Tag: nipah virus

  • ರಾಜ್ಯದಲ್ಲಿ ನಿಫಾ ವೈರಸ್ ಭೀತಿ, ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್: ದಿನೇಶ್ ಗುಂಡೂರಾವ್

    ರಾಜ್ಯದಲ್ಲಿ ನಿಫಾ ವೈರಸ್ ಭೀತಿ, ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್: ದಿನೇಶ್ ಗುಂಡೂರಾವ್

    ಬೆಂಗಳೂರು: ನಿಫಾ ವೈರಸ್‌ಗೆ (Nipah Virus) ಬಲಿಯಾದ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ (Kerala) ಹೋಗಿದ್ದಾರೆ. ಕೇರಳಕ್ಕೆ ಹೋಗಿರುವ 25 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

    Nipah Virus

    ನಿಫಾ ವೈರಸ್‌ಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ ಆಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ವೈರಸ್ ಭೀತಿ ಎದುರಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇರಳ ಮೂಲದ ವಿದ್ಯಾರ್ಥಿ ನಿಫಾ ವೈರಸ್‌ಗೆ ಬಲಿಯಾಗಿದ್ದಾರೆ. ಸೈಕಾಲಜಿ ಸ್ಟೂಡೆಂಟ್ ಆಗಿದ್ದ ಅವರ ಅಂತ್ಯ ಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ ಹೋಗಿದ್ದರು. ಅವರ ಮೇಲೂ ನಿಗಾ ವಹಿಸಲಾಗಿದೆ. ಕೇರಳದಲ್ಲೂ ಇದರ ಬಗ್ಗೆ ನಿಗಾ ವಹಿಸಲಾಗಿದೆ. ಯರ‍್ಯಾರು ಕೇರಳಕ್ಕೆ ಹೋಗಿದ್ದರೋ ಅವರ ಮೇಲೆ ನಿಗಾ ವಹಿಸಲಾಗುತ್ತಿದೆ. 25 ಜನರನ್ನು ಟ್ರಾಕ್ ಮಾಡಲಾಗುತ್ತಿದೆ. ಅವರಿಗೆ ಯಾವ್ಯಾವ ಲಕ್ಷಣಗಳಿವೆ ಎಂದು ನೋಡುತ್ತಿದ್ದೇವೆ. ಮಂಗಳವಾರ ಅಥವಾ ಬುಧವಾರ ರಿಪೋರ್ಟ್ ಬರಬಹುದು ಎಂದರು. ಇದನ್ನೂ ಓದಿ: ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ಇನ್ನೂ ಮುನಿರತ್ನ ಅರೆಸ್ಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುನಿರತ್ನ ವಿಚಾರವೇ ಬೇರೆ, ಚೆನ್ನಾರೆಡ್ಡಿ ವಿಚಾರವೇ ಬೇರೆ. ಅತ್ಯಂತ ಕೆಳಮಟ್ಟದ ನಿಂದಿಸುವ ಕೆಲಸ ಅವರು ಮಾಡಿದ್ದಾರೆ. ಮಹಿಳೆಯವರ ಬಗ್ಗೆ ಇರುವ ಧೋರಣೆ ತೋರಿಸಿದ್ದಾರೆ. ಅಂಥವರ ಬಗ್ಗೆ ಕ್ರಮ ಆಗಬೇಕಾಗುತ್ತದೆ. ಚೆನ್ನಾರೆಡ್ಡಿ ಅವರ ವಿಚಾರವೇ ಬೇರೆ. ಇನ್ನು ಸಬ್ ಇನ್ಸ್ಪೆಕ್ಟರ್ ಪರುಶುರಾಮ್ ಹೃದಯಾಘಾತದಿಂದ ತೀರಿಕೊಂಡಿದ್ದಾರೆ. ಆದರೆ ಬಿಜೆಪಿ ಅವರು ದಾರಿ ತಪ್ಪಿಸುತ್ತಿದ್ದಾರೆ. ಹಾಗೆ ಮಾಡಬಾರದು. ಯಾಕಂದ್ರೆ ಇದು ಪಕ್ಷದ ವಿಚಾರ ಅಲ್ಲ. ಇದು ಜಾತಿ ನಿಂದನೆ, ಹೆದರಿಸೋದು, ಮಹಿಳೆಯರನ್ನ ನಿಂದಿಸೋದು ಇವೆಲ್ಲ ಇದೆ. ಬಿಜೆಪಿಯವರು ಇದರ ಪರ ಮಾತನಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

  • ಬೆಂಗಳೂರಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ – ರಾಜ್ಯದಲ್ಲಿ ಆತಂಕ

    ಬೆಂಗಳೂರಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ – ರಾಜ್ಯದಲ್ಲಿ ಆತಂಕ

    ಬೆಂಗಳೂರು/ತಿರುವನಂತಪುರಂ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ರಾಜ್ಯಕ್ಕೆ ಈಗ ನಿಫಾ ವೈರಸ್ (Nipah Virus) ಭೀತಿ ಎದುರಾಗಿದೆ.

    24 ವರ್ಷದ ವಿದ್ಯಾರ್ಥಿ ನಿಫಾದಿಂದ ಸಾವನ್ನಪ್ಪಿದ್ದಾನೆ. ಈತ ಕೇರಳದ (Kerala) ಮಲಪುರಂ ಮೂಲದ ವಿದ್ಯಾರ್ಥಿ. ಕಾಲಿಗೆ ಪೆಟ್ಟು ಬಿದ್ದ ಕಾರಣ ಆ.25 ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದ. ಇದನ್ನೂ ಓದಿ: ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

    ಸೆ.5 ರಂದು ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡಿತ್ತು. ಸಮೀಪದ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ. ಸೆ.6 ರಂದು ವಾಂತಿಯಾಗಿತ್ತು. ಬಳಿಕ ಆತನ ಆರೋಗ್ಯ ಗಂಭೀರ ಸ್ಥಿತಿ ತಲುಪಿತು. ತಕ್ಷಣ ಯುವಕನನ್ನು ಎಂಇಎಸ್ ಪ್ರೈವೇಟ್ ಮೆಡಿಕಲ್ ಕಾಲೇಜಿನ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು.

    ವಿದ್ಯಾರ್ಥಿಗೆ ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ ಇತ್ತು. ಆದರೆ ಸೆ.8 ರಂದು ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ವಿದ್ಯಾರ್ಥಿ ರಕ್ತ ಹಾಗೂ ಸಿರಂ ಸ್ಯಾಂಪಲ್‌ನಲ್ಲಿ ನಿಫಾ ಪಾಸಿಟಿವ್ ದೃಢಪಟ್ಟಿತ್ತು. ಇದನ್ನೂ ಓದಿ: ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನ

    ಈ ವಿದ್ಯಾರ್ಥಿ 151 ಜನರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ. ಈತ ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸ್ನೇಹಿತರೊಂದಿಗೆ ಪ್ರಯಾಣ ಬೆಳೆಸಿದ್ದ. ಅವರ ವಿವರಗಳನ್ನು ಸಂಗ್ರಹಿಸಲಾಗಿದೆ. ಅವರೊಂದಿಗೆ ನೇರ ಸಂಪರ್ಕಕ್ಕೆ ಬಂದವರನ್ನು ಪ್ರತ್ಯೇಕಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವರು ತಿಳಿಸಿದ್ದಾರೆ.

  • ನಿಫಾ ವೈರಸ್‌ಗೆ ತುತ್ತಾಗಿದ್ದ ರೋಗಿಗೆ ಚಿಕಿತ್ಸೆ – ಕೋಮಾಗೆ ಜಾರಿದ ದಕ್ಷಿಣ ಕನ್ನಡ ಮೂಲದ ನರ್ಸ್‌

    ನಿಫಾ ವೈರಸ್‌ಗೆ ತುತ್ತಾಗಿದ್ದ ರೋಗಿಗೆ ಚಿಕಿತ್ಸೆ – ಕೋಮಾಗೆ ಜಾರಿದ ದಕ್ಷಿಣ ಕನ್ನಡ ಮೂಲದ ನರ್ಸ್‌

    ಮಂಗಳೂರು: ನಿಫಾ ವೈರಸ್ (Nipah Virus) ಬಾಧಿಸಿದ್ದ ಕೇರಳದ ರೋಗಿಗೆ ಆರೈಕೆ ನೀಡಿದ್ದ ದಕ್ಷಿಣ ಕನ್ನಡ (Dakshina Kannada) ಮೂಲದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ 8 ತಿಂಗಳಿನಿಂದ‌ ಕೋಮಾದಲ್ಲಿದ್ದಾರೆ‌‌.

    ದಕ್ಷಿಣ ಕನ್ನಡ ಜಿಲ್ಲೆಯ ಕಡಬ (Kadaba) ತಾಲೂಕಿನ ಮರ್ದಾಳ ಬಳಿಯ ತುಂಬ್ಯ ನಿವಾಸಿ 24 ವರ್ಷದ ಟಿಟ್ಟೋ ತೋಮಸ್ ಇದೀಗ ಕೋಮಾಗೆ (Coma) ಜಾರಿದ್ದಾರೆ.

    ಬಿಎಸ್‌ಸಿ ನರ್ಸಿಂಗ್ ಪದವೀಧರರಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್‌ ಆ್ಯಂಡ್ ರಿಸರ್ವ್ ಸೆಂಟರ್ ನಲ್ಲಿ‌ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ನನಗೆ ಮನೆಯೂಟ ಬೇಕು – ಇಂದು ಹೈಕೋರ್ಟ್‌ನಲ್ಲಿ ದರ್ಶನ್‌ ಅರ್ಜಿ ವಿಚಾರಣೆ

    2023 ರ ಸೆಪ್ಟೆಂಬರ್ ನಲ್ಲಿ ನಿಫಾ ವೈರಸ್ ಬಾಧಿತ ರೋಗಿಯ ಆರೈಕೆ ಮಾಡಿದ್ದರು. ಬಳಿಕ ಕ್ವಾರಂಟೈನ್‌ನಲ್ಲಿದ್ದ ತೋಮಸ್ ಗೆ ಎರಡು ತಿಂಗಳ‌ ಬಳಿಕ ವಿಪರೀತ ತಲೆನೋವು ಆರಂಭವಾಗಿದ್ದು, ಸ್ಕ್ಯಾನಿಂಗ್ ನಡೆಸಿದಾಗ ಮಿದುಳಿನ‌ ಸ್ಟ್ರೋಕ್ ಆಗಿರೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮೈದುಂಬಿ ಹರಿಯುತ್ತಿರುವ ಘಟಪ್ರಭಾ – ಮುದೋಳ್‌ನ ಮಿರ್ಜಿ ಗ್ರಾಮ ಸಂಪೂರ್ಣ ಜಲಾವೃತ

    ಚಿಕಿತ್ಸೆಗೆ ಸ್ಪಂದಿಸದೇ ಮಾರನೇ ದಿನವೇ ಕೋಮಕ್ಕೆ ಹೋಗಿದ್ದರು. ಕಳೆದ ಎಂಟು ತಿಂಗಳಿನಿಂದ‌ ಆಸ್ಪತ್ರೆಯ ಆಡಳಿತ‌ ಮಡಳಿಯ ವತಿಯಿಂದಲೇ‌ ಚಿಕಿತ್ಸೆ ನೀಡುತ್ತಿದ್ದು,ಸುಮಾರು 40‌ ಲಕ್ಷ ರೂ. ಖರ್ಚನ್ನು ಭರಿಸಿದೆ. ಆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಆಗಿಲ್ಲ. ಹೀಗಾಗಿ ಬೇರೆ ಆಸ್ಪತ್ರೆಗೆ ಹೆಚ್ಚಿನ ದಾಖಲಿಸಿ ಚಿಕಿತ್ಸೆ ನೀಡಲು ಆಗ್ರಹಿಸಿ ಕುಟುಂಬಸ್ಥರು ಕೇರಳ ಸರ್ಕಾರದ ಮೊರೆ ಹೋಗಿದ್ದಾರೆ.

  • ಕೇರಳದಲ್ಲಿ ನಿಫಾ ವೈರಸ್‍ಗೆ ಮೊದಲ ಬಲಿ – ಹೆಚ್ಚಿದ ಆತಂಕ

    ಕೇರಳದಲ್ಲಿ ನಿಫಾ ವೈರಸ್‍ಗೆ ಮೊದಲ ಬಲಿ – ಹೆಚ್ಚಿದ ಆತಂಕ

    ತಿರುವನಂತಪುರಂ: ಕೇರಳದ (Kerala) ಮಲಪ್ಪುರಂನಲ್ಲಿ ನಿಫಾ ವೈರಸ್ (Nipah Virus) ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

    ಸೋಂಕಿಗೆ ತುತ್ತಾಗಿದ್ದ ಬಾಲಕನಿಗೆ ಭಾನುವಾರ ಬೆಳಗ್ಗೆ 10:50ಕ್ಕೆ ಪಾಂಡಿಕ್ಕಾಡ್‍ನ ತೀವ್ರ (Cardiac Arrest) ಹೃದಯ ಸ್ತಂಭನವಾಗಿತ್ತು. ಬಳಿಕ ವೆಂಟಿಲೇಟರ್ ಸಹಾಯದಿಂದ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವಿಗೀಡಾಗಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? – ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು

    ಅಂತಾರಾಷ್ಟ್ರೀಯ ಶಿಷ್ಟಾಚಾರದ ಪ್ರಕಾರ ಬಾಲಕನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದವರೊಂದಿಗೆ ಚರ್ಚಿಸಿದ ನಂತರ ಅಂತ್ಯಕ್ರಿಯೆಯ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ನಿಫಾ ಜಾಗೃತಿಗಾಗಿ ಸಾರ್ವಜನಿಕ ಸುರಕ್ಷತೆಗಾಗಿ ಮಲಪ್ಪುರಂನಲ್ಲಿರುವ ಸರ್ಕಾರಿ ತಂಗುದಾಣದಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿಬರ್ಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್‌ನಿಂದ ವೈಭವದ ಗುರುಪೂರ್ಣಿಮೆ ಆಚರಣೆ – ಹೂವು, ಹಣ್ಣುಗಳಿಂದ ಅದ್ಧೂರಿ ಅಲಂಕಾರ!

  • ಕರ್ನಾಟಕದ ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಪತ್ತೆ – 14ರ ಬಾಲಕನಿಗೆ ಸೋಂಕು

    ಕರ್ನಾಟಕದ ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಪತ್ತೆ – 14ರ ಬಾಲಕನಿಗೆ ಸೋಂಕು

    ತಿರುವನಂತಪುರಂ: ಕೇರಳದ (Kerala) ಮಲಪ್ಪುರಂನಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ (Nipah Virus) ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಮೂಡಿಸಿದೆ.

    ಸಂಭವನೀಯ ವೈರಸ್ ಹರಡುವಿಕೆಯ ಬಗ್ಗೆ ರಾಜ್ಯವು ಜಾಗರೂಕವಾಗಿದೆ. ನಿಪಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇದನ್ನೂ ಓದಿ: NEET-UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ – ಮಾಸ್ಟರ್‌ ಮೈಂಡ್‌, ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಅರೆಸ್ಟ್‌

    ಸಾರ್ವಜನಿಕ ಸುರಕ್ಷತೆಯನ್ನು ಖಾತರಿಪಡಿಸುವುದು, ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುವುದು ಮತ್ತು ನಿಯಂತ್ರಣದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಲಪ್ಪುರಂನಲ್ಲಿರುವ ಸರ್ಕಾರಿ ತಂಗುದಾಣದಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

    ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಇದನ್ನೂ ಓದಿ: 24 ಗಂಟೆ ವಿದ್ಯುತ್‌ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್‌ ಕಿ ಗ್ಯಾರಂಟಿʼ ಘೋಷಣೆ!

    ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.

    ಬಾಲಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಕೋಝಿಕ್ಕೋಡ್‌ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

  • 39 ವರ್ಷದ ವ್ಯಕ್ತಿಗೆ ಪಾಸಿಟಿವ್- ಕೇರಳದಲ್ಲಿ ನಿಫಾ ಪ್ರಕರಣ 6ಕ್ಕೆ ಏರಿಕೆ

    39 ವರ್ಷದ ವ್ಯಕ್ತಿಗೆ ಪಾಸಿಟಿವ್- ಕೇರಳದಲ್ಲಿ ನಿಫಾ ಪ್ರಕರಣ 6ಕ್ಕೆ ಏರಿಕೆ

    ತಿರುವನಂತಪುರಂ: ಕೇರಳದ ಕೋಝಿಕೋಡ್ (Kozikode) ಜಿಲ್ಲೆಯಲ್ಲಿ 39 ವರ್ಷದ ವ್ಯಕ್ತಿಯಲ್ಲಿ ನಿಫಾ ಸೋಂಕು (Nipah Virus) ದೃಢವಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ 6ಕ್ಕೆ ಏರಿಕೆಯಾಗಿದೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ನಿಫಾ ವೈರಸ್ ಹಾಗೂ ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ವೈರಸ್‍ಗೆ ಈ ವರ್ಷ ಕೇರಳದಲ್ಲಿ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ 2018 ರಿಂದ ಇದುವರೆಗೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಅದರ ವರದಿ ಬಂದಿದ್ದು, ವ್ಯಕ್ತಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಆಸ್ಪತ್ರೆಯಲ್ಲಿ ನಿಗಾವಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

    ನಿಫಾ ವೈರಸ್ ಪ್ರಕರಣ ಕೇರಳದಲ್ಲಿ (Kerala) ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಐಸಿಎಂಆರ್, ಸೋಂಕಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಮೊನೊಕ್ಲೋನಲ್ ಆಂಟಿಬಾಡಿಯನ್ನು ಕೇರಳಕ್ಕೆ ಕಳುಹಿಸಿದೆ. ಆದರೂ ಅದರ ಪರಿಣಾಮಕಾರಿತ್ವವನ್ನು ಪ್ರಾಯೋಗಿಕವಾಗಿ ಇನ್ನೂ ಸಾಬೀತುಪಡಿಸಲಾಗಿಲ್ಲ.

    ನಿಫಾ ವೈರಸ್ ಗೆ ಎರಡು ಸಾವುಗಳು ಸೇರಿದಂತೆ ಐದು ಪ್ರಕರಣಗಳು ವರದಿಯಾದ ನಂತರ ಪುಣೆಯಲ್ಲಿರುವ ಐಸಿಎಂಆರ್‍ನ ರಾಷ್ಟ್ರೀಯ ವೈರಾಲಜಿ ಸಂಸ್ಥೆಯು ತನ್ನ ಮೊಬೈಲ್ ಬಿಎಸ್‍ಎಲ್ -3 (ಬಯೋಸೇಫ್ಟಿ ಲೆವೆಲ್ -3) ಪ್ರಯೋಗಾಲಯವನ್ನು ಕೋಝಿಕ್ಕೋಡ್‍ಗೆ ನಿಫಾ ವೈರಸ್‍ನ ಮಾದರಿಗಳನ್ನು ಪರೀಕ್ಷಿಸಲು ಕಳುಹಿಸಿದೆ.

    ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ಆರ್ ಎಂಎಲ್ ಆಸ್ಪತ್ರೆ ಮತ್ತು ನಿಮ್ಹಾನ್ಸ್‍ನ ತಜ್ಞರನ್ನೊಳಗೊಂಡ ಐದು ಸದಸ್ಯರ ಕೇಂದ್ರ ತಂಡವು ಕೇರಳದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ನಿಫಾ ಸೋಂಕಿನ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಹಾಯ ಮಾಡಲು ಬೀಡುಬಿಟ್ಟಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್‌ ಭೀತಿ – ಕೋಝಿಕ್ಕೋಡ್‌ನ ಮದರಸಾಗಳಿಗೂ ರಜೆ ವಿಸ್ತರಣೆ

    ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್‌ ಭೀತಿ – ಕೋಝಿಕ್ಕೋಡ್‌ನ ಮದರಸಾಗಳಿಗೂ ರಜೆ ವಿಸ್ತರಣೆ

    ತಿರುವನಂತಪುರಂ: ಇಬ್ಬರನ್ನು ನಿಫಾ ವೈರಸ್‌ (Nipah Virus) ಹರಡುವಿಕೆ ತಡೆಗಟ್ಟಲು ಕೇರಳ ಸರ್ಕಾರ (Kerala Government) ಕೋಝಿಕೋಡ್‌ನ ಶಾಲಾ-ಕಾಲೇಜುಗಳಿಗೆ ನೀಡಿರುವ ರಜೆಯನ್ನ ಸೆಪ್ಟೆಂಬರ್‌ 16ರ ವರೆಗೆ ವಿಸ್ತರಣೆ ಮಾಡಿದೆ.

