Tag: Niranjan Shetty

  • ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ

    ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ

    ‘ಜಾಲಿಡೇಸ್’ ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ (Niranjan Shetty) ನಾಯಕನಾಗಿ ನಟಿಸಿರುವ ’31 DAYS’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಶನಿವಾರ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಅದ್ದೂರಿಯಾಗಿ ನೆರವೇರಿತು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ಸಂಗೀತ ನಿರ್ದೇಶಕ ಗುರುಕಿರಣ್, ನಟಿ – ನಿರ್ಮಾಪಕಿ ಗೀತಪ್ರಿಯ ಮುಂತಾದ ಗಣ್ಯರು ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

    ʼ31 ಡೇಸ್ʼ (31 Days) ವಿ.ಮನೋಹರ್ (V Manohar) ಅವರ ಸಂಗೀತ ಸಂಯೋಜನೆಯ 150ನೇ ಚಿತ್ರವಾಗಿದ್ದು, ಇದೇ ಸಂದರ್ಭದಲ್ಲಿ ಅವರನ್ನು ಚಿತ್ರತಂಡ ಆತ್ಮೀಯವಾಗಿ ಸನ್ಮಾನಿಸಿತ್ತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ನಾನು ಸಂಗೀತ ನಿರ್ದೇಶಕನಾಗಿದ್ದೆ ಅನಿರೀಕ್ಷಿತ. ನಿರ್ದೇಶಕನಾಗಲು ಬಂದ ನಾನು, ಸಂಗೀತ ನಿರ್ದೇಶಕನಾದೆ. ಇದಕ್ಕೆ ಉಪೇಂದ್ರ ಅವರು ಕಾರಣ. ʼತರ್ಲೆ ನನ್ಮಗʼ ನನ್ನ ಸಂಗೀತ ಸಂಯೋಜನೆಯ ಮೊದಲ ಚಿತ್ರ. ʼ31 ಡೇಸ್ʼ 150ನೇ ಚಿತ್ರ. ಇಷ್ಟು ವರ್ಷದ ಸಂಗೀತದ ಜರ್ನಿಗೆ ಸಾಥ್ ನೀಡಿದ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಇನ್ನೂ ಈ ಚಿತ್ರದಲ್ಲಿ 11 ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ – ಗಾಯಕಿಯರು ಹಾಡಿದ್ದಾರೆ. ನಾಯಕ ನಿರಂಜನ್ ಶೆಟ್ಟಿ ಬಹಳ ವರ್ಷಗಳ ಪರಿಚಯ. ಅವರ ಶ್ರೀಮತಿ ನಾಗವೇಣಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

    ʼಜಾಲಿಡೇಸ್ʼ ಚಿತ್ರದ ಮೂಲಕ ನಾನು ನಾಯಕನಾದೆ. ʼ31 ಡೇಸ್ʼ ನಾನು ನಾಯಕನಾಗಿ ನಟಿಸಿರುವ 8ನೇ ಚಿತ್ರ. 35 ಚಿತ್ರಗಳಲ್ಲಿ ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ. ಈ ಚಿತ್ರವನ್ನು ನನ್ನ ಪತ್ನಿ ನಾಗವೇಣಿ ಎನ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಗುರುಗಳಾದ ವಿ.ಮನೋಹರ್ ಸಂಗೀತ ನೀಡಿದ್ದಾರೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಗೀತ ನಿರ್ದೇಶಕ ಗುರುಕಿರಣ್, ನನ್ನನ್ನು ಬಾಲ್ಯದಿಂದ ನೋಡಿರುವ ಜಯಪ್ರಕಾಶ್ ಹೆಗ್ಡೆ ಅವರು ನಮ್ಮ ಚಿತ್ರದ ಹಾಡುಗಳನ್ನು ಅನಾವರಣ ಮಾಡಿದ್ದು ಖುಷಿಯಾಗಿದೆ. ಚಿತ್ರಕಲಾ ಪರಿಷತ್ತಿಗೂ ನನಗೂ ವಿಶೇಷವಾದ ನಂಟಿದೆ. ನಾನು ಇಲ್ಲಿ ಕಲಾ ವಿದ್ಯಾರ್ಥಿಯಾಗಿದ್ದೆ. ನಾನು ಚಿತ್ರಕಲೆ ಕಲಿತ ಜಾಗವಿದು. ಹಾಗಾಗಿ ಇಲ್ಲೇ ಹಾಡುಗಳನ್ನು ಬಿಡುಗಡೆ ಮಾಡಿದ್ದೇನೆ. ಕೆಲವೇ ದಿನಗಳಲ್ಲಿ ನಮ್ಮ ಚಿತ್ರ ತೆರೆಗೆ ಬರಲಿದೆ ಎಂದು ನಾಯಕ ನಿರಂಜನ್ ಶೆಟ್ಟಿ ತಿಳಿಸಿದರು.

    ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಬೇಕು ಎಂದು ನಿರ್ಮಾಪಕಿ ನಾಗವೇಣಿ ಎನ್ ಶೆಟ್ಟಿ ಮನವಿ ಮಾಡಿದರು.

    ಸಾಕಷ್ಟು ಚಿತ್ರಗಳಿಗೆ ಸಹ ನಿರ್ದೇಶಕನಾಗಿದ್ದ ನನ್ನನ್ನು ನಿರಂಜನ್ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮಾಡಿದ್ದಾರೆ. ಇದೊಂದು ಹೈ ವೋಲ್ಟೇಜ್ ಲವ್ ಸ್ಟೋರಿಯಾಗಿದೆ ಎಂದರು ನಿರ್ದೇಶಕ ರಾಜ ರವಿಕುಮಾರ್.  ಚಿತ್ರದ ನಾಯಕಿ ಪ್ರಜ್ವಲಿ ಸುವರ್ಣ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

  • ನಿರಂಜನ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘31 DAYS’ ಚಿತ್ರದ ವಿಶೇಷ ಪೋಸ್ಟರ್

    ನಿರಂಜನ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘31 DAYS’ ಚಿತ್ರದ ವಿಶೇಷ ಪೋಸ್ಟರ್

    ನಾಗವೇಣಿ ಎನ್ ಶೆಟ್ಟಿ ನಿರ್ಮಾಣದಲ್ಲಿ ತಯರಾಗುತ್ತಿರುವ ‘31 DAYS’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ.  ಈ ಸಿನಿಮಾದದಲ್ಲಿ ನಾಯಕರಾಗಿ ನಟಿಸುತ್ತಿರುವ ನಿರಂಜನ್ ಶೆಟ್ಟಿ (niranjan shetty) ಅವರ ಹುಟ್ಟು ಹಬ್ಬಕ್ಕಾಗಿ (Birthday) ಈ ಸ್ಪೆಷಲ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ ನಿರ್ಮಾಪಕರು.

    ಪ್ರಸ್ತುತ ಈ ಚಿತ್ರ ರೀ ರೆಕಾರ್ಡಿಂಗ್ ಹಂತದಲ್ಲಿದ್ದು ಜೂನ್ ಅಥವಾ ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ನಿರಂಜನ್ ಶೆಟ್ಟಿ ನಾಯಕನಾದರೆ, ಅವರಿಗೆ ನಾಯಕಿಯಾಗಿ ಪ್ರಜ್ವಲಿ ಸುವರ್ಣ ನಟಿಸಿದ್ದಾರೆ.  ಅಲ್ಲದೆ ಹೆಸರಾಂತ ನಟ, ನಟಿಯರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

    ಈ ಸಿನಿಮಾ ಪ್ರಸ್ತುತ ಜನರೇಷನ್ ನಲ್ಲಿ ನಡೆಯುವ ಒಂದು ಸುಂದರ ಲವ್ ಸ್ಟೋರಿ ಆಗಿದ್ದು, 31 ದಿನಗಳಲ್ಲಿ ನಡೆಯುವ high voltage love story ಆಗಿದೆ.  ರಾಜ ರವಿಕುಮಾರ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.  ವಿ. ಮನೋಹರ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಇದು ವಿ.ಮನೋಹರ್ ಸಂಗೀತ ನಿರ್ದೇಶನದ 150 ನೇ ಸಿನಿಮಾ ಆಗಿದೆ ಎನ್ನುವುದು ವಿಶೇಷ.

  • ನಿರಂಜನ್ ಶೆಟ್ಟಿ ಅಭಿನಯದ ‘31 DAYS’ ಚಿತ್ರದ ಫಸ್ಟ್ ಲುಕ್ ರಿಲೀಸ್

    ನಿರಂಜನ್ ಶೆಟ್ಟಿ ಅಭಿನಯದ ‘31 DAYS’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಜಾಲಿಡೇಸ್ ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ (Niranjan Shetty)  ನಾಯಕನಾಗಿ ನಟಿಸುತ್ತಿರುವ ‘31 DAYS’ ಚಿತ್ರದ ಫಸ್ಟ್ ಲುಕ್ (First Look) ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣವಾಯಿತು. ಚಿತ್ರಕ್ಕೆ ‘ಹೈ ವೋಲ್ಟೇಜ್ ಲವ್ ಸ್ಟೋರಿ’ ಎಂಬ ಅಡಿಬರಹವಿದೆ.

    ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ದಂಪತಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ವಿಶೇಷ. ಶೀರ್ಷಿಕೆಯನ್ನು ಯುವ ಪ್ರೇಮಿಗಳು ಬಿಡುಗಡೆ ಮಾಡಿದರು. ಅಲ್ಲಿ ನೆರದಿದ್ದ ಸಹಸ್ರಾರು ಕಲಾಸಕ್ತರು ಚಿತ್ರದ ವಿನೂತನ ಫಸ್ಟ್ ಲುಕ್ ಗೆ ಫಿದಾ ಆದರು.

    “ನಾನು ಸಹ ಚಿತ್ರಕಲಾ ಪರಿಷತ್ ನ ವಿದ್ಯಾರ್ಥಿಯಾಗಿದ್ದು, ಚಿತ್ರಸಂತೆಯಲ್ಲಿ ನಮ್ಮ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಬಿಡುಗಡೆಯಾಗಿದ್ದು ಖುಷಿಯಾಗಿದೆ ಎನ್ನುತ್ತಾರೆ ನಾಯಕ ನಿರಂಜನ್ ಶೆಟ್ಟಿ. Nstar ಬ್ಯಾನರ್ ನಲ್ಲಿ ನಾಗವೇಣಿ. N. ಶೆಟ್ಟಿ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ರಾಜ ರವಿಕುಮಾರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಹೆಬ್ರಿ, ಆಗುಂಬೆ, ತೀರ್ಥಹಳ್ಳಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

    ನಿರಂಜನ್ ಶೆಟ್ಟಿ ಅವರು ನಾಯಕನಾಗಿ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು ಅವರಿಗೆ ನಾಯಕಿಯಾಗಿ ಪ್ರಜ್ವಲಿ ಸುವರ್ಣ ನಟಿಸುತ್ತಿದ್ದಾರೆ.  ಈ ಚಿತ್ರ ಪ್ರಸ್ತುತ ಜನರೇಷನ್ ನಲ್ಲಿ ನಡೆಯುವ ಒಂದು ಸುಂದರ love story ಆಗಿದ್ದು 31 ದಿನಗಳಲ್ಲಿ ನಡೆಯುವ high voltage love story ಇದಾಗಿದೆ. 4 ಹಾಡುಗಳಿರುವ ಈ ಚಿತ್ರಕ್ಕೆ ವಿ. ಮನೋಹರ್ ರವರ ಸಂಗೀತ ನಿರ್ದೇಶನವಿದೆ.  ಇದು ವಿ.ಮನೋಹರ್ ಅವರ ಸಂಗೀತ ನಿರ್ದೇಶನದ 150 ನೇ ಚಿತ್ರವೂ ಹೌದು.   ವಿನುತ್. K  ಛಾಯಾಗ್ರಹಣ, ಧನು ಕುಮಾರ್ ನೃತ್ಯ ನಿರ್ದೇಶನ ಹಾಗೂ ಸನತ್ ರವರ ಸಂಕಲನ ಈ ಚಿತ್ರಕ್ಕಿದೆ.

  • ಸಿಲ್ಕು ಮಿಲ್ಕು ಹಾಡಿಗೆ ಕುಣಿದ ಏಸ್ತಾರ್ ನೆರೋನಾ

    ಸಿಲ್ಕು ಮಿಲ್ಕು ಹಾಡಿಗೆ ಕುಣಿದ ಏಸ್ತಾರ್ ನೆರೋನಾ

    ಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್  ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಸಿನಿಮಾ ಇದಾಗಿದ್ದು, ಕುಂತಿ ಅಮ್ಮ ಪ್ರೊಡಕ್ಷನ್ ಮೂಲಕ ನಿರಂಜನ್ ಶೆಟ್ಟಿ ತಲ್ಲೂರು  ಬಂಡವಾಳ ಹೂಡಿದ್ದಾರೆ.

    ಕೊಪ್ಪದಲ್ಲಿ ಸಿಲ್ಕು ಮಿಲ್ಕು ಹಾಡನ್ನು ಬಿಡುಗಡೆ ಮಾಡುವ ಮೂಲಕ ಕೊಪ್ಪ ಜನತೆಯನ್ನ ಹುಚ್ಚೆಬ್ಬಿಸಿದ ಇನಾಮ್ದಾರ ಚಿತ್ರ ತಂಡ ಮತ್ತಷ್ಟು ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಜನರನ್ನು ಆಕರ್ಷಿಸುತ್ತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.  ಕಲಾವಿದರ ದಂಡೆ ಇರುವ ಈ ಸಿನಿಮಾ ಎರಡು ಬಣ್ಣಗಳ ನಡುವಿನ ಘರ್ಷಣೆಯ ಸುತ್ತ ಹೆಣೆದಿರುವ ಕಥೆ ಎಂದು ನಿರ್ದೇಶಕರು ಹೇಳುತ್ತಾರೆ. ಕೊಪ್ಪದಲ್ಲಿ ಸಾವಿರಾರು ಜನರ ಮುಂದೆ ಕೊಪ್ಪದ ಮಕ್ಕಳ ಕೈಯಲ್ಲಿ ಸಿಲ್ಕು ಮಿಲ್ಕು ಸಾಂಗ್ ಅನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಕೊಪ್ಪದ ಜನತೆಯನ್ನು ಸ್ಮರಿಸಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

    ಖಡಕ್ ಧ್ವನಿಯಲ್ಲಿ ಪ್ರಮೋದ್ ಶೆಟ್ಟಿಯ ಡೈಲಾಗ್ ಕೇಳಿ ಹುಚ್ಚೆದ್ದು ಕುಣಿದ ಕೊಪ್ಪದ ಜನತೆಗೆ ನಿರ್ದೇಶಕ ಸಂದೇಶ ಶೆಟ್ಟಿ ಪ್ರಮೋದ್ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್  ಘಟೋದ್ಗಜ ಎಂದು ಬಿರುದನ್ನು ನೀಡಿದ್ದಾರೆ, ಇದು ಕೊಪ್ಪದ ಜನತೆಯಲ್ಲಿ ಮತ್ತಿಷ್ಟು ಜೋಶ್ ತಂದು ಕೊಟ್ಟಿದೆ. ಇಡೀ ಸಿನಿಮಾ ಟೆಕ್ನಿಕಲ್ ಆಗಲಿ, ಕಥೆಯಾಗಲಿ ಎಲ್ಲವೂ ಕೂಡ ಅದ್ಭುತವಾಗಿ ಮೂಡಿ ಬಂದಿದೆ ಹಾಗೂ ಒಬ್ಬ ಹೊಸ ನಿರ್ಮಾಪಕ, ನಿರ್ದೇಶಕ ಉಳಿಯಬೇಕಾದರೆ ನಿಮ್ಮ ಸಹಕಾರ ಅಗತ್ಯ ಎಂದು ಪ್ರಮೋದ್ ಶೆಟ್ಟಿ ಹೇಳಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ನಿರಂಜನ್ ಶೆಟ್ಟಿ ಸಿನಿಮಾ ಉತ್ತಮವಾಗಿ ಮೂಡಿ ಬಂದಿದೆ, ಎರಡು ಜನಾಂಗ ಘರ್ಷಣೆಯನ್ನ ತೆರೆ ಮೇಲೆ ತರಲು ನಿರ್ದೇಶಕರು ಹೊಸತನದ ಪ್ರಯತ್ನವನ್ನ ಮಾಡಿದ್ದಾರೆ, ನಿಮಗೆಲ್ಲರಿಗೂ ಈ ಸಿನಿಮಾ ಇಷ್ಟ ಆಗುತ್ತೆ ನಮ್ಮ ತಂಡವನ್ನ ಬೆಂಬಲಿಸಿ, ನೀವು ನಮಗೆ ಶಕ್ತಿಯಾಗಿ ಎಂದು ತಿಳಿಸಿದರು. ಸಂಗೀತ ನಿರ್ದೇಶಕ ರಾಕೇಶ್ ಆಚಾರ್ಯ ಮಾತನಾಡಿ ಇದೊಂದು ಸೂಕ್ಷ್ಮವಾದ ಕಥಾಹಂದರ ಬಲು ಅಚ್ಚುಕಟ್ಟಾಗಿ ಈ ಸಿನಿಮಾವನ್ನ ತೆರೆಯ ಮೇಲೆ ತರಲು ನಿರ್ದೇಶಕರು ಪ್ರಯತ್ನಪಟ್ಟಿದ್ದಾರೆ ಈ ಸಿನಿಮಾದಲ್ಲಿ ನಾನು ಮೂರು ಹಾಡುಗಳನ್ನ ಮಾಡಿದ್ದೇನೆ ನಿಮ್ಮೆಲ್ಲರ ಬೆಂಬಲ ಈ ಸಿನಿಮಾದ ಮೇಲೆ ಇರಲಿ ಎಂದು ಕೇಳಿಕೊಂಡರು.

    ನಾಯಕ ನಟ ರಂಜನ್  ಛತ್ರಪತಿ, ನಟಿ ಚಿರಶ್ರೀ ಅಂಚನ್ ಹಾಗೂ  ಏಸ್ತಾರ್ ನೆರೋನಾ, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ಮಹಾಬಲೇಶ್ವರ ಕ್ಯಾದಗಿ, ರಕ್ಷಿತ್ ಶೆಟ್ಟಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೊಪ್ಪದ ವೇದಿಕೆಯಲ್ಲಿ ಸಂತೋಷವನ್ನು ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k