Tag: nipha virus

  • ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್‌  ದೃಢ

    ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್‌ ದೃಢ

    ತಿರುವನಂತಪುರಂ:  ಕೋಝಿಕ್ಕೋಡ್‌ನಲ್ಲಿ (Kozhikode) ಮೃತಪಟ್ಟ ಇಬ್ಬರಲ್ಲಿ ಓರ್ವ ವ್ಯಕ್ತಿಗೆ ನಿಫಾ ವೈರಸ್‌ (Nipah Virus) ತಗುಲಿರುವುದು ದೃಢಪಟ್ಟಿದೆ.

    ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಿಫಾ ಸೋಂಕಿನಿಂದಲೇ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ವ್ಯಕ್ತಿ ಸೋಮವಾರ ಸಾವನ್ನಪ್ಪಿದ್ದರು. ನಿಫಾ ವೈರಸ್‌ ಸೋಂಕು ತಗುಲಿರುವ ಶಂಕೆಯ ಹಿನ್ನೆಲೆಯಲ್ಲಿ ಮೃತನ ಸ್ಯಾಂಪಲ್‌ ಅನ್ನು ಟೆಸ್ಟ್‌ಗೆ ಪುಣೆಗೆ ಕಳುಹಿಸಲಾಗಿತ್ತು. ಸದ್ಯ ಅದರ ರಿಪೋರ್ಟ್‌ ಬಂದಿದ್ದು, ನಿಫಾ ವೈರಸ್‌ನಿಂದಲೇ ಮೃತಪಟ್ಟಿರುವುದು ಬಯಲಾಗಿದೆ. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಸ್ಯಾಂಪಲ್ ಫಲಿತಾಂಶ ಬಂದ ತಕ್ಷಣ ದೆಹಲಿಯಿಂದ ಉನ್ನತ ಅಧಿಕಾರಿಗಳ ಕೇಂದ್ರ ತಂಡ ಕೋಯಿಕ್ಕೋಡ್‌ಗೆ ಆಗಮಿಸಲಿದೆ.

    ಇಬ್ಬರ ಸಾವು: ಕೋಝಿಕ್ಕೋಡ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು. ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

    ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಝಿಕ್ಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮನವಿ ಮಾಡಿದ್ದಾರೆ.

    ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

    ವೈರಸ್ ಹೇಗೆ ಹರಡುತ್ತದೆ?: ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನವುದರಿಂದ ವೈರಸ್‌ ಹರಡುವ ಸಾಧ್ಯತೆಗಳಿವೆ. ಅಲ್ಲದೆ ಇದೊಂದು ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

    ನಿಫಾ ವೈರಸ್ ಲಕ್ಷಣಗಳೇನು?
    * ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
    * ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
    * ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
    * ಬಳಿಕ ಪ್ರಜ್ಞಾಹೀನರಾಗುತ್ತಾರೆ
    * ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
    * ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿಲ್ಲ: ಸುಧಾಕರ್

    ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿಲ್ಲ: ಸುಧಾಕರ್

    ಬೆಂಗಳೂರು: ನಮ್ಮ ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿಲ್ಲ. ನಿಫಾ ಸೋಂಕಿಗೆ ಲಸಿಕೆಯೂ ಇಲ್ಲ, ಚಿಕಿತ್ಸೆಯೂ ಇಲ್ಲ. ರೋಗದ ಲಕ್ಷಣಗಳನ್ನು ಆಧಾರಿಸಿ ಚಿಕಿತ್ಸೆ ಕೊಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ಕೇರಳದಲ್ಲಿ ನಿಫಾಗೆ ಮಗುವೊಂದು ಮೃತಪಟ್ಟಿದ್ದು, ಅಲ್ಲಿನ ಸರ್ಕಾರ ಸೋಂಕಿತರ ಮೇಲೆ ತೀವ್ರ ನಿಗಾ ಇಟ್ಟಿದೆ. ಕೇರಳ ಸರ್ಕಾರ ನಿಫಾ ತಡೆಗೆ ಕೈಗೊಂಡ ಕ್ರಮಗಳು ನಮಗೆ ಸಮಾಧಾನ ತಂದಿದೆ ಎಂದರು. ಇದನ್ನೂ ಓದಿ: ಜಮೀರ್ ಕೂಡ  ತಾಲಿಬಾನ್ ಥರಾ: ಸೊಗಡು ಶಿವಣ್ಣ

