Hon’ble President of India, on the recommendation of Government of India, has approved the proposal for summoning of both the Houses of Parliament for the Budget Session, 2024 from 22nd July, 2024 to 12 August, 2024 (Subject to exigencies of Parliamentary Business). Union Budget,…
ಬಜೆಟ್ ಅಧಿವೇಶನ ಜುಲೈ 22 ರಂದು ಆರಂಭವಾಗಲಿದ್ದು, ಆಗಸ್ಟ್ 12 ರವರೆಗೆ ನಡೆಯಲಿದೆ.
ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕೇಂದ್ರ ಸಚಿವ ಕಿರಣ್ ರಿಜಿಜು, ಜುಲೈ 22 ರಿಂದ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯುವ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ. ಕೇಂದ್ರ ಬಜೆಟ್ 2024-25 ಅನ್ನು ಲೋಕಸಭೆಯಲ್ಲಿ 23 ಜುಲೈ ರಂದು ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ
ನವದೆಹಲಿ: ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ಕೊಠಡಿಗಳ ಸೌಲಭ್ಯ, ಕ್ಲೋಕ್‌ರೂಮ್ ಸೇವೆಗಳು ಹಾಗೂ ಬ್ಯಾಟರಿ ಚಾಲಿತ ಕಾರು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಹೇಳಿದರು.
ಕೇಂದ್ರ ಹಣಕಾಸು ಸಚಿವೆಯ ಅಧ್ಯಕ್ಷತೆಯಲ್ಲಿ ಇಂದು ಸರಕು ಮತ್ತು ಸೇವಾ ತೆರಿಗೆ (GST) ಕೌನ್ಸಿಲ್‌ನ 53ನೇ ಸಭೆ ನಡೆಯಿತು. ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೀತಾರಾಮನ್, ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ಕೊಠಡಿಗಳ ಸೌಲಭ್ಯ, ಕ್ಲೋಕ್‌ರೂಮ್ ಸೇವೆಗಳು ಹಾಗೂ ಬ್ಯಾಟರಿ ಚಾಲಿತ ಕಾರು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. ಇನ್ನು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಕೇಂದ್ರದ ಉದ್ದೇಶ ಸ್ಪಷ್ಟವಾಗಿದೆ. ಇಂಧನದ ಮೇಲಿನ ಜಿಎಸ್‌ಟಿ ದರವನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಟ್ಟಿದೆ ಎಂದರು.
#WATCH | Delhi: On the 53rd GST Council Meeting, Union Finance Minister Nirmala Sitharaman says "I want to reassure the assessees that our intent is to make the GST assessee's life easier. We are working towards less and less compliance. I want to underline the fact, on behalf of… pic.twitter.com/gABjYGNFuO
ಸೋಲಾರ್ ಕುಕ್ಕರ್‌ಗಳ ಮೇಲೆ 12%ರಷ್ಟು ಜಿಎಸ್‌ಟಿ ವಿಧಿಸಲು ಅನುಮೋದನೆ ನೀಡಲಾಗಿದೆ. GST ಕಾಯಿದೆಯ ಸೆಕ್ಷನ್ 73 ರ ಅಡಿಯಲ್ಲಿ ನೀಡಲಾದ ಬೇಡಿಕೆಯ ನೋಟೀಸ್‌ಗಳಿಗೆ ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡಲು ಶಿಫಾರಸು ಮಾಡಲಾಗಿದೆ. ಇದಲ್ಲದೇ ನಕಲಿ ಇನ್‌ವಾಯ್ಸ್‌ಗಳನ್ನು ತಡೆಯಲು ಹಂತಹಂತವಾಗಿ ದೇಶಾದ್ಯಂತ ಬಯೋಮೆಟ್ರಿಕ್ ದೃಢೀಕರಣವನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಸಂಸ್ಥೆಗಳ ಹೊರಗಿರುವ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೂ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. ವಸತಿ ಸೇವೆಗಳ ಪೂರೈಕೆಯ ಮೌಲ್ಯವು ಪ್ರತಿ ವ್ಯಕ್ತಿಗೆ 20 ಸಾವಿರ ರೂ. ಸೇವೆಗಳನ್ನು 90 ದಿನಗಳ ಕನಿಷ್ಠ ನಿರಂತರ ಅವಧಿಗೆ ಸರಬರಾಜು ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಹಾಲಿನ ಕ್ಯಾನ್‌ಗಳ ಮೇಲೆ 12% ರಷ್ಟು ಏಕರೂಪದ ದರವನ್ನು ನಿಗದಿಪಡಿಸಲು ಕೌನ್ಸಿಲ್ ಶಿಫಾರಸು ಮಾಡಿದೆ. ಅಲ್ಲದೇ ಎಲ್ಲಾ ರಟ್ಟಿನ ಪೆಟ್ಟಿಗೆಗಳ ಮೇಲೆ 12% ರಷ್ಟು ದರವನ್ನು ನಿಗದಿಪಡಿಸಿದೆ. ಫೈರ್ ಸ್ಪಿಂಕ್ಲರ್‌ಗಳು ಸೇರಿದಂತೆ ಎಲ್ಲಾ ರೀತಿಯ ಸ್ಪಿಂಕ್ಲರ್‌ಗಳ ಮೇಲೆ 12% ದರವು ಅನ್ವಯಿಸುತ್ತದೆ. ಎಲ್ಲಾ ದೌರ ಕುಕ್ಕರ್‌ಗಳ ಮೇಲೆ 12% ಪ್ರತಿಶತ ಜಿಎಸ್‌ಟಿ ದರ ಅನ್ವಯಿಸುತ್ತದೆ ಎಂದು ಸೀತಾರಾಮನ್ ತಿಳಿಸಿದರು.
