Tag: Nikki haley

  • ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ವಾಷಿಂಗ್ಟನ್: ಜಾಗತೀಕ ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸಬೇಕಾದ್ರೆ, ಚೀನಾವನ್ನ ಎದುರಿಸಬೇಕಾದ್ರೆ ಭಾರತ ಮತ್ತು ಅಮೆರಿಕ (India – USA) ಸಂಬಂಧವನ್ನ ಹಳಿಗೆ ತನ್ನಿ ಎಂದು ವಿಶ್ವಸಂಸ್ಥೆಯ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ (Nikki Haley) ಟ್ರಂಪ್‌ಗೆ ಮತ್ತೆ ಎಚ್ಚರಿಕೆ ನೀಡಿದ್ದಾರೆ.

    ರಷ್ಯಾದ ತೈಲ ಖರೀದಿಸುತ್ತಿರುವ (Russian Oil Trade) ಭಾರತದ ಮೇಲೆ 50% ಸುಂಕ ವಿಧಿಸಿರುವ ಸಂಬಂಧ ʻನ್ಯೂಸ್ ವೀಕ್’ ನಲ್ಲಿ ಬರೆದ ತಮ್ಮ ಲೇಖನದಲ್ಲಿ ಈ ನಿಲುವನ್ನು ಪ್ರತಿಪಾದಿಸಿದ್ದಾರೆ. ಭಾರತವನ್ನು ಅಮೂಲ್ಯವಾದ ಮುಕ್ತ ಮತ್ತು ಪ್ರಜಾಪ್ರಭುತ್ವ ಪಾಲುದಾರನಂತೆ ಪರಿಗಣಿಸಬೇಕೇ ಹೊರತು ಚೀನಾದಂತೆ ಎದುರಾಳಿಯನ್ನಾಗಿ ಅಲ್ಲ ಎಂದು ಒತ್ತಿ ಹೇಳಿದ್ದಾರಲ್ಲದೇ ಭಾರತದ ಸಂಬಂಧ ಕಡಿತಗೊಳಿಸುವುದು ಕಡಿತಗೊಳಿಸುವುದು ಕಾರ್ಯತಂತ್ರದ ವಿಪತ್ತು ಎಂದು ಬಣ್ಣಿಸಿದ್ದಾರೆ.

    ಚೀನಾ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರೆಸಿದ್ದರೂ ಈವರೆಗೆ ಯಾವುದೇ ಪ್ರಮುಖ ನಿರ್ಬಂಧಗಳನ್ನ ಎದುರಿಸುತ್ತಿಲ್ಲ. ಹೀಗಿರುವಾಗ ಭಾರತವನ್ನ ಶಿಕ್ಷಿಸುವುದು ಅಮೆರಿಕದ ಏಷ್ಯಾ ಕಾರ್ಯತಂತ್ರವನ್ನ ದುರ್ಬಲಗೊಳಿಸಬಹುದು. ಹಾಗಾಗಿ ಭಾರತ ಸಂಬಂಧವನ್ನು ಉಳಿಸಿಕೊಂಡರೆ, ಅಮೆರಿಕದ ಪೂರೈಕೆ ಸರಪಳಿಯನ್ನು ಚೀನಾದಿಂದ ಬೇರ್ಪಡಿಸಲು ಸಹಾಯವಾಗುತ್ತೆ. ಜವಳಿ, ಅಗ್ಗದ ಮೊಬೈಲ್ ಫೋನ್‌ಗಳು ಮತ್ತು ಸೌರ ಫಲಕಗಳ ದೊಡ್ಡ ಪ್ರಮಾಣದ ಉತ್ಪಾದನೆಯಲ್ಲಿ ಪ್ರಮುಖ ಪಾಲುದಾರನಾಗಬಹುದು ಎಂದು ಬರೆದಿದ್ದಾರೆ.

    ರಷ್ಯಾದ ತೈಲ ಖರೀದಿ ಮೂಲಕ ಭಾರತ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಫಂಡಿಂಗ್‌ ಮಾಡುತ್ತಿದೆ ಅನ್ನೋದು ಟ್ರಂಪ್‌ ನಂಬಿಕೆಯಾಗಿದೆ. ಭಾರತ-ಪಾಕಿಸ್ತಾನ ಕದನ ವಿರಾಮ ಮಾತುಕತೆಯಲ್ಲಿ ಅಮೆರಿಕದ ಪಾತ್ರವು ಪ್ರಶ್ನಾರ್ಹವಾದಾಗ ಈ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕ ಮುಂದೆ ಜಾಗತೀಕ ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸಲು ಬಯಸಿದ್ರೆ, ಟ್ರಂಪ್‌ (Donald Trump) ವಿದೇಶಾಂಗ ನೀತಿಯ ಗುರಿಗಳನ್ನು ಸಾಧಿಸಬೇಕಾದ್ರೆ, ಚೀನಾವನ್ನು ಸೋಲಿಸಬೇಕಾದ್ರೆ ಮತ್ತು ತನ್ನ ಬಲದಿಂದ ಶಾಂತಿ ಸಾಧಿಸಬೇಕಾದ್ರೆ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಮೊದಲಿನಂತೆ ಉಳಿಸಿಕೊಳ್ಳುವುದು ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ.

    ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
    ಈಗಾಗಲೇ ಆಗಸ್ಟ್‌ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆ ಬಳಿಕ ಭಾರತದ ಮೇಲೆ 50% ಸುಂಕ ವಿಧಿಸಿದ್ದು, ಈ ನೀತಿಯು ಇದೇ ಆಗಸ್ಟ್‌ 27ರಿಂದ ಅನ್ವಯವಾಗಲಿದೆ.

  • ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

    ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

    ವಾಷಿಂಗ್ಟನ್‌: ಇಂತಹ ನಿರ್ಣಾಯಕ ಸಮಯದಲ್ಲಿ ಭಾರತದಂತಹ (India) ಬಲಿಷ್ಠ ಮಿತ್ರ ರಾಷ್ಟ್ರದ ಸಂಬಂಧವವನ್ನ ಹಾಳುಮಾಡದಂತೆ ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ವಿಶ್ವಸಂಸ್ಥೆಯ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ (Nikki Haley) ಎಚ್ಚರಿಸಿದ್ದಾರೆ.

    ರಷ್ಯಾದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಮುಂದಿನ 24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ ಮಾಡುವುದಾಗಿ ಟ್ರಂಪ್‌ (Donald Trump) ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ನಿಕ್ಕಿ ಹ್ಯಾಲಿ ಪ್ರತಿಕ್ರಿಯಿಸಿದ್ದು, ಟ್ರಂಪ್‌ ಅವರ ಪ್ರಸ್ತಾಪಗಳು ನಿರ್ಣಾಯಕ ಸಂದರ್ಭದಲ್ಲಿ ಭಾರತ-ಅಮೆರಿಕದ ಸಂಬಂಧಗಳನ್ನು ಹದಗೆಡಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿರುವ ನಿಕ್ಕಿ, ಟ್ರಂಪ್‌ ಆಡಳಿತವು ದ್ವಿಮುಖ ನೀತಿಯನ್ನ ಅಳವಡಿಸಿಕೊಂಡಿದೆ. ಚೀನಾದಂತಹ ಶತ್ರುರಾಷ್ಟ್ರಕ್ಕೆ ವ್ಯಾಪಾರಾಕ್ಕಾಗಿ ಅಮೆರಿಕ 90 ದಿನಗಳ ಸುಂಕ ವಿನಾಯ್ತಿ ನೀಡಿದೆ. ಆದ್ರೆ ಭಾರತದ ಮೇಲೆ ಕಠಿಣ ನಿರ್ಧಾರಕ್ಕೆ ಮುಂದಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಭಾರತಕ್ಕೆ ರಷ್ಯಾದಿಂದ ತೈಲ ಖರೀದಿಸಬಾರದು ಅಂತ ಟ್ರಂಪ್‌ ಹೇಳ್ತಾರೆ, ಆದ್ರೆ ರಷ್ಯಾ ಮತ್ತು ಇರಾನ್‌ನ ಅತಿದೊಡ್ಡ ತೈಲ ಖರೀದಿದಾರ ಚೀನಾಗೆ 90 ದಿನಗಳ ಸುಂಕ ವಿನಾಯ್ತಿ ಕೊಡ್ತಾರೆ. ಇದು ಒಳ್ಳೆಯದಲ್ಲ. ಚೀನಾದಂತಹ ಶತ್ರು ರಾಷ್ಟ್ರಕ್ಕೆ ರಿಯಾಯತಿ ನೀಡಬೇಡಿ ಹಾಗೆಯೇ ಭಾರತದಂತಹ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧವನ್ನು ಹದಗೆಡಿಸಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