    ಕೇರದಲ್ಲಿ ಮೂರನೇ ಸಲ ನಿಫಾ ಬಂದಿದ್ದು, ಕೇರಳದಲ್ಲಿ ಕಾಡು ಹೆಚ್ಚಿರೋದ್ರಿಂದ ಸೋಂಕು ಕಾಣಿಸಿಕೊಂಡಿರಬಹುದು. ಪ್ರಾಣಿಗಳು ತಿಂದು ಬಿಟ್ಟ ಹಣ್ಣನ್ನು ಮನುಷ್ಯ ತಿಂದರೆ ನಿಫಾ ಬರುತ್ತದೆ ಎಂದು ಸುಧಾಕರ್ ತಿಳಿಸಿದರು.

    ನಿಫಾ ಕುರಿತು ರಾಜ್ಯದ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನಷ್ಟು ಗಂಭೀರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಿಫಾ ಬಗ್ಗೆ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ಮಾಡುತ್ತೇನೆ. ರಾಜ್ಯದಲ್ಲಿ ನಿಫಾ ಬರದಂತೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು  ಇದನ್ನೂ ಓದಿ: ಖಾಸಗಿ ಬಸ್‍ಗಳಲ್ಲಿ ಪ್ರಯಾಣಿಕರ ಸುಲಿಗೆ – ಹಬ್ಬದ ಸೀಸನ್‍ನಲ್ಲಿ ಸಾರಿಗೆ ದಂಧೆ ಬಯಲು

    ಗಣೇಶೋತ್ಸವಕ್ಕೆ ಬಿಬಿಎಂಪಿ ಮೂರು ದಿನದ ನಿಯಮ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ನಿಯಮದ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

    1-5 ನೇ ತರಗತಿಗಳ ಶಾಲೆ ಆರಂಭ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಈಗಷ್ಟೇ 6-8 ತರಗತಿಗಳು ಆರಂಭವಾಗಿವೆ. ಎಷ್ಟೋ ಪೋಷಕರು ಇನ್ನೂ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿಲ್ಲ. ಇನ್ನೂ ಸ್ವಲ್ಪ ಸಮಯ ಕಾದು ನೋಡೋಣ ಎಂದರು.

  • ಒಟ್ಟಾಗಿ ಹೋಗೋಣವೆಂದು ಹೆಚ್‍ಡಿಕೆಗೆ ಹೇಳಿದ್ದೇನೆ: ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ

    ಒಟ್ಟಾಗಿ ಹೋಗೋಣವೆಂದು ಹೆಚ್‍ಡಿಕೆಗೆ ಹೇಳಿದ್ದೇನೆ: ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ

    – ದೆಹಲಿಯಲ್ಲಿ ನಾಯಕರ ಭೇಟಿಯಾಗ್ತೇನೆ
    – ನಿಫಾ ವೈರಸ್ ಬಗ್ಗೆ ರಾಜ್ಯದಲ್ಲೂ ಬಿಗಿ ಕ್ರಮ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಜೊತೆ ನಿನ್ನೆ ವಿವರವಾಗಿ ಚರ್ಚೆ ಮಾಡಿಲ್ಲ. ಆದರೆ ಒಟ್ಟಾಗಿ ಹೋಗೋಣವೆಂದು ಹೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡಿ ಹೇಳ್ತೀನಿ ಅಂತ ಹೆಚ್‍ಡಿಕೆ ಹೇಳಿದ್ದಾರೆ. ಪಾಲಿಕೆಯಲ್ಲಿ ಒಂದಾಗಿ ಕೆಲಸ ಮಾಡಲು ಅವರು ಒಲವು ತೋರಿಸಿದ್ದಾರೆ. ಬಹುತೇಕ ಬಿಜೆಪಿ-ಜೆಡಿಎಸ್ ಕಲಬುರಗಿ ಪಾಲಿಕೆಯಲ್ಲಿ ಸೇರಿ ಮೆಜಾರಿಟಿ ಮಾಡ್ತೇವೆ ಎಂದು ಹೇಳುವ ಮೂಲಕ ಮೈತ್ರಿ ಖಚಿತ ಎಂದು ಸ್ಪಷ್ಟವಾಗಿ ಹೇಳಿದರು.

    ಇದೇ ವೇಳೆ ದೆಹಲಿಗೆ ತೆರಳುವ ಬಗ್ಗೆ ಪ್ರತಿಕ್ರಿಯಿಸಿ, ಇಂದು ನಾನು ದೆಹಲಿಗೆ ಹೋಗ್ತಿದ್ದೀನಿ. ಅಲ್ಲಿ ನಾಲ್ಕಾರು ಜನ ಕೇಂದ್ರ ಸಚಿವರ ಭೇಟಿ ಮಾಡುತ್ತೇನೆ. ಗಡ್ಕರಿ ಭೇಟಿ, ಹಣಕಾಸು ಸಚಿವರ ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ತಿಳಿಸಿದರು. ಇತ್ತ ಸಿಎಂ ದೆಹಲಿಗೆ ತೆರಳುವ ಹಿನ್ನೆಲೆಯಲ್ಲಿ ಆರ್ ಟಿ ನಗರ ನಿವಾಸದಲ್ಲಿ ಸಚಿವಾಕಾಂಕ್ಷಿ ಶಾಸಕ ಎಂಪಿ ಕುಮಾರಸ್ವಾಮಿ, ಕುಡಚಿ ಶಾಸಕ ರಾಜೀವ್, ಶಿವರಾಜ್ ಪಾಟೀಲ್ ಸಿಎಂ ಅವರನ್ನು ಭೇಟಿ ಮಾಡಿದರು. ಇದನ್ನೂ ಓದಿ: ಕೊರೊನಾ ಬೆನ್ನಲ್ಲೇ 11 ಮಂದಿಯಲ್ಲಿ ನಿಫಾ ರೋಗ ಲಕ್ಷಣ- 3 ಜಿಲ್ಲೆಗಳಲ್ಲಿ ಹೈ ಅಲರ್ಟ್

    ಕೇರಳದಲ್ಲಿ ನಿಫಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾವು ಕೇರಳ ಗಡಿ ಸೀಲ್ ಮಾಡಿದಾಗ ಲಸಿಕೆ, ಟೆಸ್ಟಿಂಗ್ ಗೆ ಕ್ರಮ ಕೈಗೊಂಡಿದ್ದೆವು. ಈಗ ಇನ್ನಷ್ಟು ಬಿಗಿ ಕ್ರಮ ಕೈಗೊಳ್ತೇವೆ. ನಿಫಾ ವೈರಸ್ ಬಗ್ಗೆ ತಜ್ಞರಿಂದ ಸಂಪೂರ್ಣ ಮಾಹಿತಿಯನ್ನು ಕೇಳಿದ್ದೇನೆ. ನಿಫಾ ವೈರಸ್ ಹೇಗೆ ಹಬ್ಬುತ್ತೆ, ಏನೆಲ್ಲ ಮುಂಜಾಗ್ರತೆ ಕ್ರಮ ತಗೋಬೇಕು ಅಂತ ಸಲಹೆ ಕೇಳಿದ್ದೇನೆ. ನಿಫಾ ವೈರಸ್ ಬಗ್ಗೆ ನಿಗಾ ವಹಿಸಿದ್ದೇವೆ. ವೈರಸ್ ತಡೆಗೆ ಇನ್ನಷ್ಟು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಇದನ್ನೂ ಓದಿ: ‘ಬಾವಲಿ ಜ್ವರ’ – ರೋಗ ಲಕ್ಷಣ ಏನು, ತಡೆಗಟ್ಟೋದು ಹೇಗೆ?

    ನಗರದಲ್ಲಿ ರಸ್ತೆ ಗುಂಡಿಗೆ ವಿಕಲಚೇತನ ಬಲಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಮೊನ್ನೆ ಸಭೆಯಲ್ಲಿ ಸೂಚಿಸಲಾಗಿದೆ. ಸದ್ಯ ಮಳೆ ಇದೆ, ಮಳೆ ಕಮ್ಮಿಯಾದ ಮೇಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ವಾರ್ ಫೂಟ್ ನಲ್ಲಿ ಮಾಡ್ತೇವೆ ಎಂದು ಹೇಳಿದರು.

  • ಕೇರಳ ಬಳಿಕ ರಾಜ್ಯದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ

    ಕೇರಳ ಬಳಿಕ ರಾಜ್ಯದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ

    ಬೆಂಗಳೂರು: ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

    ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್ ಹೇಗೆ ಹರಡುತ್ತದೆ?

    ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಬೇಕು. ಜೊತೆಗೆ ತಮಿಳುನಾಡಿನ ಊಟಿ, ನೀಲಗಿರಿ, ಕನ್ಯಾಕುಮಾರಿ, ಕೊಯಮುತ್ತೂರು, ದಿಂಡಿಗಲ್, ತಿರುವನ್ವೇಲಿ, ತೇಣಿಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಕೇರಳಕ್ಕೆ ತೆರಳುವವರಿಗೆ ಮಾಸ್ಕ್ ಧರಿಸಿ ತೆರಳಲು ಸೂಚಿಸಲಾಗಿದೆ.

    ಒಟ್ಟಿನಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಸಿದ್ದು, ಎರ್ನಾಕುಳಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿದೆ. ಹಾಗಾಗಿ ರಾಜ್ಯದ ಗಡಿಭಾಗದಲ್ಲಿ ಭಾರೀ ನಿಗಾ ವಹಿಸಲಾಗಿದೆ.

  • ಅನಾರೋಗ್ಯದಿಂದ ಚಿಕ್ಕೋಡಿಯ ಯೋಧ ನಿಧನ-ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ಅನಾರೋಗ್ಯದಿಂದ ಚಿಕ್ಕೋಡಿಯ ಯೋಧ ನಿಧನ-ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ಚಿಕ್ಕೋಡಿ: ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಹುಕ್ಕೇರಿ ತಾಲೂಕಿನ ಶಿರಢಾಣ ಗ್ರಾಮದ ಯೋಧರೊಬ್ಬರು ಅಸ್ಸಾಂನಲ್ಲಿ ಮೃತಪಟ್ಟಿದ್ದಾರೆ.

    ಸುನೀಲ್ ಕುಮಾರ್ ಶೆಟ್ಟಿಮನಿ (34) ಮೃತಪಟ್ಟ ಯೋಧ. ಅಸ್ಸಾಂನಲ್ಲಿ ಬಾರ್ಡರ್ ರೋಡ್ ಟಾಸ್ಕ್ ಫೋರ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸುನೀಲ್ ಕುಮಾರ್ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಯೋಧ ಸಾವನ್ನಪ್ಪಿದ್ದಾರೆ.

    ಕಳೆದ 15 ವರ್ಷದಿಂದ ಬಾರ್ಡರ್ ರೋಡ್ ಟಾಸ್ಕ್ ಫೋರ್ಸ್ ನಲ್ಲಿ ಯೋಧ ಸುನೀಲ್ ಕುಮಾರ್ ಸೇವೆ ಸಲ್ಲಿಸುತ್ತಿದ್ದರು. ಅರುಣಾಚಲ ಪ್ರದೇಶದಿಂದ ಸ್ವ ಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ತರಲಾಗುತ್ತಿದ್ದು, ಮಂಗಳವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.

  • 11 ಸಾವಿರ ಜನರ ಬಲಿ ಪಡೆದಿದ್ದ ಎಬೋಲಾ ಮತ್ತೆ ಬಂತು – ಈ ತಿಂಗಳಲ್ಲಿ ಸತ್ತಿದ್ದು 27 ಮಂದಿ!

    11 ಸಾವಿರ ಜನರ ಬಲಿ ಪಡೆದಿದ್ದ ಎಬೋಲಾ ಮತ್ತೆ ಬಂತು – ಈ ತಿಂಗಳಲ್ಲಿ ಸತ್ತಿದ್ದು 27 ಮಂದಿ!

    ಕಾಂಗೋ/ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್ ಪತ್ತೆಯಾದ ಬೆನ್ನಲ್ಲೇ, 2014ರಲ್ಲಿ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಎಬೋಲಾ ಆಫ್ರಿಕಾದಲ್ಲಿ ಮತ್ತೆ ಕಾಣಿಸಿಕೊಂಡಿದೆ. ಮಧ್ಯ ಆಫ್ರಿಕಾದ ಕಾಂಗೋದಲ್ಲಿ ಈ ತಿಂಗಳಲ್ಲೇ ಒಟ್ಟು 27 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದಾರೆ. 2014ರಲ್ಲಿ ಎಬೋಲಾ ವೈರಸ್‍ನಿಂದಾಗಿ 11310 ಜನರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಬೋಲಾವನ್ನು ಜಾಗತಿಕ ಮಹಾಮಾರಿ ಎಂದು ಘೋಷಿಸಿತ್ತು.

    ಈ ಬಾರಿ ಈಗಾಗಲೇ 58 ಎಬೋಲಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ ನಡುವೆ ಎಬೋಲಾ ಪತ್ತೆಯಾಗಿ ಎಂಬಂಡ್ಕ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಆಸ್ಪತ್ರೆಯಿಂದ ಪರಾರಿಯಾಗಿದ್ದರು. ಇವರನ್ನು ಪತ್ತೆ ಹಚ್ಚಿ ಹಿಡಿದರೂ ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆಯ ಪ್ರತ್ಯೇಕ ತಂಡ ಇವರ ಅಂತ್ಯಸಂಸ್ಕಾರ ನಡೆಸಿದೆ. 15 ಲಕ್ಷ ಜನಸಂಖ್ಯೆ ಇರುವ ಎಂಬಂಡ್ಕ ನಗರದಲ್ಲಿ ರೋಗ ಇನ್ನಷ್ಟು ಉಲ್ಬಣವಾಗುವ ಸಾಧ್ಯತೆಯಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಎಬೋಲಾ ಎಂದರೇನು?: 1976ರಲ್ಲಿ ಕಾಂಗೋದ ಎಬೋಲಾ ನದಿ ತೀರದ ಪ್ರದೇಶದಲ್ಲಿ ಪತ್ತೆಯಾದ ವೈರಾಣು. ಹೀಗಾಗಿ ಇದಕ್ಕೆ ಎಬೋಲಾ ಎಂಬ ಹೆಸರು ಬಂತು. ಪೀಟರ್ ಪೈಯೋಟ್ ಎಂಬವರು ಎಬೋಲಾ ವೈರಸನ್ನು ಪತ್ತೆ ಹಚ್ಚಿದ್ದರು. ಈವರೆಗಿನ ವೈರಾಣುಗಳ ಪೈಕಿ ಅತ್ಯಂತ ಅಪಾಯಕಾರಿಯಾಗಿರುವ ವೈರಸ್. 1976ರಲ್ಲಿ ಈ ಮಹಾಮಾರಿ 400ಕ್ಕೂ ಹೆಚ್ಚು ಜನರನ್ನು ಬಲಿ ಪಡೆಯಿತು. ಇದು ಕೋತಿ, ಗೊರಿಲ್ಲಾ, ಚಿಂಪಾಂಜಿ, ಬಾವಲಿಗಳ ಮೂಲಕ ಹರಡುವ ರೋಗ.

    ಎಬೋಲಾ ಲಕ್ಷಣಗಳೇನು?: ತಲೆನೋವು, ಗಂಟಲು ಕೆರೆತ, ಸ್ನಾಯುಗಳಲ್ಲಿ ನೋವು, ಜ್ವರ, ಹೊಟ್ಟೆನೋವು, ದೇಹದಲ್ಲಿ ಗುಳ್ಳೆಗಳು ಕಾಣಿಸುತ್ತದೆ. ಮುಂದಿನ ಹಂತದಲ್ಲಿ ದೇಹದ ಒಳಭಾಗ ಸೇರಿ ಕಿವಿ, ಮೂಗಿನ ಮೂಲಕ ರಕ್ತ ಸೋರಿಕೆಯಾಗುತ್ತದೆ. ಕಾಯಿಲೆ ಪೀಡಿತರ ನೇರಸಂಪರ್ಕದಿಂದ ಇದು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ರೋಗಿಯ ರಕ್ತ, ಬೆವರು, ವಾಂತಿ, ಮೂತ್ರ, ವೀರ್ಯದ ಸಂಪರ್ಕದಿಂದ ಕಾಯಿಲೆ ಹರಡುತ್ತದೆ.

    ಎಬೋಲಾ ಹರಡಿದ 10 ಜನರಲ್ಲಿ 9 ಜನರ ಸಾವು ಬಹುತೇಕ ಖಚಿತ ಎಂಬ ಕಾರಣಕ್ಕೆ ಎಬೋಲಾ ಅಪಾಯಕಾರಿ ವೈರಸ್ ಎಂದೇ ಕುಖ್ಯಾತಿ. ಈ ವೈರಸ್ ರೋಗಿಯ ಶರೀರ ಪ್ರವೇಶಿಸಿದ 2ರಿಂದ 21 ದಿನದ ಒಳಗಡೆ ರೋಗಲಕ್ಷಣಗಳು ಕಾಣಿಸುತ್ತವೆ. ಇದಾಗಿ 16 ದಿನದೊಳಗೆ ಸಾವು ಸಂಭವಿಸುವ ಸಾಧ್ಯತೆಯೂ ಇದೆ. ಒಂದು ಬಾರಿ ಈ ವೈರಸ್ ಪತ್ತೆಯಾದರೆ ರೋಗಿಯನ್ನು ಬೇರೆಯವರ ಸಂಪರ್ಕಕ್ಕೆ ಬಿಡದಿರುವುದೇ ಈ ವೈರಸ್ ಹರಡದಿರುವಂತೆ ಮಾಡುವ ಸುಲಭೋಪಾಯ.

    ರೋಗಿ ಸತ್ತರೂ ಸಾಯಲ್ಲ ವೈರಾಣು!: ಎಬೋಲಾ ರೋಗದಿಂದ ಸಾವನ್ನಪ್ಪಿದ ವ್ಯಕ್ತಿಯ ದೇಹದಲ್ಲಿ ಎಬೋಲಾ ವೈರಸ್ ಸುಮಾರು 7 ದಿನಗಳ ಕಾಲ ಜೀವಂತವಾಗಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಯನ ವರದಿಯೇ ಹೇಳಿದೆ. ಸತ್ತ ವ್ಯಕ್ತಿಯನ್ನು ಮುಟ್ಟುವುದರಿಂದಲೂ ಈ ರೋಗ ಹರಡುವ ಸಾಧ್ಯತೆಯಿದೆ. ಎಬೋಲಾದಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹ ಭಾರೀ ಅಪಾಯಕಾರಿ. ಮೃತದೇಹವನ್ನು ಸುಟ್ಟರೂ ಎಬೋಲಾ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ.

    ಎಬೋಲಾ ಹರಡುವಿಕೆ ಹೇಗೆ?: ಐದು ಬೇರೆ ಬೇರೆ ವಿಧದ ವೈರಸ್‍ಗಳು ಈ ಕಾಯಿಲೆಯನ್ನು ಹರಡುತ್ತವೆ. ಈ ಎಲ್ಲಾ ವಿಧದ ವೈರಸ್‍ಗಳು ಮನುಷ್ಯರಲ್ಲಿಯೂ ಈ ಕಾಯಿಲೆಯನ್ನು ಹರಡಲು ಸಮರ್ಥವಾಗಿವೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಗಳ ಪ್ರಕಾರ ಬಾಧಿತ ಪ್ರಾಣಿಯ ರಕ್ತ, ದೇಹದ ಸ್ರಾವಗಳು, ಅಂಗಾಂಗಗಳು ಅಥವಾ ದೇಹದ ಇತರ ದ್ರವಾಂಶಗಳ ಮೂಲಕ ಆರೋಗ್ಯವಂತ ವ್ಯಕ್ತಿಗೆ ಸೋಂಕು ಬಾಧಿಸಬಹುದು.

    ಮನುಷ್ಯರಲ್ಲಿ ಹರಡುವಿಕೆ ಹೇಗೆ?
    – ಬಾಧಿತ ವ್ಯಕ್ತಿಯ ರಕ್ತ, ದೇಹದ – ಸ್ರಾವಗಳು, ಅಂಗಾಂಗಗಳು ಅಥವಾ ದೇಹದ ಇತರ ದ್ರವಾಂಶಗಳ ಸಂಪರ್ಕದ ಮೂಲಕ ಹರಡಬಹುದು.
    – ಸೋಂಕು ಬಾಧಿತರ ದೇಹ ದ್ರವಾಂಶಗಳ ಸಂಪರ್ಕದಿಂದ ಆರೋಗ್ಯ ಕಾರ್ಯಕರ್ತರಿಗೆ ಈ ಕಾಯಿಲೆಯು ಹರಡಬಹುದು.
    – ಸೋಂಕು ಬಾಧಿತ ಪ್ರಾಣಿಯ ಮಾಂಸದ ನಿರ್ವಹಣೆಯ ಮೂಲಕ ಕಾಯಿಲೆಯು ಹರಡಬಹುದು.
    – ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಯ ದೇಹ ದ್ರವದ ಸಂಪರ್ಕದಿಂದ ಕಾಯಿಲೆಯು ಹರಡಬಹುದು.

    ಯಾರಿಗೆ ಅಪಾಯಕಾರಿ?: ಇದು ಸೋಂಕು ಕಾಯಿಲೆ ಆಗಿರುವ ಕಾರಣ, ಅಲೆಮಾರಿಗಳಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುವ ಮತ್ತು ಅವರ ಮೂಲಕ ಹರಡುವ ಸಾಧ್ಯತೆಗಳು ಹೆಚ್ಚು. ಇದು ಆಸ್ಪತ್ರೆಯ ಮೂಲಕವೂ ಹರಡಬಹುದಾದ ಸೋಂಕು ಎನ್ನುವುದು ಕುತೂಹಲದ ವಿಚಾರ. ಹಾಗಾಗಿ, ಈ ಕಾಯಿಲೆಯು ಸಾಮಾನ್ಯವಾಗಿ ಆಸ್ಪತ್ರೆಯ ಸಿಬ್ಬಂದಿಗೂ ಹರಡುವ ಸಾಧ್ಯತೆಗಳು ಇವೆ. ಇಷ್ಟೇ ಅಲ್ಲದೆ, ಈ ಸೋಂಕು ಬಾಧಿಸಬಹುದಾದ ಇನ್ನಿತರ ವರ್ಗದ ವ್ಯಕ್ತಿಗಳು ಅಂದರೆ, ಮಧುಮೇಹ ಕಾಯಿಲೆ ಇರುವವರು, ರೋಗ ಪ್ರತಿರೋಧಕ ಶಕ್ತಿ ಕಡಿಮೆ ಇರುವ ಜನರು, ಮೂತ್ರಪಿಂಡ ಮತ್ತು ಪಿತ್ತಜನಕಾಂಗ ವೈಫಲ್ಯ ಇರುವ ರೋಗಿಗಳು, ಮತ್ತು ಎಚ್‍ಐವಿ ಬಾಧಿತ ರೋಗಿಗಳು.