ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಹಗರಣ (Betting App Scam) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನ್ನಡ ನಟಿ ಪ್ರಣೀತಾ ಸುಭಾಷ್, ಬಹುಭಾಷಾ ನಟ ಪ್ರಕಾಶ್ ರಾಜ್, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ.
ನಟ, ನಟಿಯರ ಜೊತೆಗೆ ಸೋಷಿಯಲ್ ಮೀಡಿಯಾ ಇನ್‌ಫ್ಲುಯನ್ಸರ್, ಯುಟ್ಯೂಬರ್‌ಗಳ ವಿರುದ್ಧವೂ ಇಡಿ ಗುರುವಾರ ಪ್ರಕರಣ ದಾಖಲಿಸಿದೆ.

5 ರಾಜ್ಯಗಳ ಪೊಲೀಸರು ದಾಖಲಿಸಿಕೊಂಡಿರುವ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ. ಇದರಲ್ಲಿ ಆರೋಪಿತರು ಬೆಟ್ಟಿಂಗ್ ಮತ್ತಿತರ ಜೂಜುಗಳ ಮೂಲಕ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರಾಮಾಯಣದಲ್ಲಿ ಯಶ್ ಪಾತ್ರ ಬರೀ 15 ನಿಮಿಷ?
ಎಫ್‌ಐಆರ್ ದಾಖಲಾದ ಸೆಲಬ್ರಿಟಿಗಳ ಪಟ್ಟಿ
ED ದಾಖಲಿಸಿಕೊಂಡಿರುವ ದೂರಿನಲ್ಲಿ ಮೂವರು ಸ್ಟಾರ್ ನಟರೊಂದಿಗೆ 29 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣಿತಾ ಸುಭಾಷ್, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ, ಸಿರಿ ಹನುಮಂತ್, ಶ್ರೀಮುಖಿ, ವರ್ಷಿಣಿ ಸೌಂದರರಾಜನ್, ವಸಂತಿ ಕೃಷ್ಣನ್, ಶೋಭಾ ಶೆಟ್ಟಿ, ಅಮೃತಾ ಚೌಧರಿ, ನಯನಿ ಪಾವನಿ, ನೇಹಾ ಪಠಾಣ್, ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಭಯ್ಯಾ ಸನ್ನಿ ಯಾದವ್, ಶ್ಯಾಮಲಾ, ಟೇಸ್ಟಿ ತೇಜಾ, ರೀತು ಚೌಧರಿ, ಬಂದಾರು ಶೇಷಾಯನಿ ಸುಪ್ರೀತ, ಬೆಟ್ಟಿಂಗ್ ವೇದಿಕೆಗಳ ನಿರ್ವಾಹಕರು, ಕಿರಣ್ ಗೌಡ್, ಸೋಷಿಯಲ್ ಮೀಡಿಯಾ ಸ್ಟಾರ್ ಅಜಯ್, ಸನ್ನಿ ಮತ್ತು ಸುಧೀರ್ ಹಾಗೂ ‘ಲೋಕಲ್ ಬಾಯ್ ನಾನಿ’ ಯೂಟ್ಯೂಬ್ ಚಾನೆಲ್ ವಿರುದ್ಧ ಕೇಸ್ ದಾಖಲಾಗಿದೆ.

ಈ ಸೆಲೆಬ್ರಿಟಿಗಳು ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಾದ ಜಂಗಲ್ ರಮ್ಮಿ, ಜೀತ್‌ವಿನ್, ಲೋಟಸ್-365 ಸೇರಿದಂತೆ ಹಲವು ಆ್ಯಪ್‌ಗಳ ಪರ ಪ್ರಚಾರ ನಡೆಸಿದ್ದರು. ಇದಕ್ಕಾಗಿ ಹಣ ಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಹೊಂಬಾಳೆ ಫಿಲಂಸ್ ಪ್ರಸ್ತುತಿ: ಮಹಾವತಾರ್ ನರಸಿಂಹ ಟ್ರೈಲರ್ ರಿಲೀಸ್

ಈ ಪ್ರಕರಣ ಕುರಿತು ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಇನ್ನೂ ಕೆಲ ಎಫ್‌ಐಆರ್‌ಗಳನ್ನು ED ಕಲೆಹಾಕುತ್ತಿದ್ದು, ಶೀಘ್ರದಲ್ಲಿ ಇವರ ಹೇಳಿಕೆಗಳನ್ನ ದಾಖಲಿಸಿಕೊಳ್ಳಲಿದೆ. ತನಿಖೆ ಪ್ರಗತಿಯಲ್ಲಿದ್ದು, ಈ ಆ್ಯಪ್‌ಗಳು ಅಕ್ರಮವಾಗಿ ಸಂಗ್ರಹಿಸಿದ ಮೊತ್ತವನ್ನು ಕಲೆ ಹಾಕಲಾಗುತ್ತಿದೆ ಎಂದು ಇಡಿ ತಿಳಿಸಿರುವುದಾಗಿ ವರದಿಗಳು ಹೇಳಿವೆ. ಇದನ್ನೂ ಓದಿ: ಹೊಸ ಗೆಟಪ್‌ನಲ್ಲಿ ಶಿವಣ್ಣನ ಫಸ್ಟ್ ಲುಕ್ ರಿಲೀಸ್


ಕ್ರಿಶ್ ಮತ್ತು ಜ್ಯೋತಿ ಕೃಷ್ಣ ನಿರ್ದೇಶನದ ಈ ಸಿನಿಮಾದಲ್ಲಿ ಪವನ್ ಕಲ್ಯಾಣ್‌ಗೆ ನಾಯಕಿಯಾಗಿ ನಿಧಿ ನಟಿಸಿದ್ದಾರೆ. ಈ ಚಿತ್ರವು ಎರಡು ಭಾಗಗಳಲ್ಲಿ ರಿಲೀಸ್ ಆಗಲಿದೆ. ‘ಹರಿ ಹರ ವೀರ ಮಲ್ಲು ಭಾಗ 1’ರ ಮೊದಲ ಹಾಡು ರಿಲೀಸ್ ಆಗಿದೆ. ‘ತಾರಾ ತಾರಾ ನಾ ಕಲ್ಲು’ ಸಾಂಗ್‌ನಲ್ಲಿ ನಿಧಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಪವನ್ ಜೊತೆಗಿನ ನಿಧಿ (Nidhhi Agerwal) ಜಬರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಈ ಜೋಡಿ ಅಭಿಮಾನಿಗಳಿಗೂ ಇಷ್ಟವಾಗಿದೆ.
ರಾಜಕೀಯದಲ್ಲಿ ಪವನ್ ಕಲ್ಯಾಣ್ ಬ್ಯುಸಿಯಿದ್ದ ಹಿನ್ನೆಲೆ ಈ ಚಿತ್ರ ಅರ್ಧಕ್ಕೆ ನಿಂತಿತ್ತು. ಕೊನೆಗೂ ಬಿಡುವು ಮಾಡಿಕೊಂಡು ‘ಹರಿ ಹರ ವೀರ ಮಲ್ಲು’ ಚಿತ್ರವನ್ನು ನಟ ಮುಗಿಸಿಕೊಟ್ಟಿದ್ದಾರೆ. ಜೂನ್ 12ರಂದು ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದೆ.








