Tag: Nimishambha Temple

  • ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ (Operation Sindoor) ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು (Karnataka Government) ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ಮಾಡಲು ಆದೇಶಿಸಿದೆ.

    ಸಚಿವ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಗೆ ಶುಭ ಹಾರೈಸಿದ್ದಾರೆ ಮತ್ತು ಯೋಧರಿಗೆ ಒಳಿತಾಗಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇಗುಲದಲ್ಲಿ (Nimishambha Temple) ಸೈನಿಕರ ಹೆಸರಲ್ಲಿ ಪೂಜೆ ಸಲ್ಲಿಸಲಾಗಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

    ರಾಜ್ಯದ ಪ್ರಸಿದ್ಧ ದೇಗುಲದಲ್ಲಿ ಒಂದಾದ ಮಂಡ್ಯ ಜಿಲ್ಲೆಯ ನಿಮಿಷಾಂಭ ದೇಗುಲದಲ್ಲಿ ಇಂದು ಮುಂಜಾನೆ ಸೈನಿಕರಿಗಾಗಿ ದೇವಿಗೆ ಮೊದಲ ಪೂಜೆ ಸಲ್ಲಿಕೆ ಮಾಡಲಾಗಿದೆ. ದೇವಸ್ಥಾನದ ಮುಖ್ಯ ಅರ್ಚಕರು ಸೈನಿಕರಿಗಾಗಿ ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: Operation Sindoor | ಪಾಕ್ ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್‌ – ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

    ದೇಶಕಾಯುವ ಯೋಧರಿಗೆ ಯಾವುದೇ ತೊಂದರೆ ಆಗದಂತೆ ಕಾಪಾಡುವಂತೆ ಪ್ರಾರ್ಥಿಸಿ ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್‌ – ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ

  • ನಿಮಿಷಾಂಭ ದೇವಿಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಅರೆಸ್ಟ್: ಅಲೋಕ್ ಕುಮಾರ್

    ನಿಮಿಷಾಂಭ ದೇವಿಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಅರೆಸ್ಟ್: ಅಲೋಕ್ ಕುಮಾರ್

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿರುವ ನಿಮಿಷಾಂಭ ದೇವಿ (Nimishamba Temple) ಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಅರೆಸ್ಟ್ ಆಗಿರುವುದಾಗಿ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಹೇಳಿದ್ದಾರೆ.

    ಶನಿವಾರ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೆ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದ್ರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು ಎಂದು ವಿವರಿಸಿದರು.

    ಈಗಲೂ ಜನವರಿ 10ರಂದು ನಾನು ಇಲ್ಲಿಗೆ ಬಂದು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ (Santro Ravi) ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈ ಬಾರಿಯೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು. ಇದನ್ನೂ ಓದಿ: ಸ್ಯಾಂಟ್ರೋ ಗುಜರಾತ್ ಗುಮಾನಿ – ಬಂಧನದ ಅಸಲಿ ಕಹಾನಿ ಏನು?

    ದೇವಿ ಮೇಲೆ ಅಪಾರವಾದ ನಂಬಿಕೆ ಇದೆ. ನಾನಗೂ ಬಹಳ ನಂಬಿಕೆ ಇದೆ. ಆತನಿಂದಾಗಿ ಸರ್ಕಾರಕ್ಕೆ, ಪೊಲೀಸ್ ಇಲಾಖೆ (Police Department) ಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಆತ ಈಗ ನಮ್ಮ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.

    ಮೊದಲು ಆತನ ವಿರುದ್ಧ ದಾಖಲಾಗಿರುವ ಕೇಸ್ ಬಗೆಗೆ ವಿಚಾರಣೆ ನಡೆಯುತ್ತೆ. ನಂತರ ಆತ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ ಆತನಿಗೆ ಯಾರೆಲ್ಲಾ ಸಹಾಯ ಮಾಡಿದ್ರು ಎಂಬ ಬಗೆಗೆ ವಿಚಾರಣೆ ಮಾಡ್ತೀವಿ. ಹಾಗೊಂದು ವೇಳೆ ಯಾರಾದ್ರು ಸಹಾಯ ಮಾಡಿದ್ರೆ ಅವರ ಮೇಲೂ ಕ್ರಮ ಕೈಗೊಳ್ತೀವಿ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಮಂಡ್ಯ: ಸ್ಯಾಂಡಲ್‍ವುಡ್ ನಿರೂಪಕಿ ಕಂ ನಟಿ ಅನುಶ್ರೀ ಅವರು ಇಂದು ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಭೇಟಿ ನೀಡಿದ್ದಾರೆ.

    ಅನುಶ್ರೀ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‍ನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಿ ಸನ್ನಿಧಾನಕ್ಕೆ ಬಂದು ಹರಕೆ ಹೊತ್ತು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅನುಶ್ರೀಗೆ ಕುಟುಂಬಸ್ಥರು ಹಾಗೂ ಸ್ನೇಹಿತರು ಸಾಥ್ ನೀಡಿದ್ದಾರೆ.

