ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ (SIT) ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಮೋಸ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ (Congress) ಮಾಡಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್‌ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್
ಡಿಕೆ ಶಿವಕುಮಾರ್ ಅವರು ಸದನದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದರು. ಆದರೆ ಷಡ್ಯಂತ್ರ ಮಾಡಿದವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್
‘ಸೀತಾರಾಮ ಕಲ್ಯಾಣ’, ‘ಜಾಗ್ವಾರ್’ ಸಿನಿಮಾಗಳು ಹಾಗೂ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಮದುವೆಯಾಗಿ ಇಂದಿಗೆ 5 ವರ್ಷಗಳು ಕಳೆದಿವೆ. ಹಾಗಾಗಿ ಸೋಷಿಯಲ್ ಮೀಡಿಯಾದಲ್ಲಿ ನನ್ನ ಜೀವನದಲ್ಲಿ ಸಿಕ್ಕಿರುವ ಅತ್ಯಮೂಲ್ಯ ಉಡುಗೊರೆ ಎಂದು ಪತ್ನಿಗೆ ಪ್ರೀತಿಯಿಂದ ನಿಖಿಲ್ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು
ನೀನು ನನ್ನ ಜೀವನದಲ್ಲಿ ಸಿಕ್ಕಿರುವ ಅತ್ಯಮೂಲ್ಯ ಉಡುಗೊರೆ, ನಿನ್ನ ಪ್ರೀತಿ, ಶಕ್ತಿ, ತ್ಯಾಗ ಮತ್ತು ಕೃಪೆ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗದಷ್ಟು ನೀನು ನನಗೆ ಸ್ಫೂರ್ತಿಯಾಗಿರುವೆ. ನೀನು ನನ್ನ ಜೀವನಕ್ಕೆ ಬೆಳಕು ತಂದಿರುವುದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ನಿಮ್ಮೊಂದಿಗೆ ಜೀವನದ ಈ ಪ್ರಯಾಣದಲ್ಲಿ ಜೊತೆಯಾಗಿ ನಡೆಯಲು ನಾನು ತುಂಬಾ ಧನ್ಯನಾಗಿದ್ದೇನೆ. ಪ್ರತಿದಿನವೂ ನಾನು ನಿನ್ನನ್ನು ಹೆಚ್ಚು ಹೆಚ್ಚು ಪ್ರೀತಿಸುತ್ತೇನೆ, ನಮಗೆ ವಾರ್ಷಿಕೋತ್ಸವದ (Wedding Anniversary) ಶುಭಾಶಯಗಳು ಎಂದು ನಿಖಿಲ್ ಶುಭಕೋರಿದ್ದಾರೆ.
ಬೆಂಗಳೂರು: ಶಾಸಕ ಮುನಿರತ್ನ (Munirathna) ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ. ಆದರೆ ಈ ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಟಾರ್ಗೆಟ್ ರಾಜಕೀಯ ಮಾಡ್ತಿದೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಗರದ ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುನಿರತ್ನ ಕೇಸ್ ವಿಚಾರವಾಗಿ ತನಿಖೆ ಆಗುತ್ತಿದೆ. ತನಿಖೆ ನಡೆಯುವ ಸಮಯದಲ್ಲಿ ಮಾತನಾಡುವುದು ಸರಿಯಲ್ಲ. ತನಿಖೆಯಾಗಲು ಸತ್ಯಾಸತ್ಯತೆ ಹೊರಗೆ ಬರಲಿ. ಕಾನೂನಿಗಿಂತ ಯಾರು ದೊಡ್ಡವರು ಅಲ್ಲ. ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ತಿರುಪತಿ ಲಡ್ಡು ವಿಚಾರ ತನಿಖೆ ಆಗಲಿ: ಎಂ.ಬಿ ಪಾಟೀಲ್
ಪರಶುರಾಮ್ ಕೇಸ್‌ನ್ನು ಮುಚ್ಚಿ ಹಾಕಲು ಸರ್ಕಾರ ಹೇಗೆ ಪ್ರಯತ್ನ ಮಾಡಿತ್ತು ಎಂದು ಎಲ್ಲರಿಗೂ ಗೊತ್ತಿದೆ. ವಾಲ್ಮೀಕಿ ಹಗರಣ ಕೇಸ್‌ನಲ್ಲಿ ನಾಗೇಂದ್ರ ವಿಚಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ಹೇಗೆ ತನಿಖೆ ಮಾಡಿತು ಎಂದು ಜಗಜ್ಜಾಹೀರಾಗಿದೆ. ಮುನಿರತ್ನ ವಿಚಾರದಲ್ಲಿ ಎಫ್‌ಎಸ್‌ಎಲ್ ವರದಿ ಬರಬೇಕು. ಅವರ ಧ್ವನಿಯೋ ಅಲ್ಲವೋ ಎಂದು ತಿಳಿಯಬೇಕು. ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧನ ಮಾಡಿದ್ದಾರೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡುತ್ತಿದೆ ಎಂದು ಅನ್ನಿಸುತ್ತಿದೆ ಎಂದರು.
ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಬೇರೆ ಅವರ ಮೇಲೆ ತಪ್ಪು ಹೊರಿಸುವ ಕೆಲಸ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಸ್ವಾತಂತ್ರ‍್ಯ ಬಂದಾಗಿನಿಂದ ಅನೇಕ ಸರ್ಕಾರಗಳು ಕೆಲಸ ಮಾಡಿವೆ ಆದರೆ ಈ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡಿಕೊಂಡು, ದ್ವೇಷದ ರಾಜಕೀಯ ಮಾಡಿಕೊಂಡು ಹೊರಟಿದ್ದಾರೆ. ಇದನ್ನು ರಾಜ್ಯದ ಜನರು ಮೆಚ್ಚುವುದಿಲ್ಲ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಜಾತಿ ಆಧಾರದಲ್ಲಿ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತಿದೆ. ಇಲ್ಲಿ ಒಕ್ಕಲಿಗ ಟ್ಯಾಗ್, ಓಬಿಸಿ ಟ್ಯಾಗ್, ಲಿಂಗಾಯತರ ಟ್ಯಾಗ್, ಮುಸ್ಲಿಂ ಟ್ಯಾಗ್ ಹಾಕಿ ರಾಜಕೀಯ ಮಾಡುವುದು ಸೂಕ್ತ ಅಲ್ಲ. ಯಾವುದೋ ಸಮುದಾಯ ಒಲೈಕೆ ಮಾಡಿಕೊಳ್ಳಲು ಈ ರೀತಿ ಟಾರ್ಗೆಟ್ ರಾಜಕೀಯ ಮಾಡುತ್ತಿದ್ದಾರೆ. ಇವೆಲ್ಲ ಬಿಟ್ಟು ಮೂರು ಮುಕ್ಕಾಲು ವರ್ಷ ಸಮಯ ಇದೆ. ಜನ ಅಧಿಕಾರ ಮಾಡಲು ಅವಕಾಶ ಕೊಟ್ಟಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ಕೊಡಲಿ. ಸರ್ಕಾರ ಬಂದೂ ಇಷ್ಟು ದಿನ ಆದರೂ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಈ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಶುರುವಾಗಿದೆ. ನಾಳೆ ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರವನ್ನ ರಾಜ್ಯದ ಜನ ತಿರಸ್ಕಾರ ಮಾಡುತ್ತಾರೆ. ಆ ಮಟ್ಟದ ವಾತಾವರಣ ಸರ್ಕಾರದ ವಿರುದ್ದ ಇದೆ. ಅವರ ತಪ್ಪು ಮುಚ್ಚಿಕೊಳ್ಳಲು ನಿತ್ಯ ಹಗರಣಗಳು, ಅಕ್ರಮಗಳು ನಡೆಯುತ್ತಿವೆ. ನಾವು ವಿರೋಧ ಪಕ್ಷವಾಗಿ ಪ್ರಜಾಪ್ರಭುತ್ವದಲ್ಲಿ ನಮಗೆ ಹಕ್ಕು ಕೊಟ್ಟಿದ್ದಾರೆ. ಅದನ್ನು ಬಯಲಿಗೆ ಎಳೆಯೋದೇ ತಪ್ಪಾ ಎಂದು ಪ್ರಶ್ನೆ ಮಾಡಿದರು.ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಗುಂಡಿ ಮುಚ್ಚೋ ಕೆಲಸ ಮಾಡ್ತಿದ್ದಾರೆ: ಡಿಕೆಶಿ