    24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ
    ಮುಂದಿನ 24 ಗಂಟೆಯಲ್ಲಿ ಭಾರತದ ಮೇಲೆ ಸುಂಕ ಗಣನೀಯ ಏರಿಕೆ ಮಾಡುವ ಎಚ್ಚರಿಕೆ ನೀಡಿದ್ದಾರೆ ಟ್ರಂಪ್‌. ಭಾರತವು ನಮ್ಮ ಉತ್ತಮ ವ್ಯಾಪಾರ ಪಾಲುದಾರನಲ್ಲ. ಏಕೆಂದರೆ ಭಾರತ ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡುತ್ತಾರೆ. ಆದ್ರೆ ನಾವು ಅವರೊಂದಿಗೆ ವ್ಯಾಪಾರ ಮಾಡಲ್ಲ. ಆದ್ದರಿಂದ ನಾವು 25 ಪ್ರತಿಶತದಷ್ಟು ಇತ್ಯರ್ಥಪಡಿಸಿಕೊಂಡಿದ್ದೇವೆ. ಆದ್ರೆ ನಾವು ಹೇಳಿದ ಮೇಲೂ ರಷ್ಯಾದಿಂದ ನಿರಂತರವಾಗಿ ತೈಲ ಖರೀದಿ ಮಾಡಲಾಗುತ್ತಿದೆ. ಈ ಮೂಲಕ ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಆಮದುಗಳ ಮೇಲೆ ಸುಂಕವನ್ನು (Tariff Threat) ಗಣನೀಯವಾಗಿ ಏರಿಕೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

    ಭಾರತ ಲಾಭ ಮಾಡಿಕೊಳ್ಳುತ್ತಿದೆ
    ಒಂದು ದಿನದ ಹಿಂದಷ್ಟೇ ಸುಂಕ ಗಣನೀಯ ಏರಿಕೆ ಕುರಿತು ಟ್ರಂಪ್‌ ಮಾತನಾಡಿದ್ದರು, ಭಾರತ ರಷ್ಯಾದಿಂದ (India-Russia) ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ (Russian Oil) ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ. ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದರು.

    trump modi

    ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
    ಈಗಾಗಲೇ ಆಗಸ್ಟ್‌ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆದ್ರೆ, ಯಾವ ದಿನಾಂಕದಿಂದ ಈ ನಿರ್ಧಾರ ಜಾರಿಗೆ ಬರಲಿದೆ ಎಂದು ತಿಳಿಸಿರಲಿಲ್ಲ.

    2ನೇ ಅತೀ ದೊಡ್ಡ ಖರೀದಿದಾರ
    ಭಾರತವು ರಷ್ಯಾದಿಂದ ದೇಶದ ಅಗತ್ಯವಿರುವ ಕಚ್ಚಾತೈಲದ ಪೈಕಿ ಶೇ.35ರಿಂದ 40ರಷ್ಟು ಖರೀದಿಸುತ್ತಿದೆ. ಉಕ್ರೇನ್ ಜೊತೆಗಿನ ಯುದ್ಧ ಆರಂಭಕ್ಕೂ ಮುನ್ನ ಹೋಲಿಸಿದ್ರೆ, ಆಮದು ಪ್ರಮಾಣವು ಶೇ.0.2ರಷ್ಟು ಏರಿಕೆಯಾಗಿದೆ. ರಷ್ಯಾದಿಂದ ಗರಿಷ್ಠ ಪ್ರಮಾಣದ ಕಚ್ಚಾತೈಲ ಖರೀದಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತವು ನಂತರದ ಸ್ಥಾನದಲ್ಲಿದೆ ಎಂದು ವರದಿಗಳು ತಿಳಿಸಿವೆ.

  • ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್ ರಾಮಸ್ವಾಮಿ

    ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್ ರಾಮಸ್ವಾಮಿ

    ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯಲಿರುವ 2024ರ ಅಧ್ಯಕ್ಷೀಯ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಅನೇಕರು ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Bid) ಸ್ಪರ್ಧಿಸುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ವಿಶೇಷವೆಂದರೆ ಈ ಬಾರಿ ರಿಪಬ್ಲಿಕನ್ ಪಕ್ಷದಿಂದಲೇ (Republican Presidential Nomination) ಭಾರತೀಯ ಮೂಲದ ಇಬ್ಬರು ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿದ್ದಾರೆ.

    ಭಾರತೀಯ ಮೂಲದ ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ (Nikki Haley) ಅವರು ಈಗಾಗಲೇ 2024ರಲ್ಲಿ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

    ಈ ಹಿಂದೆ ಟ್ರಂಪ್ ನೇತೃತ್ವದ ಸಂಪುಟದಲ್ಲಿ ಅಧಿಕಾರಿಯಾಗಿದ್ದ ಅವರು, ತಾವು ಟ್ರಂಪ್ ಅವರ ವಿರುದ್ಧ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಯಾಗುವುದಿಲ್ಲ ಎಂದು ಹಿಂದೆ ಹೇಳಿದ್ದರು. ಆದರೆ, ಈಗ ಮನಸ್ಸು ಬದಲಾಯಿಸಿದ್ದಾರೆ. ದೇಶದ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಹೊಸ ಪೀಳಿಗೆಯ ನಾಯಕತ್ವ ಅಗತ್ಯವಿದೆ ಎಂದು ಹೇಳಿದ್ದಾರೆ.

