Tag: Nita Ambani

  • ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಕರ್ನಾಟಕದ 590 ವಿದ್ಯಾರ್ಥಿಗಳು ಆಯ್ಕೆ

    ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಕರ್ನಾಟಕದ 590 ವಿದ್ಯಾರ್ಥಿಗಳು ಆಯ್ಕೆ

    ಮುಂಬೈ: ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರ ಪಟ್ಟಿಯನ್ನು ರಿಲಯನ್ಸ್ ಫೌಂಡೇಷನ್‌ (Reliance Foundation) ಘೋಷಣೆ ಮಾಡಿದೆ.

    2024-25ನೇ ಸಾಲಿನ, ಭಾರತದಾದ್ಯಂತ ಐದು ಸಾವಿರ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಭಾರತದ ಭವಿಷ್ಯವನ್ನು ರೂಪಿಸುವುದಕ್ಕೆ ಸಬಲಗೊಳಿಸಬೇಕು, ಯುವ ಪ್ರತಿಭಾವಂತರನ್ನು ಉತ್ತೇಜಿಸಬೇಕು ಎಂಬ ಉದ್ದೇಶದಿಂದ ರಿಲಯನ್ಸ್ ಫೌಂಡೇಷನ್ ಇಂಥದ್ದೊಂದು ಕಾರ್ಯಕ್ರಮವನ್ನು ರೂಪಿಸಿದೆ. ಈ ವಿದ್ಯಾರ್ಥಿ ವೇತನಕ್ಕಾಗಿ ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ, ವಿವಿಧ ಹಿನ್ನೆಲೆಯ ಒಂದು ಲಕ್ಷ ಸಂಖ್ಯೆಯ ಪ್ರಥಮ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬೆಂಗಳೂರಿನ 1ಎಂಜಿ ಮಾಲ್‌ನಲ್ಲಿ ರಿಲಯನ್ಸ್‌ನ ಫ್ರೆಶ್‌ಪಿಕ್ ಮಳಿಗೆ

    ಆಯ್ಕೆಯಾದ ವಿದ್ಯಾರ್ಥಿಗಳು ವಿವಿಧ ಹಿನ್ನೆಲೆಯ ಹಾಗೂ ಶೈಕ್ಷಣಿಕ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ಹಣಕಾಸಿನ ನೆರವು, ಮಾರ್ಗದರ್ಶನ ಮತ್ತು ಸರ್ವತೋಮುಖ ಬೆಳವಣಿಗೆಯ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ. ಇದರಲ್ಲಿ ಉಲ್ಲೇಖಿಸಲೇ ಬೇಕಾದ ಸಂಗತಿ ಏನೆಂದರೆ, 1300ರಲ್ಲಿ 670 ಸಂಸ್ಥೆಗಳು ಹಾಗೂ 5000 ವಿದ್ಯಾರ್ಥಿಗಳ ಪೈಕಿ 590 ಮಂದಿ ಕರ್ನಾಟಕಕ್ಕೆ ಸೇರಿರುವುದು. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಸಿಂಹಪಾಲು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಇನ್ನು ಒಟ್ಟಾರೆಯಾಗಿ ನೋಡಿದರೆ, ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವುದರಲ್ಲಿ ಶೇಕಡಾ 70ರಷ್ಟು ಕುಟುಂಬಗಳ ವಾರ್ಷಿಕ ಆದಾಯವು 2.50 ಲಕ್ಷ ರೂಪಾಯಿಗಿಂತ ಕಡಿಮೆ ಇದೆ.

    ಈ ಸ್ಕಾಲರ್‌ಷಿಪ್ ವಿದ್ಯಾರ್ಥಿಯ ಬೋಧನಾ ಶುಲ್ಕ (ಟ್ಯೂಷನ್ ಫೀ), ಹಾಸ್ಟೆಲ್ ವೆಚ್ಚ ಮತ್ತು ಇತರ ಶೈಕ್ಷಣಿಕ ಶುಲ್ಕವನ್ನು ಭರಿಸುತ್ತದೆ. ಆ ಮೂಲಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕವಾದ ಸಮಸ್ಯೆಗಳ ಕಡೆಗೆ ಆಲೋಚನೆ ಮಾಡುವ ಅಗತ್ಯವಿಲ್ಲದೆ ಓದಿನ ಕಡೆಗೆ ಗಮನ ಕೊಡಬಹುದಾಗಿರುತ್ತದೆ. ಹಣಕಾಸಿನ ನೆರವು ಮಾತ್ರವಲ್ಲದೆ, ಈ ವಿದ್ಯಾರ್ಥಿಗಳಿಗೆ ಸಮಗ್ರವಾದ ಬೆಂಬಲ, ಮಾರ್ಗದರ್ಶನ, ವೃತ್ತಿಪರವಾದ ಬೆಳವಣಿಗೆಗೆ ಅವಕಾಶಗಳನ್ನು ಒದಗಿಸಿಕೊಡಲಾಗುವುದು. ಇದನ್ನೂ ಓದಿ: ಡೇಟಾ ಟ್ರಾಫಿಕ್‌- ಚೀನಾ ಕಂಪನಿ ಹಿಂದಿಕ್ಕಿದ ರಿಲಯನ್ಸ್‌

    ರಿಲಯನ್ಸ್ ವಕ್ತಾರರು ಈ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಈ ಅಸಾಧಾರಣ ಯುವ ಮನಸ್ಸುಗಳನ್ನು ಗುರುತಿಸಲು ಮತ್ತು ಬೆಂಬಲಿಸಲು ನಾವು ಸಂತೋಷಪಡುತ್ತೇವೆ. ಪ್ರತಿಷ್ಠಿತ ರಿಲಯನ್ಸ್ ಫೌಂಡೇಷನ್ ಪದವಿ ಹಂತದ ಸ್ಕಾಲರ್‌ಷಿಪ್‌ಗಳ ಮೂಲಕವಾಗಿ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಬಳಸುವುದಕ್ಕೆ ಮತ್ತು ಭಾರತದ ಬೆಳವಣಿಗೆಗೆ ಗಮನಾರ್ಹ ಕೊಡುಗೆಗಳನ್ನು ನೀಡಲು ಸಶಕ್ತಗೊಳಿಸುವ ಗುರಿಯನ್ನು ಹೊಂದಿದೆ.ಈ ವರ್ಷ ನಾವು ಸುಮಾರು ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಆಯ್ಕೆಯಾದವರು ದೇಶದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಶಿಕ್ಷಣವು ಅವಕಾಶಗಳನ್ನು ತೆರೆಯುವಂಥ ಕೀಲಿಯಾಗಿದೆ. ಈ ವಿದ್ಯಾರ್ಥಿಗಳ ಪರಿವರ್ತನೆಯ ಪ್ರಯಾಣದ ಭಾಗವಾಗಿರುವುದಕ್ಕೆ ನಾವು ಹೆಮ್ಮೆಪಡುತ್ತೇವೆ ಎಂದು ಹೇಳಿದ್ದಾರೆ.