    ನಿಫಾ ವೈರಸ್‌ಗೆ ಇಬ್ಬರು ಸಾವನ್ನಪ್ಪಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಸೆಪ್ಟೆಂಬರ್‌ 14 ಮತ್ತು 15 ರಂದು ರಜೆ ಘೋಷಣೆ ಮಾಡಿತ್ತು. ಕೋಝಿಕೋಡ್‌ (Kozhikode) ಜಿಲ್ಲೆಯ ಅಂಗನವಾಡಿಗಳು, ಮದರಸಾಗಳು, ಟ್ಯೂಷನ್‌ ಸೆಂಟರ್‌ಗಳು ಸೇರಿದಂತೆ ವೃತ್ತಿಪರ ಕಾಲೇಜುಗಳೂ ಸೇರಿದಂತೆ ಎಲ್ಲ ರೀತಿಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ ವಿಶ್ವವಿದ್ಯಾಲಯ ಮತ್ತು ಪಬ್ಲಿಕ್ ಸರ್ವಿಸ್ ಕಮಿಷನ್ (PSC) ಪರೀಕ್ಷಾ ವೇಳಾಪಟ್ಟಿಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಶಿಕ್ಷಣ ಸಂಸ್ಥೆಗಳು ಆನ್‌ಲೈನ್‌ ತರಗತಿಗಳನ್ನ ಏರ್ಪಡಿಸುವಂತೆ ಒತ್ತಾಯಿಸಿವೆ.

    ಈ ದಿನಗಳು ಸಂಭ್ರಮಾಚರಣೆಯ ದಿನಗಳಾಗಬಾರದು, ಅನಗತ್ಯ ಪ್ರಯಾಣ ಮತ್ತು ಸಮಾರಂಭ ಆಯೋಜನೆ ಮಾಡುವುದನ್ನ ತಪ್ಪಿಸಬೇಕು ಅಂತಲೂ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ದೆಹಲಿಯಲ್ಲೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಚರ್ಚೆ ನಡೆಸಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    ಕೋಯಿಕೋಡ್‌ನ (Kozhikode) ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

    ಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ (Kerala) ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಸೌಮ್ಯ ಲಕ್ಷಣ ಹೊಂದಿರುವ ರೋಗಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಫಾ ವೈರಸ್ ಭೀತಿ – ರಾಜ್ಯದ ಗಡಿಯಲ್ಲಿ ಹೈ ಅಲರ್ಟ್, ಕಟ್ಟುನಿಟ್ಟಿನ ತಪಾಸಣೆಗೆ ಸರ್ಕಾರ ಸೂಚನೆ

    ನಿಫಾ ವೈರಸ್ ಭೀತಿ – ರಾಜ್ಯದ ಗಡಿಯಲ್ಲಿ ಹೈ ಅಲರ್ಟ್, ಕಟ್ಟುನಿಟ್ಟಿನ ತಪಾಸಣೆಗೆ ಸರ್ಕಾರ ಸೂಚನೆ

    ಚಾಮರಾಜನಗರ: ಕೇರಳದಲ್ಲಿ ನಿಫಾ ವೈರಸ್‌ಗೆ (Nipah Virus In Kerala) ಇಬ್ಬರು ಮೃತಪಟ್ಟ ನಂತರ ರಾಜ್ಯ ಸರ್ಕಾರ ಫುಲ್‌ ಅಲರ್ಟ್‌ ಆಗಿದೆ. ರಾಜ್ಯದ ಕೇರಳ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲು ಸೂಚಿಸಿದೆ.

    ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಯೊಬ್ಬರಿಗೂ ಥರ್ಮಲ್‌ ಸ್ಕ್ಯಾನಿಂಗ್‌ ನಡೆಸಲಾಗುತ್ತಿದೆ. ಗೂಡ್ಸ್‌ ವಾಹನಗಳಿಗೆ ಸ್ಯಾನಿಟೈಸ್‌ ಮಾಡಲಾಗುತ್ತಿದೆ. ತಪಾಸಣೆ ಬಳಿಕವೇ ವಾಹನಗಳನ್ನ ರಾಜ್ಯ ಪ್ರವೇಶಕ್ಕೆ ಬಿಡಲಾಗುತ್ತಿದೆ. ಜೊತೆಗೆ ರೋಗ ಲಕ್ಷಣ ಉಳ್ಳವರ ಟ್ರಾವೆಲ್‌ ಹಿಸ್ಟರಿಯನ್ನೂ ಕಲೆಹಾಕಲಾಗುತ್ತಿದೆ.

    ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ನಿಗಾ ಇಡಲಾಗಿದ್ದು, ಗುರುವಾರದಿಂದ ಗುಂಡ್ಲುಪೇಟೆ ಕಾಡಂಚಿನ ಗ್ರಾಮಗಳಲ್ಲಿ ಮನೆ-ಮನೆ ಸರ್ವೇ ನಡೆಸಿ ರೋಗ ಲಕ್ಷಣಗಳು ಕಂಡು ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಗಗನ್, ಧನಂಜಯ್, ಚೈತ್ರಾ ಕುಂದಾಪುರ ಪರಿಚಯವಾಗಿದ್ದು ಹೇಗೆ?: ಡೀಲ್ ಕೇಸ್‍ನ ಸಂಪೂರ್ಣ ಕಥೆ ಬಿಚ್ಚಿಟ್ಟ ಚನ್ನನಾಯ್ಕ್

    ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ 5 ಹಾಸಿಗೆಗಳ ವಿಶೇಷ ಐಸೊಲೇಷನ್‌ ವಾರ್ಡ್‌ ಅನ್ನು ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: MLA ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ಡೀಲ್ – ಪ್ರಕರಣದ 5ನೇ ಆರೋಪಿ ಅರೆಸ್ಟ್‌ 

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಫಾ ವೈರಸ್ ಹರಡುವ ಭೀತಿ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್

    ನಿಫಾ ವೈರಸ್ ಹರಡುವ ಭೀತಿ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್

    ಮಡಿಕೇರಿ: ಕೇರಳ ರಾಜ್ಯದ ಕೊಝಿಕ್ಕೋಡ್ (Kozikode) ಜಿಲ್ಲೆಯಲ್ಲಿ ಇಬ್ಬರು ನಿಫಾ (Nipah virus) ವೈರಾಣುವಿನ ಜ್ವರದಿಂದ ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆ ಕೇರಳ ಗಡಿಭಾಗವನ್ನು ಹೊಂದಿಕೊಂಡಂತೆ ಇರುವ ಕೊಡಗು (Kodagu) ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಸೋಂಕಿತರು ಪತ್ತೆಯಾದರೆ ಅವರಿಗೆ ವಿಶೇಷವಾಗಿ ಹಾಗೂ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಇಲ್ಲಿನ ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ವಿಶೇಷ ವಾರ್ಡ್ ತೆರೆಯಲು ಸಿದ್ಧತೆಗಳನ್ನು ಕೈಗೊಂಡಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