ಸ್ಯಾಂಡಲ್‌ವುಡ್ (Sandalwood) ನಟ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಅವರು ಸದ್ಯ ಜಾಲಿ ಮೂಡ್‌ಗೆ ಜಾರಿದ್ದಾರೆ. ಕೆಲದಿನಗಳಿಂದ ಫಾರಿನ್‌ನಲ್ಲಿ ನಿಖಿಲ್ ಫ್ಯಾಮಿಲಿ ಬೀಡು ಬಿಟ್ಟಿದ್ದಾರೆ. ಸದ್ಯ ಪತ್ನಿ ರೇವತಿ (Revathi) ಕೈ ಹಿಡಿದು ನಿಖಿಲ್ ಕುಮಾರಸ್ವಾಮಿ ಹೆಜ್ಜೆ ಹಾಕ್ತಿರೋದು ವೀಡಿಯೋವೊಂದನ್ನ ಜಾಗ್ವರ್ ಹೀರೋ ನಿಖಿಲ್ ಶೇರ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದ ಫ್ಯೂಚರ್ ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾ- ರಾಜಕೀಯ ಎರಡು ಕ್ಷೇತ್ರದಲ್ಲೂ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಯುರೋಪ್‌ನಲ್ಲಿ ಹೊಸ ಹೊಸ ಜಾಗಗಳಿಗೆ ಭೇಟಿ ನೀಡುತ್ತಾ, ಚೆಂದದ ಫೋಟೋಗಳನ್ನ ಶೇರ್ ಮಾಡುತ್ತಾ ತಮ್ಮ ಬೆಂಬಲಿಗರಿಗೆ ಅಪ್‌ಡೇಟ್ ಕೊಡ್ತಿದ್ದಾರೆ. ಇದೀಗ ಹೊಸ ವೀಡಿಯೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಅವರ ಇಡೀ ಫ್ಯಾಮಿಲಿ ವಿದೇಶಿ ಪ್ರವಾಸ ಕೈಗೊಂಡಿದೆ. ಕುಮಾರಸ್ವಾಮಿ ವಿದೇಶಿ ಪ್ರವಾಸ ಬೆನ್ನಲ್ಲೇ ರಾಜಕಾರಣದಲ್ಲಿ ಭಾರೀ ಸುದ್ದಿಯಾಗಿತ್ತು. ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಿಂದ ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದರು. ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಕುಮಾರಸ್ವಾಮಿ ಕುಟುಂಬದ ವಿದೇಶಿ ಪ್ರವಾಸದ ಫೋಟೋಗಳು ಗಮನ ಸೆಳೆಯುತ್ತಿದೆ.
ವಿದೇಶದಿಂದ ಬಂದ ಮೇಲೆ ಮತ್ತೆ ನಿಖಿಲ್ ಮತ್ತೆ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗುತ್ತಾರೆ. ‘ಯುದುವೀರ್’ (Yaduveer) ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಅವರ ಕೈಯಲ್ಲಿದೆ.
ಸ್ಯಾಂಡಲ್‌ವುಡ್ (Sandalwood) ಯುವರಾಜ ನಿಖಿಲ್ ಕುಮಾರಸ್ವಾಮಿ (Nikhil Kumarswamy) (ಜ.22) 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದ ನಡುವೆ ಅಭಿಮಾನಿಗಳಿಗೆ ತಮ್ಮ ಸಿನಿಮಾ, ಚುನಾವಣೆ ಬಗ್ಗೆ ಮೇಜರ್ ಅಪ್‌ಡೇಟ್ ಕೊಟ್ಟಿದ್ದಾರೆ. ಈ ಮೂಲಕ ತಮ್ಮ ಫ್ಯಾನ್ಸ್‌ಗೆ ನಿಖಿಲ್ ಸಿಹಿಸುದ್ದಿ ಕೊಟ್ಟಿದ್ದಾರೆ.
`ಜಾಗ್ವರ್’ ಸಿನಿಮಾ ಮೂಲಕ ಚಂದನವನಕ್ಕೆ ಎಂಟ್ರಿ ಕೊಟ್ಟ ನಿಖಿಲ್ ಕುಮಾರಸ್ವಾಮಿ ಬ್ಯಾಕ್ ಟು ಬ್ಯಾಕ್ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಕೀಯ ರಂಗದಲ್ಲಿ ಸಕ್ರಿಯರಾಗುವುದರ ಜೊತೆಗೆ ಸಾಕಷ್ಟು ಚಿತ್ರಗಳು ಈಗ ನಿಖಿಲ್ ಕೈಯಲ್ಲಿದೆ. ಇದೀಗ ಸಿನಿಮಾ ಮತ್ತು ಮುಂಬರುವ ಚುನಾವಣೆಯ ಕುರಿತು ನಟ ಮಾತನಾಡಿದ್ದಾರೆ.
