Tag: Nicholai Sachdev

  • ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮದುವೆ

    ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮದುವೆ

    ಮಿಳಿನ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಬಹುಕಾಲದ ಗೆಳೆಯನ ಜೊತೆ ಜುಲೈ 2ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇಬ್ಬರ ವಿವಾಹ ಥೈಲ್ಯಾಂಡ್‌ನಲ್ಲಿ ಅದ್ಧೂರಿಯಾಗಿ ಜರುಗಲಿದೆ. ಈ ಸಂಭ್ರಮದಲ್ಲಿ ತಮಿಳಿನ ಸ್ಟಾರ್ ಕಲಾವಿದರ ದಂಡೇ ಸಾಕ್ಷಿಯಾಗಲಿದೆ. ಇದನ್ನೂ ಓದಿ:ಹ್ಯಾಟ್ರಿಕ್ ಹೀರೋ ಶಿವಣ್ಣ ಫ್ಯಾನ್ಸ್‌ಗೆ ಸಿಹಿಸುದ್ದಿ- ಏನದು?

    ಹಿರಿಯ ನಟ ಶರತ್‌ಕುಮಾರ್ ಮತ್ತು ರಾಧಿಕಾ ದಂಪತಿ ಪುತ್ರಿ ವರಲಕ್ಷ್ಮಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯುತ್ತಿದೆ. ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಉದ್ಯಮಿ ನಿಕೋಲಾಯ್ (Nicholai Sachdev) ಜೊತೆ ವರಲಕ್ಷ್ಮಿ ಮದುವೆಗೆ (Wedding) ಭರ್ಜರಿ ತಯಾರಿ ನಡೆಯುತ್ತಿದೆ.

    ಈ ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಲು ಸ್ಟಾರ್ ನಟಿ ನಯನತಾರಾ ದಂಪತಿ, ರವಿತೇಜ, ತಮಿಳು ನಟ ಸಿದ್ಧಾರ್ಥ್, ಎ.ಆರ್ ಮುರುಗದಾಸ್, ಮುರಳಿ ಶರ್ಮಾ, ಸಮಂತಾ, ಕನ್ನಡದ ನಟ ಸುದೀಪ್ ಸೇರಿದಂತೆ ಅನೇಕರಿಗೆ ನಟಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅದಷ್ಟೇ ಅಲ್ಲ, ಪಿಎಂ ನರೇಂದ್ರ ಮೋದಿಗೂ ನಟಿಯ ಕುಟುಂಬ ವಿಶೇಷವಾಗಿ ಆಮಂತ್ರಣ ನೀಡಿದೆ.

    ಅಂದಹಾಗೆ, ಮಾಣಿಕ್ಯ ವರಲಕ್ಷ್ಮಿ ಅವರು ಉದ್ಯಮಿ ನಿಕೋಲಾಯ್ ಜೊತೆ ಮಾರ್ಚ್ 1ರಂದು ಮುಂಬೈನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಹಲವು ವರ್ಷಗಳ ಪ್ರೀತಿಗೆ ಇಬ್ಬರೂ ಉಂಗುರದ ಮುದ್ರೆ ಒತ್ತಿದ್ದರು.

    ಇನ್ನೂ ‘ಮಾಣಿಕ್ಯ’ ಸಿನಿಮಾದ ನಂತರ ಮತ್ತೆ ಸುದೀಪ್ ಜೊತೆ ನಟಿ ಕೈಜೋಡಿಸಿದ್ದಾರೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

  • ಭಾವಿ ಪತಿಯನ್ನು ಟ್ರೋಲ್ ಮಾಡಿದ್ದಕ್ಕೆ ‘ಮಾಣಿಕ್ಯ’ ನಟಿ ತಿರುಗೇಟು

    ಭಾವಿ ಪತಿಯನ್ನು ಟ್ರೋಲ್ ಮಾಡಿದ್ದಕ್ಕೆ ‘ಮಾಣಿಕ್ಯ’ ನಟಿ ತಿರುಗೇಟು

    ‘ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar)  ಅವರು ಸಿನಿಮಾಗಿಂತ ವೈಯಕ್ತಿಕ ಕಾರಣಗಳಿಂದ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಅದ್ಧೂರಿಯಾಗಿ ನಿಕೋಲಾಯ್ ಜೊತೆ ಎಂಗೇಜ್‌ಮೆಂಟ್ ಆಗಿತ್ತು. ಈ ಬೆನ್ನಲ್ಲೇ ನಟಿಯ ಭಾವಿ ಪತಿ ನೆಗೆಟಿವ್ ಆಗಿ ಟ್ರೋಲ್ ಕೂಡ ಆಗಿತ್ತು. ಈ ವಿಚಾರವಾಗಿ ನಟಿ ಪ್ರತಿಕ್ರಿಯೆ ನೀಡಿದ್ದಾರೆ.

