Tag: nijagal siddara betta

  • ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

    ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

    ನೆಲಮಂಗಲ: ಸ್ನೇಹಿತನೊಂದಿಗೆ ತುಮಕೂರಿನಿಂದ ಬೆಂಗಳೂರಿಗೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ನಿಜಗಲ್ ಸಿದ್ದರಬೆಟ್ಟದ ತಪ್ಪಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ನಿಜಗಲ್ ಸಿದ್ದರಬೆಟ್ಟದ ತಪ್ಪಲಿನಲ್ಲಿ ಇಂದು ಶವವಾಗಿ ಪತ್ತೆಯಾಗಿರುವ ಮೃತ ವ್ಯಕ್ತಿಯನ್ನು ತುಮಕೂರು ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಅಲ್ಲದೇ ಮಂಜುನಾಥ್ ರನ್ನು ಬೆಟ್ಟದ ಮೇಲಿಂದ ಕೆಳಗೆ ತಳ್ಳಿರುವ ಶಂಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ನವೆಂಬರ್ 26 ರಂದು ತುಮಕೂರಿನ ಸಿದ್ದೇಶ್ ಮತ್ತು ಮಂಜುನಾಥ್ ಬೆಂಗಳೂರಿಗೆ ತೆರಳಿದ್ದರು. ಆದರೆ ಇಂದು ಮಂಜುನಾಥ್ ಸಂಶಯಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ನೆಲಮಂಗಲದ ಡಾಬಸ್ ಪೇಟೆ ಪೊಲೀಸರು ತನಿಖೆ ಆರಂಭಿಸಿದ್ದು, ಇದು ಕೊಲೆಯೋ ಆತ್ಮಹತ್ಯೆಯೋ ಎಂಬ ಸಂಶಯದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಯೂಟ್ಯೂಬ್‍ನಲ್ಲಿ ಪ್ರೆಗ್ನೆನ್ಸಿ ಅನೌನ್ಸ್ ಮಾಡಿದ ಬಾಲಿವುಡ್ ನಟಿ