ನಿಖಿಲ್ ಕುಟುಂಬದಲ್ಲಿ ಬರ್ತಡೇ ಸಂಭ್ರಮ ಮನೆಮಾಡಿದೆ. ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ದಂಡೇ ನಿಖಿಲ್ ಮನೆಯ ಬಳಿ ಜಮಾಯಿಸಿದೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಇವತ್ತು ಅಭಿಮಾನಿಗಳು ದೊಡ್ಡಮಟ್ಟದಲ್ಲಿ ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ರಾತ್ರಿಯಿಂದಲೂ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿ ಪ್ರೀತಿ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ರಾಜಕಾರಣ (Politics) ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಮುಂದೆ ಬರುವ ಜನಪ್ರತಿನಿಧಿಗಳ ಮನಸ್ಥಿತಿ ಬದಲಾಗಬೇಕು. ಮತದಾರರ ಮನಸ್ಥಿತಿ ಬದಲಾಗಬೇಕು. ಜಾತಿಯ ವ್ಯಾಮೋಹಕ್ಕೆ ಒಳಗಾಗದೇ, ಕಷ್ಟಸುಖಕ್ಕೆ ಸ್ಪಂದಿಸುವವರ ಜೊತೆ ಯುವಕರು ಹೆಜ್ಜೆ ಹಾಕಬೇಕು ಎಂದರು.
ಇನ್ನು 3 ಸಿನಿಮಾಗಳು ನನ್ನ ಲಿಸ್ಟ್‌ನಲ್ಲಿದೆ. ಈಗ ಲಹರಿ ಸಂಸ್ಥೆ ಹಾಗೂ ಕೆ.ಪಿ ಶ್ರೀಕಾಂತ್ (K.p Srikanth) ನಿರ್ಮಾಣದಲ್ಲಿ ಹೊಸ ಸಿನಿಮಾ ಅನೌನ್ಸ್ ಆಗಿದೆ. ಸದ್ಯ ಚುನಾವಣೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದೀನಿ. ಚುನಾವಣೆ ಮುಗಿದ ಮೇಲೆ ಮತ್ತೆ ಚಿತ್ರರಂಗಕ್ಕೆ ಬರುತ್ತೀನಿ. ಎಲ್ಲೂ ಹೋಗಲ್ಲ. ಸಿನಿಮಾಗಳನ್ನು ಮಾಡ್ತೀನಿ. ನನಗೆ ಒಂದು ವ್ಯಕ್ತಿತ್ವ ಇರುವುದು ದೇವೇಗೌಡರ ಮೊಮ್ಮಗ, ಕುಮಾರಸ್ವಾಮಿ ಮಗ ಎನ್ನುವುದನ್ನು ಹೊರತುಪಡಿಸಿ ನನ್ನದೇ ಆದ ಛಾಪನ್ನು ಚಿತ್ರರಂಗದಲ್ಲಿ ಮೂಡಿಸಿದ್ದೇನೆ. ನನ್ನ 4 ಸಿನಿಮಾಗಳನ್ನು ಅಭಿಮಾನಿಗಳು ಪ್ರೀತಿಯಿಂದ ತಗೊಂಡಿದ್ದಾರೆ ಎನ್ನುವುದು ನನ್ನ ಅನಿಸಿಕೆ. ಇದನ್ನೂ ಓದಿ:ಅನಾರೋಗ್ಯದ ಬಳಿಕ ಬಾಲಿವುಡ್‌ನತ್ತ ಮುಖ ಮಾಡಿದ ಸಮಂತಾ
ಚಿತ್ರರಂಗ ಮತ್ತು ರಾಜಕಾರಣ ಎರಡರಲ್ಲೂ ನನ್ನ ಮೇಲೆ ಸಾಕಷ್ಟು ಜವಾಬ್ದಾರಿಗಳು ಇವೆ. ಅದನ್ನು ನಿಭಾಯಿಸುತ್ತೇನೆ. ಮುಂದೆ ಸಿನಿಮಾಗಳ ಬಗ್ಗೆ ಅಧಿಕೃತ ಅಪ್‌ಡೇಟ್ ಕೊಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಈ ವೇಳೆ ಮಾತನಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಯಚೂರು: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್ (JDS) ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ದೇವೇಗೌಡರನ್ನಾಗಲಿ (Deve Gowda), ಕುಮಾರಣ್ಣನನ್ನಾಗಲಿ (H.D Kumarswamy), ಜೆಡಿಎಸ್ ಪಕ್ಷವನ್ನಾಗಲಿ ಏನೂ ಮಾಡಲು ಆಗಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಗುಡುಗಿದ್ದಾರೆ.
