Tag: Ninasam Sathish

  • ನಟ ನಿನಾಸಂ ಸತೀಶ್‍ಗೆ ಮಾತೃ ವಿಯೋಗ

    ನಟ ನಿನಾಸಂ ಸತೀಶ್‍ಗೆ ಮಾತೃ ವಿಯೋಗ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿನಾಸಂ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ತಮ್ಮ ಆರ್.ಆರ್ ನಗರದಲ್ಲಿರುವ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು

    ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಚಿಕ್ಕತಾಯಮ್ಮ ಅವರಿಗೆ 80 ವರ್ಷ ವಯಸ್ಸಾಗಿತ್ತು. ಪುತ್ರ ಸತೀಶ್ ಅವರು ಚಿತ್ರರಂಗದಲ್ಲಿ ತಮ್ಮ ವಿಶೇಷ ಪ್ರತಿಭೆಯಿಂದ ಎತ್ತರಕ್ಕೆ ಬೆಳೆಯಲು ಅವರು ಸಹಕಾರಿಯಾಗಿದ್ದರು. ಇದನ್ನೂ ಓದಿ: ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಓರ್ವ ನಟ, ಸವಿ ಪಿಎ ವಿರುದ್ಧ ತಂದೆ ದೂರು

    ಸತೀಶ್ ಅವರು ಮೂರು ವರ್ಷದ ಮಗುವಿದ್ದಾಗ ಅವರ ತಂದೆ ತೀರಿಕೊಂಡಿದ್ದರು. ಬಳಿಕ ಸತೀಶ್ ಸಹಿತ 8 ಜನ ಮಕ್ಕಳನ್ನು ಚಿಕ್ಕತಾಯಮ್ಮ ಬಡತನದಲ್ಲಿಯೂ ಮಕ್ಕಳನ್ನು ಚೆನ್ನಾಗಿ ಬೆಳೆಸಿದ್ದರು. ಅವರು ಇಂದು ಇಹಲೋಕ ತ್ಯಜಿಸಿದ್ದು, ಮದ್ದೂರಿನ ಯಲದಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ

  • ನಿನ್ನೆ ನಾನು ಸುಳ್ಳು ಹೇಳಿದ್ದೆ – ವಿಜಯ್ ನೆನೆದು ಕಣ್ಣೀರಿಟ್ಟ ನಿನಾಸಂ ಸತೀಶ್

    ನಿನ್ನೆ ನಾನು ಸುಳ್ಳು ಹೇಳಿದ್ದೆ – ವಿಜಯ್ ನೆನೆದು ಕಣ್ಣೀರಿಟ್ಟ ನಿನಾಸಂ ಸತೀಶ್

    ಬೆಂಗಳೂರು: ಬೈಕ್ ಅಪಘಾತದಿಂದಾಗಿ ಗಂಭೀರ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಅವರನ್ನು ನೆನೆದು ಸ್ಯಾಂಡಲ್‍ವುಡ್ ನಟ ನಿನಾಸಂ ಸತೀಶ್ ಅವರು ಕಣ್ಣೀರಿಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿನಾಸಂ ಸತೀಶ್, ವಿಜಯ್ ಆದಷ್ಟು ಬೇಗ ಗುಣಮುಖರಾಗುತ್ತಾನೆ ಎಂದು ವೈದ್ಯರು ಹೇಳಿರುವುದಾಗಿ ನಾನು ಮಾಧ್ಯಮಗಳೊಂದಿಗೆ ನಿನ್ನೆ ಸುಳ್ಳು ಹೇಳಿದ್ದೆ. ಆದರೆ ಆತನ ಮೆದುಳಿಗೆ ಗಂಭೀರವಾದ ಏಟು ಬಿದ್ದಿದೆ. ಹಾಗಾಗಿ ವೈದ್ಯರು ತೀವ್ರವಾಗಿ ನಿಗವಹಿಸುತ್ತಿದ್ದಾರೆ. ಆತನ ಸ್ಥಿತಿ ತುಂಬಾ ಗಂಭೀರವಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಅವನು ವಾಪಸ್ ಬರುತ್ತಾನೆ ಎಂದು ಕಾಯುತ್ತಿದ್ದೇವೆ. ಆದರೆ ಈ ಪರಿಸ್ಥಿಗೆ ತಲುಪುತ್ತಾನೆ ಎಂದು ಯೋಚಿಸಿರಲಿಲ್ಲ ಎಂದು ಹೇಳಿ ಭಾವುಕರಾದರು. ಇದನ್ನೂ ಓದಿ: ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯವಾಗಿದೆ – ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

    ಎಲ್ಲರಿಗೂ ಒಳ್ಳೆಯದಾಗಲಿ ಎಂದು ತುಂಬಾ ಕಷ್ಟಪಡುತ್ತಿದ್ದ. ಬರೀ ಸಿನಿಮಾ ಅಂತ ಅಲ್ಲ ಎಲ್ಲಾ ವಿಷಯಗಳಲ್ಲಿ ಕಷ್ಟ ಪಟ್ಟು ಮೇಲೆ ಬಂದಿದ್ದ. ಮನೆಯಲ್ಲಿ ಕೆಲಸ ಮಾಡಿ ಕಷ್ಟಪಟ್ಟು ಓದಿ ಹಲವು ಸಮಸ್ಯೆಗಳನ್ನು ಅನುಭವಿಸಿ ಮುಂದೆ ಬಂದಂತಹ ಹುಡುಗ ಅವನು. ಇದೀಗ ಈ ರೀತಿ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ನಾವು ಹತ್ತು ಹದಿನೈದು ದಿನಗಳ ಕಾಲ ಒಟ್ಟಿಗೆ ಇದ್ದೇವು. ಇದೀಗ ಅವನನ್ನು ಈ ಪರಿಸ್ಥಿತಿಯಲ್ಲಿ ನೋಡಲು ನನ್ನಿಂದ ಆಗುತ್ತಿಲ್ಲ. ನಾವಿಬ್ಬರು ಜೊತೆಗೆ ಕೊರೊನಾ ಕಷ್ಟಕಾಲದಲ್ಲಿ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದೆವು, ಇದೀಗ ಅವನ ಈ ಸ್ಥಿತಿಯಿಂದ ಆ ನೋವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ದು:ಖ ತೋಡಿಕೊಂಡರು.

  • ಕೇಂದ್ರ ಸರ್ಕಾರಕ್ಕೆ ನಟ ನೀನಾಸಂ ಸತೀಶ್ ಟಾಂಗ್

    ಕೇಂದ್ರ ಸರ್ಕಾರಕ್ಕೆ ನಟ ನೀನಾಸಂ ಸತೀಶ್ ಟಾಂಗ್

    ಬೆಂಗಳೂರು: ನಟ ಸತೀಶ್ ನೀನಾಸಂ ನೆರೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ.

    ನೀನಾಸಂ ಸತೀಶ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ನಾನು ನಿಮ್ಮ ಯಾವ ಪಕ್ಷದವನೂ ಅಲ್ಲ, ನನ್ನದು ಮನುಷ್ಯ ಪಕ್ಷ, ಬಡವರ ಪಕ್ಷ, ಹಸಿದವರ ಪಕ್ಷ. ಯಾವ ಸರ್ಕಾರವಾದರೂ ಕೇಳುವ ಹಕ್ಕು ನನಗಿದೆ. ನೆರೆ ಸಂತ್ರಸ್ತರ ವಿಚಾರದಲ್ಲಿ ನಿಮ್ಮ ಪಕ್ಷಗಳನ್ನು ಬದಿಗಿಟ್ಟು, ಅವರ ಕಷ್ಟಗಳಿಗೆ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡುವ ಬುದ್ಧಿ ಬರಲಿ. ದಯಮಾಡಿ ನನ್ನನ್ನು ನಿಮ್ಮ ಯಾವ ಪಕ್ಷಕ್ಕೂ ಸೇರಿಸಬೇಡಿ ಪ್ಲೀಸ್” ಎಂದು ಟ್ವೀಟ್ ಮಾಡಿದ್ದಾರೆ.

    ಇತ್ತೀಚೆಗೆ ಚಿಂತಕ ಸೂಲಿಬೆಲೆ ಅವರು ಕೂಡ ತಮ್ಮ ಯುವಲೈವ್ ವೆಬ್‍ಸೈಟಿನಲ್ಲಿ ಬರಹ ಪ್ರಕಟಿಸಿದ್ದರು. ಅದರಲ್ಲಿ, ನಿಜ ಹೇಳಬೇಕೆಂದರೆ ಪ್ರವಾಹದ ನಂತರವೇ ಬೆಂಗಳೂರಿನ ಸಂಸದ ಅನಂತ್ ಕುಮಾರ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿರುವುದು. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ದನಿಯನ್ನು ಪ್ರಭಾವಿಯಾಗಿ ಮಂಡಿಸಬಲ್ಲ ಸಂಸದರೇ ಇಲ್ಲವೇನೋ ಎನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

    ಕರ್ನಾಟಕದ ಒಳಿತಿಗಾಗಿ ಕೇಂದ್ರದೊಂದಿಗೆ ಗುದ್ದಾಡಿ ಬೇಕಾದ್ದನ್ನು ಪಡೆದುಕೊಂಡು ಬರಬಲ್ಲ ಸಾಮರ್ಥ್ಯ ಯಾವ ಸಂಸದರಿಗೂ ಇಲ್ಲವಲ್ಲ ಎಂಬುದೇ ದುಃಖದ ಸಂಗತಿ. ಮತ್ತು ಇವರು ಒಬ್ಬಿಬ್ಬರಲ್ಲ, ಬರೋಬ್ಬರಿ 25 ಜನ. ಇನ್ನುಳಿದ ಮೂವರಲ್ಲಿ ಒಬ್ಬರು ಈಗ ತಾನೇ ಸಂಸತ್ತು ಪ್ರವೇಶಿಸಿರುವ ಸುಮಲತಾ ಆದರೆ ಪ್ರಜ್ವಲ್ ಅವರದ್ದೂ ಹೆಚ್ಚು ಕಡಿಮೆ ಅದೇ ಸ್ಥಾನ. ಇವರುಗಳಿಗೆ ಸಂಸತ್ತಿನ ಕಾರ್ಯವೈಖರಿಯ ಅರಿವಾಗುವುದರೊಳಗೆ ಅದರ ಕಾರ್ಯ ಅವಧಿ ಮುಗಿದು ಹೋಗಿರುತ್ತದೆ. ಕಾಂಗ್ರೆಸ್ಸಿನ ಒಬ್ಬೇ ಒಬ್ಬ ಸಂಸದ ಅಣ್ಣನನ್ನು ಬಿಡಿಸಿಕೊಂಡು ಬರುವುದರಲ್ಲಿ ತಿಪ್ಪರಲಾಗ ಹಾಕುತ್ತಿದ್ದಾರೆ. ಹೀಗಾಗಿ ಕರ್ನಾಟಕದ ಪರವಾಗಿ, ಕನ್ನಡದ ಪರವಾಗಿ ಸಮರ್ಥವಾಗಿ ದನಿ ಎತ್ತಬಲ್ಲವರೇ ಇಲ್ಲವಾಗಿಬಿಟ್ಟಿದ್ದಾರೆ ಎಂದು ಹೇಳಿದ್ದರು.

  • ಕಾಲಿವುಡ್, ಬಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ ನೀನಾಸಂ ಸತೀಶ್

    ಕಾಲಿವುಡ್, ಬಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ ನೀನಾಸಂ ಸತೀಶ್

    ಬೆಂಗಳೂರು: ಬ್ಯೂಟಿಫುಲ್ ಮನಸ್ಸುಗಳು ಚಿತ್ರದ ಯಶಸ್ಸಿನ ನಂತರ ಸತೀಶ್ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಾಲುಸಾಲಾಗಿ ಅವರ ಚಿತ್ರ ಸೆಟ್ಟರಲಿದೆ. ಇದರ ನಡುವೆ ನೀನಾಸಂ ಸತೀಶ್ ಕಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ.

    ಸತೀಶ್ ನಟಿಸುತ್ತಿರುವ ಆಕ್ಷನ್ ಚಿತ್ರ ‘ಟೈಗರ್ ಗಲ್ಲಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅಯೋಗ್ಯ ಮತ್ತು ಗೋದ್ರ ಚಿತ್ರಗಳು ಸೆಟ್ಟೀರಿವೆ. ಇದರ ಮಧ್ಯೆ ನೀನಾಸಂ ಸತೀಶ್ ಕಾಲಿವುಡ್‍ಗೆ ಎಂಟ್ರಿ ಕೊಡುವ ವಿಷಯವನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ 2018ರಲ್ಲಿ ಬಾಲಿವುಡ್‍ಗೂ ಎಂಟ್ರಿ ಕೊಡಲಿದ್ದಾರೆ.

    ಸತೀಶ್ ಕಾಲಿವುಡ್‍ನಲ್ಲಿ ನಟಿಸುವುದು ಕನ್ಫರ್ಮ್ ಆಗಿದೆ. ಆದರೆ ಚಿತ್ರದ ನಿರ್ದೇಶಕರು ಯಾರು ಮತ್ತು ಯಾವ ಕಲಾವಿದರು ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬುದನ್ನು ಗುಟ್ಟಾಗಿಯೇ ಇಟ್ಟಿದ್ದಾರೆ. ಅಕ್ಟೋಬರ್ ಮೂರನೇ ವಾರದಲ್ಲಿ ಸತೀಶ್ ಅವರ ತಮಿಳು ಚಿತ್ರದ ಫಸ್ಟ್ ಲುಕ್ ಹೊರ ಬೀಳಲಿದ್ದು, ನವೆಂಬರ್ ಮೊದಲ ವಾರದಲ್ಲಿ ಶೂಟಿಂಗ್ ಶುರುವಾಗಲಿದೆ.

    ತಮಿಳು ಚಿತ್ರದ ಟೈಟಲ್ ಇನ್ನೂ ಅಂತಿಮಗೊಂಡಿಲ್ಲ. ಸೋಮವಾರ ಚೆನ್ನೈಗೆ ಹೋಗುತ್ತಿದ್ದೇನೆ. ಶೀಘ್ರದಲ್ಲೇ ಎಲ್ಲವೂ ಫೈನಲ್ ಆಗಲಿದೆ ಹಾಗೂ ಈ ಚಿತ್ರವು ದೊಡ್ಡ ಬ್ಯಾನರ್‍ವೊಂದರಲ್ಲಿ ಸಿದ್ಧವಾಗಲಿದೆ. ಸದ್ಯ ಈ ಬಗ್ಗೆ ಹೆಚ್ಚೇನೂ ಮಾಹಿತಿ ನೀಡುವಂತಿಲ್ಲ ಎಂದು ನೀನಾಸಂ ಹೇಳಿದ್ದಾರೆ.

    ಈ ಚಿತ್ರ ಕನ್ನಡ ಹಾಗೂ ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ಈ ಚಿತ್ರ ಮೂಡಿ ಬರುವುದಿಲ್ಲ. ತಮಿಳಿನಲ್ಲಷ್ಟೇ ಸಿದ್ಧವಾಗಲಿದ್ದು ಸತೀಶ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನೂ ಉಳಿದ ಪಾತ್ರಗಳ ಆಯ್ಕೆ ನಡೆಯುತಿದೆ. ಸತೀಶ್ ತಮ್ಮ ಫಸ್ಟ್ ಲುಕ್‍ಗಾಗಿ ಇನ್ನಷ್ಟು ಗಡ್ಡ ಬೆಳೆಸಬೇಕಿದೆ. ನಂತರ ಅದ್ಧೂರಿ ಕಾರ್ಯಕ್ರಮದ ಮೂಲಕವೇ ಫಸ್ಟ್ ಲುಕ್ ಲಾಂಚ್ ಮಾಡುವ ಪ್ಲಾನ್ ಚಿತ್ರತಂಡ ಮಾಡುತ್ತಿದೆ.