Tag: Nikah

  • ಆನ್‌ಲೈನ್‌ನಲ್ಲೇ ಪಾಕ್ ಯುವತಿಯನ್ನು ವರಿಸಿದ ಬಿಜೆಪಿ ಕಾರ್ಪೊರೇಟರ್ ಮಗ

    ಆನ್‌ಲೈನ್‌ನಲ್ಲೇ ಪಾಕ್ ಯುವತಿಯನ್ನು ವರಿಸಿದ ಬಿಜೆಪಿ ಕಾರ್ಪೊರೇಟರ್ ಮಗ

    ಲಕ್ನೋ: ಬಿಜೆಪಿ ಕಾರ್ಪೊರೇಟರ್ (BJP Corporator) ಮಗ ಆನ್‌ಲೈನ್‌ನಲ್ಲಿ (Online) ಪಾಕಿಸ್ತಾನಿ (Pakistan) ಹುಡುಗಿಯನ್ನು ವರಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಜೌನ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.

    ‘ನಿಕಾಹ್’ ಮೂಲಕ ಪಾಕ್ ಯುವತಿಯೊಂದಿಗೆ ವಿವಾಹ ನೆರವೇರಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್‌ಗೆ ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರೊಂದಿಗೆ ವಿವಾಹ ನಿಶ್ಚಯಿಸಿದ್ದರು. ಪಾಕಿಸ್ತಾನ ಮತ್ತು ಭಾರತದ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವೀಸಾಗೆ ಅರ್ಜಿ ಸಲ್ಲಿಸಿದರೂ ವರನಿಗೆ ವೀಸಾ ಸಿಕ್ಕಿರಲಿಲ್ಲ. ಇದನ್ನೂ ಓದಿ: ಮುಡಾ ಮೇಲಿನ ಇ.ಡಿ ದಾಳಿ ಅಂತ್ಯ – ಸತತ 29 ಗಂಟೆ ಅಧಿಕಾರಿಗಳಿಗೆ ಡ್ರಿಲ್‌

    ಈ ಬೆನ್ನಲ್ಲೇ ವಧುವಿನ ತಾಯಿ ರಾಣಾ ಯಾಸ್ಮಿನ್ ಜೈದಿ ಅನಾರೋಗ್ಯಕ್ಕೆ ಒಳಗಾಗಿ ಪಾಕಿಸ್ತಾನದ ಐಸಿಯುಗೆ ದಾಖಲಾದರು. ಈ ಹಿನ್ನೆಲೆ ಮದುವೆ ಸಮಾರಂಭವನ್ನು ಆನ್‌ಲೈನ್‌ನಲ್ಲಿ ನಡೆಸಲು ಶಾಹಿದ್ ನಿರ್ಧರಿಸಿದ್ದಾರೆ. ಲಾಹೋರ್‌ನ ವಧುವಿನ ಕುಟುಂಬದವರು ಹಾಗೂ ವರನ ಕುಟುಂಬಸ್ಥರು ‘ನಿಕಾಹ್’ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ

    ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಈ ಬಗ್ಗೆ ಪ್ರತಿಕ್ರಿಯಿಸಿ, ಇಸ್ಲಾಂನಲ್ಲಿ ‘ನಿಕಾಹ್’ಗೆ ಮಹಿಳೆಯ ಒಪ್ಪಿಗೆ ಅತ್ಯಗತ್ಯ. ಎರಡೂ ಕಡೆಯ ಮೌಲಾನಾಗಳು ಒಟ್ಟಾಗಿ ಸಮಾರಂಭವನ್ನು ನಡೆಸಿದಾಗ ಆನ್‌ಲೈನ್ ‘ನಿಕಾಹ್’ ಸಾಧ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ನಿಷೇಧಿತ ಡ್ರಗ್ಸ್‌ ಪತ್ತೆ – ಮಲಯಾಳಂ ನಟಿ ಬಂಧನ

  • ಕೊರೊನಾ ಎಫೆಕ್ಟ್- ವಿಡಿಯೋ ಕಾನ್ಫರೆನ್ಸ್‌ನಲ್ಲೇ ಮದ್ವೆಯಾದ ಜೋಡಿ

    ಕೊರೊನಾ ಎಫೆಕ್ಟ್- ವಿಡಿಯೋ ಕಾನ್ಫರೆನ್ಸ್‌ನಲ್ಲೇ ಮದ್ವೆಯಾದ ಜೋಡಿ

    ಪಾಟ್ನಾ: ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಇಂತಹ ಪರಿಸ್ಥಿತಿಯಿಂದಾಗಿ ಜೋಡಿಯೊಂದು ಈ ಮೊದಲೇ ನಿಗದಿಯಾದ ದಿನಾಂಕದಂದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಮದುವೆಯಾಗಿದ್ದಾರೆ.

    ಮದುಮಗ ಉತ್ತರ ಪ್ರದೇಶದ ಸಾಹಿಬಾಬಾದ್‍ನಲ್ಲಿದ್ದರೆ, ಮದುಮಗಳು ಬಿಹಾರದ ಪಾಟ್ನಾದಲ್ಲಿದ್ದರು. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಖಾಜಿ ಮೊದಲು ಯುವಕನನ್ನು ಮದುವೆಯಾಗಲು ಹುಡುಗಿಯಿಂದ ಅನುಮತಿ ಪಡೆದರು. ನಂತರ ಮದುವೆಯನ್ನು ನೆರವೇರಿಸಿದರು. ಇದನ್ನೂ ಓದಿ: ಹೆಣ್ಣು ಶಿಶುವಿಗೆ ಕೊರೊನಾ ಎಂದ ಹೆಸರಿಟ್ಟ ಚಿಕ್ಕಪ್ಪ

    ಈ ವಿವಾಹದ 30 ಸೆಕೆಂಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದರಲ್ಲಿ ವಧುವಿನ ಕುಟುಂಬಸ್ಥರು ಟಿವಿ ಮುಂದೆ ಒಟ್ಟುಗೂಡಿ ನಿಂತಿರುತ್ತಾರೆ. ಖಾಜಿ ಕೇಳಿದಾಗ ಯುವಕ ಹಾಗೂ ಯುವತಿ ಇಬ್ಬರೂ ಮದುವೆಯನ್ನು ಒಪ್ಪಿಕೊಂಡರು. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಮದುವೆ ಮಾಡಿಸಿದರು. ಇದನ್ನೂ ಓದಿ: ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ಏಪ್ರಿಲ್ 14ರವರೆಗೆ ಸಂಪೂರ್ಣ ಲಾಕ್‍ಡೌನ್:
    ಮಹಾಮಾರಿ ಕೊರೊನಾ ವೈರಸ್‍ನಿಂದಾಗ ಇಡೀ ದೇಶವನ್ನು ಏಪ್ರಿಲ್ 14ರವರೆಗೆ ಲಾಕ್‍ಡೌನ್ ಮಾಡಲಾಗಿದೆ. ಹೀಗಾಗಿ ಮದುವೆ, ಸಭೆ ಸಮಾರಂಭ ಸೇರಿದಂತೆ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ಜನರನ್ನು ಸೇರಿಸುವುದರ ಮೇಲೆ ನಿಷೇಧ ಹೇರಲಾಗಿದೆ. ನವ ಜೋಡಿಯ ದಂಪತಿಯ ಕುಟುಂಬಗಳು ಡಿಜಿಟಲ್ ಇಂಡಿಯಾವನ್ನು ಆಯ್ಕೆಮಾಡಿಕೊಂಡು ಕೊರೊನಾ ವಿರುದ್ಧ ಹೋರಾಡುವ ಹೊಸ ಮಾರ್ಗವನ್ನು ಸೂಚಿಸಿವೆ. ಅಷ್ಟೇ ಅಲ್ಲದೆ ಡಿಜಿಟಲ್ ಪ್ಲಾಟ್‍ಫಾರ್ಮ್ ಮೂಲಕ ಸಮಯಕ್ಕೆ ಸರಿಯಾಗಿ ಕೆಲಸವನ್ನು ಮಾಡಬಹುದು ಎಂದು ತಿಳಿಸಿಕೊಟ್ಟಿದೆ ಎಂಬ ಅಭಿಪ್ರಾಯ ನೆಟ್ಟಿಗರಿಂದ ವ್ಯಕ್ತವಾಗಿದೆ.