    ಚುನಾಯಿತರಾದರೆ, 51 ವರ್ಷದ ಹ್ಯಾಲಿ ಅವರು ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆ ಹಾಗೂ ಭಾರತೀಯ ಮೂಲದ ಮೊದಲ ಅಮೆರಿಕ ಅಧ್ಯಕ್ಷರಾಗುತ್ತಾರೆ. ಇದನ್ನೂ ಓದಿ: ಫಸ್ಟ್‌ ಟೈಂ ಭಾರತೀಯ ವ್ಯಕ್ತಿಗೆ ಪಟ್ಟ – ಫಿಭಾ ಏಷ್ಯಾ ವಿಭಾಗದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಆಯ್ಕೆ

    ವಿವೇಕ್ ರಾಮಸ್ವಾಮಿ: ಅಮೆರಿಕದ 2024ರ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಭಾರತ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ.

    ಭಾರತೀಯ ಮೂಲದ 37 ವರ್ಷದ ವಿವೇಕ್ ರಾಮಸ್ವಾಮಿ ಅವರು ಉದ್ಯಮಿ ಆಗಿದ್ದು, ಮ್ಯಾಗಜೀನ್‍ವೊಂದರ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಅವರು ಅಧ್ಯಕ್ಷೀಯ ಚುನಾವಣೆಯ ಕುರಿತು ಹೆಚ್ಚು ಗಮನ ಹರಿಸುತ್ತಿದ್ದಾರೆ. ಜೊತೆಗೆ ಸ್ಥಳೀಯ ಸಂಸ್ಕøತಿಯ ಮರುಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲು ಅಭಿಯಾನವನ್ನು ನಡೆಸಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಭಾರತದಿಂದ ವಲಸೆ ಹೋಗಿದ್ದ ದಂಪತಿ ಪುತ್ರರಾದ ವಿವೇಕ್ ಸಿನ್ಸಿನಾಟಿಯಲ್ಲಿ ಜನಿಸಿದ್ದು, ಹಾರ್ವರ್ಡ್ ಹಾಗೂ ಯಾಲೆ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪೂರೈಸಿದ್ದಾರೆ. ಇದನ್ನೂ ಓದಿ: ಕ್ಯಾಥೋಲಿಕ್‌ ಚರ್ಚ್‌ಗಳ ಪಾದ್ರಿಗಳಿಂದ 5,000 ಬಾಲಕಿಯರ ಮೇಲೆ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾಕಿಸ್ತಾನಕ್ಕೆ ಅಮೇರಿಕ 1 ಡಾಲರ್ ಆರ್ಥಿಕ ನೆರವನ್ನು ನೀಡಬಾರದು: ನಿಕ್ಕಿ ಹ್ಯಾಲೆ

    ಪಾಕಿಸ್ತಾನಕ್ಕೆ ಅಮೇರಿಕ 1 ಡಾಲರ್ ಆರ್ಥಿಕ ನೆರವನ್ನು ನೀಡಬಾರದು: ನಿಕ್ಕಿ ಹ್ಯಾಲೆ

    ನ್ಯೂಯಾರ್ಕ್: ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನ ದೊಡ್ಡ ಇತಿಹಾಸವನ್ನೇ ಹೊಂದಿದೆ. ಆದ್ದರಿಂದ ಅಮೇರಿಕ ಇಸ್ಲಾಮಾಬಾದ್‍ಗೆ ಒಂದು ಡಾಲರ್ ಕೂಡ ನೀಡಬಾರದು. ಪಾಕಿಸ್ತಾನಕ್ಕೆ ಆರ್ಥಿಕ ನೆರವನ್ನು ಬುದ್ಧಿವಂತಿಕೆಯಿಂದ ನಿರ್ಬಂಧಿಸಿದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವನ್ನು ಭಾರತ-ಅಮೇರಿಕಾದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲೆ ಶ್ಲಾಘಿಸಿದ್ದಾರೆ.

