Tag: Nirmala Sitaraman

  • ತುಲಾಭಾರ ಸೇವೆ ವೇಳೆ ಗಾಯಗೊಂಡ ಶಶಿ ತರೂರ್- ನೆಟ್ಟಿಗರಿಂದ ಟ್ರೋಲ್

    ತುಲಾಭಾರ ಸೇವೆ ವೇಳೆ ಗಾಯಗೊಂಡ ಶಶಿ ತರೂರ್- ನೆಟ್ಟಿಗರಿಂದ ಟ್ರೋಲ್

    ತಿರುವನಂತಪುರಂ: ದೇವಾಲಯದಲ್ಲಿ ತುಲಾಭಾರ ಸೇವೆ ನೀಡಲು ಮುಂದಾಗಿ ತಲೆಗೆ ಪೆಟ್ಟು ಮಾಡಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿತರೂರ್ ರನ್ನು ಟ್ವಿಟ್ಟಿಗರು ಕಾಲೆಳೆದಿದ್ದು, ಹೆಲ್ಮೆಟ್ ಧರಿಸಿ ದೇವರ ಸೇವೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದರ ನಡುವೆ ಮುಂದಿನ ಸಮಯದಲ್ಲಿ ಹೆಲ್ಮೆಟ್ ಧರಿಸಿ ತುಲಾಭಾರ ಮಾಡಿಸಿಕೊಳ್ಳುವಂತೆ ಕುಟುಂಬಸ್ಥರು ಕೋರುತ್ತಿದ್ದಾರೆ ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

    ತುಲಾಭಾರ ಸೇವೆ ವೇಳೆ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಶಶಿ ತರೂರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿ ಕೆಲ ಮಂದಿ ಕಾಲೆಳೆದಿದ್ದರು. ತುಲಾಭಾರ ಮಾಡುವ ವೇಳೆ ಹೆಲ್ಮೆಟ್ ಧರಿಸುವಂತೆ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸ್ಕ್ರೀನ್ ಶಾಟ್ ಶೇರ್ ಮಾಡಿರುವ ಶಶಿ ತರೂರ್ ನನ್ನ ಕುಟುಂಬ ಕೂಡ ಮುಂದಿನ ಬಾರಿ ಇದನ್ನೇ ಬಯಸುತ್ತಿದೆ ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಇತ್ತ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ರಾಜಕೀಯ ಪ್ರಚಾರ ವೇಳೆಯೇ ಶಶಿ ತರೂರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ತಿರುವನಂತಪುರಂನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಶಶಿ ತರೂರ್ ಅವರ ಆರೋಗ್ಯ ವಿಚಾರಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿ ಫೋಟೋ ಪೋಸ್ಟ್ ಮಾಡಿರುವ ಶಶಿ ತರೂರ್, ನಿರ್ಮಲಾ ಅವರ ಸೌಜನ್ಯಕ್ಕೆ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

  • ವಿಂಗ್ ಕಮಾಂಡರ್ ಅಭಿನಂದನ್‍ರನ್ನ ಭೇಟಿ ಮಾಡಿದ ರಕ್ಷಣಾ ಸಚಿವೆ

    ವಿಂಗ್ ಕಮಾಂಡರ್ ಅಭಿನಂದನ್‍ರನ್ನ ಭೇಟಿ ಮಾಡಿದ ರಕ್ಷಣಾ ಸಚಿವೆ

    ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ವಿಂಗ್ ಕಮಾಂಡರ್ ಅಭಿನಂದನ್‍ರನ್ನು ಭೇಟಿ ಮಾಡಿದರು.

    ತನ್ನ ಧೈರ್ಯ ಹಾಗೂ ಘನತೆಯಿಂದ ಭಾರತೀಯರ ಮನಗೆದ್ದ ಅಭಿನಂದನ್ ಅವರು ವಾಯುಪಡೆಯ ಕೇಂದ್ರದಲ್ಲಿ ವೈದ್ಯಕೀಯ ಸೇವೆ ಸಂದರ್ಭದಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಶತ್ರು ರಾಷ್ಟ್ರದಲ್ಲಿದ್ದ 60 ಗಂಟೆಗಳ ಅವಧಿಯಲ್ಲಿ ನಡೆದ ಘಟನೆಗಳ ಬಗ್ಗೆ ಮಾಹಿತಿ ನೀಡಿದರು ಎನ್ನಲಾಗಿದೆ.

    ಇದೇ ವೇಳೆ ದೇಶದ ಜನತೆ ನಿಮ್ಮನ್ನ ಕಂಡು ಹೆಮ್ಮೆ ಪಡುತ್ತಿದೆ ಎಂದು ಸಚಿವರು ಅಭಿನಂದನ್ ಅವರಿಗೆ ತಿಳಿಸಿದ್ದಾರೆ. ಇಬ್ಬರ ನಡುವಿನ ಭೇಟಿ ಸಂದರ್ಭದ ಫೋಟೋದಲ್ಲಿ ಅಭಿನಂದನ್ ಹಾಗೂ ಸಚಿವೆ ಮಾತುಕತೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ.

    ಶುಕ್ರವಾರ ರಾತ್ರಿ ಪಾಕ್ ಸೈನಿಕರು ಭಾರತಕ್ಕೆ ಹಸ್ತಾಂತರಿಸಿದ ಬಳಿಕ ಅಭಿನಂದನ್ ರಾತ್ರಿ ಸುಮಾರು 11.30ರ ವೇಳೆಗೆ ದೆಹಲಿಗೆ ಆಗಮಿಸಿದ್ದರು. ಅಲ್ಲದೇ ತಮ್ಮ ಪೋಷಕರನ್ನು ಭೇಟಿಯಾಗಿದ್ದರು. ಈ ವೇಳೆ ನಾನು ಆರಾಮವಾಗಿದ್ದೇನೆ. ನನ್ನ ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದರು. ಅಲ್ಲದೆ ಇದೇ ವೇಳೆ ಮತ್ತೆ ನಾನು ವಾಯುಸೇನೆಯ ಕರ್ತವ್ಯಕ್ಕೆ ಹಾಜರಾಗುತ್ತೇನೆ ಎಂಬ ಭರವಸೆ ನೀಡಿದ್ದರು ಎಂದು ವರದಿಯಾಗಿತ್ತು.

    ಈ ವೇಳೆ ಅವರಿಗೆ ವಿವಿಧ ಹಂತಗಳಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿತ್ತು. ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಗಡಿ ದಾಟಿ ಪಾಕ್ ಸೈನ್ಯದ ವಶದಲ್ಲಿದ್ದ ಅಭಿನಂದನ್ ಶುಕ್ರವಾರ ಸಂಜೆ ವೇಳೆಗೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಮತ್ತೆ ತನ್ನ ಕುತಂತ್ರವನ್ನು ಪ್ರದರ್ಶಿಸಿತ್ತು. ನಿನ್ನೆ ಮುಂಜಾನೆಯಿಂದಲೇ ವಾಘಾ ಗಡಿಯಲ್ಲಿ ಕಾದು ಕುಳಿತಿದ್ದ ಭಾರತೀಯ ಅಭಿಮಾನಿಗಳ ಛಲ ರಾತ್ರಿಯಾದ್ರು ಕಡಿಮೆ ಆಗಲಿಲ್ಲ. ಸಂಜೆ ವೇಳೆಗೆ ಮಳೆ ಬಂದಿದ್ದರೂ ಕೂಡ ಲೆಕ್ಕಿಸದ ಭಾರತೀಯರು ಅಲ್ಲೇ ನಿಂತಿದ್ದರು. ಇವೆಲ್ಲದರ ನಡುವೆಯೇ ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏರ್ ಶೋ ಅಗ್ನಿ ಅವಘಡ: ಕಾರಿನ ಓವರ್ ಹೀಟ್ ಸೈಲೆನ್ಸರ್‌ನಿಂದ ಬೆಂಕಿ?

    ಏರ್ ಶೋ ಅಗ್ನಿ ಅವಘಡ: ಕಾರಿನ ಓವರ್ ಹೀಟ್ ಸೈಲೆನ್ಸರ್‌ನಿಂದ ಬೆಂಕಿ?

    ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಓವರ್ ಹೀಟ್ ಆಗಿದ್ದ ಕಾರಿನ ಸೈಲೆನ್ಸರ್ ಕಾರಣ ಎಂಬ ಶಂಕೆ ವ್ಯಕ್ತವಾಗಿರುವುದಾಗಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪರಿಶೀಲನೆ ವೇಳೆ ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಅವಘಡ ನಡೆದ ಸ್ಥಳದಲ್ಲಿ ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ಪರಿಶೀಲನೆ ನಡೆಸಿದರು. ಈ ವೇಳೆ ನಿರ್ಮಲಾ ಸೀತಾರಾಮನ್ ಅವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಸೈಲೆನ್ಸರ್ ನಿಂದ ಬೆಂಕಿಯ ಜ್ವಾಲೆ ಆರಂಭವಾಗಿದೆ ಎಂಬ ಬಗ್ಗೆ ವಿವರಣೆ ನೀಡಿದ್ದಾಗಿ ರಕ್ಷಣಾ ವಕ್ತಾರರ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.

    ಬೆಂಕಿ ಕಾಣಿಸಿಕೊಂಡ ವೇಳೆ ವೇಗದ ಗಾಳಿಯಿಂದ ಕೆಲವೇ ಕ್ಷಣಗಳಲ್ಲಿ ಅಗ್ನಿಯ ಜ್ವಾಲೆ ಹೆಚ್ಚಾಗಿ ಇಡೀ ಪ್ರದೇಶವನ್ನು ಆವರಿಸಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಘಟನೆ ಗಮನಕ್ಕೆ ಬಂದ ಕೂಡಲೇ ವಾಯು ಪಡೆಯ ತುರ್ತು ಸೇವಾ ಅಧಿಕಾರಿಗಳು ಸೇರಿದಂತೆ ಇಲಾಖೆ ಪರಿಹಾರ ಕ್ರಮಗಳನ್ನು ನಡೆಸಿದೆ. ಕೆಲ ವಾಹನಗಳನ್ನು ಬೆಂಕಿಯಿಂದ ರಕ್ಷಣೆ ಮಾಡಿರುವ ಬಗ್ಗೆಯೂ ವಿವರಣೆ ನೀಡಿದ್ದಾರೆ. ಇದನ್ನು ಓದಿ: ಹಣ ಉಳಿಸಲು ಕಾಂಟ್ರ್ಯಾಕ್ಟರ್‌ಗಳು ಮುಂಜಾಗ್ರತ ಕ್ರಮಕೈಗೊಂಡಿಲ್ಲ: ಏರೋ ಶೋ ಹಿಂದಿನ ಕಾಂಟ್ರ್ಯಾಕ್ಟರ್

    ಅಗ್ನಿ ಅವಘಡದಲ್ಲಿ ಕಾರು ಕಳೆದುಕೊಂಡ ಸಾರ್ವಜನಿಕರಿಗೆ ನೆರವಾಗಲು ಸಹಾಯವಾಣಿಯನು ತೆರಯಲಾಗಿದ್ದು, 94808 01415 ಮತ್ತು 080-2294 2536 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಇತ್ತ ಏರ್ ಶೋನ ಅಂತಿಮ ದಿನದ ಪ್ರದರ್ಶನ ಆರಂಭಗೊಂಡು ಯಾವುದೇ ಅಡೆ ತಡೆ ಇಲ್ಲದೆ ನಡೆಯುತ್ತಿದೆ. ಬೆಂಕಿಯ ಅವಘಡದ ಬಳಿಕವೂ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಕ್ಷಣಾ ಸಚಿವರ ಎದುರೇ ಕೆಜಿ ಬೋಪಯ್ಯ, ಕಾಫಿ ಪ್ಲಾಂಟರ್ ನಡುವೆ ಮಾತಿನ ಚಕಮಕಿ!

    ರಕ್ಷಣಾ ಸಚಿವರ ಎದುರೇ ಕೆಜಿ ಬೋಪಯ್ಯ, ಕಾಫಿ ಪ್ಲಾಂಟರ್ ನಡುವೆ ಮಾತಿನ ಚಕಮಕಿ!

    ಮಡಿಕೇರಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಎದುರೇ ಶಾಸಕ, ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಹಾಗೂ ಕಾಫಿ ಪ್ಲಾಂಟರ್ ಒಬ್ಬರ ಜೊತೆ ಹಟ್ಟಿಹೊಳೆಯಲ್ಲಿ ಮಾತಿನ ಚಕಮಕಿ ನಡೆಯಿತು.

    ಕೊಡಗಿನ ಪ್ರವಾಹ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಚಿವೆ ಭೂಕುಸಿತವಾಗಿರುವ ಹಟ್ಟಿಹೊಳೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೇ ಅಲ್ಲಿನ ನೆರೆ ಸಂತ್ರಸ್ತರೊಂದಿಗೆ ಮಾತಕತೆ ನಡೆಸಿ ಮಾಹಿತಿ ಪಡೆದರು.

    ಈ ವೇಳೆ ಕಾಫಿ ಪ್ಲಾಂಟರ್ ಒಬ್ಬರು ಇಲ್ಲಿನ ಗ್ರಾಮಗಳ ಸ್ಥಳಾಂತರ ಮಾಡುವಂತೆ ಮನವಿ ಮಾಡಿದರು. ತಕ್ಷಣ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಜಿ ಬೋಪಯ್ಯ ಅವರು, ಯಾವುದೇ ಕಾರಣಕ್ಕೂ ಗ್ರಾಮಗಳ ಸ್ಥಳಾಂತರ ಮಾಡುವ ಮಾತುಬೇಡ ಎಂದು ಖಡಕ್ ಪ್ರತಿಕ್ರಿಯಿಸಿದರು.

    ಗುರುವಾರ ಸಂಪಾಜೆಯಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ್ದ ಬೋಪಯ್ಯ ಅವರು, ಇಲ್ಲಿನ ಎಲ್ಲಾ ಗ್ರಾಮಗಳು ಸಂಪೂರ್ಣ ನಾಶವಾಗಿದ್ದು, ನಿರಾಶ್ರಿತರಿಗೆ ಈ ಹಿಂದೆ ಇರುವ ಸ್ಥಳದಲ್ಲೇ ಮತ್ತೆ ಮನೆ ನಿರ್ಮಾಣ ಮಾಡುವ ಪರಿಶೀಲನೆ ನಡೆಸುವ ಚಿಂತನೆ ಇದೆ. ತಜ್ಞರ ವರದಿ ಅನ್ವಯ ಸದ್ಯ ಕೆಲ ಪ್ರದೇಶಗಳು ವಾಸ ಮಾಡಲು ಸಾಧ್ಯವಿಲ್ಲ ಎಂದು ವರದಿ ನೀಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಭೂಕುಸಿತ ಸಂಭವಿಸಲು ಯಾವುದೇ ರೆಸಾರ್ಟ್ ಕಾರಣವಲ್ಲ. ರೆಸಾರ್ಟ್ ಇರುವ ಪ್ರದೇಶದಲ್ಲಿ ಮಾತ್ರ ಭೂ ಕುಸಿತ ಸಂಭವಿಸಿಲ್ಲ. ಹೆಚ್ಚು ಬಡಜನರೇ ಇರುವ ಕಡೆ ಭೂ ಕುಸಿತ ಸಂಭವಿಸಿದೆ. ಈ ಕುರಿತು ಸಂಪೂರ್ಣ ವರದಿ ಪಡೆಯಲಾಗುವುದು. ಆದರೆ ಗುಡ್ಡ ಕುಸಿತ ಬಗ್ಗೆ ಖಚಿತ ಮಾಹಿತಿ ಇಲ್ಲದೇ ಮಾತನಾಡುವುದು ಬೇಡ. ವೈಜ್ಞಾನಿಕ ವರದಿ ಬಂದ ಮೇಲೆ ಮಾತ್ರ ಈ ಕುರಿತು ಕ್ರಮಕೈಗೊಳ್ಳಲಾಗುತ್ತದೆ. ಆದರೆ ಈ ಕುರಿತು ಅಪಪ್ರಚಾರ ಬೇಡ ಎಂದು ತಿಳಿಸಿದ್ದರು.

    ಇತ್ತ ಪ್ರವಾಹದಲ್ಲಿ ನಾಪತ್ತೆಯಾಗಿರುವ ಜನರ ಮೃತ ದೇಹ ಹೊರತೆಗೆಯುವ ಕಾರ್ಯಾಚರಣೆ, ತಾತ್ಕಾಲಿಕ ರಸ್ತೆ ಸಂಪರ್ಕ ಕಲ್ಪಿಸುವ ಹಾಗೂ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ಮುಂದುವರಿಸುವಂತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೇನಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭೂ ಕುಸಿತ ಪ್ರದೇಶ ವೀಕ್ಷಣೆಗೆ ತೆರಳಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಬೀಫ್ ರಫ್ತಿನಲ್ಲಿ ಭಾರತ ನಂಬರ್ 1 ಅನ್ನೋದು ಸುಳ್ಳು: ನಿರ್ಮಲಾ ಸೀತಾರಾಮನ್

    ಬೀಫ್ ರಫ್ತಿನಲ್ಲಿ ಭಾರತ ನಂಬರ್ 1 ಅನ್ನೋದು ಸುಳ್ಳು: ನಿರ್ಮಲಾ ಸೀತಾರಾಮನ್

    ಉಡುಪಿ: ಬೀಫ್ ರಫ್ತಿನಲ್ಲಿ ಭಾರತ ನಂಬರ್ 1 ಎನ್ನುವುದು ಸುಳ್ಳು ಆರೋಪ ಎಂದು ಕೇಂದ್ರ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ಇದೊಂದು ತಪ್ಪು ಕಲ್ಪನೆ. ಬೀಫ್ ಅಂದ್ರೆ ದನದ ಮಾಂಸ. ದನದ ಮಾಂಸ ರಫ್ತು ಮಾಡೋದು ನಿಷೇಧವಾಗಿದೆ. ಆದ್ರೆ ನಮ್ಮಿಂದ ರಫ್ತಾಗುತ್ತಿರುವುದು ಖಾರ ಬೀಫ್ ಎಂದು ತಿಳಿಸಿದರು.

    ಖಾರ ಬೀಫ್ ಅಂದ್ರೆ ಎಮ್ಮೆ ಮತ್ತು ಕೋಣದ ಮಾಂಸ. ಖಾರ ಬೀಫ್ ರಫ್ತು ನಿಷೇಧವಾಗಿಲ್ಲ. ಇಷ್ಟಾದ್ರೂ ಗೊಂದಲ ಸೃಷ್ಟಿಸಲಾಗುತ್ತಿದೆ. ಹಲವು ಬಾರಿ ಸ್ಪಷ್ಟೀಕರಣ ನೀಡಿದರೂ ಕೆಲವರು ಖಾರ ಪದವನ್ನು ಬಳಸದೇ ಕೇವಲ ಬೀಫ್ ಪದವನ್ನು ಮಾತ್ರ ಬಳಸುತ್ತಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.