    ಡಿವೋರ್ಸ್ ಆಗಿರುವ ನಿಕೋಲಾಯ್ ಸಚ್‌ದೇವ್ (Nicholai Sachdev) ಜೊತೆ ವರಲಕ್ಷ್ಮಿ 2ನೇ ಮದುವೆ ಆಗಲು ಸಜ್ಜಾಗಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ನಟಿ ಮಾತನಾಡಿದ್ದಾರೆ. ನನ್ನ ತಂದೆ (Sarathkumar) ಕೂಡ 2ನೇ ಮದುವೆ ಆದರು. ಅದರಲ್ಲಿ ಯಾವ ತಪ್ಪು ಇಲ್ಲ. ನನ್ನ ಕಣ್ಣಿಗೆ ನಿಕ್ ಅವರು ಹ್ಯಾಂಡ್ಸಮ್ ಆಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್ ಆಗಿ ಮಾತನಾಡುವವರ ಬಗ್ಗೆ ನಾನು ಎಂದೂ ಕೇರ್ ಮಾಡುವುದಿಲ್ಲ ಹೇಳಿದ್ದಾರೆ.‌ ಇದನ್ನೂ ಓದಿ:ಕಾಮಾಕ್ಯ ದೇವಿಯ ದರ್ಶನ ಪಡೆದ ‘ಗಾಳಿಪಟ 2’ ನಟಿ

    ಬೇರೆಯವರಿಗೆ ನಾನು ಯಾಕೆ ಉತ್ತರ ಕೊಡಬೇಕು. ನಿಕ್ ತಂದೆ-ತಾಯಿ ಒಂದು ಆರ್ಟ್ ಗ್ಯಾಲರಿ ನಡೆಸುತ್ತಾರೆ. ನಿಕ್ ಮತ್ತು ಅವರ ಪುತ್ರಿ ಪವರ್ ಲಿಫ್ಟಿಂಗ್‌ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಅವರ ಮಾಜಿ ಪತ್ನಿ ಜೊತೆಗೂ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ನಮ್ಮ ನಡುವೆ ಎಲ್ಲವೂ ಚೆನ್ನಾಗಿದೆ ಎಂದಿದ್ದಾರೆ.

    ಅಂದಹಾಗೆ, ‘ಮಾಣಿಕ್ಯ’ ಸಿನಿಮಾದ ಬಳಿಕ ಮತ್ತೆ ವರಲಕ್ಷ್ಮಿ ಸುದೀಪ್ ಜೊತೆ ಕೈಜೋಡಿಸಿದ್ದಾರೆ. ಮಾಕ್ಸ್ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.

  • ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು ‘ಮಾಣಿಕ್ಯ’ ನಟಿ ಎಂಗೇಜ್‌ಮೆಂಟ್

    ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು ‘ಮಾಣಿಕ್ಯ’ ನಟಿ ಎಂಗೇಜ್‌ಮೆಂಟ್

    ನ್ನಡದ ‘ಮಾಣಿಕ್ಯ’ (Maanikya) ಚಿತ್ರ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalakshmi Sarathkumar) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆಗಿದ್ದಾರೆ. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ನಟಿ ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ (Nicholai Sachdev) ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮಾರ್ಚ್ 1ರಂದು ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

    ಈ ವರ್ಷದ ಅಂತ್ಯದಲ್ಲಿ ವರಲಕ್ಷ್ಮಿ ಮದುವೆ ಸಮಾರಂಭ ನಡೆಯಲಿದೆ. ತಮಿಳಿನ ಹಿರಿಯ ನಟ ಶರತ್ ಕುಮಾರ್ ಅವರ ಪುತ್ರಿಯಾಗಿದ್ದು, ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

    ಸದ್ಯ ಧನುಷ್ ನಟನೆಯ ‘ರಾಯನ್’ ಚಿತ್ರದಲ್ಲಿ ವರಲಕ್ಷ್ಮಿ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಇದನ್ನೂ ಓದಿ:ಕರಿಮಣಿ ಮಾಲೀಕನನ್ನು ಪರಿಚಯಿಸಿದ ದೀಪಿಕಾ ದಾಸ್

    ಸುದೀಪ್ (Sudeep) ಜೊತೆ ‘ಮಾಣಿಕ್ಯ’ ಮಾತ್ರವಲ್ಲ, ರನ್ನ ಸಿನಿಮಾದಲ್ಲೂ ವರಲಕ್ಷ್ಮಿ ಶರತ್‌ಕುಮಾರ್ ಕಾಣಿಸಿಕೊಂಡಿದ್ದಾರೆ. ಇವಿಷ್ಟು ಮಾತ್ರವಲ್ಲದೆ ಕನ್ನಡದ ವಿಸ್ಮಯ, ರಣಂ ಚಿತ್ರದಲ್ಲಿ ನಟಿಸಿದ್ದಾರೆ.