    ಫಲಿತಾಂಶ ಪರಿಶೀಲಿಸುವುದು ಹೇಗೆ?
    ಸ್ಕಾಲಶಿಪ್‌ಗಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು https://reliancefoundation.org/ug-scholarships-2024-25-results ವೆಬ್‌ಸೈಗೆ ಭೇಟಿ ನೀಡಬೇಕು. ಅದರಲ್ಲಿ 2024-25ನೇ ಸಾಲಿನ ವಿದ್ಯಾರ್ಥಿವೇತನಕ್ಕಾಗಿ https://scholarships.reliancefoundation.org/UGScholarship_ApplicationStatus.aspx ಮೀಸಲಾದ ಪುಟಕ್ಕೆ ತೆರಳಿ, 17 ಅಂಕಿಯ ಅರ್ಜಿ ಸಂಖ್ಯೆಯನ್ನು ಅಥವಾ ನೋಂದಾಯಿತ ಇ-ಮೇಲ್ ಐಡಿ ನಮೂದಿಸಬೇಕು. ಆ ನಂತರ ಸಲ್ಲಿಸು (ಸಬ್ ಮಿಟ್) ಎಂಬ ಆಯ್ಕೆ ಇರುವ ಬಟನ್ ಒತ್ತುವ ಮೂಲಕವಾಗಿ ಫಲಿತಾಂಶವನ್ನು ನೋಡಬಹುದು. ಅರ್ಜಿಯ ಸ್ಥಿತಿಯು ‘Shortlisted’, ‘Waitlisted’ ಮತ್ತು ‘Not Shortlisted’ ಹೀಗೆ ಮೂರು ವಿಭಾಗಗಳಲ್ಲಿ ಇರುತ್ತದೆ. ಇದನ್ನೂ ಓದಿ: ಚೆನ್ನೈ ರಿಲಯನ್ಸ್‌ ಕ್ಯಾಂಪಸ್‌ನಲ್ಲಿ ಫೇಸ್‌ಬುಕ್‌ ಡೇಟಾ ಸೆಂಟರ್‌!

    ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ಲಕ್ಷ ರೂಪಾಯಿ ತನಕ ವಿದ್ಯಾರ್ಥಿ ವೇತನ ದೊರೆಯುತ್ತದೆ. 1996ನೇ ಇಸವಿಯಲ್ಲಿ ಆರಂಭವಾದ ಈ ಕಾರ್ಯಕ್ರಮವು 2020ರ ಹೊತ್ತಿಗೆ ಭಾರತದಾದ್ಯಂತ 28,000 ವಿದ್ಯಾರ್ಥಿಗಳನ್ನು ತಲುಪಿತ್ತು. 2022ರ ಡಿಸೆಂಬರ್‌ನಲ್ಲಿ ರಿಲಯನ್ಸ್ ಸ್ಥಾಪಕರಾದ ಧೀರೂಭಾಯಿ ಅಂಬಾನಿ ಅವರ ತೊಂಬತ್ತನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ, ‘ಮುಂದಿನ ಹತ್ತು ವರ್ಷಗಳಲ್ಲಿ ಇನ್ನೂ ಐವತ್ತು ಸಾವಿರ ಸ್ಕಾಲರ್‌ಶಿಪ್‌ಗಳನ್ನು ನೀಡುತ್ತೇವೆ ಎಂದು ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಹಾಗೂ ಮುಖ್ಯಸ್ಥೆಯಾದ ನೀತಾ ಅಂಬಾನಿ ಘೋಷಣೆ ಮಾಡಿದರು. ಆ ನಂತರದಲ್ಲಿ ಪ್ರತಿ ವರ್ಷ 5,100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

  • ಗ್ರಾಹಕರಿಗೆ ಉಚಿತವಾಗಿ 100 ಜಿಬಿ ಕ್ಲೌಡ್ ಸಂಗ್ರಹ ನೀಡಲಿದೆ ರಿಲಯನ್ಸ್ ಜಿಯೋ

    ಗ್ರಾಹಕರಿಗೆ ಉಚಿತವಾಗಿ 100 ಜಿಬಿ ಕ್ಲೌಡ್ ಸಂಗ್ರಹ ನೀಡಲಿದೆ ರಿಲಯನ್ಸ್ ಜಿಯೋ

    ಮುಂಬೈ: ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ಬಂಪರ್ ಆಫರ್ ತಂದಿದೆ. ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತದೆ. ಫೋಟೋಗಳು, ವೀಡಿಯೋಗಳು ಅಥವಾ ಡಾಕ್ಯುಮೆಂಟ್‌ಗಳನ್ನು ಸಂಗ್ರಹಿಸಬಹುದು.

    ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (Reliance AGM 2024) ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ. ಕೆಲವು ಜಿಬಿಯಷ್ಟು ಸಂಗ್ರಹವನ್ನು ಉಚಿತವಾಗಿ ನೀಡಿದ ನಂತರ ಗೂಗಲ್ ಮತ್ತು ಇತರ ಕಂಪನಿಗಳು ಕ್ಲೌಡ್ ಸಂಗ್ರಹಣೆಗೆ ಶುಲ್ಕ ವಿಧಿಸುತ್ತವೆ. ಇದನ್ನೂ ಓದಿ: Telegram Ban | ಭಾರತದಲ್ಲಿ ಬ್ಯಾನ್ ಆಗುತ್ತಾ ಟೆಲಿಗ್ರಾಂ ಆ್ಯಪ್?

    ಅಲ್ಲದೆ, ಜಿಯೋ ಬ್ರೈನ್ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು ಇದನ್ನು ‘ಎಐ ಎವೆರಿವೇರ್ ಫಾರ್ ಎವರಿಒನ್’ ಎಂಬ ಥೀಮ್ ಮೇಲೆ ಪ್ರಾರಂಭಿಸುತ್ತದೆ.

    ಜಿಯೋ ಸಂಪೂರ್ಣ ಎಐ ಅನ್ನು ಒಳಗೊಂಡ ಪರಿಕರಗಳು ಮತ್ತು ಪ್ಲಾಟ್‌ಫಾರ್ಮ್‌ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಇದನ್ನು ‘ಜಿಯೋ ಬ್ರೈನ್’ ಎಂದು ಕರೆಯಲಾಗುತ್ತದೆ. ‘ರಿಲಯನ್ಸ್‌ ಜಿಯೋ ಬ್ರೈನ್ ಅನ್ನು ಗಟ್ಟಿಗೊಳಿಸುವ ಮೂಲಕ ನಾವು ಶಕ್ತಿಯುತ ಎಐ ಸೇವೆಗಳ ಪ್ಲಾಟ್‌ಫಾರ್ಮ್ ರೂಪಿಸುತ್ತೇವೆ ಎಂಬುದಾಗಿ ನಾನು ಭಾವಿಸುತ್ತೇನೆ’ ಎಂದು ಅಂಬಾನಿ ಹೇಳಿದರು. ನಾವು ಜಾಮ್‌ನಗರದಲ್ಲಿ ಗಿಗಾವ್ಯಾಟ್-ಪ್ರಮಾಣದ ಎಐ- ಸಿದ್ಧ ಡೇಟಾ ಕೇಂದ್ರವನ್ನು ಸ್ಥಾಪಿಸಲು ಯೋಜಿಸಿದ್ದೇವೆ. ಇದು ಸಂಪೂರ್ಣವಾಗಿ ರಿಲಯನ್ಸ್‌ನ ಹಸಿರು ಶಕ್ತಿಯಿಂದ ಚಾಲಿತವಾಗುತ್ತದೆ. ಭಾರತದಲ್ಲಿಯೇ ವಿಶ್ವದ ಅತ್ಯಂತ ಕೈಗೆಟುಕುವ ಎಐ ಇಂಟರ್ ಫೇಸಿಂಗ್ ಸೃಷ್ಟಿಸುವುದು ನಮ್ಮ ಗುರಿಯಾಗಿದೆ. ‘ಇದು ಭಾರತದಲ್ಲಿ ಎಐ ಅಪ್ಲಿಕೇಷನ್‌ಗಳನ್ನು ಹೆಚ್ಚು ಕೈಗೆಟುಕುವಂತೆ ಮತ್ತು ಎಲ್ಲರಿಗೂ ಸಂಪರ್ಕ ಸಿಗುವಂತೆ ಮಾಡುತ್ತದೆ’ ಎಂದರು.

    ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಹಲವಾರು ಹೊಸ ಎಐ ಸೇವೆಗಳನ್ನು ಘೋಷಿಸಿದ್ದಾರೆ. ಇದು ಜಿಯೋ ಟಿವಿಒಎಸ್ (Jio TVOS), ಹಲೋಜಿಯೋ (HelloJio), ಜಿಯೋ ಐಒಟಿ ಸಲ್ಯೂಷನ್ (Jio Home IoT), ಜಿಯೋ ಹೋಮ್ (JioHome) ಅಪ್ಲಿಕೇಷನ್ ಮತ್ತು ಜಿಯೋ ಫೋನ್ ಕಾಲ್ ಎಐ (Jio Phonecall AI) ಅನ್ನು ಒಳಗೊಂಡಿದೆ. ಇದನ್ನೂ ಓದಿ: ಕೀಬೋರ್ಡ್‌ನಲ್ಲಿ ಡಾಲರ್ ಬದಲು ರುಪಿ ಚಿಹ್ನೆ ಯಾಕಿಲ್ಲ – ಓಲಾ ಸಿಇಒ ಪ್ರಶ್ನೆ

  • ಮಗನ ಮದುವೆ ಬೆನ್ನಲ್ಲೇ ಕ್ಷಮೆಯಾಚಿಸಿದ ನೀತಾ ಅಂಬಾನಿ

    ಮಗನ ಮದುವೆ ಬೆನ್ನಲ್ಲೇ ಕ್ಷಮೆಯಾಚಿಸಿದ ನೀತಾ ಅಂಬಾನಿ

    ಅಂಬಾನಿ ಪುತ್ರ ಅನಂತ್ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಮದುವೆ ಅದ್ಧೂರಿಯಾಗಿ ನೆರವೇರಿದೆ. ಮದುವೆಗೆ ಸಂಬಂಧಿಸಿದ ವಿಡಿಯೋಗಳು, ಗೆಸ್ಟ್ ಲಿಸ್ಟ್, ಅದ್ಧೂರಿತನ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ. ಮಗನ ಮದುವೆ ಬೆನ್ನಲ್ಲೇ ನೀತಾ ಅಂಬಾನಿ ಮಾಧ್ಯಮಕ್ಕೆ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ:‘ಬ್ಯಾಚುಲರ್ ಪಾರ್ಟಿ’ ಕಾಪಿರೈಟ್ ಉಲ್ಲಂಘನೆ ಕೇಸ್ – ನೋಟಿಸ್ ನೀಡಿರೋದಾಗಿ ಡಿಸಿಪಿ ಸ್ಪಷ್ಟನೆ

    ಮದುವೆ ಬಂದು ಹಾರೈಸಿದಕ್ಕೆ, ತುಂಬಾ ತಾಳ್ಮೆಯಿಂದ ಕಾರ್ಯಕ್ರಮಕ್ಕೆ ಹಾಜರಿ ಹಾಕಿರುವುದಕ್ಕೆ ಧನ್ಯವಾದ ಎಂದಿದ್ದಾರೆ. ಈ ಮದುವೆ ಸಂದರ್ಭದಲ್ಲಿ ಏನಾದರೂ, ಯಾರಿಗಾದರೂ ಕಷ್ಟ ಆಗಿದ್ದರೆ ಕ್ಷಮೆ ಕೋರುತ್ತೇನೆ. ಇದು ಮದುವೆ ಮನೆ, ಏನಾದರೂ ತೊಂದರೆ ಆಗಿರಬಹುದು. ಹೀಗೆ ಏನಾದರೂ ಆಗಿದ್ರೆ ಕ್ಷಮಿಸಿಬಿಡಿ ಎಂದು ನೀತಾ ಅಂಬಾನಿ ಹೇಳಿದ್ದಾರೆ. ಈಗಾಗಲೇ ನೀವು ಮದುವೆಗೆ ಬಂದು ಕಳೆ ಹೆಚ್ಚಿಸಿದ್ದೀರಿ. ವಿವಾಹೋತ್ತರ ಕಾರ್ಯಕ್ರಮಗಳು ಇನ್ನೂ ಜಾರಿಯಲ್ಲಿದೆ. ಅವುಗಳಿಗೂ ನೀವು ಬಂದು ಶುಭಹಾರೈಸಬೇಕು ಎಂದು ನೀತಾ ಅಂಬಾನಿ (Nita Ambani) ಹೇಳಿದ್ದಾರೆ. ಇದನ್ನೂ ಓದಿ:ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

    ಅಂದಹಾಗೆ, ಹಲವು ವರ್ಷಗಳ ಪ್ರೀತಿಗೆ ಅನಂತ್ ಮತ್ತು ರಾಧಿಕಾ ಜು.12ರಂದು ಮದುವೆಯ ಮುದ್ರೆ ಒತ್ತಿದ್ದಾರೆ. ಈ ವಿವಾಹದಲ್ಲಿ ಯಶ್ ದಂಪತಿ, ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ ದಂಪತಿ, ರಜನಿಕಾಂತ್, ಬಿಗ್ ಬಿ ಫ್ಯಾಮಿಲಿ, ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

  • AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌!

    AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌!

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ಅದ್ಧೂರಿ ವಿವಾಹ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೇ ಬಂದಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.

    ಮುಂಬೈನ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ʻಶುಭ ಆಶೀರ್ವಾದʼ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯಿಲ್ಲದೇ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು, ಕೇಸ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

    ಆಹ್ವಾನವಿಲ್ಲದೇ ಪ್ರವೇಶಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ವ್ಯಕ್ತಿಗಳ ಪೈಕಿ ಒಬ್ಬರು ಯೂಟ್ಯೂಬರ್ ವೆಂಕಟೇಶ್ ನರಸಯ್ಯ ಅಲ್ಲೂರಿ (26), ಮತ್ತೊಬ್ಬ ವ್ಯಕ್ತಿ ಲುಕ್ಮಾನ್ ಮೊಹಮ್ಮದ್ ಶಫಿ ಶೇಖ್ (28) ಎಂದು ಗುರುತಿಸಲಾಗಿದೆ. ಶಫಿ ತನ್ನನ್ನು ಉದ್ಯಮಿ ಅಂತ ಹೇಳಿಕೊಂಡು ಜಿಯೋ ವರ್ಲ್ಡ್‌ ಸೆಂಟರ್‌ಗೆ ಪ್ರವೇಶಿಸಿದ್ದ. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದ ಮುಂಬೈನ ಬಿಕೆಸಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ – ಲೆಕ್ಕಕೊಟ್ಟ ಮೋದಿ ವಿರುದ್ಧ ಖರ್ಗೆ ಕಿಡಿ!

    ನವದಂಪತಿಗೆ ನಮೋ ಆಶೀರ್ವಾದ:
    ಶನಿವಾರ ನಡೆದ ʻಶುಭ ಆಶೀರ್ವಾದʼ ಕಾರ್ಯಕ್ರಮದಲ್ಲಿ (Shubh Ashirwad Ceremony) ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಭಾಗಿಯಾಗಿ ನವದಂಪತಿಗಳಿಗೆ ಆಶೀರ್ವದಿಸಿದರು. ಇದನ್ನೂ ಓದಿ: ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ರಾಜಕೀಯ ನಾಯಕರ ದಂಡು:
    ಅನಂತ್-ರಾಧಿಕಾ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ, ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಹಿರಿಯ ನಾಯಕಿ ಸುಪ್ರಿಯಾ ಸುಳೆ ಸಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: 

  • ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

    ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಪಾಲ್ಗೊಂಡರು.

    ವಿವಾಹಮಹೋತ್ಸವದ ಭಾಗವಾಗಿ ಶನಿವಾರ ನಡೆದ ʻಶುಭ ಆಶೀರ್ವಾದʼ ಕಾರ್ಯಕ್ರಮದಲ್ಲಿ (Shubh Ashirwad Ceremony) ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗೆ ಆಶೀರ್ವದಿಸಿದರು. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?

    ಎಸ್‌ಪಿಜಿ ಭದ್ರತೆಯೊಂದಿಗೆ ಮೋದಿ ಅವರು ಮುಂಬೈನ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ಗೆ ಆಗಮಿಸುತ್ತಲೇ ಮುಕೇಶ್‌ ಅಂಬಾನಿ ಹಾಗೂ ನೀತಾ ಅಂಬಾನಿ ಸ್ವಾಗತ ಕೋರಿದರು, ಬಳಿಕ ಮೋದಿ ಅವರ ಕಾಲಿಗೆ ನಮಸ್ಕರಿಸಿದರು. ಇದಾದ ಬಳಿಕ ಅಂಬಾನಿ ಕುಟುಂಬವನ್ನು ಭೇಟಿಯಾದ ಮೋದಿ, ಮುಕೇಶ್‌ ಅಂಬಾನಿ ಪಕ್ಕದಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ಕೆಲಕಾಲ ಸಂಗೀತ ಆಲಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಮಾರು 29 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಲು ಮುಂಬೈಗೆ ತೆರಳಿದ್ದರು. ಈ ವೇಳೆ ಅನಂತ್‌-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವ ಭಾಗವಾಗಿ ನಡೆದ ಶುಭ ಆಶೀರ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಇತರ ಗಣ್ಯರನ್ನೂ ಮೋದಿ ಭೇಟಿಯಾದರು. ಇದನ್ನೂ ಓದಿ: Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    ರಾಜಕೀಯ ನಾಯಕರ ದಂಡು:
    ಅನಂತ್-ರಾಧಿಕಾ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ, ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಹಿರಿಯ ನಾಯಕಿ ಸುಪ್ರಿಯಾ ಸುಳೆ ಸಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

    ಕಾಂಗ್ರೆಸ್ ನಾಯಕರೂ ಭಾಗಿ:
    ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ನಾಯಕರೂ ಪಾಲ್ಗೊಂಡಿದ್ದಾರೆ. ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಶುಕ್ಲಾ ಸೇರಿದಂತೆ ಅನೇಕ ಹಿರಿಯ ನಾಯಕರು ಪಾಲ್ಗೊಂಡು ನವದಂಪತಿಗಳಿಗೆ ಆಶೀರ್ವದಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಭಾಗಗಳಲ್ಲಿ ಟೆಲಿಕಾಂ ಸಂಪರ್ಕ ಸುಧಾರಣೆಗೆ ‘ಡಿಜಿಟಲ್‌ ಭಾರತ್‌ ನಿಧಿ’ – ಏನಿದು ಯೋಜನೆ? 

  • ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್‌ ಅಂಬಾನಿ ಕುಟುಂಬ!

    ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್‌ ಅಂಬಾನಿ ಕುಟುಂಬ!

    ಜೈಪುರ: ರಿಲಯನ್ಸ್‌ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರಿಂದು ಕುಟುಂಬಸ್ಥರೊಂದಿಗೆ ಮತಚಲಾಯಿಸಿದರು. ಮುಂಬೈನ ಮಲಬಾರ್ ಹಿಲ್ ಮತಗಟ್ಟೆಯಲ್ಲಿ ಪತ್ನಿ ನೀತಾ ಅಂಬಾನಿ, ಪುತ್ರ ಆಕಾಶ್‌ ಅಂಬಾನಿಯೊಂದಿಗೆ (Akash Ambani) ಬಂದು ಹಕ್ಕು ಚಲಾಯಿಸಿದರು.

    ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಕೇಶ್‌ ಅಂಬಾನಿ, ಭಾರತೀಯ ಪ್ರಜೆಯಾಗಿ ಮತದಾನ ಮಾಡಬೇಕಾದದ್ದು ನಮ್ಮ ಕರ್ತವ್ಯ. ಇದು ಪ್ರಜಾಪ್ರಭುತ್ವ ದೇಶ, ಪ್ರತಿಯೊಬ್ಬ ಭಾರತೀಯನೂ ವೋಟ್‌ (Vote) ಮಾಡಬೇಕು ಎಂಬುದು ನನ್ನ ಮನವಿ ಎಂದು ನುಡಿದರು. ಇದೇ ವೇಳೆ, ಭಾರತೀಯ ಪ್ರಜೆಯಾಗಿ ಮತದಾನ ಮಾಡುವುದು ಮುಖ್ಯ. ಏಕೆಂದರೆ ಇದು ನಮ್ಮ ಹಕ್ಕು ಮತ್ತು ಕರ್ತವ್ಯ ಎಂದು ಪತ್ನಿ ನೀತಾ ಅಂಬಾನಿ (Nita Ambani) ಮತದಾನಕ್ಕೆ ಕರೆ ಕೊಟ್ಟರು.

    ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು (ಸೋಮವಾರ) ನಡೆದಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೂ ಮತದಾನ ನಡೆದಿದೆ. ಇನ್ನೂ 2 ಹಂತದ ಚುನಾವಣೆ ಬಾಕಿಯಿದ್ದು, ಮೇ 25 ರಂದು 6ನೇ ಹಂತ ಹಾಗೂ ಜೂನ್‌ 1ರಂದು 7ನೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಜೂನ್‌ 4ರಂದು 7 ಹಂತಗಳ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

    ಮತದಾನ ನಡೆದ ಪ್ರಮುಖ ಕ್ಷೇತ್ರಗಳು:
    ಲಕ್ನೋ, ರಾಯ್ ಬರೇಲಿ, ಅಮೇಥಿ, ಫತೇಪುರ್, ಫೈಜಾಬಾದ್, ಕೈಸರ್‌ಗಂಜ್, ನಾಸಿಕ್, ಪಾಲ್ಘರ್, ಕಲ್ಯಾಣ್, ಥಾಣೆ, ಮುಂಬೈ ಉತ್ತರ ಮತ್ತು ಮಹಾರಾಷ್ಟ್ರದ ಮುಂಬೈ ದಕ್ಷಿಣ, ಬಂಗಾವ್, ಬ್ಯಾರಕ್‌ಪೋರ್, ಹೌರಾ ಮತ್ತು ಪಶ್ಚಿಮ ಬಂಗಾಳದ ಹೂಗ್ಲಿ, ಬಿಹಾರದ ಮುಜಾಫರ್‌ಪುರ, ಸರನ್ ಮತ್ತು ಹಾಜಿಪುರ, ಸುಂದರ್‌ಗಢ, ಒಡಿಶಾದ ಬೋಲಂಗೀರ್ ಮತ್ತು ಕಂಧಮಾಲ್, ಜಾರ್ಖಂಡ್‌ನ ಕೋಡರ್ಮಾ ಮತ್ತು ಹಜಾರಿಬಾಗ್, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ.

    ಚುನಾವಣಾ ಕಣದಲ್ಲಿದ್ದವರು:
    ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ಪಿಯೂಷ್ ಗೋಯಲ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ, ಸಜ್ಜದ್ ಗನಿ ಲೋನ್, ಸಾಧ್ವಿ ನಿರಂಜನ್ ಜ್ಯೋತಿ, ಲಲ್ಲು ಸಿಂಗ್, ಕರಣ್ ಭೂಷಣ್ ಸಿಂಗ್, ಕೀರ್ತಿ ವರ್ಧನ್ ಸಿಂಗ್, ತನುಜ್ ಪೂಧನ್ ಸಿಂಗ್, ನರೇಶ್ ಉತ್ತಮ್ ಪಟೇಲ್, ಉಜ್ವಲ್ ನಿಕಮ್, ರಾಹುಲ್ ಶೆವಾಲೆ, ಅನಿಲ್ ದೇಸಾಯಿ, ವರ್ಷ ಗಾಯಕ್ವಾಡ್, ಸಂಜಯ್ ದಿನ ಪಾಟೀಲ್, ರವೀಂದ್ರ ವೈಕರ್, ಶ್ರೀಕಾಂತ್ ಶಿಂಧೆ, ಹೇಮಂತ್ ಗೋಡ್ಸೆ, ಭಾರತಿ ಪವಾರ್, ಕಪಿಲ್ ಮೊರೇಶ್ವರ್ ಪಾಟೀಲ್, ಸುಭಾಷ್ ರಾಮರಾವ್ ಭಮ್ರೆ, ಶಾಂತನು ಠಾಕೂರ್, ಅರ್ಜುನ್ ಸಿಂಗ್, ಪ್ರಸೂನೆಟ್ ಚಟರ್ಜಿ, ಕಲ್ಯಾಣ್ ಬ್ಯಾನರ್ಜಿ, ದೇವೇಶ್ ಚಂದ್ರ ಠಾಕೂರ್, ಅಲಿ ಅಶ್ರಫ್ ಫಾತ್ಮಿ, ಅಜಯ್ ನಿಶಾದ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಚಿರಾಗ್ ಪಾಸ್ವಾನ್, ಜುಯಲ್ ಓರಮ್, ದಿಲೀಪ್ ಟಿರ್ಕಿ, ಅಚ್ಯುತ ಸಮಂತಾ, ಸಂಗೀತಾ ಕುಮಾರಿ ಸಿಂಗ್ ಡಿಯೋ, ಅನ್ನಪೂರ್ಣ ದೇವಿ ಮತ್ತು ಜೈ ಪ್ರಕಾಶ್ ಭಾಯಿ ಪಟೇಲ್ ಸೇರಿದಂತೆ ಹಲವಾರು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದರು.

  • ಅಬ್ಬಬ್ಬಾ.. ಸೆಲೆಬ್ರಿಟಿಗಳಿಗೆ ಸೀರೆ ಉಡಿಸೋಕೆ 2 ಲಕ್ಷ ಚಾರ್ಜ್ ಮಾಡ್ತಾರೆ ಡಾಲಿ ಜೈನ್

    ಅಬ್ಬಬ್ಬಾ.. ಸೆಲೆಬ್ರಿಟಿಗಳಿಗೆ ಸೀರೆ ಉಡಿಸೋಕೆ 2 ಲಕ್ಷ ಚಾರ್ಜ್ ಮಾಡ್ತಾರೆ ಡಾಲಿ ಜೈನ್

    ಫ್ಯಾಷನ್ ಲೋಕದಲ್ಲಿ ಸದ್ಯ ಹಲ್ ಚಲ್ ಎಬ್ಬಿಸುತ್ತಿರುವ ವಿಚಾರ ಅಂದರೆ ಸ್ಯಾರಿ ಮ್ಯಾಟರ್. ಅದರಲ್ಲೂ ಸೀರೆ ಉಡಿಸೋಕು ನೋಟು ಎಣಿಸುತ್ತಾರೆ. ಅದಕ್ಕೆ ಲಕ್ಷ ಲಕ್ಷ ಸಂಭಾವನೆ ಪಡೆಯುತ್ತಾರೆ ಅಂತ ಕೇಳಿಯೇ ಫ್ಯಾಷನ್ ಪ್ರಿಯರು ದಂಗಾಗಿದ್ದಾರೆ.

    ಅಂಬಾನಿ ಕುಟುಂಬದ ಹೆಣ್ಣು ಮಕ್ಕಳಿಗೆಲ್ಲಾ ಸೀರೆ ಉಡಿಸಿದ್ದಾರೆ. ಅಷ್ಟೇಕೆ! ದೀಪಿಕಾ ಪಡುಕೋಣೆ (Deepika Padukone), ಸೋನಂ ಕಪೂರ್, ಆಲಿಯಾ ಭಟ್(Alia Bhatt), ಕಿಯಾರಾ ಅಡ್ವಾನಿ (Kiara Advani) ಸೇರಿದಂತೆ ಸಾಕಷ್ಟು ನಟಿಯರು ಇವರ ಬಳಿ ಸೀರೆ ಉಡಿಸಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ಮೃಣಾಲ್ ಠಾಕೂರ್ ಗೆ ಮತ್ತೊಂದು ಬಿಗ್ ಆಫರ್

     

    View this post on Instagram

     

    A post shared by Dolly Jain ???????? (@dolly.jain)

    ಮೂರು ದಿನಗಳ ಕಾಲ ನಡೆದ ಅನಂತ್ ಅಂಬಾನಿ ಪ್ರಿ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಕೇವಲ ಅಂಬಾನಿ ಫ್ಯಾಮಿಲಿಯವರಿಗೆ ಮಾತ್ರವಲ್ಲ, ಆಗಮಿಸಿದ ನಟಿಯರಿಗೂ ಡಾಲಿ ಜೈನ್ ಅತ್ಯಾಕರ್ಷಕವಾಗಿ ಸೀರೆ ಉಡಿಸಿದರೆನ್ನಲಾಗಿದೆ. ಸ್ಟಾರ್ ಸೀರೆ ಡ್ರೇಪರ್ ಎಂದು ಕರೆಸಿಕೊಳ್ಳುವ ಇವರ ಸಂಭಾವನೆ ಕೂಡ ಕಡಿಮೆಯೇನಲ್ಲ! ಮೂಲಗಳ ಪ್ರಕಾರ, ಇವರು 35,000 ರೂ.ಗಳಿಂದ 2 ಲಕ್ಷ ರೂ.ಗಳವರೆಗೂ ಶುಲ್ಕ ವಿಧಿಸುತ್ತಾರಂತೆ.