ರಾಯಚೂರಿನ ಸಿಂಧನೂರಿನಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಹುಟ್ಟುಹಬ್ಬ ಸಮಾರಂಭ ಹಿನ್ನೆಲೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯಕ್ಕೆ ಅಮಿತ್ ಶಾ (AmitShah) ಅಥವಾ ಯಾರೇ ಬಂದ್ರೂ ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಇಂದಿನಿಂದ ಕುಮಾರಣ್ಣ ಬೀದರ್‌ನಿಂದ ಯಾತ್ರೆ ಶುರು ಮಾಡಿದ್ದಾರೆ. ಎಲ್ಲೆಡೆಯೂ ಎರಡು ರಾಷ್ಟ್ರೀಯ ಪಕ್ಷಗಳಿಗೆ ಧಿಕ್ಕರಿಸಿ ಈ ಬಾರಿ ಕುಮಾರಣ್ಣ ನಾಯಕತ್ವಕ್ಕೆ ಬೆಂಬಲಿಸುವ ಮಾತುಗಳು ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ- ಚೆನ್ನೈನಲ್ಲಿ ಓರ್ವನ ಬಂಧನ
ಎರಡು ಪಕ್ಷಗಳ ಬಗ್ಗೆ ನಾವು ಮಾತನಾಡಲು ಸಿದ್ಧರಿಲ್ಲ. ಜನಸಂಕಲ್ಪ ಯಾತ್ರೆಯೂ ನೀವೂ ನೋಡಿದ್ರಿ. ಭಾರತ್ ಜೋಡೋ ಯಾತ್ರೆಯೂ ನೋಡಿದ್ರಿ. ಬಿಜೆಪಿಯವರು ಯಾವ ಪುರುಷಾರ್ಥಕ್ಕೆ ಜನ ಸಂಕಲ್ಪ ಯಾತ್ರೆ ಮಾಡುತ್ತಿದ್ದೀರಿ? 40 ಪೆರ್ಸೆಂಟ್ ಲೂಟಿ ಹೊಡೆಯುತ್ತಿದ್ದೀರಿ. ರಾಜ್ಯದ ಜನರ ಬೊಕ್ಕಸ ಲೂಟಿ ಹೊಡೆಯಲು ಜನ ಸಂಕಲ್ಪ ಯಾತ್ರೆ ಮಾಡುತ್ತೀರಾ ಎಂದು ಪ್ರಶ್ನಿಸಿದರು. ಭಾರತ್ ಜೋಡೋ (Bharat Jodo Yatra) ಯಾತ್ರೆ ಕಾಂಗ್ರೆಸ್ ನಾಯಕರ ಜೋಡೋ ಯಾತ್ರೆ ಆಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಸಿಎಂ ಆಗಿದ್ದಾಗಲೇ ಸ್ಯಾಂಟ್ರೋ ರವಿಯಿಂದ ಹೆಚ್ಚು ವ್ಯವಹಾರ: ಆರಗ ತಿರುಗೇಟು
ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಹೆಚ್ಚಾಗಿ ಆಡಳಿತ ನಡೆಸಿವೆ. ಆದ್ರೆ ಕುಮಾರಣ್ಣ 34 ತಿಂಗಳಲ್ಲಿ ನೀಡಿದ ಕಾರ್ಯಕ್ರಮದ ಬಗ್ಗೆ ರಾಜ್ಯದ ಜನರು ಇವತ್ತೂ ಚರ್ಚೆ ಮಾಡುತ್ತಾರೆ. ಪಂಚರತ್ನ ಕಾರ್ಯಕ್ರಮ ಎಲ್ಲರಿಗೂ ಅನುಕೂಲವಾಗುವ ಕಾರ್ಯಕ್ರಮ ಎಂದು ಅಭಿಪ್ರಾಯಪಟ್ಟಿದ್ದಾರೆ.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್‌ವುಡ್‌ನ (Sandalwood) `ಜಾಗ್ವಾರ್’ ಹೀರೋ ನಿಖಿಲ್ ಕುಮಾರಸ್ವಾಮಿ, ಮಕ್ಕಳ ದಿನಾಚರಣೆಯಂದು ಮಗನ ಮುದ್ದಾದ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಗನ ಜೊತೆ ನಿಖಿಲ್(Nikhil Kumarswamy) ದಂಪತಿ ಕೂಡ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿರುವುದು ನೆಟ್ಟಿಗರ ಗಮನ ಸೆಳೆಯುತ್ತಿದೆ.
ಜಾಗ್ವಾರ್, ಸೀತಾರಾಮ ಕಲ್ಯಾಣ, ರೈಡರ್, ಚಿತ್ರಗಳ ಮೂಲಕ ಗಮನ ಸೆಳೆದಿರುವ ನಿಖಿಲ್ ಕುಮಾರಸ್ವಾಮಿ ರಾಜಕೀಯ(Politics) ರಂಗದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗಷ್ಟೇ ನಿಖಿಲ್ ಅವರ ಮುದ್ದು ಮಗನ ನಾಮಕರಣವಾಗಿತ್ತು. ಅವ್ಯಾನ್ ದೇವ್ ಎಂದು ಹೆಸರಿಟ್ಟಿದ್ದರು. ಈಗ ಮಕ್ಕಳ ದಿನಾಚರಣೆ ಪ್ರಯುಕ್ತ ಮಗನ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ. ಮಗ ಅವ್ಯಾನ್ ದೇವ್ ಜೊತೆ ನಿಖಿಲ್ ದಂಪತಿ ಕೂಡ ಮಿಂಚಿದ್ದಾರೆ.
ರಾಮನಗರ: ವಿಧಾನಸಭಾ ಚುನಾವಣೆ ಸಮೀಪದ ಹಿನ್ನೆಲೆ ಚನ್ನಪಟ್ಟಣ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಜೆಡಿಎಸ್ (JDS) ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಹಾಗೂ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwara) ನಡುವಿನ ವಾಕ್ಸಮರ ತಾರಕಕ್ಕೇರಿದೆ. ಅಂಬಾರಿಯನ್ನು ಆನೆ ಹೊರೋದು, ಮರಿಯಾನೆ ಹೊರಲ್ಲ ಎಂದಿದ್ದ ಸಿ.ಪಿ ಯೋಗೇಶ್ವರ್‌ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಆನೆ ಆಮೇಲೆ, ಮೊದಲು ಮರಿಯಾನೆಯನ್ನು ಜೀರ್ಣಿಸಿಕೊಳ್ಳಲಿ. ಇನ್ನು 6 ತಿಂಗಳು ಕಾದರೆ ಸಿ.ಪಿ ಯೋಗೀಶ್ವರ್ ಮಾಜಿ ಶಾಸಕರಾಗಿಯೇ ಉಳಿಯಲಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲೆಯನ್ನಾಗಿ ಮಾಡಿದ್ದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ. ನಮ್ಮ ಜನರ ಸಂಕಷ್ಟ ಕೇಳುವುದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ. ರಾಮನಗರ ಜಿಲ್ಲೆಯ ಜನರ ಜೊತೆಗೆ ಅವಿನಾಭಾವ ಸಂಬಂಧವಿದೆ. ಹೀಗಾಗಿ ಇಲ್ಲಿನ ಜನರ ಕಷ್ಟಸುಖದಲ್ಲಿ ನಾನು ಭಾಗಿಯಾಗುವೆ ಎಂದು ನಿಖಿಲ್ ಹೇಳಿದರು. ಇದನ್ನೂ ಓದಿ: ಸರ್ಕಾರಿ ನೌಕರರರಿಗೆ ಸಿಹಿ ಸುದ್ದಿ – 7ನೇ ವೇತನ ಆಯೋಗ ಜಾರಿ
ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಹೋಗಬಹುದು. ಚನ್ನಪಟ್ಟಣ ನಮ್ಮ ತಂದೆ ಪ್ರತಿನಿಧಿಸುವ ಕ್ಷೇತ್ರ. ನನಗೆ ನನ್ನ ಇತಿಮಿತಿಯ ಅರಿವು ಇದೆ. ಜೆಡಿಎಸ್ ಯುವ ಘಟಕದ ಜವಾಬ್ದಾರಿ ನನ್ನ ಮೇಲಿದೆ. ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ಕೊಟ್ಟಿದ್ದಾರೆ. ಜೊತೆಗೆ ಪಂಚರತ್ನ ಹೆಚ್.ಡಿ ಕುಮಾರಸ್ವಾಮಿ ಅವರ ಜನಪರ ಯೋಜನೆ. ರಾಜ್ಯದ ಎಲ್ಲಾ ಕಡೆ ಪಂಚರತ್ನ ಯಾತ್ರೆ ಸಂಚರಿಸಲಿದೆ. ಹೀಗಾಗಿ ಇಲ್ಲಿ ಕುಮಾರಸ್ವಾಮಿಯವರು ಹೆಚ್ಚು ತೊಡಗಿಸಿಕೊಳ್ಳಲು ಸಾಧ್ಯವಿಲ್ಲ. ಅವರ ಅನುಪಸ್ಥಿತಿಯಲ್ಲಿ ಇಲ್ಲಿನ ಜನರ ಜೊತೆಗೆ ನಿಲ್ಲುವೆ ಎಂದಿದ್ದಾರೆ.
