Tag: Nigama mandali

  • ಪಕ್ಷಕ್ಕಾಗಿ ಹಗಲಿರುಳು ದುಡಿದರು ಯಾರೂ ಕೇರ್ ಮಾಡ್ತಿಲ್ಲ: ವಾಲ್ಮೀಕಿ ನಾಯಕ್ ಕಣ್ಣೀರು

    ಪಕ್ಷಕ್ಕಾಗಿ ಹಗಲಿರುಳು ದುಡಿದರು ಯಾರೂ ಕೇರ್ ಮಾಡ್ತಿಲ್ಲ: ವಾಲ್ಮೀಕಿ ನಾಯಕ್ ಕಣ್ಣೀರು

    ಕಲಬುರಗಿ: ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡಿದರು ಕೂಡಾ ಯಾರೂ ನನ್ನನ್ನು ಕೇರ್ ಮಾಡುತ್ತಿಲ್ಲ ಎಂದು ಕಲಬುರಗಿ ಜಿಲ್ಲೆ ಚಿತ್ತಾಪುರದ ಮಾಜಿ ಶಾಸಕ ವಾಲ್ಮೀಕಿ ನಾಯಕ್ ಕಣ್ಣೀರು ಹಾಕಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ನಾಯಕರ ವರ್ತನೆಯಿಂದ ಬೇಸತ್ತು ಕಣ್ಣೀರು ಹಾಕಿದ್ದಾರೆ. ಯಾರ್ಯಾರಿಗೋ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ದೊಡ್ಡ ದೊಡ್ಡ ಸ್ಥಾನ ನೀಡಿದ್ದಾರೆ. ಆದರೆ ಕನಿಷ್ಟ ನನ್ನನ್ನು ನಿಗಮ ಮಂಡಳಿ ಅಧ್ಯಕ್ಷನನ್ನಾಗಿ ಕೂಡಾ ಮಾಡಿಲ್ಲಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಪಕ್ಷಕ್ಕಾಗಿ ಹಗಲಿರಳು ದುಡಿದ್ರು ಕೂಡಾ ಯಾರು ಕೇರ್ ಮಾಡ್ತಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದೆ. ಆದರೂ ಪಕ್ಷಕ್ಕಾಗಿ ದುಡಿದ ನನ್ನನ್ನು ಪರಿಗಣಿಸುತ್ತಿಲ್ಲ. ಸಿಎಂ ಯಡಿಯೂರಪ್ಪ ಸೇರಿದಂತೆ ಯಾರೂ ಕೇರ್ ಮಾಡ್ತಿಲ್ಲ. ನನಗೆ ಕನಿಷ್ಟ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಂತ ಕಣ್ಣೀರು ಸುರಿಸಿದ್ದಾರೆ.

  • ಕನ್ನಡ ಹೋರಾಟಗಾರರಿಗೆ ಸೆಡ್ಡು-ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ

    ಕನ್ನಡ ಹೋರಾಟಗಾರರಿಗೆ ಸೆಡ್ಡು-ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ

    ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಈ ಮೂಲಕ ಕನ್ನಡ ಹೋರಾಟಗಾರರಿಗೆ ಸೆಡ್ಡು ಹೊಡೆದಿದೆ.

    ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡ ಹೋರಾಟಗಾರರ ಬಂದ್ ಎಚ್ಚರಿಕೆಗೂ ಸರ್ಕಾರ ಕ್ಯಾರೇ ಎಂದಿಲ್ಲ.

    ಮರಾಠ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶಿಸಿದೆ. 5 ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದು, ದುರ್ಯೋಧನ ಐಹೊಳೆ, ನೆಹರು ಓಲೇಕಾರ್, ಮುನಿಕೃಷ್ಣ ನಿಗಮ ಮಂಡಳಿ ಪರಿಷ್ಕೃತಗೊಂಡಿದ್ದು, ಮಾಯಕೊಂಡ ಶಾಸಕ ಲಿಂಗಣ್ಣಗೆ ಲಿಡ್ಕರ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದಾರೆ.

    ದುರ್ಯೋಧನ ಐಹೊಳೆಗೆ ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ, ನೆಹರು ಓಲೇಕಾರ್ ಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ಸ್ಥಾನ, ಸಿ.ಮುನಿಕೃಷ್ಣಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ಹಾಗೂ ಎಂ.ಕೋಟೆ ಶಿವಣ್ಣಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷ ಸ್ಥಾನಕ್ಕೆ ಬಾಬುವಾಲಿ, ಚನ್ನರಾಯಪಟ್ಟಣ ನಗರ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷ ಶಿವನಂಜೇಗೌಡ ಹಾಗೂ ಸದಸ್ಯರ ನೇಮಕ ಮಾಡಲಾಗಿದೆ.

    ಇತ್ತ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆಗಿದೆ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿರ್ಧಾರ ವಾಪಸ್‍ಗೆ ಕನ್ನಡ ಹೋರಾಟಗಾರರು ಇಂದು ಗಡುವು ನೀಡಿದ್ದರು. ಆದರೆ ಕನ್ನಡ ಹೋರಾಟಗಾರರ ಎಚ್ಚರಿಕೆಗೆ ಕ್ಯಾರೇ ಎನ್ನದೇ ಸರ್ಕರ ಆದೇಶ ಹೊರಡಿಸಿದೆ. ಹೀಗಾಗಿ ಡಿಸೆಂಬರ್ 5ರಂದು  ಕರ್ನಾಟಕ ಬಂದ್ ಬಹುತೇಕ ಖಚಿತವಾಗಿದೆ.

  • ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ: ಸಿದ್ದರಾಮಯ್ಯ ಪಟ್ಟಿಗೆ ದೇವೇಗೌಡರು ಗ್ರೀನ್ ಸಿಗ್ನಲ್ ಕೊಡ್ತಾರಾ?

    ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ: ಸಿದ್ದರಾಮಯ್ಯ ಪಟ್ಟಿಗೆ ದೇವೇಗೌಡರು ಗ್ರೀನ್ ಸಿಗ್ನಲ್ ಕೊಡ್ತಾರಾ?

    ಬೆಂಗಳೂರು: ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ. ಈಗಲೇ ನಿಗಮ ಮಂಡಳಿ ನೇಮಕಾತಿ ಆಗಬೇಕು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದಾರೆ.

    ಶಾಸಕರಿಗೆ ಸಬೂಬು ಹೇಳಲು ನಮ್ಮಿಂದ ಆಗುತ್ತಿಲ್ಲ. ಹೀಗಾಗಿ ಈ ಮೊದಲೇ ನಿರ್ಧರಿಸಿದಂತೆ ನಿಗಮ ಮಂಡಳಿಯ ಒಟ್ಟು 30 ಸ್ಥಾನಗಳಲ್ಲಿ ಕಾಂಗ್ರೆಸ್ಸಿಗೆ 20 ಹಾಗೂ ಜೆಡಿಎಸ್‍ಗೆ 10 ಸ್ಥಾನ ಹಂಚಿಕೆಯಾಗಬೇಕು. ನೇಮಕ ಪ್ರಕ್ರಿಯೆ ಈಗಲೇ ಆಗಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ನಿಗಮ ಮಂಡಳಿ ನೇಮಕದಿಂದ ಮುನಿಸಿಕೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನ ಪಡಿಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ. ಹೀಗಾಗಿ ಆಷಾಢದಲ್ಲಿಯೇ ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

    ಆಷಾಢ ಮುಗಿಯುವವರೆಗೆ ಯಾವುದೇ ನೇಮಕಾತಿ ಬೇಡ ಎಂದು ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಹೇಳಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದರಿಂದ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ.