Tag: Nidagundi

  • ವಿಜಯಪುರ | ಕಲುಷಿತ ನೀರು ಕುಡಿದು 30ಕ್ಕೂ ಅಧಿಕ ಜನ ಅಸ್ವಸ್ಥ

    ವಿಜಯಪುರ | ಕಲುಷಿತ ನೀರು ಕುಡಿದು 30ಕ್ಕೂ ಅಧಿಕ ಜನ ಅಸ್ವಸ್ಥ

    ವಿಜಯಪುರ: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ನಿಡಗುಂದಿ (Nidagundi) ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ನಡೆದಿದೆ.

    ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು ಕಳೆದ ಮೂರು ದಿನಗಳಿಂದ ೩೦ಕ್ಕೂ ಅಧಿಕ ಜನ ಅಸ್ವಸ್ಥಗೊಂಡು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ವೈದರ ತಂಡವೊಂದು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ಎರಡು ಅಂಬುಲೆನ್ಸ್ ಕೂಡ ಅಲ್ಲಿಯೇ ಇವೆ.ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್‌ ಶಾ

    ಅಲ್ಲದೇ ಕೆಲವರು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ.

    ಊರಿನ ಬಹುತೇಕ ಜನರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.ಇದನ್ನೂ ಓದಿ: ವಾಂಖೆಡೆಯಲ್ಲಿ 6.5 ಲಕ್ಷ ಮೌಲ್ಯದ 261 ಐಪಿಎಲ್ ಜೆರ್ಸಿ ಕಳವು – ಸೆಕ್ಯುರಿಟಿ ಗಾರ್ಡ್ ಅರೆಸ್ಟ್

  • ವಿಜಯಪುರ| ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ

    ವಿಜಯಪುರ| ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ

    ವಿಜಯಪುರ: ನಾಲ್ಕು ಮಕ್ಕಳನ್ನು (Childrens) ಕಾಲುವೆಗೆ ಎಸೆದು ತಾಯಿ (Mother) ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ (Vijayapura) ಜಿಲ್ಲೆ ನಿಡಗುಂದಿ (Nidagundi) ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.

    ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ ಹಾಗೂ ಹುಸೇನ್ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳಿಯರು ಕಾಪಾಡಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ನಡುವೆ ಭಿನ್ನಾಭಿಪ್ರಾಯ ಇಲ್ಲ – ಸುರ್ಜೇವಾಲ ಸ್ಪಷ್ಟನೆ

    ಬಹುದಿನಗಳಿಂದ ಭಾಗ್ಯಳ ಪತಿ ನಿಂಗರಾಜ ಅಣ್ಣತಮ್ಮಂದಿರ ಮಧ್ಯೆ ಆಸ್ತಿಗಾಗಾಗಿ ಕಲಹ ನಡೆದಿತ್ತು. ಆಸ್ತಿಯಲ್ಲಿ ಬಿಡಿಗಾಸು ಕೊಡಲ್ಲ ಅಂತಾ ಲಿಂಗರಾಜ್‌ಗೆ ಅಣ್ಣತಮ್ಮಂದಿರು ಹೇಳಿದ್ದರು. ಅದೆ ರೀತಿ ಇಂದು ಕೂಡ ಪರಸ್ಪರ ಗಲಾಟೆ ನಡೆದಿತ್ತು. ಗಲಾಟೆಯ ನಂತರ ಮನೆಯಿಂದ ತೆಲಗಿಗೆ ಹೊರಟಾಗ ಕಾಲುವೆ ಹತ್ತಿರ ನಿಂಗರಾಜನ ದ್ವಿಚಕ್ರ ವಾಹನದ ಪೆಟ್ರೋಲ್ ಖಾಲಿ ಆಗಿದೆ. ಆಗ ಪೆಟ್ರೋಲ್ ತರಲೆಂದು ನಿಂಗರಾಜ ಸ್ವಲ್ಪ ದೂರ ಹೋಗುತ್ತಿದ್ದಂತೆ ಭಾಗ್ಯ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾಳೆ ಎಂದು ಪತಿ ನಿಂಗರಾಜ ಕಣ್ಣೀರು ಹಾಕುತ್ತಿದ್ದಾನೆ. ಇದನ್ನೂ ಓದಿ: ಜಮೀರ್ ನೂರು ಹಸು ಕೊಡಿಸಿದ್ರೂ ಪಾಪ ಪರಿಹಾರ ಆಗಲ್ಲ – ಛಲವಾದಿ ಸಿಡಿಮಿಡಿ

    ಸದ್ಯ ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದಾರೆ. ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶವ ಶೋಧಕಾರ್ಯ ಮುಂದುವರಿದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ನಿಂಗರಾಜ ಹಾಲಿ ತೆಲಗಿ ಗ್ರಾಮ ಪಂ ಸದಸ್ಯನಾಗಿದ್ದು, ಮೊಹರಂನಲ್ಲಿ ದೇವರನ್ನು ಹೊರುತ್ತಿದ್ದರು. ಈ ಕಾರಣದಿಂದ ಗಂಡು ಮಕ್ಕಳಿಗೆ ಹಸೇನ್‌ ಹಾಗೂ ಹುಸೇನ್‌ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

  • Belagavi| ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು

    Belagavi| ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು

    ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ.

    ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆ ಆಗಿದ್ದಳು. ಮೊದಲನೆ ಮದುವೆಯಾಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದಳು. ಬಳಿಕ ಮತ್ತೊಂದು ಮದುವೆ ಆಗಿ ಕೇವಲ ಮೂರೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣು ಬಿಗಿದ ಸ್ಥಿತಿಯಲ್ಲಿ ರಮ್ಯಾಶ್ರೀ ಶವ ಪತ್ತೆಯಾಗಿದೆ. ಇದನ್ನೂ ಓದಿ: ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ ಪತ್ನಿ ಬಂಧನ

    ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಕಂಡು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಸದ್ಯ ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಪತಿ ಬಸವರಾಜ್ ಹಂಪನ್ನವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿತ್ರದುರ್ಗ| ಲಾರಿ, 2 ಕಾರುಗಳ ನಡುವೆ ಸರಣಿ ಅಪಘಾತ – 4 ಎಮ್ಮೆಗಳು ಸಾವು