ಯೋಗೇಶ್ವರ್ ತಿರುಗೇಟು:
ನಿಖಿಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಪಿ ಯೋಗೇಶ್ವರ್, ನಾಲ್ಕುವರೆ ವರ್ಷಗಳಿಂದ ನಿಖಿಲ್ ಕುಮಾರಸ್ವಾಮಿ ಎಲ್ಲಿದ್ರು? ಚುನಾವಣೆಗೆ 6 ತಿಂಗಳಿರುವಾಗ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಕಾರ್ಯಕರ್ತರ ಮನೆಗೆ ಭೇಟಿ ನೀಡುತ್ತಿದ್ದಾರೆ. ಆದರೆ ಅವರಿಗೆ ಕ್ಷೇತ್ರದ ಮೇಲೆ ನಿಜವಾದ ಕಾಳಜಿ ಇಲ್ಲ. ಈಗ ಕ್ಷೇತ್ರಕ್ಕೆ ಬರುತ್ತಿರುವುದು ಪೊಲಿಟಿಕಲ್ ಗಿಮಿಕ್. ಚುನಾವಣೆ ದೃಷ್ಟಿಯಿಂದ ಕ್ಷೇತ್ರದಲ್ಲಿ ಓಡಾಟ ಮಾಡುತ್ತಿದ್ದಾರೆ. ಅವರ ಪಕ್ಷ ಸಂಘಟನೆಗೆ ನಮ್ಮ ಯಾವುದೇ ಅಭ್ಯಂತರ ಇಲ್ಲ. ಮುಂದೆ ನಾನು ಹಾಲಿ ಆಗಬೇಕಾ, ಮಾಜಿ ಆಗಬೇಕಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ. ಅವರ ಹಾಗೆ ಕಲ್ಲು, ಮೊಟ್ಟೆ ಹೊಡೆಯುವ ಸಂಸ್ಕೃತಿ ನಮ್ಮದಲ್ಲ ಎಂದು ನಿಖಿಲ್ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನನ್ನ ತೇಜೋವಧೆ ಆಗ್ತಿದೆ – ವಿವಾದಿತ ಹೇಳಿಕೆಯನ್ನು ಹಿಂಪಡೆದ ಸತೀಶ್ ಜಾರಕಿಹೊಳಿ
Live Tv
[brid partner=56869869 player=32851 video=960834 autoplay=true]
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಸುಮಲತಾ ಅವರನ್ನು ರಾಜ್ಯ ರಾಜಕಾರಣಕ್ಕೆ ತರಲಿದ್ದಾರೆ. ಈ ಮೂಲಕ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಭಾರೀ ಪ್ಲಾನ್ ರೂಪಿಸಲಾಗಿದೆ. ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಅವರು ಸ್ಪರ್ಧಿಸುವುದು ಖಚಿತವಾದರೆ ಸುಮಲತಾ ಅವರನ್ನು ಪ್ರತಿಸ್ಪರ್ಧಿಯಾಗಿ ನಿಲ್ಲಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ನಾರಾಯಣಗೌಡ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ನಡೆಯಲಿರುವ ಉಪಚುನವಾವಣೆಯಲ್ಲಿ ನಿಖಿಲ್ ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಜೆಡಿಎಸ್‍ನಲ್ಲಿ ಕೇಳಿಬಂದಿದೆ. ಹೀಗಾಗಿ ನಿಖಿಲ್ ಸ್ಪರ್ಧೆ ಮಾಡಿ ಗೆದ್ದರೆ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಕನಸು ಕಂಡಿರುವ ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಹೀಗಾಗಿ ಸುಮಲತಾ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿ, ಕೆ.ಆರ್. ಪೇಟೆಯಿಂದ ಸ್ಪರ್ಧೆ ಮಾಡುವಂತೆ ಬಿಜೆಪಿ ಒತ್ತಾಯಿಸಲಿದೆ.
ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಶಾಸಕ ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಈ ಬಾರಿ ಹೇಗಾದರೂ ಮಾಡಿ ಮಂಡ್ಯದಲ್ಲಿ ಖಾತೆ ತೆರೆಯಲು ಬಿಜೆಪಿ ಹರಸಾಹಸ ಪಡುತ್ತಿದೆ. ಈ ನಿಟ್ಟಿನಲ್ಲಿ ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಸರ್ಕಾರವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಪ್ಲಾನ್ ರೂಪಿಸುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಕೆಆರ್ ಪೇಟೆ ಕ್ಷೇತ್ರವೊಂದರಲ್ಲೇ ಸುಮಾರು 15 ಸಾವಿರಕ್ಕೂ ಹೆಚ್ಚಿನ ಲೀಡ್ ಪಡೆದಿದ್ದರು. ಹೀಗಾಗಿ ಸುಮಲತಾ ಅವರನ್ನು ಉಪ ಚುನಾವಣೆಗೆ ನಿಲ್ಲಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೆಆರ್ ಪೇಟೆ ಕ್ಷೇತ್ರದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ನಾಗಮಂಗಲದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆ ಸುಮಲತಾ ಗೆಲುವಿಗೆ ಶ್ರಮಿಸುತ್ತಿದ್ದಾರಾ ಅನ್ನೋ ಅನುಮಾನವೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ.
ಚೆಲುವರಾಯ ಸ್ವಾಮಿ ಅವರಿಗೆ ಸುಮಲತಾ ವಂದನೆ ಸಲ್ಲಿಸುತ್ತಿರುವಂತೆ ಪೋಸ್ಟ್ ಹಾಕಿ ವೈರಲ್ ಮಾಡಲಾಗುತ್ತಿದೆ. “ನನ್ನ ಬೆನ್ನ ಹಿಂದೆ ನಿಂತು ನನ್ನ ಗೆಲುವಿಗೆ ಶ್ರಮಿಸುತ್ತಿರುವ ಚೆಲುವರಾಯಸ್ವಾಮಿಯವರಿಗೆ ನನ್ನ ವಂದನೆಗಳು” ಎಂದು ಸುಮಲತಾ ಬರೆದಿದ್ದಾರೆ ಎನ್ನಲಾದ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದ್ರೆ ಇದನ್ನು ಸುಮಲತಾ ಅವರೇ ಬರೆದಿದ್ದಾರಾ ಅಥವಾ ಬೇರೆಯವರು ಬರೆದಿದ್ದಾರಾ ಎಂಬ ಪ್ರಶ್ನೆಗಳು ಎದ್ದಿವೆ.
ಸುಮಲತಾ, ನಿಖಿಲ್ ಪ್ರಚಾರ:
ಮಂಡ್ಯ ಕುರುಕ್ಷೇತ್ರದಲ್ಲಿ ನಾನಾ ನೀನಾ ಅಂತ ಜಿದ್ದಿಗೆ ಬಿದ್ದಿರುವ ಸುಮಲತಾ ಹಾಗೂ ನಿಖಿಲ್‍ರ ಅಬ್ಬರದ ಪ್ರಚಾರ ಇಂದು ಮುಂದುವರಿಯಲಿದೆ. ಸುಮಲತಾ ಅಂಬರೀಶ್ ಮೈಸೂರು ಜಿಲ್ಲೆ ಕೆಆರ್ ನಗರ ಭಾಗದಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಇವರಿಗೆ ಪುತ್ರ ಅಭಿಷೇಕ್ ಸಾಥ್ ನೀಡಲಿದ್ದಾರೆ.ಹೀಗಾಗಿ ಬಿಎಸ್‍ವೈ ಭೇಟಿಯನ್ನು ಸುಮಲತಾ ಮುಂದೂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯಲ್ಲಿ ಸಂಚರಿಸಿ ಮತಬೇಟೆಯಾಡಲಿದ್ದಾರೆ. ಇವರಿಗೆ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಶಾಸಕ ಸುರೇಶ್ ಗೌಡ ಹಾಗೂ ಸಂಸದ ಶಿವರಾಮೇಗೌಡ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.