    ಡ್ರಗ್ಸ್ ಕೇಸ್‍ನಲ್ಲಿ ಇತ್ತೀಚೆಗೆ ಅನುಶ್ರೀ ಸಿಸಿಬಿ ವಿಚಾರಣೆ ಎದುರಿಸಿದ್ದರು. ಹೀಗಾಗಿ ಡ್ರಗ್ಸ್ ಸಂಕಷ್ಟದಿಂದ ಪಾರು ಮಾಡುವಂತೆ ದೇವಿಯ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

    ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಂಗಳೂರಲ್ಲಿ ಡ್ಯಾನ್ಸರ್ ಕಿಶೋರ್, ತರುಣ್ ಹಾಗೂ ನೌಶೀನ್ ನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಡ್ಯಾನ್ಸರ್ ಕಿಶೋರ್ ಅನುಶ್ರೀ ಹೆಸರನ್ನು ಹೇಳಿದ್ದ ಎನ್ನಲಾಗಿದೆ. ಹೀಗಾಗಿ ಮಂಗಳೂರು ಪೊಲೀಸರು ಅನುಶ್ರೀಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅನುಶ್ರೀ ಮಂಗಳೂರಿಗೆ ಹೋಗಿ ವಿಚಾರಣೆಗೆ ಹಾಜರಾಗಿದ್ದರು.

    ಅನುಶ್ರೀ ವಿಚಾರಣೆ:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕಿಶೋರ್, ತರುಣ್ ಹಾಗೂ ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

    ಮತ್ತೋರ್ವ ಕೋರಿಯೋಗ್ರಾಫರ್ ಅರೆಸ್ಟ್:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಕೋರಿಯೋಗ್ರಾಫರ್ನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಸ್ಯಾಮ್ ಫರ್ನಾಂಡೀಸ್ ನನ್ನು ಅರೆಸ್ಟ್ ಮಾಡಲಾಗಿದ್ದು, ಈತ ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಅನುಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನಟ-ನಟಿಯರ ಹೆಸರುಗಳನ್ನು ಹೇಳಿದ್ದಾನೆ. ಬೆಂಗಳೂರು, ಮಂಗಳೂರಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಕಿರುತೆರೆ ಕಲಾವಿದರು, ಡ್ಯಾನ್ಸರ್ ಗಳು ಭಾಗಿಯಾಗಿದ್ರು. ವಿಶೇಷವಾಗಿ ಕಿರುತೆರೆ ಸ್ಟಾರ್ ಗಳು ಪಾರ್ಟಿಯಲ್ಲಿ ಭಾಗಿರುವುದಾಗಿ ಹೇಳಿದ್ದಾನೆ. ಸದ್ಯ ಸ್ಯಾಮ್ ಹೇಳಿಕೆಯಿಂದ ಕಿರುತೆರೆ, ರಿಯಾಲಿಟಿ ಶೋಗಳ ಸ್ಟಾರ್ ಗಳಿಗೆ ಢವ ಢವ ಶುರುವಾಗಿದೆ.

  • ನಿಮಿಷಾಂಭ ದೇವಾಲಯದ ಹುಂಡಿಯಲ್ಲಿ ಬ್ಯಾನ್ ಆಗಿರೋ ನೋಟುಗಳು ಪತ್ತೆ

    ನಿಮಿಷಾಂಭ ದೇವಾಲಯದ ಹುಂಡಿಯಲ್ಲಿ ಬ್ಯಾನ್ ಆಗಿರೋ ನೋಟುಗಳು ಪತ್ತೆ

    ಮಂಡ್ಯ: 500 ಹಾಗೂ 1 ಸಾವಿರ ನೋಟುಗಳು ಅಮಾನ್ಯಗೊಂಡು ವರ್ಷಗಳೇ ಕಳೆದಿದೆ. ಆದರೆ ದೇವಾಲಯದ ಹುಂಡಿಗಳಲ್ಲಿ ಭಕ್ತರು ಇನ್ನೂ ಅಮಾನ್ಯಗೊಂಡ ನೋಟುಗಳನ್ನು ಕಾಣಿಕೆ ರೀತಿ ಹುಂಡಿಗೆ ಈಗಲೂ ಹಾಕುತ್ತಿದ್ದಾರೆ.

    ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ನಲ್ಲಿರುವ ಪ್ರಸಿದ್ಧ ನಿಮಿಷಾಂಭ ದೇವಾಲಯದ 18 ಕಾಣಿಕೆ ಹುಂಡಿ ಸುರಿದು ಏಣಿಕೆ ಮಾಡಲಾಯಿತು. ಹುಂಡಿಯಲ್ಲಿ ಒಟ್ಟು 32.5 ಲಕ್ಷ ರೂ. ಸಂಗ್ರಹವಾಗಿದ್ದು, ಅಮಾನ್ಯಗೊಂಡಿರುವ 1 ಸಾವಿರ ಮುಖ ಬೆಲೆಯ 2 ನೋಟು ಹಾಗೂ 500 ಮುಖ ಬೆಲೆಯ 6 ನೋಟುಗಳು ದೊರೆತಿವೆ. ಕಾಣಿಕೆ ಹುಂಡಿಯಲ್ಲಿ 90 ಗ್ರಾಂ ಚಿನ್ನ, 140 ಗ್ರಾಂ ಬೆಳ್ಳಿ ಯನ್ನು ಭಕ್ತರು ಕಾಣಿಕೆಯಾಗಿ ನೀಡಿದ್ದರು.

    ಅಮಾನ್ಯಗೊಂಡ ನೋಟುಗಳನ್ನು ಎಸೆಯಲು ಮನಸ್ಸು ಬಾರದೆ ಹುಂಡಿಗೆ ಹಾಕುತ್ತಿರುವ ಭಕ್ತರ ನಡವಳಿಕೆ ಮಾತ್ರ ವಿಚಿತ್ರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.