     

    View this post on Instagram

     

    A post shared by Dolly Jain ???????? (@dolly.jain)

    ಸೋಷಿಯಲ್ ಮೀಡಿಯಾದಲ್ಲಿ, ಈಗಾಗಲೇ ಸೀರೆ ಡ್ರೇಪಿಂಗ್ ಕುರಿತಂತೆ ಸಾಕಷ್ಟು ಫೇಮಸ್ ಆಗಿರುವ ಇವರು, ಆಗಾಗ್ಗೆ ಸೀರೆ ಡ್ರೇಪಿಂಗ್ ಕುರಿತಂತೆ ನಾನಾ ವಿಡಿಯೋ ಅಪ್‌ಲೋಡ್ ಮಾಡುತ್ತಿರುತ್ತಾರೆ. ಲೈವ್ ಟ್ರೇನಿಂಗ್ ಕೂಡ ನೀಡುವ ಇವರು ಸದ್ಯಕ್ಕೆ ಸಖತ್ ಫೇಮಸ್! ಮಹಿಳೆಯರು, ಯುವತಿಯರು ಹೇಗೆಲ್ಲಾ ಸೀರೆ ಉಡಬಹುದು? ಎಂಬುದನ್ನು ಮಾತ್ರವಲ್ಲ, ಸೀರೆಯನ್ನು ಡ್ರೇಪಿಂಗ್ ಮೂಲಕ ಲೆಹೆಂಗಾದಂತೆ ಧರಿಸುವುದು ಹೇಗೆ? ಸ್ಕರ್ಟ್‌ಯಂತೆ ಮಾರ್ಪಡಿಸುವುದು ಹೇಗೆ? ಗಾಗ್ರದಂತೆ ಮಾರ್ಪಡಿಸುವುದು ಹೇಗೆ? ಸೇರಿದಂತೆ ಹೀಗೆ ನಾನಾ ಬಗೆಯಲ್ಲಿ ಸೀರೆ ಡ್ರೇಪಿಂಗ್ ಮಾಡುವುದನ್ನು ಹೇಳಿಕೊಡುತ್ತಾರೆ. ಅಷ್ಟೇಕೆ! ಸಾಮಾನ್ಯ ಮಹಿಳೆಗೂ ಟಿಪ್ಸ್ ನೀಡುತ್ತಾರೆ.

    ಮೂಲತಃ ಬೆಂಗಳೂರಿನವರಾದ ಡಾಲಿ ಜೈನ್ ಸದ್ಯ ಕೋಲ್ಕತ್ತಾ ವಾಸಿ. ಅತಿ ಸುಲಭವಾಗಿ ಯಾರ ಕೈಗಳಿಗೂ ಸಿಗದ ಇವರು ಸದ್ಯಕ್ಕೆ ಸ್ಟಾರ್ ಡ್ರೇಪರ್ ಎನ್ನಬಹುದು. ಕೇವಲ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಟ್ಯಾಲೆಂಟ್, ಅದರಲ್ಲೂ ಕೇವಲ ಸೀರೆಯನ್ನು ಆಕರ್ಷಕವಾಗಿ ಉಡಿಸಿ ಹೇಗೆಲ್ಲಾ ದುಡಿಯಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

    ಡಾಲಿ ಜೈನ್ (Dolly Jain) ಅವರು 357 ರೀತಿಯ ಸ್ಟೈಲಿನಲ್ಲಿ ವಿಭಿನ್ನವಾಗಿ ಸೀರೆ ಉಡಿಸುತ್ತಾರೆ. ವಿಶೇಷ ಅಂದರೆ 18.5 ಸೆಕೆಂಡ್ಸ್‌ನಲ್ಲಿ ಸೀರೆ ಉಡಿಸುವ ಮೂಲಕ ಡಾಲಿ ಜೈನ್ ದಾಖಲೆ ಮಾಡಿದ್ದಾರೆ. ಇವರೇ ಸೀರೆ ಉಡಿಸಬೇಕು ಎಂದು ಡಿಮ್ಯಾಂಡ್ ಇದ್ದರೆ, ಕೆಲ ತಿಂಗಳುಗಳ ಮುಂಚೆಯೇ ಅಡ್ವಾನ್ಸ್ ಬುಕ್ಕಿಂಗ್ ಮಾಡಿಸಿಕೊಳ್ಳಬೇಕಾಗುತ್ತದೆ.

    ಸಾಮಾನ್ಯ ಬ್ಯೂಟಿ ಪಾರ್ಲರ್ ಹಾಗೂ ಸೀರೆ ಉಡಿಸುವವರಾದಲ್ಲಿ ಒಂದು ಸೀರೆಗೆ ಕನಿಷ್ಠ ಎಂದರೂ 300 ರೂ.ಗಳಿಂದ 2 ಸಾವಿರ ರೂ.ಗಳವರೆಗೂ ಚಾರ್ಜ್ ಮಾಡುತ್ತಾರೆ. ಅದು ಯಾವ ಶೈಲಿಯ ಸೀರೆ ಎಂಬುದರ ಮೇಲೆ ಡಿಪೆಂಡ್ ಆಗುತ್ತದೆ. ಆದರೆ ಡಾಲಿ ಜೈನ್ ಕೇವಲ ಒಂದು ಸೀರೆ ಡ್ರೇಪಿಂಗ್ ಹಾಗೂ ಮೇಕೋವರ್‌ಗೆ ಲಕ್ಷಗಟ್ಟಲೆ ಚಾರ್ಜ್ ಮಾಡುತ್ತಾರೆ. ಇದು ಹೆಣ್ಣುಮಕ್ಕಳು ಸ್ಫೂರ್ತಿಯಾಗುವಂತಹ ವಿಚಾರ. ಯಾವುದೇ ಖರ್ಚು-ವೆಚ್ಚವಿಲ್ಲದೆ ದುಡಿಯಬಹುದಾದ ಮಾರ್ಗ. ಇಂದು ಸೋಷಿಯಲ್ ಮೀಡಿಯಾದಲ್ಲಿ ಸರಿಯಾದ ವೇದಿಕೆ ಸೃಷ್ಟಿಸಿಕೊಂಡಲ್ಲಿ ಹೀಗೆಲ್ಲಾ ಖ್ಯಾತಿ ಗಳಿಸುತ್ತಾ ಹಣವನ್ನು ಗಳಿಸಬಹುದು.

  • ಪುತ್ರ ಅನಂತ್ ಪ್ರೀ-ವೆಡ್ಡಿಂಗ್‌ನಲ್ಲಿ ನೀತಾ ಅಂಬಾನಿ ಡ್ಯಾನ್ಸ್

    ಪುತ್ರ ಅನಂತ್ ಪ್ರೀ-ವೆಡ್ಡಿಂಗ್‌ನಲ್ಲಿ ನೀತಾ ಅಂಬಾನಿ ಡ್ಯಾನ್ಸ್

    ವಿಶ್ವದ ಟಾಪ್ ಶ್ರೀಮಂತರಲ್ಲಿ ಒಬ್ಬರಾದ ಮುಖೇಶ್ ಅಂಬಾನಿ- ನೀತಾ ಅಂಬಾನಿ (Nita Ambani) ಪುತ್ರ ಅನಂತ್ ಅಂಬಾನಿ (Anant Ambani) ಪ್ರೀ-ವೆಡ್ಡಿಂಗ್ ಕಾರ್ಯಕ್ರಮವು ಜಾಯ್‌ನಗರದಲ್ಲಿ ಅದ್ಧೂರಿಯಾಗಿ ನಡೆದಿದೆ. ಸ್ವರ್ಗವನ್ನು ಧರೆಗಿಳಿಸಿದ ಅಂಬಾನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಇದೀಗ ಮಗ-ಸೊಸೆಗಾಗಿ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಡ್ಯಾನ್ಸ್ ಮಾಡಿದ್ದಾರೆ.

    ನೀತಾ ಅಂಬಾನಿಯವರು ಮಗ ಹಾಗೂ ಸೊಸೆಗಾಗಿ ಅವರ ದಾಂಪತ್ಯ ಜೀವನ ಚೆನ್ನಾಗಿರಲಿ ಎಂದು ಪ್ರಾರ್ಥಿಸಿ ಮಾತೆ ಅಂಬೆಗಾಗಿ ಮಾಡುವ ವಿಶ್ವಾಂಭರಿ ಸ್ತುತಿಯನ್ನು (Vishwambhari Stuti) ಮಾಡಿದ್ದಾರೆ. ನೀತಾ (Nita Ambani) ಅವರ ನೃತ್ಯ, ಅಭಿನಯ ಅದ್ಭುತವಾಗಿ ಮೂಡಿ ಬಂದಿದೆ. ಇದನ್ನೂ ಓದಿ:ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್‌ನಲ್ಲಿ 3ನೇ ದಿನ ಸೆಲೆಬ್ರಿಟಿಗಳು ಮಿಂಚಿದ್ದು ಹೀಗೆ

    ಮುಖೇಶ್ ಅವರ ಪತ್ನಿ ನೀತಾ ಅಂಬಾನಿ ಶಾಸ್ತ್ರೀಯ ನೃತ್ಯಗಾರರೊಂದಿಗೆ ವಿಶ್ವಂಭರಿ ಸ್ತುತಿಯಲ್ಲಿ ಪ್ರದರ್ಶನ ನೀಡಿರುವುದು ನೋಡುಗರಿಗೆ ಖುಷಿ ಕೊಟ್ಟಿದೆ. ಈ ಸಂದರ್ಭದಲ್ಲಿ, ನೀತಾ ಅಂಬಾನಿ ಕೆಂಪು ಕಲರ್ ಸೀರೆಯಲ್ಲಿ ಹೈಲೆಟ್ ಆಗಿದ್ದಾರೆ. ನೀತಾ ಅಂಬಾನಿ ಅವರ ಈ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಅನಂತ್- ರಾಧಿಕಾ (Radhika Merchant) ಹಲವು ವರ್ಷಗಳಿಂದ ಪರಿಚಿತರು. ಆ ಪರಿಚಯವೇ ಪ್ರೀತಿಗೆ ತಿರುಗಿ ಇದೀಗ ಮದುವೆಯ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದ್ದಾರೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಮದುವೆಯಾಗುತ್ತಿದ್ದಾರೆ.

    ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ಅದ್ಧೂರಿಯಾಗಿ ತೆರೆಬಿದ್ದಿದೆ. ಅನಂತ್ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ರಂಗೇರಿದ್ದು, ದೇಶ-ವಿದೇಶದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.

  • ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನ – ಅಯೋಧ್ಯೆಯಲ್ಲಿ ಅಂಬಾನಿ ಕುಟುಂಬ ಸಂಭ್ರಮ

    ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನ – ಅಯೋಧ್ಯೆಯಲ್ಲಿ ಅಂಬಾನಿ ಕುಟುಂಬ ಸಂಭ್ರಮ

    ಅಯೋಧ್ಯೆ (ಉತ್ತರ ಪ್ರದೇಶ): ಬಾಲರಾಮನ ಪ್ರಾಣಪ್ರತಿಷ್ಠೆ (Ram lalla Pran Pratishtha) ಸಂಪನ್ನಗೊಂಡಿದ್ದು, ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ.

    ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿದೆ. ಈ ವೇಳೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

    ದೇಶದ ಮೂಲೆ ಮೂಲೆಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಗಣ್ಯರನ್ನ ಆಹ್ವಾನಿಸಲಾಗಿತ್ತು. ಅಂತೆಯೇ ಮುಕೇಶ್‌ ಅಂಬಾನಿ ಕುಟುಂಬಸ್ಥರು ಸಹ ಈ ಸಂಪನ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ಹಂಚಿಕೊಂಡರು. ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮುಖೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಮಗ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ ಕುಟುಂಬ ಸಮೇತರಾಗಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಸರಯೂ ನದಿ ತಟದಲ್ಲಿ ವಿಶೇಷ ದೈವಿಕ ಅನುಭವ ಹಂಚಿಕೊಂಡ ಪಿ.ಟಿ ಉಷಾ

    ಪ್ರಾಣಪ್ರತಿಷ್ಠೆ ನೇರವೇರುತ್ತಿದ್ದ ಸಮಯಕ್ಕೆ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್‌ಗಳು ಅಯೋಧ್ಯೆಯ ಶ್ರೀ ರಾಮಮಂದಿರ ಆವರಣದಲ್ಲಿ ಹಾಗೂ ರಾಮಮಂದಿರದ ಮೇಲ್ಭಾಗದಲ್ಲಿ ಪುಷ್ಪಾರ್ಚನೆ ಸಲ್ಲಿಸಿದವು. ಈ ವೇಳೆ ರಾಮಭಕ್ತರಿಂದ ʻಜೈ ಶ್ರೀರಾಮ್‌ʼ ಉದ್ಘೋಷಗಳು ಕೇಳಿಬಂದಿತು. ಸಾವಿರಾರು ಭಕ್ತರಿಂದ ರಾಮನಾಮ ಝೇಂಕಾರ ಇದಕ್ಕೆ ಸಾಕ್ಷಿಯಾಯಿತು. ಇದನ್ನೂ ಓದಿ: ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು: ಅಯೋಧ್ಯೆಯಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ ಮಾತು

    ಪ್ರಾಣಪ್ರತಿಷ್ಠಾಪನೆ ನೆರವೇರುವ ಸಮಯಕ್ಕೆ ದೇಶಾದ್ಯಂತ ರಾಮನ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ದೇಶಾದ್ಯಂತ ವಿವಿಧೆಡೆ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ನೇರಪ್ರಸಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್‌ ಖಾತೆಯಲ್ಲೂ ಪ್ರಾಣಪ್ರತಿಷ್ಠೆ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಲಾಯಿತು. ಇದನ್ನೂ ಓದಿ: ಅಯೋಧ್ಯೆಯಲ್ಲಿ ತಾರಾ ದಂಡು: ಭಾಗಿಯಾದವರು ಯಾರೆಲ್ಲ? 

  • ಪತ್ನಿಗೆ ದೇಶದ ಅತ್ಯಂತ ದುಬಾರಿ ಕಾರನ್ನು ಗಿಫ್ಟ್ ಕೊಟ್ಟ ಮುಖೇಶ್ ಅಂಬಾನಿ- ಬೆಲೆ ಎಷ್ಟು ಗೊತ್ತಾ?

    ಪತ್ನಿಗೆ ದೇಶದ ಅತ್ಯಂತ ದುಬಾರಿ ಕಾರನ್ನು ಗಿಫ್ಟ್ ಕೊಟ್ಟ ಮುಖೇಶ್ ಅಂಬಾನಿ- ಬೆಲೆ ಎಷ್ಟು ಗೊತ್ತಾ?

    ಮುಂಬೈ: ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ (Mukesh Ambani) ತಮ್ಮ ಪತ್ನಿ ನೀತಾ ಅಂಬಾನಿಗೆ (Nita Ambani) ದೇಶದ ಅತ್ಯಂತ ದುಬಾರಿ ಕಾರನ್ನು (Car) ಉಡುಗೊರೆ ನೀಡಿರುವುದಾಗಿ ವರದಿಯಾಗಿದೆ.

    ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ತಮ್ಮ ವ್ಯವಹಾರ, ದೇಣಿಗೆ ಮಾತ್ರವಲ್ಲದೆ ಐಷಾರಾಮಿ ಜೀವನಶೈಲಿಗೆ ಆಗಾಗ ಸುದ್ದಿಯಲ್ಲಿರುತ್ತಾರೆ. ಅಂಬಾನಿ ಕುಟುಂಬ ಭಾರತದ ಅತ್ಯಂತ ಶ್ರೀಮಂತ ಕುಟುಂಬವಾಗಿದೆ. ತಮ್ಮ ಆಂಟಿಲಿಯಾ ಹೆಸರಿನ 15,000 ಕೋಟಿ ರೂ.ಯ ನಿವಾಸದಲ್ಲಿರುವ ಗ್ಯಾರೇಜ್‌ನಲ್ಲಿ ಪ್ರಪಂಚದ ಅತ್ಯಂತ ದುಬಾರಿ ಕಾರುಗಳೇ ತುಂಬಿವೆ.

    ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ನಿವಾಸದ ಪಾರ್ಕಿಂಗ್ ಸ್ಥಳದಲ್ಲಿ ದೇಶದ ಅತ್ಯಂತ ದುಬಾರಿ ಕಾರುಗಳನ್ನು ಕಾಣಬಹುದು. ಮುಖೇಶ್ ಅಂಬಾನಿ, ಮಕ್ಕಳಾದ ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್ ಅಂಬಾನಿ ಮತ್ತು ಪತ್ನಿ ನೀತಾ ಅಂಬಾನಿ ತಮ್ಮ ದುಬಾರಿ ಕಾರುಗಳಲ್ಲಿ ಕೆಲ ಕಾರ್ಯಕ್ರಮಗಳಿಗೆ ಆಗಮಿಸುವುದನ್ನು ಆಗಾಗ ಕಾಣಬಹುದು. ಇದೀಗ ಈ ದುಬಾರಿ ಕಾರುಗಳ ಸಂಗ್ರಹಣೆಗೆ ಮತ್ತೊಂದು ಅತ್ಯಂತ ದುಬಾರಿ ಕಾರೊಂದು ಸೇರ್ಪಡೆಯಾಗಿದೆ. ಅದೆಂದರೆ 10 ಕೋಟಿ ರೂ.ಯ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ (Rolls Royce Cullinan Black Badge) ಎಸ್‌ಯುವಿ.

    ಹೌದು, ವರದಿಯ ಪ್ರಕಾರ ದೀಪಾವಳಿಗೆ ಮುಂಚಿತವಾಗಿ ಮುಖೇಶ್ ಅಂಬಾನಿ ತನ್ನ ಪತ್ನಿಗೆ 10 ಕೋಟಿ ರೂ. ಬೆಲೆಯ ಎಸ್‌ಯುವಿಯನ್ನು (SUV) ಉಡುಗೊರೆಯಾಗಿ ನೀಡಿದ್ದಾರೆ. ಈ ಕಾರಿನ ವೀಡಿಯೊವನ್ನು CS 12 Vlogs ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಳ್ಳಲಾಗಿದೆ. ನೀತಾ ಅಂಬಾನಿಯವರಿಗೆ ಉಡುಗೊರೆ ನೀಡಿದ ಈ ಹೊಸ ರೋಲ್ಸ್ ರಾಯ್ಸ್ ಈಗ ಭಾರತದ ಅತ್ಯಂತ ದುಬಾರಿ ಕಾರು ಎನಿಸಿಕೊಂಡಿದೆ. ಇದನ್ನೂ ಓದಿ: Cash for Query – ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

    ರೋಲ್ಸ್ ರಾಯ್ಸ್ ಕಲ್ಲಿನನ್ ಬ್ಲ್ಯಾಕ್ ಬ್ಯಾಡ್ಜ್ ಭಾರತದ ಅತ್ಯಂತ ದುಬಾರಿ ಎಸ್‌ಯುವಿಯಾಗಿದೆ. ಈ ಐಷಾರಾಮಿ ಕಾರನ್ನು ದೇಶದಲ್ಲಿ ಕೆಲವೇ ಸೆಲೆಬ್ರಿಟಿಗಳು ಹೊಂದಿದ್ದಾರೆ. ಭಾರತದಲ್ಲಿನ ಜನಪ್ರಿಯ ರೋಲ್ಸ್ ರಾಯ್ಸ್ ಕಲ್ಲಿನನ್ ಬ್ಲ್ಯಾಕ್ ಬ್ಯಾಡ್ಜ್ ಎಸ್‌ಯುವಿಯನ್ನು ಹೊಂದಿರುವವರಲ್ಲಿ ಒಬ್ಬರೆಂದರೆ ಬಾಲಿವುಡ್ ಸ್ಟಾರ್ ಶಾರುಖ್ ಖಾನ್. ಮುಖೇಶ್ ಅಂಬಾನಿ ಒಡೆತನದ ಇತರ ರೋಲ್ಸ್ ರಾಯ್ಸ್ ಎಸ್‌ಯುವಿಗೆ ಹೋಲಿಸಿದರೆ ನೀತಾ ಅಂಬಾನಿಯವರ ಹೊಸ ಕಾರು ಕಿತ್ತಳೆ ಬಣ್ಣದ ವಿಭಿನ್ನ ಶೇಡ್‌ನಲ್ಲಿದೆ. ಇದನ್ನೂ ಓದಿ: ಮಹಿಳೆಯರ ವಿರುದ್ಧದ ಹೇಳಿಕೆಗಳು ದೇಶವನ್ನೇ ಅವಮಾನಿಸುವಂತಿದೆ: ಮೋದಿ ವಾಗ್ದಾಳಿ