    ಹೌದು. ಕೇರಳ (Kerala) ರಾಜ್ಯಕ್ಕೆ ಹೊಂದಿಕೊಂಡು ಇರುವ ಕೊಡಗು ಜಿಲ್ಲೆಯಲ್ಲೂ ನಿಫಾ ವೈರಸ್ ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅರೋಗ್ಯ ಇಲಾಖೆಯ ಸಿಬ್ಬಂದಿ ಅಧಿಕಾರಿಗಳು ಹೈ ಅಲರ್ಟ್ ಅಗಿದ್ದಾರೆ. ಅಲ್ಲದೇ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಯಾವುದಾದರೂ ಪ್ರಕರಣ ಕಂಡು ಬಂದಲ್ಲಿ ಕೂಡಲೇ ಗಮನಕ್ಕೆ ತರುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ ಸತೀಶ್‍ಕುಮಾರ್ ಮನವಿ ಮಾಡಿದ್ದಾರೆ. ಅಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಜ್ವರಪೀಡಿತರ ಸಮೀಕ್ಷೆ ನಡೆಸಲೂ ನಿರ್ಧರಿಸಲಾಗಿದೆ. ಜ್ವರಪೀಡಿತರ ಮೇಲೆ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಇದನ್ನೂ ಓದಿ: 7 ತಿಂಗಳ ಬಳಿಕ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ.ರೂಪಾ ನಿಯೋಜನೆ

    ಇನ್ನೂ ಈ ನಿಫಾ ವೈರಸ್ ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾ ಅಸ್ಪತ್ರೆ ಹಾಗೂ ಜಿಲ್ಲೆಯ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕವಾದ ವಾರ್ಡ್‍ಗಳು ಹಾಗೂ ತುರ್ತಾಗಿ ಏಳು ಬೇಡ್‍ಗಳ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಅಲ್ಲದೇ ಹವಾಮಾನ ವೈಪರೀತ್ಯಗಳಿಂದ ಕೊಡಗು ಜಿಲ್ಲೆಯಲ್ಲಿ ಈಗಾಗಲೇ ದಿನವೊಂದಕ್ಕೆ ಸುಮಾರು 150 ರಿಂದ 200 ಜನರು ಫೀವರ್ ನಿಂದ ಬಳಲುತ್ತಿದ್ದು. ಇದೀಗ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅತ್ಯಂತ ತೀವ್ರವಾಗಿ ಜ್ವರದಿಂದ ಬಳಲುತ್ತಿರುವ ರೋಗಿಗಳ ಮೇಲೆಯೂ ನಿಗಾ ವಹಿಸಲಾಗಿದೆ. ಅಷ್ಟೇ ಅಲ್ಲದೆ ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ಮೇಲೆಯೂ ನಿಗಾ ಇರಿಸಲಾಗಿದ್ದು, ಕೇರಳದಿಂದ ಬಂದಿರುವ ವ್ಯಕ್ತಿಗಳ ಟ್ರಾವೆಲ್ ಹಿಸ್ಟರಿಯನ್ನು ಪರಿಶೀಲನೆ ಮಾಡಲು ಅರೋಗ್ಯ ಇಲಾಖೆ ಮುಂದಾಗಿದೆ.

    ಒಟ್ಟಿನಲ್ಲಿ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಜಿಲ್ಲಾಡಳಿತ ಹಾಗೂ ಅರೋಗ್ಯ ಇಲಾಖೆ ಕಟ್ಟುನಿಟ್ಟಾಗಿ ಗಡಿಭಾಗದಲ್ಲಿ ಹೈ ಅಲರ್ಟ್ ಅಗಿದು ಅಂತರ್ ರಾಜ್ಯದ ಚೆಕ್ ಪೋಸ್ಟ್ ಗಳಿಂದ ಬರುವ ಕೇರಳದವರ ಮೇಲೆ ನಿಗಾ ವಹಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    ತಿರುವನಂತಪುರಂ: ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಬುಧವಾರ ಮತ್ತೊಂದು ನಿಫಾ ವೈರಸ್ (Nipah Virus) ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

    ಕೋಯಿಕೋಡ್‌ನ (Kozhikode) ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ- ಸೇನಾಧಿಕಾರಿಗಳಿಬ್ಬರು ಹುತಾತ್ಮ

    ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ (Kerala) ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಜಿ20 ಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ್ದ ಚೀನಾ – ತಪಾಸಣೆಗೆ ನಿರಾಕರಿಸಿ ಹೋಟೆಲ್‌ನಲ್ಲಿ ಹೈಡ್ರಾಮಾ

    ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರಿಗೆ ಅನ್ಯಾಯ: ತ.ನಾಡು ಸಚಿವ

    ಕಂಟೈನ್‌ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್‌ಲೈನ್ ತರತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]