಸೋಂಪುರ ಜಂಕ್ಷನ್ ಬಳಿ ಕಂಟ್ರೋಲ್ ತಪ್ಪಿ ಡಿವೈಡರ್ ದಾಟಿ ಎದುರು ರಸ್ತೆಗೆ ಹೋಗಿ ಪಲ್ಟಿಯಾಗಿದೆ. ಈ ವೇಳೆ ಕನಕಪುರ ರಸ್ತೆ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಎದುರು ರಸ್ತೆಯಲ್ಲಿ ಬರುತ್ತಿದ್ದ ಲಾರಿ ಚಾಲಕ ಕಾರು ರಸ್ತೆಗೆ ಬಂದಿದ್ದನ್ನು ನೋಡಿ ಗಾಬರಿಗೊಂಡು ಲಾರಿಯನ್ನು ಎಡಕ್ಕೆ ತೆಗೆದುಕೊಂಡ ಪರಿಣಾಮ ಲಾರಿ ಪಲ್ಟಿ ಹೊಡೆದಿದೆ. ಲಾರಿ ಕೂಡ ಸಂಪೂರ್ಣ ಜಖಂ ಆಗಿದೆ. ಸುಟ್ಟು ಕರಕಲಾದ ಕಾರನ್ನು ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆಗೆ ಪೊಲೀಸರು ಶಿಫ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೃಹತ್ ಗಾತ್ರದ ಕ್ರೇನ್

    ಲಾರಿ ಪಲ್ಟಿಯಾದ ಪರಿಣಾಮ ಲಾರಿ ಚಾಲಕ ಭಾರತಿ ರಾಜನ್‌ಗೂ ಗಾಯಗಳಾಗಿವೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಮಹೇಂದ್ರನ್ ಟಾಟ ನೆಕ್ಸಾನ್ ಕಾರು ಚಾಲನೆ ಮಾಡುತ್ತಿದ್ದರು. ಮೈಸೂರು ರೋಡ್‌ನಿಂದ ಕನಕಪುರದ ಕಡೆಗೆ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಎದುರು ರಸ್ತೆಗೆ ಬಂದು ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಮೊದಲು ಇಬ್ಬರು, ಈಗ ಒಬ್ಬರು ಸಾವನ್ನಪ್ಪಿದ್ದಾರೆ. ಓವರ್ ಸ್ಪೀಡ್ ಆಗಿ ಬಂದಿರೋದೇ ಅಪಘಾತಕ್ಕೆ ಕಾರಣ ಎನ್ನುವುದು ಗೊತ್ತಾಗುತ್ತಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ – ವರ್ತಕರು, ಬಿಜೆಪಿ ಮುಖಂಡರು ವಿರೋಧ

    ಕಾರಿನಲ್ಲಿದ್ದವರು ರಾಮಮೂರ್ತಿ ನಗರದ ಮನೆಗೆ ಹೋಗುತ್ತಿದ್ದರು. ಸರ್ಜಾಪುರದ ಕಡೆಯಿಂದ ರಾಮಮೂರ್ತಿಗೆ ಬಾಡಿಗೆ ತೆಗೆದುಕೊಂಡು ಹೋಗುತ್ತಿದ್ದರು. ಸೋಮವಾರ ತುಮಕೂರು ರಸ್ತೆಯ ಐಕಿಯಾ ಫರ್ನಿಚರ್‌ಗೆ ಹೋಗಿದ್ದ ಫ್ಯಾಮಿಲಿ ರಾತ್ರಿ ಊಟ ಮಾಡಿಕೊಂಡು ನೈಟ್‌ಔಟ್ ಹೊರಟಿದ್ದರು. ತುಮಕೂರು ರಸ್ತೆಯಿಂದ ಸರ್ಜಾಪುರ ರಸ್ತೆ ಮೂಲಕ ರಾಮಮೂರ್ತಿ ನಗರಕ್ಕೆ ಹೊರಟಿದ್ದರು. ಅತಿಯಾದ ವೇಗ ಅಥವಾ ಕಾರಿನಲ್ಲಿದ್ದ ನೀರಿನ ಬಾಟಲ್ ಬ್ರೇಕ್ ಹತ್ತಿರ ಸಿಲುಕಿಕೊಂಡು ಘಟನೆ ನಡೆದಿರುವ ಶಂಕೆ ಇದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೈಸ್ ರಸ್ತೆಯಲ್ಲಿ ಕಾರು, ಲಾರಿ ನಡುವೆ ಭೀಕರ ಅಪಘಾತ – ತಾಯಿ, ಮಗು ಸ್ಥಳದಲ್ಲೇ ಸಾವು

    ನೈಸ್ ರಸ್ತೆಯಲ್ಲಿ ಕಾರು, ಲಾರಿ ನಡುವೆ ಭೀಕರ ಅಪಘಾತ – ತಾಯಿ, ಮಗು ಸ್ಥಳದಲ್ಲೇ ಸಾವು

    ಬೆಂಗಳೂರು: ಕಾರು (Car) ಹಾಗೂ ಲಾರಿ (Lorry) ಮಧ್ಯೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ನೈಸ್ ರಸ್ತೆಯಲ್ಲಿ (Nice Road) ನಡೆದಿದೆ.

    ಬೆಳಗ್ಗಿನ ಜಾವ ಸುಮಾರು ನಾಲ್ಕು ಘಂಟೆಯ ವೇಳೆಗೆ ಘಟನೆ ನಡೆದಿದೆ. ಪತಿ ಮಹೇಂದ್ರನ್, ಪತ್ನಿ ಸಿಂಧು ಮತು ಅವರ ಎರಡು ಮಕ್ಕಳು ಟಾಟಾ ನೆಕ್ಸಾನ್ (Tata Nexon) ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೃಹತ್ ಗಾತ್ರದ ಕ್ರೇನ್

    ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟ್ರ್ಯಾಕ್ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]