#WATCH | On being asked about bringing fuel under GST, Union Finance Minister Nirmala Sitharaman says "…At the moment, the intention of the GST as it was brought in by former Finance Minister Arun Jaitley is to have the petrol and diesel in GST. It is up to the states to decide… pic.twitter.com/SoKpm3hlbI
ಸಣ್ಣ ತೆರಿಗೆದಾರರಿಗೆ ಸಹಾಯ ಮಾಡುವ ಸಲುವಾಗಿ ಏಪ್ರಿಲ್ 30 ರಿಂದ ಜೂನ್ 30 ರವರೆಗೆ ಜಿಎಸ್‌ಟಿಆರ್ 4 ನಮೂನೆಯಲ್ಲಿ ವಿವರಗಳನ್ನು ಮತ್ತು ರಿಟರ್ನ್‌ಗಳನ್ನು ಒದಗಿಸಲು ಸಮಯ ಮಿತಿಯನ್ನು ವಿಸ್ತರಿಸಲು ಕೌನ್ಸಿಲ್ ಶಿಫಾರಸು ಮಾಡಿದೆ ಎಂದರು.
ನವದೆಹಲಿ: ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸಿನ ನೆರವು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (D.K.Shivakumar) ಮನವಿ ಮಾಡಿದ್ದಾರೆ.
ಸಂಸತ್ ಭವನದಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು 60 ಕಿ.ಮೀ ಉದ್ದದ ನಗರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಗರದೊಳಗೆ ಉತ್ತರದಿಂದ ದಕ್ಷಿಣ, ಪೂರ್ವದಿಂದ ಪಶ್ಚಿಮ ಕಾರಿಡಾರ್ ಮೂಲಕ ನಗರದೊಳಗಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ. ಈ ಯೋಜನೆಯಲ್ಲಿ ಪ್ರತಿ ಕಿ.ಮೀ ಸುರಂಗ ರಸ್ತೆಗೆ 500 ರೂ.ನಂತೆ ಒಟ್ಟು 30 ಸಾವಿರ ಕೋಟಿ ವೆಚ್ಚ ತಗುಲುವ ಅಂದಾಜು ಮಾಡಲಾಗಿದೆ. ಈ ಯೋಜನೆಗಳು ರಾಷ್ಟ್ರೀಯ ಹೆದ್ದಾರಿ 7 ಮತ್ತು 4ರ ಸಂಪರ್ಕ ಸಾಧಿಸುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ಸಿಎಂ – ಬರ ಪರಿಹಾರ ಬಿಡುಗಡೆಗೆ ಆಗ್ರಹ
ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೆಟ್ರೋ ಸಂಪರ್ಕ ಮಾರ್ಗವನ್ನು ವಿಸ್ತರಣೆಗೆ ಬಿಎಂಆರ್‌ಸಿಎಲ್ ಯೋಜನೆ ರೂಪಿಸುತ್ತಿದ್ದು, ಇದಕ್ಕೆ ಭಾರತ ಸರ್ಕಾರದ ಅನುಮತಿ ಪಡೆಯಲು ನಿಮ್ಮ ಸಹಕಾರಬೇಕು. ಇನ್ನು ಅತಿಯಾದ ಮಳೆ ಸಮಯದಲ್ಲಿ ಬೆಂಗಳೂರಿನ ಕೆಲವು ಭಾಗಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ವಿಶ್ವ ಬ್ಯಾಂಕ್‌ನಿಂದ 3 ಸಾವಿರ ಕೋಟಿಯಷ್ಟು ಆರ್ಥಿಕ ನೆರವನ್ನು ಕೋರಿದ್ದು, ಈ ಪ್ರಸ್ತಾವನೆ ಕೇಂದ್ರ ಹಣಕಾಸು ಸಚಿವಾಲಯ ತಲುಪಿದೆ. ಪ್ರಸ್ತಾವನೆಗೆ ಅನುಮೋದನೆ ನೀಡಿ ವಿಶ್ವ ಬ್ಯಾಂಕ್‌ನಿಂದ ಹಣಕಾಸಿನ ನೆರವು ಬರುವಂತೆ ಮಾಡಬೇಕು.
ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ಮುಂದಾಗಿದ್ದು, ಈ ಯೋಜನೆಯಿಂದ 67 ಟಿಎಂಸಿ ನೀರನ್ನು ಹಿಡಿದಿಟ್ಟು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ, ತಮಿಳುನಾಡಿನ ಪಾಲಿನ ನೀರು ಬಿಡುಗಡೆ ಹಾಗೂ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯ ಪೂರ್ವ ಕಾರ್ಯಸಾಧ್ಯತಾ ವರದಿಗೆ ಕೇಂದ್ರ ಜಲ ಆಯೋಗದಿಂದ ಅನುಮತಿ ಪಡೆಯಲಾಗಿದೆ. ಇನ್ನು ಈ ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಅನ್ನು 2019ರಲ್ಲಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಈ ಯೋಜನೆಯನ್ನು ಸುಪ್ರೀಂ ಕೋರ್ಟಿನ ತೀರ್ಪಿನ ಅನುಸಾರವಾಗಿ ತಮಿಳುನಾಡಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಜಾರಿ ಮಾಡಲಾಗುವುದು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಅಗತ್ಯವಿರುವ ಅನುಮತಿಯನ್ನು ನೀಡುವಂತೆ ನಿರ್ದೇಶನ ನೀಡಿ ಎಂದು ಮನವಿ ಮಾಡಲಾಗಿದೆ. ಇದನ್ನೂ ಓದಿ: ಇಂದು ಮತ್ತಿಬ್ಬರು ಅಮಾನತು- ಸಂಸದರ ಸಸ್ಪೆಂಡ್ ಸಂಖ್ಯೆ 143ಕ್ಕೆ ಏರಿಕೆ
ಕೃಷ್ಣಾ ಮೇಲ್ದಂಡೆ ಯೋಜನೆಯು ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಕೃಷ್ಣಾ ನೀರು ವಿವಾದ ನ್ಯಾಯಧಿಕರಣ-2 2010ರಲ್ಲಿ ತೀರ್ಪನ್ನ ಪ್ರಕಟಿಸಿದ್ದು, ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರು ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಪ್ರಮಾಣದ ನೀರಿನ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಮೂಲಕ 130 ಟಿಎಂಸಿ ನೀರಿನ ಬಳಕೆಗೆ ನೆರವಾಗಲಿದೆ. ಇದರಿಂದ ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಿದೆ. ಈ ಯೋಜನೆಗೆ 16,900 ಕೋಟಿ ವೆಚ್ಚವಾಗಲಿದೆ. ನ್ಯಾಯಾಧೀಕರಣದ ಆದೇಶವಾಗಿ ದಶಕವೇ ಕಳೆದರೂ ಈ ಯೋಜನೆಗೆ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ರಾಷ್ಟ್ರೀಯ ಜಲ ನೀತಿ ಅನುಸಾರ ನೀರನ್ನು ಬಹಳ ಪರಿಣಾಮಕಾರಿ ಬಳಕೆಗೆ ಕರ್ನಾಟಕ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈ ಯೋಜನೆಯಿಂದ ಮಧ್ಯ ಕರ್ನಾಟಕ ಭಾಗದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಯ 2,25,525 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ. 29.90 ಟಿಎಂಸಿಯಷ್ಟು ಅಂತರ್ಜಲ ಭರ್ತಿಗೆ ನೆರವಾಗಲಿದೆ. 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ಆರ್ಥಿಕ ನೆರವು ಘೋಷಣೆ ಮಾಡಿದ್ದು, ಇದುವರೆಗೂ ಯಾವುದೇ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಯೋಜನೆಯ ಪ್ರಗತಿ ಕುಂಠಿತವಾಗಿದೆ. ಹೀಗಾಗಿ ಈ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಪರಿಗಣಿಸಿ ಹಣಕಾಸಿನ ನೆರವು ನೀಡಬೇಕು. ಬಜೆಟ್‌ನಲ್ಲಿ ಘೋಷಿಸಿರುವಂತೆ 5,300 ಕೋಟಿ ರೂಪಾಯಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಕೋರಿದರು. ಇದನ್ನೂ ಓದಿ: ಸೂರಜ್ ರೇವಣ್ಣಗೆ ಬಿಗ್ ರಿಲೀಫ್ – ಎಂಎಲ್‌ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ
ಮಹದಾಯಿ, ಎತ್ತಿನಹೊಳೆ ಯೋಜನೆಗೆ ಅನುಮತಿ
ಮಹದಾಯಿ ನೀರು ವಿವಾದ ನ್ಯಾಯಾಧೀಕರಣವು 2018ರಲ್ಲಿ ತನ್ನ ಆದೇಶ ನೀಡಿದ್ದು, ಈ ಆದೇಶದಲ್ಲಿ ಕಳಸಾ ನಾಲೆಗೆ 1.72 ಟಿಎಂಸಿ ಹಾಗೂ ಬಂಡೂರಿ ನಾಲೆ ಯೋಜನೆಗೆ 2.18 ಟಿಎಂಸಿ ಕುಡಿಯುವ ನೀರನ್ನು ನಿಗದಿ ಮಾಡಿದೆ. ಈ ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ ಸ್ವೀಕರಿಸಿದೆ. ಈ ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಬಾಕಿ ಇದ್ದು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು.