    ಹ್ಯಾಲೆ ಅವರು `ಸ್ಟಾಂಡ್ ಅಮೇರಿಕಾ ನೌ’ ಎನ್ನುವ ಹೊಸ ನೀತಿಯನ್ನು ಜಾರಿಗೆ ತಂದಿದ್ದಾರೆ. ಈ ನೀತಿಯು ಅಮೆರಿಕವನ್ನು ಹೇಗೆ ಸುರಕ್ಷಿತವಾಗಿ, ಬಲಿಷ್ಠವಾಗಿ ಹಾಗೂ ಶ್ರೀಮಂತವಾಗಿ ಇಡಲು ಯಾವುದರ ಬಗ್ಗೆ ಪ್ರಮುಖ್ಯತೆಯನ್ನು ನೀಡಬೇಕು ಹಾಗೂ ಉತ್ತಮ ಬಾಂಧವ್ಯ ಹೊಂದಿರುವ ರಾಷ್ಟ್ರಗಳಿಗೆ ಆರ್ಥಿಕವಾಗಿ ನೆರವನ್ನು ನೀಡುವುದರ ಬಗ್ಗೆ ಗಮನ ವಹಿಸುತ್ತದೆ. ಹಾಗೆಯೇ ಯುಎಸ್‍ನ ಔದಾರ್ಯತೆಗೆ ಪ್ರತಿಫಲವನ್ನು ಕೇಳುವುದು ನ್ಯಾಯವಾದ ಹಕ್ಕು. ಆದ್ರೆ ಪಾಕಿಸ್ತಾನ ಯುಎಸ್‍ನ ಹಲವು ನಿರ್ಧಾರವನ್ನು ವಿರೋಧಿಸುತ್ತಲೇ ಬಂದಿದೆ ಎಂದಿದ್ದಾರೆ.

    2017ರಲ್ಲಿ ಅಮೆರಿಕ ಪಾಕಿಸ್ತಾನಕ್ಕೆ ಸುಮಾರು 1 ಬಿಲಿಯನ್ ಡಾಲರ್(6.5 ನೂರು ಕೋಟಿ ರೂ) ಹಣವನ್ನು ವಿದೇಶಿ ಆರ್ಥಿಕ ನೆರವಿನಲ್ಲಿ ನೀಡಲಾಗಿತ್ತು. ಈ ನೆರವಿನಲ್ಲಿ ಹೆಚ್ಚು ಹಣವನ್ನು ಪಾಕಿಸ್ತಾನ ತನ್ನ ಸೈನ್ಯಕ್ಕಾಗಿ ಉಪಯೋಗಿಸಿಕೊಂಡಿತ್ತು. ಅಲ್ಲದೆ ಇನ್ನುಳಿದ ಹಣವನ್ನು ಪಾಕಿಸ್ತಾನಿ ಪ್ರಜೆಗಳಿಗಾಗಿ ರಸ್ತೆ, ಹೆದ್ದಾರಿ, ಶಕ್ತಿ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಲು ಬಳಸಿಕೊಳ್ಳಲಾಗಿತ್ತು. ಅದಕ್ಕೆ ಹ್ಯಾಲೆ ಅವರು ವಿದೇಶಿ ಆರ್ಥಿಕ ನೆರವನ್ನು ಕೇವಲ ಸ್ನೇಹಿತರಿಗೆ ಮಾತ್ರ ನೀಡಬೇಕು ಅಂತ ಪ್ರತಿಪಾದಿಸಿದ್ದಾರೆ.

    ವಿಶ್ವಸಂಸ್ಥೆಯಲ್ಲಿ ಎಲ್ಲಾ ರಾಷ್ಟ್ರಗಳು ಒಂದೆಡೆಯಾದರೇ, ಪಾಕಿಸ್ತಾನವೇ ಒಂದೆಡೆ ನಿಂತಿರುತ್ತದೆ. ಅನೇಕ ಬಾರಿ ಅಮೆರಿಕದ ನಿರ್ಧಾರವನ್ನು ಅದು ವಿರೋಧಿಸಿದೆ. ಉಗ್ರರರಿಗೆ ಆಶ್ರಯ ನೀಡುತ್ತಿದೆ. ಅಮೇರಿಕ ವಿರುದ್ಧ ಇರುವ ಪಾಕಿಸ್ತಾನಕ್ಕೆ ಏಕೆ ನಾವು ನೆರವನ್ನು ಕೊಡಬೇಕು? ಪಾಕ್ ತನ್ನ ತಪ್ಪನ್ನು ಅರ್ಥ ಮಾಡಿಕೊಂಡು ಭಯೋತ್ಪಾದನೆಗೆ ಕುಮ್ಮಕ್ಕು ನೀಡದೇ, ಆಶ್ರಯ ನೀಡದೇ ಬುದ್ಧಿ ಕಲಿತುಕೊಂಡರೆ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv