Tag: Niranjan Hiremath

  • ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ

    ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ

    ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣವನ್ನು ಫಾಸ್ಟ್‌ಟ್ರ್ಯಾಕ್ ಕೋರ್ಟ್‌ಗೆ (Fast Track Court) ಕೊಡುವ ಅವಶ್ಯಕತೆ ಇಲ್ಲ ಎಂಬ ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿಕೆಗೆ ನೇಹಾ ಹಿರೇಮಠ (Neha Hiremath) ತಂದೆ, ಕಾಂಗ್ರೆಸ್ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ (Niranjan Hiremath) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಈ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಗೃಹ ಸಚಿವ ಪರಮೇಶ್ವರ್ ಸಿಎಂ ಮಾತಿಗೂ ಬೆಲೆ ನೀಡುತ್ತಿಲ್ಲ. ಅವರದ್ದೇ ಬೇರೆ ಮಾರ್ಗ ಎನ್ನುವಂತೆ ವರ್ತನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಆರೋಪಿಗೆ ರಕ್ಷಣೆ ನೀಡಲು ಕೆಲವರು ಮುಂದಾಗಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸರ್ಕಾರಿ ಕಾಲೇಜುಗಳಲ್ಲಿ ಓದುವ ಪಿಯುಸಿ ಮಕ್ಕಳಿಗೆ ಉಚಿತ ನೀಟ್ ತರಬೇತಿ: ಮಧು ಬಂಗಾರಪ್ಪ

    ಪ್ರಕರಣದ ಆರಂಭದಿಂದಲೂ ಕೆಲವು ಷಡ್ಯಂತ್ರ ನಡೆಸುತ್ತಿದ್ದು, ಈಗ ಅದನ್ನು ಮುಂದುವರಿಸುತ್ತಿದ್ದಾರೆ. ಇಷ್ಟು ದಿನ ನಮ್ಮ ಸರ್ಕಾರ ಅಂತ ಸುಮ್ಮನಿದ್ದೆ. ಈಗ ಕಾಯುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ. ನಾನು ಕೂಡ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕಳಂಕಿತ ಬಿಜೆಪಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ: ಎಂ‌.ಬಿ.ಪಾಟೀಲ್

  • ನೇಹಾ ಪೋಷಕರಿಗೆ ಮಾಳವಿಕಾ ಅವಿನಾಶ್ ಸಾಂತ್ವನ- ಸರ್ಕಾರದ ವಿರುದ್ಧ ನಟಿ ವಾಗ್ದಾಳಿ

    ನೇಹಾ ಪೋಷಕರಿಗೆ ಮಾಳವಿಕಾ ಅವಿನಾಶ್ ಸಾಂತ್ವನ- ಸರ್ಕಾರದ ವಿರುದ್ಧ ನಟಿ ವಾಗ್ದಾಳಿ

    ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನೇಹಾ ಮನೆಗೆ ‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಪ್ರಥಮ್, ಹರ್ಷಿಕಾ ಪೂಣಚ್ಚ ದಂಪತಿ ಭೇಟಿ ನೀಡಿದ ಬೆನ್ನಲ್ಲೇ ನಟಿ ಮಾಳವಿಕಾ ಅವಿನಾಶ್ (Malavika Avinash) ಕೂಡ ನೇಹಾ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