ಕರ್ನಾಟಕದ ಪೂರ್ವಭಾಗದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನ ಕೆಲವು ಭಾಗಗಳು ಬರ ಪೀಡಿತವಾಗಿದೆ. ಈ ಭಾಗದ ಜನರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಈ ಯೋಜನೆಗೆ ಮುಂದಾಗಿದ್ದೇವೆ. ಈ ಯೋಜನೆಗೆ ಒಟ್ಟು 23,251 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದು, ಈವರೆಗೂ 14,698 ಕೋಟಿ ರೂ. ವೆಚ್ಚವಾಗಿದೆ. ಕುಡಿಯುವ ನೀರಿಗೆ ಪ್ರಮುಖ ಆದ್ಯತೆಯಾಗಿದ್ದು, ಕೇಂದ್ರ ಸರ್ಕಾರ ಈ ಯೋಜನೆಗೆ 9177.32 ಕೋಟಿ ರೂ. (ಉಳಿಕೆ ಹಣ) ಅನುದಾನವನ್ನು ನೀಡಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಎರಡನೇ ಅವಧಿಯ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್ (Union Budget 2023) ಮೇಲೆ ಕರ್ನಾಟಕದ (Karnataka) ನಿರೀಕ್ಷೆಗಳು ಸಾಕಷ್ಟಿವೆ. ಏಕೆಂದರೆ ರಾಜ್ಯದಲ್ಲೂ ಬಿಜೆಪಿ ಸರ್ಕಾರವೇ ಇದೆ. ಮೇಲಾಗಿ ವಿಧಾನಸಭೆ ಚುನಾವಣೆ ನಡೆಯೋ ರಾಜ್ಯ ಕೂಡ ಆಗಿದೆ. ಹೀಗಾಗಿ ರಾಜ್ಯವೂ ಬಹಳಷ್ಟು ನಿರೀಕ್ಷೆ ಹೊಂದಿದೆ.
ಈವರೆಗೂ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ (GST) ಪಾಲು ಸರಿಯಾಗಿ ಬಂದಿಲ್ಲ. ರಾಜ್ಯದ ಯೋಜನೆಗಳಿಗೆ ಸರಿಯಾಗಿ ಅನುದಾನ ಬಿಡುಗಡೆ ಆಗುತ್ತಿಲ್ಲ. ಹೀಗಾಗಿ ಈ ಸಲದ ಬಜೆಟ್‌ನಲ್ಲಾದರೂ ಕರ್ನಾಟಕಕ್ಕೆ ಮೋದಿ ಬಿಗ್ ಗಿಫ್ಟ್ ನೀಡಬಹುದು ಎಂದು ಅಂದಾಜಿಸಲಾಗಿದೆ. ನಾಳೆಯ ಬಜೆಟ್‌ನಲ್ಲಿ ಕೇಂದ್ರಕ್ಕೆ ಏನೆಲ್ಲಾ ಸಿಗಬಹುದು ಅನ್ನೋದನ್ನು ನೋಡೋಣ. ಇದನ್ನೂ ಓದಿ: ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ – ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಿಗುತ್ತಾ ರಿಲೀಫ್?
ಸೆಂಟ್ರಲ್ ಬಜೆಟ್; ರಾಜ್ಯದ ನಿರೀಕ್ಷೆಗಳೇನು?
ರಾಷ್ಟ್ರೀಯ ಯೋಜನೆಗಳಾಗಿ ಎತ್ತಿನಹೊಳೆ, ಮಹದಾಯಿ ಪ್ರಾಜೆಕ್ಟ್, 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೆಂಬಲ, ರಾಜ್ಯದ ರೈಲ್ವೆ ಯೋಜನೆಗಳಿಗೆ ವೇಗ ಸಿಗುವ ನಿರೀಕ್ಷೆ (ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ, ಹುಬ್ಬಳ್ಳಿ-ಅಂಕೋಲಾ ಸೇರಿ),
ಬೆಂಗಳೂರು ಮೆಟ್ರೋ ವಿಸ್ತರಣೆಗೆ ಹಣಕಾಸಿನ ನೆರವು, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ, ಕರ್ನಾಟಕಕ್ಕೂ ಫಿನ್‌ಟೆಕ್ ಸಿಟಿ ಯೋಜನೆ ವಿಸ್ತರಣೆ (ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ತಮಿಳುನಾಡಿಗೆ ನೀಡಲಾಗಿದೆ), ಸ್ಮಾರ್ಟ್ ಸಿಟಿಗಳ ಪಟ್ಟಿಗೆ ರಾಜ್ಯದ ಇನ್ನಷ್ಟು ನಗರ. ಇದನ್ನೂ ಓದಿ: ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಂಸತ್ (Parliament) ಹಾಲ್‌ನಲ್ಲಿ ಮೊದಲ ಹಂತದ ಬಜೆಟ್ ಅಧಿವೇಶನ (Union Budget 2023) ಇಂದಿನಿಂದ (ಮಂಗಳವಾರ) ಆರಂಭವಾಗಿದ್ದು, ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಬಜೆಟ್ ಮಂಡಿಸಲಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಹಾಗೂ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ಒಂದೆಡೆ ಜಾಗತಿಕ ಆರ್ಥಿಕ ಹಿಂಜರಿತದ ಭೀತಿ. ಮತ್ತೊಂದೆಡೆ ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಗಳಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಹೆಚ್ಚಿದ ಬಡ್ಡಿದರದಿಂದ ತಿಂಗಳ ಇಎಂಐಗಳು ಭಾರವಾಗಿ ಪರಿಣಮಿಸಿದೆ. ಜೊತೆಗೆ ಉದ್ಯೋಗ ಅಭದ್ರತೆಯ ಚಿಂತೆ ಕೂಡ ಶುರುವಾಗಿದೆ. ಇದರ ಮಧ್ಯೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳು ಸರಣಿಯಾಗಿ ನಡೆಯಲಿವೆ. ಈ ಹೊತ್ತಲ್ಲಿಯೇ ಮತ್ತೊಮ್ಮೆ ಬಜೆಟ್ ಸಮಯ ಬಂದಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಈ ಬಜೆಟ್ ಮೇಲೆ ನಿರೀಕ್ಷೆಗಳ ಭಾರ ಹೆಚ್ಚಿದೆ. ಇದನ್ನೂ ಓದಿ: ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು
ಬಜೆಟ್ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಅಸ್ಥಿರ ಜಾಗತಿಕ ಆರ್ಥಿಕ ಪರಿಸ್ಥಿತಿಯ ಈ ಸಂದರ್ಭದಲ್ಲಿ ಕೇಂದ್ರದ ಬಜೆಟ್‌ಗಾಗಿ ಬರೀ ಭಾರತವಲ್ಲ ಇಡೀ ವಿಶ್ವವೇ ಎದಿರು ನೋಡ್ತಿದೆ ಎಂದಿದ್ದಾರೆ.
ಕೇಂದ್ರ ಬಜೆಟ್; ತೆರಿಗೆ ಪಾವತಿದಾರರ ಬೇಡಿಕೆಗಳೇನು?
ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು, ಶೇ.30ರಷ್ಟು ತೆರಿಗೆ ಸ್ಲಾಬ್ ಮಿತಿಯನ್ನು ಇನ್ನಷ್ಟು ಹೆಚ್ಚಿಸಬೇಕು, ಸೆಕ್ಷನ್ 80-ಸಿ ಅಡಿ ನೀಡುತ್ತಿರುವ ವಿನಾಯ್ತಿ ಮಿತಿ ಹೆಚ್ಚಿಸಬೇಕು, ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿ 2 ಲಕ್ಷಕ್ಕೆ ಹೆಚ್ಚಳ ಮಾಡಬೇಕು, ಜೀವವಿಮೆ, ಆರೋಗ್ಯ ವಿಮೆ ಪ್ರೀಮಿಯಂಗಳಿಗೆ ತೆರಿಗೆ ವಿನಾಯ್ತಿ, ಗೃಹಸಾಲದ ಬಡ್ಡಿ ಏರಿಕೆಯಾಗುತ್ತಿದೆ.. ಇದನ್ನು ಇಳಿಕೆ ಮಾಡಬೇಕು, ಐಟಿ ರೂಲ್ 24ರ ಅಡಿ ಲಭ್ಯವಿರುವ ವಿನಾಯ್ತಿ ಮಿತಿಯನ್ನು 4 ಲಕ್ಷಕ್ಕೆ ಹೆಚ್ಚಿಸಬೇಕು, ಠೇವಣಿ, ಬಾಂಡ್, ಪಿಪಿಎಫ್ ಹೂಡಿಕೆಗಳ ಮೇಲಿನ ವಿನಾಯ್ತಿ ಮಿತಿ ಹೆಚ್ಚಿಸಬೇಕು. ಇದನ್ನೂ ಓದಿ: ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ: ಮೋದಿ
ಜನಸಾಮಾನ್ಯರ ಬೇಡಿಕೆಗಳೇನು?
ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು (ವಿಶೇಷವಾಗಿ ಬೇಳೆಕಾಳು, ಅಕ್ಕಿ, ಗೋಧಿ, ಹಾಲು), ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕು, ಬೆಲೆ ಏರಿಕೆ ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕು, ನಿರುದ್ಯೋಗ ಹೆಚ್ಚುತ್ತಿದೆ; ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸಬೇಕು, ಮಧ್ಯಮ ವರ್ಗದ ಎಲ್ಲಾ ವೃತ್ತಿಯವರಿಗೆ ಒಳ್ಳೆಯದು ಮಾಡಬೇಕು, ಶಿಕ್ಷಣ ವೆಚ್ಚದ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಬೇಕು.
ಕೃಷಿಕರ ಬೇಡಿಕೆಗಳೇನು?
ರಸಗೊಬ್ಬರ, ರಾಸಾಯನಿಕಗಳ ಮೇಲೆ ಅಧಿಕ ಸಹಾಯಧನ, ಪಶುಸಂಗೋಪನಾ ವಲಯಕ್ಕೆ ಕಡಿಮೆ ದರದಲ್ಲಿ ಸಾಲ ಸೌಲಭ್ಯ, ಉದ್ಯೋಗ ಖಾತ್ರಿ ಯೋಜನೆಯಡಿ ದಿನಗೂಲಿ ಹೆಚ್ಚಿಸಬೇಕು, ಕೃಷಿ ಸಮ್ಮಾನ್ ಯೋಜನೆಯಡಿ ಸಹಾಯಧನ ಹೆಚ್ಚಿಸಬೇಕು.
ರಕ್ಷಣಾ ಇಲಾಖೆ ನಿರೀಕ್ಷೆಗಳೇನು?
ಐಎನ್‌ಎಸ್ ವಿಕ್ರಾಂತ್‌ಗೆ ಮರೇನ್ ರಫೇಲ್ ವಿಮಾನ ಖರೀದಿ, ಪ್ರಾಜೆಕ್ಟ್ 75ಐ ಅಡಿ 6 ಜಲಂತಾರ್ಗಾಮಿ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ, ಮಲ್ಟಿ ರೋಲ್ ಫೈಟರ್ ಏರ್‌ಕ್ರಾಫ್ಟ್‌ಗಳ ಖರೀದಿ, ಅನುದಾನ ಸಂಪೂರ್ಣ ಬಳಕೆಗಾಗಿ ನಾನ್ ಲ್ಯಾಪ್ಸೆಬಲ್ ಫಂಡ್, ಒನ್ ರ‍್ಯಾಂಕ್, ಒನ್ ಪೆನ್ಶನ್‌ಗಾಗಿ ಹೆಚ್ಚುವರಿ ಅನುದಾನ. ಇದನ್ನೂ ಓದಿ: Union Budget 2023: ಮಂಗಳವಾರದಿಂದ ಬಜೆಟ್ ಅಧಿವೇಶನ – ಫೆ. 1ಕ್ಕೆ ಬಜೆಟ್ ಮಂಡನೆ
ಕೇಂದ್ರದ ಮುಂದಿರುವ ಸವಾಲುಗಳೇನು?
ಜನಪರ ಕಾರ್ಯಸೂಚಿ ನಡುವೆ ಆರ್ಥಿಕ ಸಮತೋಲನ, ಶೇ.6.4ರಷ್ಟಿರುವ ವಿತ್ತೀಯ ಕೊರತೆ ನಿಯಂತ್ರಿಸುವುದು, ಹಣದುಬ್ಬರ ನಿಯಂತ್ರಣ, ಜನರ ಕೊಳ್ಳುವ ಶಕ್ತಿಗೆ ಇಂಬು, ಉದ್ಯೋಗ ಸೃಷ್ಟಿ, ರಫ್ತು ಪ್ರಮಾಣ ಹೆಚ್ಚಳ ಮಾಡುವುದು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Devegowda) ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು. ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಇದನ್ನೂ ಓದಿ: ಅಭಿವೃದ್ಧಿಗೆ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ ಅವಶ್ಯಕ : ಪ್ರಹ್ಲಾದ್ ಜೋಶಿ
ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಉಪಸ್ಥಿತರಿದ್ದರು.
ನವದೆಹಲಿ: ವಿವಿಧ ರಾಜ್ಯಗಳಿಂದ ರಾಜ್ಯಸಭೆಗೆ ಚುನಾಯಿತರಾದ 24 ಮಂದಿ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದಿಂದ ಆಯ್ಕೆಯಾದ ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್, ನಿರ್ಮಲಾ ಸೀತರಾಮನ್ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದರು.
ನಟ ಜಗ್ಗೇಶ್ ಕನ್ನಡದಲ್ಲಿ ಹಾಗೂ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಬಿಜೆಪಿ ಹಿರಿಯ ನಾಯಕ ಲೆಹರ್ ಸಿಂಗ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?
ಪಿಯೂಷ್ ಗೋಯೆಲ್, ಮುಕುಲ್ ವಾಸ್ನಿಕ್, ಸುರೇಂದ್ರ ಕುಮಾರ್, ಲಕ್ಷ್ಮಿಕಾಂತ್ ಬಾಜಪೇಯ್, ನಾಬುರಾವ್ ನಿಶಾದ್, ಧನಜಯ್ ಮಧು, ಘನಶಾಮ್ ತಿವಾರಿ ಸೇರಿ 24 ಮಂದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಭಾಧ್ಯಕ್ಷ ವೆಂಕಯ್ಯನಾಯ್ಡು ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
7/12 We are reducing the Central excise duty on Petrol by ₹ 8 per litre and on Diesel by ₹ 6 per litre. This will reduce the price of petrol by ₹ 9.5 per litre and of Diesel by ₹ 7 per litre.
It will have revenue implication of around ₹ 1 lakh crore/year for the government.
ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಅಲ್ಲದೇ ಅಡುಗೆ ಸಿಲಿಂಡರ್ ದರ 200 ರೂ. ಕಡಿತ ಮಾಡಲಾಗಿದೆ.
ಕೇಂದ್ರ ಸರ್ಕಾರ ಕಳೆದ ವರ್ಷ ನವೆಂಬರ್ 5 ರಂದು ಪೆಟ್ರೋಲ್ ಮೇಲೆ 5 ರೂ. ಡಿಸೇಲ್ ಮೇಲೆ 10 ರೂಪಾಯಿ ಇಳಿಕೆ ಮಾಡಿತ್ತು. ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಬೆಲೆ ಇಳಿಕೆ ಮಾಡಿತ್ತು. ಈಗ ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೆ ಮುನ್ನ ಬೆಲೆ ಇಳಿಕೆ ಮಾಡಿದೆ. ಈ ಬಾರಿ ಎಲ್‌ಪಿಜಿಗೂ ಸಬ್ಸಿಡಿ ನೀಡಿದೆ. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ
ಪ್ಲಾಸ್ಟಿಕ್ ಉತ್ಪನ್ನಗಳಿಗೆ ಬೇಕಾಗುವ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನೂ ಇಳಿಕೆ ಮಾಡಲಾಗಿದೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಿದೆ. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರ ಕೂಡ ಅಬಕಾರಿ ಸುಂಕ ಕಡಿಮೆ ಮಾಡಿದರೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮತ್ತಷ್ಟು ಕಡಿಮೆ ಆಗುತ್ತೆ. ಆದರೆ ರಾಜ್ಯ ಸರ್ಕಾರ ಯಾವಾಗ ಕಡಿಮೆ ಮಾಡುವ ನಿರ್ಧಾರ ಮಾಡುತ್ತೋ ಕಾದು ನೋಡಬೇಕಿದೆ.
ಇವತ್ತು ಬೆಂಗಳೂರಿನಲ್ಲಿ ಎಷ್ಟು ಲೀಟರ್ ಬೆಲೆ ಎಷ್ಟಿದೆ?: ಪೆಟ್ರೋಲ್ ಬೆಲೆ – 111.09 ಪೈಸೆ ಹಾಗೂ ಡಿಸೇಲ್ ಬೆಲೆ – 94.79 ಪೈಸೆ ಇದೆ. ಅಬಕಾರಿ ಸುಂಕ ಕಡಿಮೆ ಮಾಡಿದರೆ ಪೆಟ್ರೋಲ್ ಬೆಲೆ – 102.09 ಪೈಸೆ ಹಾಗೂ ಡಿಸೇಲ್ ಬೆಲೆ – 87.79 ಪೈಸೆ ಆಗಬಹುದು.
ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮ
ಕೋವಿಡ್ ಸಾಂಕ್ರಾಮಿಕವು ಎಲ್ಲಾ ವಯಸ್ಸಿನ ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೆಚ್ಚಿಸಿದೆ. ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳನ್ನು ಒದಗಿಸುವ ಸಲುವಾಗಿ ʼರಾಷ್ಟ್ರೀಯ ಟೆಲಿ-ಮೆಂಟಲ್ ಹೆಲ್ತ್ ಕಾರ್ಯಕ್ರಮʼ ಘೋಷಿಸಲಾಗಿದೆ. ಇದು 23 ಟೆಲಿ-ಮೆಂಟಲ್ ಆರೋಗ್ಯ ಉತ್ಕೃಷ್ಟ ಕೇಂದ್ರಗಳ ಜಾಲವನ್ನು ಒಳಗೊಂಡಿರುತ್ತದೆ. ನಿಮ್ಹಾನ್ಸ್ ಇದಕ್ಕೆ ನೋಡಲ್ ಕೇಂದ್ರವಾಗಿದೆ. ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ-ಬೆಂಗಳೂರು (ಐಐಐಟಿಬಿ) ತಾಂತ್ರಿಕ ಬೆಂಬಲವನ್ನು ಒದಗಿಸುತ್ತದೆ. ಇದನ್ನೂ ಓದಿ: Budget 2022: ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್
ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಗಾಗಿ ಹೊಸ ಮುಕ್ತ ವೇದಿಕೆಯನ್ನು ಹೊರತರಲಾಗುವುದು. ಇದು ಆರೋಗ್ಯ ಪೂರೈಕೆದಾರರು ಮತ್ತು ಆರೋಗ್ಯ ಸೌಲಭ್ಯಗಳ ಡಿಜಿಟಲ್ ದಾಖಲಾತಿಗಳನ್ನು ಸಮಗ್ರವಾಗಿ ಒಳಗೊಂಡಿರುತ್ತದೆ.
ಬೆಂಗಳೂರು: ದೇಶದಲ್ಲಿ ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸುವ ಪ್ರಸ್ತಾವನೆಯನ್ನು ಕೇಂದ್ರ ಬಜೆಟ್‌ನಲ್ಲಿ ಮಂಡಿಸಲಾಗಿದೆ. ಡಿಜಿಟಲ್ ಕರೆನ್ಸಿಯ ಅಗತ್ಯತೆ ಹಾಗೂ ಅದರ ಚಲಾವಣೆಯಿಂದಾಗುವ ಪ್ರಯೋಜನಗಳ ಕುರಿತು ಆರ್ಥಿಕ ತಜ್ಞ ವಿಜಯ್ ರಾಜೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯ್ ರಾಕೇಶ್ ಏನು ಹೇಳುತ್ತಾರೆ?
ಡಿಜಿಟಲ್ ಕರೆನ್ಸಿ ಯೂರೋಪ್, ಅಮೆರಿಕಾದಲ್ಲಿ ಚಲಾವಣೆಯಲ್ಲಿದೆ. ಈಗ ನಮ್ಮ ಕೈಯಲ್ಲಿರುವ ಕ್ಯಾಶ್ ಇ-ಫಾರ್ಮ್‌ನಲ್ಲಿದೆ. ಡಿಜಿಟಲ್ ಫಾರ್ಮ್‌ನಲ್ಲಿರೋದನ್ನ ಡಿಜಿಟಲ್ ಕರೆನ್ಸಿ ಎನ್ನಲಾಗುತ್ತದೆ. ಕ್ರಿಪ್ಟೋ ಕರೆನ್ಸಿಯನ್ನು ನಿಯಂತ್ರಿಸುವುದು ಕಷ್ಟ. ಆದರೆ ಡಿಜಿಟಲ್ ಕರೆನ್ಸಿ ಕಾನೂನು ಬದ್ಧವಾಗಿರುತ್ತದೆ. ಡಿಜಿಟಲ್ ಕರೆನ್ಸಿ ಆರ್‌ಬಿಐ ಸಿರಿಸ್ ನಂಬರ್ ರೀತಿ ಅಲಾಟ್ ಮಾಡಬಹುದು. ಒಂದು ಕಾರ್ಡ್ ಅಥವಾ ಪಾಸ್‌ವರ್ಡ್ ರೀತಿ ನಿರ್ವಹಿಸಬಹುದು. ಇದನ್ನೂ ಓದಿ: Budget 2022: ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನಕ್ಕೆ 200 ಕೋಟಿ ನೆರವು
ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ನಕಲಿ ನೋಟು ಹಾವಳಿ ಕಡಿಮೆಯಾಗಲಿದೆ. ನೋಟುಗಳ ಮುದ್ರಣ ವೆಚ್ಚ ಕಡಿಮಯಾಗಲಿದೆ. ಆರ್ಥಿಕ ಚೇತರಿಕೆ ಶೀಘ್ರವಾಗಿ ಆಗಬಹುದು. ಡಿಜಿಟಲ್ ಕರೆನ್ಸಿ ಕಾನೂನು ಬದ್ಧವಾಗಿರುವುದರಿಂದ ತೆರಿಗೆ ಸೋರಿಕೆಯನ್ನು ಕಡಿಮೆ ಮಾಡಬಹುದು. ಹಣ ಎಲ್ಲಿಂದ, ಎಲ್ಲಿಗೆ, ಯಾರಿಗೆ ಹೋಗುತ್ತಿದೆ ಎನ್ನುವುದರ ವಿವರ ಡಿಜಿಟಲ್ ಕರೆನ್ಸಿ ಮೂಲಕ ಪಡೆಯಬಹುದು. ನಗದು ರಹಿತ ಅಭಿಯಾನಕ್ಕೆ ಹೆಚ್ಚು ಒತ್ತು ಕೊಟ್ಟ ಹಾಗೆ ಆಗುತ್ತದೆ. ವಹಿವಾಟು ಸರಳೀಕರಣವಾಗಲಿದೆ. ತೆರಿಗೆ ಹೆಚ್ಚು ಸಂಗ್ರಹಿಸಲು ಹಾಗೂ ಸರ್ಕಾರದ ಆದಾಯ ಸಂಗ್ರಹಕ್ಕೆ ಸಹಾಯವಾಗಲಿದೆ ಎಂದು ವಿಜಯ್ ರಾಜೇಶ್ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ಮಂಡಿಸಿದ 2022-23ನೇ ಸಾಲಿನ ಬಜೆಟ್‌ನಲ್ಲಿ ‘ಡಿಜಿಟಲ್ ರೂಪಾಯಿ’ಯನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರಸ್ತಾಪ ಪ್ರಕಟಿಸಿದ್ದಾರೆ. 2022-23ರಿಂದ ಅಂದರೆ ಪ್ರಸಕ್ತ ವರ್ಷದಿಂದಲೇ ಆರಂಭವಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್, ಡಿಜಿಟಲ್ ರೂಪಾಯಿ ಅನ್ನು ಹಣಕಾಸು ಮಾರುಕಟ್ಟೆಗೆ ಪರಿಚಯಿಸಲಿದೆ. ಕೇಂದ್ರೀಯ ಬ್ಯಾಂಕ್‌ನ ಡಿಜಿಟಲ್ ಕರೆನ್ಸಿ(ಸಿಬಿಡಿಸಿ)ಯು ಡಿಜಿಟಲ್ ಆರ್ಥಿಕತೆಯನ್ನು ಹೆಚ್ಚಿಸಲಿದೆ. ಡಿಜಿಟಲ್ ಕರೆನ್ಸಿ ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆ. ಡಿಜಿಟಲ್ ಕರೆನ್ಸಿ ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಲಿದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿಗೆ ಭಾರತ ಎಂಟ್ರಿ – ಆರ್‌ಬಿಐ ನೀಡಲಿದೆ ಡಿಜಿಟಲ್ ರುಪಿ