    ನೇಹಾ ಪೋಷಕರಾದ ನಿರಂಜನ್ ಹಿರೇಮಠ (Niranjan Hiremath)  ದಂಪತಿಯನ್ನು ಭೇಟಿಯಾಗಿ ಪುತ್ರಿ ನೇಹಾ ಹತ್ಯೆಯ ಕುರಿತು ಬೇಸರ ಹೊರಹಾಕಿದ್ದಾರೆ. ನೇಹಾ ಪೋಷಕರ ಬಳಿ ಘಟನೆಯ ಬಗ್ಗೆ ವಿಚಾರಿಸಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದೇಶವೇ ಬೆಚ್ಚಿಬೀಳುವಂತಹ ಘಟನೆ ನಮ್ಮ ಹುಬ್ಬಳ್ಳಿಯಲ್ಲಿ ನಡೆದಿದೆ. ಅತ್ಯಂತ ಕ್ರೂರ ರೀತಿಯಲ್ಲಿ ನೇಹಾ ಹಿರೇಮಠ ಕೊಲೆ ಆಗಿದೆ. ಅದು ಕೂಡ ಕಾಲೇಜು ಆವರಣದಲ್ಲಿಯೇ ನಡೆದಿದೆ ಎಂಬುದು ಆತಂಕವನ್ನು ಮೂಡಿಸಿದೆ. ಹೆಣ್ಣು ಮಕ್ಕಳಿಗೆ ಕಾಲೇಜು ಕ್ಯಾಂಪಸ್‌ನಲ್ಲೇ ರಕ್ಷಣೆ ಇಲ್ಲ ಎಂದರೆ ಅವರನ್ನು ಕಾಲೇಜಿಗೆ ಕಳಿಸಲು ಇನ್ಮುಂದೆ ಪೋಷಕರು ಹೇಗೆ ಧೈರ್ಯ ಮಾಡುತ್ತಾರೆ ಎಂದು ಮಾಳವಿಕಾ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಟಾಪ್‌ಲೆಸ್ ಆಗಿ ಕಾಣಿಸಿಕೊಂಡ ‘ಕೆಜಿಎಫ್’ ನಟಿ- ಸಖತ್ ಹಾಟ್ ಎಂದ ನೆಟ್ಟಿಗರು

    ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂದು ಹೇಳುತ್ತೇನೆ. ಆಗ ಮಾತ್ರ ನ್ಯಾಯ ಸಿಗುತ್ತದೆ. ರಾಜ್ಯ ಸರ್ಕಾರದ ಧೋರಣೆ ಏನು ಎಂಬುದನ್ನು ನೋವು ಈಗಾಗಲೇ ನೋಡಿದ್ದೇವೆ. ಮೊದಲು ಏನೂ ನಡೆದೇ ಇಲ್ಲವೇನೋ ಎಂಬ ರೀತಿಯಲ್ಲಿ ಮಾತನಾಡಿದ್ದರು. ಆಮೇಲೆ ಅವರವರ ವೈಯಕ್ತಿಕ ಸಮಸ್ಯೆ ಎಂದು ವಿಚಾರವನ್ನು ತಳ್ಳಿಹಾಕುವ ಪ್ರಯತ್ನ ಮಾಡಿದರು. ಓಲೈಕೆಗಾಗಿ ಮಾಡುವುದು ಎಷ್ಟು ಸರಿ ಎಂದಿದ್ದಾರೆ. ಅವರು ಮಾಡುವ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ ಎಂದಿದ್ದಾರೆ ಮಾಳವಿಕಾ ಖಡಕ್‌ ಆಗಿ ಮಾತನಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • 120 ದಿನದೊಳಗೆ ನ್ಯಾಯ ಕೊಡಿಸ್ತೀವಿ- ನೇಹಾ ತಂದೆಗೆ ಸಿಎಂ ಭರವಸೆ

    120 ದಿನದೊಳಗೆ ನ್ಯಾಯ ಕೊಡಿಸ್ತೀವಿ- ನೇಹಾ ತಂದೆಗೆ ಸಿಎಂ ಭರವಸೆ

    ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ಸಂಬಂಧ 120 ದಿನದೊಳಗೆ ನ್ಯಾಯ ಕೊಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಿರಂಜನ್‌ ಹಿರೇಮಠಗೆ ಭರವಸೆ ಕೊಟ್ಟಿದ್ದಾರೆ.

    ನೇಹಾ ಕುಟುಂಬವನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆಯಾಗಿದ್ದು, ಸಿಐಡಿಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ ಎಂದರು.

    ಘಟನೆಯನ್ನು ತ್ರೀವಾಗಿ ಖಂಡನೆ ಮಾಡುತ್ತೇನೆ. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಯಾವುದು ಅತ್ಯಂತ ಕಠಿಣ ಶಿಕ್ಷೆ ಇದೆ ಅದನ್ನು ಕೊಡಿಸುವ ಪ್ರಯತ್ನ ಮಾಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಾನು ಸಾಂತ್ವನ ಹೇಳಲು ಬಂದಿದ್ದೇನೆ. ರಾಜಕೀಯ ಮಾತನಾಡಲ್ಲ. ಅವರ ಕುಟುಂಬಕ್ಕೆ ರಕ್ಷಣೆ ನೀಡಲು ಸಿದ್ಧ. ಆರೋಪಿಗೆ ಕುಮ್ಮಕ್ಕು ನೀಡಿರುವ ಆ್ಯಂಗಲ್ ನಲ್ಲಿ ತನಿಖೆ ಮಾಡಲು ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

    ನೇಹಾ ಕುಟುಂಬದವರಿಗೆ ರಕ್ಷಣೆ ಬೇಕಿದ್ದರೆ ಕೊಡುತ್ತೇವೆ. ಸಿಐಡಿ ಅಧಿಕಾರಿಗಳು ತನಿಖೆ ಮಾಡ್ತಾರೆ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಾರೆ. ನಂತರ ಕೋರ್ಟ್ ನಲ್ಲಿ ಟ್ರಯಲ್ ನಡೆಯುತ್ತೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ಗರಿಷ್ಠ ಶಿಕ್ಷೆ ಆಗುತ್ತೆ. ಧೈರ್ಯವಾಗಿ ಇರಿ. 120 ದಿನದ ಒಳಗೆ ನ್ಯಾಯ ಕೊಡಿಸೋಣ ಎಂದು ಸಿಎಂ ಅವರು ನಿರಂಜನ್ ಹಿರೇಮಠ್ ಬೆನ್ನು ತಟ್ಟಿದರು.

    ಇದೇ ವೇಳೆ ಸಿಬಿಐ ಕೊಡಬೇಕು ಅನ್ನೋ ಬಿಜೆಪಿ ಬೇಡಿಕೆ ವಿಚಾರದ ಕುರಿತು ಮಾತನಾಡಿ, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವರು ಸಿಬಿಐಗೆ ಕೊಟ್ಟಿದ್ದಾರಾ..?. ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೆವು ಎಂದು ವಾಗ್ದಾಳಿ ನಡೆಸಿದರು.

  • ನೇಹಾ ಹಿರೇಮಠ ಮನೆಗೆ ಭೇಟಿ- ಪೋಷಕರಿಗೆ ಹರ್ಷಿಕಾ ದಂಪತಿ ಸಾಂತ್ವನ

    ನೇಹಾ ಹಿರೇಮಠ ಮನೆಗೆ ಭೇಟಿ- ಪೋಷಕರಿಗೆ ಹರ್ಷಿಕಾ ದಂಪತಿ ಸಾಂತ್ವನ

    ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನೇಹಾ ಪೋಷಕರಿಗೆ ಸಾಂತ್ವನ ಹೇಳಲು ‘ಬಿಗ್ ಬಾಸ್’ ಖ್ಯಾತಿಯ ಪ್ರಥಮ್ ಭೇಟಿ ಕೊಟ್ಟ ಬೆನ್ನಲ್ಲೇ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ (Bhuvan) ದಂಪತಿ ಭೇಟಿಯಾಗಿದ್ದಾರೆ.

    ನೇಹಾ ಮನೆಗೆ ಭೇಟಿ ನೀಡಿ ನಿರಂಜನ್ ಹಿರೇಮಠ (Niranjan Hiremath) ಮತ್ತು ಪತ್ನಿ ಗೀತಾರಿಗೆ ಹರ್ಷಿಕಾ ದಂಪತಿ ಸಾಂತ್ವನ ಹೇಳಿದ್ದಾರೆ. ನೇಹಾ ಕುರಿತು ವಿಚಾರಿಸಿದ್ದಾರೆ. ಹರ್ಷಿಕಾ ಮುಂದೆ ನೇಹಾ ಪೋಷಕರು ಭಾವುಕರಾಗಿದ್ದಾರೆ. ಇದನ್ನೂ ಓದಿ:ಲಂಡನ್ ಅಲ್ಲ, ಭಾರತದಲ್ಲೇ ಅಂಬಾನಿ ಪುತ್ರನ ವಿವಾಹ

    ಯಾರಿಗೂ ಯಾರನ್ನು ಕೊಲೆ ಮಾಡುವ ಹಕ್ಕಿಲ್ಲ. ಆಗಿರುವ ನೇಹಾ ಹತ್ಯೆಗೆ ನ್ಯಾಯ ಸಿಗಬೇಕು ಎಂದು ನೇಹಾ ಪೋಷಕರ ಬಳಿ ಹರ್ಷಿಕಾ ದಂಪತಿ ಮಾತನಾಡಿದ್ದಾರೆ. ಕೆಲ ಕಾಲ ನೇಹಾ ಬಗ್ಗೆ ಚರ್ಚಿಸಿದ್ದಾರೆ.

    ಇಂದು ಬೆಳಗ್ಗೆ (ಏ.24) ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಹರ್ಷಿಕಾ ದಂಪತಿ ಭೇಟಿ ನೀಡಿ ತಮ್ಮ ಮೇಲೆ ಆದ ಹಲ್ಲೆಯ ಬಗ್ಗೆ ವಿವರಿಸಿದ್ದಾರೆ. ಚುನಾವಣೆ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹರ್ಷಿಕಾ ದಂಪತಿಗೆ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ.

  • ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನೇಹಾ ತಂದೆ‌ ನಿರಂಜನ ಜೊತೆಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ Very Sorry ಎಂದು ಹೇಳಿದ್ದಾರೆ.

    ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೋನ್‌ ನಲ್ಲಿ ನಿರಂಜನ್ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ನಾವು ನಿಮ್ಮ ಜೊತೆ ಇದ್ದೇವೆ ಅಂತ ಭರವಸೆ ನೀಡಿದರು.

    ನನ್ನ ಕುಟುಂಬ ಹಾಗೂ ಎಲ್ಲಾ ಮಠಾಧೀಶರುಗಳ ಪರವಾಗಿ ನಾನು ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಕೈಗೊಂಡ ನಿರ್ಧಾರಕ್ಕೆ ಕಾನೂ ಸಚಿವರು, ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಪ್ರಕಣದ ಸಂಪೂರ್ಣ ತನಿಖೆ ಮಾಡಿ ನಮಗೆ ಬೇಗನೆ ನ್ಯಾಯ ಕೊಡಿಸಿ ಎಂದು ಇದೇ ವೇಳೆ ನಿರಂಜನ್‌ ಅವರು ಸಿಎಂ ಅವರನ್ನು ಕೇಳಿಕೊಂಡರು. ಈ ವೇಳೆ ಸಿಎಂ, ಆದಷ್ಟು ಬೇಗನೇ ನಿಮಗೆ ನ್ಯಾಯ ಕೊಡ್ತೀನಿ ಎಂದು ಹೇಳಿದರು. ಇದನ್ನೂ ಓದಿ: ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್‌.ಕೆ ಪಾಟೀಲ್‌

    ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ ನೇಹಾ ಹಿರೇಮಠ ಪ್ರಕರಣ ನ್ಯಾಯದಾನ ವಿಳಂಬ ಆಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ.ಇವತ್ತು ಉಚ್ಛ ನ್ಯಾಯಾಲಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತೆ ತಪ್ಪಿಗಸ್ತರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಬರ್ಬರ ಹತ್ಯೆ ಮತ್ತು ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು.ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ ಎಂದರು.

  • ಫಯಾಜ್‌, ಕುಟುಂಬದವರ ಒಳಸಂಚು ಇದೆ ಎನಿಸುತ್ತಿದೆ: ನೇಹಾ ತಂದೆ ಆರೋಪ

    ಫಯಾಜ್‌, ಕುಟುಂಬದವರ ಒಳಸಂಚು ಇದೆ ಎನಿಸುತ್ತಿದೆ: ನೇಹಾ ತಂದೆ ಆರೋಪ

    – ಫಯಾಜ್‌ ತಂದೆ-ತಾಯಿ, ಸಹೋದರಿ ವಿರುದ್ಧ ದೂರು ನೀಡುವೆ: ನಿರಂಜನ ಹಿರೇಮಠ

    ಹುಬ್ಬಳ್ಳಿ: ಆರೋಪಿ‌ ಫಯಾಜ್ (Fayaz) ತಂದೆ-ತಾಯಿ ಮತ್ತು ಸಹೋದರಿ ನೀಡುತ್ತಿರುವ ಹೇಳಿಕೆ ನೋಡಿದ್ರೆ ಅವರ ಕುಟುಂಬದಿಂದ ಫಯಾಜ್ ಕುಮ್ಮಕ್ಕು ಇದೆ. ಫಯಾಜ್ ಮತ್ತು ಕುಟುಂಬದವರ ಒಳಸಂಚು ಎನಿಸುತ್ತಿದೆ ಎಂದು ನೇಹಾ (Neha Hiremath) ತಂದೆ ನಿರಂಜನ ಹಿರೇಮಠ ಆರೋಪಿಸಿದ್ದಾರೆ.

    ನಮ್ಮ ಮಗಳ ಸಾವಿನ ದುಃಖದಲ್ಲಿ ನಾವು ಇದ್ದೇವೆ. ಆದರೆ ನಮ್ಮ ಕುಟುಂಬದ ಗೌರವ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಆರೋಪಿ‌ ಫಯಾಜ್ ತಂದೆ-ತಾಯಿ ಮತ್ತು ಸಹೋದರಿ ನೀಡುತ್ತಿರುವ ಹೇಳಿಕೆ ನೋಡಿದ್ರೆ ಅವರ ಕುಟುಂಬದಿಂದ ಫಯಾಜ್ ಕುಮ್ಮಕ್ಕು ಇದೆ. ಇದು ಫಯಾಜ್ ಮತ್ತು ಕುಟುಂಬದವರ ಒಳಸಂಚು ಎನಿಸುತ್ತಿದೆ. ಹೀಗಾಗಿ, ಆರೋಪಿ‌ ಫಯಾಜ್ ತಂದೆ-ತಾಯಿ ಮತ್ತು ಸಹೋದರಿ ವಿರುದ್ಧ ದೂರು ನೀಡುವೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಮಗಳು ಮೃತಪಟ್ಟಿದ್ದಾರೆ.. ಯಾಕೆ ನೀವು ಧ್ವನಿ ಎತ್ತುತ್ತಿಲ್ಲ: ಪ್ರಕಾಶ್ ರಾಜ್, ಚೇತನ್ ವಿರುದ್ಧ ಪ್ರಥಮ್ ಕಿಡಿ

    ಪೋಟೋ, ವೀಡಿಯೋ ವೈರಲ್ ಮಾಡುತ್ತಿರುವವರ ವಿರುದ್ಧ ಸಹ ಸೈಬರ್ ಕ್ರೈಮ್‌ಗೆ ದೂರು ನೀಡುವೆ. ನನ್ನ ಮಗಳು ಸತ್ತ ಮೇಲೆ ಯಾರು ಪೋಟೋ ವೈರಲ್ ಮಾಡುತ್ತಿದ್ದಾರೆ? ಹುಬ್ಬಳ್ಳಿಯಲ್ಲಿ ಫಯಾಜ್‌ಗೆ ಆಶ್ರಯ ಕೊಟ್ಟವರು ಯಾರು? ಎಲ್ಲಾ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    ಇಂದು ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಮ್ಮ ಮನೆಗೆ ಭೇಟಿ ನೀಡಲಿದ್ದಾರೆ. ಇದು ರಾಜಕೀಯ ಭೇಟಿಯಲ್ಲ. ಇದು ಮಾನವೀಯತೆ ಭೇಟಿ. ನನ್ನ ಅನುಮತಿ ಪಡೆದೇ ನಡ್ಡಾ ನಮ್ಮ ಮನೆಗೆ ಬರುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ – ನಗರಸಭೆ ಸದಸ್ಯ ಅರೆಸ್ಟ್‌

  • ಕೈ ಮುಗಿದು ಕೇಳಿಕೊಳ್ತೀನಿ, ಸಿಎಂ ಹೇಳಿಕೆ ನೀಡುವುದನ್ನು ನಿಲ್ಲಿಸಿ: ನೇಹಾ ತಂದೆ ನಿರಂಜನ್‌ ಕಿಡಿ

    ಕೈ ಮುಗಿದು ಕೇಳಿಕೊಳ್ತೀನಿ, ಸಿಎಂ ಹೇಳಿಕೆ ನೀಡುವುದನ್ನು ನಿಲ್ಲಿಸಿ: ನೇಹಾ ತಂದೆ ನಿರಂಜನ್‌ ಕಿಡಿ

    ಹುಬ್ಬಳ್ಳಿ: ನಾನು ಕೈ ಮುಗಿದು ಕೇಳಿಕೊಳ್ತೀನಿ. ಸಿಎಂ ಹಾಗೂ ಗೃಹ ಸಚಿವರು ನನ್ನ ಮಗಳ ಹತ್ಯೆ ಪ್ರಕರಣ ಸಂಬಂಧ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿ ಎಂದು ನೇಹಾ ಹಿರೇಮಠ ತಂದೆ ನಿರಂಜನ್‌ (Niranjan Hiremath) ಕೈ ಮುಗಿದು ಕೇಳಿಕೊಂಡಿದ್ದಾರೆ.

    ಈ ಸಂಬಂಧ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ನನ್ನ ಮಗಳ ಸಾವು ವೈಯಕ್ತಿಕ ಅಲ್ಲ. ಅವರಿಗೆ ಮಾಹಿತಿಯ ಕೊರತೆ ಇದೆ. ಯಾರೋ ಅವರನ್ನು ತುಷ್ಠೀಕರಣ ಮಾಡಿ ಹೇಳುವಂಗೆ ಮಾಡಿದ್ದಾರೆ. ದಯಮಾಡಿ ಅಂತಹ ಹೇಳಿಕೆಗಳನ್ನು ಕೊಡಬೇಡಿ. ಎಲ್ಲವನ್ನೂ ನನ್ನ ವೀರಶೈವ ಹಾಗೂ ಲಿಂಗಾಯತ ಸಮಾಜ ನೋಡುತ್ತಿದೆ. ವೈಯಕ್ತಿಕ ಅಂದ್ರೆ ನಾವೇನು ಯಾರಾದ್ದಾದರು ಜೊತೆ ಸಂಬಂಧ ಬೆಳೆಸಲು ಹೋಗಿದ್ದೇವಾ..?. ಅಥವಾ ವ್ಯಾಪಾರ ಇತ್ತಾ?. ವೈಯಕ್ತಿಕ ಅನ್ನುವುದಾದರೆ ಯಾವುದಾದರೂ ಸಂಬಂಧ ಇರಬೇಕು ಅಲ್ವಾ. ಈ ರೀತಿಯ ಹೇಳಿಕೆಗಳಿಂದ ನನ್ನ ಮಗಳಿಗೆ ನ್ಯಾಯ ಸಿಗಲ್ಲ ಎಂದು ನಿರಂಜನ್‌ ಬೇಸರ ವ್ಯಕ್ತಪಡಿಸಿದರು.

    ಈ ರೀತಿಯ ಹೇಳಿಕೆಗಳನ್ನು ಕೊಡುತ್ತಾ ಮೊದಲೇ ದುಃಖದಲ್ಲಿರುವ ನಮ್ಮನ್ನು ಮತ್ತಷ್ಟು ದುಃಖಕ್ಕೆ ತಳ್ಳುತ್ತಿದ್ದೀರಿ. ರಾಜ್ಯದ ಸಿಎಂ (Siddaramaiah) ಆಗಿರುವ ನೀವು ಇಂತಹ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿ. ನೀವು ಕೊಟ್ಟ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಿ. ನಮ್ಮ ಹಾಗೂ ಅವರ ಮಧ್ಯೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ. ಅವರು ನಮ್ಮ ಅಕ್ಕಪಕ್ಕದ ಮನೆಯವರಲ್ಲ.. ನಮ್ಮ ಓಣಿಯವರಲ್ಲ ಅಥವಾ ನಮ್ಮ ಕ್ಲಾಸ್‌ಮೇಟ್‌ ಕೂಡ ಅಲ್ಲ. ವೈಯಕ್ತಿಕ ಅಂದಿದ್ರೆ ಆಕೆ ಅವನ ಜೊತೆ ಹೋಗುತ್ತಿದ್ದಳು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಗನನ್ನು ಸೈನಿಕನನ್ನಾಗಿ ಮಾಡಬೇಕೆಂಬ ಕನಸು ಕಂಡಿದ್ದೆ: ಆರೋಪಿ ಫಯಾಜ್‌ ತಂದೆ

    ಎರಡು ವರ್ಷದ ಹಿಂದೆ ಆತ ಕಾಲೇಜು ಬಿಟ್ಟಿದ್ದಾನೆ. ಅವನು ಆಕೆಯ ಮೇಲೆ ಕಣ್ಣಿಟ್ಟು, ಲವ್‌ ಜಿಹಾದ್‌ ಟ್ರೈನಿಂಗ್‌ ತೆಗೆದುಕೊಂಡು ಬಂದು ಆಕೆಯನ್ನು ಟಾರ್ಗೆಟ್‌ ಮಾಡಿದ್ದಾನೆ. ಒಳ್ಳೆಯ ಸಂಸ್ಕೃತಿ ಇರುವ ಹುಡುಗಿಯನ್ನು ಬಲೆಗೆ ಹಾಕಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ ಆಕೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎಂದರು.

    ನನ್ನ ಮಗಳನ್ನು ಈಗಾಗಲೇ ಬಲಿ ತೆಗೆದುಕೊಂಡಿದ್ದೀರಿ. ನಮ್ಮನ್ನಾದರು ಬದುಕಲು ಬಿಡಿ. ನೀವು ಇದೆ ರೀತಿಯ ಹೇಳಿಕೆ ಕೊಟ್ಟರೆ ನಾನು ಸಮಾಜದಲ್ಲಿ ಹೇಗೆ ಮುಖ ತೋರಸಲಿ. ನಾನು ನನ್ನ ಕುಟುಂಬ‌ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ನಿರಂಜನ್‌ ಎಚ್ಚರಿಕೆ ನೀಡಿದರು.

  • ಲವ್‌ ಜಿಹಾದ್‌ ಹೆಚ್ಚಾಗುತ್ತಿದೆ, ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಿ: ಪೋಷಕರಲ್ಲಿ ನೇಹಾ ತಂದೆ ನಿರಂಜನ್‌ ಮನವಿ

    ಲವ್‌ ಜಿಹಾದ್‌ ಹೆಚ್ಚಾಗುತ್ತಿದೆ, ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಿ: ಪೋಷಕರಲ್ಲಿ ನೇಹಾ ತಂದೆ ನಿರಂಜನ್‌ ಮನವಿ

    ಧಾರವಾಡ: ಲವ್‌ ಜಿಹಾದ್‌ (Love Jihad) ಹೆಚ್ಚಾಗುತ್ತಿದೆ. ನಿಮ್ಮ ಮಕ್ಕಳನ್ನು ನೀವು ರಕ್ಷಿಸಿಕೊಳ್ಳಿ ಎಂದು ಮೃತ ನೇಹಾ ತಂದೆ (Neha Hiremath), ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​ ಹಿರೇಮಠ (Niranjan Hiremath) ಮನವಿ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ಅನೇಕ ಕಡೆ ನೋಡಿದಾಗ ಕ್ರೂರತನ ಜಾಸ್ತಿ ಆಗುತ್ತಿದೆ. ಈ ರೀತಿಯ ಮನಸ್ಥಿತಿ ಹೆಚ್ಚಾಗುತ್ತಿದೆ ಯಾಕೆ? ಮತ್ತೊಬ್ಬ ಬಡ ಪೋಷಕರ  ಹೆಣ್ಣು ಮಕ್ಕಳು ಈ ರೀತಿ ಆಗಬಾರದಲ್ಲ. ಲವ್‌ ಜಿಹಾದ್‌ ಬಹಳ ವಿಸ್ತಾರವಾಗಿ ಹೋಗುತ್ತಿದೆ ಅಂತ ನನಗೂ ಅನಿಸುತ್ತಿದೆ ಎಂದು ಹೇಳಿದರು.  ಇದನ್ನೂ ಓದಿ: ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರೋದು: ಸಿಎಂ

     

    ನನಗೆ ಒಬ್ಬಳೇ ಮಗಳು. 25 ವರ್ಷದಿಂದ ನಾನು ಒಂದು ದಿವಸ ಕಣ್ಣಿರು ಹಾಕಿಲ್ಲ. ಇವತ್ತು ನನ್ನ ಮನೆಗೆ ಈ ರೀತಿ ಆಗಿದೆ. ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರಿಗೆ ಹೇಳುತ್ತಿದ್ದೇನೆ. ತಮ್ಮ ಮಗಳು ಏನು ಮಾಡುತ್ತಾಳೆ? ಅವಳ ಹಿಂದೆ ಯಾರಿದ್ದಾರೆ ಎಂಬುದನ್ನು ನೀವುಕೂಡ ಗಮನ ಹರಿಸಬೇಕು. ನನ್ನ ಮಗಳಿಗೆ ಆದಂತೆ ಇನ್ನೊಬ್ಬರ ಮಗಳಿಗೆ ಈ ರೀತಿ ಆಗಬಾರದು ಎಂದರು. ಇದನ್ನೂ ಓದಿ: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.. ಲವ್ ಜಿಹಾದ್ ನನಗೆ ಕಾಣುತ್ತಿಲ್ಲ: ಹುಬ್ಬಳ್ಳಿ ಕೊಲೆ ಬಗ್ಗೆ ಪರಮೇಶ್ವರ್ ಹೇಳಿಕೆ

    ಈ ರೀತಿ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದ ಜೊತೆ ಕೇಳಿಕೊಳ್ಳುತ್ತೇನೆ. ಹೆಣ್ಣು ಮಕ್ಕಳು ಕಲಿಯಬೇಕು. ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಇದ್ದಾರೆ. ಈ ರೀತಿ ಆದರೆ ಕಾಲೇಜಿಗೆ ಹೋಗಲು ಹೇಗೆ ಧೈರ್ಯ ಬರುತ್ತೆ ಎಂದು ಪ್ರಶ್ನಿಸಿದರು.